Tag: Shraddha Walkar

  • ಶ್ರದ್ಧಾವಾಕರ್ ಹತ್ಯೆ ಪ್ರಕರಣ – ಪಾಲಿಗ್ರಾಫ್ ಪರೀಕ್ಷೆ ವೇಳೆ ಅಫ್ತಾಬ್‍ಗೆ ಕೇಳಿದ ಪ್ರಶ್ನೆಗಳೇನು?

    ಶ್ರದ್ಧಾವಾಕರ್ ಹತ್ಯೆ ಪ್ರಕರಣ – ಪಾಲಿಗ್ರಾಫ್ ಪರೀಕ್ಷೆ ವೇಳೆ ಅಫ್ತಾಬ್‍ಗೆ ಕೇಳಿದ ಪ್ರಶ್ನೆಗಳೇನು?

    ನವದೆಹಲಿ: ಶ್ರದ್ಧಾ ವಾಕರ್ (Shraddha Walkar) ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಅಫ್ತಾಬ್ ಅಮೀನ್ ಪೂನಾವಾಲಾಗೆ (Aaftab Poonawala) ಶುಕ್ರವಾರ ಎರಡನೇ ದಿನದ ಪಾಲಿಗ್ರಾಫ್ ಪರೀಕ್ಷೆಗೆ (Polygraph Test) ಒಳಪಡಿಸಲಾಯಿತು. ಸುಮಾರು ಮೂರು ಗಂಟೆಗಳ ಕಾಲ ನಡೆದ ಪರೀಕ್ಷೆಯಲ್ಲಿ ಹಲವು ಪ್ರಶ್ನೆಗಳಿಗೆ ಸರಿಯಾದ ಉತ್ತರ ನೀಡಿದರೆ, ಇನ್ನು ಕೆಲವು ಪ್ರಶ್ನೆಗಳಿಗೆ ಉತ್ತರ ನೀಡದೇ ತಪ್ಪಿಸಿಕೊಂಡಿದ್ದಾನೆ ಎಂದು ಪೊಲೀಸ್ ಮೂಲಗಳು ಹೇಳಿವೆ.

    ಪಾಲಿಗ್ರಾಫ್ ಪರೀಕ್ಷೆಗೆ ಸಾಕೇತ್ ಜಿಲ್ಲಾ ನ್ಯಾಯಲಯ ಅನುಮತಿ ನೀಡಿದ ಬಳಿಕ ರೋಹಿಣಿಯಲ್ಲಿರುವ ವಿಧಿ ವಿಜ್ಞಾನ ಪ್ರಯೋಗಾಲಯದಲ್ಲಿ ಪರೀಕ್ಷೆ ನಡೆಸಲಾಯಿತು. ಪರೀಕ್ಷೆ ತೀವ್ರವಾಗುತ್ತಿದ್ದಂತೆ ಕೆಮ್ಮು ಆರಂಭಿಸಿದ ಅಫ್ತಾಬ್ ನಾಡಿ ಮಿಡಿತ, ಹೃದಯ ಬಡಿತ, ಮಾನಸಿಕ ಒತ್ತಡ ಸರಿಯಾಗಿ ದಾಖಲಾಗದ ಹಾಗೇ ಮಾಡಿದ ಎನ್ನಲಾಗಿದೆ. ಇದನ್ನೂ ಓದಿ: ಏಕರೂಪ ನಾಗರಿಕ ಸಂಹಿತೆ ಜಾರಿ, 20 ಲಕ್ಷ ಉದ್ಯೋಗ ಸೃಷ್ಟಿ – ಗುಜರಾತ್ ಚುನಾವಣೆಯಲ್ಲಿ ಬಿಜೆಪಿ ಭರವಸೆ

    ಅಫ್ತಾಬ್ ಉದ್ದೇಶ ಪೂರ್ವಕವಾಗಿ ಅನಾರೋಗ್ಯಕ್ಕೆ ಈಡಾದಂತೆ ಕಂಡು ಬಂದ ಹಿನ್ನೆಲೆ ಮತ್ತೊಮ್ಮೆ ಪರೀಕ್ಷೆ ನಡೆಸಲು ನಿರ್ಧರಿಸಿ ಶುಕ್ರವಾರ ಪರೀಕ್ಷೆಯನ್ನು ಅರ್ಧಕ್ಕೆ ಮೊಟಕುಗೊಳಿಸಲಾಯಿತು. ಮುಂದಿನ ಪರೀಕ್ಷೆಯಲ್ಲಿ ಅಫ್ತಾಬ್ ಪೊಲೀಸರ ದಾರಿ ತಪ್ಪಿಸುವ ಪ್ರಯತ್ನ ಮಾಡಿದಲ್ಲಿ ನಾರ್ಕೊ ವಿಶ್ಲೇಷಣೆ ಪರೀಕ್ಷೆಗೆ ಒಳಗಾಗಬಹುದು ಎಂದು ಮೂಲಗಳು ಹೇಳಿವೆ.

    ಪಾಲಿಗ್ರಾಫ್ ಪರೀಕ್ಷೆ ಎಂದರೇನು?
    ಸುಳ್ಳು ಪತ್ತೆಕಾರಕ ಪರೀಕ್ಷೆಯನ್ನು ಪಾಲಿಗ್ರಾಫ್‌ ಪರೀಕ್ಷೆ ಎಂದು ಕರೆಯಲಾಗುತ್ತದೆ. ಇದು ಮಾನವನ ದೇಹದ ಮೇಲೆ ಸೆನ್ಸಾರ್‌ಗಳನ್ನು ಸ್ಥಾಪಿಸಿ, ಅದರ ಸಹಾಯದಿಂದ, ಪ್ರಶ್ನೆಯನ್ನು ಕೇಳಿದ ಸಮಯದಲ್ಲಿ ದೇಹದಲ್ಲಿ ಸಂಭವಿಸುವ ಜೈವಿಕ ಭೌತಿಕ ಬದಲಾವಣೆಗಳನ್ನು ಪತ್ತೆಹಚ್ಚಲು ಸಾಧ್ಯವಿದೆ. ಸರಳವಾಗಿ ಹೇಳುವುದಾದರೆ, ನಿರ್ದಿಷ್ಟ ಘಟನೆಯ ಬಗ್ಗೆ ಅಭ್ಯರ್ಥಿಯನ್ನು ಕೇಳಿದಾಗ, ಒಬ್ಬ ವ್ಯಕ್ತಿಯು ಸುಳ್ಳು ಹೇಳುತ್ತಿದ್ದಾನೆಯೇ ಅಥವಾ ಸತ್ಯ ಹೇಳುತ್ತಾನೆಯೇ ಎಂದು ಪ್ರತಿಪಾದಿಸಲು ಅನುಮತಿಸುವ ದತ್ತಾಂಶವನ್ನು ಪರದೆಯು ಪ್ರದರ್ಶಿಸುತ್ತದೆ. ಈ ಒಟ್ಟಾರೆ ಪ್ರಕ್ರಿಯೆಗೆ ಪಾಲಿಗ್ರಾಫ್‌ ಪರೀಕ್ಷೆ ಎಂದು ಹೇಳಲಾಗುತ್ತದೆ.

    ಶುಕ್ರವಾರ ನಡೆದ ಪಾಲಿಗ್ರಾಫ್ ಪರೀಕ್ಷೆಯಲ್ಲಿ ಹತ್ತಾರು ಪ್ರಶ್ನೆಗಳನ್ನು ಕೇಳಲಾಗಿದೆ. ಮುಖ್ಯವಾಗಿ, ಶ್ರದ್ಧಾಳನ್ನು ಕೊಂದಿದ್ದೇಕೆ ಮತ್ತು ಕೊಲ್ಲಲು ಯಾವ ಆಯುಧವನ್ನು ಬಳಸಿದ್ದೀರಿ? ಶ್ರದ್ಧಾ ದೇಹವನ್ನು ಹೇಗೆ ಕತ್ತರಿಸಿದ್ದೀರಿ? ಕತ್ತರಿಸುವಾಗ ತಪ್ಪಿತಸ್ಥ ಭಾವನೆ ಬರಲಿಲ್ಲವೇ? ಕತ್ತರಿಸಿದ ದೇಹದ ಭಾಗಗಳನ್ನು ಎಲ್ಲಿ ಎಸೆದಿದ್ದೀರಿ? ಶ್ರದ್ಧಾ ವಾಕರ್ ಹತ್ಯೆ ನಂತರ ನೀವು ಏನು ಮಾಡಿದ್ದೀರಿ? ಕೊಲೆಯ ಆಯುಧ ಎಲ್ಲಿದೆ? ಕೊಲ್ಲುವ ಏಕೈಕ ಉದ್ದೇಶದಿಂದ ಶ್ರದ್ಧಾಳನ್ನು ದೆಹಲಿಗೆ ಕರೆತಂದಿದ್ದೀರಾ ಹೀಗೆ ಹಲವು ಪ್ರಶ್ನೆಗಳನ್ನು ಕೇಳಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಅಫ್ತಾಬ್ ನನ್ನನ್ನು ಕೊಂದು ಪೀಸ್ ಪೀಸ್ ಮಾಡ್ತಾನೆ – 2 ವರ್ಷದ ಹಿಂದೆಯೇ ಪೊಲೀಸರಿಗೆ ಪತ್ರ ಬರೆದಿದ್ದ ಶ್ರದ್ಧಾ

    ಅಫ್ತಾಬ್ ನನ್ನನ್ನು ಕೊಂದು ಪೀಸ್ ಪೀಸ್ ಮಾಡ್ತಾನೆ – 2 ವರ್ಷದ ಹಿಂದೆಯೇ ಪೊಲೀಸರಿಗೆ ಪತ್ರ ಬರೆದಿದ್ದ ಶ್ರದ್ಧಾ

    ಮುಂಬೈ: ಲಿವ್‌ಇನ್ ರಿಲೇಶನ್‌ನಲ್ಲಿದ್ದು ತನ್ನ ಬಾಯ್‌ಫ್ರೆಂಡ್ ಕೈಯಲ್ಲೇ ಕೊಲೆಯಾಗಿ, ತುಂಡು ತುಂಡಾಗಿ ಕತ್ತರಿಸಿ ದೆಹಲಿಯಾದ್ಯಂತ (Delhi) ಕಾಡುಗಳಲ್ಲಿ ಹೂತು ಹೋದ ಯುವತಿ ಶ್ರದ್ಧಾ (Shraddha Walkar) 2 ವರ್ಷಗಳ ಹಿಂದೆಯೇ ಈ ರೀತಿ ಆಗಬಹುದು ಎಂದು ಪೊಲೀಸರಿಗೆ (Cops) ತನಗಾದ ಭೀತಿಯನ್ನು ಪತ್ರದ (Letter) ಮೂಲಕ ತಿಳಿಸಿದ್ದರು ಎಂಬುದು ಇದೀಗ ಬೆಳಕಿಗೆ ಬಂದಿದೆ.

    ಶ್ರದ್ಧಾ 2 ವರ್ಷಗಳ ಹಿಂದೆ ತಮ್ಮ ಹುಟ್ಟೂರಾದ ವಸಾಯಿಯ ತಿಲುಂಜ್‌ನಲ್ಲಿ ಪೊಲೀಸರಿಗೆ ಈ ಬಗ್ಗೆ ತಿಳಿಸಿದ್ದರು. ಆಕೆ ಅಫ್ತಾಬ್‌ನೊಂದಿಗೆ (Aftab Poonawala) ಒಂದೇ ಫ್ಲಾಟ್‌ನಲ್ಲಿ ವಾಸವಿದ್ದು, ಅಫ್ತಾಬ್ ಆಕೆಗೆ ಥಳಿಸಿದ ಕಾರಣಕ್ಕೆ ಪೊಲೀಸರಿಗೆ ಪತ್ರ ಬರೆದಿದ್ದಾಗಿ ಮಹಾರಾಷ್ಟ್ರದ ತನಿಖಾಧಿಕಾರಿಗಳು ಬುಧವಾರ ತಿಳಿಸಿದ್ದಾರೆ.

    2022ರ ನವೆಂಬರ್ 23ರಂದು ಶ್ರದ್ಧಾ ಬರೆದಿರುವ ಪತ್ರದಲ್ಲಿ, ಅಫ್ತಾಬ್ ಇಂದು ನನ್ನನ್ನು ಉಸಿರುಗಟ್ಟಿಸಿ ಕೊಲ್ಲಲು ಪ್ರಯತ್ನಿಸಿದ್ದಾನೆ. ಆತ ನನಗೆ ಬ್ಲಾಕ್‌ಮೇಲ್ ಮಾಡುತ್ತಿದ್ದು, ನನ್ನನ್ನು ಕೊಂದು, ತುಂಡು ತುಂಡು ಮಾಡಿ ಎಸೆದು ಹೋಗುತ್ತೇನೆ ಎಂದು ಹೆದರಿಸುತ್ತಿದ್ದಾನೆ. ಕಳೆದ 6 ತಿಂಗಳಿನಿಂದ ಆತ ನನಗೆ ನಿರಂತರವಾಗಿ ಹೊಡೆಯುತ್ತಿದ್ದಾನೆ. ಆದರೆ ನನಗೆ ಈ ಬಗ್ಗೆ ಪೊಲೀಸರ ಬಳಿ ಹೋಗಿ ಹೇಳುವಷ್ಟು ಧೈರ್ಯವಿಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ತನ್ನೆದುರೇ ಸೆಕ್ಸ್ ಮಾಡಲು ಜೋಡಿಯನ್ನು ಒತ್ತಾಯಿಸಿದ ಪೂಜಾರಿ – ಫಾಸ್ಟ್ ಗಂ ಸುರಿದು ಇಬ್ಬರ ಹತ್ಯೆ

    ವರದಿಗಳ ಪ್ರಕಾರ ಡೇಟಿಂಗ್ ಅಪ್ಲಿಕೇಶನ್ ಮೂಲಕ ಪರಿಚಯವಾದ ಶ್ರದ್ಧಾ ಹಾಗೂ ಅಫ್ತಾಬ್ 2019ರಲ್ಲಿ ಸಂಬಂಧ ಬೆಳೆಸಿದ್ದರು. ಪತ್ರದಲ್ಲಿ ಆಕೆ 6 ತಿಂಗಳಿನಿಂದ ಹಿಂಸೆಯನ್ನು ಅನುಭವಿಸುತ್ತಿರುವುದಾಗಿ ತಿಳಿಸಿದರೂ ಅವರಿಬ್ಬರ ಸಂಬಂಧ ಮತ್ತೆರಡು ವರ್ಷಗಳ ವರೆಗೂ ಮುರಿದು ಹೋಗಿರಲಿಲ್ಲ. ಈ ವರ್ಷ ಮೇ ತಿಂಗಳಿನಲ್ಲಿ ಅವರಿಬ್ಬರೂ ದೆಹಲಿಗೆ ಸ್ಥಳಾಂತರಗೊಂಡಿದ್ದರು.

    ಅಂತರ್ ಧರ್ಮೀಯ ಎಂಬ ಕಾರಣಕ್ಕೆ ಶ್ರದ್ಧಾ ಪೋಷಕರು ಇಬ್ಬರ ಸಂಬಂಧವನ್ನು ಒಪ್ಪದ ಕಾರಣ ಸಂಪರ್ಕವನ್ನು ಕಡಿತಗೊಳಿಸಿದ್ದರು. ದೆಹಲಿಯ ಮೆಹ್ರೌಲಿಯಲ್ಲಿ ಫ್ಲಾಟ್‌ಗೆ ಸ್ಥಳಾಂತರಗೊಂಡ ಕೆಲ ದಿನಗಳ ಬಳಿಕ ನಡೆದ ಭೀಕರ ಹತ್ಯೆ 6 ತಿಂಗಳ ಬಳಿಕ ಬೆಳಕಿಗೆ ಬಂದಿದೆ. ಇದನ್ನೂ ಓದಿ: ದೆಹಲಿಯಲ್ಲಿ ಮತ್ತೆ ಬರ್ಬರ ಕೊಲೆ- ನಾಲ್ವರು ಕುಟುಂಬಸ್ಥರನ್ನು ಕತ್ತು ಸೀಳಿ ಕೊಲೆಗೈದ ಮಾದಕ ವ್ಯಸನಿ

    Live Tv
    [brid partner=56869869 player=32851 video=960834 autoplay=true]

  • ಶ್ರದ್ಧಾ ಕೊಲೆ ಆಕಸ್ಮಿಕ, ಇದರಲ್ಲಿ ಹೊಸದೇನಿಲ್ಲ- ಅಶೋಕ್ ಗೆಹ್ಲೋಟ್ ವಿವಾದಿತ ಹೇಳಿಕೆಗೆ ಬಿಜೆಪಿ ಕಿಡಿ

    ಶ್ರದ್ಧಾ ಕೊಲೆ ಆಕಸ್ಮಿಕ, ಇದರಲ್ಲಿ ಹೊಸದೇನಿಲ್ಲ- ಅಶೋಕ್ ಗೆಹ್ಲೋಟ್ ವಿವಾದಿತ ಹೇಳಿಕೆಗೆ ಬಿಜೆಪಿ ಕಿಡಿ

    ಜೈಪುರ: ದೆಹಲಿಯಲ್ಲಿ ನಡೆದ ಶ್ರದ್ಧಾ ವಾಕರ್ ಹತ್ಯೆ ಪ್ರಕರಣ (Shraddha Walkar murder case) ಅದರ ಭೀಕರ ಹಾಗೂ ಭಯಾನಕ ವಿವರಗಳಿಂದ ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ. ಆದರೆ ರಾಜಸ್ಥಾನದ ಮುಖ್ಯಮಂತ್ರಿ (Rajasthan CM) ಅಶೋಕ್ ಗೆಹ್ಲೋಟ್ (Ashok Gehlot) ಶ್ರದ್ಧಾ ಹತ್ಯೆ ಆಕಸ್ಮಿಕವಾದುದು, ಇದರಲ್ಲಿ ಹೊಸದೇನಿಲ್ಲ ಎಂದು ಹೇಳಿಕೆ ನೀಡಿದ್ದು, ಇದೀಗ ಭಾರೀ ಟೀಕೆಗೆ ಗುರಿಯಾಗಿದ್ದಾರೆ.

    ಮಾಧ್ಯಮಗಳೊಂದಿಗೆ ಮಾತನಾಡಿದ ಅಶೋಕ್ ಗೆಹ್ಲೋಟ್, ಶ್ರದ್ಧಾ ಹತ್ಯೆ ಪ್ರಕರಣ ಒಂದು ಆಕಸ್ಮಿಕವಾಗಿದೆ. ಇದು ಸಾಮಾನ್ಯವಾಗಿದ್ದು, ಹೊಸದೇನೂ ಇದರಲ್ಲಿ ಇಲ್ಲ. ಶತಮಾನಗಳಿಂದಲೂ ಅಂತರ್ಜಾತಿ, ಅಂತರ್ ಧರ್ಮದ ಹೆಸರಿನಲ್ಲಿ ವಿವಾಹಗಳು ನಡೆಯುತ್ತಿವೆ. ಇದರಲ್ಲಿ ಹೊಸದೇನಿಲ್ಲ ಎಂದು ಹೇಳಿಕೆ ನೀಡಿದ್ದಾರೆ.

    ಬಿಜೆಪಿಯವರು (BJP) ಒಂದು ಸಮುದಾಯ, ಒಂದು ಧರ್ಮವನ್ನು ಗುರಿಯಾಗಿಸಿಕೊಂಡಿದ್ದೀರಿ. ಅದರ ಆಧಾರದ ಮೇಲೆ ನಿಮ್ಮ ರಾಜಕೀಯ ದೇಶದೊಳಗೆ ನಡೆಯುತ್ತಿದೆ. ನೀವು ಅದರ ಪ್ರಯೋಜನಗಳನ್ನು ಪಡೆಯುತ್ತೀರಿ. ಜನರನ್ನು ಒಟ್ಟುಗೂಡಿಸುವುದು, ಧರ್ಮ ಮತ್ತು ಜಾತಿಯ ಹೆಸರಿನಲ್ಲಿ ಗುಂಪುಗಳನ್ನು ಸೃಷ್ಟಿಸುವುದು ತುಂಬಾ ಸುಲಭ. ಬೆಂಕಿ ಹಚ್ಚುವುದು ಸುಲಭವಾದರೆ, ಆ ಬೆಂಕಿಯನ್ನು ನಂದಿಸುವುದು ತುಂಬಾ ಕಷ್ಟ. ಕಟ್ಟಡ ನಿರ್ಮಿಸಲು ತುಂಬಾ ಸಮಯ ಹಿಡಿಯುತ್ತದೆ. ಆದರೆ ಅದನ್ನು ಕೆಡವಲು ಕೇವಲ ಅರ್ಧ ಗಂಟೆ ಸಾಕು ಎಂದು ಬಿಜೆಪಿಯನ್ನು ಟೀಕಿಸಿದ್ದಾರೆ. ಇದನ್ನೂ ಓದಿ: ವೋಟರ್‌ಗೇಟ್‌ ಹಗರಣಕ್ಕೆ ಅಡ್ಡ ಆಗಿತ್ತಾ ಪ್ರಭಾವಿ ಶಾಸಕರ ಕಚೇರಿ?

    ಅಶೋಕ್ ಗೆಹ್ಲೋಟ್ ಅವರು ಶ್ರದ್ಧಾ ಹತ್ಯೆ ಪ್ರಕರಣದ ಬಗ್ಗೆ ಬೇಜವಾಬ್ದಾರಿತನದ ಹೇಳಿಕೆ ನೀಡಿರುವುದಕ್ಕೆ ಬಿಜೆಪಿ ಕೆಂಡಾಮಂಡಲವಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ಸತೀಶ್ ಪೂನಿಯಾ ಗೆಹ್ಲೋಟ್ ಹೇಳಿಕೆಯನ್ನು ಕಟುವಾಗಿ ಟೀಕಿಸಿದ್ದಾರೆ.

    ಈ ಘಟನೆಯು ಮನಸ್ಥಿತಿಯ ಕದನವಾಗಿದೆ. ಇದು ಆಲೋಚನೆಗಳ ಯುದ್ಧವಾಗಿದೆ. ಲವ್ ಜಿಹಾದ್, ಧಾರ್ಮಿಕ ಪರಿವರ್ತನೆಗಳನ್ನು ಯೋಜಿತ ಪಿತೂರಿಯ ಮೂಲಕ ಮಾಡಲಾಗುತ್ತದೆ. ಇದರಿಂದ ಅತಿ ಹೆಚ್ಚು ಪರಿಣಾಮ ಬೀರಿರುವುದೇ ರಾಜಸ್ಥಾನದಲ್ಲಿ ಎಂದು ಹೇಳಿದ್ದಾರೆ. ಇದನ್ನೂ ಓದಿ: ದಿಢೀರ್ ಕಾಂಗ್ರೆಸ್‌ಗೆ ಗುಡ್‌ಬೈ – 300ಕ್ಕೂ ಹೆಚ್ಚು ಕಾರ್ಯಕರ್ತರು BJP ಸೇರ್ಪಡೆ

    ಅಫ್ತಾಬ್ ಪೂನಾವಾಲನೊಂದಿಗೆ (Aftab Poonawala) ಲಿವ್‌ಇನ್ ರಿಲೇಶನ್‌ನಲ್ಲಿದ್ದ ಶ್ರದ್ಧಾ ವಾಕರ್ ಮೇ 18 ರಂದು ಕೊಲೆಯಾಗಿದ್ದಳು. ಅಫ್ತಾಬ್ ಶ್ರದ್ಧಾ ಕತ್ತನ್ನು ಹಿಸುಕಿ ಕೊಂದಿದ್ದು, ಬಳಿಕ ಆಕೆಯ ಮೃತ ದೇಹವನ್ನು 35 ತುಂಡುಗಳನ್ನಾಗಿ ಕತ್ತರಿಸಿ ದೆಹಲಿಯಾದ್ಯಂತ ಕಾಡುಗಳಲ್ಲಿ ಹೂತುಹಾಕಿದ್ದ.

    Live Tv
    [brid partner=56869869 player=32851 video=960834 autoplay=true]

  • ಲವ್‌ ಜಿಹಾದ್‌ಗೆ ಕಠಿಣ ಕಾನೂನು ತನ್ನಿ – ದೆಹಲಿ ಪ್ರಕರಣ ಉಲ್ಲೇಖಿಸಿ ಯೋಗಿ ಆದಿತ್ಯನಾಥ್‌ಗೆ ಬಿಜೆಪಿ ಶಾಸಕ ಪತ್ರ

    ಲವ್‌ ಜಿಹಾದ್‌ಗೆ ಕಠಿಣ ಕಾನೂನು ತನ್ನಿ – ದೆಹಲಿ ಪ್ರಕರಣ ಉಲ್ಲೇಖಿಸಿ ಯೋಗಿ ಆದಿತ್ಯನಾಥ್‌ಗೆ ಬಿಜೆಪಿ ಶಾಸಕ ಪತ್ರ

    ಲಕ್ನೋ: ಲವ್‌ ಜಿಹಾದ್‌ಗೆ (love jihad) ಕಠಿಣ ಶಿಕ್ಷೆಯಾಗಬೇಕು. ಘೋರ ಅಪರಾಧಗಳಿಗೆ ಸಂಬಂಧಿಸಿದಂತೆ ರಾಜ್ಯದ ಕಾನೂನುಗಳನ್ನು ತಿದ್ದುಪಡಿ ಮಾಡಬೇಕು ಎಂದು ದೆಹಲಿ ಕೊಲೆ ಪ್ರಕರಣ ಉಲ್ಲೇಖಿಸಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ (Yogi Adityanath) ಅವರಿಗೆ ಬಿಜೆಪಿ ಶಾಸಕ ರಾಜೇಶ್ವರ್‌ ಸಿಂಗ್‌ (Rajeshwar Singh) ಪತ್ರ ಬರೆದಿದ್ದಾರೆ.

    ಇಂತಹ ಪ್ರಕರಣಗಳಲ್ಲಿ ತ್ವರಿತ ವಿಚಾರಣೆ, ಆರೋಪಿಗಳಿಗೆ ಯಾವುದೇ ಜಾಮೀನು ನೀಡದಿರುವುದು, ಅತ್ಯಾಚಾರ ಮತ್ತು ಕೊಲೆಗೆ ಮರಣದಂಡನೆ, ಸಾಕ್ಷಿಗಳಿಗೆ ವಿಶೇಷ ರಕ್ಷಣೆ ಮತ್ತು ಅಂತಹ ಪ್ರಕರಣಗಳಲ್ಲಿ ಅತ್ಯಾಚಾರಕ್ಕಾಗಿ ಜೀವಾವಧಿ ಶಿಕ್ಷೆಯಂತಹ ಬದಲಾವಣೆಗಳನ್ನು ಕಾನೂನಿನಲ್ಲಿ ತರಬೇಕು ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: ಶ್ರದ್ಧಾ ಕೊಲೆ ಪ್ರಕರಣ – ತಲೆ ಬುರುಡೆ ಸುಟ್ಟು, ಸಾಕ್ಷ್ಯ ನಾಶಕ್ಕೆ ಪ್ರಯತ್ನಿಸಿದ್ದ ಅಫ್ತಾಬ್

    ಶಾಸಕರ ಪತ್ರದ ಪ್ರತಿಯನ್ನು ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಅವರಿಗೂ ಕಳುಹಿಸಲಾಗಿದೆ. ಕ್ರಿಮಿನಲ್ ಕಾರ್ಯವಿಧಾನದ ಕಾನೂನಿಗೆ ತಿದ್ದುಪಡಿ ತರಬೇಕು ಎಂದು ಶಾಸಕ ಸಿಂಗ್‌ ಒತ್ತಾಯಿಸಿದ್ದಾರೆ.

    ದೆಹಲಿ ನಗರದಲ್ಲಿ ಮುಸ್ಲಿಂ ವ್ಯಕ್ತಿಯೊಬ್ಬ ಹಿಂದೂ ಯುವತಿಯ ದೇಹವನ್ನು 35 ತುಂಡುಗಳಾಗಿ ಕತ್ತರಿಸಿದ ಘಟನೆಯು ದೇಶಾದ್ಯಂತ ವರದಿಯಾಗಿದೆ. ಲವ್ ಜಿಹಾದ್ ಅಪರಾಧಗಳನ್ನು ಇದು ಪ್ರತಿಬಿಂಬಿಸುತ್ತಿದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಶ್ರದ್ಧಾ ಕೊಲೆ ಪ್ರಕರಣ- ಸಾಕ್ಷಿ ನಾಶಕ್ಕೆ OLXನಲ್ಲಿ ಫೋನ್ ಮಾರಿದ್ದ ಅಫ್ತಾಬ್!

    ಮಹಿಳೆಯರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಮತ್ತು ಸಾರ್ವಜನಿಕ ಸುವ್ಯವಸ್ಥೆಯನ್ನು ಕಾಪಾಡಲು ಈ ಹಿಂದೆ ಮಾಡಿದಂತೆ ರಾಜ್ಯ ಶಾಸಕಾಂಗದ ಮೂಲಕ ಶಾಸನಕ್ಕೆ ತಿದ್ದುಪಡಿಗಳನ್ನು ಕೈಗೊಳ್ಳುವುದು ಅವಶ್ಯಕ ಎಂದು ಶಾಸಕರು ಹೇಳಿದ್ದಾರೆ.

    ಮುಂಬೈ ಮೂಲದ 27 ವರ್ಷದ ಶ್ರದ್ಧಾ ವಾಕರ್ (Shraddha Walkar) ಅವರನ್ನು ಈ ವರ್ಷದ ಮೇ ತಿಂಗಳಲ್ಲಿ ದೆಹಲಿಯಲ್ಲಿ ಆಕೆಯ ಪ್ರಿಯಕರ ಅಫ್ತಾಬ್ ಪೂನಾವಾಲಾ (Aftab Poonawala) ಕೊಲೆ ಮಾಡಿದ್ದ. ಆಕೆಯ ಕತ್ತು ಹಿಸುಕಿ ಕೊಂದ ನಂತರ, ಅಫ್ತಾಬ್ ಆಕೆಯ ದೇಹವನ್ನು 35 ತುಂಡುಗಳಾಗಿ ಕತ್ತರಿಸಿ ದೆಹಲಿಯ ವಿವಿಧ ಸ್ಥಳಗಳಲ್ಲಿ ಎಸೆದಿದ್ದ. ಕತ್ತರಿಸಿದ ದೇಹದ ಭಾಗಗಳನ್ನು ಶೇಖರಿಸಿಡಲು ರೆಫ್ರಿಜರೇಟರ್ ಕೂಡ ಬಳಿಸಿದ್ದ. ಇಂತಹ ಭೀಕರ ಪ್ರಕರಣವನ್ನು ದೆಹಲಿ ಪೊಲೀಸರು ಭೇದಿಸಿದ್ದಾರೆ. ಇದನ್ನೂ ಓದಿ: ಶ್ರದ್ಧಾರಂಥ ಹೆಣ್ಣುಮಕ್ಕಳು ಒಳ್ಳೆ ಹುಡುಗರನ್ನ ಆಯ್ಕೆ ಮಾಡ್ಕೋಬೇಕು; ಅಫ್ತಾಬ್‌ನ ನೇಣಿಗೆ ಹಾಕಿ – ರಾವತ್‌

    Live Tv
    [brid partner=56869869 player=32851 video=960834 autoplay=true]

  • ಶ್ರದ್ಧಾರಂಥ ಹೆಣ್ಣುಮಕ್ಕಳು ಒಳ್ಳೆ ಹುಡುಗರನ್ನ ಆಯ್ಕೆ ಮಾಡ್ಕೋಬೇಕು; ಅಫ್ತಾಬ್‌ನ ನೇಣಿಗೆ ಹಾಕಿ – ರಾವತ್‌

    ಶ್ರದ್ಧಾರಂಥ ಹೆಣ್ಣುಮಕ್ಕಳು ಒಳ್ಳೆ ಹುಡುಗರನ್ನ ಆಯ್ಕೆ ಮಾಡ್ಕೋಬೇಕು; ಅಫ್ತಾಬ್‌ನ ನೇಣಿಗೆ ಹಾಕಿ – ರಾವತ್‌

    ಮುಂಬೈ: ಶ್ರದ್ಧಾ ವಾಕರ್ (Shraddha Walkar) ಅವರಂತಹ ವಿದ್ಯಾವಂತ ಮತ್ತು ಪ್ರಗತಿಪರ ಹೆಣ್ಣುಮಕ್ಕಳು ಸಂಬಂಧಗಳನ್ನು ಬೆಳೆಸುವ ಬಗ್ಗೆ ಜಾಗರೂಕರಾಗಿರಬೇಕು ಎಂದು ಶಿವಸೇನಾ (Shiv Sena) ಸಂಸದ ಸಂಜಯ್ ರಾವತ್ (Sanjay Raut) ಹೇಳಿದ್ದಾರೆ.

    ಸುದ್ದಿಗಾರರೊಂದಿಗೆ ಮಾತನಾಡಿದ ರಾವುತ್, ಅಫ್ತಾಬ್ (Aftab) ಜೊತೆ ಸಂಬಂಧ ಹೊಂದಲು ತನ್ನ ತಂದೆ ಪದೇ ಪದೇ ಆಕ್ಷೇಪಿಸಿದರೂ, ಅವಳು ಅವರ ಮಾತನ್ನು ಕೇಳಲು ನಿರಾಕರಿಸಿದಳು. ಶ್ರದ್ಧಾರಂತಹ ಹೆಣ್ಣುಮಕ್ಕಳು ಒಳ್ಳೆ ಹುಡುಗರನ್ನ ಆಯ್ಕೆ ಮಾಡಿಕೊಳ್ಳಬೇಕು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಅಫ್ತಾಬ್‌ಗೆ ಮಂಪರು ಪರೀಕ್ಷೆ – ಪೊಲೀಸರಿಗೆ ಕೋರ್ಟ್‌ ಅನುಮತಿ

    ಆರೋಪಿ ಅಫ್ತಾಬ್‌ ಕುರಿತು ಮಾತನಾಡಿ, ಅವನಿಗೆ ಕರುಣೆ ಇಲ್ಲ. ಸಾರ್ವಜನಿಕವಾಗಿ ಅವನನ್ನು ಗಲ್ಲಿಗೇರಿಸಬೇಕು. ಸಾಕ್ಷ್ಯಗಳು ನಮ್ಮ ಮುಂದೆ ಇವೆ, ಕಾಯುವ ಅಗತ್ಯವಿಲ್ಲ. ಕೆಲವು ವಿಷಯಗಳಲ್ಲಿ ನಾವು ಕಾನೂನನ್ನು ಕೈಗೆ ತೆಗೆದುಕೊಳ್ಳಬೇಕು ಎಂದಿದ್ದಾರೆ.

    ಮುಂಬೈ ಮೂಲದ 27 ವರ್ಷದ ಶ್ರದ್ಧಾ ವಾಲ್ಕರ್ ಅವರನ್ನು ಈ ವರ್ಷದ ಮೇ ತಿಂಗಳಲ್ಲಿ ದೆಹಲಿಯಲ್ಲಿ ಆಕೆಯ ಪ್ರಿಯಕರ ಅಫ್ತಾಬ್ ಪೂನಾವಾಲಾ ಕೊಲೆ ಮಾಡಿದ್ದ. ಆಕೆಯ ಕತ್ತು ಹಿಸುಕಿ ಕೊಂದ ನಂತರ, ಅಫ್ತಾಬ್ ಆಕೆಯ ದೇಹವನ್ನು 35 ತುಂಡುಗಳಾಗಿ ಕತ್ತರಿಸಿ ದೆಹಲಿಯ ವಿವಿಧ ಸ್ಥಳಗಳಲ್ಲಿ ಎಸೆದಿದ್ದ. ಕತ್ತರಿಸಿದ ದೇಹದ ಭಾಗಗಳನ್ನು ಶೇಖರಿಸಿಡಲು ರೆಫ್ರಿಜರೇಟರ್ ಕೂಡ ಬಳಿಸಿದ್ದ. ಇಂತಹ ಭೀಕರ ಪ್ರಕರಣವನ್ನು ದೆಹಲಿ ಪೊಲೀಸರು ಭೇದಿಸಿದ್ದಾರೆ. ಇದನ್ನೂ ಓದಿ: ಶ್ರದ್ಧಾ ವಾಕರ್ ಹತ್ಯೆ ಪ್ರಕರಣ ಸಿಬಿಐಗೆ ವರ್ಗಾವಣೆ ಸಾಧ್ಯತೆ

    Live Tv
    [brid partner=56869869 player=32851 video=960834 autoplay=true]

  • ಇಸ್ಲಾಂಗೆ ಮತಾಂತರವಾಗಲು ನಿರಾಕರಿಸಿದ್ದಕ್ಕೆ ಗೆಳತಿಯನ್ನು 4ನೇ ಮಹಡಿಯಿಂದ ಎಸೆದು ಹತ್ಯೆಗೈದ

    ಇಸ್ಲಾಂಗೆ ಮತಾಂತರವಾಗಲು ನಿರಾಕರಿಸಿದ್ದಕ್ಕೆ ಗೆಳತಿಯನ್ನು 4ನೇ ಮಹಡಿಯಿಂದ ಎಸೆದು ಹತ್ಯೆಗೈದ

    ಲಕ್ನೋ: ತನ್ನನ್ನು ಮದುವೆಯಾಗುವಂತೆ (Marriage) ಕೇಳಿದ್ದಕ್ಕೆ ಲಿವಿಂಗ್ ರಿಲೇಷನ್‌ಶಿಪ್‌ನಲ್ಲಿದ್ದ (Live In Relationship) ಗೆಳತಿಯನ್ನ ಭೀಕರವಾಗಿ ಹತ್ಯೆ ಮಾಡಿದ ದೆಹಲಿಯ (Delhi Murder) ಘಟನೆ ಇನ್ನೂ ಕಣ್ಣಿಗೆ ಕಟ್ಟಿದಂತಿದೆ. ಇದೀಗ ಉತ್ತರ ಪ್ರದೇಶದಲ್ಲಿ (UttarPradesh) ಅಂತಹದ್ದೇ ಘಟನೆಯೊಂದು ನಡೆದಿರುವುದು ಪೊಲೀಸರ ನಿದ್ದೆಗೆಡಿಸಿದೆ.

    ಮುಸ್ಲಿಂ (Muslim) ಯುವಕನೊಬ್ಬ ತನ್ನ 19 ವರ್ಷದ ಹಿಂದೂ ಗೆಳತಿ ಮತಾಂತರಗೊಳ್ಳಲು ನಿರಾಕರಿಸಿದ್ದರಿಂದ ಆಕೆಯನ್ನು ಕಟ್ಟಡದ 4ನೇ ಮಹಡಿಯಿಂದ ಎಸೆದು ಕೊಂದಿರುವ ಘಟನೆ ಉತ್ತರಪ್ರದೇಶದ ಲಕ್ನೋದಲ್ಲಿ ನಡೆದಿದೆ. ಇದನ್ನೂ ಓದಿ: ರಾಜೀವ್‌ಗಾಂಧಿ ಹತ್ಯೆ ಕೇಸ್ – ರೀಲಿಸ್ ಆದ 6 ಮಂದಿಯಲ್ಲಿ ನಾಲ್ವರು ಗಡಿಪಾರು

    ಆರೋಪಿ ಸೂಫಿಯಾನ್ ಹಾಗೂ ನಿಧಿ ಗುಪ್ತ (19) ದುಬಗ್ಗಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲೇ ವಾಸಿಸುತ್ತಿದ್ದರು. ನಿಧಿ ಬ್ಯೂಟಿಷಿಯನ್ (Beautician) ತರಬೇತಿ ಪಡೆದಿದ್ದಳು. ಕಳೆದ ಎರಡು ತಿಂಗಳಿನಿಂದ ಇಬ್ಬರು ಸಂಬಂಧ ಹೊಂದಿದ್ದರು. ಇದನ್ನೂ ಓದಿ: ಭಾರತ-ಕಿವೀಸ್ ಸರಣಿ ಆರಂಭಕ್ಕೂ ಮುನ್ನ ಕಪ್ ಹಿಡಿದು ಹೊರಟ ವಿಲಿಯಮ್ಸನ್

    ಸೂಫಿಯಾನ್ ನಿಧಿಗೆ ಮೊಬೈಲ್ (Mobile) ಸಹ ಕೊಡಿಸಿದ್ದ. ಕರೆ ಮಾಡಿದಾಗೆಲ್ಲಾ, ಸಂದೇಶಗಳನ್ನು ಕಳಿಸುವಾಗ ಆಕೆಯನ್ನು ಇಸ್ಲಾಂಗೆ ಮತಾಂತರವಾಗುವಂತೆ ಬ್ರೈನ್‌ವಾಶ್ ಮಾಡುತ್ತಿದ್ದ. ಈ ವಿಷಯ ತಿಳಿದ ನಿಧಿ ಪೋಷಕರು ಸೂಫಿಯಾನ್ ಮತ್ತು ಅವನ ಕುಟುಂಬಕ್ಕೆ ಬೆದರಿಕೆ ಹಾಕಿದ್ದರು. ಬಲವಂತವಾಗಿ ಮತಾಂತಗೊಳಿಸಲು ಪ್ರಯತ್ನಿಸುತ್ತಿದ್ದರಿಂದ ನಿಧಿಯನ್ನು ಅಜ್ಜಿ ಮನೆಗೆ ಕಳುಹಿಸಿದ್ದರು. ಇದರಿಂದ ಕೆಲ ದಿನಗಳಿಂದ ಸೂಫಿಯಾನ್‌ನೊಂದಿಗೆ ಮಾತನಾಡುವುದು ನಿಂತಿತ್ತು. ಆದಾಗ್ಯೂ ಸೂಫಿಯಾನ್ ದುರ್ವರ್ತನೆಯಿಂದ ಪೋಷಕರು ದೂರು ನೀಡಿದ್ದರು. ಬಳಿಕ ರಾಜಿ ಮಾಡಿಕೊಳ್ಳಲಾಗಿತ್ತು. ಆದರೆ ಭಾನುವಾರ ನಿಧಿ ತನ್ನ ಮನೆಯ ನಾಲ್ಕನೇ ಮಹಡಿಗೆ ಬಂದಾಗ ಬಾಲ್ಕನಿಯಿಂದ ಎಸೆದಿದ್ದಾನೆ ಎಂದು ಕುಟುಂಬಸ್ಥರು ದೂರಿನಲ್ಲಿ ತಿಳಿಸಿದ್ದಾರೆ.

    ಬಳಿಕ ರಕ್ತದ ಮಡುವಿನಲ್ಲಿದ್ದ ನಿಧಿಯನ್ನು ಇಲ್ಲಿನ ಕಿಂಗ್‌ಜಾರ್ಜ್ ವೈದ್ಯಕೀಯ ವಿಶ್ವವಿದ್ಯಾಲಯ ಆಸ್ಪತ್ರೆಗೆ ಸೇರಿಸಲಾಯಿತು. ಆದರೆ ಗಂಭೀರ ಗಾಯಗೊಂಡಿದ್ದರಿಂದ ಚಿಕಿತ್ಸೆ ಫಲಕಾರಿಯಾಗದೇ ಆಕೆ ಸಾವನ್ನಪ್ಪಿದ್ದಾಳೆ.

    ಲಕ್ನೋ ಪೊಲೀಸರು (Lucknow Police) ಕೊಲೆ ಮತ್ತು ಬಲವಂತದ ಮತಾಂತರಕ್ಕೆ ಸಂಬಂಧಿಸಿದಂತೆ ಐಪಿಸಿಯ (IPC) ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ (FIR) ದಾಖಲಿಸಿದ್ದಾರೆ. ಭಾನುವಾರದಿಂದ ಸುಫಿಯಾನ್ ಮತ್ತು ಕುಟುಂಬ ಪರಾರಿಯಾಗಿದೆ. ಕುಟುಂಬವನ್ನು ಪತ್ತೆಹಚ್ಚಲು ಪೊಲೀಸರು (Police) ಬಲೆ ಬೀಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]