Tag: shopian

  • ಶೋಪಿಯಾನ್‌ನಲ್ಲಿ ಭದ್ರತಾ ಪಡೆಯೊಂದಿಗೆ ಗುಂಡಿನ ಚಕಮಕಿ – ಮೂವರು ಉಗ್ರರು ಮಟಾಶ್‌

    ಶೋಪಿಯಾನ್‌ನಲ್ಲಿ ಭದ್ರತಾ ಪಡೆಯೊಂದಿಗೆ ಗುಂಡಿನ ಚಕಮಕಿ – ಮೂವರು ಉಗ್ರರು ಮಟಾಶ್‌

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ (Shopian) ಜಿಲ್ಲೆಯ ಶುಕ್ರೂ ಕೆಲ್ಲರ್ ಅರಣ್ಯ ಪ್ರದೇಶದಲ್ಲಿ ಮಂಗಳವಾರ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಹತನಾಗಿದ್ದಾರೆ.

    ಎನೌಕೌಂಟರ್‌ನಲ್ಲಿ ಉನ್ನತ ಭಯೋತ್ಪಾದಕ ಕಮಾಂಡರ್ ಸೇರಿ ಮೂವರು ಉಗ್ರರು ಹತ್ಯೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರಸ್ತುತ ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆ (ಸಿಎಎಸ್ಒ) ನಡೆಯುತ್ತಿರುವ ಸ್ಥಳದಲ್ಲಿ ಭಯೋತ್ಪಾದಕರು ಸಿಕ್ಕಿಬಿದ್ದಿದ್ದರು ಎಂದು ಭದ್ರತಾ ಪಡೆಗಳು ತಿಳಿಸಿವೆ. ಇದನ್ನೂ ಓದಿ: INS ವಿಕ್ರಾಂತ್ ಎಲ್ಲಿದೆ ಹೇಳಿ – ಪಿಎಂ ಕಚೇರಿ ಅಧಿಕಾರಿಯಂತೆ ಕರೆ ಮಾಡಿದ್ದವ ಅರೆಸ್ಟ್‌

    ದಕ್ಷಿಣ ಕಾಶ್ಮೀರ ಜಿಲ್ಲೆಯ ಶುಕ್ರೂ ಕೆಲ್ಲರ್ ಪ್ರದೇಶದಲ್ಲಿ ಭಯೋತ್ಪಾದಕರು ಇರುವ ಬಗ್ಗೆ ನಿರ್ದಿಷ್ಟ ಮಾಹಿತಿಯ ಆಧಾರದ ಮೇಲೆ ಭದ್ರತಾ ಪಡೆಗಳು ಅಲ್ಲಿ ಸುತ್ತುವರಿದು ಶೋಧ ಕಾರ್ಯಾಚರಣೆ ಪ್ರಾರಂಭಿಸಿದವು. ಭಯೋತ್ಪಾದಕರು ಪ್ರತಿದಾಳಿ ನಡೆಸಿದರು. ಇದು ಪರಸ್ಪರರ ನಡುವೆ ಗುಂಡಿನ ಚಕಮಕಿಗೆ ಕಾರಣವಾಯಿತು.

    ಏ.22 ರ ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆಂದು ಶಂಕಿಸಲಾಗಿರುವ ಮೂವರು ಪಾಕಿಸ್ತಾನಿ ಭಯೋತ್ಪಾದಕರಾದ ಆದಿಲ್ ಹುಸೇನ್ ಥೋಕರ್, ಅಲಿ ಭಾಯ್ ಮತ್ತು ಹಾಶಿಮ್ ಮೂಸಾ ಪೋಸ್ಟರ್‌ಗಳನ್ನು ಭದ್ರತಾ ಪಡೆಗಳು ಪೋಸ್ಟ್ ಮಾಡಿದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ. ಇದನ್ನೂ ಓದಿ: ಪಹಲ್ಗಾಮ್ ದಾಳಿಯ 3 ಉಗ್ರರ ಫೋಟೋ ರಿಲೀಸ್ – ಸುಳಿವು ಕೊಟ್ಟವರಿಗೆ 20 ಲಕ್ಷ ಬಹುಮಾನ

  • ಶೋಪಿಯಾನದಲ್ಲಿ ಇಬ್ಬರು ಲಷ್ಕರ್ ಉಗ್ರರ ಎನ್‍ಕೌಂಟರ್

    ಶೋಪಿಯಾನದಲ್ಲಿ ಇಬ್ಬರು ಲಷ್ಕರ್ ಉಗ್ರರ ಎನ್‍ಕೌಂಟರ್

    ಶ್ರೀನಗರ: ಜಮ್ಮು-ಕಾಶ್ಮೀರದ (Jammu- Kashmir) ಶೋಪಿಯಾನ ( Shopian) ಜಿಲ್ಲೆಯಲ್ಲಿ ಎನ್‍ಕೌಂಟರ್ ನಡೆದಿದ್ದು, ಇಬ್ಬರು ಲಷ್ಕರ್-ಎ- ತೈಬಾ (LET) ಉಗ್ರರಿಬ್ಬರನ್ನು ಹತ್ಯೆ ಮಾಡಲಾಗಿದೆ.

    ಉಗ್ರರನ್ನು ಮೋರಿಫತ್ ಮಕ್ಬೂಲ್ ಮತ್ತು ಜಾಜಿಮ್ ಫಾರೂಕ್ ಅಲಿಯಾಸ್ ಅಬ್ರಾರ್ ಎಂದು ಗುರುತಿಸಲಾಗಿದೆ. ಇದರಲ್ಲಿ ಅಬ್ರಾರ್ ಕಾಶ್ಮೀರಿ ಪಂಡಿತ್ ಸಂಜಯ್ ಶರ್ಮಾ ಹತ್ಯೆಯಲ್ಲಿ ಭಾಗಿಯಾಗಿದ್ದನೆಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ವಿಜಯ್ ಕುಮಾರ್ ತಿಳಿಸಿದ್ದಾರೆ.

    ಮಂಗಳವಾರ ನಸುಕಿನ ಜಾವ ಅಲ್ಶಿಪೋರಾ ಪ್ರದೇಶದಲ್ಲಿ ಉಗ್ರರು ಇದ್ದಾರೆ ಎಂಬ ಖಚಿತ ಮಾಹಿತಿ ಪಡೆದ ಭದ್ರತಾ ಪಡೆ ತಕ್ಷಣವೇ ಕಾರ್ಯಾಚರಣೆಯಲ್ಲಿ ತೊಡಗಿತ್ತು. ಅಲ್ಲದೆ ಎನ್‍ಕೌಂಟರ್ ಮಾಡಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿತ್ತು. ಇದನ್ನೂ ಓದಿ: ಡಿಜೆ ಸದ್ದಿಗೆ ಯುವಕನಿಗೆ ಹೃದಯಾಘಾತ

    ಎನ್‍ಕೌಂಟರ್ ಬಳಿಕವೂ ಕಾರ್ಯಾಚರಣೆ ಮುಂದುವರಿದಿದೆ ಎಂದು ಅಲ್ಲಿನ ಪೊಲೀಸರು ತಿಳಿಸಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಶೋಪಿಯಾನ್‌ನಲ್ಲಿ ಭದ್ರತಾ ಪಡೆಗಳ ಎನ್‌ಕೌಂಟರ್ – 3 ಲಷ್ಕರ್ ಉಗ್ರರ ಸಾವು

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu and Kashmir) ಶೋಪಿಯಾನ್ (Shopian) ಜಿಲ್ಲೆಯ ಮುಂಜ್ ಮಾರ್ಗ್ ಪ್ರದೇಶದಲ್ಲಿ ಮಂಗಳವಾರ ಭದ್ರತಾ ಪಡೆಗಳು ಹಾಗೂ ಭಯೋತ್ಪಾದಕರ (Terrorists) ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಲಷ್ಕರ್-ಎ-ತೊಯ್ಬಾ (LeT) ಉಗ್ರರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

    ನಿಷೇಧಿತ ಭಯೋತ್ಪಾದನಾ ಸಂಘಟನೆ ಎಲ್‌ಇಟಿಯ 3 ಭಯೋತ್ಪಾದಕರನ್ನು ಎನ್‌ಕೌಂಟರ್‌ನಲ್ಲಿ ಕೊಲ್ಲಲಾಗಿದೆ. ಅವರ ಗುರುತು ಪತ್ತೆ ಹಚ್ಚುವ ಪ್ರಕ್ರಿಯೆ ಮುಂದುವರಿಯುತ್ತಿದೆ ಎಂದು ಕಾಶ್ಮೀರ ವಲಯ ಪೊಲೀಸರು ತಿಳಿಸಿದ್ದಾರೆ.

    ವರದಿಗಳ ಪ್ರಕಾರ ಭದ್ರತಾ ಪಡೆಗಳು ಶೋಪಿಯಾನ್ ಝೈನಾಪೋರಾ ಪ್ರದೇಶದ ಮುಂಜ್ ಮಾರ್ಗ್ನಲ್ಲಿ ಉಗ್ರರು ಅಡಗಿರುವ ಬಗ್ಗೆ ಖಚಿತ ಮಾಹಿತಿಯನ್ನು ಪಡೆದು ಶೋಧಕಾರ್ಯಕ್ಕೆ ತೆರಳಿದ್ದಾರೆ. ಈ ವೇಳೆ ಭಯೋತ್ಪಾದಕರು ಸಿಕ್ಕಿಬಿದ್ದಿದ್ದು, ಗುಂಡಿನ ಚಕಮಕಿ ಪ್ರಾರಂಭವಾಗಿದೆ. ಇದನ್ನೂ ಓದಿ: ಚುನಾವಣೆಗೆ ಸಮೀಪದಲ್ಲಿ ಡಿಕೆಶಿಗೆ ಶಾಕ್ – 5 ವರ್ಷದಲ್ಲಿ ಎಷ್ಟು ಆಸ್ತಿ ಹೆಚ್ಚಾಗಿತ್ತು? ತನಿಖೆ ಎಲ್ಲಿಯವರೆಗೆ ಬಂದಿದೆ?

    ಹತರಾಗಿರುವ ಮೂವರು ಭಯೋತ್ಪಾದಕರಲ್ಲಿ ಇದೀಗ ಇಬ್ಬರ ಗುರುತು ಪತ್ತೆಹಚ್ಚಲಾಗಿದೆ. ಅದರಲ್ಲೊಬ್ಬ ಕಾಶ್ಮೀರ ಪಂಡಿತ್ ಪುರಾಣ ಕೃಷ್ಣ ಭಟ್ ಹತ್ಯೆಯಲ್ಲಿ ಭಾಗಿಯಾಗಿದ್ದ ಭಯೋತ್ಪಾದಕ ಲತೀಫ್ ಲೋನ್ ಎಂದು ಗುರುತಿಸಲಾಗಿದ್ದು, ಮತ್ತೊಬ್ಬ ನೇಪಾಳದ ಟಿಲ್ ಬಹದ್ದೂರ್ ಥಾಪಾ ಹತ್ಯೆಯಲ್ಲಿ ಭಾಗಿಯಾಗಿದ್ದ ಉಮರ್ ನಜೀರ್ ಎಂದು ಗುರುತಿಸಲಾಗಿದೆ.

    ಉಗ್ರರಿಂದ 1 ಎಕೆ 47 ರೈಫಲ್ ಹಾಗೂ 2 ಪಿಸ್ತೂಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಹಾಸನದಲ್ಲಿ ಜೆಡಿಎಸ್ ಟಿಕೆಟ್ ಫೈಟ್ – ಅಂತರ ಕಾಯ್ದುಕೊಂಡ ಹಾಲಿ ಶಾಸಕರು

    Live Tv
    [brid partner=56869869 player=32851 video=960834 autoplay=true]

  • ಕಾಶ್ಮೀರಿ ಪಂಡಿತರಿಗೆ ಭದ್ರತೆ ಕಲ್ಪಿಸುವಲ್ಲಿ ಮೋದಿ ಸರ್ಕಾರ ವಿಫಲ – ಕಾಂಗ್ರೆಸ್ ಟೀಕೆ

    ಕಾಶ್ಮೀರಿ ಪಂಡಿತರಿಗೆ ಭದ್ರತೆ ಕಲ್ಪಿಸುವಲ್ಲಿ ಮೋದಿ ಸರ್ಕಾರ ವಿಫಲ – ಕಾಂಗ್ರೆಸ್ ಟೀಕೆ

    ಶ್ರೀನಗರ: ಶೋಪಿಯಾನ್ (Shopian) ಜಿಲ್ಲೆಯಲ್ಲಿ ಉಗ್ರರ ಗುಂಡಿಗೆ ಮತ್ತೊಬ್ಬ ಕಾಶ್ಮೀರಿ ಪಂಡಿತ (KashmiriPandits) ಬಲಿಯಾದ ಬಳಿಕ, ಜಮ್ಮು ಮತ್ತು ಕಾಶ್ಮೀರದಲ್ಲಿ (Jammu And Kashmir) ಪಂಡಿತರಿಗೆ ಭದ್ರತೆ ಕಲ್ಪಿಸುವಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ (BJP) ಸರ್ಕಾರ ವಿಫಲವಾಗಿದೆ ಎಂದು ಕಾಂಗ್ರೆಸ್ ಟೀಕಿಸಿದೆ.

    ಕಾಶ್ಮೀರದಲ್ಲಿ ಪಂಡಿತರ ಹತ್ಯೆ ನಿಲ್ಲುತ್ತಿಲ್ಲ. ಅವರಿಗೆ ಭದ್ರತೆ ನೀಡುವಲ್ಲಿ ಮೋದಿ (Naredra Modi) ಸರ್ಕಾರ ಸಂಪೂರ್ಣ ವಿಫಲವಾಗಿದೆ. ಇದು ನಾಚಿಗೇಡಿನ ಸಂಗತಿ ಎಂದು ಕಿಡಿಕಾರಿದೆ. ಇದನ್ನೂ ಓದಿ: ಕಾಶ್ಮೀರಿ ಪಂಡಿತರ ಮೇಲೆ ಮುಂದುವರಿದ ದಾಳಿ- ಉಗ್ರರ ಗುಂಡಿಗೆ ಓರ್ವ ಬಲಿ

    ನಿನ್ನೆಯಷ್ಟೇ ದಕ್ಷಿಣ ಕಾಶ್ಮೀರ ಜಿಲ್ಲೆಯ ಚೌಧರಿ ಗುಂಡ್ ಪ್ರದೇಶದ ನಿವಾಸಿಯಾಗಿದ್ದ ಪುರನ್ ಕ್ರಿಶನ್ ಭಟ್ ಮೇಲೆ ಉಗ್ರರಿಂದ (Terrorists) ಗುಂಡಿನ ದಾಳಿ ನಡೆದಿತ್ತು. ಕ್ರಿಶನ್ ನಿವಾಸದ ಬಳಿಯೇ ಈ ದಾಳಿ ನಡೆದಿದ್ದು, ಅವರನ್ನು ಶೋಪಿಯಾನ್ ಆಸ್ಪತ್ರೆಗೆ (Hospital) ಸ್ಥಳಾಂತರಿಸಲಾಯಿತು. ಆದರೆ ಕ್ರಿಶನ್ ಮಾರ್ಗ ಮಧ್ಯದಲ್ಲಿಯೇ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದರು. ಎರಡು ತಿಂಗಳ ಹಿಂದೆ, ಶೋಪಿಯಾನ್‌ನ ಸೇಬಿನ ತೋಟದಲ್ಲಿ ಸುನೀಲ್ ಕುಮಾರ್ ಭಟ್ ಹೆಸರಿನ ಕಾಶ್ಮೀರಿ ಪಂಡಿತನನ್ನು ಭಯೋತ್ಪಾದಕರು ಗುಂಡಿಕ್ಕಿ ಕೊಂದಿದ್ದರು. ಇದೀಗ ಮತ್ತೆ ಗುಂಡಿನ ದಾಳಿ ನಡೆದಿದೆ. ಇದನ್ನೂ ಓದಿ: ಚಲಿಸುತ್ತಿದ್ದ ಬಸ್‍ನಿಂದ ರಸ್ತೆ ಮೇಲೆ ಬಿದ್ದ ತಾಯಿ, ಮಗು – ಭಯಾನಕ ವೀಡಿಯೋ ವೈರಲ್

    ಕಾಶ್ಮೀರ ಫ್ರೀಡಂ ಫೈಟರ್ (KFF) ಗುಂಪು ಹತ್ಯೆಯ ಹೊಣೆ ಹೊತ್ತುಕೊಂಡಿರುವುದಾಗಿ ಉಪ ಪೊಲೀಸ್ ಮಹಾನಿರೀಕ್ಷಕ ಸುಜಿತ್ ಕುಮಾರ್ ಹೇಳಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಕಾಶ್ಮೀರಿ ಪಂಡಿತರ ಮೇಲೆ ಮುಂದುವರಿದ ದಾಳಿ- ಉಗ್ರರ ಗುಂಡಿಗೆ ಓರ್ವ ಬಲಿ

    ಕಾಶ್ಮೀರಿ ಪಂಡಿತರ ಮೇಲೆ ಮುಂದುವರಿದ ದಾಳಿ- ಉಗ್ರರ ಗುಂಡಿಗೆ ಓರ್ವ ಬಲಿ

    ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಪಂಡಿತರ (Kashmiri Pandits) ಹತ್ಯೆ ಮುಂದುವರಿದಿದೆ. ಶನಿವಾರ ಶೋಪಿಯಾನ್ (Shopian) ಜಿಲ್ಲೆಯಲ್ಲಿ ಕಾಶ್ಮೀರಿ ಪಂಡಿತ್ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನನ್ನು ಉಗ್ರರು (Terrorists) ಗುಂಡಿಕ್ಕಿ ಕೊಂದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ದಕ್ಷಿಣ ಕಾಶ್ಮೀರ (South Kashmir) ಜಿಲ್ಲೆಯ ಚೌಧರಿ ಗುಂಡ್ ಪ್ರದೇಶದ ನಿವಾಸಿಯಾಗಿದ್ದ ಪುರನ್ ಕ್ರಿಶನ್ ಭಟ್ ಮೇಲೆ ದಾಳಿ ನಡೆಸಲಾಯಿತು. ಕ್ರಿಶನ್ ನಿವಾಸದ ಬಳಿಯೇ ಈ ದಾಳಿ ನಡೆದಿದ್ದು, ಅವರನ್ನು ಶೋಪಿಯಾನ್ ಆಸ್ಪತ್ರೆಗೆ (Hospital) ಸ್ಥಳಾಂತರಿಸಲಾಯಿತು. ಆದರೆ ಕ್ರಿಶನ್ ಮಾರ್ಗಮಧ್ಯದಲ್ಲಿಯೇ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಇದನ್ನೂ ಓದಿ: ವಿಶ್ವದ ಅತ್ಯಂತ ಅಪಾಯಕಾರಿ ರಾಷ್ಟ್ರಗಳಲ್ಲಿ ಪಾಕಿಸ್ತಾನವೂ ಒಂದು – ಜೋ ಬೈಡೆನ್‌

    ಪುರನ್ ಕ್ರಿಶನ್ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಅವರಿಗೆ 11 ಮಗಳು ಹಾಗೂ 8 ವರ್ಷದ ಮಗನಿದ್ದಾನೆ. ಹತ್ಯೆ ನಡೆದ ಪ್ರದೇಶವನ್ನು ಭದ್ರತಾ ಪಡೆಗಳು ಸುತ್ತುವರಿದಿದ್ದು, ದಾಳಿಕೋರರನ್ನು ಬೇಟೆಯಾಡಲು ಪ್ರಯತ್ನ ಆರಂಭಿಸಲಾಗಿದೆ ಎಂದು ಸ್ಥಳೀಯ ಪೊಲೀಸರು (Kashmir Police) ಹೇಳಿದ್ದಾರೆ. ಇದನ್ನೂ ಓದಿ: ರಾಹುಲ್ ಗಾಂಧಿಗೆ ಯಾವುದೇ ದೂರದೃಷ್ಟಿ ಇಲ್ಲ: ಅರುಣ್‌ ಸಿಂಗ್

    ಹತ್ಯೆಯ ಬೆನ್ನಲ್ಲೇ ಪಂಡಿತರು ಪ್ರತಿಭಟನೆ (Protest) ನಡೆಸಿದ್ದಾರೆ, ನ್ಯಾಯಕ್ಕಾಗಿ ಆಗ್ರಹಿಸಿದ್ದಾರೆ. ಜಮ್ಮು-ಕಾಶ್ಮೀರ ನ್ಯಾಷನಲ್ ಕಾನ್ಫರೆನ್ಸ್ ಪಕ್ಷವು ಈ ದಾಳಿಯನ್ನು ಖಂಡಿಸಿದೆ. ಸಂತ್ರಸ್ತೆಯ ಕುಟುಂಬಕ್ಕೆ ಸಾಂತ್ವನ ಹೇಳಿದೆ. ಆಗಸ್ಟ್ 16 ರಂದು ಶೋಪಿಯಾನ್‌ನ ಚೋಟಿಪೋರಾ ಪ್ರದೇಶದಲ್ಲಿದ್ದ ಸೇಬು ಹಣ್ಣಿನ ತೋಟದಲ್ಲಿ ಇಬ್ಬರು ಪಂಡಿತ ಸಹೋದರರ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಇದರಲ್ಲಿ ಓರ್ವ ಮೃತಪಟ್ಟು ಮತ್ತೋರ್ವ ಗಾಯಗೊಂಡಿದ್ದರು.

    Live Tv
    [brid partner=56869869 player=32851 video=960834 autoplay=true]

  • ಜಮ್ಮು ಕಾಶ್ಮಿರದಲ್ಲಿ ಉಗ್ರನ ಹತ್ಯೆ – ಇಬ್ಬರು ಯೋಧರು ಹುತಾತ್ಮ

    ಜಮ್ಮು ಕಾಶ್ಮಿರದಲ್ಲಿ ಉಗ್ರನ ಹತ್ಯೆ – ಇಬ್ಬರು ಯೋಧರು ಹುತಾತ್ಮ

    ಶ್ರೀನಗರ: ಜಮ್ಮು ಕಾಶ್ಮಿರದ ಶೋಪಿಯಾನ್‍ನಲ್ಲಿ ಭಯೋತ್ಪಾದಕರು ಹಾಗೂ ಭದ್ರತಾ ಪಡೆಗಳ ನಡುವೆ ನಡೆದ ಗುಂಡಿನ ಚಕಾಮಕಿಯಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದು, ಉಗ್ರನೊಬ್ಬನನ್ನು ಹತ್ಯೆ ಮಾಡಲಾಗಿದೆ.

    ಸಂತೋಷ್ ಯಾದವ್ ಮತ್ತು ರೋಮಿತ್ ಚೌಹಾನ್ ಹುತಾತ್ಮರಾದ ಯೋಧರು. ಸಂತೋಷ್ ಯಾದವ್ ಮತ್ತು ರೋಮಿತ್ ಚೌಹಾನ್ ಉಗ್ರರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಗಂಭೀರ ಗಾಯಗೊಂಡಿದ್ದರು. ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಶ್ರೀನಗರದ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಹುತಾತ್ಮರಾದರು. ಆದರೆ ಮೃತ ಭಯೋತ್ಪಾದಕನ ಗುರುತು ಇನ್ನೂ ಪತ್ತೆಯಾಗಿಲ್ಲ.

    ಝೈನಾಪೊರಾದ ಚೆರ್‍ಮಾರ್ಗ್ ಪ್ರದೇಶದಲ್ಲಿ ನಿರ್ದಿಷ್ಟ ಮಾಹಿತಿಯ ಮೇರೆಗೆ ಉಗ್ರರಿಗಾಗಿ ಶೋಧ ಕಾರ್ಯಾಚರಣೆಯನ್ನು ಯೋಧರು ಪ್ರಾರಂಭಿಸಿದರು. ಯೋಧಪಡೆಗಳ ಜಂಟಿ ತಂಡವು ಸ್ಥಳವನ್ನು ಸಮೀಪಿಸುತ್ತಿದ್ದಂತೆ ಅಡಗಿಕೊಂಡಿದ್ದ ಉಗ್ರರು ಗುಂಡಿನ ದಾಳಿ ನಡೆಸಿದರು. ಇದಕ್ಕೆ ಯೋಧರು ಪ್ರತಿದಾಳಿ ನಡೆಸಿದರು ಎಂದು ಕಾಶ್ಮೀರ ವಲಯ ಪೊಲೀಸರು ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಪಂಜಾಬ್ ಚುನಾವಣೆಗೂ ಮುನ್ನಾ ದಿನ 12,430 ಹೊಸ ಸ್ಮಾರ್ಟ್ ತರಗತಿ ಉದ್ಘಾಟಿಸಿದ ಕೇಜ್ರಿವಾಲ್

    ಈ ವರ್ಷ ಈವರೆಗೆ 8 ಪಾಕಿಸ್ತಾನಿ ಉಗ್ರರು ಸೇರಿದಂತೆ 24 ಉಗ್ರರನ್ನು ಹತ್ಯೆ ಮಾಡಲಾಗಿದೆ. ಕಳೆದ ವರ್ಷ ನಡೆದ ಹತ್ತಾರು ಎನ್‍ಕೌಂಟರ್‌ಗಳಲ್ಲಿ 171 ಉಗ್ರರನ್ನು ಹತ್ಯೆ ಮಾಡಲಾಗಿತ್ತು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಪಂಜಾಬ್‍ನನ್ನು ಕಾಂಗ್ರೆಸ್ ಲೂಟಿ ಮಾಡುತ್ತಿದೆ: ಅರವಿಂದ್ ಕೇಜ್ರಿವಾಲ್

  • ಗುಂಡಿನ ಚಕಮಕಿ- ಶಾಕೂರ್ ಸೇರಿ ನಾಲ್ವರು ಉಗ್ರರು ಹತ

    ಗುಂಡಿನ ಚಕಮಕಿ- ಶಾಕೂರ್ ಸೇರಿ ನಾಲ್ವರು ಉಗ್ರರು ಹತ

    ಶ್ರೀನಗರ: ಭದ್ರತಾ ಸಿಬ್ಬಂದಿ ಜಂಟಿ ಕಾರ್ಯಾಚರಣೆ ನಡೆಸಿ ಅಲ್ ಬದ್ರ್ ಉಗ್ರ ಸಂಘಟನೆಯ ಸಂಸ್ಥಾಪಕ ಶಾಕೂರ್ ಅಹ್ಮದ್ ಪ್ಯಾರ್ರಿ ಸೇರಿ ನಾಲ್ವರು ಉಗ್ರರನ್ನು ಸೆದೆಬಡಿದಿದ್ದಾರೆ.

    ದಕ್ಷಿಣ ಕಾಶ್ಮೀರದ ಶೋಫಿಯಾನ್ ಜಿಲ್ಲೆಯ ಕಿಲೂರಾದಲ್ಲಿ ಉಗ್ರರು ಹಾಗೂ ಭದ್ರತಾ ಸಿಬ್ಬಂದಿ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಈ ವೇಳೆ ನಾಲ್ವರು ಉಗ್ರರರನ್ನು ಹತ್ಯೆ ಮಾಡಲಾಗಿದೆ. ಓರ್ವನನ್ನು ಜೀವಂತವಾಗಿ ಸೆರೆಹಿಡಿಯಲಾಗಿದೆ. ಅಲ್ ಬದ್ರ್ ಸಂಸ್ಥಾಪಕ ಶಾಕೂರ್ ಒಂದು ಕಾಲದಲ್ಲಿ ಜಮ್ಮು ಕಾಶ್ಮೀರ ಪೊಲೀಸರಿಗೆ ಎಸ್‍ಪಿಒ ಹಾಗೂ ಕಾನ್‍ಸ್ಟೇಬಲ್ ಆಗಿದ್ದ. ನಂತರ ಪರಾರಿಯಾಗಿ ಉಗ್ರ ಸಂಘಟನೆ ಸ್ಥಾಪಿಸಿದ್ದ. ಇದೀಗ ಶಾಕೂರ್ ಹಾಗೂ ಮೂವರು ಉಗ್ರರನ್ನು ಹೊಡೆದುರುಳಿಸಲಾಗಿದೆ.

    ನಾಲ್ವರು ಉಗ್ರರ ಪೈಕಿ ಶಾಕೂರ್ ಅಲ್ ಬದ್ರ್ ಉಗ್ರ ಸಂಘಟನೆ ಸಂಸ್ಥಾಪಕ ಹಾಗೂ ಜಿಲ್ಲಾ ಕಮಾಂಡರ್ ಆಗಿದ್ದ. ಮತ್ತೊಬ್ಬನನ್ನು ಸುಹೈಲ್ ಭಟ್ ಎಂದು ಗುರುತಿಸಲಾಗಿದೆ. ಉಗ್ರರಿಂದ ಶಸ್ತ್ರಾಸ್ತ್ರ ಹಾಗೂ ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಅಲ್ಲದೆ ಒಬ್ಬ ಉಗ್ರನನ್ನು ಜೀವಂತವಾಗಿ ಸೆರೆಹಿಡಿದಿದ್ದು, ನಾಲ್ವರು ಗುಂಡಿನ ದಾಳಿಗೆ ಸಾವನ್ನಪ್ಪಿದ್ದಾರೆ. ಎರಡು ಎಕೆ ಹಾಗೂ ಮೂರು ಬಂದೂಕುಗಳನ್ನು ವಶಕ್ಕೆ ಪಡೆಯಲಾಗಿದೆ ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ ಎಂದು ಸೇನೆ ತಿಳಿಸಿದೆ.

    ಈ ಕುರಿತು ಶೋಫಿಯಾನ್ ಪೊಲೀಸರು ಮಾಹಿತಿ ನಿಡಿ, 4-5 ಭಯೋತ್ಪಾದಕರು ಕಿಲೂರಾ ಪ್ರದೇಶದ ತೋಟದಲ್ಲಿದ್ದಾರೆ ಎಂಬ ಮಾಹಿತಿ ಲಭ್ಯವಾಗುತ್ತಿದ್ದಂತೆ ಯೋಧರು ಸುತ್ತುವರಿದು ಶೋಧ ಕಾರ್ಯ ಆರಂಭಿಸಿದರು. ಆಗ ಉಗ್ರರು ಭದ್ರತಾ ಸಿಬ್ಬಂದಿ ಮೇಲೆ ಗುಂಡು ಹಾರಿಸಿದರು. ಇದಕ್ಕೆ ಪ್ರತಿಯಾಗಿ ಸೇನಾ ಸಿಬ್ಬಂದಿ ಸಹ ಗುಂಡು ಹಾರಿಸಿದರು. ಈ ವೇಳೆ ನಾಲ್ವರು ಉಗ್ರರು ಸಾವನ್ನಪ್ಪಿದ್ದು, ಒಬ್ಬನನ್ನು ಜೀವಂತವಾಗಿ ಸೆರೆ ಹಿಡಿಯಲಾಗಿದೆ. ಸಿಕ್ಕವನನ್ನು ವಿಚಾರಣೆಗೊಳಪಡಿಸಲಾಗಿದೆ ಎಂದು ತಿಳಿಸಿದ್ದಾರೆ.

    ಸಾವನ್ನಪ್ಪಿದ ನಾಲ್ವರಲ್ಲಿ ಶಾಕೂರ್ ಅಹ್ಮದ್ ಪ್ಯಾರ್ರಿ ಪ್ರಮುಖನಾಗಿದ್ದು, ಈತ ವಿಶೇಷ ಪೊಲೀಸ್ ಅಧಿಕಾರಿ(ಎಸ್‍ಪಿಒ)ಯಾಗಿದ್ದ. ನಂತರ ಕಾನ್‍ಸ್ಟೇಬಲ್ ಮಾಡಲಾಯಿತು. ಆಗ ನಾಲ್ಕು ಎಕೆ-47 ಬಂದೂಕುಗಳನ್ನು ತೆಗೆದುಕೊಂಡು ಪರಾರಿಯಾಗಿದ್ದ. ಅಲ್ಲದೆ ಉಗ್ರ ಸಂಘಟನೆ ಸೇರಿದ್ದ. ಬಳಿಕ ತನ್ನದೇ ಗುಂಪು ಕಟ್ಟಿಕೊಂಡಿದ್ದ. ಅಲ್ ಬದ್ರ್ ಎಂಬ ಸಂಘಟನೆ ಕಟ್ಟಿಕೊಂಡು 10 ಯುವಕರನ್ನು ನೇಮಿಸಿಕೊಂಡಿದ್ದ. ಇದರಲ್ಲಿ ಐವರು ಈಗಾಗಲೇ ಸಾವನ್ನಪ್ಪಿದ್ದಾರೆ ಎಂದು ಕಾಶ್ಮೀರದ ಇನ್‍ಸ್ಪೆಕ್ಟರ್ ಜನರಲ್ ವಿಜಯ್ ಕುಮಾರ್ ಮಾಹಿತಿ ನೀಡಿದ್ದಾರೆ.

    ಘಟನೆಯಲ್ಲಿ ಯಾವುದೇ ಭದ್ರತಾ ಸಿಬ್ಬಂದಿಗೆ ಗಾಯಗಳಾಗಿಲ್ಲ. ಜಮ್ಮು ಕಾಶ್ಮೀರದಲ್ಲಿನ ಉಳಿದ ಉಗ್ರರನ್ನು ಸೆದೆಬಡಿಯಲು ನವೆಂಬರ್ ಬಳಿಕ ಕಾರ್ಯಾಚರಣೆ ಚುರುಕುಗೊಳಿಸಿದ್ದೆವು. ಅದರಂತೆ ಹಂತ ಹಂತವಾಗಿ ಉಗ್ರರನ್ನು ಮಟ್ಟಹಾಕಲಾಗುತ್ತಿದೆ ಎಂದು ವಿಜಯ್ ಕುಮಾರ್ ತಿಳಿಸಿದ್ದಾರೆ.

  • ಶೋಪಿಯಾನ್ ಜಿಲ್ಲೆಯ ಅಮ್ಶಿಪೋರಾದಲ್ಲಿ ಮೂವರು ಉಗ್ರರು ಮಟಾಷ್

    ಶೋಪಿಯಾನ್ ಜಿಲ್ಲೆಯ ಅಮ್ಶಿಪೋರಾದಲ್ಲಿ ಮೂವರು ಉಗ್ರರು ಮಟಾಷ್

    ಶ್ರೀನಗರ: ಜಮ್ಮು-ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಅಮ್ಶಿಪೋರಾದಲ್ಲಿ ಮೂವರು ಉಗ್ರರನ್ನು ಭಾರತಿಯ ಸೇನೆ ಸದೆಬಡಿದಿದೆ.

    ಇಂದು ಮುಂಜಾನೆ ಅಮ್ಶಿಪೋರಾದಲ್ಲಿ ಭದ್ರಾತ ಪಡೆ ಹಾಗೂ ಉಗ್ರರ ಮಧ್ಯೆ ಗುಂಡಿನ ಚಕಮಕಿ ನಡೆದಿದೆ. ಈ ವೇಳೆ ಭದ್ರತಾ ಪಡೆ ಮೂವರು ಉಗ್ರರನ್ನು ಹೊಡೆದುರುಳಿಸಿದೆ. ಸದ್ಯ ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರಿದಿದೆ.

    ನಿನ್ನೆಯಷ್ಟೇ ಕುಲ್ಗಾಂ ಜಿಲ್ಲೆಯ ನಾಗ್ನಾಡ್ ಎಂಬ ಪ್ರದೇಶದಲ್ಲಿ ಭದ್ರತಾ ಪಡೆಯ ಎನ್‍ಕೌಂಟರ್‍ಗೆ ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆಯ ಮೂವರು ಉಗ್ರರು ಹತ್ಯೆಗೀಡಾಗಿದ್ದರು.

    ಕದನವಿರಾಮ ಉಲ್ಲಂಘಿಸಿದ ಪಾಕ್:
    ಇತ್ತ ನೆರೆ ರಾಷ್ಟ್ರ ಪಾಕಿಸ್ತಾನ ಇಂದು ಮುಂಜಾನೆ ಜಮ್ಮು-ಕಾಶ್ಮೀರದ ಪೂಂಚ್ ಜಿಲ್ಲೆಯ ಗುಲ್ಪುರ್ ಸೆಕ್ಟರ್ ನಲ್ಲಿ ಕದನ ವಿರಾಮ ಉಲ್ಲಂಘಿಸಿದೆ. ಪಾಕ್ ಸೈನಿಕರ ಅಪ್ರಚೋದಿತ ಗುಂಡಿನ ದಾಳಿಗೆ ಮೂವರು ನಾಗರಿಕರು ಮೃತಪಟ್ಟಿದ್ದಾರೆ ಎಂದು ಪೂಂಚ್ ಜಿಲ್ಲೆಯ ಉಪ ಆಯುಕ್ತ ರಾಹುಲ್ ಯಾದವ್ ತಿಳಿಸಿದ್ದಾರೆ.