Tag: Shreyas Iyer

  • ಮುಂಬೈ ವಿರುದ್ಧ 7 ವಿಕೆಟ್‌ಗಳ ಭರ್ಜರಿ ಗೆಲುವು ಜಯ – ನಂ.1 ಪಟ್ಟಕ್ಕೇರಿದ ಪಂಜಾಬ್‌ ಕಿಂಗ್ಸ್‌

    ಮುಂಬೈ ವಿರುದ್ಧ 7 ವಿಕೆಟ್‌ಗಳ ಭರ್ಜರಿ ಗೆಲುವು ಜಯ – ನಂ.1 ಪಟ್ಟಕ್ಕೇರಿದ ಪಂಜಾಬ್‌ ಕಿಂಗ್ಸ್‌

    ಜೈಪುರ: ಜೋಶ್ ಇಂಗ್ಲಿಸ್ (Josh Inglis), ಪ್ರಿಯಾಂಶ್‌ ಆರ್ಯ (Priyansh Arya) ಶತಕದ ಜೊತೆಯಾಟ ನೆರವಿನಿಂದ ಮುಂಬೈ ಇಂಡಿಯನ್ಸ್‌ ವಿರುದ್ಧ ಪಂಜಾಬ್‌ ಕಿಂಗ್ಸ್ 7 ವಿಕೆಟ್‌ಗಳ ಭರ್ಜರಿ ಗೆಲುವು ಕಂಡಿದೆ. ಈ ಮೂಲಕ ಅಂಕಪಟ್ಟಿಯಲ್ಲಿ ನಂ.1 ಸ್ಥಾನದೊಂದಿಗೆ ಪ್ಲೇ ಆಫ್‌ಗೆ ಲಗ್ಗೆಯಿಟ್ಟಿದೆ. 11 ವರ್ಷಗಳ ಬಳಿಕ ಶ್ರೇಯಸ್‌ ಅಯ್ಯರ್‌ ನಾಯಕತ್ವದಲ್ಲಿ ಪ್ಲೇ ಆಫ್‌ಗೆ ಎಂಟ್ರಿ ಕೊಟ್ಟ ಪಂಜಾಬ್‌ ಕಿಂಗ್ಸ್‌ (Punjab Kings) ಇದೇ ಮೊದಲಬಾರಿಗೆ ನಂ.1 ಸ್ಥಾನದೊಂದಿಗೆ ಪ್ಲೇ ಆಫ್‌ಗೆ ಅರ್ಹತೆ ಪಡೆದುಕೊಂಡಿದೆ.

    ನಿರ್ಣಾಯಕ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಕ್ರೀಸ್‌ಗಿಳಿದ ಮುಂಬೈ (Mumbai Indians) 20 ಓವರ್‌ಗಳಲ್ಲಿ 7 ವಿಕೆಟ್‌ ನಷ್ಟಕ್ಕೆ 184 ರನ್‌ ಗಳಿಸಿತ್ತು. ಸ್ಪರ್ಧಾತ್ಮಕ ಮೊತ್ತದ ಗುರಿ ಬೆನ್ನಟ್ಟಿದ ಪಂಜಾಬ್‌ 18.3 ಓವರ್‌ಗಳಲ್ಲಿ 3 ವಿಕೆಟ್‌ ನಷ್ಟಕ್ಕೆ 187 ರನ್‌ ಚಚ್ಚಿ ಗೆಲುವು ಸಾಧಿಸಿತು. ಈ ಪಂದ್ಯದ ಮುಕ್ತಾಯದೊಂದಿಗೆ ಉಭಯ ತಂಡಗಳೂ 18ನೇ ಆವೃತ್ತಿಯ ಲೀಗ್‌ ಸುತ್ತಿನ  ಪಂದ್ಯಗಳನ್ನು ಮುಕ್ತಾಯಗೊಳಿಸಿದವು.

    ನಿಧಾನಗತಿಯ ಬ್ಯಾಟಿಂಗ್‌ ಆರಂಭಿಸಿದ ಪಂಜಾಬ್‌ 4.2 ಓವರ್‌ಗಳಲ್ಲಿ 34 ರನ್‌ಗಳಿಗೆ ಮೊದಲ ವಿಕೆಟ್‌ ಕಳೆದುಕೊಂಡಿತ್ತು. ಆದ್ರೆ 2ನೇ ವಿಕೆಟ್‌ಗೆ ಜೋಶ್‌ ಇಂಗ್ಲಿಸ್‌ ಹಾಗೂ ಪ್ರಿಯಾಂಶ್‌ ಆರ್ಯ ಶತಕದ ಜೊತೆಯಾಟ ನೆರವಿನಿಂದ ಸುಲಭ ಗೆಲುವಿನತ್ತ ಮುನ್ನಡೆಯಿತು. 2ನೇ ವಿಕೆಟಿಗೆ ಈ ಜೋಡಿ 59 ಎಸೆತಗಳಲ್ಲಿ 109 ರನ್‌ ಗಳಿಸಿತು. ಈ ವೇಳೆ ಸ್ಪೋಟಕ ಬ್ಯಾಟಿಂಗ್‌ ನಡೆಸುತ್ತಿದ್ದ ಪ್ರಿಯಾಂಶ್‌ ಆರ್ಯ 35 ಎಸೆತಗಳಲ್ಲಿ 2 ಸಿಕ್ಸರ್‌, 9 ಬೌಂಡರಿ ಸಹಿತ 62 ರನ್‌ ಸಿಡಿಸಿ ಔಟಾಗುತ್ತಿದ್ದಂತೆ ಜೋಶ್‌ ಇಂಗ್ಲಿಷ್‌ ಆರ್ಭಟ ಮುಂದುವರಿಸಿದರು. ಇದಕ್ಕೆ ನಾಯಕ ಶ್ರೇಯಸ್‌ ಅಯ್ಯರ್‌ ಕೂಡ ಸಾಥ್‌ ನೀಡಿದ್ರು.

    ಇಂಗ್ಲಿಷ್‌ 48 ಎಸೆತಗಳಲ್ಲಿ 73 ರನ್‌ (42 ಎಸೆತ, 3 ಸಿಕ್ಸರ್‌, 9 ಬೌಂಡರಿ) ಚಚ್ಚಿದ್ರೆ, ಶ್ರೇಯಸ್‌ ಅಯ್ಯರ್‌ 16 ಎಸೆತಗಳಲ್ಲಿ ಅಜೇಯ 26 ರನ್‌, ನೇಹಾಲ್‌ ವಧೇರ ಅಜೇಯ 2 ರನ್‌ ಗಳಿಸಿ ಗೆಲುವಿನ ದಡ ಸೇರಿಸಿದ್ರು.

    ಇದಕ್ಕೂ ಮುನ್ನ ಬ್ಯಾಟಿಂಗ್ ಮಾಡಿದ ಮುಂಬೈ ಇಂಡಿಯನ್ಸ್ ಸ್ಫೋಟಕ ಆರಂಭ ಪಡೆಯಲು ವಿಫಲವಾಯಿತು. ಮೊದಲ ವಿಕೆಟ್​ಗೆ ರೋಹಿತ್​-ರ‍್ಯಾನ್‌ ರಿಕಲ್ಟನ್ ಜೋಡಿ 45 ರನ್​ಗಳ ಜೊತೆಯಾಟ ನೀಡಿತು. ರಿಕಲ್ಟನ್‌ 20 ಎಸೆತಗಳಲ್ಲಿ​ 5 ಬೌಂಡರಿಗಳ ಸಹಿತ 27 ರನ್​ಗಳಿಸಿ ಔಟಾದರು. ರೋಹಿತ್ ಶರ್ಮಾ ಕೂಡ ನಿರೀಕ್ಷಿತ ಪ್ರದರ್ಶನ ತೋರುವಲ್ಲಿ ಮತ್ತೆ ವಿಫಲರಾದರು. ರೋಹಿತ್‌ ಶರ್ಮಾ 21 ಎಸೆತಗಳಲ್ಲಿ 24 ರನ್​ಗಳಿಸಿ ಔಟಾದರು. ನಂತರ ಬಂದ ತಿಲಕ್ ವರ್ಮಾ ಕೇವಲ 1 ರನ್​ಗೆ ವಿಕೆಟ್ ಒಪ್ಪಿಸಿ ನಿರಾಶೆ ಮೂಡಿಸಿದರು. ಸ್ಪೋಟಕ ಪ್ರದರ್ಶನ ನೀಡುತ್ತಿದ್ದ ವಿಲ್ ಜಾಕ್ಸ್ ಕೂಡ 8 ಎಸೆತಗಳಲ್ಲಿ 17 ರನ್​ಗಳಿಸಿ ಔಟ್ ಆದರು.

    ಅಲ್ಪಮೊತ್ತಕ್ಕೆ ಕುಸಿಯುವ ಭೀತಿ ಎದುರಿಸಿದ್ದ ಮುಂಬೈಗೆ ನಾಯಕ ಹಾರ್ದಿಕ್ ಪಾಂಡ್ಯ ಹಾಗೂ ಸೂರ್ಯಕುಮಾರ್ ಯಾದವ್ ಚೇತರಿಕೆ ನೀಡಿದರು. ಇವರಿಬ್ಬರು 5ನೇ ವಿಕೆಟ್ ಜೊತೆಯಾಟದಲ್ಲಿ 23 ಎಸೆತಗಳಲ್ಲಿ 44 ರನ್​ಗಳಿಸಿದರು. ಪಾಂಡ್ಯ 15 ಎಸೆತಗಳಲ್ಲಿ ತಲಾ 2 ಬೌಂಡರಿ, 2 ಸಿಕ್ಸರ್ ಸೇರಿ 26 ರನ್​ಗಳಿಸಿದರು. ಕೊನೆಯಲ್ಲಿ ಅಬ್ಬರಿಸಿದ ಸೂರ್ಯಕುಮಾರ್ ಹಾಗೂ ನಮನ್ ಧೀರ್ ಜೋಡಿ 6ನೇ ವಿಕೆಟ್ ಜೊತೆಯಾಟದಲ್ಲಿ 17 ಎಸೆತಗಳಲ್ಲಿ 31 ರನ್​ ಸೇರಿಸಿದರು. ನಮನ್ 12 ಎಸೆತಗಳಲ್ಲಿ 2 ಸಿಕ್ಸರ್ ಸಹಿತ 20 ರನ್​ಗಳಿಸಿದರು. ಕೊನೆಯವರೆಗೂ ಹೋರಾಡಿದ ಸೂರ್ಯಕುಮಾರ್ ಯಾದವ್ 39 ಎಸೆತಗಳಲ್ಲಿ 6 ಬೌಂಡರಿ, 2 ಸಿಕ್ಸರ್​ಗಳ ಸಹಿತ 57 ರನ್​ಗಳಿಸಿ ಕೊನೆಯ ಎಸೆತದಲ್ಲಿ ಅರ್ಷ್‌ದೀಪ್‌ ಸಿಂಗ್‌ಗೆ ವಿಕೆಟ್ ಒಪ್ಪಿಸಿದರು.

    ಪಂಜಾಬ್ ಕಿಂಗ್ಸ್ ಪರ ಅರ್ಷ್‌ದೀಪ್‌ ಸಿಂಗ್, ಮಾರ್ಕೊ ಜಾನ್ಸನ್, ವೈಶಾಕ್ ವಿಜಯಕುಮಾರ್ ತಲಾ 2 ವಿಕೆಟ್‌ ಕಿತ್ತರೆ, ಹರ್ಪ್ರೀತ್‌ ಬ್ರಾರ್ 1 ವಿಕೆಟ್‌ ಪಡೆದರು.

  • ಯಶಸ್ವಿ, ವೈಭವ್‌ ಹೋರಾಟ ವ್ಯರ್ಥ, ಪಂಜಾಬ್‌ಗೆ 10 ರನ್‌ ರೋಚಕ ಜಯ – ಪ್ಲೇ ಆಫ್‌ಗೆ ಇನ್ನೂ ಹತ್ತಿರ!

    ಯಶಸ್ವಿ, ವೈಭವ್‌ ಹೋರಾಟ ವ್ಯರ್ಥ, ಪಂಜಾಬ್‌ಗೆ 10 ರನ್‌ ರೋಚಕ ಜಯ – ಪ್ಲೇ ಆಫ್‌ಗೆ ಇನ್ನೂ ಹತ್ತಿರ!

    ಜೈಪುರ್‌: ಯಶಸ್ವಿ ಜೈಸ್ವಾಲ್‌, ವೈಭವ್‌ ಸೂರ್ಯವಂಶಿ ಅವರ ಸ್ಫೋಟಕ ಆರಂಭದ ಹೊರತಾಗಿಯೂ ರಾಜಸ್ಥಾನ್‌ ರಾಯಲ್ಸ್‌ 10 ರನ್‌ಗಳ ವಿರೋಚಿತ ಸೋಲು ಕಂಡಿದೆ. ರಾಜಸ್ಥಾನ್‌ ವಿರುದ್ಧ ಗೆದ್ದ ಪಂಜಾಬ್‌ 17 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ 2ನೇ ಸ್ಥಾನಕ್ಕೆ ಜಿಗಿದಿದ್ದು, ಪ್ಲೇ ಆಫ್‌ಗೆ ಇನ್ನೂ ಹತ್ತಿರವಾಗಿದೆ.

    ಅಂಕಪಟ್ಟಿಯಲ್ಲಿ 17 ಅಂಕ ಗಳಿಸಿರುವ ಆರ್‌ಸಿಬಿ +0.482 ನೆಟ್‌ ರನ್‌ರೇಟ್‌ನೊಂದಿಗೆ ಅಗ್ರಸ್ಥಾನದಲ್ಲಿದ್ದರೆ, ಪಂಜಾಬ್‌ ಕಿಂಗ್ಸ್‌ 17 ಅಂಕ ಗಳಿಸಿದ್ದರೂ +0.389 ನೆಟ್‌ರನ್‌ರೇಟ್‌ನೊಂದಿಗೆ 2ನೇ ಸ್ಥಾನ ಕಾಯ್ದುಕೊಂಡಿದೆ.

    ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಪಂಜಾಬ್‌ 5 ವಿಕೆಟ್‌ ನಷ್ಟಕ್ಕೆ 219 ರನ್‌ ಗಳಿಸಿತ್ತು. 220 ರನ್‌ಗಳ ಗುರಿ ಬೆನ್ನಟ್ಟಿದ ರಾಜಸ್ಥಾನ್‌ ನಿಗದಿತ ಓವರ್‌ಗಳಲ್ಲಿ 7 ವಿಕೆಟ್‌ ನಷ್ಟಕ್ಕೆ 209 ರನ್‌ ಗಳಿಸಿ ಸೋಲೊಪ್ಪಿಕೊಂಡಿತು.

    ಸ್ಫೋಟಕ ಅರ್ಧಶತಕ ಜೊತೆಯಾ:
    ರಾಜಸ್ಥಾನ್‌ ಪರ ಆರಂಭಿಕರಾಗಿ ಕಣಕ್ಕಿಳಿದಿದ್ದ ವೈಭವ್‌ ಸೂರ್ಯವಂಶಿ ಹಾಗೂ ಯಶಸ್ವಿ ಜೈಸ್ವಾಲ್‌ ಸ್ಪೋಟಕ ಪ್ರದರ್ಶನ ನೀಡಿದ್ದರು. ಮೊದಲ ಓವರ್‌ನಲ್ಲೇ ಯಶಸ್ವಿ 22 ರನ್‌ ಚಚ್ಚಿದ್ದರು. ಇನ್ನೂ ಮೊದಲ ವಿಕೆಟ್‌ಗೆ ಈ ಜೋಡಿ 29 ಎಸೆತಗಳಲ್ಲಿ ಸ್ಫೋಟಕ 76 ರನ್‌ ಜೊತೆಯಾಟ ನೀಡಿತ್ತು. ಈ ವೇಳೆ ವೈಭವ್‌ 15 ಎಸೆತಗಳಲ್ಲಿ 40 ರನ್‌ (4 ಸಿಕ್ಸರ್‌, 4 ಬೌಂಡರಿ) ಚಚ್ಚಿ ಔಟಾದರು. ಈ ಬೆನ್ನಲ್ಲೇ ಯಶಸ್ವಿ ಜೈಸ್ವಾಲ್‌ 25 ಎಸೆತಗಳಲ್ಲಿ 50 ರನ್‌ (1 ಸಿಕ್ಸರ್‌, 9 ಬೌಂಡರಿ) ಗಳಿಸಿ ಔಟಾದರು.

    ಇವರಿಬ್ಬರ ವಿಕೆಟ್‌ ಬೀಳುತ್ತಿದ್ದಂತೆ ಒಂದೆಡೆ ರನ್‌ ವೇಗ ಕಡಿತಗೊಂಡರೆ ಮತ್ತೊಂದೆಡೆ ಪ್ರಮುಖ ವಿಕೆಟ್‌ ಬೀಳುತ್ತಾ ಸಾಗಿತು. ಮಧ್ಯಮ ಕ್ರಮಾಂಕದಲ್ಲಿ ಧ್ರುವ್‌ ಜುರೆಲ್‌ ಅವರ ಅರ್ಧಶತಕದ (53 ರನ್‌) ಹೋರಾಟ ವ್ಯರ್ಥವಾಯಿತು. ಅಂತಿಮವಾಗಿ ರಾಜಸ್ಥಾನ್‌ 7 ವಿಕೆಟ್‌ಗೆ 209 ರನ್‌ ಗಳಿಸಿ ಸೋಲೊಪ್ಪಿಕೊಂಡಿತು.

    ಇದಕ್ಕೂ ಮುನ್ನ ಬ್ಯಾಟ್‌ ಮಾಡಿದ್ದ ಪಂಜಾಬ್‌ ಪರ ನೇಹಾಲ್‌ ವಧೇರಾ 70 ರನ್‌ (37 ಎಸೆತ, 5 ಸಿಕ್ಸರ್‌, 5 ಬೌಂಡರಿ), ಶಶಾಂಕ್‌ ಸಿಂಗ್‌ (30 ಎಸೆತ, 3 ಸಿಕ್ಸರ್‌, 5 ಬೌಂಡರಿ), ಶ್ರೇಯಸ್‌ ಅಯ್ಯರ್‌ 30 ರನ್‌, ಪ್ರಭ್‌ ಸಿಮ್ರನ್‌, ಒಮರ್ಝೈ ತಲಾ 21 ರನ್‌, ಪ್ರಿಯಾಂಶ್‌ ಆರ್ಯ 9 ರನ್‌ ಗಳಿಸಿದ್ರೆ ಮಿಚೆಲ್ ಓವನ್ ಶೂನ್ಯ ಸುತ್ತಿದರು.

  • ಇಂದು ಆರ್‌ಸಿಬಿ-ಪಂಜಾಬ್‌ ಮುಖಾಮುಖಿ – ಸೇಡು ತೀರಿಸಿಕೊಳ್ಳಲು ಬೆಂಗಳೂರು ರಣಕಲಿಗಳ ಕಾತರ!

    ಇಂದು ಆರ್‌ಸಿಬಿ-ಪಂಜಾಬ್‌ ಮುಖಾಮುಖಿ – ಸೇಡು ತೀರಿಸಿಕೊಳ್ಳಲು ಬೆಂಗಳೂರು ರಣಕಲಿಗಳ ಕಾತರ!

    ಮಲ್ಲನ್‌ಪುರ್‌: ಸೂಪರ್‌ ಸಂಡೇ ಇಂದು ಅಭಿಮಾನಿಗಳ ಕಣ್ಣಿಗೆ ಹಬ್ಬವಾಗಿದೆ. ತವರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಸೋಲಿನ ಸರಪಣಿ ಮತ್ತೆ ಮುಂದುವರಿದಿದೆ. ಶುಕ್ರವಾರ ಪಂಜಾಬ್ ಕಿಂಗ್ಸ್ (Punjab Kings) ವಿರುದ್ಧ ನಡೆದ ಪಂದ್ಯದಲ್ಲಿ 5 ವಿಕೆಟ್‌ಗಳಿಂದ ಸೋಲು ಅನುಭವಿಸುವ ಮೂಲಕ ತವರಿನಲ್ಲಿ ಹ್ಯಾಟ್ರಿಕ್‌ ಸೋಲು ಕಂಡ ಆರ್‌ಸಿಬಿ ಇಂದು ಪಂಜಾಬ್‌ಗೆ ತವರಿನಲ್ಲೇ ಬಗ್ಗು ಬಡಿಯಲು ಕಾತರದಿಂದ ಕಾಯುತ್ತಿದೆ.

    18ನೇ ಆವೃತ್ತಿಯಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸತತ 3ನೇ ಬಾರಿಗೆ ಪರಾಭವಗೊಂಡಿದೆ. ಹೀಗಾಗಿ 3ನೇ ಸ್ಥಾನದಲ್ಲಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 4ನೇ ಸ್ಥಾನಕ್ಕೆ ಕುಸಿದಿದೆ. ಇನ್ನು 4ನೇ ಸ್ಥಾನದಲ್ಲಿದ್ದ ಪಂಜಾಬ್ ಕಿಂಗ್ಸ್ ಆಡಿರುವ 7 ಪಂದ್ಯಗಳ ಪೈಕಿ 5 ಗೆಲುವಿನೊಂದಿಗೆ 10 ಅಂಕ ಪಡೆದು 2ನೇ ಸ್ಥಾನಕ್ಕೆ ಜಿಗಿದಿದೆ. ಇದನ್ನೂ ಓದಿ: ʻಈ ಸಲ ಕಪ್‌ ನಮ್ದೇʼ ಅಂತ ಹೇಳಬೇಡಿ, ಹೇಳಿದಾಗೆಲ್ಲ ತೊಂದ್ರೆ ಆಗುತ್ತೆ: ಅನಿಲ್‌ ಕುಂಬ್ಳೆ

    Punjab Kings 2

    ಆರ್‌ಸಿಬಿ ಸೋಲಿಗೆ ಮಳೆ ಕಾರಣವೇ?
    ಶುಕ್ರವಾರದ ಮಳೆಯಿಂದಾಗಿ ಅಚಡಣೆಗೊಳಗಾದ ಪಂದ್ಯವನ್ನು 14 ಓವರ್‌ಗೆ ಸೀಮಿತಗೊಳಿಸಲಾಗಿತ್ತು. ಆದಾಗ್ಯೂ ಟಿಮ್‌ ಡೇವಿಡ್‌ (Tim David) ಅವರ ಸ್ಫೋಟಕ ಬ್ಯಾಟಿಂಗ್‌ ನೆರವಿನಿಂದ ಆರ್‌ಸಿಬಿ ನೀಡಿದ್ದ 96 ರನ್‌ಗಳ ಗುರಿಯನ್ನು ಪಂಜಾಬ್ ಕಿಂಗ್ಸ್ ತಂಡ ಇನ್ನೂ 11 ಎಸೆತಗಳು ಬಾಕಿ ಉಳಿದಿರುವಂತೆ 5 ವಿಕೆಟ್ ಕಳೆದುಕೊಂಡು ತಲುಪಿತು. ಇದನ್ನೂ ಓದಿ: ಕಾಫಿ ತೋಟದ ಸೊಬಗಿಗೆ ಮಾರುಹೋದ ಬ್ಯಾಡ್ಮಿಂಟರ್ ತಾರೆ – ಪಿವಿ ಸಿಂಧುಗೆ ಕೊಡಗಿನಲ್ಲಿ ಕಾಫಿ ತೋಟ ಖರೀದಿಸುವಾಸೆ!

    ಪಂಜಾಬ್ ತಂಡದ ಮೊದಲೆರಡು ವಿಕೆಟ್‌ಗಳು 32 ರನ್ ಗಳಿಗೆ ಉರುಳಿದಾಗ ಆರ್‌ಸಿಬಿ ಗೆಲುವಿನ ಆಸೆಯಲ್ಲಿತ್ತು. ಬಳಿಕ 53 ರನ್ ಗಳಿಗೆ 4 ವಿಕೆಟ್‌ಗಳನ್ನು ಕಳೆದುಕೊಂಡಾಗಲೂ ಗೆಲ್ಲುವ ಅವಕಾಶವಿತ್ತು. ಆದರೆ ಅಂತಿಮ ಹಂತದಲ್ಲಿ ನೇಹಾಲ್ ವಧೇರಾ ಕೇವಲ 19 ಎಸೆತಗಳಲ್ಲಿ 3 ಬೌಂಡರಿ ಮತ್ತು 3 ಸಿಕ್ಸರ್ ಗಳನ್ನೊಳಗೊಂಡ ಅಜೇಯ 33 ರನ್ ಗಳಿಸಿ ತಂಡವನ್ನು ಗೆಲುವಿನ ದಡ ತಲುಪಿಸಿದರು. ಆರ್‌ಸಿಬಿ ಪರ ಜೋಶ್ ಹೇಜಲ್ವುಡ್ 3 ವಿಕೆಟ್ ಮತ್ತು ಭುವನೇಶ್ವರ್ ಕುಮಾರ್ 2 ವಿಕೆಟ್ ಕಬಳಿಸಿದ್ದರು. ಇನ್ನೂ ಸ್ಫೋಟಕ ಪ್ರದರ್ಶನ ನೀಡಿ, 2 ಕ್ಯಾಚ್‌ ಪಡೆದಿದ್ದ ಆರ್‌ಸಿಬಿ ಟಿಂ ಡೇವಿಡ್‌ಗೆ ತಂಡ ಸೋತ ಹೊರತಾಗಿಯೂ ಪಂದ್ಯಶ್ರೇಷ್ಠ ಪ್ರಶಸ್ತಿ ನೀಡಲಾಯಿತು. ಇದನ್ನೂ ಓದಿ: ಡ್ರೆಸ್ಸಿಂಗ್‌ ರೂಮ್‌ ಮಾಹಿತಿ ಲೀಕ್‌ – ಗಂಭೀರ್‌ ಆಪ್ತ ಸೇರಿ ನಾಲ್ವರು ಕೋಚಿಂಗ್‌ ಸಿಬ್ಬಂದಿಯನ್ನ ಕಿತ್ತೆಸೆದ ಬಿಸಿಸಿಐ

  • ಶೀಘ್ರದಲ್ಲೇ ಬಿಸಿಸಿಐ ಕೇಂದ್ರ ಗುತ್ತಿಗೆ – ಮತ್ತೆ ಶ್ರೇಯಸ್, ಇಶಾನ್ ಕಿಶನ್ ಕಂಬ್ಯಾಕ್?

    ಶೀಘ್ರದಲ್ಲೇ ಬಿಸಿಸಿಐ ಕೇಂದ್ರ ಗುತ್ತಿಗೆ – ಮತ್ತೆ ಶ್ರೇಯಸ್, ಇಶಾನ್ ಕಿಶನ್ ಕಂಬ್ಯಾಕ್?

    ಮುಂಬೈ: ಬಿಸಿಸಿಐ (BCCI) 2024-25ನೇ ಸಾಲಿನ ಕೇಂದ್ರ ಗುತ್ತಿಗೆಯನ್ನು ಸದ್ಯದಲ್ಲೇ ಪ್ರಕಟಿಸುವ ನಿರೀಕ್ಷೆಯಿದ್ದು, ಈ ಹಿಂದೆ ಗುತ್ತಿಗೆಯಿಂದ ಹೊರಬಿದ್ದಿದ್ದ ಶ್ರೇಯಸ್ ಅಯ್ಯರ್ (Shreyas Iyer)  ಹಾಗೂ ಇಶಾನ್ ಕಿಶನ್ (Ishan Kishan) ಮತ್ತೆ ಮರಳುವ ಸಾಧ್ಯತೆಯಿದೆ.

    ಮಾ.29 ರಂದು ಗುವಾಹಟಿಯಲ್ಲಿ ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ (Devajit Saikia) ಅವರು ಭಾರತದ ಮುಖ್ಯ ಕೋಚ್ ಗೌತಮ್ ಗಂಭೀರ್ (Gautam Gambhir) ಹಾಗೂ ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ (Ajit Agarkar) ಅವರನ್ನು ಭೇಟಿಯಾಗಲಿದ್ದಾರೆ ಎಂದು ವರದಿಗಳು ತಿಳಿಸಿವೆ.ಇದನ್ನೂ ಓದಿ:ಇಂದು ಆರ್‌ಸಿಬಿ Vs ಸಿಎಸ್‌ಕೆ ಹೈವೋಲ್ಟೇಜ್ ಫೈಟ್‌ – ಚೆನ್ನೈ ಭದ್ರಕೋಟೆ ಛಿದ್ರ ಮಾಡಲು ಆರ್‌ಸಿಬಿ ಪ್ಲ್ಯಾನ್‌

    ಬಿಸಿಸಿಐ ಮೂರು ದಿನಗಳ ಹಿಂದೆಯಷ್ಟೇ ಭಾರತ ಮಹಿಳಾ ಆಟಗಾರರ ಗುತ್ತಿಗೆ ಪಟ್ಟಿಯನ್ನು ಪ್ರಕಟಿಸಿದೆ. ಶೀಘ್ರದಲ್ಲೇ ಪುರುಷ ಕ್ರಿಕೆಟಿಗರ ಕೇಂದ್ರ ಗುತ್ತಿಗೆ ಪಟ್ಟಿಯನ್ನು ಬಿಡುಗಡೆಗೊಳಿಸಲಿದೆ. ಕಳೆದ ವರ್ಷ 2023-24 ಸಾಲಿನ ಕೇಂದ್ರ ಗುತ್ತಿಗೆ ಪಟ್ಟಿಯಿಂದ ಶ್ರೇಯಸ್ ಅಯ್ಯರ್ ಹಾಗೂ ಇಶಾನ್ ಕಿಶನ್ ಹೊರಗುಳಿದಿದ್ದರು.

    2025ರ ಚಾಂಪಿಯನ್ಸ್ ಟ್ರೋಫಿಯಲ್ಲಿ (Champions Trophy) ಗೆದ್ದ ಭಾರತ ತಂಡಕ್ಕೆ ಶ್ರೇಯಸ್ ಅಯ್ಯರ್ ಅವರ ರನ್‌ಗಳ ಕೊಡುಗೆ ಅಪಾರವಾಗಿತ್ತು. ಒಟ್ಟು 5 ಪಂದ್ಯಗಳಲ್ಲಿ 48.60 ರನ್‌ರೇಟ್‌ನಲ್ಲಿ 243 ರನ್ ಗಳಿಸಿದ್ದರು. ಹೀಗಾಗಿ ಶ್ರೇಯಸ್ ತಮ್ಮ ಗುತ್ತಿಗೆಯನ್ನು ಮರಳಿ ಪಡೆಯುವ ಸಾಧ್ಯತೆಯಿದೆ. ಇನ್ನೂ ಮಾ.22 ರಂದು ಪ್ರಾರಂಭವಾದ ಐಪಿಎಲ್ ಟೂರ್ನಿಯಲ್ಲಿ ಇಶಾನ್ ಕಿಶನ್ ಸನ್‌ರೈಸರ್ಸ್ ಹೈದರಾಬಾದ್ (Sunrisers Hyderabad) ಪರ ಆಡುತ್ತಿದ್ದು, ರಾಜಸ್ಥಾನ ರಾಯಲ್ಸ್ (Rajasthan Royals) ವಿರುದ್ಧ ನಡೆದ ಪಂದ್ಯದಲ್ಲಿ 47 ಎಸೆತಗಳಲ್ಲಿ ಅಜೇಯರಾಗಿ 106 ರನ್‌ಗಳಿಸಿದರು. ಆದರೆ ದೇಶೀಯ ಕ್ರಿಕೆಟ್ ಆಡದ ಹಿನ್ನೆಲೆಯಲ್ಲಿ ಗುತ್ತಿಗೆ ಕಳೆದುಕೊಂಡಿದ್ದ ಇಶಾನ್ ಕಿಶನ್ ಮರಳುತ್ತಾರಾ ಎನ್ನುವುದು ಇನ್ನೂ ಖಚಿತವಾಗಿಲ್ಲ.

    ರೋಹಿತ್, ಜಡ್ಡು, ಕೊಹ್ಲಿ ಎ+ ಗ್ರೇಡ್‌ನಿಂದ ಔಟ್?
    ಇನ್ನೂ ಭಾರತ ಏಕದಿನ ಮತ್ತು ಟೆಸ್ಟ್ ನಾಯಕ ರೋಹಿತ್ ಶರ್ಮಾ, ಕೊಹ್ಲಿ ಹಾಗೂ ಜಡೇಜಾ ಮೂವರು ಟಿ20 ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಬಿಸಿಸಿಐ ನಿಯಮಗಳ ಪ್ರಕಾರ ಟಿ20, ಟೆಸ್ಟ್, ಏಕದಿನ ಮೂರೂ ಮಾದರಿಯಲ್ಲಿ ಆಡುವ ಕ್ರಿಕೆಟಿಗ ಎ+ ದರ್ಜೆಯಲ್ಲಿರುತ್ತಾರೆ. ಯಾವುದೇ ಒಂದು ಮಾದರಿಯಲ್ಲಿರದಿದ್ದರೂ ಪ್ರಮುಖ ಕ್ರಿಕೆಟಿಗರಾಗಿದ್ದರೂ ಎ ದರ್ಜೆಗೆ ಇಳಿಯುತ್ತಾರೆ. ಈ ಹಿನ್ನೆಲೆ ಕೇಂದ್ರ ಗುತ್ತಿಗೆಯಲ್ಲಿ ಅತ್ಯುನ್ನತ ಎ+ ದರ್ಜೆಯಲ್ಲಿ ಉಳಿದುಕೊಳ್ಳುತ್ತಾರಾ ಎಂದು ಕೂತುಹಲಕ್ಕೆ ಕಾರಣವಾಗಿದೆ. ಜೊತೆಗೆ ಬಿಸಿಸಿಐ ಮೂಲವೊಂದು ಮೂವರನ್ನು ಜಸ್ಪ್ರೀತ್ ಬುಮ್ರಾ ಜೊತೆಗೆ ಅತ್ಯುನ್ನತ ದರ್ಜೆಯಲ್ಲಿ ಉಳಿಸಿಕೊಳ್ಳಲಾಗುತ್ತದೆ ಎಂದು ತಿಳಿಸಿದ್ದು, ಇಂಗ್ಲೆಂಡ್ (England) ವಿರುದ್ಧ ನಡೆಯಲಿರುವ ಟೆಸ್ಟ್ ಸರಣಿಯಲ್ಲಿ ಭಾರತವನ್ನು ರೋಹಿತ್ ಮುನ್ನಡೆಸಲಿದ್ದಾರೆ ಎಂದು ತಿಳಿಸಿದೆ.

    ಕಳೆದ ಅಕ್ಟೋಬರ್‌ನಲ್ಲಿ ಭಾರತ ತಂಡಕ್ಕೆ ಯಶಸ್ವಿಯಾಗಿ ಮರಳಿದ್ದ ಹಾಗೂ ಕೇವಲ ಮೂರು ಪಂದ್ಯಗಳಲ್ಲಿ ಒಂಬತ್ತು ವಿಕೆಟ್ ಪಡೆದು 2025ರ ಚಾಂಪಿಯನ್ಸ್ ಟ್ರೋಫಿಯನ್ನು ಭಾರತ ಗೆಲ್ಲುವಲ್ಲಿ ಅದ್ಭುತ ಪಾತ್ರ ವಹಿಸಿದ್ದ “ಮಿಸ್ಟರಿ ಸ್ಪಿನ್ನರ್” ವರುಣ್ ಚಕ್ರವರ್ತಿ (Varun Chakravarthy)  ತಮ್ಮ ಚೊಚ್ಚಲ ಬಿಸಿಸಿಐ ಒಪ್ಪಂದವನ್ನು ಪಡೆಯಲು ಸಜ್ಜಾಗಿದ್ದಾರೆ.ಇದನ್ನೂ ಓದಿ:ಪೂರನ್‌ ಬೆಂಕಿ ಆಟಕ್ಕೆ ಸನ್‌ರೈಸರ್ಸ್‌ ಬರ್ನ್‌ – ಲಕ್ನೋಗೆ 5 ವಿಕೆಟ್‌ಗಳ ಜಯ

  • ರೋಹಿತ್‌ ಪಂದ್ಯಶ್ರೇಷ್ಠ – ಧೋನಿ ಬಳಿಕ ಈ ಸಾಧನೆ ಮಾಡಿದ 2ನೇ ಭಾರತೀಯ ಕ್ಯಾಪ್ಟನ್‌

    ರೋಹಿತ್‌ ಪಂದ್ಯಶ್ರೇಷ್ಠ – ಧೋನಿ ಬಳಿಕ ಈ ಸಾಧನೆ ಮಾಡಿದ 2ನೇ ಭಾರತೀಯ ಕ್ಯಾಪ್ಟನ್‌

    ದುಬೈ: ಚಾಂಪಿಯನ್ಸ್‌ ಟ್ರೋಫಿ ಫೈನಲ್‌ ಪಂದ್ಯದಲ್ಲಿ ಗರಿಷ್ಠ ರನ್‌ ಬಾರಿಸುವ ಮೂಲಕ ಪಂದ್ಯಶ್ರೇಷ್ಠ ಪ್ರಶಸ್ತಿ ಗಿಟ್ಟಿಸಿಕೊಂಡ ಟೀಂ ಇಂಡಿಯಾ ನಾಯಕ ರೋಹಿತ್‌ ಶರ್ಮಾ ಚಾಂಪಿಯನ್ಸ್‌ ಟ್ರೋಫಿಯಲ್ಲಿ ವಿಶೇಷ ಸಾಧನೆಗೆ ಪಾತ್ರರಾದರು.

    ಹೌದು.. ದುಬೈನ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಫೈನಲ್‌ ಪಂದ್ಯದಲ್ಲಿ 83 ಎಸೆತಗಳಲ್ಲಿ 76 ರನ್‌ (3 ಸಿಕ್ಸರ್‌, 7 ಬೌಂಡರಿ) ಬಾರಿಸಿದ ಹಿಟ್‌ಮ್ಯಾನ್‌ ಪಂದ್ಯಶ್ರೇಷ್ಠ ಪ್ರಶಸ್ತಿ ತಮ್ಮದಾಗಿಸಿಕೊಂಡರು. ಈ ಮೂಲಕ ಐಸಿಸಿ ಟೂರ್ನಿಯ ಫೈನಲ್‌ ಪಂದ್ಯದಲ್ಲಿ ಪಂದ್ಯಶ್ರೇಷ್ಠಕ್ಕೆ ಪಾತ್ರರಾದ ಟೀಂ ಇಂಡಿಯಾದ 2ನೇ‌ ನಾಯಕ ಹಾಗೂ ವಿಶ್ವದ ನಾಲ್ಕನೇ ಕ್ಯಾಪ್ಟನ್‌ ಎಂಬ ಸಾಧನೆಗೆ ಪಾತ್ರರಾದರು. 2011ರ ಏಕದಿನ ವಿಶ್ವಕಪ್‌ ಟೂರ್ನಿಯನ್ನಿ ಎಂ.ಎಸ್‌ ಧೋನಿ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದರು.

    ಐಸಿಸಿ ಫೈನಲ್‌ನಲ್ಲಿ ಪಂದ್ಯಶ್ರೇಷ್ಠ ಪ್ರಶಸ್ತಿ ಗೆದ್ದ ಕ್ಯಾಪ್ಟನ್ಸ್‌
    * ಕ್ಲೈವ್ ಲಾಯ್ಡ್ (ವೆಸ್ಟ್ ಇಂಡೀಸ್) – 1975 ಏಕದಿನ ವಿಶ್ವಕಪ್
    * ರಿಕಿ ಪಾಂಟಿಂಗ್ (ಆಸ್ಟ್ರೇಲಿಯಾ) – 2003 ಏಕದಿನ ವಿಶ್ವಕಪ್
    * ಎಂ.ಎಸ್. ಧೋನಿ (ಭಾರತ) – 2011 ಏಕದಿನ ವಿಶ್ವಕಪ್
    * ರೋಹಿತ್ ಶರ್ಮಾ (ಭಾರತ) – 2025 ಚಾಂಪಿಯನ್ಸ್ ಟ್ರೋಫಿ

    ಯಾವ ವರ್ಷ – ಯಾರು ಚಾಂಪಿಯನ್ಸ್‌?
    1998-99ರ ಚೊಚ್ಚಲ ಆವೃತ್ತಿಯಲ್ಲೇ ಚೋಕರ್ಸ್ ದಕ್ಷಿಣ ಆಫ್ರಿಕಾ ಟ್ರೋಫಿ ಮುಡಿಗೇರಿಸಿಕೊಂಡಿತ್ತು. 2000-01ರ ಆವೃತ್ತಿಯಲ್ಲಿ ನ್ಯೂಜಿಲೆಂಡ್ ಟ್ರೋಫಿ ಗೆದ್ದುಕೊಂಡಿತ್ತು. ಆದ್ರೆ 2002-03ರ ಆವೃತ್ತಿಯಲ್ಲಿ 2 ದಿನ ಫೈನಲ್ ನಡೆದರೂ ಮಳೆಗೆ ಪಂದ್ಯ ಬಲಿಯಾಯ್ತು. ಆದ್ದರಿಂದ ಭಾರತ ಮತ್ತು ಶ್ರೀಲಂಕಾವನ್ನ ಜಂಟಿಯಾಗಿ ಚಾಂಪಿಯನ್ಸ್ ಎಂದು ಘೋಷಿಸಲಾಯಿತು. ಇನ್ನೂ 2004ರಲ್ಲಿ ವೆಸ್ಟ್ ಇಂಡೀಸ್, 2006-07, 2009-10ರಲ್ಲಿ ಆಸ್ಟ್ರೇಲಿಯಾ, 2013ರಲ್ಲಿ ಭಾರತ, 2017ರಲ್ಲಿ ಪಾಕಿಸ್ತಾನ ಚಾಂಪಿಯನ್ ಆಗಿತ್ತು. 2000, 2017ರಲ್ಲಿ ಭಾರತ ಫೈನಲ್ ತಲುಪಿದ್ರೂ ಟ್ರೋಫಿ ಗೆಲ್ಲುವ ಅವಕಾಶ ಕಳೆದುಕೊಂಡಿತ್ತು. 2000 ಇಸವಿಯಲ್ಲಿ ಕಿವೀಸ್ ವಿರುದ್ಧ, 2017ರಲ್ಲಿ ಪಾಕಿಸ್ತಾನದ ವಿರುದ್ಧ ಫೈನಲ್‌ನಲ್ಲಿ ಸೋತು ನಿರಾಸೆ ಅನುಭವಿಸಿತ್ತು. ಸದ್ಯ 25 ವರ್ಷಗಳ ಬಳಿಕ ಚಾಂಪಿಯನ್ಸ್ ಟ್ರೋಫಿಯಲ್ಲಿ ಕಿವೀಸ್ ವಿರುದ್ಧ ಗೆದ್ದು ಭಾರತ ಸೇಡು ತೀರಿಸಿಕೊಂಡಿದೆ.

  • ನಿವೃತ್ತಿ ವದಂತಿ ಬಗ್ಗೆ ಮೌನ ಮುರಿದ ರೋಹಿತ್‌ – 2027ರ ಏಕದಿನ ವಿಶ್ವಕಪ್‌ ಮುಂದಿನ ಟಾರ್ಗೆಟ್‌?

    ನಿವೃತ್ತಿ ವದಂತಿ ಬಗ್ಗೆ ಮೌನ ಮುರಿದ ರೋಹಿತ್‌ – 2027ರ ಏಕದಿನ ವಿಶ್ವಕಪ್‌ ಮುಂದಿನ ಟಾರ್ಗೆಟ್‌?

    ದುಬೈ: ನ್ಯೂಜಿಲೆಂಡ್ (New Zealand) ವಿರುದ್ಧ ನಡೆದ ಚಾಂಪಿಯನ್ಸ್ ಟ್ರೋಫಿ (Champions Trophy) ಫೈನಲ್ ಪಂದ್ಯದಲ್ಲಿ 4 ವಿಕೆಟ್‌ಗಳ ಗೆಲುವು ಸಾಧಿಸುವ ಮೂಲಕ ಭಾರತ 3ನೇ ಬಾರಿಗೆ ಕಿರೀಟ ಮುಡಿಗೇರಿಸಿಕೊಂಡಿದೆ. ಇದು ರೋಹಿತ್‌ ಶರ್ಮಾ (Rohit Sharma) ನಾಯಕತ್ವದಲ್ಲಿ ಗೆದ್ದ 2ನೇ ಐಸಿಸಿ ಟ್ರೋಫಿ ಎಂಬುದೂ ಸಹ ವಿಶೇಷ.

    ಇನ್ನೂ 2024ರ ಟಿ20 ವಿಶ್ವಕಪ್‌ ಟ್ರೋಫಿ ಗೆದ್ದ ಬಳಿಕ ಟಿ20 ಕ್ರಿಕೆಟ್‌ಗೆ ವಿದಾಯ ಹೇಳಿದ್ದ ರೋಹಿತ್‌ ಶರ್ಮಾ, ಫೈನಲ್‌ ಪಂದ್ಯದ ಬಳಿಕ ನಿವೃತ್ತಿ ಘೋಷಿಸಲಿದ್ದಾರೆ ಎನ್ನುವ ವದಂತಿ ಹಬ್ಬಿತ್ತು. ಈ ಬಗ್ಗೆ ಕೊನೆಗೂ ಮೌನ ಮುರಿದಿದ್ದಾರೆ. ಪೋಸ್ಟ್‌ ಪ್ರಸೆಂಟೇಷನ್‌ನಲ್ಲಿ ಭವಿಷ್ಯದ ಯೋಜನೆಗಳೇನಾದ್ರೂ ಇದೆಯೇ? ಎಂಬ ಪ್ರಶ್ನೆಗೆ ಉತ್ತರಿಸಿದ ರೋಹಿತ್‌ 2027ರ ಏಕದಿನ ವಿಶ್ವಕಪ್‌ ಟೂರ್ನಿಯಲ್ಲಿ ಕಾಣಿಸಿಕೊಳ್ಳುವ ಸುಳಿವು ಕೊಟ್ಟಿದ್ದಾರೆ. ಭವಿಷ್ಯದ ಯೋಜನೆಗಳು ಭವಿಷ್ಯದಲ್ಲಿ ಬರುತ್ತವೆ. ಸದ್ಯಕ್ಕೆ, ಎಲ್ಲವೂ ಹಾಗೆಯೇ ಮುಂದುವರಿಯುತ್ತದೆ ಎಂದು ರೋಹಿತ್‌ ಹೇಳಿದ್ದಾರೆ.

    ಸೆಮಿ ಫೈನಲ್‌ ವರೆಗೂ ಬ್ಯಾಟಿಂಗ್‌ನಲ್ಲಿ ಫಾರ್ಮ್‌ ಕಳೆದುಕೊಂಡಿದ್ದ ರೋಹಿತ್‌ ಶರ್ಮಾ ಫೈನಲ್‌ನಲ್ಲಿ ಕೀವೀಸ್‌ ಬೌಲರ್‌ಗಳನ್ನು ಚೆಂಡಾಡಿದರು. 83 ಎಸೆತಗಳಲ್ಲಿ 75 ರನ್‌ ಚಚ್ಚಿ ಟೀಂ ಇಂಡಿಯಾ ಗೆಲುವಿಗೆ ಕಾರಣರಾದರು.

    ದುಬೈನ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ್ದ ನ್ಯೂಜಿಲೆಂಡ್ 50 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 251 ರನ್ ಗಳಿಸಿತ್ತು. ಸ್ಪರ್ಧಾತ್ಮಕ ಮೊತ್ತದ ಗುರಿ ಬೆನ್ನಟ್ಟಿದ ಭಾರತ (Team India) 49 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 254 ರನ್ ಗಳಿಸಿ ಗೆಲುವು ಸಾಧಿಸಿತು. ಸಂಘಟಿತ ಬೌಲಿಂಗ್, ಬ್ಯಾಟಿಂಗ್ ಪ್ರದರ್ಶನದೊಂದಿಗೆ 2000 ಇಸವಿಯಲ್ಲಿ ಕಿವೀಸ್ ವಿರುದ್ಧ ಫೈನಲ್ ಸೋಲಿಗೆ ಸೇಡು ತೀರಿಸಿಕೊಂಡಿತು.

    ಮುಂದುವರಿದು.. ಈ ಟ್ರೋಫಿಯನ್ನು ನನ್ನ ದೇಶಕ್ಕೆ ಅರ್ಪಿಸುತ್ತೇನೆ. ಏಕೆಂದರೆ ನಾವು ಗೆಲ್ಲಬೇಕೆಂದು ಪ್ರತಿಯೊಬ್ಬರು ಬಯಸಿದ್ದರು ಶರ್ಮಾ ಭಾವುಕರಾಗಿದ್ದಾರೆ.

    2 ಬಾರಿ ಫೈನಲ್‌ನಲ್ಲಿ ಸೋಲು:
    1998-99ರ ಚೊಚ್ಚಲ ಆವೃತ್ತಿಯಲ್ಲೇ ಚೋಕರ್ಸ್ ದಕ್ಷಿಣ ಆಫ್ರಿಕಾ ಟ್ರೋಫಿ ಮುಡಿಗೇರಿಸಿಕೊಂಡಿತ್ತು. 2000-01ರ ಆವೃತ್ತಿಯಲ್ಲಿ ನ್ಯೂಜಿಲೆಂಡ್ ಟ್ರೋಫಿ ಗೆದ್ದುಕೊಂಡಿತ್ತು. ಆದ್ರೆ 2002-03ರ ಆವೃತ್ತಿಯಲ್ಲಿ 2 ದಿನ ಫೈನಲ್ ನಡೆದರೂ ಮಳೆಗೆ ಪಂದ್ಯ ಬಲಿಯಾಯ್ತು. ಆದ್ದರಿಂದ ಭಾರತ ಮತ್ತು ಶ್ರೀಲಂಕಾವನ್ನ ಜಂಟಿಯಾಗಿ ಚಾಂಪಿಯನ್ಸ್ ಎಂದು ಘೋಷಿಸಲಾಯಿತು. ಇನ್ನೂ 2004ರಲ್ಲಿ ವೆಸ್ಟ್ ಇಂಡೀಸ್, 2006-07, 2009-10ರಲ್ಲಿ ಆಸ್ಟ್ರೇಲಿಯಾ, 2013ರಲ್ಲಿ ಭಾರತ, 2017ರಲ್ಲಿ ಪಾಕಿಸ್ತಾನ ಚಾಂಪಿಯನ್ ಆಗಿತ್ತು. 2000, 2017ರಲ್ಲಿ ಭಾರತ ಫೈನಲ್ ತಲುಪಿದ್ರೂ ಟ್ರೋಫಿ ಗೆಲ್ಲುವ ಅವಕಾಶ ಕಳೆದುಕೊಂಡಿತ್ತು. 2000 ಇಸವಿಯಲ್ಲಿ ಕಿವೀಸ್ ವಿರುದ್ಧ, 2017ರಲ್ಲಿ ಪಾಕಿಸ್ತಾನದ ವಿರುದ್ಧ ಫೈನಲ್‌ನಲ್ಲಿ ಸೋತು ನಿರಾಸೆ ಅನುಭವಿಸಿತ್ತು. ಸದ್ಯ 25 ವರ್ಷಗಳ ಬಳಿಕ ಚಾಂಪಿಯನ್ಸ್ ಟ್ರೋಫಿಯಲ್ಲಿ ಕಿವೀಸ್ ವಿರುದ್ಧ ಗೆದ್ದು ಭಾರತ ಸೇಡು ತೀರಿಸಿಕೊಂಡಿದೆ.

  • ಚಾಂಪಿಯನ್ಸ್‌ ಟ್ರೋಫಿ ಗೆದ್ದ ಟೀಂ ಇಂಡಿಯಾಗೆ ಮೋದಿ ವಿಶ್‌

    ಚಾಂಪಿಯನ್ಸ್‌ ಟ್ರೋಫಿ ಗೆದ್ದ ಟೀಂ ಇಂಡಿಯಾಗೆ ಮೋದಿ ವಿಶ್‌

    ನವದೆಹಲಿ: 12 ವರ್ಷಗಳ ಬಳಿಕ ಐಸಿಸಿ ಚಾಂಪಿಯನ್ಸ್‌ ಟ್ರೋಫಿ (ICC Champions Trophy) ಕಿರೀಟ ಮುಡಿಗೇರಿಸಿಕೊಂಡ ಭಾರತ ಕ್ರಿಕೆಟ್‌ ತಂಡಕ್ಕೆ ಪ್ರಧಾನಿ ನರೇಂದ್ರ ಮೋದಿ (Narendra Modi) ಶುಭ ಹಾರೈಸಿದ್ದಾರೆ.

    ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ವೊಂದನ್ನು ಹಂಚಿಕೊಂಡಿರುವ ಪ್ರಧಾನಿ ಮೋದಿ, ಅಸಾಧಾರಣ ಆಟ ಮತ್ತು ಅಸಾಧಾರಣ ಫಲಿತಾಂಶ… ಐಸಿಸಿ ಚಾಂಪಿಯನ್ಸ್ ಟ್ರೋಫಿಯನ್ನು ಭಾರತಕ್ಕೆ ತಂದ ನಮ್ಮ ಕ್ರಿಕೆಟ್ ತಂಡದ ಬಗ್ಗೆ ಹೆಮ್ಮೆಯಿದೆ. ಅವರು ಟೂರ್ನಿಯುದ್ಧಕ್ಕೂ ಅದ್ಭುತ ಪ್ರದರ್ಶನ ನೀಡಿದ್ದಾರೆ. ಸಂಘಟಿತ ಪ್ರದರ್ಶನಕ್ಕಾಗಿ ನಮ್ಮ ತಂಡಕ್ಕೆ ಅಭಿನಂದನೆಗಳು ಎಂದು ಶುಭಕೋರಿದ್ದಾರೆ.

    ನ್ಯೂಜಿಲೆಂಡ್ (New Zealand) ವಿರುದ್ಧ ನಡೆದ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯದಲ್ಲಿ 4 ವಿಕೆಟ್‌ಗಳ ಗೆಲುವು ಸಾಧಿಸುವ ಮೂಲಕ ಭಾರತ 3ನೇ ಬಾರಿಗೆ ಚಾಂಪಿಯನ್ಸ್ ಟ್ರೋಫಿ (Champions Trophy) ಕಿರೀಟ ಮುಡಿಗೇರಿಸಿಕೊಂಡಿದೆ. 2024ರಲ್ಲಿ ರೋಹಿತ್ ಶರ್ಮಾ ನಾಯಕತ್ವದಲ್ಲಿ ಟಿ20 ವಿಶ್ವಕಪ್ ಗೆದ್ದಿದ್ದ ಭಾರತಕ್ಕಿದು ಸತತ 2ನೇ ಐಸಿಸಿ ಟ್ರೋಫಿ ಆಗಿರುವುದು ವಿಶೇಷ.

    ದುಬೈನ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ್ದ ನ್ಯೂಜಿಲೆಂಡ್ 50 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 251 ರನ್ ಗಳಿಸಿತ್ತು. ಸ್ಪರ್ಧಾತ್ಮಕ ಮೊತ್ತದ ಗುರಿ ಬೆನ್ನಟ್ಟಿದ ಭಾರತ (Team India) 49 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 254 ರನ್ ಗಳಿಸಿ ಗೆಲುವು ಸಾಧಿಸಿತು. ಸಂಘಟಿತ ಬೌಲಿಂಗ್, ಬ್ಯಾಟಿಂಗ್ ಪ್ರದರ್ಶನದೊಂದಿಗೆ 2000 ಇಸವಿಯಲ್ಲಿ ಕಿವೀಸ್ ವಿರುದ್ಧ ಫೈನಲ್ ಸೋಲಿಗೆ ಸೇಡು ತೀರಿಸಿಕೊಂಡಿತು.

    2 ಬಾರಿ ಫೈನಲ್‌ನಲ್ಲಿ ಸೋಲು:
    1998-99ರ ಚೊಚ್ಚಲ ಆವೃತ್ತಿಯಲ್ಲೇ ಚೋಕರ್ಸ್ ದಕ್ಷಿಣ ಆಫ್ರಿಕಾ ಟ್ರೋಫಿ ಮುಡಿಗೇರಿಸಿಕೊಂಡಿತ್ತು. 2000-01ರ ಆವೃತ್ತಿಯಲ್ಲಿ ನ್ಯೂಜಿಲೆಂಡ್ ಟ್ರೋಫಿ ಗೆದ್ದುಕೊಂಡಿತ್ತು. ಆದ್ರೆ 2002-03ರ ಆವೃತ್ತಿಯಲ್ಲಿ 2 ದಿನ ಫೈನಲ್ ನಡೆದರೂ ಮಳೆಗೆ ಪಂದ್ಯ ಬಲಿಯಾಯ್ತು. ಆದ್ದರಿಂದ ಭಾರತ ಮತ್ತು ಶ್ರೀಲಂಕಾವನ್ನ ಜಂಟಿಯಾಗಿ ಚಾಂಪಿಯನ್ಸ್ ಎಂದು ಘೋಷಿಸಲಾಯಿತು. ಇನ್ನೂ 2004ರಲ್ಲಿ ವೆಸ್ಟ್ ಇಂಡೀಸ್, 2006-07, 2009-10ರಲ್ಲಿ ಆಸ್ಟ್ರೇಲಿಯಾ, 2013ರಲ್ಲಿ ಭಾರತ, 2017ರಲ್ಲಿ ಪಾಕಿಸ್ತಾನ ಚಾಂಪಿಯನ್ ಆಗಿತ್ತು. 2000, 2017ರಲ್ಲಿ ಭಾರತ ಫೈನಲ್ ತಲುಪಿದ್ರೂ ಟ್ರೋಫಿ ಗೆಲ್ಲುವ ಅವಕಾಶ ಕಳೆದುಕೊಂಡಿತ್ತು. 2000 ಇಸವಿಯಲ್ಲಿ ಕಿವೀಸ್ ವಿರುದ್ಧ, 2017ರಲ್ಲಿ ಪಾಕಿಸ್ತಾನದ ವಿರುದ್ಧ ಫೈನಲ್‌ನಲ್ಲಿ ಸೋತು ನಿರಾಸೆ ಅನುಭವಿಸಿತ್ತು. ಸದ್ಯ 25 ವರ್ಷಗಳ ಬಳಿಕ ಚಾಂಪಿಯನ್ಸ್ ಟ್ರೋಫಿಯಲ್ಲಿ ಕಿವೀಸ್ ವಿರುದ್ಧ ಗೆದ್ದು ಭಾರತ ಸೇಡು ತೀರಿಸಿಕೊಂಡಿದೆ.

  • ಬಿದ್ದು ಎದ್ದು ಗೆದ್ದ ರಾಹುಲ್‌ – ಟೀಕೆಗಳಿಗೆ ಬ್ಯಾಟ್‌ ಮೂಲಕವೇ ಉತ್ತರ ಕೊಟ್ಟ ಕನ್ನಡಿಗ

    ಬಿದ್ದು ಎದ್ದು ಗೆದ್ದ ರಾಹುಲ್‌ – ಟೀಕೆಗಳಿಗೆ ಬ್ಯಾಟ್‌ ಮೂಲಕವೇ ಉತ್ತರ ಕೊಟ್ಟ ಕನ್ನಡಿಗ

    ದುಬೈ: ನ್ಯೂಜಿಲೆಂಡ್ (New Zealand) ವಿರುದ್ಧ ನಡೆದ ಫೈನಲ್ ಪಂದ್ಯದಲ್ಲಿ ಗೆಲುವು ಸಾಧಿಸುವ ಮೂಲಕ ಟೀಂ ಇಂಡಿಯಾ 12 ವರ್ಷಗಳ ಬಳಿಕ ಐಸಿಸಿ ಚಾಂಪಿಯನ್ಸ್ ಟ್ರೋಫಿ ಕಿರೀಟವನ್ನು ಮುಡಿಗೇರಿಸಿಕೊಂಡಿದೆ. ಈ ಟೂರ್ನಿಯ ಸೆಮಿಸ್‌ ಹಾಗೂ ಫೈನಲ್‌ ಪಂದ್ಯದಲ್ಲಿ ಎಚ್ಚರಿಕೆಯ ಆಟವಾಡಿದ ಕೆ.ಎಲ್‌ ರಾಹುಲ್‌ ತಮ್ಮ ವಿರುದ್ಧದ ಟೀಕೆಗಳಿಗೆ ಬ್ಯಾಟ್‌ ಮೂಲಕವೇ ಉತ್ತರ ಕೊಟ್ಟಿದ್ದಾರೆ.

    ಭಾರತದ ಆತಿಥ್ಯದಲ್ಲಿ ನಡೆದ 2023ರ ಏಕದಿನ ವಿಶ್ವಕಪ್‌ ಟೂರ್ನಿ ಬಳಿಕ ಕೆ.ಎಲ್‌ ರಾಹುಲ್‌ ಫಾರ್ಮ್‌ ಕಳೆದುಕೊಂಡು ಮೂಲೆಗುಂಪಾಗಿದ್ದರು. ಗಾಯದ ಸಮಸ್ಯೆ, ಫಾರ್ಮ್‌ ಕಂಡುಕೊಳ್ಳದೇ ಇದ್ದ ಕಾರಣ 2024ರ ಟಿ20 ವಿಶ್ವಕಪ್‌ ತಂಡಕ್ಕೂ ಆಯ್ಕೆಯಾಗದೇ ಉಳಿದಿದ್ದರು. ಇದನ್ನೂ ಓದಿ: ಬ್ಯೂಟಿ ಜೊತೆ ಚಹಲ್‌ ಫೈನಲ್‌ ಪಂದ್ಯ ವೀಕ್ಷಣೆ – ಯಾರಿದು ಯುವತಿ?

    ಆ ಬಳಿಕ ರಣಜಿ ಟ್ರೋಫಿಯಲ್ಲಿ ಹಾಗೂ ಚಾಂಪಿಯನ್ಸ್‌ ಟ್ರೋಫಿಗೂ ಮುನ್ನ ಇಂಗ್ಲೆಂಡ್‌ ವಿರುದ್ಧ ನಡೆದ 3 ಪಂದ್ಯಗಳ ಏಕದಿನ ಸರಣಿಯಲ್ಲಿ ಫಾರ್ಮ್‌ ಸಾಬೀತು ಮಾಡುವಲ್ಲಿ ರಾಹುಲ್‌ ವಿಫಲವಾಗಿದ್ದರು. ಇದರಿಂದ ಭಾರೀ ಟೀಕೆಗಳು ಕೇಳಿ ಬಂದಿದ್ದವು. ಇದನ್ನೂ ಓದಿ: ಐಸಿಸಿಯ 24 ಟೂರ್ನಿಗಳಲ್ಲಿ 23 ರಲ್ಲಿ ಗೆಲುವು – ಇದು ರೋ’ಹಿಟ್‌’ ಕ್ಯಾಪ್ಟನ್ಸಿ ಟ್ರ್ಯಾಕ್‌ ರೆಕಾರ್ಡ್‌

    ಲೀಗ್‌ ಸುತ್ತಿನ ಪಂದ್ಯಗಳಲ್ಲಿ ಬಾಂಗ್ಲಾ ವಿರುದ್ಧ 41 ರನ್‌, ನ್ಯೂಜಿಲೆಂಡ್‌ ವಿರುದ್ಧ 23 ರನ್‌ ಗಳಿಸಿದ್ದರು. ಆದ್ರೆ ಆಸೀಸ್‌ ವಿರುದ್ಧ ನಡೆದ ಸೆಮಿ ಫೈನಲ್‌ನಲ್ಲಿ 6ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಕೆ.ಎಲ್‌ ರಾಹುಲ್‌ ಸ್ಫೋಟಕ ಬ್ಯಾಟಿಂಗ್‌ ಪ್ರದರ್ಶನ ನೀಡಿದರು. 34 ಎಸೆತಗಳಲ್ಲಿ 42 ರನ್‌ ಗಳಿದ್ರೂ ಟೀಂ ಇಂಡಿಯಾ ಗೆಲುವಿನಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದರು. ಇದೀಗ ಫೈನಲ್‌ ಪಂದ್ಯದಲ್ಲೂ 34 ರನ್‌ ಗಳಿಸುವ ಮೂಲಕ ಭಾರತ ಟ್ರೋಫಿ ಗೆಲ್ಲುವಲ್ಲಿ ಪ್ರಮುಖ ಕಾರಣರಾಗಿದ್ದಾರೆ.

    ಭಾರತ ಕೊನೆಯ ಬಾರಿಗೆ 2013ರಲ್ಲಿ ಎಂ.ಎಸ್‌ ಧೋನಿ ನಾಯಕತ್ವದಲ್ಲಿ ಚಾಂಪಿಯನ್ಸ್‌ ಟ್ರೋಫಿ ತನ್ನದಾಗಿಸಿಕೊಂಡಿತ್ತು. ಇದನ್ನೂ ಓದಿ:  140 ಕೋಟಿ ಭಾರತೀಯರ ಕನಸು ನನಸು – ಚಾಂಪಿಯ‌ನ್ಸ್‌ಗಳಿಗೆ ಚಾಂಪಿಯನ್ಸ್ ಟ್ರೋಫಿ ಕಿರೀಟ! 

  • 140 ಕೋಟಿ ಭಾರತೀಯರ ಕನಸು ನನಸು – ಚಾಂಪಿಯ‌ನ್ಸ್‌ಗಳಿಗೆ ಚಾಂಪಿಯನ್ಸ್ ಟ್ರೋಫಿ ಕಿರೀಟ!

    140 ಕೋಟಿ ಭಾರತೀಯರ ಕನಸು ನನಸು – ಚಾಂಪಿಯ‌ನ್ಸ್‌ಗಳಿಗೆ ಚಾಂಪಿಯನ್ಸ್ ಟ್ರೋಫಿ ಕಿರೀಟ!

    – 25 ವರ್ಷಗಳ ಬಳಿಕ ಸೇಡು ತೀರಿಸಿಕೊಂಡ ಭಾರತ

    ದುಬೈ: ಕೊನೆಗೂ 140 ಕೋಟಿ ಭಾರತೀಯರ ಕನಸು ನನಸಾಗಿದೆ. ನ್ಯೂಜಿಲೆಂಡ್ (New Zealand) ವಿರುದ್ಧ ನಡೆದ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯದಲ್ಲಿ 4 ವಿಕೆಟ್‌ಗಳ ಗೆಲುವು ಸಾಧಿಸುವ ಮೂಲಕ ಭಾರತ 3ನೇ ಬಾರಿಗೆ ಚಾಂಪಿಯನ್ಸ್ ಟ್ರೋಫಿ (Champions Trophy) ಕಿರೀಟ ಮುಡಿಗೇರಿಸಿಕೊಂಡಿದೆ. 2024ರಲ್ಲಿ ರೋಹಿತ್ ಶರ್ಮಾ ನಾಯಕತ್ವದಲ್ಲಿ ಟಿ20 ವಿಶ್ವಕಪ್ ಗೆದ್ದಿದ್ದ ಭಾರತಕ್ಕಿದು ಸತತ 2ನೇ ಐಸಿಸಿ ಟ್ರೋಫಿ ಆಗಿರುವುದು ವಿಶೇಷ.

    ದುಬೈನ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ್ದ ನ್ಯೂಜಿಲೆಂಡ್ 50 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 251 ರನ್ ಗಳಿಸಿತ್ತು. ಸ್ಪರ್ಧಾತ್ಮಕ ಮೊತ್ತದ ಗುರಿ ಬೆನ್ನಟ್ಟಿದ ಭಾರತ (Team India) 49 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 254 ರನ್ ಗಳಿಸಿ ಗೆಲುವು ಸಾಧಿಸಿತು. ಸಂಘಟಿತ ಬೌಲಿಂಗ್, ಬ್ಯಾಟಿಂಗ್ ಪ್ರದರ್ಶನದೊಂದಿಗೆ 2000 ಇಸವಿಯಲ್ಲಿ ಕಿವೀಸ್ ವಿರುದ್ಧ ಫೈನಲ್ ಸೋಲಿಗೆ ಸೇಡು ತೀರಿಸಿಕೊಂಡಿತು.

    1998-99ರ ಚೊಚ್ಚಲ ಆವೃತ್ತಿಯಲ್ಲೇ ಚೋಕರ್ಸ್ ದಕ್ಷಿಣ ಆಫ್ರಿಕಾ ಟ್ರೋಫಿ ಮುಡಿಗೇರಿಸಿಕೊಂಡಿತ್ತು. 2000-01ರ ಆವೃತ್ತಿಯಲ್ಲಿ ನ್ಯೂಜಿಲೆಂಡ್ ಟ್ರೋಫಿ ಗೆದ್ದುಕೊಂಡಿತ್ತು. ಆದ್ರೆ 2002-03ರ ಆವೃತ್ತಿಯಲ್ಲಿ 2 ದಿನ ಫೈನಲ್ ನಡೆದರೂ ಮಳೆಗೆ ಪಂದ್ಯ ಬಲಿಯಾಯ್ತು. ಆದ್ದರಿಂದ ಭಾರತ ಮತ್ತು ಶ್ರೀಲಂಕಾವನ್ನ ಜಂಟಿಯಾಗಿ ಚಾಂಪಿಯನ್ಸ್ ಎಂದು ಘೋಷಿಸಲಾಯಿತು. ಇನ್ನೂ 2004ರಲ್ಲಿ ವೆಸ್ಟ್ ಇಂಡೀಸ್, 2006-07, 2009-10ರಲ್ಲಿ ಆಸ್ಟ್ರೇಲಿಯಾ, 2013ರಲ್ಲಿ ಭಾರತ, 2017ರಲ್ಲಿ ಪಾಕಿಸ್ತಾನ ಚಾಂಪಿಯನ್ ಆಗಿತ್ತು. 2000, 2017ರಲ್ಲಿ ಭಾರತ ಫೈನಲ್ ತಲುಪಿದ್ರೂ ಟ್ರೋಫಿ ಗೆಲ್ಲುವ ಅವಕಾಶ ಕಳೆದುಕೊಂಡಿತ್ತು. 2000 ಇಸವಿಯಲ್ಲಿ ಕಿವೀಸ್ ವಿರುದ್ಧ, 2017ರಲ್ಲಿ ಪಾಕಿಸ್ತಾನದ ವಿರುದ್ಧ ಫೈನಲ್‌ನಲ್ಲಿ ಸೋತು ನಿರಾಸೆ ಅನುಭವಿಸಿತ್ತು. ಸದ್ಯ 25 ವರ್ಷಗಳ ಬಳಿಕ ಚಾಂಪಿಯನ್ಸ್ ಟ್ರೋಫಿಯಲ್ಲಿ ಕಿವೀಸ್ ವಿರುದ್ಧ ಗೆದ್ದು ಭಾರತ ಸೇಡು ತೀರಿಸಿಕೊಂಡಿದೆ.

    ದಾಖಲೆಯ ಶತಕದ ಜೊತೆಯಾಟ:
    ಚೇಸಿಂಗ್ ಆರಂಭಿಸಿದ ಟೀಂ ಇಂಡಿಯಾ ಪರ ನಾಯಕ ರೋಹಿತ್ ಶರ್ಮಾ (Rohit Sharma), ಶುಭಮನ್ ಗಿಲ್ ಸ್ಫೋಟಕ ಇನ್ನಿಂಗ್ಸ್ ಕಟ್ಟುವಲ್ಲಿ ಯಶಸ್ವಿಯಾದರು. 112 ಎಸೆತಗಳಲ್ಲಿ ಈ ಜೋಡಿ 105 ರನ್‌ಗಳ ಜೊತೆಯಾಟ ನೀಡಿತು. ಈ ಮೂಲಕ ಚಾಂಪಿಯನ್ಸ್ ಟ್ರೋಫಿ ಇತಿಹಾಸದಲ್ಲೇ ಫೈನಲ್ ಪಂದ್ಯದಲ್ಲಿ ಶತಕದ ಜೊತೆಯಾಟ ಎಂಬ ದಾಖಲೆಗೂ ರೋಹಿತ್ ಗಿಲ್ ಪಾತ್ರರಾದರು. ಗಿಲ್ 50 ಎಸೆತಗಳಲ್ಲಿ 31 ರನ್ ಗಳಿಸಿ ಔಟಾದರು. ಈ ಬೆನ್ನಲ್ಲೇ ವಿರಾಟ್ ಕೊಹ್ಲಿ ಕೇವಲ 1 ರನ್ ಗಳಿಸಿ ಎಲ್‌ಬಿಡಬ್ಲ್ಯೂಗೆ ತುತ್ತಾದರು. ಆ ಬಳಿಕವೂ ಕಿವೀಸ್ ಬೌಲರ್‌ಗಳನ್ನು ಬೆಂಡೆತ್ತಿದ ರೋಹಿತ್ 76 ರನ್ (83 ಎಸೆತ, 3 ಸಿಕ್ಸರ್, 7 ಬೌಂಡರಿ) ಗಳಿಸಿ ಪೆವಿಲಿಯನ್‌ಗೆ ಮರಳಿದರು.

    ಇನ್ನಿಂಗ್ಸ್‌ ಕಟ್ಟಿದ ಶ್ರೇಯಸ್‌:
    26.1 ಓವರ್‌ಗಳಲ್ಲಿ 122 ರನ್‌ಗಳಿಗೆ ಭಾರತ 3 ವಿಕೆಟ್‌ ಕಳೆದುಕೊಂಡಿದ್ದಾಗ ಮಧ್ಯಮ ಕ್ರಮಾಂಕದಲ್ಲಿ ಉತ್ತಮ ಇನ್ನಿಂಗ್ಸ್‌ ಕಟ್ಟುವಲ್ಲಿ ಶ್ರೇಯಸ್‌ ಅಯ್ಯರ್‌ ಯಶಸ್ವಿಯಾದರು. 62 ಎಸೆತಗಳಲ್ಲಿ 48 ರನ್‌ (2 ಸಿಕ್ಸರ್‌, 2 ಬೌಂಡರಿ) ಬಾರಿಸಿದ್ರು. ಇದೇ ವೇಳೆ ಶ್ರೇಯಸ್‌ಗೆ ಜೊತೆಯಾಗಿ ಎಚ್ಚರಿಕೆಯ ಆಟವಾಡಿದ ಅಕ್ಷರ್‌ ಪಟೇಲ್‌ 40 ಎಸೆತಗಳಲ್ಲಿ 29 ರನ್‌ (1 ಸಿಕ್ಸರ್‌, 1 ಬೌಂಡರಿ) ಕೊಡುಗೆ ನೀಡಿದರು.

    ರಾಹುಲ್‌ ಎಚ್ಚರಿಕೆಯ ಆಟ:
    ಇನ್ನೂ ಲೀಗ್‌ ಸುತ್ತಿನ ಪಂದ್ಯಗಳಲ್ಲಿ ಕಳಪೆ ಪ್ರದರ್ಶನದಿಂದ ಭಾರೀ ಟೀಕೆಗೆ ಗುರಿಯಾಗಿದ್ದ ಕನ್ನಡಿಗ ಕೆ.ಎಲ್‌ ರಾಹುಲ್‌ ಸೆಮಿಫೈನಲ್‌ನಂತೆ ಫೈನಲ್‌ ಪಂದ್ಯದಲ್ಲೂ ಎಚ್ಚರಿಕೆಯ ಆಟವಾಡಿದರು. 33 ಎಸೆತಗಳಲ್ಲಿ 1 ಸಿಕ್ಸರ್‌, 1 ಬೌಂಡರಿ ಸಹಿತ 34 ರನ್‌ ಗಳಿಸಿ ಟೀಂ ಇಂಡಿಯಾ ಗೆಲುವಿಗೆ ನೆರವಾದರು. ಇದರೊಂದಿಗೆ ಪಾಂಡ್ಯ ಜವಾಬ್ದಾರಿಯುತ 18 ರನ್‌, ರವೀಂದ್ರ ಜಡೇಜಾ 3 ರನ್‌ಗಳ ಕೊಡುಗೆ ನೀಡಿದರು. ಹೆಚ್ಚುವರಿಯಾಗಿ 8 ರನ್‌ ತಂಡಕ್ಕೆ ಸೇರ್ಪಡೆಯಾಯ್ತು.

    ನ್ಯೂಜಿಲೆಂಡ್‌ ಪರ ಮಿಚೆಲ್‌ ಸ್ಯಾಂಟ್ನರ್‌, ಮೈಕಲ್‌ ಬ್ರೇಸ್‌ವೆಲ್‌ ತಲಾ 2 ವಿಕೆಟ್‌ ಕಿತ್ತರೆ, ಕೈಲ್‌ ಜೇಮಿಸನ್‌, ರಚಿನ್‌ ರವೀಂದ್ರ ತಲಾ ಒಂದು ವಿಕೆಟ್‌ ಪಡೆದರು.

    ಇದಕ್ಕೂ ಮುನ್ನ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡ ಮಿಚೆಲ್ ಸ್ಯಾಂಟ್ನರ್ ನಾಯಕತ್ವದ ಕಿವೀಸ್, ಫೀಲ್ಡಿಂಗ್ ಮಾಡುವ ಅವಕಾಶವನ್ನು ಭಾರತಕ್ಕೆ ಬಿಟ್ಟುಕೊಟ್ಟಿತು. ಆರಂಭಿಕರಾಗಿ ಕಣಕ್ಕಿಳಿದ ರಚಿನ್ ರವೀಂದ್ರ ಹಾಗೂ ವಿಲ್ ಯಂಗ್ ಜೋಡಿ ಸ್ಪೋಟಕ ಇನ್ನಿಂಗ್ಸ್ ಕಟ್ಟುವ ಪ್ರಯತ್ನಕ್ಕೆ ಮುಂದಾದರು. ಅಂತೆಯೇ ಮೊದಲ ವಿಕೆಟ್‌ಗೆ 47 ಎಸೆತಗಳಲ್ಲಿ 57 ರನ್‌ಗಳ ಜೊತೆಯಾಟ ನೀಡಿತ್ತು. ಆದ್ರೆ ವಿಲ್ ಯಂಗ್ ವಿಕೆಟ್ ಬೀಳುತ್ತಿದ್ದಂತೆ ಅಗ್ರ ಕ್ರಮಾಂಕದ ಆಟಗಾರರು ಪೆವಿಲಿಯನ್ ಪರೇಡ್ ನಡೆಸಿದರು. ರಚಿನ್ ರವೀಂದ್ರ, ಕೇನ್ ವಿಲಿಯಮ್ಸನ್ ಬ್ಯಾಕ್ ಟು ಬ್ಯಾಕ್ ವಿಕೆಟ್ ಒಪ್ಪಿಸಿದ್ರು.

    ಜೀವ ತುಂಬಿದ ಮಿಚೆಲ್, ಫಿಲಿಪ್ಸ್ ಜೊತೆಯಾಟ:
    ಇನ್ನೂ 23.2 ಓವರ್‌ಗಳಲ್ಲಿ 108 ರನ್‌ಗಳಿಗೆ ಪ್ರಮುಖ ನಾಲ್ಕು ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದ್ದ ಕಿವೀಸ್‌ಗೆ ಗ್ಲೇನ್ ಫಿಲಿಪ್ಸ್ ಹಾಗೂ ಡೇರಿಲ್ ಮಿಚೆಲ್ ಅವರ ಜೊತೆಯಾಟ ಜೀವ ತುಂಬಿತು. ಟೀಂ ಇಂಡಿಯಾ ಸ್ಪಿನ್ನರ್‌ಗಳ ಎದುರು ರನ್ ಕದಿಯಲು ತಿಣುಕಾಡಿದ ಈ ಜೋಡಿ 87 ಎಸೆತಗಳಲ್ಲಿ 57 ರನ್ ಗಳಿಸಿತು. ಇದರೊಂದಿಗೆ ಮಧ್ಯಮ ಕ್ರಮಾಂಕದಲ್ಲಿ ಟಾಮ್ ಲಾಥಮ್, ಮಿಚೆಲ್ ಜೋಡಿಯಿಂದ 33 ರನ್ ಹಾಗೂ ಮೈಕಲ್ ಬ್ರೇಸ್‌ವೆಲ್ ಜೊಡಿಯಿಂದ 46 ರನ್‌ಗಳ ಸಣ್ಣ ಪ್ರಮಾಣದ ಜೊತೆಯಾಟ ಕಿವೀಸ್ ತಂಡ 200 ರನ್‌ಗಳ ಗಡಿದಾಟಲು ನೆರವಾಯಿತು.

    ಕಿವೀಸ್ ಪರ ಡೇರಿಲ್ ಮಿಚೆಲ್ 63 ರನ್ (101 ಎಸೆತ, 3 ಬೌಂಡರಿ), ಮೈಕಲ್ ಬ್ರೇಸ್‌ವೆಲ್ ಅಜೇಯ 53 ರನ್ (40 ಎಸೆತ, 2 ಸಿಕ್ಸರ್, 3 ಬೌಂಡರಿ), ರಚಿನ್ ರವೀಂದ್ರ 37 ರನ್, ಗ್ಲೆನ್ ಫಿಲಿಪ್ಸ್ 34 ರನ್, ವಿಲ್ ಯಂಗ್ 15 ರನ್, ಕೇನ್ ವಿಲಿಯಮ್ಸನ್ 11 ರನ್, ಟಾಮ್ ಲಾಥಮ್ 14 ರನ್, ಮಿಚೆಲ್ ಸ್ಯಾಂಟ್ನರ್ 8 ರನ್, ಕೊಡುಗೆ ನೀಡಿದರು.

    ಟೀಂ ಇಂಡಿಯಾ ಪರ ವರುಣ್ ಚಕ್ರವರ್ತಿ, ಕುಲ್‌ದೀಪ್ ಯಾದವ್ ತಲಾ 2 ವಿಕೆಟ್ ಕಿತ್ತರೆ, ಮೊಹಮ್ಮದ್ ಶಮಿ, ರವೀಂದ್ರ ಜಡೇಜಾ ತಲಾ ಒಂದೊAದು ವಿಕೆಟ್ ಪಡೆದು ಮಿಂಚಿದರು.

  • 214 ರನ್‌ಗಳಿಗೆ ಇಂಗ್ಲೆಂಡ್‌ ಆಲೌಟ್‌ – ತವರಲ್ಲೇ ಸರಣಿ ಕ್ಲೀನ್ ಸ್ವೀಪ್ ಮಾಡಿದ ಭಾರತ

    214 ರನ್‌ಗಳಿಗೆ ಇಂಗ್ಲೆಂಡ್‌ ಆಲೌಟ್‌ – ತವರಲ್ಲೇ ಸರಣಿ ಕ್ಲೀನ್ ಸ್ವೀಪ್ ಮಾಡಿದ ಭಾರತ

    – ಕೊನೆಯ ಪಂದ್ಯದಲ್ಲಿ ಭಾರತಕ್ಕೆ 142 ರನ್‌ಗಳ ಭರ್ಜರಿ ಗೆಲುವು

    ಅಹಮದಾಬಾದ್‌: ಸಂಘಟಿತ ಬೌಲಿಂಗ್‌, ಬ್ಯಾಟಿಂಗ್‌ ನೆರವಿನಿಂದ ಇಂಗ್ಲೆಂಡ್‌ ವಿರುದ್ಧದ ಸರಣಿಯ ಕೊನೆಯ ಪಂದ್ಯದಲ್ಲಿ ಭಾರತ 142 ರನ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ತವರಿನಲ್ಲೇ 3-0ನಲ್ಲಿ ಸರಣಿ ಕ್ಲೀನ್‌ ಸ್ವೀಪ್‌ ಮಾಡಿದೆ.

    ಇಲ್ಲಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಏಕದಿನ ಸರಣಿಯ ಕೊನೆಯ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ 356 ರನ್‌ ಪೇರಿಸಿತ್ತು. 357 ರನ್‌ಗಳ ಬೃಹತ್‌ ಮೊತ್ತದ ಗುರಿ ಬೆನ್ನಟ್ಟಿದ ಇಂಗ್ಲೆಂಡ್‌ ಟೀಂ ಇಂಡಿಯಾ ಬೌಲರ್‌ಗಳ ಆರ್ಭಟಕ್ಕೆ ನಲುಗಿತು. 34.2 ಓವರ್‌ಗಳಲ್ಲೇ 214 ರನ್‌ಗಳಿಗೆ ತನ್ನೆಲ್ಲಾ ವಿಕೆಟ್‌ಗಳನ್ನು ಕಳೆದುಕೊಂಡು ಸೋಲೊಪ್ಪಿಕೊಂಡಿತು. ಇದನ್ನೂ ಓದಿ: ಚಿಕ್ಕಬಳ್ಳಾಪುರದಲ್ಲಿ ಫೆ.8 ರಂದು ಭಾರತ- ಶ್ರೀಲಂಕಾ ಕ್ರಿಕೆಟ್‌ ಮ್ಯಾಚ್‌

    ಇಲ್ಲಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಏಕದಿನ ಸರಣಿಯ ಕೊನೆಯ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ 356 ರನ್‌ ಪೇರಿಸಿತ್ತು. 357 ರನ್‌ಗಳ ಬೃಹತ್‌ ಮೊತ್ತದ ಗುರಿ ಬೆನ್ನಟ್ಟಿದ ಇಂಗ್ಲೆಂಡ್‌ ಟೀಂ ಇಂಡಿಯಾ ಬೌಲರ್‌ಗಳ ಆರ್ಭಟಕ್ಕೆ ನಲುಗಿತು. 34.2 ಓವರ್‌ಗಳಲ್ಲೇ 214 ರನ್‌ಗಳಿಗೆ ತನ್ನೆಲ್ಲಾ ವಿಕೆಟ್‌ಗಳನ್ನು ಕಳೆದುಕೊಂಡು ಸೋಲೊಪ್ಪಿಕೊಂಡಿತು.

    ಬೃಹತ್‌ ರನ್‌ ಟಾರ್ಗೆಟ್‌ ಬೆನ್ನತ್ತಿದ್ದ ಇಂಗ್ಲೆಂಡ್‌ ತಂಡಕ್ಕೆ ಭಾರತೀಯ ಬೌಲರ್‌ಗಳು ಆರಂಭದಲ್ಲೇ ಆಘಾತ ನೀಡಿದರು. ಇದರ ಹೊರತಾಗಿಯೂ ಇಂಗ್ಲೆಂಡ್‌ ಒಂದೆಡೆ ರನ್‌ ಗಳಿಸುತ್ತಿದ್ದರೆ, ಮತ್ತೊಂದೆಡೆ ವಿಕೆಟ್‌ ಕಳೆದುಕೊಳ್ಳುತ್ತಾ ಸಾಗಿತು. ಮಧ್ಯಮ ಕ್ರಮಾಂಕದಲ್ಲಿ ಬಟ್ಲರ್‌, ಲಿವಿಂಗ್‌ಸ್ಟೋನ್‌, ರೂಟ್‌ ಹಾಗೂ ಹ್ಯಾರಿ ಬ್ರೂಕ್‌ ಅವರ ಬ್ಯಾಟಿಂಗ್‌ ವೈಫಲ್ಯ ಇಂಗ್ಲೆಂಡ್‌ಗೆ ದೊಡ್ಡ ಪೆಟ್ಟು ನೀಡಿತು. ಪರಿಣಾಮ 214 ರನ್‌ಗಳಿಗೆ ಆಲೌಟ್‌ ಆಯಿತು.

    ಇಂಗ್ಲೆಂಡ್‌ ಪರ ಟಾಮ್‌ ಬ್ಯಾನ್‌ಟನ್‌, ಗಸ್‌ ಅಟ್ಕಿನ್‌ಸನ್‌ ತಲಾ 38 ರನ್‌ ಗಳಿಸಿದ್ರೆ, ಬೆನ್‌ ಡಕೆಟ್‌ 34 ರನ್‌, ಜೋ ರೂಟ್‌ 24 ರನ್‌, ಫಿಲ್‌ ಸಾಲ್ಟ್‌ 23 ರನ್‌, ಬ್ರೂಕ್‌ 19 ರನ್‌ ಗಳಿಸಿದ್ರೆ ಉಳಿದವರು ಒಂದಂಕಿ ಮೊತ್ತಕ್ಕೆ ವಿಕೆಟ್‌ ಒಪ್ಪಿಸಿ ಪೆವಿಲಿಯನ್‌ಗೆ ಮರಳಿದರು. ಇದನ್ನೂ ಓದಿ: ಆಸೀಸ್‌ಗೆ ಬಹುದೊಡ್ಡ ಆಘಾತ – ಚಾಂಪಿಯನ್ಸ್‌ ಟ್ರೋಫಿಯಿಂದ ಹೊರಗುಳಿದ ಸ್ಟಾರ್ಕ್‌

    ಇದಕ್ಕೂ ಮುನ್ನ ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಭಾರತ ಭರ್ಜರಿ ಮೊತ್ತವನ್ನೇ ಪೇರಿಸಿತು. ಉಪನಾಯಕ ಶುಭಮನ್ ಗಿಲ್ ಅಮೋಘ ಶತಕ ಸಿಡಿಸುವ ಮೂಲಕ ತಂಡಕ್ಕೆ ಅಡಿಪಾಯ ಹಾಕಿದರು. ಇನ್ನೂ ಆರಂಭಿಕ ರೋಹಿತ್‌ ಒಂದೇ ರನ್ನಿಗೆ ಔಟಾಗುತ್ತಿದ್ದಂತೆ ಅಖಾಡಕ್ಕಿಳಿದ ಕೊಹ್ಲಿ ಬಹುದಿನಗಳ ಬಳಿಕ ಅರ್ಧಶತಕ ಸಿಡಿಸಿ ಗಮನ ಸೆಳೆದರು. ಇದರೊಂದಿಗೆ ಶ್ರೇಯಸ್‌ ಅಯ್ಯರ್‌ ಅವರ ಭರ್ಜರಿ ಬ್ಯಾಟಿಂಗ್‌ ಟೀಂ ಇಂಡಿಯಾ ಬೃಹತ್‌ ಮೊತ್ತ ಪೇರಿಸಲು ಕಾರಣವಾಯಿತು.

    ಟೀಂ ಇಂಡಿಯಾ ಪರ ಶುಭಮನ್‌ ಗಿಲ್‌ 112 ರನ್‌ (102 ಎಸೆತ, 14 ಬೌಂಡರಿ, 3 ಸಿಕ್ಸರ್)‌, ಶ್ರೇಯಸ್‌ ಅಯ್ಯರ್‌ 78 ರನ್‌ (64 ಎಸೆತ, 8 ಬೌಂಡರಿ, 2 ಸಿಕ್ಸರ್)‌, ವಿರಾಟ್‌ ಕೊಹ್ಲಿ 52 ರನ್‌ (55 ಎಸೆತ, 7 ಬೌಂಡರಿ, 1 ಸಿಕ್ಸರ್)‌, ಕೆ.ಎಲ್‌ ರಾಹುಲ್‌ 40 ರನ್‌ (29 ಎಸೆತ, 3 ಬೌಂಡರಿ, 1 ಸಿಕ್ಸರ್)‌, ಹಾರ್ದಿಕ್‌ ಪಾಂಡ್ಯ 17 ರನ್‌, ಅಕ್ಷರ್‌ ಪಟೇಲ್‌ 13 ರನ್‌, ವಾಷಿಂಗ್ಟನ್‌ ಸುಂದರ್‌ 14 ರನ್‌, ಹರ್ಷಿತ್‌ ರಾಣಾ 13 ರನ್‌, ಅರ್ಷ್‌ದೀಪ್‌ ಸಿಂಗ್‌ 2 ರನ್‌ ಹಾಗೂ ರೋಹಿತ್‌ ಶರ್ಮಾ 1 ರನ್‌ ಗಳಿಸಿದ್ರು,

    ಇಂಗ್ಲೆಂಡ್‌ ಪರ ಆದಿಲ್ ರಶೀದ್ 4 ವಿಕೆಟ್‌ಗಳನ್ನು ಪಡೆಯುವ ಮೂಲಕ ಭಾರತೀಯ ಬ್ಯಾಟರ್‌ಗಳನ್ನು ಕಾಡಿದರು. ಮಾರ್ಕ್‌ ವುಡ್ 2 ವಿಕೆಟ್ ಪಡೆದರು. ಉಳಿದಂತೆ ಶಕೀಬ್‌ ಮಸೂದ್, ಜೋ ರೂಟ್, ಗಸ್ ಅಟ್ಕಿನ್‌ಸನ್‌ ತಲಾ ಒಂದು ವಿಕೆಟ್ ಪಡೆದರು. ಇದನ್ನೂ ಓದಿ: ಇಂಗ್ಲೆಂಡ್‌ ವಿರುದ್ಧ ಫಿಫ್ಟಿ – ಕೊಹ್ಲಿ ಬ್ಯಾಟಿಂಗ್‌ ಮೋಡಿಗೆ ಸಚಿನ್‌, ಸಂಗಕ್ಕಾರ ದಾಖಲೆ ಉಡೀಸ್‌