ಇಂದು ಕರ್ನಾಟಕ ರತ್ನ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ (Puneeth Rajkumar) ಅವರ 4ನೇ ವರ್ಷದ ಪುಣ್ಯಸ್ಮರಣೆ. 4ನೇ ವರ್ಷದ ಪುಣ್ಯಸ್ಮರಣೆಗೆ ಇಡೀ ಅಪ್ಪು ಅಭಿಮಾನಿ ಬಳಗ ರಾಜ್ಯದ ಮೂಲೆ ಮೂಲೆಗಳಿಂದ ಬಂದಿದೆ. ದೊಡ್ಮನೆ ಕುಟುಂಬಸ್ಥರು ಆಗಮಿಸಿ ಪೂಜೆ ನೆರವೇರಿಸಿದ್ದಾರೆ. ಬಳಿಕ ಅಪ್ಪು ನೆನೆದು ಶಿವರಾಜ್ ಕುಮಾರ್ (Shivarjkumar) ಮಾತಾನಾಡಿದ್ದಾರೆ.
ಅಪ್ಪು 100% ತಂದೆಗೆ ತಕ್ಕ ಮಗ. ಅವನು ಇಲ್ಲ ಅಂತ ಅಂದುಕೊಂಡಿದ್ದರೆ ಕಷ್ಟ ಆಗುತ್ತದೆ. ಅವನ ನೆನಪಲ್ಲಿ ಬಾಳಬೇಕು. ನಮ್ಮಲ್ಲಿ ಅವನನ್ನು ತೋರಿಸಲು ಪ್ರಯತ್ನ ಪಡುತ್ತಿದ್ದೇವೆ. ಯಾವಾಗಲೂ ಅವನ ಮೇಲೆ ಪ್ರೀತಿ ಇರುತ್ತದೆ. ಎಲ್ಲರೂ ಅವನನ್ನ ಇಷ್ಟ ಪಡುತ್ತಾರೆ. ನಮಗೆಲ್ಲ ಅಪ್ಪಾಜಿ ಹಾಗೂ ಅಪ್ಪು ಬಗ್ಗೆ ಮಾತನಾಡದೇ ಇರುವ ದಿನವೇ ಇಲ್ಲ. ಅವನು ಎಲ್ಲೂ ಎಲ್ಲೂ ಹೋಗಿಲ್ಲ, ಇಲ್ಲೇ ಇದ್ದಾನೆ ಅಂತ ಅನ್ಕೊಂಡು ಮಾತಾಡ್ತೀನಿ ಎಂದು ನುಡಿದಿದ್ದಾರೆ ಶಿವಣ್ಣ. ಇದನ್ನೂ ಓದಿ: ಪುನೀತ್ ಪುಣ್ಯಸ್ಮರಣೆ – ಅಪ್ಪು ಸಮಾಧಿಗೆ ಪೂಜೆ ಸಲ್ಲಿಸಿದ ದೊಡ್ಮನೆ ಕುಟುಂಬ
ಯಾರಿಗೂ ಗೊತ್ತಾಗದ ಹಾಗೆ ಸಹಾಯ ಮಾಡಬೇಕು. ಇನ್ನು ಒಂದೇ ಸಿನಿಮಾದಲ್ಲಿ ಬ್ರದರ್ಸ್ ಆಗಿ ಸಿನಿಮಾ ಮಾಡುವ ಬಗ್ಗೆ ಆಸೆ ಇತ್ತು. ಆದರೆ ಅದಕ್ಕೆ ಸಮಯ ಕೂಡಿ ಬರಲಿಲ್ಲ ಎಂದರು.
AI ಮೂಲಕ ಶಿವಣ್ಣ ಅಪ್ಪು ಸಿನಿಮಾ ಮಾಡಬಹುದಾ ಎನ್ನುವ ಪ್ರಶ್ನೆಗೆ ಉತ್ತರಿಸಿದ ಶಿವರಾಜ್ ಕುಮಾರ್, ಎಐಯಿಂದ ಸಿನಿಮಾ ಮಾಡುವುದಾದರೆ ಅಚ್ಚುಕಟ್ಟಾಗಿ ಬರಬೇಕು. ಅದು ಆರ್ಟಿಫಿಷಿಯಲ್ ಅನ್ನಿಸಬಾರದು. ಹಾಗಿದ್ದಾಗ ಸಿನಿಮಾ ಮಾಡಬಹುದು ಎಂದು ಹೇಳಿದರು.
ನಟ ಶಿವರಾಜ್‌ಕುಮಾರ್ (Shivarajkumar) ಹಾಗೂ ಸಿಂಪಲ್ ಸುನಿ (Simple Suni) ನಿರ್ದೇಶನದ `ಮನಮೋಹಕ’ ಸಿನಿಮಾ (Manamohaka Cinema) ಸುಮಾರು 10 ವರ್ಷಗಳ ಹಿಂದೆ ಸೆಟ್ಟೇರಬೇಕಿತ್ತು. ಆ ಸಿನಿಮಾಗಾಗಿ ಫೋಟೋ ಶೂಟ್ ಕೂಡಾ ಮಾಡಲಾಗಿತ್ತು. ನವಿರಾದ ಪ್ರೇಮಕಥೆಯುಳ್ಳ ಮನಮೋಹಕ ಸಿನಿಮಾದ ಕಥೆ ಕೇಳಿ ಶಿವಣ್ಣ ತುಂಬಾನೇ ಖುಷಿಯಿಂದ ಒಪ್ಪಿಕೊಂಡಿದ್ದರು. ಆದ್ರೆ ಆ ಸಿನಿಮಾ ಕಾರಣಾಂತರಗಳಿಂದ ನಿಂತು ಹೋಯ್ತು.
ಮನಮೋಹಕ ಸಿನಿಮಾದ ವಿಶೇಷ ಪಾತ್ರದಲ್ಲಿ ಮಾಜಿ ವಿಶ್ವಸುಂದರಿ, ಬಾಲಿವುಡ್ ನಟಿ ಐಶ್ವರ್ಯ ರೈ ಅವರನ್ನ ಕರೆತರಲು ಕೂಡಾ ಪ್ಲ್ಯಾನ್ ಮಾಡಲಾಗಿತ್ತಂತೆ. ಸುಮಾರು 10 ವರ್ಷಗಳಾದರೂ ಆ ಸಿನಿಮಾದ ಇಂಚಿಂಚೂ ಘಟನೆಗಳನ್ನ, ನೆನಪುಗಳನ್ನ ಇತ್ತೀಚೆಗೆ ನಿರ್ದೇಶಕ ಸಿಂಪಲ್ ಸುನಿ ಶಿವರಾಜ್‌ಕುಮಾರ್ ಮುಂದೆ ಹಂಚಿಕೊಂಡಿದ್ದಾರೆ. ಸಿಂಪಲ್ ಸುನಿ ನಿರ್ದೇಶನದ `ಗತವೈಭವ’ ಸಿನಿಮಾದ ಹಾಡೊಂದರ ರಿಲೀಸ್ ಇವೆಂಟ್‌ನಲ್ಲಿ ಈ ಬಗ್ಗೆ ನಿರ್ದೇಶಕ ಸುನಿ ಮಾತ್ನಾಡಿದ್ದಾರೆ.
ಮನಮೋಹಕ ಸಿನಿಮಾದ ಬಗ್ಗೆ ನಿರ್ದೇಶಕ ಸುನಿ ಮಾತಾಡೋಕು ಕಾರಣ ಇದೆ. ಸುನಿ ನಿರ್ದೇಶನದ `ಗತವೈಭವ’ ಚಿತ್ರದ ಹಾಡು ರಿಲೀಸ್ ಕಾರ್ಯಕ್ರಮಕ್ಕೆ ಅತಿಥಿಯಾಗಿ ಬಂದಿದ್ದ ಶಿವಣ್ಣನ ಮುಂದೆ ಹಳೆ ನೆನಪು ಬಿಚ್ಚಿಟ್ಟಿದ್ದಾರೆ. ಬಳಿಕ ಮಾತಾಡಿದ ಶಿವಣ್ಣ `ಮನಮೋಹಕ’ ಸಿನಿಮಾ ಖಂಡಿತಾ ಆಗುತ್ತೆ. ಟೈಂ ಕೂಡಿ ಬರಬೇಕು. ಸುನಿ ಜೊತೆ ಸಿನಿಮಾ ಮಾಡುವ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಮುಂದಿನ ದಿನಗಳಲ್ಲಿ ಸಿಂಪಲ್ ಸುನಿಗೆ ಶಿವಣ್ಣ ಅವಕಾಶ ಮಾಡಿಕೊಟ್ಟರೆ ಇಬ್ಬರ ಕಾಂಬಿನೇಷನ್‌ನಲ್ಲಿ ಸಿನಿಮಾ ಬರೋ ನಿರೀಕ್ಷೆಗಳು ಹೆಚ್ಚಾಗಿವೆ.
ನಾವು ಯಾವಾಗಲೂ ಬ್ರ್ಯಾಂಡ್ ಹಿಂದೆ ಹೋಗಬಾರದು. ನಾವೇ ಒಂದು ಬ್ರ್ಯಾಂಡ್ ಎಂದು ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ (Shivarajkumar) ಖಡಕ್ ಆಗಿ ನುಡಿದಿದ್ದಾರೆ.
ಶಿವರಾಜ್‌ಕುಮಾರ್ ಇತ್ತೀಚೆಗೆ `ಗತವೈಭವ’ (Gatha Vaibhava) ಸಿನಿಮಾದ ಹಾಡು ರಿಲೀಸ್ ಇವೆಂಟ್‌ಗೆ ಆಗಮಿಸಿದ್ದರು. ಈ ವೇಳೆ ಸಾಕಷ್ಟು ವಿಚಾರಗಳ ಬಗ್ಗೆ ಮಾತಾಡಿದ್ದಾರೆ. ಸಿಂಪಲ್ ಸುನಿ ಹಾಗೂ ಅವರ ಕಾಂಬಿನೇಷನ್‌ನ ಸಿನಿಮಾ ನಿಲ್ಲಲು ಕಾರಣವೇನು ಎಂದು ಹೇಳಿದ್ದಾರೆ. ಇದೇ ವೇಳೆ ಮಾತನಾಡಿದ ಅವರು ನಾವು ಯಾವಾಗಲೂ ಬ್ರ್ಯಾಂಡ್ ಹಿಂದೆ ಹೋಗ್ಬಾರ್ದು, ನಾವೇ ಒಂದು ಬ್ರ್ಯಾಂಡ್ ಎಂದಿದ್ದಾರೆ. ಇದನ್ನೂ ಓದಿ: ಉರಿಯುತ್ತಿದ್ದ ಬಸ್‌ನೊಳಗೆ ಪ್ರಯಾಣಿಕರು ಅದೆಷ್ಟು ನೋವು ಅನುಭವಿಸಿರಬೇಕು: ಕರ್ನೂಲ್ ದುರಂತಕ್ಕೆ ರಶ್ಮಿಕಾ ಕಂಬನಿ
ನನಗೆ ಬಂದಿರೋ ಭಾಗ್ಯ ಅಂದ್ರೆ ಹೊಸ ಹೊಸ ಡೈರೆಕ್ಟರ್ ಬರ್ತಾರೆ. ಹೊಸ ಹೊಸ ಕಥೆಗಳನ್ನ ಹೇಳ್ತಾರೆ. ಹೊಸಬರು ಬಂದು ಸಿನಿಮಾ ಮಾಡ್ಬೇಕು ಅಂತಾರೆ ಅದೇನು ಆಗುತ್ತೋ, ಬಿಡುತ್ತೋ ಗೊತ್ತಿಲ್ಲ. ಹೊಸಬರ ಮೇಲೆ ನಂಬಿಕೆ ಇಡ್ಬೇಕು. ನಾವು ಬ್ರ್ಯಾಂಡ್ ಹಿಂದೆ ಹೋಗೋದು ಬಿಡ್ಬೇಕು. ನಾವೇ ಒಂದು ಬ್ರ್ಯಾಂಡ್. ನಾವ್ಯಾಕೆ ಬ್ರ್ಯಾಂಡ್ ಹಿಂದೆ ಹೋಗ್ಬೇಕು? ಬ್ರ್ಯಾಂಡ್ ಅದಾಗೇ ಆಗುತ್ತೆ. ನಂಬಿಕೆ ಇಡಬೇಕು ಎಂದಿದ್ದಾರೆ ಶಿವಣ್ಣ.
ಸಿಂಪಲ್ ಸುನಿ (Simple Suni) ನಿರ್ದೇಶನದ `ಗತವೈಭವ’ ಸಿನಿಮಾದ ಸಾಂಗ್ ಲಾಂಚ್ ಇವೆಂಟ್‌ಗೆ ಅತಿಥಿಯಾಗಿ ಶಿವಣ್ಣ ಬಂದಿದ್ದರು. ಸಿಂಪಲ್ ಸುನಿ ಹಾಗೂ ಶಿವರಾಜ್‌ಕುಮಾರ್ ಕಾಂಬಿನೇಷನ್‌ನ ಮನಮೋಹಕ ಸಿನಿಮಾ ಸೆಟ್ಟೇರದಿರಲು ಕಾರಣವನ್ನ ಬಿಚ್ಚಿಟ್ಟಿದ್ದಾರೆ.
ನಟ ಶಿವರಾಜ್ ಕುಮಾರ್ (Shivaraj Kumar) ಹೊಸ ಸಿನಿಮಾ ದೀಪಾವಳಿ (Deepavali) ಹಬ್ಬದ ವಿಶೇಷವಾಗಿ ಘೋಷಣೆಯಾಗಿದೆ. ರಾಜಕಾರಣಿಯಾಗಿ ಶಿವಣ್ಣ ಪ್ರತ್ಯಕ್ಷರಾಗಿದ್ದಾರೆ. ಆಂಧ್ರ ಮೂಲದ ಯೆಲ್ಲಾಂಡು ರಾಜಕಾರಣಿ ಗುಮ್ಮಡಿ ನರಸಯ್ಯ (Gummadi Narsaiah) ಜೀವನಗಾಥೆಯಲ್ಲಿ ಕರುನಾಡ ಕಿಂಗ್ ಮಿಂಚಲಿದ್ದಾರೆ.
ಈಗಾಗಲೇ ತೆಲುಗಿನಲ್ಲಿ ಚಿರು ಗೋಡವಾಲು, ಲಾವಣ್ಯ ವಿತ್ ಲವ್ ಬಾಯ್ಸ್ ಮುಂತಾದ ಸಿನಿಮಾಗಳಲ್ಲಿ ನಟಿಸಿರುವ ಪರಮೇಶ್ವರ್ ಹಿವ್ರಲೆ ಗುಮ್ಮಡಿ ನರಸಯ್ಯ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಇದು ಅವರ ಚೊಚ್ಚಲ ನಿರ್ದೇಶನದ ಚಿತ್ರ. ಹಾಗಾಗಿ ಸಾಕಷ್ಟು ತಯಾರಿ ಮಾಡಿಕೊಂಡು ಕನ್ನಡದಲ್ಲಿ ಸಿನಿಮಾ ಮಾಡುತ್ತಿದ್ದಾರೆ. ಇದನ್ನೂ ಓದಿ: ವಿಜಯ್ ದೇವರಕೊಂಡ ಮನೆಯಲ್ಲಿ ದೀಪಾವಳಿ ಆಚರಿಸಿದ ರಶ್ಮಿಕಾ – ಸಿಕ್ಕಿಬಿದ್ದದ್ದು ಹೇಗೆ?
ದೀಪಾವಳಿ ಹಬ್ಬಕ್ಕಾಗಿ ಈ ಸಿನಿಮಾದ ಫಸ್ಟ್ ಲುಕ್ ರಿಲೀಸ್ ಆಗಿದ್ದು ಸೈಕಲ್ ತಳ್ಳುತ್ತಾ, ಹೆಗಲಿಗೆ ಕೆಂಪು ಶಾಲು ಹಾಕಿಕೊಂಡು, ಕನ್ನಡಕ ಹಾಕಿಕೊಂಡ ಸರ್ಕಾರಿ ಕಚೇರಿ ಮುಂದೆ ಶಿವಣ್ಣ ಕಾಣಿಸಿಕೊಂಡಿದ್ದಾರೆ. ಶಿವರಾಜ್ ಕುಮಾರ್ ಲುಕ್ ಗೆ ಅವರ ಅಭಿಮಾನಿಗಳು ಫಿದಾ ಆಗಿದ್ದಾರೆ. ಈ ಚಿತ್ರಕ್ಕೆ ಎನ್.ಸುರೇಶ್ ರೆಡ್ಡಿ ಚಿತ್ರಕ್ಕೆ ಬಂಡವಾಳ ಹಾಕಿದ್ದಾರೆ.
ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ ನ್ಯೂ ಡಿಮಾಕ್ರಸಿ ಅಥವಾ ಸಿಪಿಐನ ಸದಸ್ಯರಾಗಿರುವ ಗುಮ್ಮಡಿ ನರಸಯ್ಯ 1983-1994 ಹಾಗೂ 1999-2009 ನಡುವೆ ಯೆಲ್ಲಾಂಡುವಿನ ತೆಲಂಗಾಣ ವಿಧಾನಸಭೆಯ ಸದಸ್ಯರಾಗಿದ್ದರು. ಸ್ವತಂತ್ರ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದರು. ಅವರ ಹೋರಾಟದ ಬದುಕೇ ಒಂದು ಸ್ಪೂರ್ತಿ ಆಗಿತ್ತು. ಈಗ ಅದೇ ಸಿನಿಮಾವಾಗುತ್ತಿದೆ. ಅಂದ ಹಾಗೆ ಈ ಸಿನಿಮಾ ಕನ್ನಡ, ತೆಲುಗು ಸೇರಿದಂತೆ ಎಲ್ಲಾ ಭಾಷೆಯಲ್ಲಿ ಸಿನಿಮಾ ತೆರೆ ಕಾಣಲಿದೆ. ಐದು ಬಾರಿ ಶಾಸಕರಾಗಿದ್ದರೂ ಇವರು ಸೈಕಲ್ ನಲ್ಲಿಯೇ ಓಡಾಟ, ರಸ್ತೆ ಬದಿಯಲ್ಲಿ ಊಟ, ಹಳೆ ಮನೆಯಲ್ಲಿಯೇ ವಾಸ ಮಾಡುತ್ತಿದ್ದರು.
ಕರುನಾಡ ಚಕ್ರವರ್ತಿ ಶಿವರಾಜ್‌ಕುಮಾರ್ ಅವರು ನಾಯಕರಾಗಿ ನಟಿಸುತ್ತಿರುವ ಬಹುನಿರೀಕ್ಷಿತ ಡ್ಯಾಡ್ (Dad) ಚಿತ್ರತಂಡದಿಂದ ದೀಪಾವಳಿ ಶುಭ ಸಂದರ್ಭದಲ್ಲಿ ವಿಶೇಷ ಪೋಸ್ಟರ್ ಬಿಡುಗಡೆಯಾಗಿದೆ. ಆ ಮೂಲಕ ಡ್ಯಾಡ್ ಚಿತ್ರತಂಡ ನಾಡಿನ ಜನತೆಗೆ ದೀಪಾವಳಿ ಶುಭಾಶಯ ತಿಳಿಸಿದೆ. ಆರಂಭದಿಂದಲೂ ಸಾಕಷ್ಟು ಕುತೂಹಲ ಮೂಡಿಸಿರುವ ಈ ಚಿತ್ರಕ್ಕೆ ಈಗಾಗಲೇ ಎರಡು ಹಂತಗಳ ಚಿತ್ರೀಕರಣ ಮುಕ್ತಾಯವಾಗಿದೆ. ಮೈಸೂರು, ನಂದಿ ಬೆಟ್ಟದಲ್ಲಿ ಚಿತ್ರೀಕರಣ ನಡೆದಿದೆ.
ಹರೀಶ್ ಪೆದ್ದಿ ಅವರು ಮೈರಾ ಕ್ರಿಯೇಷನ್ಸ್ ಲಾಂಛನದಡಿ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ತೆಲುಗಿನ ಖ್ಯಾತ ನಿರ್ದೇಶಕ ಅನಿಲ್ ಕನ್ನೆಗಂಟಿ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ನಿರ್ಮಾಪಕರಿಗೆ ಹಾಗೂ, ನಿರ್ದೇಶಕರಿಗೆ ಇದು ಕನ್ನಡದಲ್ಲಿ ಮೊದಲ ಚಿತ್ರ. ಬಿ.ಎಸ್. ಸುಧೀಂದ್ರ ಕಾರ್ಯಕಾರಿ ನಿರ್ಮಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.ಇದನ್ನೂ ಓದಿ: ದಾಖಲೆ ಬರೆದ ಗಾಯಕಿ ಮಾನಸ ಹೊಳ್ಳ
ಶಿವರಾಜ್‌ಕುಮಾರ್ ಅವರು ಅನೇಕ ವರ್ಷಗಳ ನಂತರ ಈ ಚಿತ್ರದಲ್ಲಿ ವೈದ್ಯನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಶರ್ಮಿಳಾ ಮಾಂಡ್ರೆ, ಬೇಬಿ ನಕ್ಷತ್ರ, ಬಾಬು, ಮಲಯಾಳಂ ನಟ ಸೂರಜ್ ವೆಂಜರಮೂಡು ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ. ಕನ್ನಡ, ತೆಲುಗು ಮತ್ತು ಮಲಯಾಳಂನಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರಕ್ಕೆ ಅರ್ಜುನ್ ಜನ್ಯ ಅವರ ಸಂಗೀತ ನಿರ್ದೇಶನ ಹಾಗೂ ಬಿ.ರಾಜಶೇಖರ್ ಅವರ ಛಾಯಾಗ್ರಹಣವಿದೆ.
ಹಾಸನ: 10ನೇ ದಿನವೂ ಹಾಸನಾಂಬ ದೇವಿ (Hasanamba Temple) ಸಾರ್ವಜನಿಕ ದರ್ಶನಕ್ಕೆ ಭಕ್ತಸಾಗರವೇ ಹರಿದು ಬರುತ್ತಿದೆ. ನಟ ಶಿವರಾಜ್ ಕುಮಾರ್ (Shivarajkumar) ದಂಪತಿ ಕೂಡ ದೇವಿ ದರ್ಶನ ಪಡೆದಿದ್ದಾರೆ. ಇತ್ತ ಕಾಂತಾರ-1 ಸಕ್ಸಸ್ ಬೆನ್ನಲ್ಲೇ ರಿಷಬ್ ಶೆಟ್ಟಿ (Rishab Shetty) ದಂಪತಿ ಕೂಡ ವಿಶೇಷ ಪೂಜೆ ಸಲ್ಲಿಸಿ ದೇವಿ ದರ್ಶನ ಪಡೆದರು.
ಲೋಕಾಯುಕ್ತ ಬಿ.ಎಸ್.ಪಾಟೀಲ್, ಮಾಜಿ ಸಚಿವೆ ಉಮಾಶ್ರೀ, ದೇವೇಗೌಡರು ಪುತ್ರಿ ಅನಸೂಯ ಕೂಡ ದೇವಿ ದರ್ಶನ ಪಡೆದಿದ್ದಾರೆ. ಇಂದು ಭಾನುವಾರ ಆದರೂ ಧರ್ಮ ದರ್ಶನ ಸಾಲಿನಲ್ಲಿ ಭಕ್ತರ ಸಂಖ್ಯೆ ಇಳಿಕೆಯಾಗಿದೆ. 1 ಸಾವಿರ, 300 ರೂ ಟಿಕೆಟ್ ಸಾಲುಗಳು ಸಂಪೂರ್ಣ ಖಾಲಿಯಾಗಿವೆ. ಇದನ್ನೂ ಓದಿ: ಕಾಂಗ್ರೆಸ್‌ನಲ್ಲಿ ಯಾವ ಕ್ರಾಂತಿಯೂ ನಡೆಯೋದಿಲ್ಲ: ಹೆಚ್‌ಡಿಕೆ ಭವಿಷ್ಯ
ಕಳೆದ ಎರಡು ದಿನಗಳಿಂದ ಭಾರೀ ಭಕ್ತರ ಆಗಮನದಿಂದ ಹೆಚ್ಚಾಗಿದ್ದು, ದರ್ಶನಕ್ಕೆ ಬರಲು ಭಕ್ತರ ಹಿಂದೇಟು ಹಾಕಿದ್ದಾರೆ. ಜೊತೆಗೆ ವಿಶೇಷ ಬಸ್‌ಗಳ ಸಂಖ್ಯೆ ಕೂಡ ಕಡಿಮೆ ಮಾಡಿದ ಕಾರಣ ಭಕ್ತರ ಸಂಖ್ಯೆ ತಗ್ಗಿದೆ. ಹಾಸನಾಂಬ ದೇವಾಲಯದಲ್ಲಿಯೇ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಭೈರೇಗೌಡ ಮೊಕ್ಕಾಂ ಹೂಡಿದ್ದಾರೆ. ಇದನ್ನೂ ಓದಿ: ಶ್ರೀರಾಮನಗರಿಯಲ್ಲಿ ಝಗಮಗಿಸಿದ ದೀಪೋತ್ಸವ – 26 ಲಕ್ಷ ದೀಪಗಳಿಂದ ಕಂಗೊಳಿಸಿದ ಅಯೋಧ್ಯೆ
ಇನ್ನು ಡಿಸಿ ಲತಾ ಕುಮಾರಿಗೆ ಎಸ್ಪಿ ಮೊಹಮ್ಮದ್ ಸುಜೀತಾ ಪತ್ರ ಬರೆದು, ಭಕ್ತರನ್ನು ನಿಯಂತ್ರಿಸಲು ಕ್ರಮ ವಹಿಸದೇ ಇದ್ದಲ್ಲಿ ಅಹಿತಕರ ಘಟನೆ ಸಂಭವಿಸಿದರೆ ಪೊಲೀಸ್ ಇಲಾಖೆ ಜವಾಬ್ದಾರಿಯಲ್ಲ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: ಅತಿವೃಷ್ಟಿಯಿಂದ ಹಾನಿ – ಕರ್ನಾಟಕಕ್ಕೆ SDRFನಿಂದ 384 ಕೋಟಿ ರೂ. ಬಿಡುಗಡೆ
ಕನ್ನಡ ಕಿರುತೆರೆಯ ಮನರಂಜನಾ ವಾಹಿನಿ ಜೀ ಕನ್ನಡ ಸಂಬಂಧಗಳನ್ನು ಸಂಭ್ರಮಿಸುವ ಅತೀದೊಡ್ಡ ಹಬ್ಬ `ಜೀ ಕುಟುಂಬ ಅವಾರ್ಡ್ಸ್-2025′ ಕ್ಷಣಗಣನೆ ಶುರುವಾಗಿದೆ. ಕೋಟಿ ಕಣ್ಣುಗಳು ಕಾತುರತೆಯಿಂದ ಕಾಯುತ್ತಿದ್ದ ಎಂಟರ್ಟೈನ್ಮೆಂಟ್ ನ ಮಹಾಪರ್ವ ಇದೇ ತಿಂಗಳ 17, 18 ಮತ್ತು 19 ರಂದು ಜೀ ಕನ್ನಡ ವಾಹಿನಿಯಲ್ಲಿ ಸಂಜೆ 6:30 ರಿಂದ ಪ್ರಸಾರ ಆಗಲಿದೆ. ಇನ್ನು ಈ ಕಾರ್ಯಕ್ರಮವನ್ನು ಕರ್ನಾಟಕದ ಹೆಸರಾಂತ ನಿರೂಪಕ ಅಕುಲ್ ಬಾಲಾಜಿ ಮತ್ತು ನಿರೂಪಕಿ ಅನುಶ್ರೀ ಅವರು ನಡೆಸಿಕೊಡಲಿದ್ದಾರೆ.
ಈ ವರುಷದ ಜೀ ಕನ್ನಡ ಕುಟುಂಬ ಅವಾರ್ಡ್ಸ್ ನಲ್ಲಿ ಫೇವರಿಟ್ ನಟ, ಫೇವರಿಟ್ ನಟಿ, ಫೇವರಿಟ್ ಜೋಡಿ, ಫೇವರಿಟ್ ಸೀರಿಯಲ್, ಫೇವರಿಟ್ ರಿಯಾಲಿಟಿ ಶೋ ಮತ್ತು ಫೇವರಿಟ್ ನಿರೂಪಕ/ನಿರೂಪಕಿ ಅನ್ನುವ ಪ್ರಮುಖ 6 ಕೆಟಗರಿಗಳಿರಲಿವೆ. ಈ ಆರು ಪ್ರಮುಖ ವಿಭಾಗಗಳ ಜೊತೆಗೆ ಇನ್ನೂ ಅನೇಕ ವಿಭಾಗಗಳಲ್ಲಿ ವಿಜೇತರ ಘೋಷಣೆಯೂ ಇರಲಿದೆ. ಇನ್ನು ಈ ಬಾರಿಯ ಜೀ ಕನ್ನಡ ಕುಟುಂಬ ಅವಾರ್ಡ್ಸ್ ಅಮೋಘ ಕ್ಷಣಗಳಿಗೆ ಸಾಕ್ಷಿಯಾಗಿದ್ದು, ಕನ್ನಡ ಚಲನಚಿತ್ರ ತಾರೆಯರು ಹಾಗು ಕಿರುತೆರೆ ಕಲಾವಿದರು ಜೊತೆಯಾಗಿ ಸೇರಿ ಸಂಭ್ರಮಿಸಿದ್ದು ಇದರ ಮತ್ತೊಂದು ಆಕರ್ಷಣೆ. ನೆಚ್ಚಿನ ತಾರೆಯರು ಅವರ ಅವಿಸ್ಮರಣೀಯ ಸುಂದರ ಮತ್ತು ನೋವಿನ ಕ್ಷಣಗಳನ್ನು ಮೆಲುಕು ಹಾಕುತ್ತಾ ವೀಕ್ಷಕರಿಗೆ ಇನ್ನಷ್ಟು ಹತ್ತಿರವಾಗುವದರಲ್ಲಿ ಎರಡು ಮಾತಿಲ್ಲ.
ಈ ಕಾರ್ಯಕ್ರಮದಲ್ಲಿ ಚಂದನವನದ ಡಿವೈನ್ ಸ್ಟಾರ್ ಮತ್ತು ನಿರ್ದೇಶಕ ರಿಷಬ್ ಶೆಟ್ಟಿ, ನಟಿ ರುಕ್ಮಿಣಿ ವಸಂತ್ ಮತ್ತು ಮೈಸೂರಿನ ಮಹಾರಾಜ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಉಪಸ್ಥಿತರಿದ್ದದ್ದು ಈ ಕಾರ್ಯಕ್ರಮದ ಮೆರುಗನ್ನು ಹೆಚ್ಚಿಸಿತು. ಜೀ ಕನ್ನಡ ಅವಾರ್ಡ್ ನಲ್ಲಿ ವಿಶೇಷವಾಗಿ “ವೀಕೆಂಡ್ ವಿತ್ ರಮೇಶ್ ಮಿನಿಯೇಚರ್” ಕೂಡ ಇರಲಿದ್ದು, ರಿಷಬ್ ಶೆಟ್ಟಿ ಮತ್ತು ಹಿರಿಯ ನಟ ರಮೇಶ್ ಅವರ ಮಾತುಕತೆ ಈ ಕಾರ್ಯಕ್ರಮದ ಮತ್ತೊಂದು ಹೈಲೈಟ್ ಆಗಿತ್ತು.
ಈ ಕುರಿತು ಮಾತನಾಡಿದ ಜೀ ಕನ್ನಡ ಮತ್ತು ಕನ್ನಡ ಜೀ 5 ನ ಬಿಸಿನೆಸ್ ಹೆಡ್ ದೀಪಕ್ ಶ್ರೀರಾಮುಲು ಅವರು “ಕನ್ನಡ ಟೆಲಿವಿಷನ್ ಕುಟುಂಬದ ಪ್ರತಿಭೆ, ಸೃಜನಶೀಲತೆ ಮತ್ತು ಅದ್ಭುತ ಆತ್ಮಸ್ಫೂರ್ತಿಯ ಆಚರಣೆಯೇ ಕುಟುಂಬ ಅವಾರ್ಡ್ಸ್. ಇನ್ನು ವಾಹಿನಿಯು 20 ವರುಷ ಪೂರೈಸಿದ ಈ ಶುಭ ಸಂದರ್ಭದಲ್ಲಿ ವೀಕ್ಷಕರಿಗೆ ಇನ್ನಷ್ಟು ಮನರಂಜನೆ ಕೊಡೋದು ನಮ್ಮ ಮುಖ್ಯ ಗುರಿ ಆಗಿತ್ತು. ಅದಕ್ಕೆ ಬದ್ಧವಾಗಿ ನಾವು ಈ ವರುಷ ‘ನಾ ನಿನ್ನ ಬಿಡಲಾರೆ’, ‘ಕರ್ಣ’ ಮತ್ತು ‘ಶ್ರೀ ರಾಘವೇಂದ್ರ ಮಹಾತ್ಮೆ’ ಎಂಬ ಪ್ರಸಿದ್ಧ ಧಾರಾವಾಹಿಗಳ ಜೊತೆಗೆ ‘ನಾವು ನಮ್ಮವರು’ ಎಂಬ ವಿಭಿನ್ನ ರಿಯಾಲಿಟಿ ಶೋ ವನ್ನು ಜನರ ಮುಂದಿಟ್ಟಿದ್ದೇವೆ. ಇನ್ನು ನಮ್ಮ ವೀಕ್ಷಕರು ಈ ಎಲ್ಲಾ ಕಾರ್ಯಕ್ರಮಗಳನ್ನು ಮನಸಾರೆ ಮೆಚ್ಚಿದ್ದು ನಮ್ಮ ಹುರುಪನ್ನು ಮತ್ತಷ್ಟು ಹೆಚ್ಚಿಸಿದೆ. ಟೆಲಿವಿಷನ್ ಜೊತೆಗೆ OTT ಪ್ಲಾಟ್ಫಾರ್ಮ್ ಕನ್ನಡ ZEE5 “ನಮ್ಮ ಭಾಷೆ, ನಮ್ಮ ಕಥೆಗಳು” ಮೂಲಕ ಕನ್ನಡದ ಕಥೆಗಳಿಗೆ ಜೀವ ತುಂಬುವ ಕೆಲಸವನ್ನು ಮುಂದುವರೆಸಿದೆ. ಮತ್ತೊಂದೆಡೆ ಮೈಕ್ರೋ-ಸರಣಿ ಅಪ್ಲಿಕೇಶನ್ ಬುಲೆಟ್ ಇಂದಿನ ಪೀಳಿಗೆಗಳಿಗೆ ಕಥೆ ಹೇಳುವ ಕಲೆಗೆ ಹೊಸ ಅರ್ಥ ನೀಡುತ್ತಿದೆ. ಇನ್ನು ನಮಗೆ ವೀಕ್ಷಕರು ನೀಡುವ ಸಪೋರ್ಟ್ ಮತ್ತು ಪ್ರೀತಿ ಅಭೂತಪೂರ್ಣ” ಎಂದರು.
ಯಾರು ಯಾವ ಪ್ರಶಸ್ತಿಗೆ ಭಾಜನರಾದರು, ಯಾರು ಯಾವ ಹಾಡಿಗೆ ನೃತ್ಯ ಮಾಡಿದರು, ಯಾರು ಯಾವ ಉಡುಗೆಯಲ್ಲಿ ಮಿಂಚಿದರು ಹೀಗೆ ಮತ್ತಷ್ಟು ಇಂಟೆರೆಸ್ಟಿಂಗ್ ವಿಷಯಗಳನ್ನು ತಿಳಿದುಕೊಳ್ಳಲು ಮತ್ತು ನಗು, ತರ್ಲೆ, ಅಳು, ನೋವು, ನಲಿವು ಮತ್ತು ಇನ್ನಷ್ಟು ಭಾವನೆಗಳ ಸಮ್ಮಿಲನವನ್ನು ಕಣ್ತುಂಬಿಕೊಳ್ಳಲು ನೋಡಿ ಜೀ ಕನ್ನಡ ಕುಟುಂಬ ಅವಾರ್ಡ್ಸ್-2025.
– ಶಿವರಾಜ್‌ಕುಮಾರ್‌ಗೆ ಸೊಂಡಿಲೆತ್ತಿ ಸೆಲ್ಯೂಟ್ ಮಾಡಿದ ಧನಂಜಯ
ಮೈಸೂರು: ಗುರುವಾರ ನಡೆದ ಮೈಸೂರು ದಸರಾ (Mysuru Dasara) ಮೆರವಣಿಗೆಯಲ್ಲಿ ನಟ ಶಿವರಾಜ್ ಕುಮಾರ್ (Shivarajkumar) ತಮಟೆ ಸದ್ದಿಗೆ ಭರ್ಜರಿ ಸ್ಟೆಪ್ ಹಾಕಿದ್ದಾರೆ.
ದಸರಾ ಜಂಬೂ ಸವಾರಿ ಮೆರವಣಿಗೆ ವೀಕ್ಷಣೆ ಮಾಡಲು ಹೈ ಸರ್ಕಲ್ ಬಳಿಯಿರುವ ಖಾಸಗಿ ಹೋಟೆಲ್ ಮುಂಭಾಗ ಶಿವರಾಜ ಕುಮಾರ್ ಕುಟುಂಬ ಸಮೇತ ಕುಳಿತಿದ್ದರು. ಆಗ ಮೆರವಣಿಗೆಯಲ್ಲಿ ಸಾಗಿ ಬಂದ ತಮಟೆಯ ಟೀಂನ ಸದ್ದಿಗೆ ಖುಷಿಯಿಂದಲೇ ತಾವು ಕುಳಿತಿದ್ದ ಜಾಗದಲ್ಲೇ ಎದ್ದು ನಿಂತು ಸ್ಟೆಪ್ ಹಾಕಿದರು. ಇದನ್ನೂ ಓದಿ: ಚಿತ್ರಗಳಲ್ಲಿ ಮೈಸೂರು ಜಂಬೂಸವಾರಿ ನೋಡಿ
ಇದೇ ವೇಳೆ ಮೆರವಣಿಗೆಯಲ್ಲಿ ಸಾಗಿ ಬಂದ ಧನಂಜಯ ಆನೆ ಶಿವರಾಜ್ ಕುಮಾರ್‌ಗೆ ಸೆಲ್ಯೂಟ್ ಮಾಡಿತು.
ಮೈಸೂರು ದಸರಾ ಜಂಬೂ ಸವಾರಿಯು ಗುರುವಾರ ಅದ್ಧೂರಿಯಾಗಿ ನೆರವೇರಿದೆ. ಸತತ 6ನೇ ಬಾರಿಗೆ ಚಿನ್ನದಂಬಾರಿ ಹೊತ್ತು ಅಭಿಮನ್ಯು ಯಶಸ್ವಿಯಾಗಿ ಜಂಬೂಸವಾರಿ ನಡೆಸಿಕೊಟ್ಟಿದ್ದಾನೆ. ಲಕ್ಷಾಂತರ ಜನರು ವಿಶ್ವವಿಖ್ಯಾತ ದಸರಾವನ್ನು ಕಣ್ತುಂಬಿಕೊಂಡಿದ್ದಾರೆ. ಇದನ್ನೂ ಓದಿ: ಮೈಸೂರು ದಸರಾ ಜಂಬೂಸವಾರಿಗೆ ಚಾಲನೆ
ಕರುನಾಡ ಚಕ್ರವರ್ತಿ ಶಿವರಾಜ್‌ಕುಮಾರ್ (Shivarajkumar) ಅವರು ನಾಯಕರಾಗಿ ನಟಿಸುತ್ತಿರುವ ಹಾಗೂ ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ʼಡ್ಯಾಡ್ʼ ಚಿತ್ರ (Dad Cinema) ಇತ್ತೀಚೆಗಷ್ಟೇ ಮೈಸೂರಿನಲ್ಲಿ ಮೊದಲ ಹಂತದ ಚಿತ್ರೀಕರಣ ಮುಕ್ತಾಯವಾಗಿತ್ತು. ಈಗ ಎರಡನೇ ಹಂತದ ಚಿತ್ರೀಕರಣ ನಂದಿ ಬೆಟ್ಟದಲ್ಲಿ (Nandi Hills) ನಡೆಯತ್ತಿದೆ. ಶಿವರಾಜಕುಮಾರ್, ಬೇಬಿ ನಕ್ಷತ್ರ ಮುಂತಾದವರು ಈ ಹಂತದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ.
ಹರೀಶ್ ಪೆದ್ದಿ ಅವರು ಮೈರಾ ಕ್ರಿಯೇಷನ್ಸ್ ಲಾಂಛನದಡಿ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ತೆಲುಗಿನ ಖ್ಯಾತ ನಿರ್ದೇಶಕ ಅನಿಲ್ ಕನ್ನೆಗಂಟಿ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ನಿರ್ಮಾಪಕರಿಗೆ ಹಾಗೂ, ನಿರ್ದೇಶಕರಿಗೆ ಇದು ಕನ್ನಡದಲ್ಲಿ ಮೊದಲ ಚಿತ್ರ. ಬಿ.ಎಸ್. ಸುಧೀಂದ್ರ ಕಾರ್ಯಕಾರಿ ನಿರ್ಮಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಶಿವರಾಜ್‌ಕುಮಾರ್ ಅವರು ಅನೇಕ ವರ್ಷಗಳ ನಂತರ ಈ ಚಿತ್ರದಲ್ಲಿ ವೈದ್ಯನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಶರ್ಮಿಳಾ ಮಾಂಡ್ರೆ, ಬೇಬಿ ನಕ್ಷತ್ರ, ಬಾಬು, ಮಲಯಾಳಂ ನಟ ಸೂರಜ್ ವೆಂಜರಮೂಡು ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ. ಕನ್ನಡ, ತೆಲುಗು ಮತ್ತು ಮಲಯಾಳಂನಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರಕ್ಕೆ ಅರ್ಜುನ್ ಜನ್ಯ ಅವರ ಸಂಗೀತ ನಿರ್ದೇಶನ ಹಾಗೂ ಬಿ.ರಾಜಶೇಖರ್ ಅವರ ಛಾಯಾಗ್ರಹಣವಿದೆ.
ಸ್ಟಾರ್ ನಟರ ಜೊತೆ ದೊಡ್ಡ ದೊಡ್ಡ ಸಿನಿಮಾಗಳ ನಿರ್ಮಾಣದಲ್ಲಿ ಕೆವಿಎನ್ ಸಂಸ್ಥೆ (KVN Productions) ಹೆಸರು ಮಾಡಿದೆ. ‘ಟಾಕ್ಸಿಕ್’, ‘ಕೆಡಿ’, ‘ಜನ ನಾಯಗನ್’ ಮುಂತಾದ ಬಹುನಿರೀಕ್ಷಿತ ಸಿನಿಮಾಗಳು ಈ ಸಂಸ್ಥೆಯಿಂದ ಮೂಡಿಬರುತ್ತಿವೆ. ಆ ಮೂಲಕ ದಕ್ಷಿಣ ಭಾರತ ಚಿತ್ರರಂಗದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆಯಾಗಿ ‘ಕೆವಿಎನ್ ಪ್ರೊಡಕ್ಷನ್ಸ್’ ತೆಲುಗು ಚಿತ್ರರಂಗಕ್ಕೂ ಎಂಟ್ರಿ ಕೊಟ್ಟಿದೆ. ಇದೀಗ ಈ ಸಂಸ್ಥೆಯು ಶಿವಣ್ಣ (Shivarajkumar) ಜೊತೆ ಕೈ ಜೋಡಿಸಿದೆ.
ದಕ್ಷಿಣ ಚಿತ್ರರಂಗದ ಖ್ಯಾತ ನಿರ್ಮಾಣ ಸಂಸ್ಥೆ ಕೆವಿಎನ್ ಮೊದಲ ಬಾರಿಗೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಜೊತೆಯಾಗಿದೆ. ಈ ಚಿತ್ರಕ್ಕೆ ಖ್ಯಾತ ನಿರ್ದೇಶಕ ಪವನ್ ಒಡೆಯರ್ ಸಾರಥಿ. ಸ್ಯಾಂಡಲ್‌ವುಡ್‌ನಲ್ಲಿ (Sandalwood) ಅನೇಕ ಸೂಪರ್ ಹಿಟ್ ಸಿನಿಮಾಗಳನ್ನು ನೀಡಿರುವ ನಿರ್ದೇಶಕ ಪವನ್ ಒಡೆಯರ್ ಪುನೀತ್ ರಾಜ್‌ಕುಮಾರ್‌ಗೆ ಎರಡು ಸಿನಿಮಾಗಳನ್ನು ಮಾಡಿದ್ದಾರೆ. ಶಿವರಾಜ್‌ಕುಮಾರ್‌ಗೆ ಇದೇ ಮೊದಲ ಬಾರಿಗೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಈ ಚಿತ್ರದ ಶೂಟಿಂಗ್ ಸೆಪ್ಟೆಂಬರ್ 3ರಿಂದ ಆರಂಭವಾಗಲಿದೆ. ಇದನ್ನೂ ಓದಿ: ಕಿರುತೆರೆಯಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳ ಮಹಾತ್ಮೆ
ಶಿವಣ್ಣ ಅವರಿಗೆ ಮೊದಲ ಬಾರಿಗೆ ನಿರ್ದೇಶನ ಮಾಡುತ್ತಿರುವ ಪವನ್ ಒಡೆಯರ್ ಈ ಚಿತ್ರಕ್ಕೆ ಬಂಡವಾಳ ಕೂಡ ಹೂಡುತ್ತಿದ್ದಾರೆ. ಖ್ಯಾತ ನಿರ್ಮಾಣ ಸಂಸ್ಥೆ ಕೆವಿಎನ್ ಪ್ರೊಡಕ್ಷನ್ ಕೂಡ ಈ ಸಿನಿಮಾಗೆ ನಿರ್ಮಾಣ ಮಾಡುತ್ತಿದೆ. ವೆಂಕಟ್ ಕೊನಂಕಿ ಅವರ ಕೆವಿಎನ್ ಸಂಸ್ಥೆ ಹಾಗೂ ಪವನ್ ಒಡೆಯರ್ ಅವರ ಒಡೆಯರ್ ಮೂವೀಸ್ ಜಂಟಿಯಾಗಿ ಚಿತ್ರ ನಿರ್ಮಾಣ ಮಾಡಲಿದೆ. ಇದನ್ನೂ ಓದಿ: ಚೌಕಿದಾರ್ ಸಿನಿಮಾದ `ಓ ಮೈ ಬ್ರೋ’ ಹಾಡಿಗೆ ಭರ್ಜರಿ ರೆಸ್ಪಾನ್ಸ್
ಶಿವಣ್ಣ-ಪವನ್ ಕಾಂಬಿನೇಷನ್ ಸಿನಿಮಾದ ಚಿತ್ರೀಕರಣ ದೇಶದ ನಾನಾ ಭಾಗಗಳಲ್ಲಿ ನಡೆಯಲಿದೆ. ಸೆಪ್ಟೆಂಬರ್ ಮೂರರಿಂದ ಬೆಂಗಳೂರಿನಲ್ಲಿ ಮೊದಲ ಹಂತದ ಶೂಟಿಂಗ್ ಆರಂಭವಾಗಲಿದೆ. ಆ ಬಳಿಕ ಮಂಡ್ಯ, ಹಿಮಾಚಲ ಪ್ರದೇಶ, ಮುಂಬೈ ಹಾಗೂ ಹೈದರಾಬಾದ್ ನಲ್ಲಿ ಚಿತ್ರೀಕರಣ ನಡೆಸಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ. ಇದನ್ನೂ ಓದಿ: ಅಭಿಮಾನ್ ಸ್ಟುಡಿಯೋ ಮುಟ್ಟುಗೋಲಿಗೆ ಸರ್ಕಾರ ಆದೇಶ – ಅನಿರುದ್ಧ ರಿಯಾಕ್ಷನ್ ಏನು?
ಶಿವವರಾಜ್ ಕುಮಾರ್ ನಾಯಕನಾಗಿ ನಟಿಸುತ್ತಿರುವ ಈ ಚಿತ್ರವನ್ನು ದೊಡ್ಡ ಮಟ್ಟದಲ್ಲಿ ತೆರೆಗೆ ತರಲು ಚಿತ್ರತಂಡ ಸಜ್ಜಾಗಿದೆ. ಅದರಂತೆ ತಾರಾ ಬಳಗದಲ್ಲಿ ಜಯರಾಮ್, ಸಾಯಿ ಕುಮಾರ್, ಗೋಪಾಲಕೃಷ್ಣ ದೇಶಪಾಂಡೆ, ಪ್ರಕಾಶ್ ಬೆಳವಾಡಿಯಂತಹ ದಿಗ್ಗಜರ ಜೊತೆ ಸಂಜನಾ ಆನಂದ್ ಹಾಗೂ ದೀಕ್ಷಿತ್ ಶೆಟ್ಟಿಯಂತ ಪ್ರತಿಭಾನ್ವಿತ ಕಲಾದಂಡು ಚಿತ್ರದಲ್ಲಿ ಇರಲಿದೆ. ಒಂದೊಳ್ಳೆ ಕಮರ್ಷಿಯಲ್ ಎಂಟರ್ಟೈನ್ಮೆಂಟ್ ಕಥಾಹಂದರ ಹೊಂದಿರುವ ಸಿನಿಮಾಗೆ ಅಜನೀಶ್ ಲೋಕನಾಥ್ ಸಂಗೀತ, ಶಶಾಂಕ್ ನಾರಾಯಣ್ ಸಂಕಲನ ಒದಗಿಸಲಿದ್ದಾರೆ. ಶಿವಣ್ಣ , ಪವನ್ ಒಡೆಯರ್ ಹಾಗೂ ಕೆವಿಎನ್ ಮೊದಲ ಬಾರಿಗೆ ಒಂದಾಗುತ್ತಿರುವುದು ಚಿತ್ರದ ಮೇಲಿನ ನಿರೀಕ್ಷೆಯನ್ನು ಸಹಜವಾಗಿ ಹೆಚ್ಚು ಮಾಡಿದೆ.