Tag: Shivakumar Swamiji

  • ನಡೆದಾಡುವ ದೇವರ ಆರೋಗ್ಯದಲ್ಲಿ ಚೇತರಿಕೆ- ಮುಂಜಾನೆ 6 ಗಂಟೆಗೆ ವೈದ್ಯಕೀಯ ತಪಾಸಣೆ

    ನಡೆದಾಡುವ ದೇವರ ಆರೋಗ್ಯದಲ್ಲಿ ಚೇತರಿಕೆ- ಮುಂಜಾನೆ 6 ಗಂಟೆಗೆ ವೈದ್ಯಕೀಯ ತಪಾಸಣೆ

    ಬೆಂಗಳೂರು: ಶತಾಯುಷಿ ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ ಕಂಡು ಬರುತ್ತಿದ್ದು, ಮಠದಲ್ಲಿ ಭಕ್ತರು ಸಂತಸಗೊಂಡಿದ್ದಾರೆ.

    ಬಿಜಿಎಸ್ ಆಸ್ಪತ್ರೆಯಲ್ಲಿ ಸಿದ್ದಗಂಗಾ ಶ್ರೀಗಳಿಗೆ ಚಿಕಿತ್ಸೆ ಮುಂದುವರಿದಿದ್ದು, ಮುಂಜಾನೆ 6 ಗಂಟೆಗೆ ನುರಿತ ವೈದ್ಯರಿಂದ ವೈದ್ಯಕೀಯ ತಪಾಸಣೆ ನಡೆಸಿದ್ದಾರೆ. 7.30ರ ಲಿಂಗ ಪೂಜೆ ಬಳಿಕ ಬಿಜಿಎಸ್ ವೈದ್ಯರ ತಂಡ ಸಿಟಿ ಸ್ಕ್ಯಾನ್ ಮಾಡಲಿದ್ದಾರೆ. ಸಿಟಿ ಸ್ಕ್ಯಾನ್ ಬಳಿಕ ಆರೋಗ್ಯದಲ್ಲಿ ಹೆಚ್ಚಿನ ಚೇತರಿಕೆ ಕಂಡುಬಂದಲ್ಲಿ ಡಿಸ್ಚಾರ್ಜ್ ಸಾಧ್ಯತೆಗಳಿವೆ ಎಂಬುದಾಗಿ ತಿಳಿದುಬಂದಿದೆ.

    ಆಸ್ಪತ್ರೆಯಲ್ಲಿ ಶಿವಕುಮಾರ ಶ್ರೀಗಳ ಜೊತೆ ಮಠದ ಕಿರಿಯ ಶ್ರೀಗಳು ಇದ್ದಾರೆ. ಮಠದಲ್ಲಿ ನೂರಾರು ಭಕ್ತರು ಶ್ರೀಗಳು ಕುಳಿತುಕೊಳ್ಳುತ್ತಿದ್ದ ಹಳೇಮಠದ ಗದ್ದುಗೆಗೆ ನಮಸ್ಕರಿಸಿ ವಾಪಸ್ಸಾಗುತಿದ್ದಾರೆ. ಶ್ರೀಗಳು ಗುಣಮುಖರಾಗಿ ಬರಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತಿದ್ದಾರೆ.

    ಸಿದ್ದಗಂಗಾ ಮಠದ ಶ್ರೀ ಶಿವಕುಮಾರಸ್ವಾಮಿ ಸ್ವಾಮೀಜಿ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಶುಕ್ರವಾರ ನಗರದ ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ವಾಮೀಜಿ ಆರೋಗ್ಯದ ಬಗ್ಗೆ ಯಾರೂ ಆತಂಕ ಪಡುವ ಅವಶ್ಯಕತೆ ಇಲ್ಲ. ಬಿಪಿಯಲ್ಲಿ ಬದಲಾವಣೆಯಾಗಿದೆ ಅಷ್ಟೇ. ಯಾರೂ ಹೆದರಬೇಡಿ. ಶ್ರೀಗಳ ಆರೋಗ್ಯ ಬೇಗ ಸುಧಾರಿಸುತ್ತದೆ ಎಂದು ಸಿದ್ಧಗಂಗಾ ಮಠದ ಕಿರಿಯ ಸ್ವಾಮೀಜಿ ನಿನ್ನೆ ತಿಳಿಸಿದ್ದರು.

    ಶ್ರೀಗಳಿಗೆ ಗುರುವಾರ ರಾತ್ರಿ ಸುಮಾರು 1 ಗಂಟೆಗೆ ಜ್ವರ, ಬಿಪಿ, ಕಫ ಕಂಡುಬಂದಿತ್ತು. ಈಗಾಗಲೇ ರಕ್ತ ಪರೀಕ್ಷೆ, ಎಕ್ಸ್ ರೇ ಮಾಡಲಾಗಿದೆ. ಇದರಲ್ಲಿ ನಿಮೋನಿಯಾ ಕಂಡು ಬಂದಿದೆ. ರಕ್ತ ಪರೀಕ್ಷೆಯ ಮಾಡಿದ್ದೇವೆ. ರಿಪೋರ್ಟ್‍ನಲ್ಲಿ ಸ್ವಾಮೀಜಿಗೆ ಸೋಂಕು ತಗುಲಿರುವುದು ಗೊತ್ತಾಗಿದೆ ಬಿಜಿಎಸ್ ಆಸ್ಪತ್ರೆಯ ಡಾ. ರವೀಂದ್ರ ಹೇಳಿದ್ದರು.

     

  • ಸಿದ್ದಗಂಗಾ ಶ್ರೀಗಳಿಗೆ ಭಾರತ ರತ್ನ ನೀಡುವಂತೆ ಮೋದಿಗೆ ಸಿಎಂ ಪತ್ರ

    ಸಿದ್ದಗಂಗಾ ಶ್ರೀಗಳಿಗೆ ಭಾರತ ರತ್ನ ನೀಡುವಂತೆ ಮೋದಿಗೆ ಸಿಎಂ ಪತ್ರ

    ಬೆಂಗಳೂರು: ಸಿದ್ದಗಂಗಾ ಮಠದ ಡಾ. ಶ್ರೀ ಶಿವಕುಮಾರ ಸ್ವಾಮೀಜಿ ಅವರನ್ನು ಭಾರತ ರತ್ನ ಪ್ರಶಸ್ತಿಗೆ ಆಯ್ಕೆ ಮಾಡಬೇಕೆಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರದ ಮೂಲಕ ಮನವಿ ಮಾಡಿದ್ದಾರೆ.

    ಶತಮಾನಗಳಷ್ಟು ಹಳೆಯದಾದ ತುಮಕೂರಿನ ಸಿದ್ದಗಂಗಾ ಮಠ ಕಳೆದ 600 ವರ್ಷಗಳಿಂದ ಶಿಕ್ಷಣ, ಅನ್ನ ದಾಸೋಹ ಮಾಡುತ್ತಾ ಬಂದಿದೆ. ಎಲ್ಲಾ ವರ್ಗದ ಜನರ ಪ್ರೀತಿಗೆ ಪಾತ್ರರಾಗಿರುವ ಶತಾಯುಶಿ, ಶಿಕ್ಷಣ, ಅನ್ನದಾಸೋಹದ ಪ್ರಮುಖ ರೂವಾರಿ ಸಿದ್ದಗಂಗಾ ಶ್ರೀಗಳ ಕೊಡುಗೆ ಅನನ್ಯವಾಗಿದೆ. ಅವರು ಈಗ 110 ವರ್ಷಗಳನ್ನು ಪೂರೈಸಿದ್ದಾರೆ. ಆದ್ದರಿಂದ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಪುರಸ್ಕಾರಕ್ಕೆ ಆಯ್ಕೆ ಮಾಡಬೇಕೆಂದು ಪತ್ರದಲ್ಲಿ ಸಿದ್ದರಾಮಯ್ಯ ತಿಳಿಸಿದ್ದಾರೆ.

    ಎಲ್ಲ ಸಮುದಾಯದ ಕಡುಬಡವ ಮಕ್ಕಳಿಗೆ ಅನ್ನ ದಾಸೋಹ ಮಾಡುವ ಮೂಲಕ ಶಿಕ್ಷಣ ನೀಡಿ ಉತ್ತಮ ನಾಗರಿಕರನ್ನಾಗಿ ಮಾಡಿದ ಕೀರ್ತಿ ಸ್ವಾಮೀಜಿಗೆ ಸಲ್ಲುತ್ತದೆ. ಸಿದ್ದಗಂಗಾ ಮಠ ಎಲ್ಲ ಹಂತದ ಶಿಕ್ಷಣವನ್ನು ಬಡವ ಬಲ್ಲಿದರೆಂಬ ಭೇದವಿಲ್ಲದೆ ಶಿಕ್ಷಣವನ್ನು ಉಚಿತವಾಗಿ ನೀಡುತ್ತಾ ಬಂದಿದೆ. ಅಷ್ಟೇ ಅಲ್ಲದೇ ಉನ್ನತ ಅಧ್ಯಯನಕ್ಕೆ ಪ್ರೋತ್ಸಾಹವನ್ನು ಸಹ ನೀಡುತ್ತದೆ. ಇದರಿಂದ ದೇಶದ ಉದ್ದಗಲಕ್ಕೂ ಈ ಸಂಸ್ಥೆಯಲ್ಲಿ ಅಧ್ಯಯನ ಮಾಡಿರುವ ವಿದ್ಯಾರ್ಥಿಗಳು ಆದರ್ಶ ವ್ಯಕ್ತಿಗಳಾಗಿದ್ದಾರೆ. ಇದು ಅವರ ನಿಸ್ವಾರ್ಥ ಸೇವೆಗೆ ಹಿಡಿದ ಕೈಗನ್ನಡಿಯಾಗಿದೆ ಎಂದು ತಿಳಿಸಿದ್ದಾರೆ.

    ಇಂದಿಗೂ ಸಿದ್ದಗಂಗಾ ಮಠ ಸುಮಾರು ಹತ್ತು ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ವಸತಿ, ಶಿಕ್ಷಣ ಜೊತೆಗೆ ಉಚಿತ ಪ್ರಸಾದವನ್ನು ನೀಡುತ್ತಾ ಬಂದಿದೆ. ದೇಶದಲ್ಲೇ ಅತ್ಯುನ್ನತ ಶಿಕ್ಷಣ ಸಂಸ್ಥೆ ಎಂದು ಖ್ಯಾತಿಯಾಗಿದೆ. ಇದರ ರೂವಾರಿಯಾಗಿರುವ ಡಾ. ಶಿವಕುಮಾರ ಸ್ವಾಮೀಜಿ ಅವರ ಅನನ್ಯ ಸೇವೆಯನ್ನು ಪರಿಗಣಿಸಿ ದೇಶದ ಅತ್ಯುನ್ನತ ನಾಗರಿಕ ಪುರಸ್ಕಾರ ಭಾರತ ರತ್ನಕ್ಕೆ ಶಿಫಾರಸು ಮಾಡಬೇಕೆಂದು ರಾಜ್ಯದ ಪರವಾಗಿ ನಾನು ವಿನಂತಿಸಿಕೊಳ್ಳುತ್ತಿದ್ದೆನೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

  • ನಡೆದಾಡುವ ದೇವರಲ್ಲಿ ಸಾರ್ವಜನಿಕವಾಗಿ ಎಂಬಿ ಪಾಟೀಲ್ ಕ್ಷಮೆ ಕೇಳಬೇಕು: ಎಚ್‍ಡಿಕೆ

    ನಡೆದಾಡುವ ದೇವರಲ್ಲಿ ಸಾರ್ವಜನಿಕವಾಗಿ ಎಂಬಿ ಪಾಟೀಲ್ ಕ್ಷಮೆ ಕೇಳಬೇಕು: ಎಚ್‍ಡಿಕೆ

    ಬೆಂಗಳೂರು: ನಡೆದಾಡುವ ದೇವರನ್ನ ಪ್ರತ್ಯೇಕ ಧರ್ಮದ ಈ ವಿಚಾರಕ್ಕೆ ಬಳಸಿಕೊಂಡಿದ್ದು ಅತ್ಯಂತ ಹೀನಾಯ ಕೃತ್ಯ ಎಂದು ಜೆಡಿಎಸ್ ನಾಯಕ ಎಚ್‍ಡಿ ಕುಮಾರಸ್ವಾಮಿ ಜಲಸಂಪನ್ಮೂಲ ಸಚಿವ ಎಂಬಿ ಪಾಟೀಲ್ ವಿರುದ್ಧ ಕಿಡಿಕಾರಿದ್ದಾರೆ.

    ಲಿಂಗಾಯತ ಧರ್ಮಕ್ಕೆ ಶ್ರೀಗಳ ಬೆಂಬಲ ಇದೆ ಎನ್ನುವ ಎಂ.ಬಿ.ಪಾಟೀಲ್ ಹೇಳಿಕೆಗೆ ಇಂದು ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಶಿವಕುಮಾರ ಸ್ವಾಮೀಜಿ ಹೆಸರನ್ನ ಈ ವಿಚಾರದಲ್ಲಿ ಬಳಸಿಕೊಂಡಿದ್ದು ಅಕ್ಷಮ್ಯ. ಇವರನ್ನ ಅಪ್ರಭುದ್ದ ಅನ್ನಬೇಕಾ ಎಂದು ಪ್ರಶ್ನಿಸಿದರು. ಅಷ್ಟೇ ಅಲ್ಲದೇ ಈ ತಪ್ಪಿಗೆ ಸಾರ್ವಜನಿಕವಾಗಿ ಶ್ರೀಗಳಲ್ಲಿ ಕ್ಷಮೆ ಕೇಳಬೇಕು ಎಂದು ಅವರು ಆಗ್ರಹಿಸಿದರು.

    ಬಿಬಿಎಂಪಿ ಮೈತ್ರಿ ವಿಚಾರದಲ್ಲಿ ಸಿಎಂ ಸೂಚನೆ ಮೇರೆಗೆ ಇಂದು ರಾಮಲಿಂಗಾರೆಡ್ಡಿ ಅವರು ದೇವೇಗೌಡರನ್ನ ಭೇಟಿಯಾಗಿದ್ದಾರೆ. ಅವರೇನು ಚರ್ಚಿಸಿದ್ದಾರೆ ಗೊತ್ತಿಲ್ಲ. ನಮ್ಮ ಸದಸ್ಯರೆಲ್ಲ ಜೆಡಿಎಸ್‍ಗೆ ಮೇಯರ್ ಸ್ಥಾನ ಬೇಕು ಎಂದಿದ್ದಾರೆ. ದೇವೇಗೌಡರ ಜೊತೆ ಏನು ಮಾತನಾಡಿದ್ದಾರೆ ಎಂದು ತಿಳಿದುಕೊಳ್ಳುತ್ತೇನೆ. ಬಳಿಕ ಸಂಸದ ಕುಪ್ಪೇಂದ್ರ ರೆಡ್ಡಿ ಸೇರಿದಂತೆ ಎಲ್ಲ ಪ್ರಮುಖರ ಜೊತೆ ಚರ್ಚಿಸಿ ತೀರ್ಮಾನ ಮಾಡುತ್ತೇವೆ. ಎಂದು ಹೇಳಿದರು.