Tag: Shivraaj Kumar

  • ‘ಕರಟಕ ದಮನಕ’ ಚಿತ್ರದ ಕ್ಯಾರೆಕ್ಟರ್ ಟೀಸರ್ ರಿಲೀಸ್ ಮಾಡಿದ ಕಿಚ್ಚ ಸುದೀಪ್

    ‘ಕರಟಕ ದಮನಕ’ ಚಿತ್ರದ ಕ್ಯಾರೆಕ್ಟರ್ ಟೀಸರ್ ರಿಲೀಸ್ ಮಾಡಿದ ಕಿಚ್ಚ ಸುದೀಪ್

    ರಾಕ್ ಲೈನ್ ವೆಂಕಟೇಶ್ ನಿರ್ಮಾಣದ, ಯೋಗರಾಜ್ ಭಟ್ ನಿರ್ದೇಶನದ ಹಾಗೂ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ (Shivraaj Kumar), ಇಂಡಿಯನ್ ಮೈಕಲ್ ಜಾಕ್ಸನ್ ಪ್ರಭುದೇವ ನಾಯಕರಾಗಿ ನಟಿಸಿರುವ ‘ಕರಟಕ ದಮನಕ’ (Karataka Damanaka)  ಚಿತ್ರದ ಕ್ಯಾರೆಕ್ಟರ್ ಟೀಸರ್ ಬಿಡುಗಡೆಯಾಗಿದೆ. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ (Kiccha Sudeep) ಈ ಚಿತ್ರದ  ಕ್ಯಾರೆಕ್ಟರ್ ಟೀಸರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ. ಟೀಸರ್ ಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ಸದ್ಯದಲ್ಲೇ ಟ್ರೇಲರ್ ಬರಲಿದ್ದು, ಮಾರ್ಚ್ 8 ಮಹಾ ಶಿವರಾತ್ರಿ ಶುಭದಿನದಂದು ಚಿತ್ರ ಅದ್ದೂರಿಯಾಗಿ ಬಿಡುಗಡೆಯಾಗಲಿದೆ.

    ಮೊನ್ನೆಯಷ್ಟೇ ಈ  ಚಿತ್ರದ ಎರಡನೇ ಗೀತೆ ಡೀಗ ಡಿಗರಿ ಅಬುದಾಬಿಯಲ್ಲಿ ಬಿಡುಗಡೆಯಾಗಿದೆ. ಯೋಗರಾಜ್ ಭಟ್ ಅವರು ಬರೆದಿರುವ ಈ ಹಾಡನ್ನು ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಾಜೇಶ್ ಕೃಷ್ಣನ್ ಹಾಡಿದ್ದಾರೆ. ವಿ.ಹರಿಕೃಷ್ಣ ಸಂಗೀತ ಸಂಯೋಜಿಸಿದ್ದಾರೆ. ಅಬುದಾಬಿಯಲ್ಲಿ ನಡೆದ ಅದ್ದೂರಿ ಸಮಾರಂಭದಲ್ಲಿ ಈ ಹಾಡು ಬಿಡುಗಡೆಯಾಗಿದೆ.

    ಕರಟಕ ದಮನಕ ಎಂದರೆ ಎರಡು ಕುತಂತ್ರಿ ನರಿಗಳ ಹೆಸರು. ಸಾಮಾನ್ಯವಾಗಿ ಯಾವಾಗಲೂ ಒಟ್ಟಿಗೆ ಇಬ್ಬರನ್ನು ಹೆಚ್ಚು ಸಲ ನೋಡಿದಾಗ ಅವರನ್ನು ಕರಟಕ ದಮನಕ ಎನ್ನುತ್ತಾರೆ. ಅಬುದಾಬಿಯಲ್ಲಿ ನಮ್ಮ ಚಿತ್ರಕ್ಕಾಗಿ ನಾನೇ ಬರೆದಿರುವ ಎರಡನೇ ಹಾಡು   ಡೀಗ ಡಿಗರಿ ಬಿಡುಗಡೆಯಾಗಿದೆ. ವಿ.ಹರಿಕೃಷ್ಣ ಸಂಗೀತ ನೀಡಿರುವ ಈ ಹಾಡನ್ನು ಉಪೇಂದ್ರ ಹಾಗೂ ರಾಜೇಶ್ ಕೃಷ್ಣನ್ ಹಾಡಿದ್ದಾರೆ. ಇದು  ಉತ್ತರ ಕರ್ನಾಟಕದಲ್ಲಿ ನಡೆಯುವ ಕಥೆ. ಈ ಚಿತ್ರ ನೋಡಿದ ಪ್ರತಿಯೊಬ್ಬ ವ್ಯಕ್ತಿಗೂ ಅವನ ಊರು, ಆ ಊರಿನಲ್ಲಿ ಎಳೆದ ತೇರು ಹಾಗೂ ಅವನು ಯಾವ ನೀರು ಕುಡಿದು ಬೆಳೆದಿದ್ದಾನೋ ಆ ನೀರು ನೆನಪಾಗುತ್ತದೆ ಎಂದಿದ್ದಾರೆ ನಿರ್ದೇಶಕ ಯೋಗರಾಜ್ ಭಟ್.

     

    ಎಲ್ಲರಿಗೂ ಒಂದು ಊರು ಇರುತ್ತದೆ. ಆ ಊರನ್ನು ಬಿಟ್ಟು ಬಂದ ಮೇಲೆ ಪುನಃ ಹೋದಾಗ ಅಲ್ಲಿ ಸಾಕಷ್ಟು ಬದಲಾವಣೆ ಆಗಿರುತ್ತದೆ. ಆ ವಿಷಯ ಇಟ್ಟುಕೊಂಡು ಸಾಕಷ್ಟು ಮನೋರಂಜನೆಯ ಅಂಶಗಳೊಂದಿಗೆ ನಿರ್ದೇಶಕರು ಒಳ್ಳೆಯ ಕಥೆ ಮಾಡಿದ್ದಾರೆ. ಇನ್ನು  ಪ್ರಭುದೇವ ಅವರ ಜೊತೆ ಮೊದಲ ಬಾರಿ ನಟಿಸಿರುವುದು ಖುಷಿಯಾಗಿದೆ ಎನ್ನುವುದು ಶಿವರಾಜಕುಮಾರ್ ಮಾತು.

  • ‘ಟಗರು’ ಸಿನಿಮಾವನ್ನು ಧನುಷ್ ರಿಮೇಕ್ ಮಾಡಿದರೆ ಒಪ್ಪುತ್ತೆ: ಶಿವಣ್ಣ

    ‘ಟಗರು’ ಸಿನಿಮಾವನ್ನು ಧನುಷ್ ರಿಮೇಕ್ ಮಾಡಿದರೆ ಒಪ್ಪುತ್ತೆ: ಶಿವಣ್ಣ

    ಅಂದುಕೊಂಡ ಆಗಿದ್ದರೆ ತಮಿಳಿನ ಖ್ಯಾತನಟ ಧನುಷ್ (Dhanush) ಅವರ ಅಸುರನ್ ಸಿನಿಮಾವನ್ನು ಶಿವರಾಜ್ ಕುಮಾರ್ (Shivraj Kumar) ಕನ್ನಡಕ್ಕೆ ಮಾಡಬೇಕಿತ್ತು. ಕನ್ನಡದಲ್ಲಿ ಅಸುರನ್ ರೀಮೇಕ್ ಆಗುತ್ತಿದೆ ಎನ್ನುವ ಸುದ್ದಿಯೂ ಹರಡಿತ್ತು. ಅದೆಲ್ಲವೂ ನಿಜವೂ ಆಗಿತ್ತು. ನಂತರ ಸಿನಿಮಾ ಆಗಲೇ ಇಲ್ಲ. ಕೋವಿಡ್ ಸೇರಿದಂತೆ ನಾನಾ ಕಾರಣದಿಂದಾಗಿ ಅಸುರನ್ ಕನ್ನಡಕ್ಕೆ ಬರಲಿಲ್ಲ. ಆದರೆ, ಶಿವರಾಜ್ ಕುಮಾರ್ ನಟನೆಯ ಟಗರು (Tagaru) ಸಿನಿಮಾ ತಮಿಳಿಗೆ ರಿಮೇಕ್ ಆಗತ್ತಾ? ಇಂಥದ್ದೊಂದು ಸುದ್ದಿ ಹರಿದಾಡುತ್ತಿದೆ.

    ಶಿವರಾಜ್ ಕುಮಾರ್ ಮತ್ತು ಧನುಷ್ ಕಾಂಬಿನೇಷನ್ ನ ಕ್ಯಾಪ್ಟನ್ ಮಿಲ್ಲರ್ ಸಿನಿಮಾ ಇದೇ ವಾರ ಬಿಡುಗಡೆ ಆಗುತ್ತಿದೆ. ಹಾಗಾಗಿ ಶಿವರಾಜ್ ಕುಮಾರ್ ಅಲ್ಲಿನ ಮಾಧ್ಯಮಗಳಿಗೆ ಸಂದರ್ಶನ ನೀಡುತ್ತಿದ್ದಾರೆ. ಆವಾಗ ಅಸುರನ್ ಸಿನಿಮಾ ರಿಮೇಕ್ ಯಾಕೆ ಆಗಲಿಲ್ಲ ಎಂದು ಹೇಳಿದ್ದಾರೆ. ಜೊತೆಗೆ ಟಗರು ಸಿನಿಮಾವನ್ನು ಧನುಷ್ ರೀಮೇಕ್ ಮಾಡಿದರೆ, ಪಾತ್ರ ಅವರಿಗೆ ಒಪ್ಪುತ್ತದೆ ಎಂದಿದ್ದಾರೆ.

    ಶಿವಣ್ಣ ಮತ್ತು ಧನುಷ್ ಕಾಂಬಿನೇಷನ್ ನ ಮಿಲ್ಲರ್ ಸಿನಿಮಾ ಸಾಕಷ್ಟು ಕುತೂಹಲ ಮೂಡಿಸಿದೆ. ಶಿವರಾಜ್ ಕುಮಾರ್ ಈ ಸಿನಿಮಾದಲ್ಲಿ ಹೊಸ ಬಗೆಯ ಪಾತ್ರ ಮಾಡಿದ್ದಾರೆ. ಧನುಷ್ ಸಹೋದರನ ಪಾತ್ರ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.