Tag: Shubman Gill

  • ದ್ವಿಶತಕ ಸಿಡಿಸಿ ದಿಗ್ಗಜರ ಪಟ್ಟಿಗೆ ಸೇರಿದ ಗಿಲ್ – ಭಾರತ ಪರ ಡಬಲ್ ಸೆಂಚುರಿ ಬಾರಿಸಿದ ಐವರು ಸಾಧಕರಿವರು

    ದ್ವಿಶತಕ ಸಿಡಿಸಿ ದಿಗ್ಗಜರ ಪಟ್ಟಿಗೆ ಸೇರಿದ ಗಿಲ್ – ಭಾರತ ಪರ ಡಬಲ್ ಸೆಂಚುರಿ ಬಾರಿಸಿದ ಐವರು ಸಾಧಕರಿವರು

    ಮುಂಬೈ: ಟೀಂ ಇಂಡಿಯಾದ (Team India) ಯುವ ಆಟಗಾರ ಶುಭಮನ್ ಗಿಲ್ (Shubman Gill) ದ್ವಿಶತಕ (Double Hundred) ಬಾರಿಸಿ ದಿಗ್ಗಜ ಆಟಗಾರರಾದ ಸಚಿನ್ ತೆಂಡೂಲ್ಕರ್ (Sachin Tendulkar), ವೀರೇಂದ್ರ ಸೆಹ್ವಾಗ್ (Virender Sehwag) ಅವರ ಪಟ್ಟಿಗೆ ಸೇರ್ಪಡೆಗೊಂಡಿದ್ದಾರೆ.

    ಗಿಲ್ 7ನೇ ದ್ವಿಶತಕ ವೀರನಾಗಿ ದಿಗ್ಗಜರ ಪಟ್ಟಿಗೆ ಎಂಟ್ರಿಕೊಟ್ಟಿದ್ದಾರೆ. ನ್ಯೂಜಿಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಬಿರುಸಿನ ಬ್ಯಾಟಿಂಗ್ ಮೂಲಕ ಗಮನ ಸೆಳೆದ 23 ವರ್ಷದ ಗಿಲ್ ಬರೋಬ್ಬರಿ 19 ಬೌಂಡರಿ, 9 ಭರ್ಜರಿ ಸಿಕ್ಸ್ ಸಹಿತ 149 ಎಸೆತಗಳಲ್ಲಿ 208 ರನ್ ಚಚ್ಚಿದರು. ಈ ಮೂಲಕ ಏಕದಿನ ಮಾದರಿ ಕ್ರಿಕೆಟ್‍ನಲ್ಲಿ ದ್ವಿಶತಕ ಸಿಡಿಸಿದ ಯುವ ಆಟಗಾರ ಎಂಬ ದಾಖಲೆ ಬರೆದಿದ್ದಾರೆ. ಇದನ್ನೂ ಓದಿ: ಹ್ಯಾಟ್ರಿಕ್ ಸಿಕ್ಸ್ ಸಿಡಿಸಿ ದ್ವಿಶತಕ ಬಾರಿಸಿದ ಗಿಲ್

     

     

    ಟೀಂ ಇಂಡಿಯಾದ ದ್ವಿಶತಕ ವೀರರು:
    ಟೀಂ ಇಂಡಿಯಾ ಪರ ಈವರೆಗೆ 7 ದ್ವಿಶತಕ ದಾಖಲಾಗಿದೆ. ಈ ಪೈಕಿ ಟೀಂ ಇಂಡಿಯಾದ ಕ್ಯಾಪ್ಟನ್ ಹಿಟ್‍ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾ (Rohit Sharma) ಒಬ್ಬರೇ 3 ದ್ವಿಶತಕ ಬಾರಿಸಿದ್ದಾರೆ. ಉಳಿದಂತೆ ಸಚಿನ್, ಸೆಹ್ವಾಗ್, ಇಶಾನ್ ಕಿಶನ್ (Ishan Kishan) ಮತ್ತು ಶುಭಮನ್ ಗಿಲ್ ತಲಾ ಒಂದೊಂದು ದ್ವಿಶತಕ ಬಾರಿಸಿ ಸಾಧನೆ ಮಾಡಿದ್ದಾರೆ.

    ಟೀಂ ಇಂಡಿಯಾ ಪರ ಮೊದಲ ದ್ವಿಶತಕ ಸಚಿನ್‍ರಿಂದ ಬಂತು. 2010ರಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಸಚಿನ್ 200 ರನ್ ಸಿಡಿಸಿದ್ದರು. 2ನೇ ದ್ವಿಶತಕ ಸೆಹ್ವಾಗ್ 2011ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಬಾರಿಸಿದ್ದರು. ನಂತರ 2013, 2014 ಮತ್ತು 2017ರಲ್ಲಿ ಆಸ್ಟ್ರೇಲಿಯಾ ಮತ್ತು ಶ್ರೀಲಂಕಾ ವಿರುದ್ಧ ರೋಹಿತ್ ಶರ್ಮಾ ದ್ವಿಶತಕ ಸಿಡಿಸಿ ಮಿಂಚಿದ್ದರು. ಆ ಬಳಿಕ 2022ರಲ್ಲಿ ಬಾಂಗ್ಲಾದೇಶ ವಿರುದ್ಧ ಇಶಾನ್ ಕಿಶನ್ ದ್ವಿಶತಕ ಸಾಧನೆಗೈದಿದ್ದರು. ಇದೀಗ 2023ರಲ್ಲಿ ಗಿಲ್ ನ್ಯೂಜಿಲೆಂಡ್ ವಿರುದ್ಧ ದ್ವಿಶತಕ ಸಿಡಿಸಿದ್ದಾರೆ. ಇದನ್ನೂ ಓದಿ: ರಾಷ್ಟ್ರೀಯ ತರಬೇತುದಾರರಿಂದ ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ – ವಿನೇಶ್‌ ಫೋಗಟ್‌ ಗಂಭೀರ ಆರೋಪ

    ದ್ವಿಶತಕಗಳ ಪೈಕಿ ರೋಹಿತ್ 264 ರನ್ ಸಿಡಿಸಿದ್ದರೆ, ಸೆಹ್ವಾಗ್ 219, ಇಶಾನ್ ಕಿಶನ್ 210, ಗಿಲ್ 208 ಮತ್ತು ಸಚಿನ್ ತೆಂಡೂಲ್ಕರ್ 200 ರನ್ ಬಾರಿಸಿ ಏಕದಿನ ಮಾದರಿ ಕ್ರಿಕೆಟ್‍ನಲ್ಲಿ ಅತೀ ಹೆಚ್ಚು ರನ್ ಸಿಡಿಸಿದ ಭಾರತೀಯ ಆಟಗಾರರಾಗಿಯೂ ಗುರುತಿಸಿಕೊಂಡಿದ್ದಾರೆ.

    ಗಿಲ್ ಏಕದಿನ ಮಾದರಿ ಕ್ರಿಕೆಟ್‍ನಲ್ಲಿ ವೇಗವಾಗಿ ಕೇವಲ 19 ಇನ್ನಿಂಗ್ಸ್‌ಗಳಿಂದ 1,000 ರನ್ ಪೂರ್ತಿಗೊಳಿಸಿದ ಆಟಗಾರ ಎಂಬ ದಾಖಲೆ ಬರೆದರು. ಈ ಮೊದಲು ವಿರಾಟ್ ಕೊಹ್ಲಿ 24 ಇನ್ನಿಂಗ್ಸ್‌ಗಳಿಂದ ಸಾವಿರ ರನ್ ಪೂರೈಸಿದ ದಾಖಲೆ ಬರೆದಿದ್ದರು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಹ್ಯಾಟ್ರಿಕ್ ಸಿಕ್ಸ್ ಸಿಡಿಸಿ ದ್ವಿಶತಕ ಬಾರಿಸಿದ ಗಿಲ್

    ಹ್ಯಾಟ್ರಿಕ್ ಸಿಕ್ಸ್ ಸಿಡಿಸಿ ದ್ವಿಶತಕ ಬಾರಿಸಿದ ಗಿಲ್

    ಹೈದರಾಬಾದ್: ಟೀಂ ಇಂಡಿಯಾದ (Team India) ಯುವ ಆಟಗಾರ ಶುಭಮನ್ ಗಿಲ್ (Shubman Gill) ನ್ಯೂಜಿಲೆಂಡ್ (New Zealand) ವಿರುದ್ಧದ ಏಕದಿನ (ODI) ಪಂದ್ಯದಲ್ಲಿ ಚೊಚ್ಚಲ ದ್ವಿಶತಕ ಸಿಡಿಸಿ (Double Century) ದಾಖಲೆ ಬರೆದಿದ್ದಾರೆ.

    23 ವರ್ಷದ ಗಿಲ್‌ ಏಕದಿನ ಮಾದರಿ ದ್ವಿಶತಕ ಬಾರಿಸಿದ ಕಿರಿಯ ಆಟಗಾರ ಎಂಬ ದಾಖಲೆ ಬರೆದಿದ್ದಾರೆ. ಇದರೊಂದಿಗೆ ಭಾರತದ ಪರ ದ್ವಿಶತಕ ಸಿಡಿಸಿದ 5ನೇ ಆಟಗಾರ ಎನಿಸಿಕೊಂಡಿದ್ದಾರೆ. ಈ ಮೊದಲು ರೋಹಿತ್ ಶರ್ಮಾ, ಸಚಿನ್ ತೆಂಡೂಲ್ಕರ್, ವೀರೇಂದ್ರ ಸೆಹ್ವಾಗ್, ಇಶಾನ್ ಕಿಶನ್ ದ್ವಿಶತಕದ ಸಾಧನೆ ಮಾಡಿದ್ದರು. ಇದನ್ನೂ ಓದಿ: `ಈ ಇಬ್ಬರು ವೀರರನ್ನು ಸ್ಮರಿಸಲೇಬೇಕು’ – ರಿಷಬ್‌ ಪಂತ್ ಮೊದಲ ರಿಯಾಕ್ಷನ್

    ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ಆರಂಭಿಕರಾಗಿ ಕಣಕ್ಕಿಳಿದ ಗಿಲ್ ಆರಂಭದಿಂದಲೇ ಭರ್ಜರಿ ಬ್ಯಾಟಿಂಗ್‍ಗೆ ಮುಂದಾದರು. ಬೌಂಡರಿ, ಸಿಕ್ಸರ್ ಸಿಡಿಸುತ್ತಾ ಸಾಗಿದ ಗಿಲ್ ಹ್ಯಾಟ್ರಿಕ್ ಸಿಕ್ಸ್ ಸಿಡಿಸಿ 200 ರನ್ ಪೂರ್ತಿಗೊಳಿಸಿದರು. ಅಂತಿಮವಾಗಿ 208 ರನ್ (149 ಎಸೆತ, 19 ಬೌಂಡರಿ, 9 ಸಿಕ್ಸ್) ಸಿಡಿಸಿ ಕೊನೆಯ ಓವರ್‌ನಲ್ಲಿ ಔಟ್ ಆದರು. ಇದನ್ನೂ ಓದಿ: ಸಹ ಆಟಗಾರನ ಗೆಳತಿಯೊಂದಿಗೆ ಪಾಕ್ ನಾಯಕ ಚಾಟಿಂಗ್ – ಹನಿಟ್ರ್ಯಾಪ್‍ಗೆ ಸಿಲುಕಿದ್ರಾ ಬಾಬರ್ ಅಜಮ್?

    ಗಿಲ್ ಏಕದಿನ ಮಾದರಿ ಕ್ರಿಕೆಟ್‍ನಲ್ಲಿ ವೇಗವಾಗಿ ಕೇವಲ 19 ಇನ್ನಿಂಗ್ಸ್‌ಗಳಿಂದ 1,000 ರನ್ ಪೂರ್ತಿಗೊಳಿಸಿದ ಆಟಗಾರ ಎಂಬ ದಾಖಲೆ ಬರೆದರು. ಈ ಮೊದಲು ವಿರಾಟ್ ಕೊಹ್ಲಿ 24 ಇನ್ನಿಂಗ್ಸ್‌ಗಳಿಂದ ಸಾವಿರ ರನ್ ಪೂರೈಸಿದ ದಾಖಲೆ ಬರೆದಿದ್ದರು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಭಾರತಕ್ಕೆ 188 ರನ್‌ಗಳ ಗೆಲುವು – ಟೆಸ್ಟ್‌ ಸರಣಿಯಲ್ಲಿ 1-0 ಮುನ್ನಡೆ

    ಭಾರತಕ್ಕೆ 188 ರನ್‌ಗಳ ಗೆಲುವು – ಟೆಸ್ಟ್‌ ಸರಣಿಯಲ್ಲಿ 1-0 ಮುನ್ನಡೆ

    ಢಾಕಾ: ಟೀಂ ಇಂಡಿಯಾದ ಕುಲ್‌ದೀಪ್ ಯಾದವ್ (Kuldeep Yadav), ಅಕ್ಷರ್ ಪಟೇಲ್ (Axar Patel) ಸ್ಪಿನ್ ಬೌಲಿಂಗ್ ದಾಳಿ ಹಾಗೂ ಶುಭಮನ್‌ಗಿಲ್ (Shubman Gill), ಚೇತೇಶ್ವರ್ ಪೂಜಾರ (Cheteshwar Pujara) ಭರ್ಜರಿ ಶತಕದ ಕಮಾಲ್‌ನಿಂದ ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್ (Test Cricket) ಪಂದ್ಯದಲ್ಲಿ ಭಾರತ 188 ರನ್‌ಗಳ ಭರ್ಜರಿ ಜಯ ಸಾಧಿಸಿದೆ.

    ಭಾರತದ ಬೌಲರ್‌ಗಳ ಸಂಘಟಿತ ದಾಳಿಯ ಫಲವಾಗಿ 4ನೇ ದಿನದಾಟದ ಅಂತ್ಯಕ್ಕೆ 102 ಓವರ್‌ಗಳಲ್ಲಿ ಬಾಂಗ್ಲಾ 6 ವಿಕೆಟ್ ನಷ್ಟಕ್ಕೆ 272 ಗಳಿಸಿ 241 ರನ್‌ಗಳ ಹಿನ್ನಡೆಯಲ್ಲಿತ್ತು. ಇಂದು ಇನ್ನಿಂಗ್ಸ್ ಆರಂಭಿಸಿದ ಬಾಂಗ್ಲಾದೇಶ 113.2 ಓವರ್‌ಗಳಲ್ಲಿ 324 ರನ್‌ಗಳಿಗೆ ಸರ್ವಪತನಕಂಡಿದೆ. ಭಾರತ ಭರ್ಜರಿ 188 ರನ್‌ಗಳ ಗೆಲುವು ಸಾಧಿಸಿ ಸರಣಿಯಲ್ಲಿ 1-0 ಮುನ್ನಡೆ ಪಡೆದುಕೊಂಡಿದೆ. ಇದನ್ನೂ ಓದಿ: ಗಿಲ್ ಚೊಚ್ಚಲ 100, ಪೂಜಾರ ವೇಗದ ಶತಕ – ಬಾಂಗ್ಲಾಗೆ ಬೃಹತ್ ಟಾರ್ಗೆಟ್

    4ನೇ ದಿನದಾಟದ ಅಂತ್ಯಕ್ಕೆ ಬಾಂಗ್ಲಾ 6 ವಿಕೆಟ್ ನಷ್ಟಕ್ಕೆ 272 ರನ್ ಬಾರಿಸಿತ್ತು, ನಾಯಕ ಶಕೀಬ್ ಅಲ್ ಹಸನ್ (Shakib Al Hasan) ಅಜೇಯ 40 ರನ್ (69 ಎಸೆತ, 3 ಬೌಂಡರಿ, 2 ಸಿಕ್ಸ್) ಮತ್ತು ಮೆಹಿದಿ ಹಸನ್ ಮಿರಾಜ್ 9 ರನ್ ಸಿಡಿಸಿ 5ನೇ ದಿನಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದರು. ಬಾಂಗ್ಲಾ (Bangladesh) ಗೆಲುವಿಗೆ 241 ರನ್ ಬಾಕಿಯಿತ್ತು. ಇಂದು ಬಾಂಗ್ಲಾದೇಶ ಗೆಲುವಿನ ಭರವಸೆಯೊಂದಿಗೆ ಕ್ರೀಸ್‌ಗಿಳಿದಿತ್ತು. ಆದರೆ ಟೀಂ ಇಂಡಿಯಾ ಬೌಲರ್‌ಗಳ ಸ್ಪಿನ್ ದಾಳಿಗೆ ತತ್ತರಿಸಿದ ಬಾಂಗ್ಲಾದೇಶ ತಂಡ 113.2 ಓವರ್‌ಗಳಿಗೆ ಸರ್ವಪತನ ಕಂಡಿತು.

    ಕೊನೆಯ ಇನ್ನಿಂಗ್ಸ್‌ನಲ್ಲಿ ಬ್ಯಾಟಿಂಗ್ ಆರಂಭಿಸಿದ ಬಾಂಗ್ಲಾದೇಶ 11.2 ಓವರ್‌ಗಳಲ್ಲಿ 52 ರನ್ ಗಳಿಸುವ ವೇಳೆಗೆ ಭಾರತ ಎದುರಾಳಿಗಳನ್ನು ಕಟ್ಟಿಹಾಕಿತು. 2ನೇ ಇನ್ನಿಂಗ್ಸ್‌ನಲ್ಲಿ ಜಾಕಿರ್ ಹಸನ್ 224 ಎಸೆತಗಳಲ್ಲಿ 100 ರನ್ (13 ಬೌಂಡರಿ, 1 ಸಿಕ್ಸರ್) ಸಿಡಿದರು. ನಾಯಕ ಶಕೀಬ್ ಅಲ್ ಹಸನ್ 108 ಎಸೆತಗಳಲ್ಲಿ ಸ್ಫೋಟಕ 84 ರನ್ (6 ಬೌಂಡರಿ, 6 ಸಿಕ್ಸರ್) ಚಚ್ಚಿ ಔಟಾದರು. ನಂತರದಲ್ಲಿ ಕ್ರೀಸ್‌ಗಿಳಿದ ಆಟಗಾರರು ಸ್ಥಿರವಾಗಿ ನಿಲ್ಲದ ಕಾರಣ ಬಾಂಗ್ಲಾದೇಶ ಸೋಲಿಗೆ ಶರಣಾಯಿತು. ಇದನ್ನೂ ಓದಿ: ಬಾಂಗ್ಲಾದ ಭಾರ ಹೊತ್ತ ಜಾಕಿರ್ – ಜಯದ ಹೊಸ್ತಿಲಲ್ಲಿ ಭಾರತ

    ಕುಲ್‌ದೀಪ್, ಅಕ್ಷರ್ ಸ್ಪಿನ್ ಕಮಾಲ್:
    ಮೊದಲ ಇನ್ನಿಂಗ್ಸ್‌ನಲ್ಲಿ ಬ್ಯಾಟಿಂಗ್‌ನಲ್ಲಿ 40 ರನ್ ಗಳಿಸಿ, ಬೌಲಿಂಗ್‌ನಲ್ಲಿ 5 ವಿಕೆಟ್ ಕಬಳಿಸಿದ ಕುಲ್‌ದೀಪ್ 2ನೇ ಇನ್ನಿಂಗ್ಸ್ನಲ್ಲೂ 3 ವಿಕೆಟ್ ಕಬಳಿಸುವ ಮೂಲಕ ಕಮಾಲ್ ಮಾಡಿದರು. ಇನ್ನೂ ಮೊದಲ ಇನ್ನಿಂಗ್ಸ್‌ನಲ್ಲಿ ಒಂದು ವಿಕೆಟ್‌ಗೆ ತೃಪ್ತಿ ಪಡೆಕೊಂಡಿದ್ದ ಅಕ್ಷರ್‌ಪಟೇಲ್ 2ನೇ ಇನ್ನಿಂಗ್ಸ್‌ನಲ್ಲಿ 4 ವಿಕೆಟ್ ಪಡೆದು ಮಿಂಚಿದರು.

    ಬಾಂಗ್ಲಾ ವಿರುದ್ಧ 2ನೇ ಇನ್ನಿಂಗ್ಸ್‌ನಲ್ಲೂ ಭಾರತದ ಬ್ಯಾಟ್ಸ್‌ಮ್ಯಾನ್‌ ತಮ್ಮ ಉತ್ತಮ ಲಯ ಮುಂದುವರಿಸಿದ್ದರು. ಭಾರತ ಪರ ಶುಭಮನ್ ಗಿಲ್ 110 ರನ್ (152 ಎಸೆತ, 10 ಬೌಂಡರಿ, 3 ಸಿಕ್ಸ್) ಚಚ್ಚಿ ತಮ್ಮ ಚೊಚ್ಚಲ ಶತಕ ಪೂರೈಸಿದರು. ಇನ್ನೊಂದೆಡೆ ಮೊದಲ ಇನ್ನಿಂಗ್ಸ್‌ನಲ್ಲಿ ಶತಕ ವಂಚಿತರಾಗಿದ್ದ ಪೂಜಾರ 2ನೇ ಇನ್ನಿಂಗ್ಸ್‌ನಲ್ಲಿ 102 ರನ್ (130 ಎಸೆತ, 13 ಬೌಂಡರಿ) ಬಾರಿಸಿ ಶತಕ ಪೂರೈಸಿಕೊಂಡರು. ಇದು ಪೂಜಾರ ಅವರ ಟೆಸ್ಟ್ ವೃತ್ತಿ ಜೀವನದ ವೇಗದ ಹಾಗೂ 19ನೇ ಶತಕವಾಗಿದೆ. ಪೂಜಾರ ಶತಕ ಸಿಡಿಸುತ್ತಿದ್ದಂತೆ 61.4 ಓವರ್‌ಗಳ ಅಂತ್ಯಕ್ಕೆ 2 ವಿಕೆಟ್ ನಷ್ಟಕ್ಕೆ 258 ರನ್ ಬಾರಿಸಿದ್ದಾಗ ಭಾರತ ಇನ್ನಿಂಗ್ಸ್ ಡಿಕ್ಲೇರ್ ಮಾಡಿಕೊಂಡಿತ್ತು.

    Live Tv
    [brid partner=56869869 player=32851 video=960834 autoplay=true]

  • ಕುಲದೀಪ್ ಬೌಲಿಂಗ್ ಮಿಂಚು, ಸುಲಭ ಸರಣಿ ಗೆಲುವು – ಭಾರತಕ್ಕೆ 7 ವಿಕೆಟ್‌ಗಳ ಭರ್ಜರಿ ಜಯ

    ಕುಲದೀಪ್ ಬೌಲಿಂಗ್ ಮಿಂಚು, ಸುಲಭ ಸರಣಿ ಗೆಲುವು – ಭಾರತಕ್ಕೆ 7 ವಿಕೆಟ್‌ಗಳ ಭರ್ಜರಿ ಜಯ

    ನವದೆಹಲಿ: ಕುಲದೀಪ್ ಯಾದವ್ (Kuldeep Yadav) ಮಿಂಚಿನ ಬೌಲಿಂಗ್ ದಾಳಿ ಹಾಗೂ ಶುಭಮನ್ ಗಿಲ್ (Shubman Gill) ಜವಾಬ್ದಾರಿಯುತ ಬ್ಯಾಟಿಂಗ್ ನೆರವಿನಿಂದ ಟೀಂ ಇಂಡಿಯಾ ದಕ್ಷಿಣ ಆಫ್ರಿಕಾ ವಿರುದ್ಧ 7 ವಿಕೆಟ್‌ಗಳ ಭರ್ಜರಿ ಗೆಲುವಿನೊಂದಿಗೆ 2-1 ಅಂತರದಲ್ಲಿ ಸರಣಿ ಜಯ ಸಾಧಿಸಿದೆ.

    ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆದ 3ನೇ ಏಕದಿನ ಪಂದ್ಯದಲ್ಲಿ ಸೌತ್ ಆಫ್ರಿಕಾ (South Africa) ತಂಡವು ಟೀಂ ಇಂಡಿಯಾ (Team India) ಮಾರಕ ಬೌಲಿಂಗ್ ದಾಳಿಗೆ ತತ್ತರಿಸಿ ಕೇವಲ 27.1 ಓವರ್‌ಗಳಲ್ಲಿ 99 ರನ್‌ಗಳಿಗೆ ಸರ್ವಪತನ ಕಂಡಿತು. ಈ ರನ್‌ಗಳ ಗುರಿ ಬೆನ್ನತ್ತಿದ ಟೀಂ ಇಂಡಿಯಾ ನಿಗದಿತ 19.1 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 105 ರನ್ ಸಿಡಿಸಿ ಭರ್ಜರಿ ಗೆಲುವಿನೊಂದಿಗೆ 2-1 ಅಂತರದಲ್ಲಿ ಸರಣಿ ಗೆದ್ದುಕೊಂಡಿತು.

    ಆರಂಭಿಕ ಆಟಗಾರನಾಗಿ ಕಣಕ್ಕಿಳಿದ ಶುಭಮನ್ ಗಿಲ್ ಹಾಗೂ ಶಿಖರ್ ಧವನ್ ಭರ್ಜರಿ ಉತ್ತಮ ಶುಭಾರಂಭ ನೀಡಿದರು. ಆದರೆ ಸ್ಫೋಟಕ ಬ್ಯಾಟಿಂಗ್ ನಡೆಸಲು ಮುಂದಾದ ನಾಯಕ ಶಿಖರ್ ಧವನ್ ಅಲ್ಪ ಮೊತ್ತಕ್ಕೆ ಔಟಾದರು. 14 ಎಸೆತಗಳನ್ನು ಎದುರಿಸಿದ ನಾಯಕ ಶಿಖರ್ ಧವನ್ 1 ಬೌಂಡರಿಯೊಂದಿಗೆ 8 ರನ್ ಗಳಿಸಿ ನಿರ್ಗಮಿಸಿದರು. ಬಳಿಕ ಬ್ಯಾಟ್ ಹೊತ್ತ ಇಶಾನ್ ಕಿಶನ್ 16 ಬಾಲ್‌ಗೆ 2 ಬೌಂಡರಿಯೊಂದಿಗೆ 10 ರನ್ ಗಳಿಸಿದರು.

    ಆರಂಭದಲ್ಲಿ ಕಣಕ್ಕಿಳಿದು ಸೆಣಸಾಡಿದ ಶುಭಮನ್ ಗಿಲ್ 57 ಬಾಲ್‌ಗಳಿಗೆ 8 ಬೌಂಡರಿ ಹೊಡೆದು ಒಟ್ಟು 49 ರನ್‌ಗಳನ್ನು ಗಳಿಸಿದರು. ಆದರೆ ಕೊನೆಯ ಕೆಲವು ರನ್‌ಗಳನ್ನು ಗಳಿಸಲು ಬಾಕಿಯಿರುವಾಗ ಔಟ್ ಆದರು. ಭರ್ಜರಿಯಾಗಿ ಬ್ಯಾಟ್ ಬೀಸಿದ ಶ್ರೇಯಸ್ ಅಯ್ಯರ್ 23 ಎಸೆತದಲ್ಲಿ 3 ಬೌಂಡರಿ ಹಾಗೂ 2 ಸಿಕ್ಸ್ ಹೊಡೆದು ಒಟ್ಟು 28 ರನ್ ಗಳಿಸಿದರು. ಕೊನೆಯಲ್ಲಿ ಕಣಕ್ಕಿಳಿದ ಸಂಜು ಸ್ಯಾಮ್ಸನ್ 4 ಎಸೆತಕ್ಕೆ 2 ರನ್ ಗಳಿಸಿದರು.

    ಟಾಸ್ ಸೋತು ಸ್ಫೋಟಕ ಬ್ಯಾಟ್ಸ್ಮನ್ ಡೇವಿಡ್ ಮಿಲ್ಲರ್ ನಾಯಕತ್ವದಲ್ಲಿ ಕಣಕ್ಕಿದ ದಕ್ಷಿಣ ಆಫ್ರಿಕಾ ತಂಡ ಆರಂಭದಲ್ಲಿ ತೀವ್ರ ಆಘಾತ ಎದುರಿಸಿತು. 3ನೇ ಓವರ್‌ನಲ್ಲೇ ಕ್ವಿಂಟನ್ ಡಿಕಾಕ್ 6 ರನ್‌ಗಳಿಗೆ ವಿಕೆಟ್ ಒಪ್ಪಿಸಿ ಹೊರ ನಡೆದರು. ಡಿಕಾಕ್ ವಿಕೆಟ್ ಪಡೆಯುವ ಮೂಲಕ ವಾಷಿಂಗ್ಟನ್ ಸುಂದರ್ ಯಶಸ್ಸಿನ ಖಾತೆ ತೆರೆದರು.

    ಇದರ ಬೆನ್ನಲ್ಲೇ 27 ಎಸೆತಗಳನ್ನು ಎದುರಿಸಿದ ಜಾನ್ನೆಮನ್ ಮಲನ್ 15 ರನ್ ಗಳಿಸಿ ಮೊಹಮ್ಮದ್ ಸಿರಾಜ್ ಎದುರು ಮಂಡಿಯೂರಬೇಕಾಯಿತು. ಕೇವಲ 3 ರನ್ ಗಳಿಸಿದ್ದ ರೀಝಾ ಹೆಂಡ್ರಿಕ್ಸ್ಗೂ ಸಿರಾಜ್ ಪೆವಿಲಿಯನ್ ಹಾದಿ ತೋರಿಸಿದರು. ಇದರ ಬೆನ್ನಲ್ಲೇ ಐಡನ್ ಮಾರ್ಕ್ರಾಮ್ 9 ರನ್ ಗಳಿಸಿ ನಿರ್ಗಮಿಸಿದರು. ಇದನ್ನೂ ಓದಿ: ನೀನು SSLC ಪಾಸ್ ಆಗಲ್ಲ ಅಂತ ಅಪ್ಪ ಹೇಳಿದ್ರು- ಧೋನಿ ಸ್ಕೂಲ್ ಲೈಫ್ ರಿವೀಲ್

    ದಕ್ಷಿಣ ಆಫ್ರಿಕಾ ತಂಡ 15.3 ಓವರ್‌ನಲ್ಲೇ ಅಂದ್ರೆ ಪವರ್‌ಪ್ಲೇಗೂ ಮುನ್ನವೇ 43 ರನ್‌ಗಳಿಗೆ 4 ಪ್ರಮುಖ ವಿಕೆಟ್‌ಗಳನ್ನು ಕಳೆದುಕೊಂಡಿತ್ತು. ಈ ವೇಳೆ ತಂಡಕ್ಕೆ ಆಸರೆಯಾದ ಹೆನ್ರಿಕ್ ಕ್ಲಾಸೆನ್ 42 ಎಸೆತಗಳಲ್ಲಿ 34 ರನ್ ಕಲೆಹಾಕುವಲ್ಲಿ ಯಶಸ್ವಿಯಾದರು. 4 ಬೌಂಡರಿ ಸಿಡಿಸಿದ ಕ್ಲಾಸೆನ್ 34 ರನ್ ಗಳಿಸಿದರು. ಈ ವೇಳೆ ಶೆಹಬಾಜ್ ಸ್ಪಿನ್ ದಾಳಿಗೆ ವಿಕೆಟ್ ಒಪ್ಪಿಸಿ ಪೆವಿಲಿಯನ್ ಸೇರಿದರು.

    ನಂತರದಲ್ಲಿ ಬಂದ ಯಾವೊಬ್ಬ ಆಟಗಾರರೂ ಸ್ಥಿರವಾಗಿ ನಿಲ್ಲದ ಕಾರಣ ಅತ್ಯಲ್ಪ ಮೊತ್ತಕ್ಕೆ ದಕ್ಷಿಣ ಆಫ್ರಿಕಾ ಸೋಲನ್ನು ಅನುಭವಿಸಿತು. ನಾಯಕ ಡೇವಿಡ್ ಮಿಲ್ಲರ್ 7 ರನ್, ಆಂಡಿಲ್ ಫೆಹ್ಲುಕ್ವಾಯೊ 5 ರನ್, ಮಾರ್ಕೊ ಯಾನ್ಸೆನ್ 14 ರನ್ ಹಾಗೂ ಜಾರ್ನ್ ಫಾರ್ಚುಯಿನ್ 1 ರನ್‌ಗಳಿಸಿದರು. ಇದನ್ನೂ ಓದಿ: T20 ವಿಶ್ವಕಪ್‍ನಲ್ಲೂ ಆರಂಭವಾಯಿತು ಸೂರ್ಯನ ಅಬ್ಬರ – ಪಂತ್ ಓಪನರ್

    ಟೀಂ ಇಂಡಿಯಾ ಪರ ವಾಷಿಂಗ್ಟನ್ ಸುಂದರ್, ಸಿರಾಜ್, ಶಹಬಾಜ್ ಅಹ್ಮದ್ ತಲಾ 2 ವಿಕೆಟ್ ಪಡೆದರೆ, ಕುಲ್ದೀಪ್ ಯಾದವ್ 4 ಓವರ್ ಗಳಲ್ಲಿ 18 ರನ್ ನೀಡಿ 4 ವಿಕೆಟ್ ಕಬಳಿಸಿ ಮಿಂಚಿದರು.

    Live Tv
    [brid partner=56869869 player=32851 video=960834 autoplay=true]

  • ಶ್ರೇಯಸ್‌ ಅಯ್ಯರ್‌, ಇಶಾನ್‌ ಕಿಶನ್‌ ಭರ್ಜರಿ ಬ್ಯಾಟಿಂಗ್‌ – ಭಾರತಕ್ಕೆ 7 ವಿಕೆಟ್‌ಗಳ ಜಯ

    ಶ್ರೇಯಸ್‌ ಅಯ್ಯರ್‌, ಇಶಾನ್‌ ಕಿಶನ್‌ ಭರ್ಜರಿ ಬ್ಯಾಟಿಂಗ್‌ – ಭಾರತಕ್ಕೆ 7 ವಿಕೆಟ್‌ಗಳ ಜಯ

    ರಾಂಚಿ: ಶ್ರೇಯಸ್‌ ಅಯ್ಯರ್‌ (Shreyas Iyer), ಇಶಾನ್‌ ಕಿಶನ್‌ (Ishan Kishan) ಅವರ ಭರ್ಜರಿ ಬ್ಯಾಟಿಂಗ್‌ ಹಾಗೂ ಮೊಹಮ್ಮದ್‌ ಸಿರಾಜ್‌ ಬೌಲಿಂಗ್‌ ದಾಳಿ ನೆರವಿನಿಂದ ದಕ್ಷಿಣ ಆಫ್ರಿಕಾ ವಿರುದ್ಧ ಭಾರತ  7 ವಿಕೆಟ್‌ಗಳ ಜಯ ಸಾಧಿಸಿದೆ.

    ರಾಂಚಿಯ ಜೆಎಸ್‌ಸಿಎ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆದ ಭಾರತ (Team India) ಮತ್ತು ದಕ್ಷಿಣ ಆಫ್ರಿಕಾ (SouthAfrica) ನಡುವಿನ 2ನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ದಕ್ಷಿಣ ಆಫ್ರಿಕಾ ಭಾರತದ ಪ್ರಬಲ ಬೌಲಿಂಗ್ ದಾಳಿಗೆ 300ರ ಗಡಿ ಮುಟ್ಟಲು ಸಾಧ್ಯವಾಗದೇ 7 ವಿಕೆಟ್ ನಷ್ಟಕ್ಕೆ 278ರನ್ ಕಲೆಹಾಕಿತು. 279 ರನ್‌ಗಳ ಸಾಧಾರಣ ಮೊತ್ತದ ಗುರಿ ಬೆನ್ನತ್ತಿದ ಭಾರತ ನಿಗದಿತ 45.5 ಓವರ್‌ಗಳಲ್ಲೇ 3 ವಿಕೆಟ್‌ ನಷ್ಟಕ್ಕೆ 282 ರನ್‌ ಪೇರಿಸಿ ಗೆಲುವು ಸಾಧಿಸಿತು. ಈ ಮೂಲಕ 1-1 ಅಂತರದಲ್ಲಿ ಸರಣಿ ಸಮಬಲ ಸಾಧಿಸಿದೆ.

    279 ರನ್‌ಗಳ ಗುರಿ ಬೆನ್ನಟ್ಟಿದ ಭಾರತಕ್ಕೆ ಆರಂಭಿಕ ಆಘಾತ ಎದುರಾಯಿತು. ಪವರ್‌ ಪ್ಲೇ ಮುಗಿಯುವಷ್ಟರಲ್ಲೇ ಆರಂಭಿಕರಾದ ಶುಭಮನ್‌ ಗಿಲ್‌ (Shubman Gill) ಹಾಗೂ ಶಿಖರ್‌ ಧವನ್‌ (Shikhar Dhawan) ಜೋಡಿ ವಿಕೆಟ್‌ ಒಪ್ಪಿಸಿತು. ಈ ವೇಳೆ ಶಿಖರ್‌ ಧವನ್‌ 20 ಎಸೆತಗಳಲ್ಲಿ ಕೇವಲ 13 ರನ್‌ಗಳಿಸಿದರೆ, ಗಿಲ್‌ 26 ಎಸೆತಗಳಲ್ಲಿ 5 ಬೌಂಡರಿಯೊಂದಿಗೆ 28 ರನ್‌ಗಳಿಸಿ ನಿರ್ಗಮಿಸಿದರು.

    ನಂತರ ಕಣಕ್ಕಿಳಿದ ಶ್ರೇಯಸ್‌ ಅಯ್ಯರ್‌ ಹಾಗೂ ಇಶಾನ್‌ ಕಿಶನ್‌ ಜೋಡಿ ಭರ್ಜರಿ ಬ್ಯಾಟಿಂಗ್‌ ಮಾಡಿದರು. 155 ಎಸೆತಗಳಲ್ಲಿ 161 ರನ್‌ಗಳ ಜೊತೆಯಾಟವಾಡಿದರು. ಸಿಕ್ಸರ್‌, ಬೌಂಡರಿಗಳ ಜೊತೆಯಾಟದಲ್ಲಿ ಎದುರಾಳಿ ಬೌಲರ್‌ಗಳ ಬೆವರಿಳಿಸಿದರು. ಈ ವೇಳೆ ಸ್ಫೋಟಕ ಬ್ಯಾಟಿಂಗ್‌ ನಡೆಸುತ್ತಿದ್ದ ಇಶಾನ್‌ ಕಿಶನ್‌ ಶತಕದ ಸನಿಹದಲ್ಲಿರುವಾಗಲೇ ಔಟಾದರು. ಟೀಂ ಇಂಡಿಯಾ ಪರ ಉತ್ತಮ ಪ್ರದರ್ಶನ ನೀಡಿದ ಇಶಾನ್‌ ಕಿಶನ್‌ 84 ಎಸೆತಗಳಲ್ಲಿ 93 ರನ್‌ (7 ಸಿಕ್ಸರ್‌, 4 ಬೌಂಡರಿ) ಗಳಿಸಿ ಔಟಾದರು. ಆ ನಂತರವೂ ತಮ್ಮ ಅಬ್ಬರ ಮುಂದುವರಿಸಿದ ಶ್ರೇಯಸ್‌ ಅಯ್ಯರ್‌ ಶತಕ ಸಿಡಿಸಿ ಮಿಂಚಿದರು.

    ಮಿಂಚಿದ ಶ್ರೇಯಸ್‌ ಅಯ್ಯರ್‌:
    ದಕ್ಷಿಣಾ ಆಫ್ರಿಕಾ ಬೌಲರ್‌ಗಳ ಬೆವರಿಳಿಸಿದ ಶ್ರೇಯಸ್‌ ಅಯ್ಯರ್‌ ಶತಕ ಸಿಡಿಸುವ ಮೂಲಕ ಟೀಂ ಇಂಡಿಯಾ ಗೆಲುವಿಗೆ ನೆರವಾದರು. 111 ಎಸೆತಗಳನ್ನು ಎದುರಿಸಿದ ಶ್ರೇಯಸ್‌ ಅಯ್ಯರ್‌ 113 ರನ್‌ (15 ಬೌಂಡರಿ) ಸಿಡಿಸಿ ಅಜೇಯರಾಗುಳಿದರು. ಇನ್ನು ಮಧ್ಯಮ ಕ್ರಮಾಂಕದಲ್ಲಿ ಬಂದ ಸಂಜು ಸ್ಯಾಮ್ಸನ್‌ (Sanju Samson) 36 ಎಸೆತಗಳಲ್ಲಿ 1 ಬೌಂಡರಿ, 1 ಸಿಕ್ಸರ್‌ನೊಂದಿಗೆ 29 ರನ್‌ಗಳನ್ನು ಗಳಿಸಿ ಟೀಂ ಇಂಡಿಯಾ ಗೆಲುವಿಗೆ ಕಾರಣರಾದರು.

    ಟೆಂಬಾ ಬವುಮಾ ಅನುಪಸ್ಥಿತಿಯಲ್ಲಿ ತಂಡವನ್ನ ಮುನ್ನಡೆಸಿದ ಕೇಶವ್ ಮಹಾರಾಜ ಮೊದಲು ಬ್ಯಾಟಿಂಗ್ ಆಯ್ದುಕೊಂಡ ನಿರ್ಧಾರಕ್ಕೆ ಟಾಪ್ ಆರ್ಡರ್ ಬ್ಯಾಟರ್‌ಗಳು ನೀರಸ ಪ್ರತಿಕ್ರಿಯೆ ತೋರಿದರು. ಮೊದಲಿಗೆ ಇನ್‌ಫಾರ್ಮ್ ಬ್ಯಾಟರ್ ಕ್ವಿಂಟನ್ ಡಿಕಾಕ್ ಕೇವಲ 5 ರನ್‌ಗಳಿಸಿ ಮೊಹಮ್ಮದ್ ಸಿರಾಜ್ ಬೌಲಿಂಗ್‌ನಲ್ಲಿ ಕ್ಲೀನ್ ಬೌಲ್ಡ್ ಆಗುವ ಮೂಲಕ ಆರಂಭಿಕ ಹಿನ್ನಡೆ ಅನುಭವಿಸಿದರು.

    ಏಕದಿನ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ ಪಂದ್ಯದಲ್ಲೇ ಶಹಬಾಜ್ ಅಹಮದ್ 10 ಓವರ್ ಬೌಲಿಂಗ್‌ ಮಾಡಿ 54ರನ್ ನೀಡಿ 1 ಪ್ರಮುಖ ವಿಕೆಟ್ ಪಡೆದರು. ಓಪನಿಂಗ್ ಬ್ಯಾಟರ್ ಜನ್ನೆಮನ್ ಮಲನ್‌ರನ್ನ ಎಲ್‌ಬಿಡಬ್ಲ್ಯೂ ಬಲೆಗೆ ಕೆಡವಿದರು. ಅಂಪೈರ್ ತೀರ್ಪನ್ನು ನಾಟೌಟ್ ನೀಡಿದಾಗ, ರಿವ್ಯೂ ತೆಗೆದುಕೊಂಡು ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು.

    ದಕ್ಷಿಣ ಆಫಿಕಾ ಆರಂಭದಲ್ಲೇ 40 ರನ್‌ಗಳಿಗೆ 2 ವಿಕೆಟ್‌ ಕಳೆದುಕೊಂಡು ಆಘಾತ ಅನುಭವಿಸಿತು. ಈ ವೇಳೆ ರೀಜಾ ಹೆಂಡ್ರಿಕ್ಸ್ ಮತ್ತು ಏಡೆನ್ ಮಕ್ರಾಮ್ ತಂಡಕ್ಕೆ ಆಸರೆಯಾದರು. 3ನೇ ವಿಕೆಟ್‌ಗೆ ಶತಕದ ಜೊತೆಯಾಟವಾಡಿದ ಈ ಜೋಡಿ ವೈಯಕ್ತಿಕ ಅರ್ಧಶತಕ ದಾಖಲಿಸಿ ತಂಡದ ರನ್‌ ಮೊತ್ತವನ್ನು 150ರ ಗಡಿ ದಾಟಿಸಿತು. ಈ ವೇಳೆ 76 ಎಸೆತಗಳಲ್ಲಿ 74 ರನ್‌ (1 ಸಿಕ್ಸರ್‌, 9 ಬೌಂಡರಿ) ಸಿಡಿಸಿ, ಉತ್ತಮ ಬ್ಯಾಟಿಂಗ್‌ ಪ್ರದರ್ಶನ ನೀಡುತ್ತಿದ್ದ ರೀಜಾ ಹೆಂಡ್ರಿಕ್ಸ್‌ ಅವರನ್ನು ಔಟ್‌ ಮಾಡಿಸಿದ ಮೊಹಮ್ಮದ್‌ ಸಿರಾಜ್‌ ಪೆವಿಲಿಯನ್‌ ದಾರಿ ತೋರಿದರು. ಈ ಮೂಲಕ ಆರಂಭಿಕ ವಿಕೆಟ್ ಪಡೆದಿದ್ದ ಸಿರಾಜ್ ಕಠಿಣವಾಗಿದ್ದ ಜೋಡಿಯನ್ನ ಬೇರ್ಪಡಿಸಿದರು.

    ಹೆಂಡ್ರಿಕ್ಸ್ ಔಟಾದ ಬಳಿಕ ಹೆನ್ರಿಚ್ ಕ್ಲಾಸ್ 30 ರನ್‌ ಗಳಿಸಿ ಉತ್ತಮವಾಗೇ ಆಡುತ್ತಿದ್ದ ವೇಳೆ ಕುಲ್‌ದೀಪ್ ಯಾದವ್‌ಗೆ ವಿಕೆಟ್ ಒಪ್ಪಿಸಿದ್ರು. 89 ಎಸೆತಗಳಲ್ಲಿ 79ರನ್ ಕಲೆಹಾಕಿದ್ದ ಏಡೆನ್ ಮಕ್ರಾಮ್ ಇನ್ನಿಂಗ್ಸ್‌ಗೆ ವಾಷಿಂಗ್ಟನ್ ಸುಂದರ್ ತೆರೆ ಎಳೆದರು. ವೇಯ್ನೆ ಪರ್ನೆಲ್ 16ರನ್‌ಗಳಿಸಿ ಶಾರ್ದೂಲ್ ಠಾಕೂರ್ ಬೌಲಿಂಗ್‌ನಲ್ಲಿ ಔಟಾದರು. ಅಂತಿಮ ಓವರ್‌ನಲ್ಲಿ ಕೇವಲ 3 ರನ್ ನೀಡಿ ಕೇಶವ್ ಮಹಾರಾಜ್ ವಿಕೆಟ್ ಪಡೆದ ಮೊಹಮ್ಮದ್ ಸಿರಾಜ್ ಭಾರತದ ಪರ ಹೀರೋ ಆಗಿ ಮಿಂಚಿದರು.

    ಸಿರಾಜ್‌ ಬೊಂಬಾಟ್‌ ಬೌಲಿಂಗ್‌:
    ಟೀಂ ಇಂಡಿಯಾ ಪರ ಬೊಂಬಾಟ್ ಬೌಲಿಂಗ್ ಮಾಡಿದ ಮೊಹಮ್ಮದ್ ಸಿರಾಜ್ (Mohammed Siraj) 10 ಓವರ್‌ಗಳಲ್ಲಿ 1 ಮೇಡನ್ ಸಹಿತ 38ರನ್ ನೀಡಿ 3 ಪ್ರಮುಖ ವಿಕೆಟ್ ಪಡೆದರು. ಇನ್ನುಳಿದಂತೆ ಶಾರ್ದೂಲ್ ಠಾಕೂರ್, ಶಹಬಾಜ್ ಅಹಮದ್, ವಾಷಿಂಗ್ಟನ್ ಸುಂದರ್ ಮತ್ತು ಕುಲ್‌ದೀಪ್ ಯಾದವ್ ತಲಾ 1 ವಿಕೆಟ್ ಪಡೆದರು. ದಕ್ಷಿಣ ಆಫ್ರಿಕಾ 7 ವಿಕೆಟ್‌ ನಷ್ಟಕ್ಕೆ 278ರನ್‌ಗಳಿಗೆ ಇನ್ನಿಂಗ್ಸ್‌ ಮುಗಿಸಿತು.

    Live Tv
    [brid partner=56869869 player=32851 video=960834 autoplay=true]

  • ಕ್ರಿಕೆಟ್ ದೇವರು ಸಚಿನ್ ಪುತ್ರಿಯ ಜೊತೆ ಶುಭಮನ್ ಗಿಲ್ ಲವ್ ಬ್ರೇಕ್ ಅಪ್

    ಕ್ರಿಕೆಟ್ ದೇವರು ಸಚಿನ್ ಪುತ್ರಿಯ ಜೊತೆ ಶುಭಮನ್ ಗಿಲ್ ಲವ್ ಬ್ರೇಕ್ ಅಪ್

    ಭಿಮಾನಿಗಳ ಪಾಲಿನ ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಪುತ್ರ ಸಾರಾ ತೆಂಡೂಲ್ಕರ್ ಮತ್ತು ಕ್ರಿಕೆಟಿಗ ಶುಭಮನ್ ಗಿಲ್ ನಡುವೆ ಪ್ರೀತಿ ಗೀತಿ ಇತ್ಯಾದಿ ಇದೆ ಎನ್ನುವುದು ಗುಟ್ಟಾಗಿ ಉಳಿದಿಲ್ಲ. ಇಬ್ಬರೂ ಡೇಟಿಂಗ್ ಮಾಡುತ್ತಿರುವ ವಿಚಾರ ಆಗಾಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಇಬ್ಬರೂ ಅದೆಷ್ಟೋ ಬಾರಿ ಒಟ್ಟಿಗೆ ಕಾಣಿಸಿಕೊಂಡು ಸುದ್ದಿಗಳಿಗೆ ಆಹಾರವಾಗಿದ್ದಾರೆ. ಆದರೆ, ಸಾರಾ ಮತ್ತು ಶುಭಮನ್ ಬಾಂಧವ್ಯ ಚೆನ್ನಾಗಿ ಎನ್ನುವ ಸುದ್ದಿ ಹರಿದಾಡುತ್ತಿದೆ.

    ಟೀಮ್ ಇಂಡಿಯಾದ ಪ್ರಭಾವಿ ಕ್ರಿಕೆಟಿಗ, ಸ್ಟಾರ್ ಓಪನರ್ ಎಂದೇ ಖ್ಯಾತರಾಗಿರುವ ಶುಭಮನ್ ಗಿಲ್ ಮತ್ತು ತೆಂಡೂಲ್ಕರ್ ಪುತ್ರಿ ಸಾರಾ ಇಬ್ಬರೂ ಒಬ್ಬರಿಗೊಬ್ಬರು ಇಷ್ಟಪಟ್ಟಿದ್ದರು ಎನ್ನುವುದು ಜಗಜ್ಜಾಹೀರು. ಆದರೂ, ಇಬ್ಬರೂ ಈ ಕುರಿತು ಪ್ರತಿಕ್ರಿಯೆ ನೀಡಿರಲಿಲ್ಲ. ಹಾಗಂತ ಅದು ಕೇವಲ ಗಾಸಿಪ್ ಕೂಡ ಆಗಿರಲಿಲ್ಲ. ಇಬ್ಬರೂ ಪ್ರೀತಿಸುತ್ತಿರುವ ವಿಚಾರ ಕ್ರಿಕೆಟ್ ತಂಡದ ಬಹುತೇಕರಿಗೆ ಗೊತ್ತಿತ್ತು. ಇದೀಗ ಆ ಪ್ರೀತಿ ಮುರಿದು ಬಿದ್ದಿದೆ ಎನ್ನಲಾಗುತ್ತಿದೆ. ಇದನ್ನೂ ಓದಿ:‘ಜೊತೆ ಜೊತೆಯಲಿ’ ಅನಿರುದ್ಧ ಗಲಾಟೆ ಧಾರವಾಡಕ್ಕೆ ಶಿಫ್ಟ್: ಪ್ರಕರಣ ತಿಳಿಗೊಳಿಸಲು ಸ್ನೇಹಿತರ ಮನವಿ

    ಲವ್ ಬ್ರೇಕ್ ಅಪ್ ನಂತರ ಇಬ್ಬರೂ ಸಾಮಾಜಿಕ ಜಾಲತಾಣಗಳಲ್ಲಿ ಒಬ್ಬರಿಗೊಬ್ಬರು ಅನ್ ಫಾಲೋ ಮಾಡಿರುವುದು ಬೆಳಕಿಗೆ ಬಂದಿದೆ. ಈ ಜೋಡಿ ಆಗಾಗ್ಗೆ ಅಭಿನಂದನೆಗಳನ್ನು ಮತ್ತು ಶುಭಾಶಯಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ಬಾರಿ ವಿನಿಮಯ ಮಾಡಿಕೊಂಡಿದಿದೆ. ಇದೀಗ ಇಬ್ಬರೂ ಅನ್ ಫಾಲೋ ಮಾಡುವ ಮೂಲಕ ಅನುಮಾನ ಹುಟ್ಟು ಹಾಕಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಗಿಲ್, ಚಹಲ್ ಆಟಕ್ಕೆ ದಕ್ಕಿದ ಜಯ – ವೆಸ್ಟ್ ಇಂಡೀಸ್‍ನಲ್ಲಿ ಚೊಚ್ಚಲ ಬಾರಿಗೆ ಕ್ಲೀನ್ ಸ್ವೀಪ್ ಸಾಧಿಸಿದ ಭಾರತ

    ಗಿಲ್, ಚಹಲ್ ಆಟಕ್ಕೆ ದಕ್ಕಿದ ಜಯ – ವೆಸ್ಟ್ ಇಂಡೀಸ್‍ನಲ್ಲಿ ಚೊಚ್ಚಲ ಬಾರಿಗೆ ಕ್ಲೀನ್ ಸ್ವೀಪ್ ಸಾಧಿಸಿದ ಭಾರತ

    ಟ್ರಿನಿನಾಡ್: ಬ್ಯಾಟಿಂಗ್‍ನಲ್ಲಿ ಶುಭಮನ್ ಗಿಲ್ ಮತ್ತು ಬೌಲಿಂಗ್‍ನಲ್ಲಿ ಯಜುವೇಂದ್ರ ಚಹಲ್ ಆಟಕ್ಕೆ ಥಂಡಾ ಹೊಡೆದ ವೆಸ್ಟ್ ಇಂಡೀಸ್ ಸೋತು ಮುಖಭಂಗ ಅನುಭವಿಸಿದೆ. ಭಾರತ 119 ರನ್‍ಗಳ ಜಯದೊಂದಿಗೆ ಸರಣಿ ಕ್ಲೀನ್ ಸ್ವೀಪ್ ಸಾಧಿಸಿ ಮೆರೆದಾಡಿದೆ.

    ಮಳೆಯ ನಡುವೆ ನಡೆದ ಮೂರನೇ ಏಕದಿನ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತಕ್ಕೆ ಶುಭಮನ್ ಗಿಲ್, ಶಿಖರ್ ಧವನ್, ಶ್ರೇಯಸ್ ಅಯ್ಯರ್ ಭರ್ಜರಿ ಬ್ಯಾಟ್ ಬೀಸಿ 36 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 225 ರನ್ ಒಟ್ಟುಗೂಡಿಸಿದರು. ಡಕ್ವರ್ಥ್ ಲೂಯಿಸ್ ನಿಯಮದ ಪ್ರಕಾರ 35 ಓವರ್‌ಗಳಲ್ಲಿ 226 ರನ್‍ಗಳ ಗುರಿಯೊಂದಿಗೆ ಕಣಕ್ಕಿಳಿದ ವಿಂಡೀಸ್, ಭಾರತದ ಬೌಲರ್‌ಗಳ ಬಿಗಿ ದಾಳಿಗೆ ನಲುಗಿ 26 ಓವರ್‌ಗಳಲ್ಲಿ ಕೇವಲ 147 ರನ್‍ಗಳಿಗೆ ಆಲೌಟ್ ಆಯಿತು. ಇದರೊಂದಿಗೆ ಭಾರತ 3-0 ಅಂತರದಲ್ಲಿ ಸರಣಿ ಗೆದ್ದು ವಿಂಡೀಸ್‍ಗೆ ತವರಿನಲ್ಲಿ ಶಾಕ್ ನೀಡಿತು. ಇದನ್ನೂ ಓದಿ: ಬಿಸಿಸಿಐ ಶೀರ್ಷಿಕೆ ಪ್ರಾಯೋಜಕ ಪಡೆದುಕೊಂಡ ಮಾಸ್ಟರ್ ಕಾರ್ಡ್ – ಪ್ರತಿ ಪಂದ್ಯಕ್ಕೆ ಸಿಗುತ್ತೆ ಕೋಟಿ ಕೋಟಿ

    226 ರನ್‍ಗಳ ಗುರಿಯನ್ನು ಬೆನ್ನಟ್ಟುವ ವಿಶ್ವಾಸದಲ್ಲಿ ಕಣಕ್ಕಿಳಿದ ವೆಸ್ಟ್ ಇಂಡೀಸ್ ಆರಂಭದಿಂದಲೇ ವಿಕೆಟ್ ಕಳೆದುಕೊಂಡು ಸಾಗಿತು. ಬ್ರೆಂಡನ್ ಕಿಂಗ್ 42 ರನ್ (37 ಎಸೆತ, 5 ಬೌಂಡರಿ, 1 ಸಿಕ್ಸ್) ಮತ್ತು ನಿಕೋಲಸ್ ಪೂರನ್ 42 ರನ್ (32 ಎಸೆತ, 5 ಬೌಂಡರಿ, 1 ಸಿಕ್ಸ್) ಸಿಡಿಸಿ ಹೋರಾಡಿದ್ದನ್ನು ಹೊರತು ಪಡಿಸಿ ಉಳಿದ ಬ್ಯಾಟ್ಸ್‌ಮ್ಯಾನ್‌ಗಳು ಬಂದಷ್ಟೇ ವೇಗವಾಗಿ ಪೆವಿಲಿಯನ್ ಪರೇಡ್ ನಡೆಸಿದರು. ಚಹಲ್ 4 ಓವರ್ ಎಸೆದು 17 ರನ್ ನೀಡಿ 4 ವಿಕೆಟ್ ಕಿತ್ತು ವಿಂಡೀಸ್‍ಗೆ ಕಡಿವಾಣ ಹಾಕಿದರು. ಇವರಿಗೆ ಉತ್ತಮ ಸಾಥ್ ನೀಡಿದ ಸಿರಾಜ್, ಠಾಕೂರ್ ತಲಾ 2 ವಿಕೆಟ್, ಅಕ್ಷರ್ ಪಟೇಲ್, ಪ್ರಸಿದ್ಧ್ ಕೃಷ್ಣ ತಲಾ 1 ವಿಕೆಟ್ ಕಿತ್ತು ಮಿಂಚಿದರು.

    ಈ ಮೊದಲು ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಭಾರತ ಉತ್ತಮ ಆರಂಭ ಪಡೆಯಿತು. ಶಿಖರ್ ಧವನ್, ಗಿಲ್ ಜೋಡಿ ಮೊದಲ ವಿಕೆಟ್‍ಗೆ 113 ರನ್ (138 ಎಸೆತ) ಜೊತೆಯಾಟವಾಡಿ ಭದ್ರ ಬುನಾದಿ ಹಾಕಿಕೊಟ್ಟಿತು. ಧವನ್ 58 ರನ್ (74 ಎಸೆತ, 7 ಬೌಂಡರಿ) ಬಾರಿಸಿ ಔಟ್ ಆದರೆ ಇತ್ತ ಗಿಲ್ ನಿಧಾನಗತಿಯಲ್ಲಿ ಅಬ್ಬರಿಸಲು ಆರಂಭಿಸಿದರು. ಇವರಿಗೆ ಉತ್ತಮ ಸಾಥ್ ನೀಡಿದ ಶ್ರೇಯಸ್ ಅಯ್ಯರ್ 44 ರನ್ (34 ಎಸೆತ, 4 ಬೌಂಡರಿ, 1 ಸಿಕ್ಸ್) ಚಚ್ಚಿ ವಿಕೆಟ್ ಕಳೆದುಕೊಂಡರು. ಈ ಮೊದಲು ಗಿಲ್ ಜೊತೆ 2ನೇ ವಿಕೆಟ್‍ಗೆ 86 ರನ್ (58 ಎಸೆತ) ಜೊತೆಯಾಟವಾಡಿ ದೊಡ್ಡ ಮೊತ್ತಕ್ಕೆ ಕಾರಣರಾದರು. ಇದನ್ನೂ ಓದಿ: ನೀರಜ್ ಚೋಪ್ರಾಗೆ ಗಾಯದ ಸಮಸ್ಯೆ – ಕಾಮನ್‍ವೆಲ್ತ್ ಗೇಮ್ಸ್‌ಗೂ ಮುನ್ನವೇ ಭಾರತಕ್ಕೆ ಹಿನ್ನಡೆ

    2 ರನ್‍ಗಳಿಂದ ಶತಕ ವಂಚಿತರಾದ ಗಿಲ್:
    ಮಳೆಯಿಂದಾಗಿ 36 ಓವರ್‌ಗಳಿಗೆ ಇಳಿಕೆ ಕಂಡ ಪಂದ್ಯದಲ್ಲಿ ಗಿಲ್ ಅಜೇಯ 98 ರನ್ (98 ಎಸೆತ, 7 ಬೌಂಡರಿ, 2 ಸಿಕ್ಸ್) ಹೊಡೆದು 2 ರನ್‍ಗಳಿಂದ ಚೊಚ್ಚಲ ಶತಕವಂಚಿತರಾದರು. ಅಂತಿಮವಾಗಿ ಭಾರತ 36 ಓವರ್‌ಗಳಲ್ಲಿ 3 ವಿಕೆಟ್ ಕಳೆದುಕೊಂಡು 225 ರನ್‍ಗಳ ಉತ್ತಮ ಮೊತ್ತ ಕಲೆ ಹಾಕಿತು.

    Live Tv
    [brid partner=56869869 player=32851 video=960834 autoplay=true]

  • ಇಂಗ್ಲೆಂಡ್ ಸರಣಿ ಆರಂಭಕ್ಕೂ ಮೊದಲೇ ಟೀಂ ಇಂಡಿಯಾದಿಂದ  ಶುಭಮನ್ ಗಿಲ್ ಔಟ್

    ಇಂಗ್ಲೆಂಡ್ ಸರಣಿ ಆರಂಭಕ್ಕೂ ಮೊದಲೇ ಟೀಂ ಇಂಡಿಯಾದಿಂದ ಶುಭಮನ್ ಗಿಲ್ ಔಟ್

    ಲಂಡನ್: ಭಾರತ ಟೆಸ್ಟ್ ವಿಶ್ವಚಾಂಪಿಯನ್‍ಶಿಪ್ ಫೈನಲ್ ಸೋತ ಬಳಿಕ ಇದೀಗ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ತಯಾರಿಮಾಡಿಕೊಳ್ಳುತ್ತಿದೆ. ಈ ನಡುವೆ ಇದೀಗ ಭಾರತ ತಂಡದ ಯುವ ಆರಂಭಿಕ ಆಟಗಾರ ಶುಭಮನ್ ಗಿಲ್ ಗಾಯದಿಂದಾಗಿ ಟೆಸ್ಟ್ ಸರಣಿಯಿಂದ ಹೊರಬಿದ್ದಿದ್ದಾರೆ ಎಂದು ವರದಿಯಾಗಿದೆ.

    ಇಂಗ್ಲೆಂಡ್ ವಿರುದ್ಧ 5 ಪಂದ್ಯಗಳ ಟೆಸ್ಟ್ ಸರಣಿಯನ್ನು ಭಾರತ ತಂಡ ಆಡಲಿದೆ. ಆದರೆ ಇದೀಗ ಸರಣಿ ಆರಂಭಕ್ಕೂ ಮೊದಲೇ ತಂಡದ ಅರಂಭಿಕ ಆಟಗಾರ ಶುಭಮನ್ ಗಿಲ್ ಗಾಯಗೊಂಡು ಮಹತ್ವದ ಪಂದ್ಯದಿಂದ ಹೊರಬಿದ್ದಿದ್ದಾರೆ. ಇವರಿಗೆ ಬದಲಿ ಆಟಗಾರನಾಗಿ ಅಭಿಮನ್ಯು ಈಶ್ವರನ್ ಈಗಾಗಲೇ ತಂಡದಲ್ಲಿದ್ದಾರೆ ಎಂದು ಬಿಸಿಸಿಐ ಮೂಲಗಳಿಂದ ವರದಿಯಾಗಿದೆ.

    ಗಿಲ್ ಗಾಯಗೊಂಡರೂ ಕೂಡ ಆಸ್ಟ್ರೇಲಿಯಾದಲ್ಲೇ ಉಳಿದುಕೊಳ್ಳಲಿದ್ದಾರೆ. ಇದೀಗ ಗಿಲ್ ಅವರ ಸ್ಥಾನವನ್ನು ಕನ್ನಡಿಗರಾದ ಕೆ.ಎಲ್ ರಾಹುಲ್ ಮತ್ತು ಮಯಾಂಕ್ ಅಗರ್ವಾಲ್ ಇಬ್ಬರಲ್ಲಿ ಒಬ್ಬರು ತುಂಬುವ ಭರವಸೆ ಇದೆ, ಈ ಇಬ್ಬರಲ್ಲಿ ಒಬ್ಬರು ರೋಹಿತ್ ಶರ್ಮಾ ಜೊತೆ ಇನ್ನಿಂಗ್ಸ್ ಆರಂಭಿಸಲಿದ್ದಾರೆ. ಇದನ್ನೂ ಓದಿ: ಬಾಲಕಿಯ ಚಿಕಿತ್ಸೆಗಾಗಿ ಡಬ್ಲ್ಯುಟಿಸಿ ಫೈನಲ್‍ನಲ್ಲಿ ಆಡಿದ ಜೆರ್ಸಿಯನ್ನು ಹರಾಜಿಗಿಟ್ಟ ಆಟಗಾರ

    ಗಿಲ್ ಈಗಾಗಲೇ ಭಾರತ ತಂಡದ ಪರವಾಗಿ ಒಟ್ಟು 8 ಟೆಸ್ಟ್ ಪಂದ್ಯಗಳನ್ನು ಆಡಿ 31.84ರ ಸರಾಸರಿಯಲ್ಲಿ 3 ಅರ್ಧಶತಕ ಸಹಿತ 414 ರನ್ ಸಿಡಿಸಿದ್ದಾರೆ. ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್‍ನಲ್ಲಿ ಕೂಡ ಆರಂಭಿಕರಾಗಿ ಸ್ಥಾನ ಪಡೆದುಕೊಂಡಿದ್ದರು. ಆದರೆ ಎರಡು ಇನ್ನಿಂಗ್ಸ್ ಸೇರಿ ಒಟ್ಟು 36 ರನ್ ಗಳಿಸುವ ಮೂಲಕ ವಿಫಲತೆ ಅನುಭವಿಸಿದ್ದರು.

    ಗಿಲ್ ಅವರ ಬದಲಿಗೆ ಇದೀಗ ತಂಡದಲ್ಲಿ ಸ್ಥಾನ ಪಡೆದಿರುವ ಅಭಿಮನ್ಯು ಈಶ್ವರನ್ ಪ್ರಥಮ ದರ್ಜೆ ಕ್ರಿಕೆಟ್‍ನಲ್ಲಿ 54 ಪಂದ್ಯಗಳಿಂದ 13 ಶತಕ ಮತ್ತು 18 ಅರ್ಧಶತಕ ಸಹಿತ 4401ರನ್ ಗಳಿಸಿದ್ದಾರೆ.

    ಭಾರತ ಹಾಗೂ ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿಯ ಮೊದಲ ಪಂದ್ಯ ಆಗಸ್ಟ್ 4 ರಂದು ನಾಟಿಂಗ್ ಹ್ಯಾಮ್ ನ ಟ್ರೆಂಟ್ ಬ್ರಿಡ್ಜ್ ನಲ್ಲಿ ಆರಂಭಗೊಳ್ಳಲಿದೆ.

  • ಶುಭಮನ್ ಗಿಲ್ ಹಿಂದಿಕ್ಕಿ ಯಶಸ್ವಿ ಜೈಸ್ವಾಲ್ ವಿಶೇಷ ಸಾಧನೆ

    ಶುಭಮನ್ ಗಿಲ್ ಹಿಂದಿಕ್ಕಿ ಯಶಸ್ವಿ ಜೈಸ್ವಾಲ್ ವಿಶೇಷ ಸಾಧನೆ

    ಪೋಷೆಫ್‍ಸ್ಟ್ರೋಮ್: 2020ರ ಅಂಡರ್ 19 ವಿಶ್ವಕಪ್‍ನಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಯಶಸ್ವಿ ಜೈಸ್ವಾಲ್ ವಿಶೇಷ ಸಾಧನೆ ಮಾಡಿದ್ದಾರೆ.

    ಅಂಡರ್ 19 ವಿಶ್ವಕಪ್ ಟೂರ್ನಿಯ ಭಾಗವಾಗಿ ಭಾನುವಾರ ನಡೆಯುತ್ತಿರುವ ಬಾಂಗ್ಲಾದೇಶದ ವಿರುದ್ಧ ಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ ಪರ ಯಶಸ್ವಿ ಜೈಸ್ವಾಲ್ ಏಕಾಂಗಿಯಾಗಿ ಹೋರಾಡಿದರು. ಈ ಪಂದ್ಯದಲ್ಲಿ ಜೈಸ್ವಾಲ್ 88 ರನ್ (121 ಎಸೆತ, 8 ಬೌಂಡಿರಿ, ಒಂದು ಸಿಕ್ಸ) ಗಳಿಸಿ ತಂಡಕ್ಕೆ ಆಸರೆಯಾದರು. ಇದನ್ನೂ ಓದಿ: ಪಾಕ್ ವಿರುದ್ಧ ಶತಕ ಸಿಡಿಸಿದ ಪಾನಿಪುರಿ ಮಾರುತ್ತಿದ್ದ 18ರ ಪೋರ ಜೈಸ್ವಾಲ್ 

    ಫೈನಲ್ ಪಂದ್ಯದಲ್ಲಿ 88 ರನ್ ಗಳಿಸುವ ಮೂಲಕ ಜೈಸ್ವಾಲ್ ವಿಶೇಷ ಸಾಧನೆಗೆ ಪಾತ್ರರಾದರು. ಅಂಡರ್ 19 ವಿಶ್ವಕಪ್‍ನಲ್ಲಿ ಭಾರತದ ಕಿರಿಯರ ತಂಡದ ಪರ ಅತಿ ಹೆಚ್ಚು ರನ್ ಗಳಿಸಿದ ಪಟ್ಟಿಯಲ್ಲಿ ಜೈಸ್ವಾಲ್ ಶುಭಮನ್ ಗಿಲ್ ಅವರನ್ನು ಹಿಂದಿಕ್ಕಿ ಎರಡನೇ ಸ್ಥಾನ ಪಡೆದುಕೊಂಡಿದ್ದಾರೆ.

    ಈ ಪಂದ್ಯ ಸೇರಿದಂತೆ 2020ರ ಅಂಡರ್ 19 ವಿಶ್ವಕಪ್‍ನಲ್ಲಿ ಯಶಸ್ವಿ ಜೈಸ್ವಾಲ್ ಒಟ್ಟು 400 ರನ್ ಗಳಿಸಿದ್ದಾರೆ. 2018ರ ಅಂಡರ್ 19 ವಿಶ್ವಕಪ್‍ನಲ್ಲಿ 372 ರನ್ ಗಳಿಸಿದ್ದ ಶುಭಮನ್ ಗಿಲ್ ಮೂರನೇ ಸ್ಥಾನಕ್ಕೆ ಕುಸಿದಿದ್ದಾರೆ. ರನ್ ದಾಖಲೆಯ ಪಟ್ಟಿಯಲ್ಲಿ ಶಿಖರ್ ಧವನ್ ಅಗ್ರಸ್ಥಾನದಲ್ಲಿದ್ದಾರೆ. ಅವರು 2004ರ ಅಂಡರ್ 19 ವಿಶ್ವಕಪ್‍ನಲ್ಲಿ 505 ರನ್ ಗಳಿಸಿದ್ದರು. ಉಳಿದಂತೆ ಸರ್ಫರಾಜ್ ಖಾನ್ 2016ರ ಅಂಡರ್ 19 ವಿಶ್ವಕಪ್‍ನಲ್ಲಿ 355 ರನ್ ಹಾಗೂ ಚೇತೇಶ್ವರ್ 2006ರ ಅಂಡರ್ 19 ವಿಶ್ವಕಪ್‍ನಲ್ಲಿ 349 ರನ್ ದಾಖಲಿಸಿದ್ದಾರೆ.

  • ರಹಾನೆ, ಶುಭಮನ್ ಏಕದಿನಕ್ಕೆ ಆಯ್ಕೆ ಆಗದ್ದು ಅಶ್ಚರ್ಯ ತಂದಿದೆ – ಗಂಗೂಲಿ

    ರಹಾನೆ, ಶುಭಮನ್ ಏಕದಿನಕ್ಕೆ ಆಯ್ಕೆ ಆಗದ್ದು ಅಶ್ಚರ್ಯ ತಂದಿದೆ – ಗಂಗೂಲಿ

    ನವದೆಹಲಿ: ಮುಂದಿನ ತಿಂಗಳು ವೆಸ್ಟ್ ಇಂಡೀಸ್ ವಿರುದ್ಧ ನಡೆಯಲಿರುವ ಮೂರು ಪಂದ್ಯಗಳ ಏಕದಿನ ಸರಣಿಗೆ ಭಾರತದ ತಂಡದಲ್ಲಿ ಅಜಿಂಕ್ಯ ರಹಾನೆ ಮತ್ತು ಶುಭಮನ್ ಗಿಲ್ ಆಯ್ಕೆ ಆಗದ್ದಕ್ಕೆ ಟೀಂ ಇಂಡಿಯಾ ಮಾಜಿ ನಾಯಕ ಸೌರವ್ ಗಂಗೂಲಿ ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.

    ಆಗಸ್ಟ್ 2 ಭಾರತ, ವೆಸ್ಟ್ ಇಂಡೀಸ್ ವಿರುದ್ಧ ಮೂರು ಮಾದರಿಯ ಸರಣಿಯನ್ನು ಆಡಲು ತೆರಳಲಿದ್ದು, ಆಗಲೇ ಎಂಎಸ್‍ಕೆ ಪ್ರಸಾದ್ ಅವರ ನೇತೃತ್ವದ ಆಯ್ಕೆ ಸಮಿತಿಯೂ ಆಟಗಾರರನ್ನು ಕಳೆದ ಭಾನುವಾರ ಆಯ್ಕೆ ಮಾಡಿದೆ.

    ಈ ವಿಚಾರವಾಗಿ ಇಂದು ಟ್ವೀಟ್ ಮಾಡಿರುವ ಮಾಜಿ ನಾಯಕ ಸೌರವ್ ಗಂಗೂಲಿ ಅವರು ಏಕದಿನ ತಂಡದಲ್ಲಿ ಅಜಿಂಕ್ಯ ರಹಾನೆ ಮತ್ತು ಯುವ ಆಟಗಾರ ಶುಭಮನ್ ಗಿಲ್ ಇಲ್ಲದಿರವುದಕ್ಕೆ ಆಶ್ಚರ್ಯ ವ್ಯಕ್ತಪಡಿಸಿದ್ದಾರೆ “ಎಲ್ಲಾ ಮಾದರಿಯಲ್ಲೂ ಆಡಬಲ್ಲ ಅನೇಕ ಆಟಗಾರರು ತಂಡದಲ್ಲಿ ಇದ್ದಾರೆ. ಆದರೆ ಅಜಿಂಕ್ಯ ರಹಾನೆ ಮತ್ತು ಶುಭಮನ್ ಗಿಲ್ ಏಕದಿನ ತಂಡದಲ್ಲಿ ಇಲ್ಲದಿರುವುದು ಆಶ್ಚರ್ಯ” ಎಂದು ಬರೆದುಕೊಂಡಿದ್ದಾರೆ.

    ಜೊತೆಗೆ ಬಿಸಿಸಿಐನ್ನು ಟ್ಯಾಗ್ ಮಾಡಿ ಇನ್ನೊಂದು ಟ್ವೀಟ್ ಮಾಡಿದ್ದು, ಭಾರತದ ಆಯ್ಕೆ ಸಮಿತಿಯೂ ಆಟಗಾರರ ಲಯ ಮತ್ತು ಆತ್ಮವಿಶ್ವಾಸ ನೋಡಿಕೊಂಡು ಎಲ್ಲಾ ಮಾದರಿಯ ಪಂದ್ಯಗಳಿಗೂ ಒಂದೇ ಆಟಗಾರರನ್ನು ಆಯ್ಕೆ ಮಾಡುವ ಸಮಯ ಬಂದಿದೆ. ಭಾರತದಲ್ಲಿ ಕೆಲ ಆಟಗಾರರು ಮಾತ್ರ ಎಲ್ಲಾ ಸ್ವರೂಪಗಳಲ್ಲಿ ಆಡುತ್ತಿದ್ದಾರೆ. ದೊಡ್ಡ ದೊಡ್ಡ ತಂಡಗಳು ಸ್ಥಿರ ಆಟಗಾರರನ್ನು ಹೊಂದಿರಬೇಕು. ಈ ಆಯ್ಕೆ ಎಲ್ಲರನ್ನು ಸಂತೋಷಪಡಿಸುವುದರ ಬದಲು ದೇಶಕ್ಕಾಗಿ ಮತ್ತು ಸ್ಥಿರ ಪ್ರದರ್ಶನಕ್ಕಾಗಿ ಇರಬೇಕು ಎಂದು ಬರೆದುಕೊಂಡಿದ್ದಾರೆ.

    ವೆಸ್ಟ್ ಇಂಡೀಸ್ ವಿರುದ್ಧ ನಡೆಯಲಿರುವ ಟಿ-20, ಏಕದಿನ ಮತ್ತು ಟೆಸ್ಟ್ ಪಂದ್ಯಗಳ ಸರಣಿಗೆ ಭಾರತ ತಂಡಗಳನ್ನು ಭಾನುವಾರ ಪ್ರಕಟಿಸಿದೆ. ಆದರೆ ಭಾರತ ಎ ಮತ್ತು ವೆಸ್ಟ್ ಇಂಡೀಸ್ ಎ ನಡುವೆ ಇತ್ತೀಚೆಗೆ ಮುಕ್ತಾಯಗೊಂಡ ಐದು ಏಕದಿನ ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ತೋರಿದ್ದ ಶುಭಮನ್ ಗಿಲ್ ಅವರನ್ನು ಏಕದಿನ ತಂಡದಿಂದ ಕೈಬಿಟ್ಟ ಬಗ್ಗೆ ಅನೇಕ ಮಾಜಿ ಆಟಗಾರರು ಅಸಮಾಧಾನ ವ್ಯಕ್ತಪಡಿಸಿದರು.

    ಇದರ ಜೊತೆ ಭಾರತ ತಂಡದಲ್ಲಿ ನಾಲ್ಕನೇ ಕ್ರಮಾಂಕದಲ್ಲಿ ಯಾವ ಆಟಗಾರರ ಆಡಬೇಕು ಎಂಬ ಗೊಂದಲದ ನಡುವೇ ಬಿಸಿಸಿಐನ ಮಾಜಿ ಕಾರ್ಯದರ್ಶಿ ಸಂಜಯ್ ಜಗದಾಳೆ ಅವರು ಏಕದಿನ ತಂಡದಲ್ಲಿ 4ನೇ ಕ್ರಮಾಂಕಕ್ಕೆ ಅಜಿಂಕ್ಯ ರಹಾನೆ ಅವರು ಸೂಕ್ತ ಎಂದು ಹೇಳಿದ್ದರು.

    ಈ ಎಲ್ಲಾ ಗೊಂದಲಗಳ ನಡುವೇ ವೆಸ್ಟ್ ಇಂಡೀಸ್ ಪ್ರವಾಸಕ್ಕೆ ಭಾರತ ತಂಡ ಪ್ರಕಟಗೊಂಡಿದ್ದು ತಂಡಗಳು ಇಂತಿವೆ.

    ಟೆಸ್ಟ್ ತಂಡ:
    ವಿರಾಟ್ ಕೊಹ್ಲಿ (ನಾಯಕ) ರೋಹಿತ್ ಶರ್ಮಾ (ಉಪನಾಯಕ), ಅಜಿಂಕ್ಯ ರಹಾನೆ, ಮಯಾಂಕ್ ಅಗರ್ವಾಲ್, ಕೆ. ಎಲ್.ರಾಹುಲ್, ಚೇತೇಶ್ವರ ಪೂಜಾರ, ಹನುಮ ವಿಹಾರಿ, ರಿಷಬ್ ಪಂತ್ (ವಿಕೆಟ್ ಕೀಪರ್), ವೃದ್ಧಿಮಾನ್ ಸಹಾ, ಆರ್ ಅಶ್ವಿನ್, ರವೀಂದ್ರ ಜಡೇಜಾ, ಕುಲದೀಪ್ ಯಾದವ್, ಇಶಾಂತ್ ಶರ್ಮಾ, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ ಹಾಗೂ ಉಮೇಶ್ ಯಾದವ್.

    ಏಕದಿನ ತಂಡ:
    ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ (ಉಪನಾಯಕ), ಶಿಖರ್ ಧವನ್, ಕೆ.ಎಲ್.ರಾಹುಲ್, ಶ್ರೇಯಸ್ ಐಯ್ಯರ್, ಮನೀಶ್ ಪಾಂಡೆ, ರಿಷಬ್ ಪಂತ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಕುಲದೀಪ್ ಯಾದವ್, ಯಜುವೇಂದ್ರ ಚಹಲ್, ಕೇದಾರ್ ಜಾಧವ್, ಮೊಹಮ್ಮದ್ ಶಮಿ, ಭುವನೇಶ್ವರ್ ಕುಮಾರ್, ಖಲೀಲ್ ಅಹ್ಮದ್ ಹಾಗೂ ನವದೀಪ್ ಸೈನಿ.

    ಟಿ-20 ತಂಡ:
    ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ (ಉಪನಾಯಕ), ಶಿಖರ್ ಧವನ್, ಕೆ.ಎಲ್.ರಾಹುಲ್, ಶ್ರೇಯಸ್ ಐಯ್ಯರ್, ಮನೀಶ್ ಪಾಂಡೆ, ರಿಷಬ್ ಪಂತ್ (ವಿಕೆಟ್ ಕೀಪರ್), ಕೃಣಾಲ್ ಪಾಂಡ್ಯ, ರವೀಂದ್ರ ಜಡೇಜ, ವಾಷಿಂಗ್ಟನ್ ಸುಂದರ್, ರಾಹುಲ್ ಚಹರ್, ಭುವನೇಶ್ವರ್ ಕುಮಾರ್, ಖಲೀಲ್ ಅಹ್ಮದ್, ದೀಪಕ್ ಚಹರ್ ಹಾಗೂ ನವದೀಪ್ ಸೈನಿ.