Tag: Shokas Notice

  • ವಿಜಯೇಂದ್ರ, ಯತ್ನಾಳ್ ಟೀಂಗೆ ‘ಹೈ’ ಶಾಕ್ – ಐವರು ನಾಯಕರಿಗೆ ಶಿಸ್ತು ಸಮಿತಿಯಿಂದ ಶೋಕಾಸ್ ನೋಟಿಸ್

    ವಿಜಯೇಂದ್ರ, ಯತ್ನಾಳ್ ಟೀಂಗೆ ‘ಹೈ’ ಶಾಕ್ – ಐವರು ನಾಯಕರಿಗೆ ಶಿಸ್ತು ಸಮಿತಿಯಿಂದ ಶೋಕಾಸ್ ನೋಟಿಸ್

    ನವದೆಹಲಿ: ರಾಜ್ಯ ಬಿಜೆಪಿಯಲ್ಲಿ (BJP) ಬಣ ಬಡಿದಾಟ ಜೋರಾಗಿದೆ. ರಾಜ್ಯಧ್ಯಕ್ಷ ಬಿ.ವೈ ವಿಜಯೇಂದ್ರ (BY Vijayendra) ವಿರುದ್ಧ ಯತ್ನಾಳ್ (Basanagouda Patil Yatnal) ಟೀಂ ಬಂಡಾಯ ಸಾರಿದರೆ, ಇತ್ತ ಯತ್ನಾಳ್ ಟೀಂ ವಿರುದ್ಧ ಬಿಎಸ್‌ವೈ ಟೀಂ ಸಮರ ಸಾರಿದೆ. ಈ ನಡುವೆ ಅಕ್ಕಿ ಮೇಲಾಸೆ ನೆಂಟರ ಮೇಲೆ ಪ್ರೀತಿ ಎಂಬಂತೆ ಬಿಜೆಪಿಯಲ್ಲಿದ್ದು ಕಾಂಗ್ರೇಸ್ ಪರ ಮಾತನಾಡುವ ಮತ್ತೊಂದು ಗುಂಪು. ಈ ಗುಂಪುಗಾರಿಕೆಯಿಂದ ಬೇಸತ್ತ ಹೈಕಮಾಂಡ್ ಒಂದೇ ಕಲ್ಲಿಗೆ ಮೂರು ಹಕ್ಕಿ ಹೊಡೆಯುವ ನಿರ್ಧಾರಕ್ಕೆ ಬಂದಿದ್ದು, ಬಿಜೆಪಿಯ ಐವರು ನಾಯಕರಿಗೆ ಶೋಕಾಸ್ ನೋಟಿಸ್ ನೀಡಿದೆ.

    ರಾಜ್ಯ ಬಿಜೆಪಿ ಮನೆಯೊಂದು ಮೂರು ಬಾಗಿಲಾಗಿದೆ. ಒಂದು ಕಡೆ ರಾಜ್ಯಧ್ಯಕ್ಷ ಬಿ.ವೈ ವಿಜಯೇಂದ್ರ ವಿರುದ್ಧ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಮರ ಸಾರಿದರೇ ವಿಜಯೇಂದ್ರ ಪರ ನಿಂತಿರುವ ಕೆಲವು ಶಾಸಕರು ಯತ್ನಾಳ್ ಗ್ಯಾಂಗ್ ವಿರುದ್ಧ ವಾಗ್ಯುದ್ಧ ನಡೆಸುತ್ತಿದ್ದಾರೆ. ಮತ್ತೊಂದು ಕಡೆ ಬಿಜೆಪಿಯಲ್ಲೇ ಇದ್ದು ಕಾಂಗ್ರೆಸ್ ಪರ ಬ್ಯಾಟಿಂಗ್ ಮಾಡುತ್ತಿರುವ ಗುಂಪು ಆಕ್ಟಿವ್ ಆಗಿದೆ. ಇದರಿಂದ ಬೇಸತ್ತ ಹೈಕಮಾಂಡ್ ಒಂದೇ ಕಲ್ಲಿಗೆ ಮೂರು ಹಕ್ಕಿ ಹೊಡೆಯುವ ನಿರ್ಧಾರಕ್ಕೆ ಬಂದಿದೆ. ಇದನ್ನೂ ಓದಿ: ಗುಜರಾತ್ ಟೈಟನ್ಸ್ ವಿರುದ್ಧ ಪಂಜಾಬ್‌ಗೆ 11 ರನ್‌ಗಳ ರೋಚಕ ಗೆಲುವು

    ಹೌದು, ರಾಜ್ಯ ಬಿಜೆಪಿಯಲ್ಲಿರುವ ಬಣ ರಾಜಕೀಯಕ್ಕೆ ಇತಿಶ್ರೀ ಹಾಡಲು ಮುಂದಾಗಿರುವ ಬಿಜೆಪಿ ಹೈಕಮಾಂಡ್ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಳಿಕ ಐದು ಮಂದಿ ನಾಯಕರಿಗೆ ಶೋಕಾಸ್ ನೋಟಿಸ್ ನೀಡಿದೆ. ಬಿಜೆಪಿ ರಾಷ್ಟ್ರೀಯ ಶಿಸ್ತು ಪಾಲನ ಸಮಿತಿ ಯತ್ನಾಳ್ ಬಣದ ಶಾಸಕ ಬಿ.ಪಿ ಹರೀಶ್, ವಿಜಯೇಂದ್ರ ಪರ ಬ್ಯಾಟ್ ಬೀಸುತ್ತಿದ್ದ ಮಾಜಿ ಶಾಸಕರಾದ ಎಂ.ಪಿ ರೇಣುಕಾಚಾರ್ಯ, ಕಟ್ಟಾ ಸುಬ್ರಮಣ್ಮನಾಯ್ಡು ಹಾಗೂ ಬಿಜೆಪಿಯಲ್ಲಿದ್ದು ಕೈಪರ ಬ್ಯಾಟ್ ಬೀಸುತ್ತಿದ್ದ ಶಿವರಾಮ್ ಹೆಬ್ಬಾರ್ ಮತ್ತು ಎಸ್‌ಟಿ ಸೋಮಶೇಖರ್‌ಗೆ ಶೋಕಾಸ್ ನೋಟಿಸ್ ನೀಡಿದ್ದು, 72 ಗಂಟೆಗಳಲ್ಲಿ ಉತ್ತರ ನೀಡುವಂತೆ ಸೂಚನೆ ನೀಡಿದೆ. ರ‍್ಯಾಪಿಡ್ ಆಕ್ಷನ್‌ನಲ್ಲಿ ಕ್ರಮಕ್ಕೆ ಮುಂದಾಗಿರುವ ಬಿಜೆಪಿ ಈ ಬೆಳವಣಿಗೆ ಬೆನ್ನಲ್ಲೇ ರಾಜ್ಯ ಬಿಜೆಪಿಗೆ ಅಧ್ಯಕ್ಷರ ನೇಮಕಕ್ಕೆ ಮುಂದಾಗಿದೆ ಎನ್ನಲಾಗಿದೆ. ಇದನ್ನೂ ಓದಿ: ಜಮೀನು ರಸ್ತೆಗಾಗಿ ಗಲಾಟೆ – ನಡುರಸ್ತೆಯಲ್ಲೇ ಚಿಕ್ಕಪ್ಪನ ಮೇಲೆ ಮಚ್ಚಿನಿಂದ ಹಲ್ಲೆ

    ರಾಜ್ಯಾಧ್ಯಕ್ಷರ ಆಯ್ಕೆಗೂ ಮುನ್ನ ಪಕ್ಷದಲ್ಲಿ ಗುಂಪುಗಾರಿಕೆ ನಡೆಸುತ್ತಿರುವ ಬಣಗಳಿಗೆ ದಂಡಂ ದಶಗುಣಂ ಅಸ್ತ್ರ ಪ್ರಯೋಗಿಸಿದ್ದು ಹೊಸ ಅಧ್ಯಕ್ಷರ ನೇಮಕದ ಬಳಿಕ ಯಾರೂ ತುಟಿ ಬಿಚ್ಚದಂತೆ ನೋಡಿಕೊಳ್ಳುವ ತಂತ್ರ ಎನ್ನಲಾಗುತ್ತಿದೆ. ಈ ನಡುವೆ ಪಕ್ಷದ ಮೂಲಗಳಿಂದ ಮಾಹಿತಿ ಸಿಕ್ಕಿದ್ದು ರಾಜ್ಯಧ್ಯಕ್ಷರ ಆಯ್ಕೆಗೆ ಚುನಾವಣೆ ನಡೆಸದೇ ಹೈಕಮಾಂಡ್ ನೇರ ರಾಜ್ಯಧ್ಯಕ್ಷರ ನೇಮಕ ಮಾಡಬಹುದು ಎನ್ನಲಾಗುತ್ತಿದೆ. ಇದನ್ನೂ ಓದಿ: ಕಮಕಾರಟ್ಟಿ ಘಾಟ್‌ನಲ್ಲಿ 3 KSRTC ಬಸ್‌, 3 ಲಾರಿ, 1 ಕಂಟೇನರ್‌, 1 ಬೈಕ್‌ ಮಧ್ಯೆ ಸರಣಿ ಅಪಘಾತ- ಎಲ್ಲರೂ ಪಾರು

    ಸದ್ಯ ಎಂ.ಪಿ ರೇಣುಕಾಚಾರ್ಯ, ಕಟ್ಟಾ ಸುಬ್ರಮಹ್ಮಣನಾಯ್ಡು, ಬಿ.ಪಿ ಹರೀಶ್‌ಗೆ ನೋಟಿಸ್ ನೀಡಿರುವುದು ಬಾಯಿ ಮುಚ್ಚಿಸುವ ತಂತ್ರ ಆದರೆ ಎಸ್‌ಟಿ ಸೋಮಶೇಖರ್ ಹಾಗೂ ಶಿವರಾಮ್ ಹೆಬ್ಬಾರ್‌ಗೆ ಉಚ್ಚಾಟನೆ ಎಚ್ಚರಿಕೆ ಎಂದು ವಿಶ್ಲೇಷಿಸಲಾಗುತ್ತಿದೆ. ಸದ್ಯ ಅದೇನೇ ಇದ್ದರೂ ಹೈಕಮಾಂಡ್ ನಡೆ ರಾಜ್ಯ ಬಿಜೆಪಿಯಲ್ಲಿ ಸಂಚಲನ ಮೂಡಿಸಿದೆ. ಇದನ್ನೂ ಓದಿ: ಯೆಮೆನ್ ಮೇಲೆ ಅಮೆರಿಕ ದಾಳಿಗೂ ಮುನ್ನವೇ ರಹಸ್ಯ ಲೀಕ್

  • ಸಚಿವ ಡಿಕೆ ಶಿವಕುಮಾರ್‌ಗೆ ಶೋಕಾಸ್ ನೋಟಿಸ್ ಜಾರಿ ಸಾಧ್ಯತೆ

    ಸಚಿವ ಡಿಕೆ ಶಿವಕುಮಾರ್‌ಗೆ ಶೋಕಾಸ್ ನೋಟಿಸ್ ಜಾರಿ ಸಾಧ್ಯತೆ

    ಬೆಂಗಳೂರು: ಲೋಕಸಭಾ ಚುನಾವಣೆಗೆ ಕೆಲವು ತಿಂಗಳು ಬಾಕಿ ಇರುವಾಗಲೇ ರಾಜ್ಯ ಕಾಂಗ್ರೆಸ್ ಟ್ರಬಲ್ ಶೂಟರ್, ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ಆದಾಯ ತೆರಿಗೆ ಇಲಾಖೆ (ಐಟಿ) ಶೋಕಾಸ್ ನೋಟಿಸ್ ಜಾರಿ ಮಾಡಲಿದೆ ಎಂದು ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

    ಡಿ.ಕೆ.ಶಿವಕುಮಾರ್ ಅವರು ಬೇರೆಯವರ ಹೆಸರಿನಲ್ಲಿ 36 ಕೋಟಿ ರೂ. ಮೌಲ್ಯದ ಬೇನಾಮಿ ಆಸ್ತಿ ಹೊಂದಿದ್ದಾರೆಂದು ಐಟಿ ಅಧಿಕಾರಿಗಳು ಪತ್ತೆ ಹಚ್ಚಿದ್ದರು. ಈ ಪ್ರಕಣದ ಕುರಿತು ವಿಚಾರಣೆ ನಡೆಸುವ ಉದ್ದೇಶದಿಂದ ಐಟಿ ಅಧಿಕಾರಿಗಳು ಶೋಕಾಸ್ ನೋಟಿಸ್ ನೀಡಲಿದ್ದಾರೆ. ಶೋಕಾಸ್ ನೋಟಿಸ್ ಜಾರಿಯಾದರೆ ಸಚಿವರು ನವದೆಹಲಿಯ ಆದಾಯ ತೆರಿಗೆ ಇಲಾಖೆ ಕೇಂದ್ರ ಕಚೇರಿಗೆ ಬಂದು ಉತ್ತರ ನೀಡಬೇಕಾಗುತ್ತದೆ. ಇದನ್ನೂ ಓದಿ: ಡಿಕೆ ಶಿವಕುಮಾರ್ ಮನೆಯಲ್ಲಿ ಸಿಕ್ಕಿತು 7.5 ಕೋಟಿ ರೂ. ಹಣ: ಮುಂದೆ ಈ ನಾಯಕರ ಮನೆ ಮೇಲೆ ದಾಳಿ?

    ಏನಿದು ಪ್ರಕರಣ?:
    ಐಟಿ ಅಧಿಕಾರಿಗಳು 2017 ಆಗಸ್ಟ್ 1ರಂದು ಸಚಿವ ಡಿಕೆ ಶಿವಕುಮಾರ್ ಆಪ್ತರು, ಸಂಬಂಧಿಕರು, ಪಾಲುದಾರಿಕೆ ಹೊಂದಿರುವ ಸಂಸ್ಥೆಗಳ ಮೇಲೆ ದಾಳಿ ನಡೆಸಿದ್ದರು. ಚೆನ್ನೈ, ದೆಹಲಿ, ಬೆಂಗಳೂರು, ಮೈಸೂರು, ಕನಕಪುರದ 60 ಸ್ಥಳಗಳ ಮೇಲೆ ದಾಳಿ ನಡೆದಿತ್ತು. ಚೆನ್ನೈ ಮೂಲದ ಎಲ್‍ಇಡಿ ಕಂಪನಿಯೊಂದರಲ್ಲಿ ಡಿಕೆಶಿ ಪಾಲುದಾರಿಕೆ ಇರುವ ಬಗ್ಗೆ ಅನುಮಾನ ಮೂಡಿದ ಹಿನ್ನೆಲೆಯಲ್ಲಿ ಆ ಕಂಪನಿಯನ್ನೂ ಐಟಿ ಅಧಿಕಾರಿಗಳು ತಪಾಸಣೆ ನಡೆಸಿದ್ದರು. ಈ ವೇಳೆ ಸಚಿವರು 36 ಕೋಟಿ ರೂ. ಮೌಲ್ಯದ ಬೇನಾಮಿ ಆಸ್ತಿ ಹೊಂದಿದ್ದಾರೆಂದು ಎಂದು ಪ್ರಕರಣ ದಾಖಲಿಸಿಕೊಂಡಿದ್ದರು. ಇದನ್ನೂ ಓದಿ: ಸ್ಯಾಂಡಲ್‍ವುಡ್ ಗೆ ಐಟಿ ಶಾಕ್, ಇತ್ತ ಡಿಕೆಶಿ ತಾಯಿಗೂ ಶಾಕ್

    ಈ ಸಂಬಂಧ 2017 ನವೆಂಬರ್ 6ರಂದು ಸಚಿವರ ತಾಯಿ ಗೌರಮ್ಮ, ಪತ್ನಿ ಉಷಾ, ಪುತ್ರಿ ಐಶ್ವರ್ಯ ಪ್ರತ್ಯೇಕವಾಗಿ ವಿಚಾರಣೆಗೆ ಹಾಜರಾಗಿ ಉತ್ತರಿಸಿದ್ದರು. ಈ ವೇಳೆ ಸರಿಯಾದ ಉತ್ತರ ಸಿಗದೇ ಇದ್ದ ಕಾರಣ ವಿಚಾರಣೆ ಮುಂದುವರಿದಿತ್ತು. ಕನಕಪುರ ತಾಲೂಕಿನ ದೊಡ್ಡ ಆಲಹಳ್ಳಿಯ ಡಿಕೆ ಶಿವಕುಮಾರಸ್ ಅವರ ಮನೆ ಹಾಗೂ ಕೋಡಿಹಳ್ಳಿಯ ಡಿ.ಕೆ.ಸುರೇಶ್ ಮನೆಗೆ ನಾಲ್ಕು ಜನ ಅಧಿಕಾರಿಗಳು ಜನವರಿ 2ರಂದು ಭೇಟಿ ನೀಡಿದ್ದರು. ಈ ವೇಳೆ ಮನೆಯಲ್ಲಿ ಯಾರೂ ಇಲ್ಲದ ಕಾರಣ ಸಚಿವ ಡಿ.ಕೆ.ಶಿವಕುಮಾರ್ ಮನೆಯ ಬಾಗಿಲಿಗೆ ನೋಟಿಸ್ ಅಂಟಿಸಿ ತೆರಳಿದ್ದರು. ಬಳಿಕ ತಾಯಿ ಗೌರಮ್ಮ ಆದಾಯ ತೆರಿಗೆ ಕಚೇರಿಗೆ ಆಗಮಿಸಿ ಉತ್ತರ ನೀಡಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಶಾಸಕ ಆನಂದ್ ಸಿಂಗ್‍ಗೆ ಬಿಜೆಪಿಯಿಂದ ಶೋಕಾಸ್ ನೋಟಿಸ್

    ಶಾಸಕ ಆನಂದ್ ಸಿಂಗ್‍ಗೆ ಬಿಜೆಪಿಯಿಂದ ಶೋಕಾಸ್ ನೋಟಿಸ್

    ಬೆಂಗಳೂರು: ಬಿಜೆಪಿ ಪಕ್ಷ ನಿಲುವಿಗೆ ವಿರುದ್ಧವಾಗಿ ಟಿಪ್ಪು ಜಯಂತಿಯಲ್ಲಿ ಭಾಗವಹಿಸಿದ್ದ ಹೊಸಪೇಟೆಯ ಶಾಸಕ ಆನಂದ್ ಸಿಂಗ್ ಅವರಿಗೆ ಬಿಜೆಪಿ ಶಿಸ್ತು ಸಮಿತಿ ಶೋಕಾಸ್ ನೋಟಿಸ್ ಜಾರಿ ಮಾಡಿದೆ.

    ಶಾಸಕ ಆನಂದ್ ಸಿಂಗ್ ಇಂದು ಬೆಳಗ್ಗೆ ಹೊಸಪೇಟೆಯಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು ಬಿಜೆಪಿ ನಾಯಕರಿಗೆ ಮುಜುಗರಕ್ಕೆ ಕಾರಣವಾಗಿತ್ತು. ಈ ಕುರಿತು 7 ದಿನಗಳಲ್ಲಿ ವಿವರಣೆ ನೀಡುವಂತೆ ರಾಜ್ಯ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಶಂಕರಪ್ಪ ಅವರು ನೋಟಿಸ್ ಜಾರಿ ಮಾಡಿದ್ದಾರೆ.

    ಟಿಪ್ಪು ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು ಮಾತ್ರವಲ್ಲೇ ಅದನ್ನು ಬಹಿರಂಗವಾಗಿ ಸಮರ್ಥನೆ ಮಾಡಿಕೊಂಡ ಹಿನ್ನೆಲೆಯಲ್ಲಿ ನೋಟಿಸ್ ಜಾರಿ ಮಾಡಲಾಗಿದೆ ಎಂದು ರಾಜ್ಯ ಬಿಜೆಪಿಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿ ತಿಳಿಸಿದ್ದಾರೆ.

    ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದರ ಬಗ್ಗೆ ಪ್ರತಿಕ್ರಿಯಿಸಿದ್ದ ಆನಂದ್ ಸಿಂಗ್, ಎಲ್ಲ ಜಯಂತಿಯಲ್ಲಿ ನಾನು ಪಾಲ್ಗೊಳ್ಳುತ್ತೇನೆ. ಎಲ್ಲ ಜಯಂತಿಯಂತೆ ಟಿಪ್ಪು ಜಯಂತಿ ಕೂಡ ಒಂದು. ವಿಜಯನಗರ ಕ್ಷೇತ್ರದಲ್ಲಿ ಭೇದಭಾವವಿಲ್ಲ. ಕ್ಷೇತ್ರದ ಜನರ ಇಚ್ಛೆಯಂತೆ ಪಾಲ್ಗೊಂಡಿದ್ದೇನೆ. ಟಿಪ್ಪು ಜಯಂತಿಯಲ್ಲಿ ಪಾಲ್ಗೊಳ್ಳಬಾರದು ಎಂದು ಯಾರು ಹೇಳಿಲ್ಲ. ಕೃಷ್ಣದೇವರಾಯರ ಆಳ್ವಿಕೆಯಲ್ಲಿ ಎಲ್ಲರನ್ನು ಒಂದೇ ರೀತಿ ನೋಡಲಾಗುತ್ತಿತ್ತು. ಇದರಲ್ಲಿ ಯಾವುದೇ ರಾಜಕೀಯವಿಲ್ಲ ಎಂದು ತಮ್ಮ ನಡೆಯನ್ನು ಸಮರ್ಥಿಸಿಕೊಂಡಿದ್ದರು.

    ಹೊಸಪೇಟೆಯಲ್ಲಿ ಸರ್ಕಾರದಿಂದ ಆಚರಿಸುತ್ತಿರುವ ಟಿಪ್ಪು ಜಯಂತಿ ಕಾರ್ಯಕ್ರಮದಲ್ಲಿ ಶಾಸಕ ಆನಂದ ಸಿಂಗ್ ಅನಾರೋಗ್ಯದ ಮಧ್ಯೆಯೂ ಪಾಲ್ಗೊಂಡು ಅಚ್ಚರಿ ಮೂಡಿಸಿದ್ದರು.

    ಬಳ್ಳಾರಿಯ ಸಂಸದ ಶ್ರೀರಾಮುಲು ಹಾಗೂ ಜನಾರ್ದನ ರೆಡ್ಡಿ ಅವರ ಪರಮಾಪ್ತನಾಗಿರುವ ಪಾಲಿಕೆಯ ಸದಸ್ಯ ಗೋವಿಂದರಾಜಲು ನೇತೃತ್ವದಲ್ಲಿ ಬಿಜೆಪಿ ಕಚೇರಿಯ ಮುಂಭಾಗ ಟಿಪ್ಪು ಜಯಂತಿಯನ್ನು ಆಚರಣೆ ಮಾಡಲಾಗಿತ್ತು.

    ಕಚೇರಿಯಲ್ಲಿ ಟಿಪ್ಪು ಜಯಂತಿ ಆಚರಣೆ ಮಾಡಲು ಬಿಜೆಪಿಯ ಅಲ್ಪಸಂಖ್ಯಾತ ವಿಭಾಗದ ಕಾರ್ಯಕರ್ತರು ಕಳೆದ ರಾತ್ರಿಯೇ ಸಂಸದ ಶ್ರೀರಾಮುಲು ಅನುಮತಿ ಸಹ ಪಡೆದುಕೊಂಡಿದ್ದಾರೆ ಎನ್ನಲಾಗಿದೆ. ನಾಯಕರು ಬಳ್ಳಾರಿಯಲ್ಲಿ ಮುಸ್ಲಿಂ ಮತಗಳನ್ನು ಪಡೆಯಲು ಇಬ್ಬಗೆಯ ನೀತಿ ಅನುಸರಿಸುತ್ತಿರುವುದು ಬಿಜೆಪಿಯ ಹಿರಿಯ ನಾಯಕರ ಅಸಮಾಧಾನಕ್ಕೆ ಕಾರಣವಾಗಿತ್ತು.