Tag: Shivaramagowda

  • ದರ್ಶನ್, ಯಶ್ ನಟನೆ ಸಿನಿಮಾರಂಗಕ್ಕೆ ಸೀಮಿತವಾಗಿರಲಿ ರಾಜಕೀಯಕ್ಕೆ ಬೇಡ: ಶಿವರಾಮೇಗೌಡ

    ದರ್ಶನ್, ಯಶ್ ನಟನೆ ಸಿನಿಮಾರಂಗಕ್ಕೆ ಸೀಮಿತವಾಗಿರಲಿ ರಾಜಕೀಯಕ್ಕೆ ಬೇಡ: ಶಿವರಾಮೇಗೌಡ

    -ಸಿನಿಮಾದವರ ಹಣೆಬರಹ ನನಗೆ ಗೊತ್ತಿದೆ

    ಮಂಡ್ಯ: ನಟರಾದ ದರ್ಶನ್ ಮತ್ತು ಯಶ್ ನಟನೆ ಸಿನಿಮಾರಂಗಕ್ಕೆ ಮಾತ್ರ ಸೀಮಿತವಾಗಿರಲಿ ರಾಜಕೀಯಕ್ಕೆ ಬೇಡ ಎಂದು ಮತ್ತೊಮ್ಮೆ ಜೋಡೆತ್ತುಗಳಿಗೆ ಮಾಜಿ ಸಂಸದ ಶಿವರಾಮೇಗೌಡ ಟಾಂಗ್ ಕೊಟ್ಟಿದ್ದಾರೆ.

    ಇಂದು ಜಿಲ್ಲೆಯ ನಾಗಮಂಗಲದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿನಿಮಾದವರ ಹಣೆಬರಹ ನನಗೆ ಗೊತ್ತಿದೆ. ಅವರು ಸಿನಿಮಾದಲ್ಲಿ ನೋಡೋದಕ್ಕಷ್ಟೇ ಚಂದ. ರಾಜಕೀಯದಲ್ಲಲ್ಲ ಎಂದು ದರ್ಶನ್ ಮತ್ತು ಯಶ್ ವಿರುದ್ಧ ಕಿಡಿಕಾರಿದ್ದಾರೆ.

    ರೆಬೆಲ್ ಸ್ಟಾರ್ ಅಂಬರೀಶ್ ರಾಜಕೀಯಕ್ಕೆ ಬಂದರು. ಆದರೆ ಅವರು ಜನರಿಗೆ ಸುಳ್ಳು ಭರವಸೆ ನೀಡಲಿಲ್ಲ. ಜೋಡೆತ್ತುಗಳ ತರಹ ಊರೂರು ತಿರುಗಿ ತಮಟೆ ಬಾರಿಸಿಕೊಂಡು ನಾವಿದ್ದೀವಿ. ನಿಮ್ಮ ಎಲ್ಲಾ ಕಷ್ಟ ನಿವಾರಣೆ ಮಾಡುತ್ತೇವೆ ಎನ್ನಲಿಲ್ಲ ಎಂದು ಲೋಕಸಭಾ ಚುನಾವಣೆ ವೇಳೆ ಊರೂರು ಸುತ್ತಿ ಸುಮಲತಾ ಪರ ಪ್ರಚಾರ ನಡೆಸಿದ್ದ ದರ್ಶನ್ ಮತ್ತು ಯಶ್ ಅವರ ಕಾಲೆಳೆದಿದ್ದಾರೆ.

    ಸಿನಿಮಾದವರಿಗೆ ಗೌರವ ನೀಡೋಣ, ಅವರ ಸಿನಿಮಾವನ್ನು ದುಡ್ಡು ಕೊಟ್ಟು ನೋಡೋಣ. ಆದರೆ ಸಿನಿಮಾ ನಟರು ಚಿತ್ರರಂಗಕ್ಕಷ್ಟೇ ಸೀಮಿತವಾಗಬೇಕು ರಾಜಕೀಯಕ್ಕೆ ಬೇಡ ಎನ್ನುವುದನ್ನ ಜನ ಅರ್ಥ ಮಾಡಿಕೊಳ್ಳಬೇಕು. ಕಡೆಗೆ ನಿಮ್ಮ ಕಷ್ಟಕ್ಕೆ ಬರೋದು ಸಿನಿಮಾದವರಲ್ಲ ನಾವೇ ಅನ್ನೋದು ಜನರಿಗೆ ಅರ್ಥವಾಗಬೇಕು ಎಂದು ಹೇಳಿದರು.

    ಇದೇ ವೇಳೆ ಜೆಡಿಎಸ್ ಅವರು ಕರೆದರೆ ಅವರ ಕಚೇರಿಗೂ ಹೋಗುತ್ತೇನೆ ಎಂದು ಎಂದು ಹೇಳಿದ್ದ ಸುಮಲತಾ ಅವರ ಬಗ್ಗೆ ಮಾತನಾಡಿದ ಅವರು, ಸುಮಲತಾ ಅವರು ಬೇಕಿದ್ದರೆ ಕಾಂಗ್ರೆಸ್ ಮತ್ತು ಬಿಜೆಪಿ ಕಚೇರಿಗೆ ಹೋಗಲಿ. ಆದರೆ ಜೆಡಿಎಸ್‍ನವರು ಅವರನ್ನು ಕಚೇರಿಗೆ ಕರೆಯುವುದಿಲ್ಲ ಎಂದು ತಿರುಗೇಟು ನೀಡಿದರು.

  • ಹೆಚ್‍ಡಿಕೆ, ಹೆಚ್‍ಡಿಡಿ ದೇಹ ಬಂಗಾರ, ಕಿವಿ ಮಾತ್ರ ಹಿತ್ತಾಳೆ: ಶಿವರಾಮೇಗೌಡ

    ಹೆಚ್‍ಡಿಕೆ, ಹೆಚ್‍ಡಿಡಿ ದೇಹ ಬಂಗಾರ, ಕಿವಿ ಮಾತ್ರ ಹಿತ್ತಾಳೆ: ಶಿವರಾಮೇಗೌಡ

    ಮಂಡ್ಯ: ಮಾಜಿ ಸಿಎಂ ಹೆಚ್‍ಡಿ ಕುಮಾರಸ್ವಾಮಿ ಮತ್ತು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್‍ಡಿ ದೇವೇಗೌಡರ ದೇಹವೆಲ್ಲಾ ಬಂಗಾರ. ಆದರೆ ಕಿವಿ ಮಾತ್ರ ಹಿತ್ತಾಳೆ ಎಂದು ಮಾಜಿ ಸಂಸದ ಶಿವರಾಮೇಗೌಡ ಹೇಳಿದ್ದಾರೆ.

    ಇಂದು ಜಿಲ್ಲೆಯ ನಾಗಮಂಗಲದಲ್ಲಿ ಮಾತನಾಡಿದ ಅವರು, 20 ವರ್ಷ ಅಧಿಕಾರ ಸಿಗದ ನನಗೆ ಜೆಡಿಎಸ್ ಪಕ್ಷ ಎಂ.ಪಿ ಮಾಡಿದೆ. ಕುಮಾರಸ್ವಾಮಿ ಮತ್ತು ದೇವೇಗೌಡ್ರು ಹಾಗೂ ನನ್ನ ಮಧ್ಯೆ ಯಾವುದೇ ಅಸಮಾಧಾನ ಇಲ್ಲ. ಸಣ್ಣ ಪುಟ್ಟ ಅಸಮಾಧಾನ ಇದ್ದರೆ ಸರಿಪಡಿಸಿಕೊಳ್ಳುತ್ತೇವೆ ಎಂದು ಹೇಳಿದರು.

    ದೊಡ್ಡವರಿಗೆ ನನ್ನ ಬಗ್ಗೆ ಏಕವಚನದಲ್ಲಿ ಮಾತನಾಡುವ ಅಧಿಕಾರ ಇದೆ. ಕೆಲ ಭಟ್ಟಂಗಿಗಳು ಕುಮಾರಸ್ವಾಮಿ ಬಳಿ ನನ್ನ ಬಗ್ಗೆ ಚಾಡಿ ಹೇಳಿದ್ದಾರೆ. ಯಾರು ಏನ್ ಹೇಳಿದರು ಅವರುಗಳು ಕೇಳಿ ಬಿಡುತ್ತಾರೆ. ಆ ಬಗ್ಗೆ ಕುಮಾರಸ್ವಾಮಿ ಅವರ ಬಳಿ ಮಾತನಾಡುವುದಕ್ಕೆ ನನಗೆ ಸಮಯ ಸಿಕ್ಕಿಲ್ಲ. ಡಿಕೆಶಿ ವಿಚಾರವಾಗಿ ಡೆಲ್ಲಿ ಹೋಗಿದ್ದರಿಂದ ಸಮಯ ಸಿಗಲಿಲ್ಲ ಎಂದು ತಿಳಿಸಿದ್ದಾರೆ.

    ಕುಮಾರಸ್ವಾಮಿ, ದೇವೇಗೌಡರ ದೇಹ ಬಂಗಾರ ಆದರೆ ಕಿವಿ ಹಿತ್ತಾಳೆಯಾದ್ದರಿಂದ ಭಟ್ಟಂಗಿಗಳ ಮಾತು ಕೇಳುತ್ತಾರೆ. ಜೆಡಿಎಸ್ ಪಕ್ಷ ನನ್ನ ಎಂ.ಪಿ ಮಾಡಿದ್ದಕ್ಕೆ ನನಗೆ ಕೃತಜ್ಞತೆ ಇದೆ. ಜೆಡಿಎಸ್ ವರಿಷ್ಠರ ಮೇಲೆ ಗೌರವವಿದೆ. ದೇವೇಗೌಡರು ಹಲವು ಒಕ್ಕಲಿಗ ನಾಯಕರನ್ನು ಬೆಳೆಸಿದ್ದಾರೆ. ನನ್ನ ಮುಂದೆ ಯಾವುದೇ ಅವಕಾಶ ಇಲ್ಲ. ನಾನು ಜೆಡಿಎಸ್ ಪಕ್ಷದಲ್ಲೇ ಇರುತ್ತೇನೆ ಎಂದು ಸ್ಪಷ್ಟಪಡಿಸಿದರು.