Tag: shrirangapattana

  • ಶ್ರೀರಂಗಪಟ್ಟಣ ದಸರಾ | ಜಂಬೂಸವಾರಿ ವೇಳೆ ಬೆದರಿ ಓಡಿದ  ಹಿರಣ್ಯ ಆನೆ – ತಪ್ಪಿದ ಭಾರೀ ಅನಾಹುತ

    ಶ್ರೀರಂಗಪಟ್ಟಣ ದಸರಾ | ಜಂಬೂಸವಾರಿ ವೇಳೆ ಬೆದರಿ ಓಡಿದ ಹಿರಣ್ಯ ಆನೆ – ತಪ್ಪಿದ ಭಾರೀ ಅನಾಹುತ

    ಮಂಡ್ಯ: ಶ್ರೀರಂಗಪಟ್ಟಣ ದಸರಾ (Shrirangapattana Dasara) ಮಹೋತ್ಸವಕ್ಕೆ ಆಗಮಿಸಿದ ಹಿರಣ್ಯ ಎಂಬ ಆನೆ ಚಿತ್ರಾಲಂಕಾರದ ಬಳಿಕ ಬೆದರಿ ಅಡ್ಡಾದಿಡ್ಡಿ ಓಡಾಡಿದೆ. ಆನೆಯ ರಂಪಾಟಕ್ಕೆ ದಿಕ್ಕಾಪಾಲಾಗಿ ಜನರು ಓಡಿದ್ದಾರೆ. ಕೂಡಲೇ ಎಚ್ಚೆತ್ತ ಮಾವುತರು ಹಾಗೂ ಕಾವಾಡಿಗರು ಮುಂದಾಗುವ ಅನಾಹುತವನ್ನು ತಪ್ಪಿಸಿದ್ದಾರೆ. ಈ ಘಟನೆ ಶ್ರೀರಂಗಪಟ್ಟಣ ಮಿನಿ ವಿಧಾನಸೌಧದ ಬಳಿ ನಡೆದಿದೆ.

    ನಿನ್ನೆಯಷ್ಟೇ ಶ್ರೀರಂಗಪಟ್ಟಣಕ್ಕೆ ಮಹೇಂದ್ರ, ಲಕ್ಷ್ಮೀ, ಹಿರಣ್ಯ ಎಂಬ 3 ಆನೆಗಳು ಆಗಮಿಸಿವೆ. ಬನ್ನಿಮಂಟಪದಿಂದ ರಂಗನಾಥ ಮೈದಾನದವರೆಗೆ ಅಂಬಾರಿ ಜೊತೆ ಹಿರಣ್ಯ ಆನೆ ಹೆಜ್ಜೆ ಹಾಕಲಿದೆ. ಮಹೇಂದ್ರ ಆನೆ ಮರದ ಅಂಬಾರಿ ಹೊರಲಿದೆ. ಈ ಆನೆಗೆ ಕುಮ್ಕಿ ಆನೆಯಾಗಿ ಲಕ್ಷ್ಮೀ ಹಾಗೂ ಹಿರಣ್ಯ ಆನೆಗಳು ಹೆಜ್ಜೆ ಹಾಕಲಿದೆ. ಆನೆಗಳಿಗೆ ಚಿತ್ರಾಲಂಕಾರದ ಮಾಡಿದ ಬಳಿಕ ಹಿರಣ್ಯ ಎಂಬ ಆನೆ ಬೆದರಿ ಅಡ್ಡಾದಿಡ್ಡಿ ಓಡಾಡಿದೆ. ಜನರು ಆನೆಯ ರಂಪಾಟಕ್ಕೆ ದಿಕ್ಕಾಪಾಲಾಗಿದ್ದಾರೆ. ಈ ವೇಳೆ ಎಚ್ಚೆತ್ತ ಮಾವುತರು, ಕಾವಾಡಿಗರು ಭಾರೀ ಅನಾಹುತ ತಪ್ಪಿಸಿದ್ದಾರೆ. ಇದನ್ನೂ ಓದಿ: ಮಗಳ ಸೆಕ್ಸ್ ವೀಡಿಯೋ ವೈರಲ್‌ ಮಾಡೋದಾಗಿ ಪಾಕ್‌ ವಂಚಕರ ಕರೆ – ಹೃದಯಾಘಾತದಿಂದ ಶಿಕ್ಷಕಿ ಸಾವು

    ಈ ಹಿಂದೆಯೂ ಇದೇ ರೀತಿ ಅವಾಂತರ ಸಂಭವಿಸಿತ್ತು. ಶ್ರೀರಂಗಪಟ್ಟಣ ದಸರಾದಲ್ಲಿ ಚಾಮುಂಡೇಶ್ವರಿ ಹೋತ್ತು ಸಾಗುತ್ತಿದ್ದ ಗೋಪಾಲಸ್ವಾಮಿ ಹೆಸರಿನ ಆನೆ ಪಟಾಕಿ, ವಾದ್ಯದ ಸದ್ದಿಗೆ ಬೆದರಿ ದಿಕ್ಕಾಪಾಲಾಗಿ ಜನರತ್ತ ನುಗ್ಗಿತ್ತು. ಕೂದಲೆಳೆ ಅಂತರದಲ್ಲಿ ಭಾರೀ ಅನಾಹುತ ತಪ್ಪಿತ್ತು. ಆನೆ ಗಾಬರಿಗೊಂಡು ಒಂದು ಸುತ್ತು ತಿರುಗುತ್ತಿದ್ದಂತೆ ಜನರು ಚೆಲ್ಲಾಪಿಲ್ಲಿಯಾಗಿ ಓಡಿದ್ದರು. ನಂತರ ವಾದ್ಯ, ಧ್ವನಿವರ್ಧಕಗಳನ್ನು ಸ್ಥಗಿತಗೊಳಿಸಲಾಗಿತ್ತು. ಇದನ್ನೂ ಓದಿ: ಮಹಾರಾಷ್ಟ್ರ ಸಚಿವಾಲಯದ 3ನೇ ಮಹಡಿಯಿಂದ ಜಿಗಿದ ಡೆಪ್ಯೂಟಿ ಸ್ಪೀಕರ್‌!

  • ಕಮಿಷನ್ ನೀಡುವಂತೆ ಪಿಡಿಓಗಳನ್ನು ಪೀಡಿಸಿದ ಇಓ ಅಧಿಕಾರಿ – ವೀಡಿಯೋ ವೈರಲ್

    ಕಮಿಷನ್ ನೀಡುವಂತೆ ಪಿಡಿಓಗಳನ್ನು ಪೀಡಿಸಿದ ಇಓ ಅಧಿಕಾರಿ – ವೀಡಿಯೋ ವೈರಲ್

    ಮಂಡ್ಯ: ಪಿಡಿಓಗಳನ್ನು ಶ್ರೀರಂಗಪಟ್ಟಣದ ಇಓ ಹಣ ನೀಡುವಂತೆ ಪೀಡಿಸುವುದರ ಜೊತೆಗೆ ಕಿರುಕುಳ ನೀಡುತ್ತಿದ್ದ ಆಡಿಯೋ ಮತ್ತು ವೀಡಿಯೋ ವೈರಲ್ ಆಗಿದೆ.

    ಶ್ರೀರಂಗಪಟ್ಟಣದ ಇಓ ಬೈರಪ್ಪ ಆರೋಪಿ. ಇವರು ಪಿಡಿಓಗಳಿಗೆ ಕಾಮಗಾರಿಗಳ ಬಿಲ್‍ನಲ್ಲಿ 30% ಕಮಿಷನ್ ನೀಡುವಂತೆ ಪೀಡಿಸುತ್ತಿರುವ ವಿಡಿಯೋ ಮತ್ತು ಆಡಿಯೋ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.

    ವೀಡಿಯೋದಲ್ಲಿ ಪಿಡಿಓಗಳು ಪದೇ ಪದೇ ಹಣ ನೀಡಿದರೂ ಇಷ್ಟು ಹಣ ಸಾಕಗಲ್ಲ. ಇನ್ನೂ ಅಧಿಕ ಹಣಬೇಕೆಂದು ಒತ್ತಾಯಿಸಿದ್ದಾರೆ. ಒಂದು ವೇಳೆ ಪಿಡಿಓಗಳು ಹಣ ನೀಡಲಿಲ್ಲ ಎಂದರೆ ಬಿಲ್ ಪಾಸ್ ಆಗದ ರೀತಿಯಲ್ಲಿ ಇಓ ವರ್ತನೆ ಮಾಡುತ್ತಿದ್ದಾರೆ. ಜೊತೆಗೆ ನಾನು ಸಿಇಓಗೂ ಹಣ ನೀಡಬೇಕು ಎಂದು ಆಡಿಯೋದಲ್ಲಿ ಪ್ರಸ್ತಾಪ ಮಾಡಿದ್ದಾರೆ.

    ಈ ರೀತಿಯ ದೌರ್ಜನ್ಯಕ್ಕೆ ಪಿಡಿಓಗಳು ಬೇಸತ್ತು ಮಂಡ್ಯ ಜಿಲ್ಲಾ ಪಂಚಾಯತಿ ಸಿಇಓ ದಿವ್ಯಾ ಪ್ರಭು ಮತ್ತು ಪಂಚಾಯತ್ ರಾಜ್ಯ ಇಲಾಖೆಯ ಅಧಿಕಾರಿಗಳಿಗೆ ದೂರು ನೀಡಿದ್ದಾರೆ. ಆದರೆ ಇದುವರೆಗೆ ಯಾವುದೇ ಕ್ರಮ ಕೈಗೊಳ್ಳಲಿಲ್ಲವೆಂದು ಪಿಡಿಓಗಳು ಆರೋಪಿಸಿದ್ದಾರೆ. ಇದನ್ನೂ ಓದಿ: ಹಾವು ತಪ್ಪಿಸಲು ಹೋಗಿ ತುಂಗಾ ನಾಲೆಗೆ ಬಿದ್ದ ಕಾರು – ಮಹಿಳೆ ಸಾವು

    ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಜಿಲ್ಲಾ ಪಂಚಾಯಿತಿ ಸಿಇಓ ದಿವ್ಯ ಪ್ರಭು ಅವರು, ಈ ಬಗ್ಗೆ ಪಿಡಿಓಗಳು ದೂರು ನೀಡಿದ್ದಾರೆ. ನಾವು ಜಿಲ್ಲಾ ಮಟ್ಟದ ಅಧಿಕಾರಿಗಳ ತಂಡ ರಚಿಸಿದ್ದೇವೆ. ಅವರು ಈ ಬಗ್ಗೆ ವರದಿ ನೀಡಿದ್ದಾರೆ. ಇಓ ಭೈರಪ್ಪ ಅವರು ಹಣಕ್ಕಾಗಿ ಪಿಡಿಸುತ್ತಿರುವುದು ನಿಜ ಎಂದು ವರದಿಯಲ್ಲಿ ಹೇಳಿದ್ದಾರೆ. ಹೀಗಾಗಿ ನಾನು ಸರ್ಕಾರಕ್ಕೆ ಈ ವರದಿಯನ್ನು ಕಳಿಸಿ ಅವರನ್ನು ಅಮಾನತು ಮಾಡಬೇಕೆಂದು ತಿಳಿಸುತ್ತೇನೆ ಎಂದು ಹೇಳಿದರು. ಇದನ್ನೂ ಓದಿ: ನಿಮಗೆ ಪ್ರವೇಶವಿಲ್ಲ – ಹಿಜಬ್ ಧರಿಸಿದ್ದ ವಿದ್ಯಾರ್ಥಿನಿಯರನ್ನು ಗೇಟ್‍ನಲ್ಲೇ ತಡೆದ ಪ್ರಿನ್ಸಿಪಾಲ್