ಮುಂಬೈ: ಮಹಾರಾಷ್ಟ್ರ (Maharashtra) ಮಾಜಿ ಸಚವ ಹಾಗೂ ಎನ್‌ಸಿಪಿ (NCP) ನಾಯಕ ಬಾಬಾ ಸಿದ್ದಿಕಿ ಹತ್ಯೆ ಪ್ರಕರಣದ (Baba Siddique Murder Case) ಹಂತಕರು ರಾಯಗಢ ಜಲಪಾತದ (Raigad Falls) ಬಳಿ ಶೂಟಿಂಗ್ ಅಭ್ಯಾಸ ನಡೆಸಿದ್ದರು ಎಂದು ಪೊಲೀಸ್ ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.
ಅ.12 ರಂದು ನಡೆದ ಬಾಬಾ ಸಿದ್ದಿಕಿ ಕೊಲೆ ಪ್ರಕರಣದ ಸಂಬಂಧ ಮುಂಬೈ ಕ್ರೈಂ ಬ್ರ್ಯಾಂಚ್ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈಗಾಗಲೇ ಪ್ರಕರಣದಲ್ಲಿ 10 ಜನರನ್ನು ಬಂಧಿಸಲಾಗಿದ್ದು, ಪರಾರಿಯಾಗಿರುವ ಇನ್ನೋರ್ವ ಆರೋಪಿ ಶಿವಕುಮಾರ್ ಎಂಬುವವನನ್ನು ಪೊಲೀಸರು ಪತ್ತೆ ಹಚ್ಚುವಲ್ಲಿ ನಿರತರಾಗಿದ್ದಾರೆ.ಇದನ್ನೂ ಓದಿ: ಆಪರೇಷನ್ ಆಲೌಟ್ ಜೆಡಿಎಸ್ – ಸಿಎಂ ಮುಂದೆ ಡಿಕೆಶಿ ಶಪಥ
ಇದಕ್ಕೂ ಮುನ್ನ ಹತ್ಯೆಯ ಮೂರು ಆರೋಪಿಗಳಾದ ಧರ್ಮರಾಜ್ ಕಶ್ಯಪ್, ಗುರ್ಮೈಲ್ ಸಿಂಗ್ ಮತ್ತು ಪರಾರಿಯಾಗಿರುವ ಶಿವಕುಮಾರ್ ಯೂಟ್ಯೂಬ್ ನೋಡಿ ಶೂಟಿಂಗ್ ಕಲಿತಿದ್ದರು ಎಂದು ತನಿಖೆಯ ವೇಳೆ ಬೆಳಕಿಗೆ ಬಂದಿತ್ತು. ಇದೀಗ ಇನ್ನೊಂದು ಮಾಹಿತಿ ಲಭಿಸಿದ್ದು, ಹಂತಕರು ರಾಯಗಢ ಜಲಪಾತದ ಬಳಿ ಶೂಟಿಂಗ್ ಅಭ್ಯಾಸ ನಡೆಸುತ್ತಿದ್ದರು.
ಸೆಪ್ಟೆಂಬರ್ ತಿಂಗಳಲ್ಲಿ ಮುಂಬೈನ (Mumbai) ಹೊರವಲಯದಲ್ಲಿರುವ ಕರ್ಜತ್ ಎಂಬ ಪ್ರದೇಶದ ಬಳಿಯಿರುವ ಜಲಪಾತದ ಬಳಿ ಶೂಟಿಂಗ್ ಅಭ್ಯಾಸ ನಡೆಸುತ್ತಿದ್ದರು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬಾಬಾ ಸಿದ್ದಿಕಿಯನ್ನು ಹತ್ಯೆಮಾಡಲು ಥಾಣೆ ಮೂಲದ ನಿತಿನ್ ಸಪ್ರೆ, ರಾಮ್ ಕನೂಜಿಯಾ ನೇತೃತ್ವದ ಐದು ಸದಸ್ಯರ ತಂಡಕ್ಕೆ ಸುಪಾರಿಯನ್ನು ನೀಡಲಾಗಿತ್ತು. ಜೊತೆಗೆ ಅಪರಾಧಕ್ಕೆ ಬಳಸಲಾದ ಪಿಸ್ತೂಲ್‌ಗಳನ್ನು ಕೂಡ ರಾಜಸ್ಥಾನದಿಂದ ತರಿಸಲಾಗಿತ್ತು. ಸುಪಾರಿಗಾಗಿ 50 ಲಕ್ಷ ರೂ.ಯನ್ನು ಇರಿಸಲಾಗಿದ್ದು, ಈ ಮೊತ್ತದ ಬೇಡಿಕೆಯಲ್ಲಿ ಭಿನ್ನಾಭಿಪ್ರಾಯ ಉಂಟಾದ ಕಾರಣ ಈ ತಂಡ ಹಿಂದೆ ಸರಿಯಿತು.
ಮುಂಬೈ: ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದಿಕಿ ಅವರ ಹತ್ಯೆಯ ಹೊಣೆಯನ್ನು ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ (Lawrence Bishnoi Gang) ಭಾನುವಾರ (ಇಂದು) ಹೊತ್ತುಕೊಂಡಿದೆ. 66 ವರ್ಷದ ಹಿರಿಯ ರಾಜಕಾರಣಿಯನ್ನು ಶನಿವಾರ ರಾತ್ರಿ ದಸರಾ ಆಚರಣೆಯ ಸಂದರ್ಭದಲ್ಲಿ ಮುಂಬೈನ (Mumbai) ಬಾಂದ್ರಾದಲ್ಲಿರುವ ಅವರ ಕಚೇರಿಯ ಹೊರಗೆ ಗುಂಡಿಕ್ಕಿ ಹತ್ಯೆಮಾಡಲಾಗಿತ್ತು.
2 ತಿಂಗಳ ಹಿಂದೆಯೇ ಸ್ಕೆಚ್:
ಸಿದ್ದಿಕಿ ಹತ್ಯೆಗೆ 2 ತಿಂಗಳ ಹಿಂದೆಯೇ ಸ್ಕೆಚ್ ಹಾಕಲಾಗಿತ್ತು. ಸತತವಾಗಿ ಅವರ ಚಲವಲಗಳ ಮೇಲೆ ಗ್ಯಾಂಗ್‌ನವರು ನಿಗಾ ಇರಿಸಿದ್ದರು ಎಂದು ಪೊಲೀಸ್ (Mumbai Police) ಮೂಲಗಳಿಂದ ತಿಳಿದುಬಂದಿದೆ. ಈ ಪ್ರಕರಣದಲ್ಲಿ ಹರಿಯಾಣ ಹಾಗೂ ಉತ್ತರ ಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನ ಬಂಧಿಸಲಾಗಿದ್ದು, ಮತ್ತೊಬ್ಬ ಆರೋಪಿಗಾಗಿ ವಿಶೇಷ ತಂಡಗಳ ಮೂಲಕ ಶೋಧ ನಡೆಸಲಾಗುತ್ತಿದೆ. ಇದನ್ನೂ ಓದಿ: ಭಾಗಮತಿ ಎಕ್ಸ್‌ಪ್ರೆಸ್ ರೈಲು ದುರಂತ – 18 ಗಂಟೆಗಳ ಬಳಿಕ ತೆರವು ಕಾರ್ಯಾಚರಣೆ ಯಶಸ್ವಿ
50,000ಕ್ಕೆ ಕಿಲ್ಲಿಂಗ್ ಕಾಂಟ್ರ್ಯಾಕ್ಟ್
ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿರುವ ಪೊಲೀಸರು ಸ್ಫೋಟಕ ವಿಚಾರಗಳನ್ನ ಬಯಲಿಗೆಳೆದಿದ್ದಾರೆ. ತನಿಖೆ ವೇಳೆ ಈ ಪ್ರಕರಣದ ಮಾಸ್ಟರ್ ಮೈಂಡ್ ಅಜ್ಞಾತ ಸ್ಥಳದಲ್ಲಿದ್ದುಕೊಂಡೇ ಹಂತಕರಿಗೆ ಹಣ ನೀಡುತ್ತಿದ್ದ ಎಂಬ ವಿಚಾರವೂ ಬೆಳಕಿಗೆ ಬಂದಿದೆ. ಮುಂಬೈ ಪೊಲೀಸ್ ಮೂಲಗಳ ಪ್ರಕಾರ, ಮೂವರು ಕೊಲೆ ಆರೋಪಿಗಳು ಪಂಜಾಬ್ ಜೈಲಿಯಲ್ಲಿ ಭೇಟಿಯಾಗಿದ್ದರು. ಕಳೆದ ಸೆಪ್ಟೆಂಬರ್ 2 ರಿಂದ ಕುರ್ಲಾದಲ್ಲಿ ತಿಂಗಳಿಗೆ 14,000 ರೂ.ನೀಡುವ ಮನೆ ಬಾಡಿಗೆ ಪಡೆದು ವಾಸವಿದ್ದರು. ಸಿದ್ದಿಕ್ಕಿ ಹತ್ಯೆಗೆ ಅಲ್ಲಿಯೇ ಸಂಚು ರೂಪಿಸಿದ್ದರು. ಮೂವರು ಆರೋಪಿಗಳು ತಲಾ 50 ಸಾವಿರ ರೂ.ಗೆ ಗುತ್ತಿಗೆ ಪಡೆದಿದ್ದರು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಚುನಾವಣಾ ಫಲಿತಾಂಶದ ದಿನ ವಾಟ್ಸಪ್ ಗ್ರೂಪ್‌ನಲ್ಲಿ ಹರಿಯಾಣ ಸಿಎಂಗೆ ಕೊಲೆ ಬೆದರಿಕೆ – ಆರೋಪಿ ಅರೆಸ್ಟ್
ಬಿಷ್ಣೋಯ್ ಗ್ಯಾಂಗ್‌ನಲ್ಲಿದ್ದಾರೆ 700 ಶೂಟರ್ಸ್:
ಡಜನ್ ಗಟ್ಟಲೇ ಕ್ರಿಮಿನಲ್ ಮೊಕದ್ದಮೆಗಳನ್ನು ಎದುರಿಸುತ್ತಿರುವ ಲಾರೆನ್ಸ್ ಬಿಷ್ಣೋಯ್ ಪ್ರಸ್ತುತ ಗುಜರಾತ್ ಜೈಲಿನಲ್ಲಿದ್ದಾನೆ. ಆದ್ರೆ ಅವನ ಗ್ಯಾಂಗ್‌ನಿಂದ ಉದ್ಯಮಿಗಳು, ಪ್ರಮುಖ ವ್ಯಕ್ತಿಗಳಿಗೆ ಬೆದರಿಕೆ ಕರೆಗಳು ಬರುತ್ತಲೇ ಇವೆ. ಸದ್ಯ ಬಿಷ್ಣೋಯ್ ಗ್ಯಾಂಗ್‌ನಲ್ಲಿ 700ಕ್ಕೂ ಹೆಚ್ಚು ಶೂಟರ್‌ಗಳಿದ್ದಾರೆ. ದೇಶಾದ್ಯಂತ ಅನೇಕ ಸಣ್ಣ ಮತ್ತು ದೊಡ್ಡ ಕ್ರಿಮಿನಲ್‌ಗಳು ಅವನಿಗಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಪೊಲೀಸ್ ಮೂಲಗಳು ಸೂಚಿಸುತ್ತವೆ.
ಬಾಂದ್ರಾ ಪೂರ್ವದ ಶಾಸಕರಾಗಿರುವ ಅವರ ಪುತ್ರ ಜೀಶಾನ್ ಅವರ ಕಚೇರಿಯಲ್ಲಿ ಶನಿವಾರ ರಾತ್ರಿ 9:30ರ ಸುಮಾರಿಗೆ ಸಿದ್ದಿಕಿ ಮೇಲೆ ಮೂರು ಗುಂಡುಗಳನ್ನು ಹಾರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ. ಸಿದ್ದಿಕಿ ಮೇಲೆ ದುಷ್ಕರ್ಮಿಗಳು ಮೂರು ಗುಂಡುಗಳನ್ನು ಹಾರಿಸಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಮಾಜಿ ಸಚಿವರನ್ನು ಲೀಲಾವತಿ ಆಸ್ಪತ್ರೆಗೆ ಸಾಗಿಸಲಾಯಿತು. ಒಂದು ಗುಂಡು ಎದೆಗೆ ತಗುಲಿದ್ದರಿಂದ ಅವರು ಸಾವಿಗೀಡಾಗಿದ್ದಾರೆ.
ಏನಾಗಿತ್ತು?
ಮುಂಬೈನ ಬಾಂದ್ರಾ ಪೂರ್ವದ ಶಾಸಕರಾಗಿರುವ ಅವರ ಪುತ್ರ ಜೀಶಾನ್ ಅವರ ಕಚೇರಿಯಲ್ಲಿ ಶನಿವಾರ ರಾತ್ರಿ 9:30ರ ಸುಮಾರಿಗೆ ಸಿದ್ದಿಕಿ ಮೇಲೆ ಮೂರು ಗುಂಡುಗಳನ್ನು ಹಾರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ. ಸಿದ್ದಿಕಿ ಮೇಲೆ ದುಷ್ಕರ್ಮಿಗಳು ಮೂರು ಗುಂಡುಗಳನ್ನು ಹಾರಿಸಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಮಾಜಿ ಸಚಿವರನ್ನು ಲೀಲಾವತಿ ಆಸ್ಪತ್ರೆಗೆ ಸಾಗಿಸಲಾಯಿತು. ಒಂದು ಗುಂಡು ಎದೆಗೆ ತಗುಲಿದ್ದರಿಂದ ಅವರು ಸಾವಿಗೀಡಾಗಿದ್ದಾರೆ. ಬಾಂದ್ರಾ ಪಶ್ಚಿಮದಿಂದ ಮೂರು ಬಾರಿ ಶಾಸಕರಾಗಿದ್ದ ಸಿದ್ದಿಕಿ ಅವರು 48 ವರ್ಷಗಳ ಕಾಲ ಕಾಂಗ್ರೆಸ್‌ನೊಂದಿಗೆ ಗುರುತಿಸಿಕೊಂಡಿದ್ದರು. ಫೆಬ್ರವರಿಯಲ್ಲಿ ಪಕ್ಷವನ್ನು ತೊರೆದು ಅಜಿತ್ ಪವಾರ್ ಅವರ ಎನ್‌ಸಿಪಿಗೆ ಸೇರಿದ್ದರು. ಜೀಶನ್ ಸಿದ್ದಿಕಿ ಅವರನ್ನು ಆಗಸ್ಟ್‌ನಲ್ಲಿ ಕಾಂಗ್ರೆಸ್‌ನಿಂದ ಉಚ್ಛಾಟಿಸಲಾಗಿತ್ತು.
– ಬಿಷ್ಣೋಯ್ ಗ್ಯಾಂಗ್‌ನಲ್ಲಿದ್ದಾರೆ 700 ಶೂಟರ್ಸ್: ಪೊಲೀಸರಿಂದ ಮಾಹಿತಿ
ಮುಂಬೈ: ಮಹಾರಾಷ್ಟ್ರದ ಮಾಜಿ ಸಚಿವ ಮತ್ತು ಎನ್‌ಸಿಪಿಯ ಅಜಿತ್ ಪವಾರ್ ಬಣದ ನಾಯಕ ಬಾಬಾ ಸಿದ್ದಿಕಿ (66) (Baba Siddique) ಅವರು ಮುಂಬೈನ ಬಾಂದ್ರಾದಲ್ಲಿ ಗುಂಡಿನ ದಾಳಿಯಿಂದ ಸಾವನ್ನಪ್ಪಿದ್ದಾರೆ. ಇವರ ಹತ್ಯೆ ಹಿಂದೆ ಬಿಷ್ಣೋಯ್ ಗ್ಯಾಂಗ್ (Lawrence Bishnoi Gang) ಕೈವಾಡ ಇದೆ ಎಂದು ತಿಳಿದುಬಂದಿದೆ.
ಹೌದು. ತೀವ್ರ ಗಾಯಗೊಂಡಿದ್ದ ಅವರನ್ನ ಕೂಡಲೇ ಆಸ್ಪತ್ರೆಗೆ ದಾಖಲಿಸತಾಗಿತ್ತಾದರೂ, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಘಟನೆ ಬಳಿಕ ಹರಿಯಾಣದ ಕರ್ನೈಲ್ ಸಿಂಗ್ ಮತ್ತು ಉತ್ತರ ಪ್ರದೇಶದ ಧರ್ಮರಾಜ್ ಕಶ್ಯಪ್ ಎಂದು ಗುರುತಿಸಲಾದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ವಿಚಾರಣೆ ವೇಳೆ ಅವರಿಬ್ಬರೂ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ಗೆ ಸೇರಿದವರು ಎಂದು ಹೇಳಿಕೊಂಡಿದ್ದಾರೆಂದು ಪೊಲೀಸ್ (Mumbai Police) ಮೂಲಗಳು ತಿಳಿಸಿವೆ. ಕಳೆದ ಒಂದು ತಿಂಗಳಿನಿಂದ ಸಿದ್ದಿಕ್‌ನ ಚಲನವಲನಗಳ ಮೇಲೆ ನಿಗಾ ಇರಿಸಿದ್ದಾಗಿಯೂ ಒಪ್ಪಿಕೊಂಡಿದ್ದಾರೆ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಉತ್ತರ ಪ್ರದೇಶ| ಮಗಳನ್ನು ಹಗ್ಗದಲ್ಲಿ ತಲೆಕೆಳಗಾಗಿ ನೇತುಹಾಕಿ ಮನಬಂದಂತೆ ಥಳಿಸಿದ ತಂದೆ
ಪ್ರಕರಣದ ತನಿಖೆ ಕೈಗೊಂಡಿರುವ ಮುಂಬೈ ಪೊಲೀಸರು 4 ವಿಶೇಷ ತಂಡಗಳನ್ನ ರಚಿಸಿ ತನಿಖೆ ನಡೆಸುತ್ತಿದ್ದಾರೆ. ಹರಿಯಾಣ ಹಾಗೂ ಉತ್ತರ ಪ್ರದೇಶದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, 3ನೇ ಆರೋಪಿಗಾಗಿ ಶೂಧ ನಡೆಸಲಾಗುತ್ತಿದೆ. ಆದಾಗ್ಯೂ ಸಿದ್ದಿಕ್ ಅವರ ಬಗ್ಗೆ ಬೇರೊಬ್ಬರು ಮಾಹಿತಿ ನೀಡಿರುವ ಬಗ್ಗೆ ಶಂಕೆ ವ್ಯಕ್ತಪಡಿಸಿದ್ದಾರೆ. ಮುಂಬೈ ಪೊಲೀಸ್ ಕ್ರೈಂ ಬ್ರಾಂಚ್ ವಿಚಾರಣೆಯಲ್ಲಿ, ಬಂಧಿತರಿಬ್ಬರು ಕಳೆದ ಒಂದು ತಿಂಗಳಿನಿಂದ ಸಿದ್ದಿಕ್‌ನ ಚಲನವಲನಗಳ ಮೇಲೆ ನಿಗಾ ಇರಿಸಿದ್ದಾಗಿಯೂ ಒಪ್ಪಿಕೊಂಡಿದ್ದಾರೆ. ಶನಿವಾರ ರಾತ್ರಿ ಮೂವರು ಘಟನಾ ಸ್ಥಳಕ್ಕೆ ಆಟೋದಲ್ಲಿ ಬಂದು ಸಿದ್ದಿಕ್‌ಗಾಗಿ ಕಾಯುತ್ತಿದ್ದರು ಅನ್ನೋದು ಸಿಸಿಟಿವಿ ದೃಶ್ಯಾವಳಿಗಳಿಂದ ತಿಳಿದುಬಂದಿದೆ.
ಸದ್ಯ ಪೋಲೀಸರು ಪ್ರಕರಣವನ್ನು 2 ಆಯಾಮಗಳಿಂದ ತನಿಖೆ ನಡೆಸುತ್ತಿದ್ದಾರೆ. ಒಂದು ಬಿಷ್ಣೋಯ್ ಗ್ಯಾಂಗ್, ಮತ್ತೊಂದು ಸ್ಲಂ ಪುನರ್ವಸತಿ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿದ್ದಾರೆ. ಕೆಲ ದಿನಗಳ ಹಿಂದೆಯಷ್ಟೇ ನಟ ಸಲ್ಮಾನ್ ಖಾನ್ ಅವರಿಗೆ ಕೊಲೆ ಬೆದರಿಕೆ ಬಂದಿದ್ದರಿಂದ ಅವರಿಗೆ ವೈ ಕೆಟಗರಿ ಭದ್ರತೆ ನೀಡಲಾಗಿದೆ. ಆದ್ರೆ ಸಿದ್ದಿಕ್ ಅವರಿಗೆ ಯಾವುದೇ ಬೆರಿಕೆಗಳೂ ಬಂದಿರಲಿಲ್ಲ ಎನ್ನಲಾಗಿದೆ. ಪ್ರಕರಣದ ತನಿಖೆ ಕುರಿತು ಕೇಂದ್ರ ಏಜೆನ್ಸಿಗಳು ಮುಂಬೈ ಪೊಲೀಸರೊಂದಿಗೆ ಸಂಪರ್ಕದಲ್ಲಿದ್ದು, ಗುಜರಾತ್ ಮತ್ತು ದೆಹಲಿಯ ಪೊಲೀಸರು ಕೂಡ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.
ಸ್ಫೋಟಕ ಮಾಹಿತಿ:
ಡಜನ್ ಗಟ್ಟಲೇ ಕ್ರಿಮಿನಲ್ ಮೊಕದ್ದಮೆಗಳನ್ನು ಎದುರಿಸುತ್ತಿರುವ ಲಾರೆನ್ಸ್ ಬಿಷ್ಣೋಯ್ ಪ್ರಸ್ತುತ ಗುಜರಾತ್ ಜೈಲಿನಲ್ಲಿದ್ದಾನೆ. ಆದ್ರೆ ಅವನ ಗ್ಯಾಂಗ್‌ನಿಂದ ಉದ್ಯಮಿಗಳು, ಪ್ರಮುಖ ವ್ಯಕ್ತಿಗಳಿಗೆ ಬೆದರಿಕೆ ಕರೆಗಳು ಬರುತ್ತಲೇ ಇವೆ. ಸದ್ಯ ಬಿಷ್ಣೋಯ್ ಗ್ಯಾಂಗ್‌ನಲ್ಲಿ 700ಕ್ಕೂ ಹೆಚ್ಚು ಶೂಟರ್‌ಗಳಿದ್ದಾರೆ. ದೇಶಾದ್ಯಂತ ಅನೇಕ ಸಣ್ಣ ಮತ್ತು ದೊಡ್ಡ ಕ್ರಿಮಿನಲ್‌ಗಳು ಅವನಿಗಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಪೊಲೀಸ್ ಮೂಲಗಳು ಸೂಚಿಸುತ್ತವೆ. ಇದನ್ನೂ ಓದಿ: ಬಾಲಸೋರ್ ಅಪಘಾತದ ಬಳಿಕವೂ ಸರ್ಕಾರ ಎಚ್ಚೆತ್ತುಕೊಂಡಿಲ್ಲ: ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಕಿಡಿ
ಬಾಂದ್ರಾ ಪೂರ್ವದ ಶಾಸಕರಾಗಿರುವ ಅವರ ಪುತ್ರ ಜೀಶಾನ್ ಅವರ ಕಚೇರಿಯಲ್ಲಿ ಶನಿವಾರ ರಾತ್ರಿ 9:30ರ ಸುಮಾರಿಗೆ ಸಿದ್ದಿಕಿ ಮೇಲೆ ಮೂರು ಗುಂಡುಗಳನ್ನು ಹಾರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ. ಸಿದ್ದಿಕಿ ಮೇಲೆ ದುಷ್ಕರ್ಮಿಗಳು ಮೂರು ಗುಂಡುಗಳನ್ನು ಹಾರಿಸಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಮಾಜಿ ಸಚಿವರನ್ನು ಲೀಲಾವತಿ ಆಸ್ಪತ್ರೆಗೆ ಸಾಗಿಸಲಾಯಿತು. ಒಂದು ಗುಂಡು ಎದೆಗೆ ತಗುಲಿದ್ದರಿಂದ ಅವರು ಸಾವಿಗೀಡಾಗಿದ್ದಾರೆ.
ಬಾಂದ್ರಾ ಪಶ್ಚಿಮದಿಂದ ಮೂರು ಬಾರಿ ಶಾಸಕರಾಗಿದ್ದ ಸಿದ್ದಿಕಿ ಅವರು 48 ವರ್ಷಗಳ ಕಾಲ ಕಾಂಗ್ರೆಸ್‌ನೊಂದಿಗೆ ಗುರುತಿಸಿಕೊಂಡಿದ್ದರು. ಫೆಬ್ರವರಿಯಲ್ಲಿ ಪಕ್ಷವನ್ನು ತೊರೆದು ಅಜಿತ್ ಪವಾರ್ ಅವರ ಎನ್‌ಸಿಪಿಗೆ ಸೇರಿದ್ದರು. ಜೀಶನ್ ಸಿದ್ದಿಕಿ ಅವರನ್ನು ಆಗಸ್ಟ್‌ನಲ್ಲಿ ಕಾಂಗ್ರೆಸ್‌ನಿಂದ ಉಚ್ಛಾಟಿಸಲಾಗಿತ್ತು. ಇದನ್ನೂ ಓದಿ: ಬಾಂಗ್ಲಾದೇಶದಲ್ಲಿ ನಡೆಯುತ್ತಿರುವುದು ಭಾರತದ ಹಿಂದೂಗಳಿಗೂ ಒಂದು ಪಾಠ: ಮೋಹನ್ ಭಾಗವತ್
ಜೈಪುರ: ರಾಷ್ಟ್ರೀಯ ರಜಪೂತ ಕರ್ಣಿ ಸೇನಾ (Rashtriya Rajput Karni Sena) ಮುಖ್ಯಸ್ಥ ಸುಖದೇವ್ ಸಿಂಗ್ ಗೊಗಮೆಡಿ (Sukhdev Singh Gogamedi) ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹತ್ಯೆಯಲ್ಲಿ ಭಾಗಿಯಾಗಿದ್ದ ಇಬ್ಬರು ಶೂಟರ್‌ಗಳು ಮತ್ತು ಒಬ್ಬ ಸಹಚರನನ್ನು ಪೊಲೀಸರು ಬಂಧಿಸಿದ್ದಾರೆ.
ದೆಹಲಿ ಕ್ರೈಂ ಬ್ರಾಂಚ್ ಮತ್ತು ರಾಜಸ್ಥಾನ ಪೊಲೀಸರು (Rajasthan Police) ತಡರಾತ್ರಿ ಜಂಟಿ ಕಾರ್ಯಾಚರಣೆ ನಡೆಸಿ ಚಂಡೀಗಢದಲ್ಲಿ (Chandigarh) ಆರೋಪಿಗಳನ್ನು ಬಂಧಿಸಿದ್ದಾರೆ. ಶೂಟರ್‌ಗಳಾದ ರೋಹಿತ್ ರಾಥೋಡ್, ನಿತಿನ್ ಫೌಜಿ ಹಾಗೂ ಸಹಚರ ಉಧಮ್ ಬಂಧಿತ ಆರೋಪಿಗಳು. ಈ ಹತ್ಯೆ ಪ್ರಕರಣದಲ್ಲಿ ಉಧಮ್ ಪಾತ್ರ ಏನು ಎಂಬುದನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ.
ದೆಹಲಿ ಪೊಲೀಸರು ರೋಹಿತ್ ಮತ್ತು ಉಧಮ್‌ನನ್ನು ದೆಹಲಿಗೆ ಕರೆತಂದಿದ್ದು, ನಿತಿನ್ ಫೌಜಿ ರಾಜಸ್ಥಾನ ಪೊಲೀಸರ ವಶದಲ್ಲಿದ್ದಾನೆ. ಈ ಹಿಂದೆ ಪ್ರಕರಣದ ಆರೋಪಿಗಳ ಬಗ್ಗೆ ಮಾಹಿತಿ ನೀಡಿದವರಿಗೆ 5 ಲಕ್ಷ ರೂ. ನಗದು ಬಹುಮಾನವನ್ನು ಪೊಲೀಸರು ಘೋಷಿಸಿದ್ದರು.
ಆರೋಪಿಗಳು ಕೊಲೆಯ ಬಳಿಕ ತಮ್ಮ ಶಸ್ತ್ರಾಸ್ತ್ರಗಳನ್ನು ಬಚ್ಚಿಟ್ಟು ರಾಜಸ್ಥಾನದ ಹರಿಯಾಣದ ಹಿಸ್ಸಾರ್‌ಗೆ ತೆರಳಿದ್ದರು. ಬಳಿಕ ಹಿಮಾಚಲ ಪ್ರದೇಶದ ಮನಾಲಿಗೆ ಹೋಗಿದ್ದರು. ನಂತರ ಚಂಡೀಗಢಕ್ಕೆ ಹೋಗಿದ್ದ ವೇಳೆ ಸಿಕ್ಕಿಬಿದ್ದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಕಡಲಾಮೆಗಳಿಗಾಗಿ 3 ತಿಂಗಳು ಕ್ಷಿಪಣಿ ಪರೀಕ್ಷೆ ಬಂದ್
ಡಿಸೆಂಬರ್ 5 ರಂದು ರಾಜಸ್ಥಾನದ ಜೈಪುರದಲ್ಲಿರುವ ಗೊಗಮೆಡಿ ಅವರ ಮನೆಗೆ ನುಗ್ಗಿದ ಅಪರಿಚಿತರು ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದರು. ಹತ್ಯೆಯ ಬಳಿಕ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನೊಂದಿಗೆ ಸಂಬಂಧ ಹೊಂದಿರುವ ಗ್ಯಾಂಗ್ಸ್ಟರ್ ರೋಹಿತ್ ಗೋಡಾರಾ ತನ್ನ ಸಾಮಾಜಿಕ ಮಾಧ್ಯಮ ಪೋಸ್ಟ್ ಮೂಲಕ ಗೊಗಮೆಡಿ ಹತ್ಯೆಯ ಹೊಣೆಯನ್ನು ಹೊತ್ತುಕೊಂಡಿದ್ದಾನೆ.
ನವದೆಹಲಿ: ಪಂಜಾಬ್‍ನ ಖ್ಯಾತ ಗಾಯಕ ಹಾಗೂ ಕಾಂಗ್ರೆಸ್ ನಾಯಕ ಸಿಧು ಮೂಸೆವಾಲಾ ಅವರನ್ನು ಗುಂಡಿಕ್ಕಿ ಕೊಂದ ಆರೋಪಿಗಳ ಗ್ಯಾಂಗ್ ಕಾರಿನಲ್ಲಿ ಗನ್‍ಗಳನ್ನು ತೋರಿಸುತ್ತ ಸಂಭ್ರಮಿಸುತ್ತಿರುವ ವೀಡಿಯೋ ಒಂದು ವೈರಲ್ ಆಗುತ್ತಿದೆ.
ಸಿಧು ಮೂಸೆವಾಲಾ ಹತ್ಯೆಗೆ ಸಂಬಂಧಿಸಿದಂತೆ ಇಂದು ದೆಹಲಿ ಪೊಲೀಸರ ತಂಡ ಲಾರೆನ್ಸ್ ಬಿಷ್ಣೋಯ್ ಗೋಲ್ಡಿ ಬ್ರಾರ್ ಗ್ಯಾಂಗ್‍ಗೆ ಸೇರಿದ ನಾಲ್ವರು ಆರೋಪಿಗಳನ್ನು ಬಂಧಿಸಿದ್ದು, ನಾಲ್ವರ ಪೈಕಿ ಅಂಕಿತ್ ಸಿರ್ಸಾ, ಸಿಧು ಮೂಸೆವಾಲಾ ಹತ್ಯೆಯಲ್ಲಿ ಭಾಗಿಯಾಗಿದ್ದ ಶೂಟರ್‌ಗಳಲ್ಲಿ ಒಬ್ಬ ಎಂದು ತಿಳಿಸಿದ್ದಾರೆ. ಅಂಕಿತ್ ಸಿರ್ಸಾನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದಾಗ ಆತನ ಮೊಬೈಲ್‍ನಲ್ಲಿ ಈ ವೀಡಿಯೋ ಕಂಡುಬಂದಿದೆ. ಇದನ್ನೂ ಓದಿ: ಅಗ್ನಿಪಥ್ ಯೋಜನೆ- ಸಶಸ್ತ್ರಪಡೆಗಳಿಗೆ ಸೇರಲು 10 ಸಾವಿರ ಮಹಿಳಾ ಅಭ್ಯರ್ಥಿಗಳು ನೋಂದಣಿ
ವೀಡಿಯೋದಲ್ಲಿ ಐವರು ಕಾರಿನಲ್ಲಿ ಪ್ರಯಾಣಿಸುತ್ತಿದ್ದು ಪಂಜಾಬಿ ಹಾಡು ಕಾರ್‍ನಲ್ಲಿ ಕೇಳಿಬರುತ್ತಿದ್ದು ಹಾಡಿಗೆ ತಕ್ಕಂತೆ ಕೈನಲ್ಲಿ ಗನ್ ಹಿಡಿದು ಆರೋಪಿಗಳು ಸಂಭ್ರಮಿಸಿದ್ದಾರೆ. ಈ ವೀಡಿಯೋದಲ್ಲಿ ಬಂಧಿತ ಆರೋಪಿ ಅಂಕಿತ್ ಸಿರ್ಸಾ ಕೂಡ ಕಾಣಿಸಿಕೊಂಡಿದ್ದಾನೆ. 18ರ ಹರೆಯದ ಅಂಕಿತ್ ಸಿರ್ಸಾ ಕಳೆದ ರಾತ್ರಿ ದೆಹಲಿಯಬಸ್ ಟರ್ಮಿನಲ್‌ನಲ್ಲಿ ಪೊಲೀಸರಿಗೆ ಸೆರೆ ಸಿಕ್ಕಿದ್ದ.
ಪಂಜಾಬಿ ಗಾಯಕನ ಹತ್ಯೆಯಲ್ಲಿ ಭಾಗಿಯಾಗಿದ್ದಲ್ಲದೇ, ಅಂಕಿತ್ ಸಿರ್ಸಾ ರಾಜಸ್ಥಾನದಲ್ಲಿ ನಡೆದ 2 ಕೊಲೆ ಯತ್ನ ಪ್ರಕರಣಗಳಲ್ಲೂ ಭಾಗಿಯಾಗಿದ್ದ. ಬಂಧಿತ ಇನ್ನೋರ್ವ ಆರೋಪಿ ಸಚಿನ್ ಭಿವಾನಿ, ಸಿಧು ಮೂಸೆವಾಲಾ ಹತ್ಯಾ ಪ್ರಕರಣದಲ್ಲಿ 4 ಜನ ಶೂಟರ್‌ಗಳಿಗೆ ಆಶ್ರಯ ನೀಡಿದ್ದ ಹಾಗಾಗಿ ಇವರಿಬ್ಬರೊಂದಿಗೆ ಮತ್ತಿಬ್ಬರನ್ನು ಬಂಧಿಸಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಸಿಧು ಮೂಸೆವಾಲಾ ಹತ್ಯಾ ಪ್ರಕರಣ – ದೆಹಲಿಯಲ್ಲಿ ಗುಂಡು ಹಾರಿಸಿದವನ ಬಂಧನ
#WATCH | In a viral video, Sidhu Moose Wala's murder accused Ankit Sirsa, Priyavrat, Kapil, Sachin Bhivani, & Deepak brandished guns in a vehicle pic.twitter.com/SYBy8lgyRd
ಮೇ 29ರಂದು ಸಿಧು ಮೂಸೆವಾಲಾ ಅವರನ್ನು ಪಂಜಾಬ್‍ನಲ್ಲಿ ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿದ್ದರು. ಹತ್ಯೆಗೂ ಹಿಂದಿನ ದಿನ ಮೂಸೆವಾಲಾ ಅವರ ಭದ್ರತೆಯನ್ನು ಪಂಜಾಬ್ ಸರ್ಕಾರ ಹಿಂಪಡೆದುಕೊಂಡಿತ್ತು.
Live Tv
[brid partner=56869869 player=32851 video=960834 autoplay=true]