Tag: shringeri

  • ಅಕ್ರಮ ಆಸ್ತಿ ಗಳಿಕೆ ಆರೋಪ; ಕಾಂಗ್ರೆಸ್‌ ಶಾಸಕ ರಾಜೇಗೌಡ ವಿರುದ್ಧ ತನಿಖೆಗೆ ಕೋರ್ಟ್‌ ಆದೇಶ

    ಅಕ್ರಮ ಆಸ್ತಿ ಗಳಿಕೆ ಆರೋಪ; ಕಾಂಗ್ರೆಸ್‌ ಶಾಸಕ ರಾಜೇಗೌಡ ವಿರುದ್ಧ ತನಿಖೆಗೆ ಕೋರ್ಟ್‌ ಆದೇಶ

    ಬೆಂಗಳೂರು/ಚಿಕ್ಕಮಗಳೂರು: ಅಕ್ರಮ ಆಸ್ತಿ ಗಳಿಕೆ ಆರೋಪ ಹಿನ್ನೆಲೆ ಕಾಂಗ್ರೆಸ್ ಶಾಸಕ ರಾಜೇಗೌಡ ವಿರುದ್ಧ ತನಿಖೆಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ.

    ಶೃಂಗೇರಿ ಶಾಸಕ ರಾಜೇಗೌಡ ವಿರುದ್ಧ ಬಿಜೆಪಿ ಮುಖಂಡ ದಿನೇಶ್‌ ಹೊಸೂರು ಅರ್ಜಿ ಸಲ್ಲಿಸಿದ್ದರು. ಅಕ್ರಮ ಆಸ್ತಿ ಗಳಿಕೆ ಹಿನ್ನೆಲೆ ಪ್ರಕರಣ ದಾಖಲಿಸಿ ತನಿಖೆ ನಡೆಸಲು ಸೂಚಿಸುವಂತೆ ಕೋರ್ಟ್‌ಗೆ ಮನವಿ ಮಾಡಿದ್ದರು.

    ಅರ್ಜಿ ಸಂಬಂಧ ಬುಧವಾರ ವಿಚಾರಣೆ ನಡೆಸಿದ್ದ ಕೋರ್ಟ್ ಎಫ್ಐಆರ್ ದಾಖಲಿಸಿ ತನಿಖೆ ನಡೆಸಲು ಆದೇಶ ಹೊರಡಿಸಿದೆ. ಶಾಸಕರ ಪತ್ನಿ ಹಾಗೂ ಮಗನ ವಿರುದ್ಧವೂ ಪ್ರಕರಣ ದಾಖಲಿಸಿ ತನಿಖೆಗೆ ಆದೇಶ ನೀಡಿದೆ.

    60 ದಿನದ ಒಳಗೆ ತನಿಖಾ ವರದಿ ಸಲ್ಲಿಸಲು ಚಿಕ್ಕಮಗಳೂರು ಲೋಕಾಯುಕ್ತ ಅಧಿಕಾರಿಗಳಿಗೆ ಕೋರ್ಟ್‌ ಸೂಚನೆ ನೀಡಿದೆ.

  • ನಟಿ ರಚಿತಾ ರಾಮ್ ಶೃಂಗೇರಿಗೆ ಭೇಟಿ

    ನಟಿ ರಚಿತಾ ರಾಮ್ ಶೃಂಗೇರಿಗೆ ಭೇಟಿ

    ಚಿಕ್ಕಮಗಳೂರು: ಡಿಂಪಲ್ ಬೆಡಗಿ ರಚಿತಾ ರಾಮ್ ಶೃಂಗೇರಿಗೆ ಭೇಟಿ ನೀಡಿ ಶಾರದಾಂಬೆಯ ದರ್ಶನ ಪಡೆದಿದ್ದಾರೆ.

    ದೇವಸ್ಥಾನಕ್ಕೆ ಬಂದು ಶಾರದಾಂಬೆ ಹಾಗೂ ತೋರಣ ಗಣಪತಿ ದರ್ಶನ ಪಡೆದು ಹೊರನಾಡಿಗೆ ಹೋಗಬೇಕು ಎಂದು ಹಿಂದಿರುಗಿದ್ದಾರೆ.

    ರಚಿತಾ ಅವರನ್ನು ನೋಡಿದ ಅಭಿಮಾನಿಗಳು ಸೆಲ್ಫಿಗಾಗಿ ಮುಗಿಬಿದ್ದರು. ಎಲ್ಲರಿಗೂ ಸೆಲ್ಫಿಗೆ ಪೋಸ್ ಕೊಟ್ಟ ರಚಿತಾ, ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಲು ಹಿಂದೇಟು ಹಾಕಿದರು. ಅಲ್ಲದೆ “ಪರ್ಸನಲ್ ಆಗಿ ಬಂದಿದ್ದೇನೆ. ಸಾರಿ. ಹೊರನಾಡಿಗೆ ಹೋಗಬೇಕು ತಡವಾಗುತ್ತದೆ” ಎಂದು ಹೇಳಿ ಹೋಗಿದ್ದಾರೆ.

    ಕಳೆದ ಐದು ದಿನಗಳಿಂದ ಶೃಂಗೇರಿ ಶಾರದಾಂಭೆ ಸನ್ನಿಧಿಯಲ್ಲಿ ಮಾಜಿ ಪ್ರಧಾನಿ ದೇವೇಗೌಡರು ಕುಟುಂಬದ ಶ್ರೇಯೋಭಿವೃದ್ಧಿಗಾಗಿ ಸಹಸ್ರ ಚಂಡಿಕಾ ಯಾಗ ಮಾಡಿಸುತ್ತಿದ್ದಾರೆ. ಇಂದು ಯಾಗದ ಪೂರ್ಣಾಹುತಿ ಹಿನ್ನೆಲೆಯಲ್ಲಿ ಇಂದು ದೇವೇಗೌಡರ ಇಡೀ ಕುಟುಂಬವೇ ಶೃಂಗೇರಿಯಲ್ಲಿದೆ.

    ಮಾಜಿ ಸಿಎಂ ಕುಮಾರಸ್ವಾಮಿ, ಮಾಜಿ ಸಚಿವ ರೇವಣ್ಣ, ಅನಿತಾ ಕುಮಾರಸ್ವಾಮಿ, ಹೆಚ್.ಡಿ ಬಾಲಕೃಷ್ಣ ಸೇರಿದಂತೆ ದೊಡ್ಡಗೌಡರ ಇಡೀ ಕುಟುಂಬ ಶೃಂಗೇರಿಯಲ್ಲಿದೆ.

  • ಚುನಾವಣೆಗೂ ಮೊದ್ಲು ಅತಿರುದ್ರ ಮಹಾಯಾಗ- ಶೃಂಗೇರಿ ಮಠದಲ್ಲಿ ದೇವೇಗೌಡ, ರೇವಣ್ಣ ಪೂಜೆ

    ಚುನಾವಣೆಗೂ ಮೊದ್ಲು ಅತಿರುದ್ರ ಮಹಾಯಾಗ- ಶೃಂಗೇರಿ ಮಠದಲ್ಲಿ ದೇವೇಗೌಡ, ರೇವಣ್ಣ ಪೂಜೆ

    ಚಿಕ್ಕಮಗಳೂರು: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರು ಪತ್ನಿ ಚನ್ನಮ್ಮ, ಪುತ್ರ ರೇವಣ್ಣ ಜೊತೆ ಜಿಲ್ಲೆಯ ಶೃಂಗೇರಿಗೆ ಅಗಮಿಸಿದ್ದಾರೆ.

    ಹೆಲಿಕ್ಯಾಪ್ಟರ್ ಮೂಲಕ ಶೃಂಗೇರಿಗೆ ಅಗಮಿಸಿದ ಹೆಚ್‍ಡಿಡಿ ಕುಟುಂಬ, ಶೃಂಗೇರಿ ಜಗದ್ಗುರುಗಳಾದ ಭಾರತೀ ತೀರ್ಥ ಸ್ವಾಮೀಜಿ, ವಿಧುಶೇಖರ ಸ್ವಾಮೀಜಿ ಅವರನ್ನ ಭೇಟಿ ಮಾಡಿದ್ದಾರೆ.

    ಬಳಿಕ ಶಾರಾದಾಂಬೆಯ ದರ್ಶನ ಪಡೆದಿದ್ದಾರೆ. ನಾಳೆಯಿಂದ ಶ್ರೀ ಮಠದ 150 ಪುರೋಹಿತರ ನೇತೃತ್ವದಲ್ಲಿ ಅತಿ ರುದ್ರ ಮಹಾಯಾಗ ನಡೆಯಲಿದೆ. ಈ ಯಾಗ 12 ದಿನ ನಡೆಯಲಿದ್ದು, ಜನವರಿ 14 ರಂದು ಪೂರ್ಣಾಹುತಿಯಾಗಲಿದೆ.

    ಶ್ರೀಮಠದ ಅವರಣದಲ್ಲಿರುವ ಯಾಗ ಮಂಟಪ ನಡೆಯಲಿರುವ ಅತಿ ಮಹಾರುದ್ರಯಾಗವನ್ನು ಕುಟುಂಬ ಹಿತದೃಷ್ಟಿಯಿಂದ ನಡೆಯಲಿದೆ. ಜನವರಿ 14 ರಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ .ಕುಮಾರಸ್ವಾಮಿ ಪೂರ್ಣಾಹುತಿಯಲ್ಲಿ ಭಾಗಿಯಾಗಲಿದ್ದಾರೆ.