Tag: shivaram

  • ಹಿರಿಯ ನಟ ಶಿವರಾಮ್ ಆರೋಗ್ಯ ಗಂಭೀರ

    ಹಿರಿಯ ನಟ ಶಿವರಾಮ್ ಆರೋಗ್ಯ ಗಂಭೀರ

    ಬೆಂಗಳೂರು: ಸ್ಯಾಂಡಲ್‍ವುಡ್ ಹಿರಿಯ ನಟ ಶಿವರಾಮ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ.

    84 ವರ್ಷದ ಶಿವರಾಮ್ ಅವರ ತಲೆಗೆ ಗಂಭೀರ ಗಾಯವಾಗಿದ್ದು ಬ್ರೈನ್ ಗೆ ಬಲವಾದ ಪೆಟ್ಟು ಬಿದ್ದಿದೆ. ಸದ್ಯ ಶಿವರಾಮ್ ಅವರನ್ನು ವಿದ್ಯಾಪೀಠ ಸರ್ಕಲ್ ಬಳಿ ಇರುವ ಪ್ರಶಾಂತ್ ಆಸ್ಪತ್ರೆಯಲ್ಲಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆಯಿಂದ ಶಿವರಾಮ್ ಅವರ ಅರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಹಿರಿಯ ನಟ ಶ್ರೀನಿವಾಸ್ ಮೂರ್ತಿ ಮಾಹಿತಿ ನೀಡಿದ್ದಾರೆ.

    ಈ ಸಂಬಂಧ ತಂದೆಯ ಆರೋಗ್ಯದ ಬಗ್ಗೆ ಹಿರಿಯ ಪುತ್ರ ರವಿಶಂಕರ್ ಮಾಹಿತಿ ನೀಡಿ, ಮೂರು ದಿನಗಳ ಹಿಂದೆ ಕಾರಿನಲ್ಲಿ ಹೊರಗೆ ಹೋಗಿದ್ದ ವೇಳೆ ಕಾರ್ ಆಕ್ಸಿಡೆಂಟ್ ಆಗಿತ್ತು. ಮೂರು ದಿನಗಳಿಂದ ಅವರಿಗೆ ಚಿಕಿತ್ಸೆ ಕೊಡಿಸಲಾಗಿದೆ. ಮೊನ್ನೆ ರಾತ್ರಿ ಮನೆಯಲ್ಲಿ ಅಯ್ಯಪ್ಪನ ಪೂಜೆ ಮಾಡಲು ರೂಂಗೆ ಹೋಗಿದ್ದರು. ಆ ವೇಳೆ ರೂಂನಲ್ಲಿ ಬಿದ್ದ ಹಿನ್ನೆಲೆ ತಲೆಗೆ ಬಲವಾದ ಪೆಟ್ಟು ಬಿದ್ದಿದೆ. ಅಂದು ರಾತ್ರಿಯೇ ಅಸ್ಪತ್ರೆಗೆ ಕರೆದುಕೊಂಡು ಬಂದು ಸ್ಕ್ಯಾನಿಂಗ್ ಮಾಡಿಸಿದ್ದೀವಿ. ಸ್ಕ್ಯಾನಿಂಗ್ ರಿಪೋರ್ಟ್ ನಲ್ಲಿ ಮೆದುಳಿನಲ್ಲಿ ರಕ್ತಸ್ರಾವ ಆಗಿರೋದು ಗೊತ್ತಾಯಿತು. ವೈದ್ಯರು ಸರ್ಜರಿ ಮಾಡಬೇಕು ಎಂದು ಹೇಳಿದ್ರು. ಆದರೆ ನಮ್ಮ ತಂದೆಗೆ ವಯಸ್ಸಾದ ಹಿನ್ನೆಲೆ ಸರ್ಜರಿ ಮಾಡಲು ಆಗಿಲ್ಲ. ಸದ್ಯ ಐಸಿಯುನಲ್ಲೇ ಅವರಿಗೆ ಚಿಕಿತ್ಸೆ ಮುಂದುವರೆದಿದೆ ಎಂದರು. ಇದನ್ನೂ ಓದಿ: ಆಂಧ್ರಪ್ರದೇಶ ಪ್ರವಾಹ – ತಲಾ 25 ಲಕ್ಷ ದೇಣಿಗೆ ನೀಡಿದ ಚಿರಂಜೀವಿ, ರಾಮ್‍ಚರಣ್

  • ಮುಖ್ಯಮಂತ್ರಿ ಬದಲಾವಣೆ ಕೇವಲ ಊಹಾಪೋಹಾ: ಶಿವರಾಮ್ ಹೆಬ್ಬಾರ್

    ಮುಖ್ಯಮಂತ್ರಿ ಬದಲಾವಣೆ ಕೇವಲ ಊಹಾಪೋಹಾ: ಶಿವರಾಮ್ ಹೆಬ್ಬಾರ್

    ರಾಯಚೂರು: ಮುಖ್ಯಮಂತ್ರಿಗಳ ಬದಲಾವಣೆ ವಿಚಾರ ಕೇವಲ ಊಹಾಪೋಹಾ. ಅದರಲ್ಲಿ ಯಾವುದೇ ಸತ್ಯಾಂಶವಿಲ್ಲ ಅಂತ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಹೇಳಿದ್ದಾರೆ.

    ರಾಯಚೂರಿನಲ್ಲಿ ಸುದ್ದಿಗಾರರೊಂಂದಿಗೆ ಮಾತನಾಡಿದ ಸಚಿವರು, ಸಂಪುಟ ವಿಸ್ತರಣೆ ಮುಖ್ಯಮಂತ್ರಿಗಳ ಪರಮಾಧಿಕಾರ ಸೂಕ್ತ ಸಮಯದಲ್ಲಿ ಅವರೇ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತಾರೆ. ಸಿಎಂ ಹಾಗೂ ಹೈಕಮಾಂಡ್‍ಗೆ ಬಿಟ್ಟ ವಿಚಾರ. ರಾಜ್ಯ ಹಾಗೂ ಕೇಂದ್ರ ಸರ್ಕಾರ ಸಮರ್ಥ ನಾಯಕತ್ವ ಹೊಂದಿದೆ ಎಂದರು.

    ಡಿಕೆಶಿ ಹಾಗೂ ಹೆಚ್‍ಡಿಕೆ ಅಡ್ಜಸ್ಟ್ ಮೆಂಟ್ ರಾಜಕೀಯ ವಿಚಾರದ ಬಗ್ಗೆ ಸಿ.ಪಿ.ಯೋಗೇಶ್ವರ್ ಏನು ಹೇಳಿಕೆ ನೀಡಿದ್ದಾರೋ ಗೊತ್ತಿಲ್ಲ. ನಾನು ರಾಜ್ಯ ಪ್ರವಾಸದಲ್ಲಿದ್ದೇನೆ ಅದರ ಬಗ್ಗೆ ತಿಳಿದುಕೊಂಡು ನಂತರ ಪ್ರತಿಕ್ರಿಯೆ ನೀಡುತ್ತೇನೆ ಎಂದರು. ಇದನ್ನೂ ಓದಿ: ಬಿಜೆಪಿ ಬಗ್ಗೆ ಎಚ್‍ಡಿಕೆ ಸಾಫ್ಟ್ ಕಾರ್ನರ್ ಹೊಂದಿರುವುದು ಸತ್ಯ: ಬಸವರಾಜ್ ಹೊರಟ್ಟಿ

    ಇದೇ ವೇಳೆ ಎಂಟಿಬಿ ನಾಗರಾಜ್ ಹಾಗೂ ಎಚ್ ವಿಶ್ವನಾಥ್ ಗೆ ಸಚಿವ ಸ್ಥಾನ ನೀಡುವ ಬಗ್ಗೆ ಪ್ರತಿಕ್ರಿಯೆ ನೀಡಿದ ಸಚಿವರು ಅವರನ್ನ ಈಗಾಗಲೇ ಎಂಎಲ್ ಸಿ ಮಾಡಿದ್ದಾರೆ ಸಚಿವರನ್ನಾಗಿ ಮಾಡುವುದು ಸಿಎಂ ಗೆ ಬಿಟ್ಟ ವಿಚಾರ ಅಂತ ಸ್ಪಷ್ಟಪಡಿಸಿದರು. ಇದನ್ನೂ ಓದಿ: 15 ದಿನ ಹಿಂದೆ ಕಾಂಗ್ರೆಸ್‌ಗೆ ಬರ್ತಿನಿ ಅಂತ ಯೋಗೇಶ್ವರ್‌ ನನ್ನ ಬಳಿ ಚರ್ಚಿಸಿದ್ದ – ಡಿಕೆಶಿ

  • ಕೋಮುವಾದಿ ಶಕ್ತಿ ದೂರ ಇಡಲು ನಾವು ಕಾಂಗ್ರೆಸ್ ಒಂದಾಗಿದ್ದೇವೆ: ರೇವಣ್ಣ

    ಕೋಮುವಾದಿ ಶಕ್ತಿ ದೂರ ಇಡಲು ನಾವು ಕಾಂಗ್ರೆಸ್ ಒಂದಾಗಿದ್ದೇವೆ: ರೇವಣ್ಣ

    ಹಾಸನ: ಲೋಕೋಪಯೋಗಿ ಸಚಿವ ಎಚ್.ಡಿ ರೇವಣ್ಣ ಅವರು ಇಂದು ಕೆಪಿಸಿಸಿ ಉಪಾಧ್ಯಕ್ಷ ಬಿ.ಶಿವರಾಂ ಮನೆಗೆ ಭೇಟಿ ನೀಡಿದ್ದಾರೆ.

    ಬಿ.ಶಿವರಾಂ ಮನೆಗೆ ಭೇಟಿ ನೀಡಿದ ಬಳಿಕ ಮಾತನಾಡಿದ ರೇವಣ್ಣ, “ಕೋಮುವಾದಿ ಶಕ್ತಿ ದೂರ ಇಡಲು ನಾವು ಕಾಂಗ್ರೆಸ್ ಒಂದಾಗಿದ್ದೇವೆ. ನಾವೆಲ್ಲರೂ ಒಟ್ಟಾಗಿ ಚುನಾವಣೆ ಎದುರಿಸುವ ಬಗ್ಗೆ ಚರ್ಚೆ ಮಾಡಿದ್ದೇವೆ. ಸಣ್ಣ ಪುಟ್ಟ ಸಮಸ್ಯೆ ಇದರೂ ಒಟ್ಟಾಗಿ ಮಾತನಾಡಿದ್ದೇವೆ. ನಾವು ಶಿವರಾಂ ಒಟ್ಟಾಗಿ ಸೇರಿ ಚುನಾವಣೆ ಕಾರ್ಯತಂತ್ರ ಮಾಡುತ್ತೇವೆ” ಎಂದು ಎಚ್‍ಡಿ ರೇವಣ್ಣ ಹೇಳಿದ್ದಾರೆ.

    ಅಲ್ಲದೆ ಮುಂದೆ ನಾವಿಬ್ಬರೂ ಜಿಲ್ಲೆಯ ಅಭಿವೃದ್ಧಿ ಮಾಡುತ್ತೇವೆ ಎಂದು ಬಿ. ಶಿವರಾಂ ಸಚಿವ ರೇವಣ್ಣ ಮಾತಿಗೆ ಧ್ವನಿಗೂಡಿಸಿದ್ದಾರೆ. ಯಾವುದೇ ಭಿನ್ನಾಭಿಪ್ರಾಯ ಇಲ್ಲ, ಹಳೇ ಭಿನ್ನಮತ ಮರೆತು ಒಟ್ಟಾಗಿ ಹೋಗುತ್ತೇವೆ. ಮುಂದೆ ಕಾಂಗ್ರೆಸ್ ಕಾರ್ಯಕರ್ತರನ್ನೂ ವಿಶ್ವಾಸಕ್ಕೆ ಪಡೆಯಿರಿ ಎಂದು ಮನವಿ ಮಾಡಿದ್ದೇನೆ. ಹಿಂದಿನ ಭಾವನೆ ಬೇಡ, ನಂಬಿಕೆಯಿಂದ ಮುನ್ನಡೆಯೋಣ. ನಾನೂ ಕಾಂಗ್ರೆಸ್ ಕಾರ್ಯಕರ್ತರನ್ನು ಒಟ್ಟಾಗಿ ತೆಗೆದುಕೊಂಡು ಹೋಗುವೆ ಎಂದು ರೇವಣ್ಣ ಹೇಳಿದ್ದಾರೆ.

    ಇತ್ತೀಚೆಗೆ ಶಿವರಾಂ ಸಮ್ಮಿಶ್ರ ಸರ್ಕಾರದ ಪಾಲುದಾರ ಪಕ್ಷ ಜೆಡಿಎಸ್ ಕುರಿತು ಅಸಮಧಾನ ವ್ಯಕ್ತಪಡಿಸಿದ್ದರು. ಹಾಗಾಗಿ ಇಂದು ರೇವಣ್ಣ ಚುನಾವಣೆಯಲ್ಲಿ ಪುತ್ರನಿಗೆ ಬೆಂಬಲಿಸಲು ಸಹಾಯ ಯಾಚಿಸಲು ಶಿವರಾಂ ಮನೆಗೆ ಆಗಮಿಸಿದ್ದರು. ಈ ವೇಳೆ ಶಿವರಾಂ ರೇವಣ್ಣರನ್ನು ಹಾರ ಮತ್ತು ಶಾಲು ಹಾಕಿ ಸ್ವಾಗತಿಸಿದ್ದಾರೆ. ಬಳಿಕ ಟೀ ಕುಡಿಯುತ್ತಾ ಶಿವರಾಂ ಹೊತೆ ಉಭಯ ಕುಶಲೋಪರಿ ನಡೆಸಿದ್ದಾರೆ. ಇದೇ ವೇಳೆ ರೇವಣ್ಣ ಮನೆ ಆಲ್ಟ್ರೇಷನ್ ಮಾಡಿಸಿದ್ದೀರಾ ಎಂದು ಪ್ರಶ್ನಿಸಿದ್ದಕ್ಕೆ ನಮ್ಮ ಮನೆಯಲ್ಲಿ ವಾಸ್ತುಗೀಸ್ತು ಇಲ್ಲ ಎಂದು ಶಿವರಾಂ ನಗೆ ಚಟಾಕಿ ಹಾರಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಹೊಂದಾಣಿಕೆಯಾಗದಿದ್ದರೆ ಚುನಾವಣೆಯಲ್ಲಿ ಫಲಿತಾಂಶ ಸಿಗಲ್ಲ- ಕೆಪಿಸಿಸಿ ಉಪಾಧ್ಯಕ್ಷ ಭವಿಷ್ಯ

    ಹೊಂದಾಣಿಕೆಯಾಗದಿದ್ದರೆ ಚುನಾವಣೆಯಲ್ಲಿ ಫಲಿತಾಂಶ ಸಿಗಲ್ಲ- ಕೆಪಿಸಿಸಿ ಉಪಾಧ್ಯಕ್ಷ ಭವಿಷ್ಯ

    ಹಾಸನ: ರಾಜ್ಯಾದ್ಯಂತ ಎರಡೂ ಪಕ್ಷಗಳ ಕಾರ್ಯಕರ್ತರ ಜಂಟಿ ಸಭೆಗಳನ್ನು ನಡೆಸಿಲ್ಲ. ಸರಿಯಾಗಿ ಹೊಂದಾಣಿಕೆ ಆಗದೇ ಇದ್ದರೆ ಹೈಕಮಾಂಡ್ ನಿರೀಕ್ಷೆಯಂತೆ ಚುನಾವಣೆಯಲ್ಲಿ ಫಲಿತಾಂಶ ಸಿಗುವುದಿಲ್ಲ ಎಂದು ಕೆಪಿಸಿಸಿ ಉಪಾಧ್ಯಕ್ಷ ಬಿ.ಶಿವರಾಂ ಭವಿಷ್ಯ ನುಡಿದಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಈಗ ಹೊಂದಾಣಿಕೆ ಹಿನ್ನಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳೇ ಇಲ್ಲದ ಜಿಲ್ಲೆಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸ್ಥಿತಿ ದಯನೀಯವಾಗಿದೆ. ರಾಜ್ಯದಲ್ಲಿ ಎರಡೂ ಪಕ್ಷಗಳ ಕಾರ್ಯಕರ್ತರ ಜಂಟಿ ಸಭೆಗಳನ್ನು ನಡೆಸಿಲ್ಲ. ಹೀಗಾಗಿ ಸರಿಯಾಗಿ ಹೊಂದಾಣಿಕೆ ಆಗದಿದ್ದಲ್ಲಿ ಹೈಕಮಾಂಡ್ ನಿರೀಕ್ಷೆಯಂತೆ ಚುನಾವಣೆಯಲ್ಲಿ ಫಲಿತಾಂಶ ಸಿಗುವುದು ಕಷ್ಟ ಎಂದು ಹೇಳಿದ್ರು.

    ನಮ್ಮ ಪಕ್ಷದಲ್ಲಿ ಎಲ್ಲ ಅಧಿಕಾರ ಅನುಭವಿಸಿದ ಮಾಜಿ ಸಚಿವ ಎ.ಮಂಜು ಪಕ್ಷಕ್ಕೆ ದ್ರೋಹ ಮಾಡುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ ಅವರು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿಶ್ವಾಸವನ್ನೂ ಎ ಮಂಜು ಉಳಿಸಿಕೊಳ್ಳಲಿಲ್ಲ. ಇದನ್ನು ಸಿದ್ದರಾಮಯ್ಯ ಅರ್ಥಮಾಡಿಕೊಳ್ಳಬೇಕು. ಎ.ಮಂಜುಗೆ ಪಕ್ಷಾಂತರ ಹೊಸದಲ್ಲ. ಈ ಹಿಂದೆಯೂ ಅವರು ಮೂರು ಬಾರಿ ಪಕ್ಷಾಂತರ ಮಾಡಿದ್ದಾರೆ ಎಂದು ಕಾಲೆಳೆದರು.

    ಈ ರೀತಿಯ ಪಕ್ಷಾಂತರಗಳಿಗೆ ಕಾಂಗ್ರೆಸ್ ನಲ್ಲಿ ಬೆಲೆ ಮತ್ತು ಗೌರವ ಕೊಡ್ತಾರೆ. ನಿಷ್ಠಾವಂತರಿಗೆ ಗೌರವ ಇಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಇದೇ ವೇಳೆ ಎ.ಮಂಜು ಜಿಲ್ಲೆಯಾದ್ಯಂತ ನಡೆಸುತ್ತಿರುವ ಸಭೆಗಳಲ್ಲಿ ಭಾಗವಹಿಸುತ್ತಿರುವ ಜನಪ್ರತಿನಿಧಿಗಳ ಬಗ್ಗೆ ಅಸಮಧಾನ ವ್ಯಕ್ತಪಡಿಸಿದ ಶಿವರಾಂ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ವಿರುದ್ಧ ಶೀಘ್ರವೇ ಶಿಸ್ತುಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು.

  • ಶಿವರಾಂ ನಿಧನ ಸುದ್ದಿಯನ್ನು ದಯವಿಟ್ಟು ಶೇರ್ ಮಾಡಬೇಡಿ

    ಶಿವರಾಂ ನಿಧನ ಸುದ್ದಿಯನ್ನು ದಯವಿಟ್ಟು ಶೇರ್ ಮಾಡಬೇಡಿ

    ಬೆಂಗಳೂರು: ಹಿರಿಯ ನಟ ಶಿವರಾಂ ಮೃತಪಟ್ಟಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿಯೊಂದು ಹರಿದಾಡುತ್ತಿದೆ.

    ಶಬರಿಮಲೆಗೆ ತೆರಳಿದ್ದಾಗ ಶಿವರಾಂ ಮೃತಪಟ್ಟಿದ್ದಾರೆಂಬ ಗಾಳಿಸುದ್ದಿ ಹರಿದಾಡುತ್ತಿದ್ದು, ಆದರೆ ಇದು ಕೇವಲ ವದಂತಿಯಾಗಿದೆ.

    ಈ ಬಗ್ಗೆ ಸ್ಪಷ್ಟನೆ ನೀಡಿರುವ ಅವರು ನಾನು ಚೆನ್ನಾಗಿದ್ದೇನೆ. ಈಗ ನಾನು ಚೆನ್ನೈನಲ್ಲಿ ಅಯ್ಯಪ್ಪ ಪೂಜೆಯಲ್ಲಿ ಇದ್ದೇನೆ. ಶನಿವಾರ ಬೆಂಗಳೂರಿಗೆ ಬರುತ್ತೇನೆ ಎಂದು ತಿಳಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಪ್ರಕಟವಾಗುತ್ತಿರುವ ಸುದ್ದಿಯನ್ನು ನಂಬಬೇಡಿ ಎಂದು ಅವರು ಜನರಲ್ಲಿ ಮನವಿ ಮಾಡಿಕೊಂಡಿದ್ದಾರೆ.(ಇದನ್ನೂ ಓದಿ:ಶಬರಿಮಲೆಗೆ ಹೋಗ್ತಿದ್ದೀರಾ? – ಹಾಗಾದ್ರೆ ಈ ಸುದ್ದಿ ಓದಿ ‘ಸನ್ನಿಧಾನ’ದತ್ತ ತೆರಳಿ..!)