Tag: shivamogga murder

  • ನಾವು ಗಾಂಧಿವಾದಿಗಳಲ್ಲ ಗೋಡ್ಸೆವಾದಿಗಳು, ಇನ್ಮುಂದೆ ಸುಮ್ಮನಿರಲ್ಲ: ರವಿ ಪೂಜೇರಿ

    ನಾವು ಗಾಂಧಿವಾದಿಗಳಲ್ಲ ಗೋಡ್ಸೆವಾದಿಗಳು, ಇನ್ಮುಂದೆ ಸುಮ್ಮನಿರಲ್ಲ: ರವಿ ಪೂಜೇರಿ

    ಬೆಳಗಾವಿ: ಶಿವಮೊಗ್ಗ ಭಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣ ಖಂಡಿಸಿ ಬೆಳಗಾವಿ ಜಿಲ್ಲೆ ಗೋಕಾಕ್ ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಯಿತು. ಈ ವೇಳೆ ಗೋಕಾಕ್‌ ತಾಲೂಕು ಅಧ್ಯಕ್ಷ ರವಿ ಪೂಜೇರಿ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ.

    ಗೋಕಾಕ್ ಬಸವೇಶ್ವರ ವೃತ್ತದಿಂದ ತಹಶೀಲ್ದಾರ್ ಕಚೇರಿವರೆಗೆ ಪ್ರತಿಭಟನೆ ನಡೆಸಿ ಹರ್ಷ ಹತ್ಯೆಯ ಆರೋಪಿಗಳ ವಿರುದ್ಧ ಪ್ರತಿಭಟನಾಕಾರರು ಘೋಷಣೆ ಕೂಗಿ ಆಕ್ರೋಶ ಹೊರ ಹಾಕಿದರು. ಈ ವೇಳೆ ಮಾತನಾಡಿದ ಗೋಕಾಕ್ ತಾಲೂಕು ಅಧ್ಯಕ್ಷ ರವಿ ಪೂಜೇರಿ, ಕಾಂಗ್ರೆಸ್ ಸರ್ಕಾರದಲ್ಲೂ ಹಿಂದೂಗಳ ಹತ್ಯೆ, ಬಿಜೆಪಿ ಸರ್ಕಾರದಲ್ಲೂ ಹಿಂದೂಗಳ ಹತ್ಯೆಯಾಗುತ್ತಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ನಟ ಚೇತನ್ ಕಾಣೆಯಾಗಿದ್ದಾರೆ ಎಂದು ಪತ್ನಿ ದೂರು

    ನಾವು ಹಿಂದೂಗಳು ಪರ ಅಷ್ಟೇ. ಯಾವ ಸರ್ಕಾರಕ್ಕೂ ಸಾಥ್ ನೀಡಲ್ಲ. ಈ ಪ್ರಕರಣವನ್ನು ಸರ್ಕಾರ ಕಡೆಗಣಿಸಬಾರದು. ಅವರೇನಾದರೂ ಬೇಲ್ ಮೇಲೆ ಆಚೆ ಬಂದರೆ, ಉತ್ತರ ನೀಡಲು ನಮಗೂ ಬರುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

    ಛತ್ರಪತಿ ಶಿವಾಜಿ ಮಹಾರಾಜ್, ಸಂಬಾಜಿ ಪಾಟೀಲ್, ಸಂಗೊಳ್ಳಿ ರಾಯಣ್ಣ ರಕ್ತದಲ್ಲಿ ಹುಟ್ಟಿದ್ದೇವೆ. ನಾವು ಗಾಂಧಿವಾದಿಗಳಲ್ಲ, ಗೋಡ್ಸೆವಾದಿಗಳು. ಇನ್ಮುಂದೆ ವಿಚಾರ ಮಾಡಿ ಹೆಜ್ಜೆ ಇಡಿ. ನಮಗೂ ಉತ್ತರ ಕೊಡಲು ಬರುತ್ತೆ. ಭಯಾನಕ ಉತ್ತರ ಕೊಡುತ್ತೇವೆ. ನೀವು ಸುಮ್ಮನಿದ್ದರೆ ನಾವು ಸುಮ್ಮನಿರುತ್ತೇವೆ. ಇದೆ ಕಡೆಯಾಗಬೇಕು. ನಮ್ಮ ಹರ್ಷ ಹತ್ಯೆ ಪ್ರಕರಣಕ್ಕೆ ಎಲ್ಲವೂ ಕೊನೆಯಾಗಬೇಕು. ಇನ್ಮುಂದೆ ಹಿಂದೂ ಕಾರ್ಯಕರ್ತರ ತಂಟೆಗೆ ಬಂದರೆ, ಇಡೀ ಕರ್ನಾಟಕದ ಹಿಂದೂಗಳು ಸೇರಿ 2002ರ ಗೋದ್ರಾ ಹತ್ಯಾಕಾಂಡ ರೀತಿ ಕರ್ನಾಟಕದಲ್ಲೂ ಆಗಬಹುದು ಎಂದು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ. ಇದನ್ನೂ ಓದಿ: ಹರ್ಷ ಕುಟುಂಬಕ್ಕೆ 25ಲಕ್ಷ ರೂ. ಪರಿಹಾರ ನೀಡಿ-ಸರ್ಕಾರಕ್ಕೆ ಶ್ರೀರಾಮ ಸೇನೆ ಒತ್ತಾಯ

  • ಹಿಂದೂ ಕಾರ್ಯಕರ್ತ ಕೊಲೆ ಪ್ರಕರಣ – 7ನೇ ಆರೋಪಿ ಅರೆಸ್ಟ್‌

    ಹಿಂದೂ ಕಾರ್ಯಕರ್ತ ಕೊಲೆ ಪ್ರಕರಣ – 7ನೇ ಆರೋಪಿ ಅರೆಸ್ಟ್‌

    ಶಿವಮೊಗ್ಗ: ಹಿಂದೂ ಸಂಘಟನೆ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 7ನೇ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

    ಜಿಲಾನಿ ಎಂಬಾತನನ್ನು ಪೊಲೀಸರು ಅರೆಸ್ಟ್‌ ಮಾಡಿದ್ದಾರೆ. ಹರ್ಷನ ಕೊಲೆ ಬಳಿಕ ಜಿಲಾನಿ ಕಾರು ಚಾಲನೆ ಮಾಡಿದ್ದ. ಆರೋಪಿಗಳನ್ನು ಸ್ವಿಫ್ಟ್‌ ಕಾರಿನಲ್ಲಿ ಕರೆದೊಯ್ದಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ನಮ್ಮ ರಕ್ಷಣೆ ನೀವು ಮಾಡುತ್ತೀರಾ ಇಲ್ಲ ನಾವೇ ಮಾಡಿಕೊಳ್ಳಬೇಕಾ – ಸರ್ಕಾರಕ್ಕೆ ಸೂಲಿಬೆಲೆ ಪ್ರಶ್ನೆ

    ಶಿವಮೊಗ್ಗದ ದೊಡ್ಡಪೇಟೆ ಪೊಲೀಸರು, ಜಿಲಾನಿಯನ್ನು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ಬಂಧಿತ ಶಿವಮೊಗ್ಗದ ಕ್ಲಾರ್ಕ್‌ ಪೇಟೆ ನಿವಾಸಿಗಳಾಗಿದ್ದಾರೆ.

    ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ 7 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕೊಲೆ ಕೇಸ್ ಸಂಬಂಧ ಎ1 ಆರೋಪಿ ಖಾಸಿಫ್‌ ನೀಡಿದ ಮಾಹಿತಿ ಮೇರೆಗೆ 6ನೇ ಆರೋಪಿ ಮುಜಾಹಿದ್ ಮುಜ್ಜುನನ್ನು ಬಂಧಿಸಲಾಗಿತ್ತು. ಇದನ್ನೂ ಓದಿ: ಈಶ್ವರಪ್ಪನವರಿಗೆ ಹಾಗೂ ಸುಪಾರಿ ಕೊಟ್ಟವರಿಗೆ ಏನೋ ಸಂಬಂಧ ಇದೆ: ಎಸ್‍ಡಿಪಿಐ

  • ಶಿವಮೊಗ್ಗದಲ್ಲಿ ಶವಯಾತ್ರೆಗೆ ಅವಕಾಶ ಕೊಟ್ಟಿದ್ದು ಸರಿಯಲ್ಲ: ಸಿದ್ದರಾಮಯ್ಯ

    ಶಿವಮೊಗ್ಗದಲ್ಲಿ ಶವಯಾತ್ರೆಗೆ ಅವಕಾಶ ಕೊಟ್ಟಿದ್ದು ಸರಿಯಲ್ಲ: ಸಿದ್ದರಾಮಯ್ಯ

    ಬೆಂಗಳೂರು: ಶಿವಮೊಗ್ಗದಲ್ಲಿ ಹಿಂದೂ ಕಾರ್ಯಕರ್ತರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಪ್ರಕ್ಷುಬ್ದ ವಾತಾವರಣ ನಿರ್ಮಾಣವಾಗಿ, 144 ಸೆಕ್ಷನ್‌ ಜಾರಿ ಮಾಡಲಾಗಿತ್ತು. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲೂ ಮೃತನ ಶವಯಾತ್ರೆ ಮಾಡಲು ಅವಕಾಶ ಕಲ್ಪಿಸಿದ್ದು ಸರಿಯಲ್ಲ ಎಂದು ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ವಿಧಾನಸೌಧದ ತಮ್ಮ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಶಿವಮೊಗ್ಗ ನಗರದಲ್ಲಿ ಬಿಜೆಪಿ ಕಾರ್ಯಕರ್ತ ಹರ್ಷ ಅವರ ಕೊಲೆಯಾದದ್ದು ಭಾನುವಾರ. ಆ ದಿನದ ರಾತ್ರಿಯಿಂದಲೇ ಜಿಲ್ಲೆಯಲ್ಲಿ 144 ಸೆಕ್ಷನ್ ಜಾರಿಯಾಗಿದೆ. ಕಳೆದ ಮೂರು ದಿನಗಳಲ್ಲಿ ಶಿವಮೊಗ್ಗದಲ್ಲಿ 3 ಕೊಲೆಗಳು ನಡೆದಿವೆ. ಶಿವಮೊಗ್ಗ ಗೃಹ ಸಚಿವರ ತವರು ಜಿಲ್ಲೆ, ಅಲ್ಲೇ ಈ ರೀತಿ ಕೊಲೆಗಳು ನಿರಂತರವಾಗಿ ನಡೆಯುತ್ತವೆ ಎಂದರೆ ಹೇಗೆ? ಹಿಂದಿನ ದಿನವೇ 144 ಸೆಕ್ಷನ್ ಜಾರಿಯಾಗಿದ್ದರೂ ಮೃತನ ಶವಯಾತ್ರೆ ಪೊಲೀಸ್ ಇಲಾಖೆ ಅವಕಾಶ ನೀಡಿದ್ದು ಹೇಗೆ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಯಾವುದೇ ದೇಶದ್ರೋಹಿಯನ್ನು ಬಿಡೋದಿಲ್ಲ, ಮಟ್ಟ ಹಾಕ್ತೀವಿ: ಆರ್. ಅಶೋಕ್

    ಈ ಶವಯಾತ್ರೆಯಲ್ಲಿ ಸಚಿವ ಈಶ್ವರಪ್ಪ, ಸ್ಥಳೀಯ ಸಂಸದ ರಾಘವೇಂದ್ರ ಕೂಡ ಭಾಗವಹಿಸಿದ್ದರು. ಅಂದರೆ ಈ ಶವಯಾತ್ರೆಯನ್ನು ರಾಜ್ಯ ಸರ್ಕಾರದ ಪ್ರಾಯೋಜಿತ ಶವಯಾತ್ರೆ ಎನ್ನಬೇಕಾಗುತ್ತದೆ. ತಮ್ಮದೇ ಸರ್ಕಾರ 144 ಸೆಕ್ಷನ್ ಹಾಕಿದೆ. ಸರ್ಕಾರದ ಸಚಿವರ ಎದುರೇ ಕಲ್ಲು ತೂರಾಟ ನಡೆದಿದೆ. ಅಂಗಡಿ, ವಾಹನಗಳಿಗೆ ಬೆಂಕಿ ಹಾಕಲಾಗಿದೆ. ಜನ ಗುಂಪು ಗುಂಪಾಗಿ ಕತ್ತಿ, ತಲ್ವಾರ್ ಹಿಡಿದು ಓಡಾಡ್ತಾರೆ. ಈ ಮೆರವಣಿಗೆಯಲ್ಲಿ ಈಶ್ವರಪ್ಪ ಮುಂದೆ ನಿಂತಿದ್ದಾರೆ ಎಂದರೆ ಇದು ನಾಗರಿಕ ಸರ್ಕಾರವೇ? ಇವತ್ತು ಶಿವಮೊಗ್ಗದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿ, ಆಸ್ತಿ ಪಾಸ್ತಿ ನಷ್ಟವಾಗಿದ್ದರೆ ಅದಕ್ಕೆ ಸಚಿವ ಈಶ್ವರಪ್ಪ ಅವರೇ ಹೊಣೆ ಎಂದು ಹರಿಹಾಯ್ದಿದ್ದಾರೆ.

    ರಾಜ್ಯದಲ್ಲಿ ಈಶ್ವರಪ್ಪ ಅವರದೇ ಪಕ್ಷದ ಸರ್ಕಾರ ಇದೆ. ಪಿಎಫ್‌ಐ ಮತ್ತು ಎಸ್‌ಡಿಪಿಐ ವಿರುದ್ಧ ಸಾಕ್ಷಿಗಳು ಇದ್ದರೆ ಕೂಡಲೇ ಆ ಸಂಘಟನೆಗಳನ್ನು ನಿಷೇಧ ಮಾಡಿ. ನಿಷೇಧ ಮಾಡಬೇಡಿ ಎಂದು ಅವರಿಗೆ ಅಡ್ಡ ಬರುತ್ತಿರುವವರಾದರೂ ಯಾರು ಎಂದು ಮರು ಪ್ರಶ್ನೆ ಹಾಕಿದ್ದಾರೆ. ಇದನ್ನೂ ಓದಿ: ಹರ್ಷನ ಕೊಲೆ ರಾಜಕೀಯ ಪ್ರೇರಿತವೋ ಎಂಬ ಆಯಾಮದಲ್ಲಿ ತನಿಖೆ: ಆರಗ ಜ್ಞಾನೇಂದ್ರ

    ಹರ್ಷ ಕೊಲೆ ಪ್ರಕರಣವನ್ನು ಎನ್ಐಎಯಿಂದಲೋ ಅಥವಾ ಬೇರೆ ಯಾವ ತನಿಖಾ ಸಂಸ್ಥೆಯ ಮೂಲಕವಾದರೂ ತನಿಖೆ ನಡೆಸಲಿ. ನನ್ನ ತಕರಾರು ಇಲ್ಲ. ನಿನ್ನೆಯ ಶವಯಾತ್ರೆಯಲ್ಲಿ ಸಾರ್ವಜನಿಕ ಆಸ್ತಿ-ಪಾಸ್ತಿ ನಷ್ಟವಾಗಿದೆ. ಇಬ್ಬರು ವ್ಯಕ್ತಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಸಾಕಷ್ಟು ಜನರ ಮೇಲೆ ಹಲ್ಲೆ, ಕಲ್ಲು ತೂರಾಟ ನಡೆದಿದೆ. ಈ ಎಲ್ಲಾ ಕಾರಣಗಳಿಗಾಗಿ ಒಟ್ಟು ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕು ಎಂದು ಒತ್ತಾಯಿಸಿದ್ದಾರೆ.

    ಬಿಜೆಪಿ ಪಕ್ಷದ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಅವರು ರಾಷ್ಟ್ರೀಯ ವಾಹಿನಿಗೆ ನೀಡಿದ ಸಂದರ್ಶನದಲ್ಲಿ, ರಾಷ್ಟ್ರಧ್ವಜಕ್ಕೆ ಸಂಬಂಧಿಸಿದಂತೆ ಸಚಿವ ಈಶ್ವರಪ್ಪ ಅವರ ಹೇಳಿಕೆ ಅತ್ಯಂತ ಬೇಜವಾಬ್ದಾರಿಯುತವಾದುದ್ದು ಎಂದು ಹೇಳಿದ್ದಾರೆ. ಈಶ್ವರಪ್ಪ ಅವರು ದೇಶ ಮತ್ತು ಸರ್ಕಾರಕ್ಕಿಂತ ದೊಡ್ಡವರಲ್ಲ. ಅವರ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಕ್ರಮ ಕೈಗೊಳ್ಳಬೇಕು. ಜೊತೆಗೆ ಕೂಡಲೇ ಅವರನ್ನು ಸಂಪುಟದಿಂದ ವಜಾಗೊಳಿಸಬೇಕು. ಮೊದಲು ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿ ದೇಶದ್ರೋಹ ಎಸಗಿದ್ದರು. ಈಗ ತಮ್ಮ ಸರ್ಕಾರವೇ ವಿಧಿಸಿದ್ದ 144 ಸೆಕ್ಷನ್ ಮೀರಿ ಕಾನೂನಿಗೆ ಅಗೌರವ ತೋರಿದ್ದಾರೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಹೆಣದ ಮೇಲೆ ರಾಜಕೀಯ ಮಾಡುವ ಅಭ್ಯಾಸ ಕಾಂಗ್ರೆಸ್ಸಿಗಿಲ್ಲ: ಬಿ.ಕೆ.ಹರಿಪ್ರಸಾದ್

    ಇಂದು ಸಂಜೆ ವಿಧಾನಸಭೆ ಮತ್ತು ವಿಧಾನ ಪರಿಷತ್ ನ ಎಲ್ಲಾ ಕಾಂಗ್ರೆಸ್ ಸದಸ್ಯರು ವಿಧಾನಸೌಧದಿಂದ ರಾಜಭವನದ ವರೆಗೆ ಕಾಲ್ನಡಿಗೆ ಮೂಲಕ ತೆರಳಿ, ರಾಜ್ಯಪಾಲರನ್ನು ಭೇಟಿಯಾಗಿ ಈಶ್ವರಪ್ಪ ಅವರನ್ನು ವಜಾಗೊಳಿಸುವಂತೆ ಮನವಿ ಮಾಡುತ್ತೇವೆ.

  • 2 ವರ್ಷದ ಹಿಂದೆಯೇ 10 ಲಕ್ಷಕ್ಕೆ ಸುಪಾರಿ ಕೊಟ್ಟಿದ್ದರು: ಮೃತನ ಸಂಬಂಧಿ ಹೇಳಿಕೆ

    2 ವರ್ಷದ ಹಿಂದೆಯೇ 10 ಲಕ್ಷಕ್ಕೆ ಸುಪಾರಿ ಕೊಟ್ಟಿದ್ದರು: ಮೃತನ ಸಂಬಂಧಿ ಹೇಳಿಕೆ

    ಶಿವಮೊಗ್ಗ: ಯುವಕನ ಹತ್ಯೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್‌ ಸಿಕ್ಕಿದೆ. ಹರ್ಷನ ಕೊಲೆಗೆ ಎರಡು ವರ್ಷಗಳ ಹಿಂದೆಯೇ ಸುಪಾರಿ ಕೊಟ್ಟಿದ್ದರು ಎಂದು ಮೃತನ ಸಂಬಂಧಿ ಗಂಭೀರ ಆರೋಪ ಮಾಡಿದ್ದಾರೆ.

    ಮೆಗ್ಗಾನ್ ಆಸ್ಪತ್ರೆಯ ಬಳಿ ಹತ್ಯೆಯಾದ ಯುವಕನ ಸಂಬಂಧಿ ಪ್ರವೀಣ್ ಮಾತನಾಡಿದ್ದು, ಹೊಡೆದು ಹಾಕಿದ್ದಾರೆ ಅಷ್ಟೇ. ಇವನನ್ನು ಹೊಡೆದು ಹಾಕಿದರೆ 10 ಲಕ್ಷ ರೂ. ಕೊಡ್ತೀನಿ ಅಂತ 2 ವರ್ಷದಿಂದಲೂ‌ ಮುಸ್ಲಿಮರು ಹೇಳುತ್ತಿದ್ದರು. ಯಾರು ಹೊಡೆದು ಹಾಕಿದ್ದಾರೆ ಅಂತ ಗೊತ್ತಿಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ. ಇದನ್ನೂ ಓದಿ: ಯುವಕನ ಕೊಲೆ ಪ್ರಕರಣ- ಓರ್ವ ಆರೋಪಿ ವಶಕ್ಕೆ, ನಾಲ್ವರಿಗಾಗಿ ಹುಡುಕಾಟ

    ಪೊಲೀಸರು ಏನು ತನಿಖೆ ಮಾಡುತ್ತಾರೋ ಅದರ ಆಧಾರದ ಮೇಲೆ ನಮಗೆ ಗೊತ್ತಾಗಬೇಕು. ಎರಡು ವರ್ಷದಿಂದಲೂ ಈ ಜಿದ್ದು ಇದ್ದೇ ಇದೆ ಎಂದು ಪ್ರವೀಣ್‌ ಮಾಹಿತಿ ನೀಡಿದ್ದಾನೆ.

    ಹರ್ಷ ಎಂಬಾತ ಕ್ಯಾಂಟೀನ್ ಬಳಿ ಟೀ ಕುಡಿಯುತ್ತಾ ನಿಂತಿದ್ದ ವೇಳೆ ಕಾರಿನಲ್ಲಿ ಬಂದ ಯುವಕರ ಗುಂಪು ಏಕಾಏಕಿ ಹರ್ಷನ ಮೇಲೆ ದಾಳಿ ನಡೆಸಿದೆ. ನಂತರ ದಾಳಿ ನಡೆಸಿದ ತಂಡ ಸ್ಥಳದಿಂದ ಪರಾರಿಯಾಗಿದೆ. ಇದನ್ನೂ ಓದಿ: ಆರೋಪಿಗಳ ಬಗ್ಗೆ ಸುಳಿವು ಸಿಕ್ಕಿದೆ, ಶೀಘ್ರವೇ ಬಂಧನ: ಆರಗ ಜ್ಞಾನೇಂದ್ರ

    ಈ ವೇಳೆ ದಾಳಿಗೆ ಒಳಗಾದ ಹರ್ಷ ಸ್ಥಳದಲ್ಲೇ ಕುಸಿದು ಬಿದ್ದಿದ್ದಾನೆ. ನಂತರ ಆತನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಆದರೆ ತೀವ್ರವಾಗಿ ಹಲ್ಲೆಗೊಳಗಾಗಿದ್ದ ಹರ್ಷ ಮೆಗ್ಗಾನ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಈ ವಿಷಯ ತಿಳಿಯುತ್ತಿದ್ದಂತೆ ಎರಡು ಕೋಮಿನ ಯುವಕರ ಗುಂಪು ಮೆಗ್ಗಾನ್ ಆಸ್ಪತ್ರೆ ಬಳಿ ಜಮಾಯಿಸಿತು. ಹೀಗಾಗಿ ಮೆಗ್ಗಾನ್ ಆಸ್ಪತ್ರೆ ಬಳಿ ಬಿಗುವಿನ ವಾತಾವರಣ ಸೃಷ್ಟಿಯಾಗಿದೆ.