Tag: Shivaraj Singh Chauhan

  • ಕರ್ನಾಟಕದಲ್ಲಿ 4,67,580 ಮನೆಗಳನ್ನು ಕಟ್ಟಲು ಒಪ್ಪಿಗೆ: ಕೇಂದ್ರ ಸಚಿವ ಚೌಹಾಣ್

    ಕರ್ನಾಟಕದಲ್ಲಿ 4,67,580 ಮನೆಗಳನ್ನು ಕಟ್ಟಲು ಒಪ್ಪಿಗೆ: ಕೇಂದ್ರ ಸಚಿವ ಚೌಹಾಣ್

    ಬೆಂಗಳೂರು: ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ರಾಜ್ಯದ ಬಡ ಮತ್ತು ಮಧ್ಯಮ ವರ್ಗದವರಿಗೆ 4,67,580 ಮನೆಗಳನ್ನು ಕಟ್ಟಿ ಕೊಡಲು ಕೇಂದ್ರ ಸರ್ಕಾರ ಒಪ್ಪಿಗೆ ಕೊಟ್ಟಿದೆ ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಬೆಂಗಳೂರಿನಲ್ಲಿ ತಿಳಿಸಿದರು.

    ವಿವಿಧ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ರಾಜ್ಯಕ್ಕೆ ಬಂದಿರುವ ಚೌಹಾಣ್, ಮಾಧ್ಯಮಗಳ ಜತೆ ಮಾತಾಡಿದರು. ಪ್ರತೀ ಬಡವನಿಗೂ ಮನೆ ಸಿಗಬೇಕು ಅನ್ನೋದು ಮೋದಿಯವರ ಸಂಕಲ್ಪ. ಕಳೆದ ಸೆಪ್ಟೆಂಬರ್‌ನಲ್ಲಿ ಕರ್ನಾಟಕಕ್ಕೆ 2,57,246 ಮನೆಗಳನ್ನು ಕಟ್ಟಲು ಒಪ್ಪಿಗೆ ಕೊಟ್ಟಿದ್ದೆವು, ಅನುದಾನವನ್ನೂ ಕೊಟ್ಟಿದ್ದೆವು. ಈಗ ಮತ್ತೆ ಕರ್ನಾಟಕದ ಬಡಜನರಿಗೆ ಮನೆ ಕಟ್ಟಲು ಟಾರ್ಗೆಟ್ ಹೆಚ್ಚಿಸಲಾಗಿದೆ ಎಂದರು.

    ಕೇಂದ್ರವು 4,67,580 ಮನೆಗಳನ್ನು ರಾಜ್ಯದಲ್ಲಿ ಕಟ್ಟಲು ಒಪ್ಪಿಗೆ ಕೊಟ್ಟಿದೆ. ಮನೆಗಳ ನಿರ್ಮಾಣ ಕಾರ್ಯಕ್ಕೆ ವೇಗ ಕೊಡಲು ಸೂಚಿಸಲಾಗಿದೆ. ಅಡಿಕೆ ಬೆಳೆ ಯೋಜನೆಗಳಿಗೂ ಅನುದಾನ ಕೊಡ್ತೇವೆ. ಮೂರೂ ಸಚಿವರೂ ಒಂದಷ್ಟು ಬೇಡಿಕೆ ಕೊಟ್ಟಿದ್ದು, ಆದ್ಯತೆ ಮೇರೆಗೆ ಈಡೇರಿಸಲಾಗುವುದು ಎಂದು ಹೇಳಿದರು.

    ಅನುದಾನ ತಾರತಮ್ಯ ಆರೋಪ ಬಗ್ಗೆ ಮಾತಾಡಿದ ಕೇಂದ್ರ ಸಚಿವರು, ಹಿಂದೆ ನೀಡಿದ್ದ ಅನುದಾನ ಪೂರ್ತಿ ಬಳಕೆ ಮಾಡಲು ತಿಳಿಸಲಾಗಿದೆ. ಈಗಾಗಲೇ ಬಿಡುಗಡೆ ಮಾಡಿದ ಅನುದಾನ ಸದ್ಬಳಕೆ ಆಗಲಿ. ರಾಜ್ಯ ಅನುದಾನ ಕೇಳದಿದ್ದರೂ ನಾವೇ ಘೋಷಣೆ ಮಾಡಿದ್ದೇವೆ. ಬಹಳಷ್ಟು ಅನುದಾನ ಈಗಾಗಲೇ ಕೊಟ್ಟಿದ್ದು, ಅದನ್ನು ಇನ್ನೂ ಕರ್ನಾಟಕ ಸರ್ಕಾರ ಖರ್ಚು ಮಾಡಿಲ್ಲ ಎಂದು ಆರೋಪಿಸಿದರು.

    ಇದಕ್ಕೂ ಮುನ್ನ ಕೆಕೆ ಗೆಸ್ಟ್ಹೌಸ್‌ನಲ್ಲಿ ಸಚಿವರಾದ ಪ್ರಿಯಾಂಕ್ ಖರ್ಗೆ, ಚಲುವರಾಯಸ್ವಾಮಿ, ಕೃಷ್ಣಬೈರೇಗೌಡ ಅವರು ಶಿವರಾಜ್ ಸಿಂಗ್ ಚೌಹಾಣ್‌ರನ್ನು ಭೇಟಿ ಮಾಡಿ ಇಲಾಖಾವಾರು ಅನುದಾನ, ಕೇಂದ್ರದ ಕಾರ್ಯಕ್ರಮಗಳ ಪ್ರಗತಿ ಬಗ್ಗೆ ಚರ್ಚೆ ನಡೆಸಿದರು. ಈ ವೇಳೆ ಸಂಸದ ಬಿ.ವೈ.ರಾಘವೇಂದ್ರ ಉಪಸ್ಥಿತರಿದ್ದರು.

  • ICAR-IIHR ಡೀಮ್ಡ್ ವಿಶ್ವವಿದ್ಯಾಲಯವನ್ನಾಗಿ ಮೇಲ್ದರ್ಜೆಗೇರಿಸಲು ಡಾ.ಮಂಜುನಾಥ್ ಮನವಿ

    ICAR-IIHR ಡೀಮ್ಡ್ ವಿಶ್ವವಿದ್ಯಾಲಯವನ್ನಾಗಿ ಮೇಲ್ದರ್ಜೆಗೇರಿಸಲು ಡಾ.ಮಂಜುನಾಥ್ ಮನವಿ

    ನವದೆಹಲಿ: ದೇಶದಲ್ಲಿ 2025ರ ವೇಳೆಗೆ ಸುಮಾರು 1.5 ಲಕ್ಷ ತೋಟಗಾರಿಕಾ ಪದವಿಧರರ ಅವಶ್ಯಕತೆಯಿದ್ದು, ಪ್ರಸ್ತುತ 57 ತೋಟಗಾರಿಕಾ ಕಾಲೇಜುಗಳಲ್ಲಿ 10 ಸಾವಿರಕ್ಕೂ ಕಡಿಮೆ ಪದವಿಧರರು ಹೊರಬರುತ್ತಿದ್ದಾರೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ, ರೈತರಿಗೆ, ಮಾರಾಟಗಾರರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ICAR-IIHR ಅನ್ನು ಡೀಮ್ಡ್ ವಿಶ್ವವಿದ್ಯಾಲಯವನ್ನಾಗಿ ಮೇಲ್ದರ್ಜೆಗೇರಿಸಬೇಕು ಎಂದು ಸಂಸದ ಡಾ.ಸಿ.ಎನ್ ಮಂಜುನಾಥ್ ಮನವಿ ಮಾಡಿದ್ದಾರೆ.

    ನವದೆಹಲಿಯಲ್ಲಿ ಇಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಭೇಟಿ ಮಾಡಿದ ಅವರು, ಈ ಬಗ್ಗೆ ಮನವಿ ನೀಡಿದರು. ಇದನ್ನೂ ಓದಿ: ನಾನು ಕಾನೂನು ಪಾಲಿಸುವ ನಾಗರಿಕ.. ತನಿಖೆಗೆ ಸಹಕರಿಸುತ್ತೇನೆ: ಜೈಲಿಂದ ರಿಲೀಸ್‌ ಆದ ಅಲ್ಲು ಅರ್ಜುನ್‌ ರಿಯಾಕ್ಷನ್‌

    ಬೆಂಗಳೂರಿನ ಹೆಸರಘಟ್ಟದಲ್ಲಿರುವ ಭಾರತೀಯ ತೋಟಗಾರಿಕೆ ಸಂಶೋಧನಾ ಸಂಸ್ಥೆ ICAR-IIHR ಸಂಸ್ಥೆಯು ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ತೋಟಕಾರಿಕಾ ವಲಯದಲ್ಲಿ ಅಧಿಕ ಇಳುವರಿ ನೀಡುವ ಬೆಳೆಗಳು, ಹೆಚ್ಚು ರೋಗ ನಿರೋಧಕ ಶಕ್ತಿ ಇರುವ ಬೆಳೆಗಳ ಸಂಶೋಧನೆ, ಹೊಸ ತಂತ್ರಜ್ಞಾನಗಳ ಆವಿಷ್ಕಾರ ಮೂಲಕ ರೈತರ ಆರ್ಥಿಕ ಪ್ರಗತಿಗೆ ಸಹಕರಿಸುತ್ತಿದೆ ಎಂದು ಸಚಿವರಿಗೆ ತಿಳಿಸಿದರು. ಇದನ್ನೂ ಓದಿ: ಮೈಸೂರು| 11 ವರ್ಷಗಳ ನಂತರ ಮಾರಮ್ಮ ದೇವಸ್ಥಾನದ ಬಾಗಿಲು ಓಪನ್

    ರಾಮನಗರ ಜಿಲ್ಲೆಯಾದ್ಯಂತ ಮಾವು ಹಾಗೂ ತೆಂಗು ಬೆಳೆ 90% ರಷ್ಟು ಹಾನಿಯಾಗಿದ್ದು, 50,000ಕ್ಕೂ ಅಧಿಕ ರೈತರು ನಷ್ಟ ಅನುಭವಿಸಿದ್ದಾರೆ. ಮಾವು ಬೆಳೆಗೆ 57.67 ಕೋಟಿ ರೂ. ಹಾಗೂ ತೆಂಗು ಬೆಳೆಗೆ 30.65 ಕೋಟಿ ಹಣದ ನೆರವನ್ನು ಎನ್‌ಡಿಆರ್‌ಎಫ್ (NDRF) ಅಡಿಯಲ್ಲಿ ಕಲ್ಪಿಸುವ ಮೂಲಕ ನಮ್ಮ ರೈತರ ಸಂಕಷ್ಟಕ್ಕೆ ಸ್ಪಂದಿಸುವಂತೆ ಮನವಿ ಮಾಡಿದರು. ಇದನ್ನೂ ಓದಿ: ಬಿಜೆಪಿ ಹಿರಿಯ ನಾಯಕ ಎಲ್‌ಕೆ ಅಡ್ವಾಣಿ ಆಸ್ಪತ್ರೆಗೆ ದಾಖಲು

  • ವೇದಿಕೆಯಲ್ಲಿ ಕುಳಿತಿದ್ದ ಸಿಎಂ ಶಿವರಾಜ್ ಚೌಹಾಣ್ ಮುಂದೆ ಮಗುವನ್ನು ಎಸೆದ ತಂದೆ!

    ವೇದಿಕೆಯಲ್ಲಿ ಕುಳಿತಿದ್ದ ಸಿಎಂ ಶಿವರಾಜ್ ಚೌಹಾಣ್ ಮುಂದೆ ಮಗುವನ್ನು ಎಸೆದ ತಂದೆ!

    ಭೋಪಾಲ್: ವ್ಯಕ್ತಿಯೊಬ್ಬ ಚಿಕಿತ್ಸೆಗೆ ಕರೆತಂದ ತನ್ನ ಪುಟ್ಟ ಕಂದಮ್ಮನನ್ನು ವೇದಿಕೆಯಲ್ಲಿ ಕುಳಿತಿದ್ದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ (Shivraj Singh Chouhan) ಮುಂದೆ ಎಸೆದ ಹೀನಾಯ ಪ್ರಸಂಗವೊಂದು ನಡೆದಿದೆ.

    ಈ ಘಟನೆ ಮಧ್ಯಪ್ರದೇಶ (Madhyapradesh) ದ ಸಾಗರ್ ಎಂಬಲ್ಲಿ ನಡೆದಿದೆ. ವ್ಯಕ್ತಿಯನ್ನು ಮುಕೇಶ್ ಪಟೇಲ್ ಎಂದು ಗುರುತಿಸಲಾಗಿದೆ. ವ್ಯಕ್ತಿಯು ತನ್ನ 1 ವರ್ಷದ ಮಗುವನ್ನು ವೇದಿಕೆಗೆ ಎಸೆಯುತ್ತಿದ್ದಂತೆಯೇ ಅಲರ್ಟ್ ಆದ ಪೊಲೀಸರು. ಕೂಡಲೇ ಮಗುವನ್ನು ತೆಗೆದುಕೊಂಡು ಅದರ ತಾಯಿಗೆ ಒಪ್ಪಿಸಿದ್ದಾರೆ. ಈ ಘಟನೆಯಿಂದಾಗಿ ಕಾರ್ಯಕ್ರಮದಲ್ಲಿ ನೆರೆದಿದ್ದವರಲ್ಲಿ ಕೆಲ ಕಾಲ ಆತಂಕ ಸೃಷ್ಟಿಸಿತ್ತು.

    ನಡೆದಿದ್ದೇನು..?: ಮಧ್ಯಪ್ರದೇಶದ ಮುಖ್ಯಮಂತ್ರಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡುತ್ತಿದ್ದಾಗ ಈ ಘಟನೆ ನಡೆದಿದೆ. ಸಾಗರದ ಕೆಸ್ಲಿ ತಹಸಿಲ್‍ನ ಸಹಜ್‍ಪುರ ಗ್ರಾಮದ ನಿವಾಸಿಯಾಗಿರುವ ಮುಖೇಶ್ ಪಟೇಲ್ (Mukesh Patel) ಹಾಗೂ ನೇಹಾ ದಂಪತಿಯ ಮಗುವಿನ ಹೃದಯದಲ್ಲಿ ರಂಧ್ರವಿದೆ. ದಂಪತಿ ಈವರೆಗೆ ಮಗುವಿನ ಚಿಕಿತ್ಸೆಗಾಗಿ 4 ಲಕ್ಷಕ್ಕೂ ಅಧಿಕ ಹಣ ಖರ್ಚು ಮಾಡಿದ್ದಾರೆ. ಆದರೆ ಮಗುವಿನ ಶಸ್ತ್ರಚಿಕಿತ್ಸೆಗೆ ಇನ್ನೂ ಹೆಚ್ಚಿನ ಹಣದ ಅವಶ್ಯಕತೆ ಇತ್ತು. ಇದನ್ನೂ ಓದಿ: ನನ್ನ ಬೆನ್ನಿಗೆ ಚೂರಿ ಹಾಕ್ತೀರಿ, ಎಷ್ಟು ಕಿರುಕುಳ ಕೊಡ್ತೀರಿ: ಖೂಬಾ ವಿರುದ್ಧ ಪ್ರಭು ಚವ್ಹಾಣ್ ಕೆಂಡಾಮಂಡಲ

    ಅಂತೆಯೇ ಇತ್ತೀಚೆಗೆ ಸಾರ್ವಜನಿಕ ಸಮಾವೇಶವೊಂದರಲ್ಲಿ ಶಿವರಾಜ್ ಸಿಂಗ್ ಚೌಹಾಣ್ ಭಾಗವಹಿಸಿದ್ದರು. ಇದು ಮುಕೇಶ್ ಗಮನಕ್ಕೆ ಬಂದಿದ್ದು, ಕಾರ್ಯಕ್ರಮದಂದು ತನ್ನ ಮಗುವಿನೊಂದಿಗೆ ಮುಕೇಶ್ ಪಟೇಲ್ ದಂಪತಿ ತೆರಳಿದ್ದರು. ಮೊದಲು ಪೊಲೀಸರ ಬಳಿ ಹೋಗಿ ಮುಖ್ಯಮಂತ್ರಿ ಅವರನ್ನು ಭೇಟಿಯಾಗಬೇಕೆಂದು ಹೇಳಿದ್ದಾರೆ. ಆದರೆ ಪೊಲೀಸರು ಇದಕ್ಕೆ ಒಪ್ಪಿಗೆ ನೀಡಿಲ್ಲ. ಈ ಹಿನ್ನೆಲೆಯಲ್ಲಿ ಕಾರ್ಯಕ್ರಮ ನಡೆಯುತ್ತಿದ್ದಾಗಲೇ ಮುಖ್ಯಮಂತ್ರಿಯ ಗಮನಕ್ಕೆ ತರುವ ಸಲುವಾಗಿ ಮುಕೇಶ್ ತನ್ನ ಮಗುವನ್ನು ವೇದಿಕೆಯ ಬಳಿ ಎಸೆದಿದ್ದಾರೆ. ಇದನ್ನು ಗಮನಿಸಿದ ಅಧಿಕಾರಿಗಳು ಕೂಡಲೇ ಮಗುವನ್ನು ಮೇಲೆತ್ತಿ ತಾಯಿಗೆ ನೀಡಿದ್ದಾರೆ. ಬಳಿಕ ಅಧಿಕಾರಿಗಳು ಈ ವಿಚಾರವನ್ನು ಮುಖ್ಯಮಂತ್ರಿಗೆ ಹೇಳಿದ್ದಾರೆ. ಆತನ ಮಗುವಿನ ಹೃದಯದಲ್ಲಿ ರಂಧ್ರವಿದೆ. ಸಹಾಯಕ್ಕಾಗಿ ಬಂದಿದ್ದಾರೆ ಎಂದು ತಿಳಿಸಿದ್ದಾರೆ. ಇದಕ್ಕೆ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಎಲ್ಲಾ ಸಹಾಯ ಮಾಡುವುದಾಗಿ ಭರವಸೆಯನ್ನು ನೀಡಿದ್ದಾರೆ.

    ನನ್ನ ಮಗು 3 ತಿಂಗಳು ಇರುವಾಗ ಹೃದಯದಲ್ಲಿ ರಂಧ್ರ ಕಾಣಿಸಿಕೊಂಡಿತ್ತು. ಇದಕ್ಕಾಗಿ 4 ಲಕ್ಷಕ್ಕೂ ಅಧಿಕ ಖರ್ಚು ಮಾಡಿದ್ದೇನೆ. ವೈದ್ಯರು ಆಪರೇಷನ್ ಮಾಡಬೇಕೆಂದು ಹೇಳಿದ್ದು, ಅದಕ್ಕೆ 3.50 ಲಕ್ಷ ವೆಚ್ಚವಾಗಲಿದೆ ಎಂದಿದ್ದಾರೆ. ಆದರೆ ಅಷ್ಟು ದೊಡ್ಡ ಮೊತ್ತವನ್ನು ಸಂಗ್ರಹಿಸುವುದು ನಮ್ಮಿಂದ ಸಾಧ್ಯವಿಲ್ಲ. ಹೀಗಾಗಿ ಮುಖ್ಯಮಂತ್ರಿಯನ್ನು ಭೇಟಿ ಮಾಡಲು ಬಂದೆವು. ಆದರೆ ಪೊಲೀಸರು ನಮಗೆ ಅವಕಾಶ ನೀಡಲಿಲ್ಲ. ಹೀಗಾಗಿ ಕಾರ್ಯಕ್ರಮದಲ್ಲಿ ವೇದಿಕೆಯತ್ತ ಮಗುವನ್ನು ಎಸೆದಿದ್ದಾಗಿ ಮುಕೇಶ್ ಪಟೇಲ್ ಹೇಳಿದ್ದಾರೆ.

  • ಸಿಎಂ ಶೀಘ್ರ ಚೇತರಿಕೆಗೆ ಮಧ್ಯಪ್ರದೇಶದ ಸಿಎಂ ಸೇರಿದಂತೆ ಗಣ್ಯರಿಂದ ಶುಭಹಾರೈಕೆ

    ಸಿಎಂ ಶೀಘ್ರ ಚೇತರಿಕೆಗೆ ಮಧ್ಯಪ್ರದೇಶದ ಸಿಎಂ ಸೇರಿದಂತೆ ಗಣ್ಯರಿಂದ ಶುಭಹಾರೈಕೆ

    ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೊರೊನಾ ಸೋಂಕಿಗೆ ಒಳಗಾಗಿದ್ದು, ಈ ಹಿನ್ನೆಲೆಯಲ್ಲಿ ಮಧ್ಯಪ್ರದೇಶದ ಸಿಎಂ ಸೇರಿದಂತೆ ಹಲವಾರು ಗಣ್ಯರು ಶೀಘ್ರ ಚೇತರಿಕೆಗೆ ಶುಭ ಹಾರೈಸಿದ್ದಾರೆ.

    ಈ ಸಂಬಂಧ ಟ್ವೀಟ್ ಮಾಡಿರುವ ಶಿವರಾಜ್ ಸಿಂಗ್ ಚೌಹಾಣ್, ಬೊಮ್ಮಾಯಿ ಅವರೇ ಆದಷ್ಟು ಬೇಗ ಕೊರೊನಾದಿಂದ ಗುಣಮುಖರಾಗುವಂತೆ ಪ್ರಾರ್ಥಿಸುವುದಾಗಿ ತಿಳಿಸಿದ್ದಾರೆ.

    ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಟ್ವೀಟ್ ಮಾಡಿ, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ರವರು ಶೀಘ್ರದಲ್ಲಿ ಸಂಪೂರ್ಣ ಗುಣಮುಖರಾಗಲಿ, ಮತ್ತೆ ಎಂದಿನಂತೆ ತಮ್ಮ ಕರ್ತವ್ಯಗಳಲ್ಲಿ ತೊಡಗಿಕೊಳ್ಳಲಿ ಎಂದು ಹಾರೈಸುತ್ತೇನೆ ಎಂದು ಹೇಳಿದ್ದಾರೆ.

    ಇತ್ತ ಆರೋಗ್ಯ ಸಚಿವ ಡಾ. ಸುಧಾಕರ್ ಟ್ವೀಟ್ ಮಾಡಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆದಷ್ಟು ಬೇಗ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಎಂದಿನಂತೆ ತಮ್ಮ ಕಾರ್ಯ-ಕಲಾಪಗಳಲ್ಲಿ ತೊಡಗಿಕೊಳ್ಳುವಂತಾಗಲಿ ಎಂದು ಹಾರೈಸುತ್ತೇನೆ ಎಂದಿದ್ದಾರೆ. ಇದನ್ನೂ ಓದಿ: ಸಿಎಂ ಬೊಮ್ಮಾಯಿಗೆ ಕೊರೊನಾ ಪಾಸಿಟಿವ್‌

    ಸಚಿವ ಡಾ. ಸಿ.ಎನ್ ಅಶ್ವಥ್ ನಾರಾಯಣ್ ಅವರು, ಮುಖ್ಯಮಂತ್ರಿ ಬೊಮ್ಮಾಯಿ ಅವರು ಕೋವಿಡ್ ಸೋಂಕಿನಿಂದ ಶೀಘ್ರ ಗುಣಮುಖರಾಗುವಂತೆ ನನ್ನ ಶುಭ ಹಾರೈಕೆಗಳು ಎಂದು ಕೂ ನಲ್ಲಿ ತಿಳಿಸಿದ್ದಾರೆ.

    ಮುಖ್ಯಮಂತ್ರಿಗಳು ಶೀಘ್ರವಾಗಿ ಗುಣಮುಖವಾಗಲಿ ಹಾಗೂ ತಮ್ಮ ದೈನಂದಿನ ಚಟುವಟಿಕೆಗಳಲ್ಲಿ ಎಂದಿನಂತೆ ತೊಡಗಿಸಿಕೊಳ್ಳುವಂತೆ ಆಗಲಿ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಹಾರೈಸಿದ್ದಾರೆ.

    ಮುಖ್ಯಮಂತ್ರಿ ಬೊಮ್ಮಾಯಿ ಅವರಿಗೆ ಅವರಿಗೆ ಕೋವಿಡ್ – 19 ಪಾಸಿಟಿವ್ ಎಂದು ತಿಳಿದು ನೋವಾಗಿದೆ. ಅವರು ಶೀಘ್ರವಾಗಿ ಗುಣಮುಖರಾಗಿ ಆದಷ್ಟು ಬೇಗ ಜನರ ಸೇವೆಗೆ ಮರಳಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುವುದಾಗಿ ಸಚಿವ ಶ್ರೀರಾಮುಲು ಹಾರೈಸಿದ್ದಾರೆ.

    ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕೋವಿಡ್-19 ದೃಢಪಟ್ಟಿದೆ. ಈ ಮೂಲಕ ಸಿಎಂ ಎರಡನೇ ಬಾರಿ ಮಹಾಮಾರಿಯನ್ನು ಎದುರಿಸುತ್ತಿದ್ದಾರೆ. ಈ ಸಂಬಂಧ ಟ್ವಿಟ್ಟರ್ ನಲ್ಲಿ ಬರೆದುಕೊಂಡಿರುವ ಅವರು, ಸೌಮ್ಯ ಲಕ್ಷಣಗಳು ಇದ್ದದ್ದರಿಂದ ಕೊರೊನಾ ಪರೀಕ್ಷೆ ಮಾಡಿಸಿದೆ. ವರದಿಯಲ್ಲಿ ಪಾಸಿಟಿವ್ ಬಂದಿದೆ. ನಾನು ಆರೋಗ್ಯವಾಗಿದ್ದೇನೆ. ಮನೆಯಲ್ಲೇ ಕ್ವಾರಂಟೈನ್ ಆಗಿದ್ದೇನೆ. ಇತ್ತೀಚೆಗೆ ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಹಾಗೂ ಸ್ವಯಂ ಐಸೊಲೇಟ್ ಆಗಿ ಎಂದು ಮನವಿ ಮಾಡಿಕೊಂಡಿದ್ದಾರೆ.

  • ನನ್ನ ಬಟ್ಟೆಗಳನ್ನ ನಾನೇ ತೊಳೆದುಕೊಳ್ತಿದ್ದೀನಿ: ಸಿಎಂ ಶಿವರಾಜ್ ಸಿಂಗ್ ಚೌಹಾಣ್

    ನನ್ನ ಬಟ್ಟೆಗಳನ್ನ ನಾನೇ ತೊಳೆದುಕೊಳ್ತಿದ್ದೀನಿ: ಸಿಎಂ ಶಿವರಾಜ್ ಸಿಂಗ್ ಚೌಹಾಣ್

    ಭೋಪಾಲ್: ಕೊರೊನಾ ಸೋಂಕಿಗೆ ಒಳಗಾಗಿರುವ ಮಧ್ಯಪ್ರದೇಶದ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಭೋಪಾಲ್ ನಗರದ ಚಿರಾಯು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಆಸ್ಪತ್ರೆಯಿಂದಲೇ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂಪುಟ ಸಭೆ ನಡೆಸಿದರು. ಸಭೆಯಲ್ಲಿ ನನ್ನ ಬಟ್ಟೆಗಳನ್ನು ನಾನೇ ತೊಳೆದುಕೊಳ್ಳುತ್ತಿದ್ದೇನೆ ಎಂದು ಹೇಳಿದರು.

    ಸಂಪುಟ ಸಭೆಯಲ್ಲಿ ಮಾತನಾಡುತ್ತಾ, ಬಟ್ಟೆಗಳನ್ನು ತೊಳೆದುಕೊಳ್ಳುತ್ತಿರೋದರಿಂದ ನನಗೆ ತುಂಬಾ ಲಾಭವಾಗಿದೆ. ಫಿಜಿಯೋಥೆರಫಿ ಸೆಶನ್ ಬಳಿಕ ನನೆಗ ಅಂಗೈಯನ್ನು ಮುಟ್ಟಿ ಮಾಡಲು ಬರುತ್ತಿರಲಿಲ್ಲ. ಸದ್ಯ ಕೈಯನ್ನು ಮಡಚಲು ಬರುತ್ತಿದೆ ಎಂದರು.

    ಕೊರೊನಾ ಸೋಂಕು ತಗುಲಿದ್ರೂ ಶಿವರಾಜ್ ಸಿಂಗ್ ಚೌಹಾಣ್ ಆಸ್ಪತ್ರೆಯಿಂದಲೇ ಸರ್ಕಾರದ ಕೆಲಸಗಳನ್ನು ನಿರ್ವಹಿಸುತ್ತಿದ್ದಾರೆ. ವರ್ಚೂವಲ್ ಸಭೆಗಳ ಮೂಲಕ ನಿರಂತರವಾಗಿ ಸಭೆಗಳನ್ನು ನಡೆಸುತ್ತಿದ್ದಾರೆ. ಮುಖ್ಯಮಂತ್ರಿಗಳ ಎರಡನೇ ಕೊರೊನಾ ವರದಿಯೂ ಸಹ ಪಾಸಿಟಿವ್ ಬಂದಿದೆ.

  • ಸಿಎಂ ಶಿವರಾಜ್ ಸಿಂಗ್ ಚೌಹಾನ್‍ಗೆ ಕೊರೊನಾ ಸೋಂಕು

    ಸಿಎಂ ಶಿವರಾಜ್ ಸಿಂಗ್ ಚೌಹಾನ್‍ಗೆ ಕೊರೊನಾ ಸೋಂಕು

    ಭೋಪಾಲ್: ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಭೂಪಾಲ್ ನಲ್ಲಿರುವ ಚಿರಾಯು ಆಸ್ಪತ್ರೆಗೆ ದಾಖಲಾಗಿದ್ದಾರೆ.

    ಕೊರೊನಾ ಸೋಂಕು ತಗುಲಿರುವ ಬಗ್ಗೆ ಸ್ವತಃ ಶಿವರಾಜ್ ಸಿಂಗ್ ಚೌಹಾಣ್ ಟ್ವಿಟರ್ ನಲ್ಲಿ ದೃಢಪಡಿಸಿದ್ದಾರೆ. ಕೊರೊನಾ ಲಕ್ಷಣಗಳು ಕಂಡು ಬಂದಿತ್ತು ಬಳಿಕ ಕೊರೊನಾ ಪರೀಕ್ಷೆ ಮಾಡಿಸಿದ್ದೆ ಆಗ ನನಗೆ ಕೊರೊನಾ ಪಾಸಿಟಿವ್ ಬಂದಿದೆ. ಆರೋಗ್ಯ ಇಲಾಖೆ ಮಾರ್ಗಸೂಚಿಗಳನ್ನು ಪಾಲಿಸುತ್ತಿರುವುದಾಗಿ ಅವರು ಹೇಳಿದ್ದಾರೆ.

    ತಮ್ಮೊಂದಿಗೆ ಕಳೆದ ಹತ್ತು ದಿನಗಳು ಸಂಪರ್ಕಕ್ಕೆ ಬಂದವರು ಟೆಸ್ಟ್ ಮಾಡಿಸಿ, ಕ್ವಾರಂಟೈನ್ ಆಗಿ ಎಂದು ಆಪ್ತರಿಗೆ ಶಿವರಾಜ್ ಸಿಂಗ್ ಮನವಿ ಮಾಡಿದ್ದಾರೆ. ಶಿವರಾಜ್ ಸಿಂಗ್ ಅನುಪಸ್ಥಿತಿಯಲ್ಲಿ ಹಲವು ಜವಬ್ದಾರಿಗಳನ್ನು ಗೃಹ ಸಚಿವ ನರೋತ್ತಮ್ ಮಿಶ್ರಾ, ನಗರಾಭಿವೃದ್ಧಿ ಸಚಿವ ಭೂಪೇಂದ್ರ ಸಿಂಗ್, ವೈದ್ಯಕೀಯ ಶಿಕ್ಷಣ ಸಚಿವ ವಿಶ್ವಸ್ ಸಾರಂಗ್ ಮತ್ತು ಆರೋಗ್ಯ ಸಚಿವ ಪ್ರಭುರಾ ಚೌಧರಿ ನಿರ್ವಹಿಸಲಿದ್ದಾರೆ.

  • ಮೇಲುಕೋಟೆಯಲ್ಲಿ ಪೂಜೆ ಸಲ್ಲಿಸಿ ಹರಕೆ ತೀರಿಸಿದ ಶಿವರಾಜ್ ಸಿಂಗ್ ಚೌಹಾಣ್

    ಮೇಲುಕೋಟೆಯಲ್ಲಿ ಪೂಜೆ ಸಲ್ಲಿಸಿ ಹರಕೆ ತೀರಿಸಿದ ಶಿವರಾಜ್ ಸಿಂಗ್ ಚೌಹಾಣ್

    ಮಂಡ್ಯ: ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಇಂದು ಮಂಡ್ಯ ಜಿಲ್ಲೆಯ ಮೇಲುಕೋಟೆಗೆ ಬಂದು ಉಗ್ರನರಸಿಂಹ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.

    ಇಂದು ಮೇಲುಕೋಟೆಯ ಜೀಯರ್ ಮಠಕ್ಕೆ ಕುಟುಂಬ ಸಮೇತ ಭೇಟಿ ಕೊಟ್ಟ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಮಠದ ಸ್ವಾಮೀಜಿಯವರ ನೇತೃತ್ವದಲ್ಲಿ ಪೂರ್ಣಕುಂಭ ಸ್ವಾಗತ ಮಾಡಲಾಯ್ತು. ಇದೇ ವೇಳೆ ಶಾಲು, ಮೈಸೂರು ಪೇಟೆ, ಏಲಕ್ಕಿ ಹಾರ ಹಾಕಿ ರಾಜ್ಯ ಸರ್ಕಾರ ಪರವಾಗಿ ಸಚಿವ ನಾರಾಯಣಗೌಡ ಸ್ವಾಗತ ಕೋರಿದರು. ರಾಜ್ಯ ಪೊಲೀಸರು ಅವರಿಗೆ ಗೌರವ ಸಮರ್ಪಣೆ ಮಾಡಿ ಬರಮಾಡಿಕೊಂಡರು.

    ಈ ವೇಳೆ ಮಠದಲ್ಲಿ ಕೆಲ ಕಾಲ ಸಮಯ ಕಳೆದ ಶಿವರಾಜ್ ಸಿಂಗ್ ಚೌಹಾಣ್ ಮತ್ತು ಅವರ ಕುಟುಂಬ ಮಠದಲ್ಲೇ ಪೂಜೆ ಹಾಗೂ ಪ್ರಸಾದ ಸೇವನೆ ಮಾಡಿದರು. ಬಳಿಕ ಮೇಲುಕೋಟೆ ಚೆಲುವನಾರಾಯಣನ ದರ್ಶನ ಪಡೆದುಕೊಂಡರು. ನಂತರ ಬೆಟ್ಟ ಹತ್ತಿ, ಬಳಿಕ ಬೆಟ್ಟದ ಮೇಲಿನ ಉಗ್ರನರಸಿಂಹ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು. ಶಿವರಾಜ್ ಸಿಂಗ್ ಚೌಹಾಣ್‍ಗೆ ಸಚಿವ ನಾರಾಯಣಗೌಡ ಸಾಥ್ ನೀಡಿದರು.

    ಇದಾದ ನಂತರ ಮಾತನಾಡಿದ ಚೌಹಾಣ್, ಮಧ್ಯಪ್ರದೇಶದ ವಿಕಾಸದ ಜೊತೆಗೆ ಪ್ರೀತಿಯ ಜನತೆಯ ಕಲ್ಯಾಣಕ್ಕೆ ಮೇಲುಕೋಟೆಯಲ್ಲಿ ಪೂಜೆ ಸಲ್ಲಿಸಿದ್ದೇನೆ. ಇಲ್ಲಿನ ರಾಮಾನುಜಾಚಾರ್ಯರು ಸಾವಿರಾರು ವರ್ಷಗಳ ಹಿಂದೆ ಏಕತೆಯ ಸಂದೇಶ ಸಾರಿದ್ದಾರೆ. ಅವರು ಎಲ್ಲರೂ ಒಂದೇ ಎಂದು ಹೇಳಿದ್ದಾರೆ. ಆ ಸಂದೇಶದಂತೆ ನಾವೆಲ್ಲರೂ ಭಾರತದಲ್ಲಿ ಇರಬೇಕಿದೆ. ನಾವೆಲ್ಲರೂ ಒಂದೇ ಎನ್ನುವಂತೆ ದೇಶದಲ್ಲಿ ಜಾತಿ ಬೇಧ ಬಿಟ್ಟು ಬಾಳಬೇಕಿದೆ. ಈ ಮೂಲಕ ಏಕತೆಯಿಂದ ದೇಶವನ್ನು ಮುನ್ನೆಡೆಸಬೇಕಿದೆ ಎಂದು ಹೇಳಿದರು.

    ಜೊತೆಗೆ ನಮ್ಮ ದೇಶ ಇಂದು ಕೊರೊನಾ ಸಂಕಷ್ಟದಲ್ಲಿದೆ. ಒಂದು ಕಡೆ ಕೊರೊನಾ ಇದ್ದರೆ, ಮತ್ತೊಂದು ಕಡೆ ಗಡಿಯಲ್ಲಿ ಯುದ್ಧದ ಆಹ್ವಾನ ಇದೆ. ನಮ್ಮ ಪ್ರಧಾನಿ ನೇತೃತ್ವದಲ್ಲಿ ಕೊರೊನಾ ವಿರುದ್ಧ ಯಶಸ್ವಿಯಾಗಿ ಹೋರಾಡುತ್ತಿದ್ದೇವೆ. ಜೊತೆಗೆ ಸೇನೆ ನಮ್ಮ ಗಡಿಯನ್ನು ಕೂಡ ರಕ್ಷಣೆ ಮಾಡುತ್ತಿದೆ. ನಮ್ಮ ಪ್ರಧಾನಿಮಂತ್ರಿ ಓರ್ವ ಅದ್ಭುತ ನಾಯಕರು. ಹೀಗಿದ್ದರೂ ನಮ್ಮಂತಹ ಕಾರ್ಯಕರ್ತರ ಕರ್ತವ್ಯ ಇದ್ದೆ ಇದೆ. ನಮ್ಮ ನಮ್ಮ ರಾಜ್ಯಗಳಲ್ಲಿ ಒಳ್ಳೆಯ ಕೆಲಸ ಮಾಡಿ ಕೊರೊನಾ ಮುಕ್ತಿಗೆ ಪ್ರಯತ್ನಿಸಬೇಕಿದೆ ಎಂದು ತಿಳಿಸಿದರು.