Tag: Shivashri Skanda Prasad

  • ತೇಜಸ್ವಿ ಸೂರ್ಯ, ಶಿವಶ್ರೀ ರಿಸೆಪ್ಷನ್ – ಸಿಎಂ, ಡಿಸಿಎಂ ಸೇರಿದಂತೆ ಗಣ್ಯರಿಂದ ನವದಂಪತಿಗೆ ಶುಭಹಾರೈಕೆ

    ತೇಜಸ್ವಿ ಸೂರ್ಯ, ಶಿವಶ್ರೀ ರಿಸೆಪ್ಷನ್ – ಸಿಎಂ, ಡಿಸಿಎಂ ಸೇರಿದಂತೆ ಗಣ್ಯರಿಂದ ನವದಂಪತಿಗೆ ಶುಭಹಾರೈಕೆ

    ಬೆಂಗಳೂರು: ಬಿಜೆಪಿ ಸಂಸದ ತೇಜಸ್ವಿ ಸೂರ್ಯ (Tejasvi Surya) ಹಾಗೂ ಗಾಯಕಿ ಶಿವಶ್ರೀ ಸ್ಕಂದ ಪ್ರಸಾದ್‌ (Sivasri Skandaprasad) ಆರತಕ್ಷತೆ ಸಂಭ್ರಮದಲ್ಲಿದ್ದಾರೆ. ನವ ದಂಪತಿಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್‌ ಸೇರಿ ಅನೇಕ ಗಣ್ಯರು ಶುಭಹಾರೈಸಿದ್ದಾರೆ.

    ಬೆಂಗಳೂರಿನ ಅರಮನೆ ಮೈದಾನದಲ್ಲಿ ಇಂದು ಸಂಸದ ತೇಜಸ್ವಿ ಸೂರ್ಯ ಹಾಗೂ ಶಿವಶ್ರೀ ಜೋಡಿಯ ಆರತಕ್ಷತೆ ಕಾರ್ಯಕ್ರಮ ನಡೆಯುತ್ತಿದೆ. ಈ ಸಂಭ್ರಮದಲ್ಲಿ ಸಿಎಂ, ಡಿಸಿಎಂ, ಸಚಿವರು, ರಾಜಕೀಯ ಪಕ್ಷಗಳ ನಾಯಕರು, ಮುಖಂಡರು, ಆಪ್ತರು, ಬಂಧುಗಳು ಆಗಮಿಸಿ ಜೋಡಿಯನ್ನು ಆಶೀರ್ವದಿಸಿದ್ದಾರೆ. ಇದನ್ನೂ ಓದಿ: ಗಾಯಕಿ ಶಿವಶ್ರೀ ಜೊತೆ ಸಪ್ತಪದಿ ತುಳಿದ ಸಂಸದ ತೇಜಸ್ವಿ ಸೂರ್ಯ

    ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಗೃಹ ಸಚಿವ ಜಿ.ಪರಮೇಶ್ವರ್‌, ಸಚಿವ ಜಮೀರ್‌ ಅಹ್ಮದ್‌ ಸೇರಿದಂತೆ ಅನೇಕ ಗಣ್ಯರು ಪಾಲ್ಗೊಂಡು ನವದಂಪತಿಗೆ ವಿಶ್‌ ಮಾಡಿದರು.

    ಮಾರ್ಚ್‌ 5 ಮತ್ತು 6 ರಂದು ತೇಜಸ್ವಿ ಸೂರ್ಯ ವಿವಾಹ ಸಮಾರಂಭ ಬೆಂಗಳೂರು ಕನಕಪುರ ರೆಸಾರ್ಟ್‌ನಲ್ಲಿ ನಡೆದಿತ್ತು. ಇದಕ್ಕೆ ಕುಟುಂಬ ಸದಸ್ಯರು, ಆಪ್ತ ವಲಯದ ಸ್ನೇಹಿತರು, ರಾಜಕೀಯ ಗಣ್ಯರು ಸಾಕ್ಷಿಯಾಗಿದ್ದರು. ಇದನ್ನೂ ಓದಿ: ತೇಜಸ್ವಿ ಸೂರ್ಯ ಮದುವೆ – ಎಲ್ಲಿ? ಯಾವಾಗ? ಇಲ್ಲಿದೆ ಸಂಪೂರ್ಣ ಡಿಟೇಲ್ಸ್‌

  • ಗಾಯಕಿ ಶಿವಶ್ರೀ ಜೊತೆ ಸಪ್ತಪದಿ ತುಳಿದ ಸಂಸದ ತೇಜಸ್ವಿ ಸೂರ್ಯ

    ಗಾಯಕಿ ಶಿವಶ್ರೀ ಜೊತೆ ಸಪ್ತಪದಿ ತುಳಿದ ಸಂಸದ ತೇಜಸ್ವಿ ಸೂರ್ಯ

    – ವಿವಾಹ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವರಾದ ಸೋಮಣ್ಣ, ಶೋಭಾ ಕರಂದ್ಲಾಜೆ ಸೇರಿ ಅನೇಕ ಗಣ್ಯರು ಭಾಗಿ

    ಬೆಂಗಳೂರು: ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು ಗಾಯಕಿ, ಭರತನಾಟ್ಯ ಕಲಾವಿದೆ ಶಿವಶ್ರೀ ಸ್ಕಂದ ಪ್ರಸಾದ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

    ಇಂದು ಬೆಂಗಳೂರಿನ ಹೆಸರಘಟ್ಟ ಸಮೀಪದ ರೆಸಾರ್ಟ್ನಲ್ಲಿ ತೇಜಸ್ವಿ ಸೂರ್ಯ ಹಾಗೂ ಶಿವಶ್ರೀ ಸ್ಕಂದ ಪ್ರಸಾದ್ ವಿವಾಹ ಮಹೋತ್ಸವ ನೆರವೇರಿತು. ರಾಜಕೀಯ ಮುಖಂಡರು ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಿ ನವಜೋಡಿಗಳಿಗೆ ಶುಭ ಹಾರೈಸಿದರು.

    ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಕೇಂದ್ರ ಸಚಿವರಾದ ಶೋಭಾ ಕರಂದ್ಲಾಜೆ, ವಿ ಸೋಮಣ್ಣ, ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್, ಬಿಜೆಪಿ ಶಾಸಕರು, ಸಂಸದರು, ಹಿಂದೂಪರ ಸಂಘಟನೆ ನಾಯಕರು ಸೇರಿದಂತೆ ಇನ್ನಿತರರು ಭಾಗಿಯಾಗಿ ಶುಭ ಕೋರಿದರು.

    ಮಾ.9 ರ ಭಾನುವಾರ ಆರತಕ್ಷತೆ ಸಮಾರಂಭ ಬೆಂಗಳೂರಿನ ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ನಡೆಯಲಿದೆ. ಬೆಳಗ್ಗೆ 10:30 ರಿಂದ 1:30 ರವರೆಗೆ ರಿಸೆಪ್ಪನ್ ನಡೆಯಲಿದ್ದು, ಗಣ್ಯರು ಭಾಗಿಯಾಗಲಿದ್ದಾರೆ.

    ತೇಜಸ್ವಿ ಸೂರ್ಯ ಅವರ ಪತ್ನಿ ಶಿವಶ್ರೀ ಅವರು ಚೆನ್ನೈ ಮೂಲದ ಹೆಸರಾಂತ ಗಾಯಕಿ, ಭರತನಾಟ್ಯ ಪ್ರವೀಣೆ ಹಾಗೂ ಬಿಟೆಕ್ ಪದವೀಧರೆಯಾಗಿದ್ದಾರೆ. ಅಯೋಧ್ಯೆ ರಾಮಮಂದಿರ ಲೋಕಾರ್ಪಣೆ ಸಂದರ್ಭದಲ್ಲಿ ಪೂಜಿಸಲೆಂದೇ ಹೂಗಳ ತಂದೆ ಹಾಡುವ ಮೂಲಕ ಪ್ರಧಾನಿ ಮೋದಿಯವರ ಮೆಚ್ಚುಗೆಗೆ ಶಿವಶ್ರೀ ಪಾತ್ರರಾಗಿದ್ದರು.

    ತೇಜಸ್ವಿ ಅವರಂತೆ ಶಿವಶ್ರೀ ಅವರು ಹರಿಕಥೆ, ಸೈಕ್ಲಿಂಗ್, ವಾಕಥಾನ್‌ನಲ್ಲಿ ಆಸಕ್ತಿ ಹೊಂದಿದ್ದಾರೆ ತೇಜಸ್ವಿ ಮತ್ತು ಶಿವಶ್ರೀ ಕೆಲ ವರ್ಷಗಳಿಂದ ಪರಿಚಯ ಹೊಂದಿದ್ದಾರೆ. ಈ ಹಿಂದೆ 2021ರಲ್ಲಿ ಚೆನ್ನೈನಲ್ಲಿ ನಡೆದಿದ್ದ ಸಂಗೀತ ಕಾರ್ಯಕ್ರಮವೊಂದರಲ್ಲಿ ತೇಜಸ್ವಿ ಸೂರ್ಯ ಭಾಗಿಯಾಗಿದ್ದರು. ಕಾರ್ಯಕ್ರಮದ ಕೊನೆಯಲ್ಲಿ ಶಿವಶ್ರೀಯವರನ್ನು ಸನ್ಮಾನಿಸಿದ್ದರು. ಈ ಫೋಟೋಗಳನ್ನ ಶಿವಶ್ರೀ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು.