Tag: shoe lace

  • ಭಾರತ್ ಜೋಡೋ ಯಾತ್ರೆಯಲ್ಲಿ ಅಮ್ಮನ ಶೂ ಲೇಸ್ ಕಟ್ಟಿದ ರಾಹುಲ್

    ಭಾರತ್ ಜೋಡೋ ಯಾತ್ರೆಯಲ್ಲಿ ಅಮ್ಮನ ಶೂ ಲೇಸ್ ಕಟ್ಟಿದ ರಾಹುಲ್

    ಮಂಡ್ಯ: ಭಾರತ್ ಜೋಡೋ ಯಾತ್ರೆ (Bharat Jodo Yatra) ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ತಮ್ಮ ತಾಯಿ ಸೋನಿಯಾ ಗಾಂಧಿ ಅವರ ಶೂ ಲೇಸ್‍ಗಳನ್ನು ಕಟ್ಟಿರುವ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

    ಇಂದು ಮಂಡ್ಯ (Mandya) ಜಿಲ್ಲೆಯಲ್ಲಿ ಭಾರತ್ ಜೋಡೋ ಯಾತ್ರೆ ವೇಳೆ ರಾಹುಲ್ ಗಾಂಧಿಗೆ ಸೋನಿಯಾ ಗಾಂಧಿ (Sonia Gandhi) ಅವರು ಸಾಥ್ ನೀಡಿದರು. ಈ ವೇಳೆ ಅಪರೂಪದ ದೃಶ್ಯ ಕಂಡುಬಂದಿದೆ. ಸದ್ಯ ವೈರಲ್ ಆಗುತ್ತಿರುವ ಫೋಟೋದಲ್ಲಿ ರಾಹುಲ್ ಗಾಂಧಿ ತಮ್ಮ ತಾಯಿಯ ಶೂ ಲೇಸ್ ಅನ್ನು ಎಚ್ಚರಿಕೆಯಿಂದ ಕಟ್ಟುತ್ತಿರುವುದನ್ನು ಕಾಣಬಹುದಾಗಿದೆ. ಇದೀಗ ಈ ಫೋಟೋ ನೋಡಿ ರಾಹುಲ್ ಗಾಂಧಿ ಸರಳತೆಗೆ ನೆಟ್ಟಿಗರಿಂದ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಇದನ್ನೂ ಓದಿ: ಸರ್ಕಾರಿ ಶಾಲೆಗಳಿಗೆ 150 ಕಂಪ್ಯೂಟರ್‌ ಕೊಡುಗೆ ನೀಡಿದ ಇನ್ಫೋಸಿಸ್‌

    ಮೆಡಿಕಲ್ ಚೆಕ್‍ಅಪ್‍ಗಾಗಿ ವಿದೇಶಕ್ಕೆ ತೆರಳಿದ್ದ ಸೋನಿಯಾ ಗಾಂಧಿ ಅವರು, ಸೋಮವಾರ ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಳ್ಳಲು ಕರ್ನಾಟಕಕ್ಕೆ ಆಗಮಿಸಿದ್ದಾರೆ. ಸೋನಿಯಾಗಾಂಧಿ ಅವರು ಮಡಿಕೇರಿ ಮಡಿಕೇರಿಗೆ ತೆರಳಿ ಖಾಸಗಿ ರೆಸಾರ್ಟ್‍ನಲ್ಲಿ ತಂಗಿದ್ದರು. ಇದನ್ನೂ ಓದಿ: ಅಪಘಾತದಲ್ಲಿ ಗಾಯಗೊಂಡಿದ್ದ ಶಾಸಕ ಅರವಿಂದ ಬೆಲ್ಲದ ಚಿಕ್ಕಪ್ಪ ಚಿಕಿತ್ಸೆ ಫಲಿಸದೆ ಸಾವು

    ವೈದ್ಯಕೀಯ ತಪಾಸಣೆಗಾಗಿ ವಿದೇಶದಲ್ಲಿರುವ ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರು ಸೋಮವಾರ ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಳ್ಳಲು ಕರ್ನಾಟಕಕ್ಕೆ ಆಗಮಿಸಿದ್ದರು. ಮೈಸೂರಿನಿಂದ (Mysuru) ಮಡಿಕೇರಿಗೆ (Madikeri) ತೆರಳಿದ ಸೋನಿಯಾಗಾಂಧಿ ಅವರು ಖಾಸಗಿ ರೆಸಾರ್ಟ್‍ನಲ್ಲಿ ತಂಗಿದ್ದರು. ಬಳಿಕ ಇಂದು ಮಂಡ್ಯದ ಬೆಳ್ಳಾಳೆಯಿಂದ ಪಾದಯಾತ್ರೆ ಪ್ರಾರಂಭ ಮಾಡಿ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಜೊತೆ ಜೊತೆಗೆ ಹೆಜ್ಜೆ ಹಾಕಿದರು.

    ಪಾಂಡವಪುರದ ತೂಬಿನಕೆರೆಯಲ್ಲಿ ಹೆಲಿಕಾಪ್ಟರ್ ಲ್ಯಾಂಡಿಂಗ್ ಆದ ನಂತರ ತೂಬಿನಕೆರೆಯಿಂದ ಜಕ್ಕನಹಳ್ಳಿಗೆ ಸೋನಿಯಾ ಆಗಮಿಸಿ ಬೆಳಗ್ಗೆ 8 ಗಂಟೆಗೆ ಜಕ್ಕನಹಳ್ಳಿಯಿಂದ ಸಾಂಕೇತಿಕವಾಗಿ ಯಾತ್ರೆಯಲ್ಲಿ ಭಾಗಿಯಾದರು. ಸೋನಿಯಾ ಗಾಂಧಿ ಸುಮಾರು 10-15 ನಿಮಿಷಗಳ ಕಾಲ ನಡೆದರು. ನಂತರ ಪಾದಯಾತ್ರೆ ಮಾಡಿದ್ದು ಸಾಕು ಎಂದು ಹೇಳಿ ಸೋನಿಯಾ ಗಾಂಧಿ ಅವರನ್ನು ಕಾರಿಗೆ ರಾಹುಲ್ ಗಾಂಧಿ ಅವರು ಹತ್ತಿಸಿದರು.

    Live Tv
    [brid partner=56869869 player=32851 video=960834 autoplay=true]

  • ಶೂ ಲೇಸ್‍ನಿಂದ ಬಾಲಕನ ಕುತ್ತಿಗೆ ಬಿಗಿದು ಕೊಲೆ

    ಶೂ ಲೇಸ್‍ನಿಂದ ಬಾಲಕನ ಕುತ್ತಿಗೆ ಬಿಗಿದು ಕೊಲೆ

    ಭೋಪಾಲ್: ಬಾಲಕನೊಬ್ಬನನ್ನು ಶಾಲೆಯಿಂದ ಕಿಡ್ನಾಪ್ ಮಾಡಿ, ಶೂ ಲೇಸ್‍ನಿಂದ ಕುತ್ತಿಗೆ ಬಿಗಿದು ಕೊಲೆ ಮಾಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

    ಎರಡನೇ ತರಗತಿಯಲ್ಲಿ ಓದುತ್ತಿದ್ದ ಭರತ್ ಮೃತ ಬಾಲಕ. ಶಾಲೆಯಿಂದ ಸುಮಾರು 13 ಕಿ.ಮೀ ದೂರದಲ್ಲಿ ಬಾಲಕನ ಮೃತದೇಹ ಪತ್ತೆಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ಯೂಷನ್ ಶಿಕ್ಷಕ ವಿಶಾಲ್ ರೂಪಾನಿ (ಬಿಟ್ಟೂ)ನನ್ನು ಪೊಲೀಸರು ಸೋಮವಾರದಂದು ಬಂಧಿಸಿದ್ದಾರೆ.

    ಸೋಮವಾರ ಮಧ್ಯಾಹ್ನ ಶಾಲೆ ಮುಗಿದು ಎಷ್ಟು ಹೊತ್ತಾದ್ರೂ ಮಗ ಮನೆಗೆ ಬರದ ಹಿನ್ನೆಲೆಯಲ್ಲಿ ಭರತ್ ತಂದೆ ಪರಶುರಾಮ್ ಎಲ್ಲಾ ಕಡೆ ಹುಡುಕಾಡಿ ನಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

    ಮಗ ಸುರಕ್ಷಿತವಾಗಿ ಮನೆಗೆ ವಾಪಸ್ ಬರುತ್ತಾನೆ ಎಂದುಕೊಂಡಿದ್ದ ತಂದೆಗೆ, ಭರತ್ ಹೆಣ ಗೋಣಿಚೀಲದಲ್ಲಿ ಸಿಕ್ಕಿದೆ ಎಂದು ಗೊತ್ತಾಗಿ ಶಾಕ್ ಆಗಿತ್ತು. ಬಾಲಕನನ್ನು ಆತನ ಶೂ ಲೇಸ್‍ನಿಂದಲೇ ಕುತ್ತಿಗೆ ಬಿಗಿದು ಕೊಲೆ ಮಾಡಲಾಗಿತ್ತು. ಆತನ ಬ್ಯಾಗ್ ಮತ್ತು ಶೂ ಕೂಡ ಗೋಣಿಚೀಲದಲ್ಲೇ ತುಂಬಲಾಗಿತ್ತು. ಪೊಲೀಸರು ಗೋಣಿಚೀಲದಿಂದ ಶವವನ್ನು ಹೊರತೆಗೆದಾಗ ಶೂ ಲೇಸ್ ಬಾಲಕನ ಕುತ್ತಿಗೆಯಲ್ಲಿತ್ತು. ಪೊಲೀಸರು ಕೂಡ ಶೂ ಲೇಸನ್ನು ತೆಗೆಯಲು ಸಾಧ್ಯವಾಗದಂತೆ ತುಂಬಾ ಬಿಗಿಯಾಗಿ ಕಟ್ಟಲಾಗಿತ್ತು. ಕೊಲೆ ಮಾಡಿದ ನಂತರ ಆರೋಪಿ ಮೃತದೇಹವನ್ನು ಗೋಣಿಚೀಲದೊಳಗೆ ತುಂಬಿ ಹೊಲಿಗೆ ಹಾಕಿದ್ದ.

    ಬೈಕ್‍ನಲ್ಲಿ ಬಂದ ವ್ಯಕ್ತಿಯೊಬ್ಬ ಗೋಣಿ ಚೀಲ ಎಸೆದು ಹೋಗಿದ್ದನ್ನು ನೋಡಿದೆ. ಆದ್ರೆ ಹೆಚ್ಚೇನೂ ತಲೆಕೆಡಿಸಿಕೊಳ್ಳಲಿಲ್ಲ. ಅನಂತರ ನಾನು ಮನೆಗೆ ಹೋದೆ. ಸಂಜೆ ಸುಮಾರು 6.30ರ ಹೊತ್ತಿಗೆ ಇಬ್ಬರು ಹುಡುಗರು ಬ್ಯಾಗ್ ತೆರೆದು ನೋಡಿ ಕಿರುಚಿಕೊಂಡ್ರು. ನಾನು ಏನಾಗಿದೆ ಎಂದು ನೋಡಲು ಅಲ್ಲಿಗೆ ಹೋದಾಗ ಶಾಲಾ ಸಮವಸ್ತ್ರದಲ್ಲಿದ್ದ ಬಾಲಕನ ಶವ ನೋಡಿದೆ ಎಂದು ಇಲ್ಲಿನ ನಿವಾಸಿ ಭೈರೋನ್ ಕುಶ್ವಾಹ್ ಹೇಳಿದ್ದಾರೆ.

    ಟ್ಯೂಷನ್ ಶಿಕ್ಷಕ ಬಿಟ್ಟೂ ನನ್ನನ್ನು ಇಷ್ಟಪಡುತ್ತಿದ್ದ. ಮಗ ಭರತ್‍ನನ್ನು ಆತನೇ ಕೊಲೆ ಮಾಡಿದ್ದಾನೆಂದು ತಾಯಿ ಸವಿತಾ ಹೇಳಿದ್ದಾರೆ. ನೀನು ನಿನ್ನ ಗಂಡನನ್ನು ಬಿಟ್ಟು ಬಂದು ನನ್ನ ಜೊತೆ ಜೀವನ ನಡೆಸಿದ್ದರೆ ಕೆಟ್ಟ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಕೊಲೆಗೆ ಎರಡು ದಿನಗಳ ಮುಂಚೆ ಬಿಟ್ಟೂ ಬೆದರಿಕೆ ಹಾಕಿದ್ದ ಎಂದು ಸವಿತಾ ಹೇಳಿದ್ದಾರೆ.

    ಎರಡು ದಿನಗಳ ಹಿಂದೆ ಟ್ಯೂಷನ್ ಶಿಕ್ಷಕನ ವಿರುದ್ಧ ದೂರು ನೀಡಿದ್ದರೂ ಪೊಲೀಸರು ನಿರ್ಲಕ್ಷ್ಯ ವಹಿಸಿದ್ದರು ಎಂದು ಬಾಲಕನ ತಂದೆ ಪರಶುರಾಮ್ ಹೇಳಿದ್ದಾರೆ. ಟ್ಯೂಷನ್ ಶಿಕ್ಷಕನ ಬಗ್ಗೆ ಕೆಲವು ಅನುಮಾನಾಸ್ಪದ ಮಾಹಿತಿ ತಿಳಿದ ನಂತರ ಆತನಿಗೆ ಟ್ಯೂಷನ್ ಮಾಡಲು ಮನೆಗೆ ಬರುವುದು ಬೇಡ ಎಂದು ಹೇಳಿದ್ದೆವು. ಆದ್ರೂ ಆತ ಒಂದು ದಿನ ನಸುಕಿನ ಜಾವ 3 ಗಂಟೆ ವೇಳೆ ಮನೆಗೆ ನುಗ್ಗಿದ್ದ. ಇದಾದ ಬಳಿಕ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದೆವು. ಆಗ ನನ್ನ ಹೆಂಡತಿಯನ್ನ ಕಿಡ್ನಾಪ್ ಮಾಡಿ ಕುಟುಂಬವನ್ನ ಹಾಳು ಮಾಡುವುದಾಗಿ ಬೆದರಿಕೆ ಹಾಕಿದ್ದ. ಪೊಲೀಸರು ಆಗಲೇ ಸೂಕ್ತ ಕ್ರಮ ಕೈಗೊಂಡಿದ್ದರೆ ಇವತ್ತು ಈ ಪರಿಸ್ಥಿತಿ ಬರುತ್ತಿರಲಿಲ್ಲ ಎಂದು ಪರಶುರಾಮ್ ಹೇಳಿದ್ದಾರೆ.

    ಸದ್ಯ ಆರೋಪಿಯನ್ನ ಬಂಧಿಸಿರೋ ಪೊಲೀಸರು ಆತನನ್ನು ವಿಚಾರಣೆಗೆ ಒಳಪಡಿಸಿದ್ದಾರೆ.

  • ಶೂ ಲೇಸ್ ಕಟ್ಟಿಕೊಳ್ತಿದ್ದ ಹುಡುಗನ ಮೇಲೆ ಹರಿದ ಕಾರ್- ಜನ ಆತನನ್ನ ಹೇಗೆ ರಕ್ಷಿಸಿದ್ರು ನೋಡಿ

    ಶೂ ಲೇಸ್ ಕಟ್ಟಿಕೊಳ್ತಿದ್ದ ಹುಡುಗನ ಮೇಲೆ ಹರಿದ ಕಾರ್- ಜನ ಆತನನ್ನ ಹೇಗೆ ರಕ್ಷಿಸಿದ್ರು ನೋಡಿ

    ಬೀಜಿಂಗ್: ರಸ್ತೆ ಅಪಘಾತಗಳಾದಾಗ ಬಹುತೇಕ ಸಂದರ್ಭಗಳಲ್ಲಿ ಅಪಘಾತ ಮಾಡಿದವರು ಅಲ್ಲಿಂದ ಕಾಲ್ಕೀಳುತ್ತಾರೆ. ಇನ್ನೂ ಕೆಲವು ಬಾರಿ ರಸ್ತೆಯಲ್ಲಿ ಹೋಗುತ್ತಿರುವವರು ಅಪಘಾತಕ್ಕೀಡಾದವರ ಕಡೆ ತಿರುಗಿಯೂ ನೋಡದೆ ಹೋಗ್ತಾರೆ. ಆದ್ರೆ ಈ ಘಟನೆ ಅದಕ್ಕೆ ಭಿನ್ನ. ಶೂ ಲೇಸ್ ಕಟ್ಟಿಕೊಳ್ಳುತ್ತಿದ್ದ ಬಾಲಕನ ಮೇಲೆ ಕಾರ್ ಹರಿದು ಸ್ಥಳೀಯರು ಆತನನ್ನು ರಕ್ಷಣೆ ಮಾಡುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡ್ತಿದೆ.

    ನವೆಂಬರ್ 13ರಂದು ಚೀನಾದ ಯಿಕಿಂಗ್ ಕೌಂಟಿಯಲ್ಲಿ ಈ ಘಟನೆ ನಡೆದಿದೆ. ಹುಡುಗನೊಬ್ಬ ರಸ್ತೆ ದಾಟುವ ವೇಳೆ ಶೂ ಲೇಸ್ ಕಟ್ಟಿಕೊಳ್ಳಲು ರಸ್ತೆ ಮಧ್ಯೆಯೇ ಕುಳಿತಿದ್ದಾನೆ. ಈ ಸಂದರ್ಭದಲ್ಲಿ ಅದೇ ಮಾರ್ಗವಾಗಿ ಬಂದ್ ಕಾರ್ ಹುಡುಗ ಕುಳಿತಿದ್ದನ್ನು ಗಮನಿಸದೆ ಆತನ ಮೇಲೆ ಹರಿದಿದೆ. ತಕ್ಷಣ ಕಾರ್‍ನಲ್ಲಿದ್ದವರು ಕೆಳಗೆ ಇಳಿದು ಬಾಲಕನಿಗೆ ಏನಾಯಿತು ಎಂದು ನೋಡಿದ್ದಾರೆ. ನಂತರ ಕಾರನ್ನು ಮೇಲೆತ್ತಿ ಬಾಲಕನನ್ನು ಹೊರಗೆಳೆಯಲು ಪ್ರಯತ್ನಿಸಿದ್ದಾರೆ. ಈ ವೇಳೆ ಆ ರಸ್ತೆಯ ಮಾರ್ಗವಾಗಿ ಹೋಗುತ್ತಿದ್ದ ಪ್ರತಿಯೊಬ್ಬರೂ ಬಾಲಕನ ರಕ್ಷಣೆಗೆ ಬಂದಿದ್ದಾರೆ.

    ಕೊನೆಗೆ ಅಲ್ಲಿದ್ದವರು ಒಟ್ಟಾಗಿ ಸೇರಿ ಬಾಲಕನನ್ನು ಹೊರಗೆಳೆಯುವಲ್ಲಿ ಯಶಸ್ವಿಯಾಗಿದ್ದು, ಕೂಡಲೇ ಆತನನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಅದೃಷ್ಟವಶಾತ್ ಬಾಲಕನಿಗೆ ಯಾವುದೇ ಗಂಭೀರ ಗಾಯಗಳಾಗಿರಲಿಲ್ಲ ಎಂದು ವರದಿಯಾಗಿದೆ.

    ಬಾಲಕನ ಸ್ಕೂಲ್ ಬ್ಯಾಗ್ ಟೈರ್ ಕೆಳಗೆ ಸಿಲುಕಿದ್ದರಿಂದ ಆತನ ಜೀವ ಉಳಿದಿದೆ.