Tag: shivling

  • ಜ್ಞಾನವಾಪಿ ಮಾಹಿತಿ ಲೀಕ್ – ಚಿತ್ರೀಕರಣದಲ್ಲಿ ಭಾಗಿಯಾಗಿದ್ದ ಅಧಿಕಾರಿ ವಜಾ

    ಜ್ಞಾನವಾಪಿ ಮಾಹಿತಿ ಲೀಕ್ – ಚಿತ್ರೀಕರಣದಲ್ಲಿ ಭಾಗಿಯಾಗಿದ್ದ ಅಧಿಕಾರಿ ವಜಾ

    ಲಕ್ನೋ: ಉತ್ತರಪ್ರದೇಶದ ವಾರಣಾಸಿ ಜ್ಞಾನವಾಪಿ ಮಸೀದಿಯ ಸಮೀಕ್ಷೆಯ ವರದಿ ನ್ಯಾಯಾಲಯಕ್ಕೆ ಸಲ್ಲುವ ಮೊದಲೇ ಸೋರಿಕೆಯಾಗಿರುವ ಕುರಿತಂತೆ ವಾರಣಾಸಿ ನ್ಯಾಯಾಲಯ ಚಿತ್ರೀಕರಣದಲ್ಲಿ ಭಾಗಿಯಾಗಿದ್ದ ಉನ್ನತ ಅಧಿಕಾರಿ ಅಜಯ್ ಮಿಶ್ರಾ ಅವರನ್ನು ವಜಾಗೊಳಿಸಿದೆ.

    ನ್ಯಾಯಾಲಯ ಜ್ಞಾನವಾಪಿ ಮಸೀದಿಯ ವರದಿ ಸಲ್ಲಿಸಲು 2 ದಿನಗಳ ಕಾಲಾವಕಾಶ ನೀಡಿದೆ. ವರದಿ ಸಲ್ಲಿಕೆಗೂ ಮುನ್ನವೇ ಮಾಧ್ಯಮಗಳಿಗೆ ಚಿತ್ರೀಕರಣದ ಸಂಗತಿಗಳು ಸೋರಿಕೆಯಾದ ಹಿನ್ನೆಲೆಯಲ್ಲಿ ಅಡ್ವೋಕೇಟ್ ಕಮಿಷನರ್ ಅಜಯ್ ಮಿಶ್ರಾ ಅವರನ್ನು ನ್ಯಾಯಾಲಯ ವಜಾಗೊಳಿಸಿದೆ. ಇದನ್ನೂ ಓದಿ: ಶಿವಲಿಂಗ ಪತ್ತೆಯಾದ ಜಾಗವನ್ನು ರಕ್ಷಿಸಿ: ಸುಪ್ರೀಂ ಕೋರ್ಟ್‌

    ಈ ಹಿಂದೆ ನ್ಯಾಯಾಲಯ ಮೇ 17ರ ಒಳಗಾಗಿ ಸಮೀಕ್ಷಾ ವರದಿಗಳನ್ನು ನೀಡಬೇಕೆಂದು ಆದೇಶ ನೀಡಿತ್ತು. ಇದೀಗ ವರದಿ ಸಲ್ಲಿಸಲು ಆಯೋಗಕ್ಕೆ ನ್ಯಾಯಾಲಯ ಇನ್ನೆರಡು ದಿನಗಳ ಕಾಲಾವಕಾಶವನ್ನೂ ನೀಡಿದೆ. ವರದಿ ಸೋರಿಕೆಯಲ್ಲಿ ಪಾತ್ರವಹಿಸಿದ್ದ ಅಜಯ್ ಮಿಶ್ರಾ ಅವರನ್ನು ನ್ಯಾಯಾಲಯ ವಜಾಗೊಳಿಸಿದೆ ಎಂದು ಸಹಾಯಕ ವಕೀಲ ಕಮಿಷನರ್ ಅಜಯ್ ಪ್ರತಾಪ್ ಸಿಂಗ್ ತಿಳಿಸಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿ


    ಅಜಯ್ ಮಿಶ್ರಾ ಸಮೀಕ್ಷೆಗೆ ಸಂಬಂಧಿಸಿದ ಮಾಹಿತಿಗಳನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡಿರುವುದಾಗಿ ವರದಿಯಾಗಿದೆ. ಈ ಹಿಂದೆ ಮಿಶ್ರಾ ಅವರನ್ನು ಅಡ್ವೋಕೇಟ್ ಕಮಿಷನರ್ ಸ್ಥಾನದಿಂದ ಕೈಬಿಡಬೇಕೆಂದು ಮಸೀದಿ ಆಡಳಿತ ಮಂಡಳಿಯ ವಕೀಲರು ಕೋರಿದ್ದರು. ಈ ಅರ್ಜಿಯನ್ನು ಕೋರ್ಟ್ ತಿರಸ್ಕರಿಸಿತ್ತು. ಇದಲ್ಲದೇ ಮಿಶ್ರಾ ಅವರಿಗೆ ನೆರವಾಗಲು ಹೆಚ್ಚುವರಿ ಕಮಿಷನರ್ ಹಾಗೂ ಸಹಾಯಕ ಕಮಿಷನರ್‌ಗಳನ್ನು ಕೋರ್ಟ್ ನೇಮಕ ಮಾಡಿತ್ತು.

  • ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ, ನಂದಿ ವಿಗ್ರಹ ಪತ್ತೆ

    ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ, ನಂದಿ ವಿಗ್ರಹ ಪತ್ತೆ

    ಲಕ್ನೋ: ವಾರಣಾಸಿಯ ಜ್ಞಾನವಾಪಿ ಮಸೀದಿಯಲ್ಲಿ ಸರ್ವೇ ಕಾರ್ಯದ ವೇಳೆ ಶಿವಲಿಂಗ ಪತ್ತೆಯಾಗಿರುವುದಾಗಿ ವರದಿಯಾಗಿದೆ. ಮಸೀದಿಯ ಬಾವಿಯೊಳಗೆ ಪತ್ತೆಯಾದ ಶಿವಲಿಂಗ 12 ಅಡಿ, 8 ಇಂಚು ವ್ಯಾಸ ಹೊಂದಿದೆ ಎಂದು ಹಿಂದೂ ಪರ ವಕೀಲ ವಿಷ್ಣು ಜೈನ್ ತಿಳಿಸಿದ್ದಾರೆ.

    ಇತ್ತೀಚೆಗೆ ಉತ್ತರ ಪ್ರದೇಶದ ವಾರಣಾಸಿಯಲ್ಲಿರುವ ಜ್ಞಾನವಾಪಿ ಮಸೀದಿ ಬಗ್ಗೆ ದೇಶದ ಜನರ ಗಮನ ಸೆಳೆದಿತ್ತು. ಈ ಹಿನ್ನೆಲೆಯಲ್ಲಿ ಅಲ್ಲಿ ಸರ್ವೇ ಕಾರ್ಯ ಪ್ರಾರಂಭವಾಗಿತ್ತು. ಈ ವರೆಗೆ ಮಸೀದಿಯಲ್ಲಿ ಶೇ.65 ರಷ್ಟು ಸರ್ವೇ ಕಾರ್ಯ ಮುಗಿದಿದೆ. ಮಂಗಳವಾರ ನ್ಯಾಯಾಲಯಕ್ಕೆ ಸರ್ವೇ ರಿಪೋರ್ಟ್ ಸಲ್ಲಿಸಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಅಲ್ಪಸಂಖ್ಯಾತರ ಮೀಸಲಾತಿ ನಿಲ್ಲಿಸುತ್ತೇವೆ – ತೆಲಂಗಾಣ ಸರ್ಕಾರದ ವಿರುದ್ಧ ಶಾ ಗುಡುಗು

    ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಪತ್ತೆಯಾಗಿರುವ ಬಗ್ಗೆ ವರದಿಗಳು ತಿಳಿಸಿದ್ದು, ಮಸೀದಿಯ ವೀಡಿಯೋ ಚಿತ್ರೀಕರಣ ಸಂಪೂರ್ಣಗೊಂಡಿದೆ. ಮಸೀದಿಯಲ್ಲಿ ಇದ್ದ ನಂದಿಯ ಎದುರಿನ ಬಾವಿಯಲ್ಲಿ ಪುರಾತನ ಶಿವಲಿಂಗ ಪತ್ತೆಯಾಗಿದೆ ಎಂದು ವಿಷ್ಣು ಜೈನ್ ತಿಳಿಸಿದ್ದಾರೆ. ಇದನ್ನೂ ಓದಿ: 18ನೇ ಶತಮಾನದಲ್ಲಿ ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡಿದ್ದ ಹಿಂದೂಗೆ ಸಂತನ ಪಟ್ಟ!

    ಜನರು ಆ ಸ್ಥಳದ ಬಳಿ ಹೋಗದಂತೆ ತಡೆಯಲು ಆ ಜಾಗವನ್ನು ಸೀಲ್ ಮಾಡಿ ಎಂದು ವಾರಣಾಸಿ ಕೋರ್ಟ್‌ ಆದೇಶಿಸಿದ ಹಿನ್ನೆಲೆಯಲ್ಲಿ ಪೊಲೀಸರು ಜಾಗದಲ್ಲಿ ಬಿಗಿ ಭದ್ರತೆ ಕೈಗೊಂಡಿದ್ದಾರೆ.

    ಏನಿದು ಪ್ರಕರಣ?
    ಜ್ಞಾನವಾಪಿ ಮಸೀದಿ ಹೊರ ಗೋಡೆಗೆ ತಾಗಿಕೊಂಡೇ ಇರುವ ಶೃಂಗಾರ ಗೌರಿ, ಗಣೇಶ, ಹನುಮಾನ್ ಮತ್ತು ನಂದಿ ವಿಗ್ರಹಗಳಿಗೆ ಪೂಜೆ ನರೆವೇರಿಸುವುದಕ್ಕೆ ಅವಕಾಶ ನೀಡಬೇಕು ಎಂದು ಕೋರಿ ದೆಹಲಿ ಮೂಲದ ರಾಖಿ ಸಿಂಗ್, ಲಕ್ಷ್ಮಿ ದೇವಿ, ಸೀತಾ ಸಾಹು ಮತ್ತು ಇತರರು 2021ರ ಏಪ್ರಿಲ್ 21ರಂದು ವಾರಣಾಸಿಯ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಇಲ್ಲಿ ಇರುವ ದೇವತಾ ವಿಗ್ರಹಗಳಿಗೆ ಯಾವುದೇ ಹಾನಿ ಉಂಟುಮಾಡದಂತೆ ಸೂಚಿಸಬೇಕು ಎಂದು ಕೋರಿದ್ದರು.

    ಈ ವಿಚಾರವಾಗಿ ವಿಚಾರಣೆ ನಡೆಸಿದ್ದ ನ್ಯಾಯಾಲಯ, ಈದ್ ಹಬ್ಬದ ನಂತರ ಮತ್ತು ಮೇ 10 ರೊಳಗೆ ಕಾಶಿ ವಿಶ್ವನಾಥ ಮಂದಿರ- ಜ್ಞಾನವಾಪಿ ಮಸೀದಿ ಸಂಕೀರ್ಣದಲ್ಲಿ ವೀಡಿಯೋ ಚಿತ್ರೀಕರಣ ನಡೆಸುವಂತೆ ಏಪ್ರಿಲ್ 26ರಂದು ಆದೇಶಿಸಿತ್ತು. ವೀಡಿಯೋ ಚಿತ್ರೀಕರಣದ ವೇಳೆ ಅಡ್ವೋಕೇಟ್ ಕಮಿಷನರ್, ಎರಡೂ ಕಡೆಯ ಕಕ್ಷೀದಾರರು ಮತ್ತು ಒಬ್ಬ ಸಹಾಯಕ ಮಾತ್ರ ಇರಬಹುದು ಎಂದು ತಿಳಿಸಲಾಗಿತ್ತು. ಇದರಂತೆ ಮೇ 6 ಮತು 7 ರಂದು ವೀಡಿಯೋ ಚಿತ್ರೀಕರಣ ನಡೆಸಲು ಉದ್ದೇಶಿಸಲಾಗಿತ್ತು. ಆದರೆ ವೀಡಿಯೋ ಚಿತ್ರೀಕರಣ ಮತ್ತು ಸಮೀಕ್ಷೆ ನಡೆಸಲು ಜ್ಞಾನವಾಪಿ ಮಸೀದಿ ಆಡಳಿತ ಮಂಡಳಿ ಅವಕಾಶ ನೀಡಿರಲಿಲ್ಲ. ವೀಡಿಯೋ ಶೂಟಿಂಗ್‌ ವೇಳೆ ಹೈಡ್ರಾಮಾ ನಡೆದಿತ್ತು. ಬಳಿಕ ಕೋರ್ಟ್ ಮೇ 17ರ ಒಳಗಡೆ ಸಮೀಕ್ಷೆ ನಡೆಸಿ ವರದಿ ಸಲ್ಲಿಸುವಂತೆ ಸೂಚಿಸಿತ್ತು.