Tag: Shrimant Patil

  • ಶಾಸಕರ ಪುತ್ರನ ಕಾರನ್ನು ತಪಾಸಣೆ ಮಾಡದೆ ಬಿಟ್ಟು ಕಳಿಸಿದ ಚೆಕ್ ಪೋಸ್ಟ್ ಸಿಬ್ಬಂದಿ

    ಶಾಸಕರ ಪುತ್ರನ ಕಾರನ್ನು ತಪಾಸಣೆ ಮಾಡದೆ ಬಿಟ್ಟು ಕಳಿಸಿದ ಚೆಕ್ ಪೋಸ್ಟ್ ಸಿಬ್ಬಂದಿ

    – ತರಾಟೆಗೆ ತೆಗೆದುಕೊಂಡ ತಹಶೀಲ್ದಾರ್

    ಚಿಕ್ಕೋಡಿ: ರಾಜ್ಯದಲ್ಲಿ ಸಾರ್ವತ್ರಿಕ ಚುನಾವಣೆ (Assembly Election) ಹಿನ್ನೆಲೆ ನೀತಿ ಸಂಹಿತೆ (Code of Conduct) ಜಾರಿಯಲ್ಲಿದೆ. ಅಕ್ರಮ ಚಟುವಟಿಕೆಗಳನ್ನು ತಡೆಗಟ್ಟಲು ಚುನಾವಣೆ ಆಯೋಗದ ಪ್ರತಿ ತಾಲೂಕಿನ ಸರಹದ್ದಿನಲ್ಲಿ ಚೆಕ್ ಪೋಸ್ಟ್ (Check Post) ನಿರ್ಮಿಸಿ ಪ್ರತಿಯೊಂದು ವಾಹನ ಹಾಗೂ ವ್ಯಕ್ತಿಗಳ ಮೇಲೆ ಅಧಿಕಾರಿಗಳು ನಿಗಾ ಇಡುವಂತೆ ಸೂಚನೆ ನೀಡಲಾಗುತ್ತಿದೆ. ಇದನ್ನು ಕಟ್ಟುನಿಟ್ಟಿನಿಂದ ರಾಜ್ಯಾದ್ಯಂತ ಅಧಿಕಾರಿಗಳು ಪಾಲನೆ ಮಾಡುತ್ತಿದ್ದಾರೆ. ಆದರೆ ಕಾಗವಾಡ ಶಾಸಕ ಶ್ರೀಮಂತ ಪಾಟೀಲ್ (Shrimant Patil) ಅವರ ಪುತ್ರನ ಕಾರನ್ನು ಅಧಿಕಾರಿಗಳು ಪರಿಶೀಲನೆ ಮಾಡದೆ ಕರ್ತವ್ಯ ಲೋಪ ಎಸಿಗಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ಸ್ಥಳದಲ್ಲಿದ್ದ ಚೆಕ್ ಪೋಸ್ಟ್ ಸಿಬ್ಬಂದಿಯನ್ನು ತೀವ್ರ ತರಾಟೆಗೆ ತೆಗೆದುಕೊಂಡಿರುವ ಪ್ರಸಂಗ ನಡೆದಿದೆ.

    ಬೆಳಗಾವಿ ಜಿಲ್ಲೆಯ ಕಾಗವಾಡ ಪಟ್ಟಣದ ಹೊರವಲಯದ ಮಹಾರಾಷ್ಟ್ರ ಹಾಗೂ ಕರ್ನಾಟಕಕ್ಕೆ ಸಂಪರ್ಕ ಕಲ್ಪಿಸುವ ಮಾರ್ಗದ ಮಧ್ಯದಲ್ಲಿ ಚೆಕ್ ಪೋಸ್ಟ್ ನಿರ್ಮಾಣ ಮಾಡಿದ್ದು, ಇಲ್ಲಿ ಪ್ರತಿಯೊಂದು ವಾಹನಗಳನ್ನು ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಆದರೆ ಕಾಗವಾಡ ಶಾಸಕ ಶ್ರೀಮಂತ್ ಪಾಟೀಲ್ ಅವರ ಪುತ್ರ ಶ್ರೀನಿವಾಸ ಪಾಟೀಲ್ ಆಗಮಿಸುತ್ತಿದ್ದಂತೆ ಅಧಿಕಾರಿಗಳು ಅವರ ಕಾರನ್ನು ಪರಿಶೀಲನೆ ಮಾಡದೆ ಹಾಗೆ ಬಿಟ್ಟಿದ್ದಾರೆ. ಇದರಿಂದ ಕೆಲವು ಸ್ಥಳೀಯರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಮೇಲಾಧಿಕಾರಿಗಳಿಗೆ ಮೌಖಿಕವಾಗಿ ದೂರು ಸಲ್ಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ಕಾಗವಾಡ ತಹಶೀಲ್ದಾರ್ ಎಂಎಂ ಬಳೇಗಾರ ಆಗಮಿಸಿ ಕರ್ತವ್ಯದಲ್ಲಿದ್ದ ಅಧಿಕಾರಿಗಳನ್ನು ತೀವ್ರವಾಗಿ ತರಾಟೆ ತೆಗೆದುಕೊಂಡಿದ್ದಾರೆ. ಇದನ್ನೂ ಓದಿ: ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ ಮೇಲೆ FIR ದಾಖಲು

    ಕಾಗವಾಡ ಶಾಸಕರ ಮನೆ ಮಹಾರಾಷ್ಟ್ರದ ಸಾಂಗ್ಲಿ ನಗರದಲ್ಲಿ ಇದೆ. ಇದರಿಂದ ಕಾಗವಾಡ ಸಾಂಗ್ಲಿಯಲ್ಲಿ ದಿನನಿತ್ಯ ಅವರು ಸಂಚಾರ ಬೆಳೆಸುವುದರಿಂದ ಅಧಿಕಾರಿಗಳು ಅವರ ಕಾರು ತಪಾಸಣೆಗೆ ಮುಂದೆ ಹೋಗಿರಲಿಲ್ಲ. ಇದರಿಂದ ಕೆಲವು ಸ್ಥಳೀಯರು ಅಸಮಾಧಾನಗೊಂಡಿದ್ದಾರೆ. ಕಾನೂನು ಎಲ್ಲರಿಗೂ ಸಮನಾಗಿದೆ. ಇಲ್ಲಿ ರಾಜಕೀಯ ಮಕ್ಕಳಿಗೆ ಬೇರೆ ಕಾನೂನು ಇಲ್ಲ ಎಂದು ಹಿರಿಯ ಅಧಿಕಾರಿಗಳನ್ನು ಕೆಲವು ಸ್ಥಳೀಯರು ತರಾಟೆ ತೆಗೆದುಕೊಂಡಿದ್ದಾರೆ.

    ಈ ಹಿನ್ನೆಲೆಯಲ್ಲಿ ಕಾಗವಾಡ ತಹಶೀಲ್ದಾರ್ ತಕ್ಷಣವೇ ಸ್ಥಳಕ್ಕೆ ದೌಡಾಯಿಸಿ ಚೆಕ್ ಪೋಸ್ಟ್‌ನಲ್ಲಿ ಕರ್ತವ್ಯದಲ್ಲಿರುವ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಯಾಕೆ ಶಾಸಕರ ಮಗನ ವಾಹನವನ್ನು ತಪಾಸಣೆ ಮಾಡಿಲ್ಲ? ನಿಮಗೆ ನೋಟಿಸ್ ನೀಡಲಾಗುವುದು. ಪ್ರತಿಯೊಂದು ವಾಹನ ತಪಾಸಣೆ ಮಾಡುವಂತೆ ನಿಮಗೆ ಈಗಾಗಲೇ ಹೇಳಿದ್ದೇವೆ. ಆದರೂ ನೀವು ಕರ್ತವ್ಯ ಲೋಪ ಮಾಡಿದ್ದೀರಿ. ಮುಂದೆ ಈ ರೀತಿ ಆಗದಂತೆ ನೋಡಿಕೊಳ್ಳಿ ಎಂದು ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಕಾರ್ಕಳ ಅಖಾಡದಲ್ಲಿ ಮುಟ್ಟಾಳ ಫೈಟ್- ಮುತಾಲಿಕ್ ಪೋಸ್ಟರ್‌ಗೆ ಬಿಜೆಪಿ ಕೌಂಟರ್

  • ಮರಾಠಾ ಸಮುದಾಯದ ಶ್ರೀಮಂತ್ ಪಾಟೀಲ್ ಇಲ್ಲವೆ ನನಗೆ ಸಚಿವ ಸ್ಥಾನ ಬೇಕು: ಅನಿಲ್ ಬೆನಕೆ

    ಮರಾಠಾ ಸಮುದಾಯದ ಶ್ರೀಮಂತ್ ಪಾಟೀಲ್ ಇಲ್ಲವೆ ನನಗೆ ಸಚಿವ ಸ್ಥಾನ ಬೇಕು: ಅನಿಲ್ ಬೆನಕೆ

    ಬೆಳಗಾವಿ: ರಾಜ್ಯದಲ್ಲಿ ಮರಾಠಾ ದೊಡ್ಡ ಪ್ರಮಾಣದಲ್ಲಿ ಇದೆ. ಹೀಗಾಗಿ ಅದನ್ನು ಪ್ರತಿನಿಧಿಸುವ ಸಲುವಾಗಿ ಸಮಾಜದ ಶ್ರೀಮಂತ್ ಪಾಟೀಲ್ ಇಲ್ಲವೆ ನನಗೆ ಸಚಿವ ಸ್ಥಾನ ನೀಡಬೇಕು ಬೆಳಗಾವಿ ಉತ್ತರ ಶಾಸಕ ಅನಿಲ್ ಬೆನಕೆ ಆಗ್ರಹಿಸಿದರು.

    ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮರಾಠಾ ಸಮುದಾಯಕ್ಕೆ ಸಚಿವ ಸ್ಥಾನ ಕೊಡಬೇಕೆಂದು ಬೇಡಿಕೆ ಇದೆ. ಆದರೆ, ಹೈಕಮಾಂಡ್ ಏನು ನಿರ್ಣಯ ತೆಗೆದುಕೊಳ್ಳುತ್ತದೆ ಅದಕ್ಕೆ ನಾವು ಬದ್ಧರಾಗಿದ್ದೇವೆ ಎಂದರು.

    ರಾಜ್ಯದಲ್ಲಿ ಮರಾಠ ದೊಡ್ಡ ಸಮುದಾಯವಿದ್ದು ಅದನ್ನ ಪ್ರತಿನಿಧಿಸುವುದಕ್ಕೆ ನಮ್ಮ ಸಮಾಜದವರಿಗೆ ಸಚಿವ ಸ್ಥಾನ ಬೇಕು ಎಂಬುವುದು ಸಮಾಜದ ಬೇಡಿಕೆ ಆಗಿದೆ. ಪಕ್ಷ ನಮ್ಮ ಸಮಾಜದ ಬೇಡಿಕೆ ಈಡೇರಿಸುವ ಭರವಸೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ಹೀಗಾಗಿ ಸಮಾಜದ ಶ್ರೀಮಂತ್ ಪಾಟೀಲ್ ಇಲ್ಲವೆ ನನಗೆ ಸಚಿವ ಸ್ಥಾನ ನೀಡಬೇಕು. ಯಾರಿಗೆ ಕೊಟ್ಟರು ತೊಂದರೆ ಇಲ್ಲ. ಇಬ್ಬರಲ್ಲಿ ಒಬ್ಬರಿಗೆ ಸಚಿವ ಸ್ಥಾನ ಕೊಡಬೇಕು ಎಂದು ಒತ್ತಾಯಿಸಿದರು.

  • ಕಳಪೆ ರಸ್ತೆ ನಿರ್ಮಾಣ ಮಾಡುವ ಗುತ್ತಿಗೆದಾರರ ಬಿಲ್ ತಡೆ ಹಿಡಿಯಿರಿ: ಶ್ರೀಮಂತ್ ಪಾಟೀಲ್

    ಕಳಪೆ ರಸ್ತೆ ನಿರ್ಮಾಣ ಮಾಡುವ ಗುತ್ತಿಗೆದಾರರ ಬಿಲ್ ತಡೆ ಹಿಡಿಯಿರಿ: ಶ್ರೀಮಂತ್ ಪಾಟೀಲ್

    ಚಿಕ್ಕೋಡಿ: ಕಳಪೆ ಮಟ್ಟದ ರಸ್ತೆಗಳನ್ನ ನಿರ್ಮಿಸುವ ಗುತ್ತಿಗೆದಾರರಿಗೆ ರಸ್ತೆ ನಿರ್ಮಾಣದ ಗುತ್ತಿಗೆ ನೀಡದಂತೆ ಕಾಗವಾಡ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಶ್ರೀಮಂತ್ ಪಾಟೀಲ್ ಸೂಚನೆ ನೀಡಿದ್ದಾರೆ.

    ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಕೆಂಪವಾಡದ ಶಾಸಕರ ಕಚೇರಿಯಲ್ಲಿ ಲೋಕೋಪಯೋಗಿ ಇಲಾಖೆ, ಸಣ್ಣ ನೀರಾವರಿ ಜಿಲ್ಲಾ ಪಂಚಾಯತ್ ಇಲಾಖೆಯ ಅಧಿಕಾರಿಗಳೊಂದಿಗೆ ಪ್ರಗತಿ ಪರಶೀಲನಾ ಸಭೆ ನಡೆಸಿ ಮಾತನಾಡಿದ ಅವರು, ರಸ್ತೆ ಸುಧಾರಣೆ ವಿಷಯದಲ್ಲಿ ಗುತ್ತಿಗೆದಾರರು ಜಾಗೃತೆಯಿಂದ ಗುಣಮಟ್ಟದ ರಸ್ತೆಗಳನ್ನ ನಿರ್ಮಿಸಬೇಕು. ಕಳಪೆ ಕಾಮಗಾರಿ ಆದಲ್ಲಿ ಅಂಥ ಗುತ್ತಿಗೆದಾರರ ಬಿಲ್ ತಡೆ ಹಿಡಿಯುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅಲ್ಲದೇ ಕ್ಷೇತ್ರದಲ್ಲಿನ ರಸ್ತೆ, ನೀರಾವರಿ ಹಾಗೂ ಮತ್ತಿತರ ವಿಷಯಗಳಿಗೆ ಸಂಬಂಧಪಟ್ಟ ವಿಷಯಗಳ ಕುರಿತು ಚರ್ಚೆ ನಡೆಸಿದ್ದಾರೆ. ಇದನ್ನೂ ಓದಿ:  ಕಿತ್ತಳೆ ಮಾರಿ ಶಾಲೆ ಕಟ್ಟಿದ ಹರೇಕಳ ಹಾಜಬ್ಬರಿಗೆ ಪದ್ಮಶ್ರೀ

    ಈ ಸಮಯದಲ್ಲಿ ಜಿಲ್ಲಾ ಪಂಚಾಯತ್ ಇಲಾಖೆಯ ಅಧಿಕಾರಿಗಳಾದ ವೀರಣ್ಣ ವಾಲಿ, ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳಾದ ಎಸ್ ಎಸ್ ಮಕಾಣಿ, ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಾದ ಜೆ ಎ ಹಿರೇಮಠ, ಮಲ್ಲಿಕಾರ್ಜುನ ಮಗದುಮ ಸೇರಿದಂತೆ ಮತ್ತಿತರ ಇಲಾಖೆ ಅಧಿಕಾರಿಗಳು, ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು. ಇದನ್ನೂ ಓದಿ:   ಅಪ್ಪು ಸಮಾಧಿಗೆ ಮಂಡಕ್ಕಿ ಹಾರ ಮಾಡಿಕೊಂಡು ಬಂದ ವೃದ್ಧೆ

  • ಶಿಕ್ಷಣದ ಗುಣಮಟ್ಟದಲ್ಲಿ ಯಾವುದೇ ಕೊರತೆ ಆಗಲು ಬಿಡುವುದಿಲ್ಲ: ಶ್ರೀಮಂತ ಪಾಟೀಲ್

    ಶಿಕ್ಷಣದ ಗುಣಮಟ್ಟದಲ್ಲಿ ಯಾವುದೇ ಕೊರತೆ ಆಗಲು ಬಿಡುವುದಿಲ್ಲ: ಶ್ರೀಮಂತ ಪಾಟೀಲ್

    ಚಿಕ್ಕೋಡಿ: ನೀರಾವರಿಯ ಜೊತೆಗೆ ಕಾಗವಾಡ ಮತ ಕ್ಷೇತ್ರದಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಪ್ರಾಶಸ್ತ್ಯ ನೀಡಿದ್ದು, ಶಿಕ್ಷಣದ ಗುಣಮಟ್ಟದಲ್ಲಿ ಯಾವುದೇ ಕೊರತೆ ಆಗಲು ಬಿಡುವುದಿಲ್ಲ ಎಂದು ಮಾಜಿ ಸಚಿವ ಹಾಗೂ ಕಾಗವಾಡ ಕ್ಷೇತ್ರದ ಶಾಸಕ ಶ್ರೀಮಂತ ಪಾಟೀಲ್ ಹೇಳಿದ್ದಾರೆ.

    ಬೆಳಗಾವಿ ಜಿಲ್ಲೆ ಕಾಗವಾಡ ತಾಲೂಕಿನ ಲೋಕೂರ ಗ್ರಾಮದಲ್ಲಿ ಸರ್ಕಾರಿ ಶಾಲೆಯ ನೂತನ ಕೊಠಡಿಗಳನ್ನ ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳಿಗೆ ಶಿಕ್ಷಣದ ಗಯಣಮಟ್ಟದಲ್ಲಿ ಯಾವುದೇ ಕೊರತೆ ಆಗಬಾರದು. ಕ್ಷೇತ್ರದಲ್ಲಿ ಸಮರ್ಪಕ ಕೊಠಡಿಗಳ ನಿರ್ಮಾಣಕ್ಕೆ ಒತ್ತು ಕೊಡಲಾಗಿದ್ದು ಎಲ್ಲೆ ಕೊಠಡಿಗಳ ಸಮಸ್ಯೆ ಇದ್ದರೂ ಬಗೆಹರಿಸುವ ಕಾರ್ಯವನ್ನ ಮಾಡುತ್ತೇನೆ ಎಂದಿದ್ದಾರೆ. ಇದನ್ನೂ ಓದಿ:  ಸಣ್ಣ ಪ್ರಮಾಣದ ಡ್ರಗ್ಸ್ ಸೇವಿಸಿದವರಿಗೆ ಜೈಲು ಶಿಕ್ಷೆ ಬೇಡ!

    ವಿದ್ಯಾರ್ಥಿಗಳಿಗೆ ಮೂಲಭೂತ ಸೌಕರ್ಯದ ಜೊತೆಗೆ ಶುದ್ಧ ಕುಡಿಯುವ ನೀರು ಪೂರೈಸಲು ಪ್ರತಿ ಶಾಲೆಯಲ್ಲಿ ನೀರು ಶುದ್ಧೀಕರಣ ಘಟಕಗಳನ್ನು ಸ್ಥಾಪಿಸಲಾಗುತ್ತಿದೆ. ಕ್ಷೇತ್ರದ ಜನರು ಯಾವುದೇ ಸಮಸ್ಯೆ ಇದ್ದರೂ ನನ್ನ ಬಳಿ ಬಂದರೇ ಪಕ್ಷ, ಜಾತಿ ಬೇಧ ಮರೆತು ಕಾರ್ಯ ನಿರ್ವಹಿಸುವದಾಗಿ ಹೇಳಿದು. ಈ ಸಂದರ್ಭದಲ್ಲಿ ಕಾಗವಾಡ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಎಮ್.ಆರ್ ಮುಂಜೆ, ತಾಲೂಕು ಪಂಚಾಯತ್ ಸದಸ್ಯ ಸುಧಾಕರ ಭಗತ್, ದಶರಥ ಚವ್ಹಾಣ, ರಾಜಾರಾಮ್ ಗಡಗೆ, ರಶೀದ್ ತಾಂಬೋಳಿ, ಮುಖಂಡರು ಗ್ರಾಮ ಪಂಚಾಯತ್ ಸದಸ್ಯರು, ಶಾಲೆಯ ಆಡಳಿತ ಮಂಡಳಿಯವರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಇದನ್ನೂ ಓದಿ:  ದಂಪತಿಯ ಹನಿ ಟ್ರ್ಯಾಪ್ ಬಲೆಗೆ ಬಿದ್ದ 300 ಮಂದಿ- ಒಂದೇ ವರ್ಷದಲ್ಲಿ 20 ಕೋಟಿ ಸುಲಿಗೆ!

  • ಬಿಜೆಪಿಗೆ ಬರುವ ಮುನ್ನ ದುಡ್ಡಿನ ಆಫರ್ ಕೊಟ್ಟಿದ್ದು ನಿಜ: ಶ್ರೀಮಂತ ಪಾಟೀಲ್

    ಬಿಜೆಪಿಗೆ ಬರುವ ಮುನ್ನ ದುಡ್ಡಿನ ಆಫರ್ ಕೊಟ್ಟಿದ್ದು ನಿಜ: ಶ್ರೀಮಂತ ಪಾಟೀಲ್

    ಚಿಕ್ಕೋಡಿ(ಬೆಳಗಾವಿ): ನಾನು ಬಿಜೆಪಿಗೆ ಬರುವ ಮುನ್ನ ನನಗೆ ಹಣದ ಆಫರ್ ಕೊಟ್ಟಿದ್ದು ನಿಜ ಎಂದು ವಲಸಿಗ ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಶ್ರೀಮಂತ ಪಾಟೀಲ್ ಸ್ಫೋಟಕ ಮಾಹಿತಿಯನ್ನು ಹೊರಹಾಕಿದ್ದಾರೆ.

    ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಐನಾಪೂರ ಪಟ್ಟಣದಲ್ಲಿ ಸಚಿವ ಸ್ಥಾನ ಕಳೆದುಕೊಂಡ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನನಗೆ ಹಣದ ಆಫರ್ ಕೊಟ್ಟರೂ ನಾನು ಬೇಡ ಎಂದಿದ್ದೆ. ಯಾವುದೇ ಹಣ ನನಗೆ ಬೇಡ. ಬಿಜೆಪಿಗೆ ಬರ್ತೀನಿ ಒಳ್ಳೆಯ ಸ್ಥಾನ-ಮಾನ ನನಗೆ ಬೇಕು ಎಂದಿದ್ದೆ. ಹಣದ ಬದಲು ನನ್ನ ಕ್ಷೇತ್ರದ ಜನರಿಗೆ ಒಳ್ಳೆಯ ಸೇವೆ ಮಾಡುವ ನಿಟ್ಟಿನಲ್ಲಿ ಯೋಗ್ಯ ಸ್ಥಾನಮಾನ ನೀಡುವಂತೆ ಕೇಳಿಕೊಂಡಿದ್ದೆ ಎಂದಿದ್ದಾರೆ. ಇದನ್ನೂ ಓದಿ:  ಅರಣ್ಯ ಇಲಾಖೆಯ ಹುತಾತ್ಮ ಅಧಿಕಾರಿ, ಸಿಬ್ಬಂದಿಗೆ ಗೌರವ ನಮನ ಸಲ್ಲಿಕೆ

    ಈಗ ಸಚಿವ ಸ್ಥಾನ ಸಿಕ್ಕಿಲ್ಲ ಈ ವಿಚಾರದಲ್ಲಿ ಹಿರಿಯ ನಾಯಕರೊಂದಿಗೆ ಚರ್ಚೆ ಮಾಡಿದ್ದೇನೆ. ಬರುವ ಸಂಪುಟ ವಿಸ್ತರಣೆಯಲ್ಲಿ ಖಂಡಿತವಾಗಿ ಸಚಿವ ಸ್ಥಾನ ನೀಡುವ ಭರವಸೆ ನೀಡಿದ್ದಾರೆ. ಶೀಘ್ರದಲ್ಲೇ ಸಚಿವ ಸಂಪುಟ ವಿಸ್ತರಣೆ ಆಗಲಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ:  ಕರ್ನಾಲ್ ರೈತ ಪ್ರತಿಭಟನೆಗೆ ಮಣಿದ ಸರ್ಕಾರ – ಐಎಎಸ್ ಅಧಿಕಾರಿಯ ವಿರುದ್ಧ ತನಿಖೆಗೆ ಅಸ್ತು

  • ಮುಂಬರುವ ದಿನಗಳಲ್ಲಿ ಸಚಿವ ಸ್ಥಾನ ಸಿಗಲಿದೆ: ಶ್ರೀಮಂತ ಪಾಟೀಲ್

    ಮುಂಬರುವ ದಿನಗಳಲ್ಲಿ ಸಚಿವ ಸ್ಥಾನ ಸಿಗಲಿದೆ: ಶ್ರೀಮಂತ ಪಾಟೀಲ್

    ಚಿಕ್ಕೋಡಿ (ಬೆಳಗಾವಿ): ಮುಂಬರುವ ದಿನಗಳಲ್ಲಿ ಸಚಿವ ಸ್ಥಾನ ನೀಡುವುದಾಗಿ ಬಿಜೆಪಿ ಹೈಕಮಾಂಡ್ ಭರವಸೆ ನೀಡಿದ್ದಾರೆ ಎಂದು ಶಾಸಕ ಹಾಗೂ ಮಾಜಿ ಸಚಿವ ಶ್ರೀಮಂತ ಪಾಟೀಲ್ ಹೇಳಿದರು.

    ಕಾಗವಾಡ ಮತಕ್ಷೇತ್ರದ ಕೆಂಪವಾಡ ಗ್ರಾಮದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮಾಜಿ ಸಿಎಂ ಯಡಿಯೂರಪ್ಪ ಸರ್ಕಾರದಲ್ಲಿ ಸಚಿವನಾಗಿ ಕಾರ್ಯನಿರ್ವಹಿಸಿದ್ದೇನೆ. ಆದರೆ ಸಿಎಂ ಬಸವರಾಜ ಬೊಮ್ಮಾಯಿ ಸರ್ಕಾರದಲ್ಲಿ ನನ್ನನ್ನು ಕೈಬಿಡಲಾಗಿದೆ. ಮುಂದೆ ಸಚಿವ ಸಂಪುಟದಲ್ಲಿ ನನಗೆ ಮಂತ್ರಿಗಿರಿ ನೀಡುವುದಾಗಿ ಹೈಕಮಾಂಡ್ ಭರವಸೆ ನೀಡಿದೆ ಎಂದರು. ಇದನ್ನೂ ಓದಿ: ಮೊಬೈಲ್ ನುಂಗಿ 4 ದಿನ ಹೊಟ್ಟೆಯಲ್ಲಿಟ್ಟುಕೊಂಡ

    ಉತ್ತರ ಕರ್ನಾಟಕಕ್ಕೆ ಸಿಎಂ ಸ್ಥಾನ ಸಿಕ್ಕಿದ್ದು ಸಂತೋಷ ಉಂಟುಮಾಡಿದೆ. ಈ ಭಾಗದಲ್ಲಿ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಬೇಸಿಗೆ ಸಂದರ್ಭದಲ್ಲಿ ಕೃಷ್ಣಾ ನದಿ ಬತ್ತಿ ಹೋಗುತ್ತದೆ. ಆ ಸಮಯದಲ್ಲಿ ಮಹಾರಾಷ್ಟ್ರ ರಾಜ್ಯದಿಂದ ನಮಗೆ ನೀರು ಹರಿಸುವ ಯೋಜನೆ ಒಪ್ಪಂದ ಸದ್ಯದಲ್ಲೇ ಆಗುವುದರಿಂದ ನಮ್ಮ ಭಾಗಕ್ಕೆ ಹೆಚ್ಚಿನ ಅನುಕೂಲ ಆಗುತ್ತದೆ ಎಂದು ತಿಳಿಸಿದರು. ಇದನ್ನೂ ಓದಿ:  ಮಳೆಗಾಗಿ ಹುಡುಗಿಯರ ಬೆತ್ತಲ ಮೆರವಣಿಗೆ

    ಮರಾಠಾ ಮಹಾಸಭಾ ಸಿಎಂ ಭೇಟಿ ವಿಚಾರವಾಗಿ ಮಾತನಾಡಿದ ಅವರು, ಮರಾಠಾ ಸಮುದಾಯದ ಹಲವಾರು ಬೇಡಿಕೆಗಳ ವಿಚಾರವಾಗಿ ಸಿಎಂ ಭೇಟಿ ಮಾಡಿದ್ದಾರೆ. ಕರ್ನಾಟಕ ಭಾಗದಲ್ಲಿ ಆರ್ಥಿಕ, ಶೈಕ್ಷಣಿಕವಾಗಿ ಹಿಂದುಳಿದ ಕಾರಣಕ್ಕೆ ಹೆಚ್ಚು ಆದ್ಯತೆ ನೀಡುವಂತೆ ಕೇಳಿಕೊಂಡಿದ್ದಾರೆ. ಜೊತೆ ನನಗೆ ಸಚಿವ ಸ್ಥಾನ ನೀಡುವಂತೆಯೂ ಸಿಎಂಗೆ ಮನವಿ ಸಲ್ಲಿಸಿದ್ದಾರೆಂದು ಹೇಳಿದರು.

  • ನನ್ನ ಸ್ವಂತ ಹಣದಿಂದ ಕ್ಷೇತ್ರದ ಜನರಿಗೆ ಪರಿಹಾರ ನೀಡುತ್ತೇನೆ: ಶ್ರೀಮಂತ ಪಾಟೀಲ್

    ನನ್ನ ಸ್ವಂತ ಹಣದಿಂದ ಕ್ಷೇತ್ರದ ಜನರಿಗೆ ಪರಿಹಾರ ನೀಡುತ್ತೇನೆ: ಶ್ರೀಮಂತ ಪಾಟೀಲ್

    ಬೆಳಗಾವಿ: ಸರ್ಕಾರ ನೆರೆ ಪರಿಹಾರ ನೀಡದೇ ಇದ್ದರೆ ನನ್ನ ಸ್ವಂತ ಹಣದಿಂದ ಕ್ಷೇತ್ರದ ಜನರಿಗೆ ಪರಿಹಾರ ನೀಡುತ್ತೇನೆ ಎಂದು ಮಾಜಿ ಸಚಿವ ಹಾಗೂ ಕಾಗವಾಡ ಬಿಜೆಪಿ ಶಾಸಕ ಶ್ರೀಮಂತ ಪಾಟೀಲ್ ಹೇಳಿದ್ದಾರೆ.

    ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೆಂಪವಾಡ ಗ್ರಾಮದ ನೆರೆ ಪರಿಹಾರದ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನೆರೆ ಪೀಡಿತ ಸಂತ್ರಸ್ತರಿಗೆ ಪರಿಹಾರ ನೀಡುವಲ್ಲಿ ವಿಳಂಬವಾಗುತ್ತಿದೆ. ಈ ಕುರಿತು ನಾನು ಸಿಎಂ ಬಸವರಾಜ ಬೊಮ್ಮಾಯಿ ಅವರ ಬಳಿ ಮಾತನಾಡಿದ್ದೇನೆ. ಅವರಿಗೆ ಪರಿಹಾರ ನೀಡುವಂತೆ ಮನವಿ ಮಾಡಿದ್ದೇನೆ. ಸಿಎಂ ಪರಿಹಾರ ನೀಡುತ್ತಾರೆಂಬ ಭರವಸೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.ಇದನ್ನೂ ಓದಿ:ಕಾರು ಅಪಘಾತಕ್ಕೂ ಮುನ್ನ ಮದ್ಯ ಖರೀದಿಸಿದ್ದ ಇಷಿತಾ, ಬಿಂದು

    ಒಂದು ವೇಳೆ ಸರ್ಕಾರ ಪರಿಹಾರ ನೀಡದೇ ಇದ್ದರೆ ನನ್ನ ಜೇಬಿನಿಂದ ನನ್ನ ಕ್ಷೇತ್ರದ ಸಂತ್ರಸ್ತರಿಗೆ ಪರಿಹಾರ ನೀಡುತ್ತೇನೆ. ಪರಿಹಾರ ಸಿಗದ ಕಾರಣ ಕ್ಷೇತ್ರದ ಜನ ಪ್ರತಿಭಟನೆ ನಡೆಸಲು ತೀರ್ಮಾನಿಸಿದ್ದರು. ಯಾರಿಗೂ ಪ್ರತಿಭಟನೆ ಮಾಡದಂತೆ ನಾನು ವಿನಂತಿ ಮಾಡಿಕೊಂಡಿದ್ದೇನೆ ಎಂದು ತಿಳಿಸಿದರು.ಇದನ್ನೂ ಓದಿ:ಹೆಲಿಕಾಪ್ಟರ್ ಗೆ ಮೃತ ದೇಹವನ್ನು ನೇತು ಹಾಕಿ ಹಾರಾಟ – ಮತ್ತೆ ಶುರುವಾಯ್ತು ಉಗ್ರರ ಅಟ್ಟಹಾಸ

    ಪ್ರವಾಹ ಸಂದರ್ಭದಲ್ಲಿ ನದಿ ತೀರದ ಜನರು ತಮ್ಮ ಆಹಾರ ಸಾಮಗ್ರಿ ಹಾಗೂ ಜಾನುವಾರುಗಳ ಸ್ಥಳಾಂತರಕ್ಕೆ ಹಣ ಖರ್ಚು ಮಾಡಿದ್ದಾರೆ. ಹೀಗಾಗಿ ನದಿ ನೀರು ಹೋದ ಮನೆಗಳ ಜೊತೆಗೆ ನದಿ ತೀರದ ಮನೆಗಳಿಗೂ ಪರಿಹಾರ ನೀಡಬೇಕು. ಇಲ್ಲವಾದಲ್ಲಿ ನಾನೇ ನನ್ನ ಜೇಬಿನಿಂದ ಪರಿಹಾರ ನೀಡುತ್ತೇನೆ ಎಂದು ಹೇಳಿದರು.ಇದನ್ನೂ ಓದಿ:ಸಾರ್ವಜನಿಕ ಗಣೇಶೋತ್ಸವ ಸೆಪ್ಟೆಂಬರ್ 5 ರಂದು ತೀರ್ಮಾನ : ಬೊಮ್ಮಾಯಿ

  • ಜವಳಿ ಸಚಿವ ಪಾಟೀಲ್ ತವರಿನಲ್ಲೇ ವಾರದಲ್ಲಿ ಮೂವರು ನೇಕಾರರು ಆತ್ಮಹತ್ಯೆ

    ಜವಳಿ ಸಚಿವ ಪಾಟೀಲ್ ತವರಿನಲ್ಲೇ ವಾರದಲ್ಲಿ ಮೂವರು ನೇಕಾರರು ಆತ್ಮಹತ್ಯೆ

    ಬೆಳಗಾವಿ: ಜವಳಿ ಸಚಿವ ಶ್ರೀಮಂತ ಪಾಟೀಲ್ ತವರು ಜಿಲ್ಲೆಯಲ್ಲೇ ನೇಕಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಸಾಲಬಾಧೆ ತಡೆಯಲಾರದೆ ವಾರದಲ್ಲಿ ಮೂವರು ನೇಕಾರರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

    ಜಿಲ್ಲೆಯ ಬೆಳಗಾವಿ ನಗರದ ವಡಗಾಂವ ನಿವಾಸಿ ಸುಜಿತ್ ಉಪರಿ (38), ಹುಕ್ಕೇರಿ ತಾಲೂಕಿನ ಆನಂದಪುರ ನಿವಾಸಿ ಶಂಕರ (60), ವಡಗಾಂವ ನಿವಾಸಿ ಸುವರ್ಣ ಕಾಮ್ಕರ್ (47) ಆತ್ಮಹತ್ಯೆಗೆ ಶರಣಾದ ನೇಕಾರರು. ಕೊರೊನಾ ನಡುವೆ ಕೆಲಸವಿಲ್ಲದೇ ಕುಟುಂಬ ಸಾಗಿಸಲಾಗದೆ, ಸಾಲದ ಕಿರುಕುಳಕ್ಕೆ ಬೇಸತ್ತು ನೇಕಾರರು ಆತ್ಮಹತ್ಯೆಯತ್ತ ಮುಖ ಮಾಡುತ್ತಿದ್ದಾರೆ.

    ಅದರಲ್ಲೂ ಜವಳಿ ಸಚಿವ ಶ್ರೀಮಂತ ಪಾಟೀಲ್ ತರವರಲ್ಲೇ ಈ ರೀತಿಯಾದರೂ ಸಾಂತ್ವನ ಹೇಳಬೇಕಿದ್ದ ಸಚಿವರೇ ನಾಪತ್ತೆಯಾಗಿದ್ದಾರೆ. ಜವಳಿ ಸಚಿವರಾಗಿ ಆಯ್ಕೆಯಾದ ಬಳಿಕ ಜಿಲ್ಲೆಯಲ್ಲಿ ಶ್ರೀಮಂತ ಪಾಟೀಲ್ ಒಂದೇ ಒಂದು ಸಭೆ ಕೂಡ ಮಾಡಿಲ್ಲ. ಜೊತೆಗೆ ಒಂದೇ ವಾರದಲ್ಲಿ ಮೂರು ಜನ ಆತ್ಮಹತ್ಯೆ ಮಾಡಿಕೊಂಡರೂ ಜಿಲ್ಲೆಗೆ ಶ್ರೀಮಂತ ಪಾಟೀಲ್ ಬಂದಿಲ್ಲ. ಹೀಗಾಗಿ ಶ್ರೀಮಂತ ಪಾಟೀಲ್ ವಿರುದ್ಧ ನೇಕಾರರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

  • ನಾನು ನೇಣು ಹಾಕಿಕೊಳ್ಳುತ್ತೇನೆಂದು ಹೆಚ್‍ಡಿಕೆಗೆ ಹೇಳಿದ್ದೆ: ಶ್ರೀಮಂತ್ ಪಾಟೀಲ್

    ನಾನು ನೇಣು ಹಾಕಿಕೊಳ್ಳುತ್ತೇನೆಂದು ಹೆಚ್‍ಡಿಕೆಗೆ ಹೇಳಿದ್ದೆ: ಶ್ರೀಮಂತ್ ಪಾಟೀಲ್

    ಬೆಳಗಾವಿ(ಚಿಕ್ಕೋಡಿ): ಮಾಜಿ ಸಿಎಂ ಕುಮಾರಸ್ವಾಮಿ ಅವರು ನನಗೆ ತುಂಬಾ ಮಾನಸಿಕ ಹಿಂಸೆ ನೀಡಿದ್ದಾರೆ. ಅವರ ಕೆಲಸದಿಂದ ನಾನು ನೇಣು ಹಾಕಿಕೊಳ್ಳುವ ಪರಿಸ್ಥಿತಿ ಬಂದಿದೆ ಎಂದು ಅವರ ಬಳಿ ನಾನು ಹೇಳಿದ್ದೆ ಎಂದು ಕಾಗವಾಡ ಬಿಜೆಪಿ ಅಭ್ಯರ್ಥಿ ಶ್ರೀಮಂತ್ ಪಾಟೀಲ್ ರೋಡ್ ಶೋನಲ್ಲಿ ಹೇಳಿದ್ದಾರೆ.

    ನಾಮಪತ್ರ ಸಲ್ಲಿಕೆಯ ಬಳಿಕ ಅಥಣಿ ಪಟ್ಟಣದಲ್ಲಿ ರೋಡ್ ಶೋ ನಂತರ ಭಾಷಣ ಮಾಡಿದ ಅವರು, ಹೆಚ್‍ಡಿಕೆ ವಿರುದ್ಧ ಕಿಡಿಕಾರಿದರು. ಕುಮಾರಸ್ವಾಮಿ ಅವರು ನನಗೆ ತುಂಬಾ ಮಾನಸಿಕ ಹಿಂಸೆ ನೀಡಿದ್ದಾರೆ. ಅವರ ಕೆಲಸದಿಂದ ನಾನು ನೇಣು ಹಾಕಿಕೊಳ್ಳುವ ಪರಿಸ್ಥಿತಿ ಬಂದಿದೆ ಎಂದು ಅವರ ಬಳಿ ನಾನು ಹೇಳಿದ್ದೆ. ಆದರೆ ಅದಕ್ಕೂ ಅವರು ಕೇರ್ ಮಾಡದೆ ಹೋಗಿದ್ದರು. ಕುಮಾರಸ್ವಾಮಿ ಅವರಿಂದಾಗಿಯೇ ನಾನು ಪಕ್ಷ ಬಿಟ್ಟಿದ್ದು. ಅವರು ಸಿಎಂ ಆಗಿ ಮುಂದುವರಿದರೆ ಯಾವುದೇ ಕೆಲಸ ಆಗುವುದಿಲ್ಲ ಎಂದು ಗೊತ್ತಿತ್ತು. ಆದ್ದರಿಂದ ನಾನು ರಾಜೀನಾಮೆ ಕೊಟ್ಟೆ ಎಂದು ಅಸಮಾಧಾನ ಹೊರಹಾಕಿದರು. ಇದನ್ನೂ ಓದಿ:ಅಧಿಕಾರ, ದುಡ್ಡಿಗಾಗಿ ಬಿಜೆಪಿ ಸೇರಿಲ್ಲ: ಮಕ್ಕಳ ಮೇಲೆ ಶ್ರೀಮಂತ್ ಪಾಟೀಲ್ ಪ್ರಮಾಣ

    ಇದೇ ವೇಳೆ ಬಿಜೆಪಿ ಸೇರಲು ನಾನು ಯಾರಿಂದಲೂ ಹಣ ಪಡೆದಿಲ್ಲ ಎಂದು ದೇವರ ಮೇಲೆ ಪ್ರಮಾಣ ಮಾಡಿ ಹೇಳಿದರು. ಭಾನುವಾರ ಉಗಾರ ಪಟ್ಟಣದಲ್ಲಿ ಬಿಜೆಪಿ ಸೇರಲು ಹಣ ಪಡೆದಿಲ್ಲ ಎಂದು ಮಕ್ಕಳ ಮೇಲೆ ಶ್ರೀಮಂತ್ ಪಾಟೀಲ್ ಪ್ರಮಾಣ ಮಾಡಿದ್ದರು. ಅಷ್ಟೇ ಅಲ್ಲದೆ ಕೇವಲ ಅಭಿವೃದ್ಧಿಗಾಗಿ ಮಾತ್ರ ನಾನು ಬಿಜೆಪಿ ಪಕ್ಷ ಸೇರಿದ್ದೇನೆ ಎಂದು ಹೇಳಿದ್ದರು.

  • ಅಧಿಕಾರ, ದುಡ್ಡಿಗಾಗಿ ಬಿಜೆಪಿ ಸೇರಿಲ್ಲ: ಮಕ್ಕಳ ಮೇಲೆ ಶ್ರೀಮಂತ್ ಪಾಟೀಲ್ ಪ್ರಮಾಣ

    ಅಧಿಕಾರ, ದುಡ್ಡಿಗಾಗಿ ಬಿಜೆಪಿ ಸೇರಿಲ್ಲ: ಮಕ್ಕಳ ಮೇಲೆ ಶ್ರೀಮಂತ್ ಪಾಟೀಲ್ ಪ್ರಮಾಣ

    – ಮುಂಬೈನಲ್ಲಿ ಸ್ವಂತ ಹಣದಲ್ಲಿ ಊಟ ಮಾಡಿದ್ದೇನೆ

    ಬೆಳಗಾವಿ: ಯಾವುದೇ ಅಧಿಕಾರ ಹಾಗೂ ದುಡ್ಡಿಗಾಗಿ ಬಿಜೆಪಿ ಸೇರುವ ನಿರ್ಧಾರ ಮಾಡಿಲ್ಲ ಎಂದು ಅನರ್ಹ ಶಾಸಕ, ಬಿಜೆಪಿ ಅಭ್ಯರ್ಥಿ ಶ್ರೀಮಂತ್ ಪಾಟೀಲ್ ಮಕ್ಕಳ ಮೇಲೆ ಪ್ರಮಾಣ ಮಾಡಿದ್ದಾರೆ.

    ಕಾಗವಾಡ ಕ್ಷೇತ್ರದ ಉಗಾರ ಪಟ್ಟಣದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಪ್ರಮಾಣ ಮಾಡುವ ಅವಶ್ಯಕೆತೆಯಿಲ್ಲ. ಆದರೆ ಮಕ್ಕಳ ಮೇಲೆ ಪ್ರಮಾಣ ಮಾಡಿ ಹೇಳುತ್ತೇನೆ. ಈ ವ್ಯವಹಾರದಲ್ಲಿ ಒಂದು ರೂಪಾಯಿ ಪಡೆದಿಲ್ಲ. ಕ್ಷೇತ್ರದ ಅಭಿವೃದ್ಧಿಗಾಗಿ ಬಿಜೆಪಿ ಪಕ್ಷ ಸೇರಿದ್ದೇನೆ. ಮುಂಬೈನಲ್ಲಿ ಇದ್ದಾಗಲೂ ಸ್ವಂತ ಹಣದಲ್ಲಿಯೇ ಊಟ ಮಾಡಿದ್ದೇನೆ ಎಂದು ಹೇಳಿದರು.

    ನಾನು 2018ರ ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಶಾಸಕನಾದ ಮೇಲೆ ಕ್ಷೇತ್ರದಲ್ಲಿ ಒಂದು ಕೆಲಸವೂ ಆಗಲಿಲ್ಲ. ಕ್ಷೇತ್ರವನ್ನು ಸಂಪೂರ್ಣ ನಿರ್ಲಕ್ಷಿಸಲಾಗಿತ್ತು. ಹೀಗಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದೆ. ಈ ವೇಳೆ ಕ್ಷೇತ್ರದ ಅಭಿವೃದ್ಧಿ ಬಿಟ್ಟು, ಅವರ ಬಳಿ ಏನನ್ನೂ ಕೇಳಲಿಲ್ಲ. ಸಿಎಂ ಯಡಿಯೂರಪ್ಪ ಅವರು ನಮ್ಮ ಬೇಡಿಕೆಗಳನ್ನು ಈಡೇರಿಸುವ ಸಂಪೂರ್ಣ ಭರವಸೆ ನೀಡಿದ ಮೇಲೆ ನಾನು ಬಿಜೆಪಿ ಪಕ್ಷಕ್ಕೆ ಸೇರಿದ್ದೇನೆ ಎಂದು ತಿಳಿಸಿದರು.

    ಬಿಜೆಪಿ ಮುಸ್ಲಿಂ ವಿರೋಧಿ ಪಕ್ಷ ಎನ್ನುತ್ತಾರೆ. ಆದರೆ ನಾನು ಸಿಎಂ ಯಡಿಯೂರಪ್ಪ ಅವರ ಬಳಿ ಮುಸ್ಲಿಂ ಸಮುದಾಯದ ಕೆಲಸ ತೆಗೆದುಕೊಂಡು ಹೋಗಿದ್ದೆ. ಅವರು ಯಾವುದೇ ಯೋಚನೆ ಮಾಡದೆ 2 ಕೋಟಿ ರೂ. ಅನುದಾನ ನೀಡಿದ್ದಾರೆ. ಬಿಜೆಪಿ ಎಲ್ಲ ಸಮಾಜದವರ ಅಭಿವೃದ್ಧಿಗೆ ಶ್ರಮಿಸುತ್ತಿದೆ ಎಂದು ಹೇಳಿದರು.