Tag: Shivakumara Shree

  • ನಡೆದಾಡುವ ದೇವರ ಗದ್ದುಗೆ ದರ್ಶನ ಪಡೆದ ಗೃಹ ಸಚಿವ ಅಮಿತ್ ಶಾ

    ನಡೆದಾಡುವ ದೇವರ ಗದ್ದುಗೆ ದರ್ಶನ ಪಡೆದ ಗೃಹ ಸಚಿವ ಅಮಿತ್ ಶಾ

    ತುಮಕೂರು: ನಡೆದಾಡುವ ದೇವರು ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಗಳ 115ನೇ ಜನ್ಮದಿನೋತ್ಸವ ಹಿನ್ನೆಲೆ ತುಮಕೂರಿನಲ್ಲಿರುವ ಸಿದ್ದಗಂಗಾ ಮಠಕ್ಕೆ ಕೇಂದ್ರ ಸಚಿವ ಅಮಿತ್ ಶಾ ಅವರು ಭೇಟಿ ನೀಡಿದ್ದಾರೆ.

    ತುಮಕೂರು ವಿವಿಯ ಹೆಲಿಪ್ಯಾಡಲ್ಲಿ ಇಳಿದ ಅಮಿತ್ ಶಾ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಗೃಹ ಸಚಿವ ಆಗರ ಜ್ಞಾನೇಂದ್ರ ಮತ್ತು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸೇರಿದಂತೆ ಹಲವಾರು ಬಿಜೆಪಿ ನಾಯಕರು ಹೂಗುಚ್ಛ ನೀಡಿ ಸ್ವಾಗತಿಸಿದರು. ಇದನ್ನೂ ಓದಿ: ಇಂದು ಶಿವಕುಮಾರ ಶ್ರೀಗಳ 115 ನೇ ಜನ್ಮ ದಿನೋತ್ಸವ – ಪೂಜಾ ಕೈಂಕರ್ಯಗಳು ಆರಂಭ

    ನಂತರ ಕಾರಿನ ಮೂಲಕ ರಸ್ತೆ ಮಾರ್ಗವಾಗಿ ಸಿದ್ದಗಂಗಾ ಮಠಕ್ಕೆ ಆಗಮಿಸಿದ ಅಮಿತ್ ಶಾ ಅವರು, ಶ್ರೀಗಳ ಗದ್ದುಗೆಯ ದರ್ಶನ ಪಡೆದು ಪೂಜೆ ಸಲ್ಲಿಸಿದರು. ಸಿದ್ದಗಂಗಾ ಮಠದಲ್ಲಿ ನಡೆದಾಡುವ ದೇವರ ಬಸವ ಭಾರತ ಹೆಸರಿನಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಕಾರ್ಯಕ್ರಮದಲ್ಲಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ, ಕೇಂದ್ರ ಸಚಿವರಾದ ಖೂಬಾ, ಸಂಸದ ಜಿ.ಎಸ್.ಬಸವರಾಜ್ ಹಾಗೂ ಸಿದ್ದಗಂಗಾ ಮಠದ ಸಿದ್ದಲಿಂಗೇಶ್ವರ ಸ್ವಾಮೀಜಿ ಸೇರಿದಂತೆ ಹಲವಾರು ಸಾಧು ಸಂತರು ಭಾಗವಹಿಸಿದ್ದರು. ಅಲ್ಲದೇ ವೇದಿಕೆ ಮುಂಭಾಗದಲ್ಲಿ ಸಾರ್ವಜನಿಕರು ಕುಳಿತುಕೊಳ್ಳಲು 10 ಸಾವಿರಕ್ಕೂ ಹೆಚ್ಚು ಆಸನದ ವ್ಯವಸ್ಥೆ ಮಾಡಲಾಗಿತ್ತು. ಇದನ್ನೂ ಓದಿ: ಸಿದ್ದಗಂಗಾ ಮಠಕ್ಕೆ ರಾಹುಲ್‌ ಗಾಂಧಿ ಭೇಟಿ

    ಇಂದು ಲಿಂಗೈಕ್ಯ ಶಿವಕುಮಾರ ಶ್ರೀಗಳ ಜನ್ಮದಿನೋತ್ಸವ ಹಿನ್ನೆಲೆ ಸುಮಾರು 1.5 ರಿಂದ 2 ಲಕ್ಷ ಭಕ್ತಾದಿಗಳಿಗೆ ಎಂಟು ಕಡೆಗಳಲ್ಲಿ ಉಪ್ಪಿಟ್ಟು, ಕೇಸರಿಬಾತ್, ಬೂಂದಿ ಪಾಯಸ, ಅನ್ನಸಾಂಬಾರ್, ವಿವಿಧ ಖಾದ್ಯಗಳ ಊಟ, ತಿಂಡಿಯ ವ್ಯವಸ್ಥೆಗೊಳಿಸಲಾಗಿದೆ.

    ಇಂದು ಬೆಳಗ್ಗಿನಿಂದಲೇ ಸಿದ್ದಗಂಗಾ ಮಠದಲ್ಲಿ ಹಲವಾರು ಕಾರ್ಯಕ್ರಮಗಳು ನಡೆಯುತ್ತಿದ್ದು, ಅಮಿತ್ ಶಾ ಸಹ ಆಗಮಿಸಿದ್ದು, ಕಾರ್ಯಕ್ರಮಕ್ಕೆ ಮತ್ತಷ್ಟು ಮೆರುಗು ತಂದುಕೊಟ್ಟಂತೆ ಆಗಿದೆ. ಅಮಿತ್ ಶಾ ಆಗಮನದ ಹಿನ್ನೆಲೆ 04 ಎಸ್‍ಪಿ, 10 ಡಿ.ವೈ.ಎಸ್‍ಪಿ, ಕೆ.ಎಸ್.ಆರ್.ಪಿ., ಡಿಆರ್ ಸೇರಿದಂತೆ 2 ಸಾವಿರ ಪೊಲೀಸರನ್ನು ನಿಯೋಜನೆಗೊಳಿಸಲಾಗಿದೆ.

  • ಇಂದು ಶಿವಕುಮಾರ ಶ್ರೀಗಳ 3ನೇ ವರ್ಷದ ಪುಣ್ಯಸ್ಮರಣೆ- ಮಠದ ಗದ್ದಿಗೆಯಲ್ಲಿ ಸರಳ ಪೂಜೆ

    ಇಂದು ಶಿವಕುಮಾರ ಶ್ರೀಗಳ 3ನೇ ವರ್ಷದ ಪುಣ್ಯಸ್ಮರಣೆ- ಮಠದ ಗದ್ದಿಗೆಯಲ್ಲಿ ಸರಳ ಪೂಜೆ

    ತುಮಕೂರು: ತ್ರಿವಿಧ ದಾಸೋಹಿ, ಶತಾಯುಷಿ ಶಿವಕುಮಾರ ಶ್ರೀಗಳು ಶಿವೈಕ್ಯರಾಗಿ ಇಂದಿಗೆ ಮೂರು ವರ್ಷ. ಕೋವಿಡ್ ಉಲ್ಬಣದಿಂದಾಗಿ ಅತ್ಯಂತ ಸರಳವಾಗಿ ಲಿಂಗೈಕ್ಯ ಶ್ರೀಗಳ ಸ್ಮರಣೆ ಮಾಡಲು ಶ್ರೀಮಠದಲ್ಲಿ ಸಿದ್ಧತೆ ನಡೆದಿದೆ.

    ಸಿದ್ದಲಿಂಗ ಸ್ವಾಮಿಗಳಿಂದ ಹಳೇ ಮಠದಲ್ಲಿ ಇಷ್ಟಲಿಂಗ ಪೂಜೆ ನೆರವೇರಿಸಿದ್ದಾರೆ. ಆ ಬಳಿಕ ಬೆಳಗ್ಗೆ ಪ್ರಾತಃಕಾಲದಲ್ಲಿ ಶ್ರೀಗಳ ಗದ್ದಿಗೆಗೆ ಅಭಿಷೇಕ, ಪೂಜೆ, ಮಹಾಮಂಗಳಾರತಿ ನಡೆಯಿತು. ಈ ಪೂಜೆ ಹೊರತುಪಡಿಸಿದರೆ ಯಾವುದೇ ವೇದಿಕೆ ಕಾರ್ಯಕ್ರಮ, ಉತ್ಸವ, ಮೆರವಣಿಗೆ ಇರೋದಿಲ್ಲ. ಇತ್ತ ಈ ದಿನವನ್ನು ಸರ್ಕಾರ ದಾಸೋಹ ದಿನ ಎಂದು ಆಚರಣೆ ಮಾಡುವಂತೆ ಘೋಷಣೆ ಮಾಡಿದೆ.

    ಸಿಎಂ ಬೊಮ್ಮಾಯಿ ಇಂದು ಮಠಕ್ಕೆ ಭೇಟಿ ನೀಡಿ ಶ್ರೀಗಳ ಗದ್ದಿಗೆ ದರ್ಶನ ಪಡೆದು ದೀಪ ಬೆಳಗಿಸಿ ಸಾಂಕೇತಿಕ ದಾಸೋಹ ದಿನವನ್ನು ಉದ್ಘಾಟನೆ ಮಾಡಲಿದ್ದಾರೆ. ಇದನ್ನೂ ಓದಿ: 1200 ಕೋಟಿ ರೂ. ವೆಚ್ಚದ ಶಿರಾಡಿ ಘಾಟ್ ಚತುಷ್ಪಥ ರಸ್ತೆಗೆ ಕೇಂದ್ರ ಅನುಮೋದನೆ

  • ಸಿದ್ದಗಂಗಾ ಶ್ರೀಗಳ 111 ಅಡಿ ಎತ್ತರದ ಪುತ್ಥಳಿ ನಿರ್ಮಾಣ – ನ.8ರಂದು ಸಿಎಂ ಶಂಕುಸ್ಥಾಪನೆ

    ಸಿದ್ದಗಂಗಾ ಶ್ರೀಗಳ 111 ಅಡಿ ಎತ್ತರದ ಪುತ್ಥಳಿ ನಿರ್ಮಾಣ – ನ.8ರಂದು ಸಿಎಂ ಶಂಕುಸ್ಥಾಪನೆ

    ನೆಲಮಂಗಲ: ಸಿದ್ದಗಂಗಾ ಶ್ರೀ ಶಿವಕುಮಾರ ಶ್ರೀಗಳ 111 ಅಡಿ ಎತ್ತರದ ಪುತ್ಥಳಿ ನಿರ್ಮಾಣಕ್ಕೆ ತಯಾರಿ ಜೋರಾಗಿ ನಡೆದಿದೆ.

    ಶ್ರೀಗಳ ಹುಟ್ಟೂರು ಮಾಗಡಿ ತಾಲೂಕಿನ ವೀರಾಪುರ ಗ್ರಾಮದಲ್ಲಿ ಭೂಮಿ ನಿಗದಿ ಪಡಿಸಲಾಗಿದ್ದು, ನವೆಂಬರ್ 8 ರಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

    ವೀರಾಪುರ ಗ್ರಾಮದಲ್ಲಿ ಈಗಾಗಲೇ ಸರ್ಕಾರದಿಂದ ಭೂಮಿ ನಿಗದಿಯಾಗಿದೆ. ಇದೆ ನ.8ರ ಶುಕ್ರವಾರದಂದು ಸಿಎಂ ಯಡಿಯೂರಪ್ಪ ಹಾಗೂ ಡಿಸಿಎಂ ಅಶ್ವಥ್ ನಾರಾಯಣ ಅವರಿಂದ ಶಂಕುಸ್ಥಾಪನೆ ಕಾರ್ಯ ನಡೆಯಲಿದೆ.

    ಸುಮಾರು 25 ಕೋಟಿ ರೂ. ವೆಚ್ಚದಲ್ಲಿ ನಾನಾ ರೂಪುರೇಷೆಗಳು ಸಿದ್ಧವಾಗಿದ್ದು, ಸಿದ್ದಗಂಗಾ ಶ್ರೀಗಳ ಬೃಹತ್ ಪುತ್ಥಳಿಯ ನೀಲಿ ನಕ್ಷೆ ಕೂಡ ಅನಾವರಣಗೊಂಡಿದೆ. ಈ ಮೂಲಕ ಸಾಕಷ್ಟು ವರ್ಷಗಳಿಂದ ನಿರ್ಲಕ್ಷಿಸಲ್ಪಟ್ಟಿದ್ದ ಶಿವಕುಮಾರ ಶ್ರೀಗಳ ಹುಟ್ಟೂರು ವೀರಾಪುರ ಗ್ರಾಮಕ್ಕೆ ಇದೀಗ ಹೊಸ ರೂಪ ಬರಲಿದ್ದು, ಕಾರ್ಯಕ್ರಮದ ಸಿದ್ಧತೆಗಳು ಬರದಿಂದ ಸಾಗುತ್ತಿದೆ.

    25 ವರ್ಷಗಳ ಕಾಲ ಕಾಲಿಟ್ಟಿರಲಿಲ್ಲ:
    ನಡೆದಾಡುವ ದೇವರು, ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿಗಳು ತಮ್ಮ ಹುಟ್ಟೂರಿಗೆ 25 ವರ್ಷಗಳ ಕಾಲ ಕಾಲಿಟ್ಟಿರಲಿಲ್ಲ. ಹೌದು. ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ವೀರಾಪುರದ ಪಟೇಲ್ ಹೊನ್ನಪ್ಪ ಅವರಿಗೆ ಮಗ ಶಿವಣ್ಣ (ಶಿವಕುಮಾರ ಸ್ವಾಮೀಜಿ) ಉನ್ನತ ಅಧಿಕಾರಿ ಆಗಬೇಕು ಎನ್ನುವ ಆಸೆಯಿತ್ತು. ಇತ್ತ ಉದ್ಧಾನ ಶಿವಯೋಗಿಗಳು, ಬಿ.ಎ. ವ್ಯಾಸಂಗ ಪೂರ್ಣಗೊಳಿಸಿದ್ದ ಶಿವಣ್ಣ ಸನ್ಯಾಸತ್ವ ಸ್ವೀಕರಿಸಬೇಕು. ಜಗತ್ತಿಗೆ ಬೆಳಕಾಗಬೇಕು ಎಂಬ ಮಹದಾಸೆಯನ್ನು ಹೊಂದಿದ್ದರು.

    ಶಿವಣ್ಣ ಸನ್ಯಾಸತ್ವ ಸ್ವೀಕರಿಸಿದ್ದಾನೆ ಎನ್ನುವುದನ್ನು ದು:ಖದಲ್ಲಿರುವ ಹೊನ್ನಪ್ಪ ಹಾಗೂ ಗಂಗಮ್ಮ ದಂಪತಿಗೆ ಸಾಂತ್ವಾನ ಹೇಳಲು ಶಿವಯೋಗಿಗಳು ಖುದ್ದಾಗಿ ವೀರಾಪುರಕ್ಕೆ ಹೋಗಿದ್ದರು. ಆದರೆ ಹೊನ್ನಪ್ಪ ಶಿವಯೋಗಿಗಳಿಗೆ ಭೇಟಿಯಾಗಬಾರದು ಅಂತ ಮನೆಯಿಂದ ಆಚೆ ಹೋಗಿದ್ದರು. ಇದರಿಂದಾಗಿ ಮನನೊಂದ ಶಿವಯೋಗಿಗಳು ಅಲ್ಲಿಂದ ನಡೆದುಕೊಂಡೇ ಮಠಕ್ಕೆ ಮರಳಿದ್ದರು.

    ಶ್ರೀಗಳು ಮಠಕ್ಕೆ ಮರಳಿದಾಗ ನಡೆದ ಘಟನೆಯನ್ನು ಶಿಷ್ಯ ಶಿವಕುಮಾರ ಸ್ವಾಮೀಜಿಗಳಿಗೆ ವಿವರಿಸಿದರಂತೆ. ಗುರುಗಳ ಮೇಲೆ ಅಪಾರ ಭಕ್ತಿ ಹೊಂದಿದ್ದ ಶಿವಕುಮಾರ ಶ್ರೀಗಳಿಗೆ ತಂದೆ ನಡೆದುಕೊಂಡಿದ್ದು ಸರಿಯಲ್ಲ ಅನಿಸಿತ್ತು. ಇದರಿಂದಾಗಿ ಹುಟ್ಟೂರು ವೀರಾಪುರ ಗ್ರಾಮಕ್ಕೆ ಹೋಗುವುದನ್ನೇ ನಿಲ್ಲಿಸಿಬಿಟ್ಟಿದ್ದರು.

    ಗ್ರಾಮಕ್ಕೆ ಕಾಲಿಟ್ಟಿದ್ದು ಹೇಗೆ?:
    ಸಿದ್ದಗಂಗಾ ಮಠದ ಜವಾಬ್ದಾರಿ ಹೊತ್ತ ಶ್ರೀಗಳು, ಮಕ್ಕಳು ಶಿಕ್ಷಣ, ದಾಸೋಹ, ಸಮಾಜಿಕ ಸೇವೆ, ಇಷ್ಟಲಿಂಗ ಪೂಜೆ, ಓದು, ಭಕ್ತರ ಭೇಟಿ, ಪ್ರವಚನದಲ್ಲಿ ನಿರತರಾಗಿದ್ದರು. ಈ ನಡುವೆ ತಮ್ಮ ಗ್ರಾಮಕ್ಕೆ ಬರುವಂತೆ ವೀರಾಪುರ ಜನರು 1930ರಿಂದ 1955ರ ವರೆಗೂ ಮನವಿ ಮಾಡಿಕೊಳ್ಳುತ್ತಿದ್ದರು. ಆದರೆ ಶ್ರೀಗಳು ಮಾತ್ರ ಭಕ್ತರಿಗೆ ನಗುಮುಗದಿಂದಲೇ ಬರಲು ಆಗುವುದಿಲ್ಲ ಅಂತ ಹೇಳುತ್ತಿದ್ದರು.

    ಶಿವಕುಮಾರ ಶ್ರೀಗಳ ಪೂರ್ವಾಶ್ರಮದ ಅಣ್ಣನ ಮಗ ಸಿದ್ದಗಂಗಾ ಮಠಕ್ಕೆ ಬಂದು, ನೂತನ ಗೃಹ ಪ್ರವೇಶಕ್ಕೆ ನೀವು ಬರಬೇಕು ಅಂತ ಮನವಿ ಮಾಡಿಕೊಂಡಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಶ್ರೀಗಳು, ಶಿವಯೋಗಿಗಳ ಕೃಪೆಯಿಂದ ದೂರವಾಗಿರುವ ಆ ಮನೆಗೆ ನಾನು ಬರುವುದಿಲ್ಲ ಅಂತ ತಿಳಿಸಿದ್ದರು.

    ನಿಮ್ಮ ಅಪ್ಪಣೆಯಂತೆ ಆಗಲಿ. ನೀವು ಬಂದು ಗೃಹ ಪ್ರವೇಶ ಮಾಡಬೇಕು ಎನ್ನುವುದು ನಮ್ಮ ಸಂಕಲ್ಪ. ಒಂದು ವೇಳೆ ನೀವು ಬರದೇ ಹೋದರೆ ಮನೆ ಹಾಳುಬಿದ್ದರೂ ನಾವು ಗೃಹಪ್ರವೇಶ ಮಾಡುವುದಿಲ್ಲ ಎಂದು ಶ್ರೀಗಳಿಗೆ ನಮ್ಮ ಮನವಿ ಒಪ್ಪಿಸಿ ಗ್ರಾಮಕ್ಕೆ ತೆರಳಿದರು.

    ಭಕ್ತನ ಭಕ್ತಿ ದೊಡ್ಡದು, ಅದಕ್ಕೂ ಶಕ್ತಿಯಿದೆ ಅಂತ ಅರಿತಿದ್ದ ಶ್ರೀಗಳು ಭಕ್ತರ ಸಂಕಲ್ಪಕ್ಕೆ ಕರಗಿ ಗೃಹಪ್ರವೇಶಕ್ಕೆ ಬರುವುದಾಗಿ ತಿಳಿಸಿದ್ದರು. ಈ ಮೂಲಕ 25 ವರ್ಷದ ಬಳಿಕ 1955ರಲ್ಲಿ ಶ್ರೀಗಳು ಹುಟ್ಟೂರಿಗೆ ಕಾಲಿಟ್ಟಿದ್ದರು.