Tag: shri rama sene

  • ಹಿಂದೂಯೇತರ ಅಂಗಡಿಯಲ್ಲಿದ್ದ ಕಲ್ಲಂಗಡಿ, ತೆಂಗಿನಕಾಯಿ ಒಡೆದುಹಾಕಿದ ಶ್ರೀರಾಮಸೇನೆ ಕಾರ್ಯಕರ್ತರು

    ಹಿಂದೂಯೇತರ ಅಂಗಡಿಯಲ್ಲಿದ್ದ ಕಲ್ಲಂಗಡಿ, ತೆಂಗಿನಕಾಯಿ ಒಡೆದುಹಾಕಿದ ಶ್ರೀರಾಮಸೇನೆ ಕಾರ್ಯಕರ್ತರು

    ಧಾರವಾಡ: ದೇವಸ್ಥಾನದ ಬಳಿ ಹಿಂದೂಯೇತರ ಅಂಗಡಿಗಳನ್ನು ಬಂದ್ ಮಾಡಿಸಬೇಕೆಂಬ ಚರ್ಚೆ ಕಳೆದ ಒಂದು ತಿಂಗಳಿನಿಂದ ನಡೆಯುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ದೇವಸ್ಥಾನವೊಂದರ ಬಳಿ ಹಿಂದೂಯೇತರರು ಮಾರಾಟಮಾಡುತ್ತಿದ್ದ ಕಲ್ಲಂಗಡಿ ಹಾಗೂ ತೆಂಗಿನಕಾಯಿಯನ್ನು ಶ್ರೀರಾಮಸೇನೆ ಕಾರ್ಯಕರ್ತರು ಒಡೆದು ಹಾಕಿರುವ ಘಟನೆ ಧಾರವಾಡದಲ್ಲಿ ನಡೆದಿದೆ.

    ಧಾರವಾಡ ಹೊರವಲಯದ ನುಗ್ಗಿಕೇರೆ ಆಂಜನೇಯನ ದೇವಸ್ಥಾನಕ್ಕೆ ಶನಿವಾರ ಸಾವಿರಾರು ಭಕ್ತರು ಬಂದು ದರ್ಶನ ಪಡೆಯುತ್ತಾರೆ. ದೇವಸ್ಥಾನದ ಬಳಿ 4 ಹಿಂದೂಯೇತರ ಅಂಗಡಿಗಳಿದ್ದು, ಕಳೆದ 15 ದಿನಗಳ ಹಿಂದೆ ಶ್ರೀರಾಮ ಸೇನೆಯ ಕಾರ್ಯಕರ್ತರು ದೇವಸ್ಥಾನದ ಬಳಿ ಬಂದು ಪ್ರತಿಭಟನೆ ಮಾಡಿದ್ದರು. ಈ ವೇಳೆ ಹಿಂದೂಯೇತರ ಅಂಗಡಿಗಳನ್ನು ಬಂದ್ ಮಾಡಿಸಬೇಕು ಎಂದು ಮನವಿ ಮಾಡಿದ್ದರು. ಶನಿವಾರ ಹಿಂದೂಯೇತರ ಅಂಗಡಿಗಳು ಮುಚ್ಚದೇ ಇದ್ದಿದ್ದರಿಂದ ಶ್ರೀರಾಮ ಸೇನೆ ಕಾರ್ಯಕರ್ತರು ಸ್ಥಳಕ್ಕೆ ಬಂದು ಅಂಗಡಿಗಳಲ್ಲಿದ್ದ ಕಲ್ಲಂಗಡಿ ಹಣ್ಣು ಹಾಗೂ ತೆಂಗಿನಕಾಯಿಗಳನ್ನು ಒಡೆದು ಹಾಕಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಮುಕ್ತ ಭಾರತ ಮಾಡೋಕೆ ಯಾರಪ್ಪನ ಕೈಯಲ್ಲೂ ಆಗಲ್ಲ: ನಲಪಾಡ್

    ಘಟನೆಯಿಂದ ನಷ್ಟ ಅನುಭವಿಸಿದ ಹಿಂದೂಯೇತರ ವ್ಯಾಪಾರಿ ನಬಿಸಾಬ್, ನೋಡ ನೋಡುತ್ತಿದ್ದಂತೆಯೇ ಎಲ್ಲಾ ಒಡೆಯುತ್ತ ಬಂದರು. ಅವರು 8-10 ಜನ ಇದ್ದರು. ನಾನೊಬ್ಬನೇ ಇದ್ದಿದ್ದರಿಂದ ಏನೂ ಮಾಡಲಾಗಲಿಲ್ಲ. 6 ಕ್ವಿಂಟಾಲ್ ಕಲ್ಲಂಗಡಿ ಹಣ್ಣು ತೆಗೆದುಕೊಂಡು ಬಂದಿದ್ದೆ. ಅದರಲ್ಲಿ 1 ಕ್ವಿಂಟಾಲ್ ಮಾತ್ರ ಮಾರಾಟವಾಗಿತ್ತು ಎಂದು ಮರುಗಿದರು.

    ನಾನು ಕಳೆದ 15 ವರ್ಷಗಳಿಂದ ವ್ಯಾಪಾರ ಮಾಡುತ್ತಿದ್ದೇನೆ. ಕಳೆದ ವಾರ ಇಲ್ಲಿ ಮುಸ್ಲಿಮರಿಗೆ ಅಂಗಡಿ ಹಾಕಬೇಡಿ ಎಂದಿದ್ದರು. ಮುಂದಿನ ವಾರವೇ ದೇವಸ್ಥಾನದ ಜಾತ್ರೆ ಇತ್ತು. ಜಾತ್ರೆಯ ಬಳಿಕ ಹಿಂದೂಯೇತರ ಅಂಗಡಿಗಳನ್ನು ಇಲ್ಲಿ ಇಡಬೇಕಾ, ಬೆಡವಾ ಎಂದು ನಿರ್ಧಾರ ಆಗಬೇಕಿತ್ತು. ಅಷ್ಟರಲ್ಲಿ ಈ ಗಲಾಟೆ ನಡೆಸಲಾಗಿದೆ. ಮತ್ತೊಂದು ಕಡೆ ದೇವಸ್ಥಾನದ ಆಡಳಿತ ಮಂಡಳಿ ಎಲ್ಲ ಪರ್ಯಾಯಸ್ಥರ ಸಭೆ ಮಾಡಿ, ಮುಂದಿನ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದಿದ್ದಾರೆ ಎಂದು ತಿಳಿಸಿದರು.

    ಘಟನೆ ಬಗ್ಗೆ ಪ್ರತಿಕ್ರಿಯಿಸಿದ ದೇವಸ್ಥಾನದ ಪರ್ಯಾಯಸ್ಥರು, ಶನಿವಾರ ಯಾವಾಗಲೂ ದೇವಸ್ಥಾನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಬರುತ್ತಾರೆ. ಹೀಗಾಗಿ ಆ ಕಡೆ ಗಲಾಟೆ ನಡೆದಿರುವ ಬಗ್ಗೆ ಲಕ್ಷ್ಯ ಕೊಡಲು ಸಾಧ್ಯವಾಗಲಿಲ್ಲ. ಈ ಬಗ್ಗೆ ಸಭೆ ಮಾಡಿ ಏನಾಗಿದೆ ಎಂದು ಮಾಹಿತಿ ಕೊಡುತ್ತೇನೆ ಎಂದರು. ಇದನ್ನೂ ಓದಿ: ಲವ್ ಜಿಹಾದ್‍ಗೆ ಮುಂದಾದವರ ಮನೆ ಹೊಕ್ಕು ಹೊಡೆಯಬೇಕು: EX MLC ನಾರಾಯಣಸಾ ಭಾಂಡಗೆ

    ಕಳೆದ ತಿಂಗಳು ಈ ವಿಚಾರವಾಗಿ ಮನವಿ ಬಂದಿತ್ತು. ನಾನು ಬಂದು ಇನ್ನೂ ಒಂದು ತಿಂಗಳಾಗಲಿಲ್ಲ. ಮನವಿ ಹಾಗೂ ಗಲಾಟೆ ಬಗ್ಗೆ ಸಭೆ ಕರೆದು ನೋಡುತ್ತೇವೆ. ಅಂಗಡಿಗಳಿಗೆ ಅನುಮತಿ ಕೊಡುವುದು ನಾವೆ. ನಾವು ಅವರಿಂದ ಬಾಡಿಗೆ ತೆಗೆದುಕೊಳ್ಳುವುದಿಲ್ಲ. ಬಡವರು ಎಂದು ಅಂಗಡಿ ನಡೆಸಲು ಕೊಟ್ಟಿದ್ದೇವೆ. ಇಲ್ಲಿರುವ ಶೇ.99 ರಷ್ಟು ವ್ಯಾಪಾರಿಗಳು ಹಿಂದೂಗಳು. ಎಲ್ಲರಿಗೂ ಹೊಟ್ಟೆ ಪಾಡಿದೆ. ನಾವು ಎಲ್ಲರಿಗೂ ಸಹಾಯ ಮಾಡುತ್ತೇವೆ ಎಂದರು.

  • ಎನ್‍ಕೌಂಟರ್ ಯೋಗ್ಯ ಶಿಕ್ಷೆ, ಮಾನವ ಹಕ್ಕುಗಳ ಹೆಸರಿನಲ್ಲಿ ಒತ್ತಡ ಹಾಕಬೇಡಿ: ಮುತಾಲಿಕ್ ಮನವಿ

    ಎನ್‍ಕೌಂಟರ್ ಯೋಗ್ಯ ಶಿಕ್ಷೆ, ಮಾನವ ಹಕ್ಕುಗಳ ಹೆಸರಿನಲ್ಲಿ ಒತ್ತಡ ಹಾಕಬೇಡಿ: ಮುತಾಲಿಕ್ ಮನವಿ

    ಹುಬ್ಬಳ್ಳಿ: ಹೈದರಾಬಾದಿನಲ್ಲಿ ನಡೆದಿದ್ದ ಪಶುವೈದ್ಯೆಯ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳನ್ನು ಎನ್‍ಕೌಂಟರ್ ಮಾಡಿದ್ದು ಸ್ವಾಗತಾರ್ಹ, ದಯವಿಟ್ಟು ಮಾನವ ಹಕ್ಕುಗಳ ಹೆಸರಿನಲ್ಲಿ ಪೊಲೀಸರ ಮೇಲೆ ಒತ್ತಡ ಹಾಕಬೇಡಿ ಎಂದು ಶ್ರೀರಾಮ ಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಮನವಿ ಮಾಡಿದ್ದಾರೆ.

    ವಿಡಿಯೋ ಮೂಲಕ ಸೈಬರಾಬಾದ್ ಪೊಲೀಸ್ ಆಯುಕ್ತ ವಿಶ್ವನಾಥ್ ಸಜ್ಜನರ್ ಅವರಿಗೆ ಶ್ರೀರಾಮ ಸೇನೆ ವತಿಯಿಂದ ಪ್ರಮೋದ್ ಮುತಾಲಿಕ್ ಅವರು ಅಭಿನಂದನೆ ಸಲ್ಲಿಸಿದ್ದಾರೆ. ಅಲ್ಲದೆ ಅತ್ಯಾಚಾರಿಗಳ ಎನ್‍ಕೌಂಟರ್ ಮಾಡಿದ್ದು ಸ್ವಾಗತಾರ್ಹವಾದದ್ದು, ಪೊಲೀಸರ ಕಾರ್ಯಕ್ಕೆ ಅಭಿನಂದನೆ ಸಲ್ಲಿಸುತ್ತೇನೆ. ಈ ರೀತಿ ಎನ್‍ಕೌಂಟರ್ ಮಾಡಿ ಅತ್ಯಾಚಾರಿಗಳಿಗೆ ಪೊಲೀಸರು ಭಯ ಹುಟ್ಟುವಂತೆ ಮಾಡಿದ್ದಾರೆ. ಇದೊಂದು ಉತ್ತಮ ಹೆಜ್ಜೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಇದನ್ನೂ ಓದಿ: ಪಿಸ್ತೂಲ್ ಕಸಿದುಕೊಂಡು ಪೊಲೀಸರ ಮೇಲೆ ಹಲ್ಲೆ ಎಸಗಿದ್ದಕ್ಕೆ ಗುಂಡೇಟು – ಕನ್ನಡದಲ್ಲಿ ವಿವರಿಸಿದ ಸಜ್ಜನರ್

    ಅತ್ಯಾಚಾರ ಮಾಡುವ ಕಾಮುಕರಿಗೆ ಕನಸಿನಲ್ಲಿಯೂ ಈ ಎನ್‍ಕೌಂಟರ್ ನೆನಪು ಬರಬೇಕು. ಇಂತಹ ಒಳ್ಳೆಯ ಕಾರ್ಯ ಮಾಡಿದ ಹುಬ್ಬಳ್ಳಿ ಮೂಲದ ಪೊಲೀಸ್ ಅಧಿಕಾರಿ ವಿಶ್ವನಾಥ್ ಸಜ್ಜನರ್ ಹಾಗೂ ತಂಡಕ್ಕೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು. ಇದನ್ನೂ ಓದಿ: ಎನ್‍ಕೌಂಟರ್ ‘ಯೋಜಿತ ಕೊಲೆ’, ಅಂಗಾಂಗಳ ಮೇಲೆ ಶೂಟ್ ಮಾಡಿದ್ದು ಯಾಕೆ – 4 ಪ್ರಶ್ನೆ ಮುಂದಿಟ್ಟ ಮಾನವಹಕ್ಕುಗಳ ಸಂಸ್ಥೆ

    ದಯವಿಟ್ಟು ಈ ವಿಚಾರಕ್ಕೆ ಮಾನವ ಹಕ್ಕುಗಳ ಹೆಸರಿನಲ್ಲಿ ಪೊಲೀಸರ ಮೇಲೆ ಒತ್ತಡ ಹಾಕಬಾರದು. ಎನ್‍ಕೌಂಟರ್ ಅತ್ಯಾಚಾರಿಗಳಿಗೆ ನೀಡಿರುವ ತಕ್ಕ ಶಿಕ್ಷೆಯಾಗಿದೆ. ಹಾಗೆಯೇ ನ್ಯಾಯಾಲಯಗಳಲ್ಲಿ ದೀರ್ಘಕಾಲದವರೆಗೆ ಅತ್ಯಾಚಾರ ಪ್ರಕರಣಗಳ ವಿಚಾರಣೆ ನಡೆಸುವದರಿಂದಲೇ ಇಂತಹ ಘಟನೆಗಳು ಹೆಚ್ಚಾಗಿ ನಡೆಯುತ್ತಿವೆ ಎನ್ನುವುದನ್ನು ನ್ಯಾಯಾಲಯ ಕೂಡ ಯೋಚಿಸಬೇಕು. ಅತ್ಯಾಚಾರಿಗಳನ್ನು ಎನ್‍ಕೌಂಟರ್ ಮಾಡುವುದು ಯೋಗ್ಯ ಶಿಕ್ಷೆ ಎಂದು ಮುತಾಲಿಕ್ ಅಭಿಪ್ರಾಯ ವ್ಯಕ್ತಪಡಿಸಿದರು.

  • ಸಂಘ ಪರಿವಾರದ ವಿರುದ್ಧ ಆಕ್ರೋಶ ಹೊರಹಾಕಿದ ಮುತಾಲಿಕ್

    ಸಂಘ ಪರಿವಾರದ ವಿರುದ್ಧ ಆಕ್ರೋಶ ಹೊರಹಾಕಿದ ಮುತಾಲಿಕ್

    ವಿಜಯಪುರ: ಈ ಹಿಂದೆ ಸಂಘ ಪರಿವಾರ ಮಾನಸಿಕ, ದೈಹಿಕ, ಆರ್ಥಿಕವಾಗಿ ನನಗೆ ಸಾಕಷ್ಟು ಹಿಂಸೆ ನೀಡಿದೆ. ನಾನು ಸಂಘ ಪರಿವಾರದ ಮೂಲಕ ಚಿತ್ರಹಿಂಸೆ ಅನುಭವಿಸಿದ್ದೆನೆಂದು ಸಂಘ ಪರಿವಾರದ ವಿರುದ್ಧ ಶ್ರೀರಾಮ ಸೇನಾ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಗಂಭೀರ ಆರೋಪ ಮಾಡಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಸೇನೆಯಿಂದ ಕರ್ನಾಟಕದಲ್ಲಿ ಕನ್ನಡಕ್ಕೆ ಏಟಾಗಿಲ್ಲ. ಭಾಷೆಗೆ ಯಾವುದೇ ಧಕ್ಕೆಯಾಗಿಲ್ಲ. ಕರ್ನಾಟಕದ ಶಿವಸೇನೆ ಕನ್ನಡಕ್ಕೆ ಬದ್ಧವಾಗಿದೆ ಎಂದು ಸ್ಪಷ್ಟಪಡಿಸಿದ್ರು. ಕನ್ನಡ ಪರ ಸಂಘಟನೆಗಳ ವಿರೋಧ ತಪ್ಪಲ್ಲ. ಅವರನ್ನ ಕನ್ವಿನ್ಸ್ ಮಾಡ್ತೀವಿ. ಅಲ್ಲದೆ ರಾಜ್ಯದಲ್ಲಿ 50 ಕ್ಷೇತ್ರಗಳಲ್ಲಿ ಶಿವಸೇನೆ ಅಭ್ಯರ್ಥಿಗಳು ಸ್ಪರ್ಧೆ ಮಾಡಲಿದ್ದು, ನಾನು ಶೃಂಗೇರಿ, ವಿಜಯಪುರ, ತೇರದಾಳ ಕ್ಷೇತ್ರಗಳಲ್ಲಿ ಯಾವುದಾದರು ಒಂದರಲ್ಲಿ ಸ್ಪರ್ಧೆ ಮಾಡ್ತೀನಿ ಎಂದರು. ಇದನ್ನೂ ಓದಿ: ಮೋದಿ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿ ಸುದ್ದಿಗೋಷ್ಠಿಯಲ್ಲಿ ಕಣ್ಣೀರಿಟ್ಟ ತೊಗಾಡಿಯಾ

    ಇದೇ ವೇಳೆ ವಿಹೆಚ್‍ಪಿ ಮುಖಂಡ ಪ್ರವೀಣ್ ಭಾಯ್ ತೊಗಾಡಿಯಾ ಅವರ ಘಟನೆಯನ್ನು ಮುತಾಲಿಕ್ ಖಂಡಸಿದ್ದು, ಇವತ್ತು ಸಂಘ ಪರಿವಾರದ ಒಳಗಡೆಯೇ ಇದ್ದು ಎನ್ ಕೌಂಟರ್ ಮಾಡುವ ಸ್ಥಿತಿಗೆ ಬಂದಿದ್ದು ಆಘಾತಕಾರಿ ವಿಷಯ ಎಂದರು. ಪರಿವಾರದ ಒಳಗಡೆ ಇದ್ದುಕೊಂಡೇ ಅವರ ಮೇಲೆ ಷಡ್ಯಂತ್ರ ನಡೆಸಲಾಗುತ್ತಿದೆ. ಕಳೆದ 14 ವರ್ಷಗಳಲ್ಲಿ ಅವರು ಸಾಕಷ್ಟು ನೋವು, ಕಿರುಕುಳ ಅನುಭವಿಸಿದ್ದಾರೆ. ಅಲ್ಲದೆ ಅಂತರಾಷ್ಟ್ರೀಯ ಹಿಂದೂ ಮುಖಂಡನ ಕಣ್ಣಲ್ಲಿ ನೀರು ತರಿಸಿದ್ದಾರಲ್ಲಾ. ಇವರಿಗೆ ಮಾನ ಮರ್ಯಾದೆ ಇದೆಯಾ? ತೊಗಾಡಿಯಾ ಏನು ರೇಪಿಸ್ಟಾ? ಡ್ರಗ್ಗಿಸ್ಟಾ? ಉಗ್ರವಾದಿಯಾ? ಕೇಂದ್ರ ಸಾರ್ಕಾರ ಅವರನ್ನು ಹತ್ತಿಕ್ಕಲು ಈ ರೀತಿ ಮಾಡುತ್ತಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಗಂಭೀರ ಅರೋಪ ಮಾಡಿದರು. ಇದನ್ನೂ ಓದಿ: ಕಾಣೆಯಾಗಿದ್ದ ಪ್ರವೀಣ್ ತೊಗಾಡಿಯಾ ಪಾರ್ಕ್ ನಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ, ಆಸ್ಪತ್ರೆಗೆ ದಾಖಲು

    ಎನ್ ಕೌಂಟರ್ ಪ್ರಕರಣದ ಕುರಿತು ಸಂಪೂರ್ಣವಾಗಿ ತನಿಖೆಯಾಗಬೇಕು. ಪರಿವಾರದ ಒಳಗಡೆಯೇ ಹಿಂದೂವಾದವನ್ನು ಹತ್ತಿಕ್ಕಲಾಗುತ್ತಿದೆ. ತೊಗಾಡಿಯಾ ಅವರ ಕಣ್ಣಲ್ಲಿ ನೀರು ತರಿಸಿದ ಇವರಿಗೆ ಹಿಂದೂಗಳ ಶಾಪ ತಟ್ಟುತ್ತದೆ. 15 ದಿನಗಳ ಹಿಂದೆ ಒಡಿಶಾದ ಭುವನೇಶ್ವರದಲ್ಲಿ ಸಂಘ ಪರಿವಾರದ ಮೀಟಿಂಗ್ ಆಯ್ತು. ಆ ಮೀಟಿಂಗ್ ನಲ್ಲಿ ವಿಹೆಚ್‍ಪಿ ಅಂತರಾಷ್ಟ್ರೀಯ ಅಧ್ಯಕ್ಷ ರಾಘವಲು ಹಾಗೂ ಅಂತರಾಷ್ಟ್ರೀಯ ಕಾರ್ಯಾಧ್ಯಕ್ಷ ತೊಗಾಡಿಯಾ ಅವರನ್ನು ಆ ಸ್ಥಾನಗಳಿಂದ ತೆಗೆಯಲು ಷಡ್ಯಂತ್ರ ಮಾಡಲಾಗಿತ್ತು. ಅಧಿಕಾರದ ಮದ, ಅಧಿಕಾರದ ದರ್ಪದಿಂದ ಅವರಿಗೆ ಮಾನಸಿಕ ಕಿರುಕುಳ ಕೊಡಲಾಗುತ್ತಿದೆ. ತೊಗಾಡಿಯಾ ಅವರನ್ನು ಎನ್‍ಕೌಂಟರ್ ಮಾಡುವ ಷಡ್ಯಂತ್ರ ನಡೆಸಲಾಗುತ್ತಿದೆ ಎಂಬ ಗಂಭೀರ ಆರೋಪವನ್ನ ಪರೋಕ್ಷವಾಗಿ ಕೇಂದ್ರ ಸರ್ಕಾರದ ಮೇಲೆ ಮಾಡಿದರು.

    20 ವರ್ಷದ ಹಳೆಯ ಪ್ರಕರಣಗಳನ್ನು ಅವರ ಮೇಲೆ ಹೊರಿಸಲಾಗುತ್ತಿದೆ. ಈ ಕೂಡಲೇ ಕೇಂದ್ರ ಸರ್ಕಾರ ಬೇಷರತ್ ಆಗಿ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು. ರಾಜಸ್ಥಾನದ ಮುಖ್ಯಮಂತ್ರಿ, ಗೃಹಮಂತ್ರಿಯೂ ಕೂಡ ಇದರಲ್ಲಿ ಶಾಮೀಲಾಗಿದ್ದಾರೆ. ತೊಗಾಡಿಯಾ ಅವರ ಜೊತೆಗೆ ಸಮಸ್ತ ಹಿಂದೂ ಸಮುದಾಯ ಇದೆ ಎಂದರು.