Tag: Siddaganga Shri

  • ಸಿದ್ದಗಂಗಾ ಆಸ್ಪತ್ರೆಯಿಂದ ಶ್ರೀಗಳ ಹೆಲ್ತ್ ಬುಲೆಟಿನ್ ಬಿಡುಗಡೆ

    ಸಿದ್ದಗಂಗಾ ಆಸ್ಪತ್ರೆಯಿಂದ ಶ್ರೀಗಳ ಹೆಲ್ತ್ ಬುಲೆಟಿನ್ ಬಿಡುಗಡೆ

    ತುಮಕೂರು: ಸಿದ್ದಗಂಗಾ ಆಸ್ಪತ್ರೆಯ ವೈದ್ಯ ಡಾ. ಪರಮೇಶ್ ಇಂದು ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಗಳ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದಾರೆ.

    ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಡಾ.ಪರಮೇಶ್, ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ. ಎಡ ಶ್ವಾಸಕೋಶದಿಂದ 250 ಎಂ.ಎಲ್ ಹಾಗೂ ಬಲ ಶ್ವಾಸಕೋಶದಿಂದ 400 ಎಂ.ಎಲ್ ನೀರನ್ನು ಹೊರಕ್ಕೆ ತೆಗೆಯಲಾಗಿದೆ. ಅಲ್ಲದೆ ಶ್ರೀಗಳ ದೇಹದಲ್ಲಿನ ಪ್ರೋಟೀನ್ ಅಂಶ ಕೂಡಾ 2.6 ಗ್ರಾಂ ನಿಂದ 3 ಗ್ರಾಂ ಗೆ ಏರಿಕೆಯಾಗಿದೆ ಎಂದು ತಿಳಿಸಿದರು.

    ಶನಿವಾರ ರಾತ್ರಿ ಶ್ರೀಗಳಿಗೆ ಲೋ ಬಿಪಿಯಾಗಿದ್ದು, ಡಾ.ರೇಲಾ ಹಾಗೂ ಡಾ.ರವೀಂದ್ರರ ಮಾರ್ಗದರ್ಶನದಂತೆ ಚಿಕಿತ್ಸೆ ನೀಡಲಾಗಿತ್ತು. ಈಗ ರಕ್ತದೊತ್ತಡ ಸ್ಥಿರವಾಗಿದೆ. ಆದರೆ ಶ್ವಾಸಕೋಶದ ಸೋಂಕು ನಿನ್ನೆ ತನಕ ಪ್ರತಿದಿನ ಕಡಿಮೆಯಾಗುತಿತ್ತು. ಆದರೆ ಇಂದು ಕಡಿಮೆಯಾಗಿಲ್ಲ. ನಿನ್ನೆ ಎಷ್ಟಿತ್ತೋ ಅಷ್ಟೆ ಇದೆ. ಹಾಗಾಗಿ ಮತ್ತೆ ಸೋಂಕು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಡಾ. ಪರಮೇಶ್ ಸ್ಪಷ್ಟಪಡಿಸಿದ್ದಾರೆ.

    ಕಳೆದ ಮೂರು ದಿನಗಳ ಹಿಂದೆ ಡಾ.ಸುಬ್ರಾ ಅವರ ಸಲಹೆಯಂತೆ ಶ್ರೀಗಳಿಗೆ ಆಂಟಿಬಯೋಟಿಕ್ ಬದಲಾವಣೆ ಮಾಡಲಾಗಿತ್ತು. ಇನ್ನೂ ನಾಲ್ಕು ದಿನಗಳ ಕಾಲ ಆಂಟಿಬಯೋಟಿಕ್ ನೀಡಲಾಗುತ್ತೆ ಆಗ ಸೋಂಕು ಕಡಿಮೆಯಾಗುತ್ತಾ ಅಂತ ಕಾದು ನೋಡಬೇಕಿದೆ. ಸಂಜೆ ವೇಳೆಗೆ ಬಿಜಿಎಸ್ ಗ್ಲೋಬಲ್ ವೈದ್ಯ ಡಾ.ರವೀಂದ್ರ ಸಿದ್ದಗಂಗಾ ಆಸ್ಪತ್ರೆಗೆ ಆಗಮಿಸುತ್ತಾರೆ ಎಂದು ಡಾ.ಪರಮೇಶ್ ಮಾಹಿತಿ ನೀಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ನಡೆದಾಡುವ ದೇವರ ಆರೋಗ್ಯದಲ್ಲಿ ಚೇತರಿಕೆ

    ನಡೆದಾಡುವ ದೇವರ ಆರೋಗ್ಯದಲ್ಲಿ ಚೇತರಿಕೆ

    ತುಮಕೂರು: ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ಡಾ. ಪರಮೇಶ್ ನೇತೃತ್ವದಲ್ಲಿ ಸಿದ್ದಗಂಗಾ ಮಠದಲ್ಲಿಯೇ ಶ್ರೀಗಳಿಗೆ ಚಿಕಿತ್ಸೆ ಮುಂದುವರಿಸಲಾಗುತ್ತಿದೆ.

    ಡಾ. ಪರಮೇಶ್ ನೇತೃತ್ವದಲ್ಲಿ ಸಿದ್ದಗಂಗಾ ಹಳೇ ಮಠದ ಶ್ರೀಗಳ ಕೊಠಡಿಯಲ್ಲಿಯೇ ಶ್ವಾಸಕೋಶದ ಸೋಂಕಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಈ ಮಧ್ಯ ಸಿದ್ದಗಂಗಾ ಮಠಕ್ಕೆ ಬಿಜಿಎಸ್ ಆಸ್ಪತ್ರೆ ವೈದ್ಯ ಡಾ.ರವೀಂದ್ರ ಅವರು ಆಗಮಿಸುವ ಸಾಧ್ಯತೆ ಇದೆ. ಶ್ರೀಗಳ ಆರೋಗ್ಯ ವಿಚಾರಿಸಲು ಮಧ್ಯಾಹ್ನದ ವೇಳೆ ಡಾ. ರವೀಂದ್ರ ಮಠಕ್ಕೆ ಬರಲಿದ್ದಾರೆ ಎನ್ನುವ ಮಾಹಿತಿ ಮೂಲಗಳಿಂದ ತಿಳಿದುಬಂದಿದೆ.

    ಮಂಗಳವಾರದಂದು ಶ್ರೀಗಳ ರಕ್ತ ಪರೀಕ್ಷೆಗಾಗಿ ರಕ್ತ ಮಾದರಿಯನ್ನು ವೈದ್ಯರು ಪಡೆದುಕೊಂಡು ಹೋಗಿದ್ದರು. ಇಂದು ಮಧ್ಯಾಹ್ನದ ಬಳಿಕ ಶ್ರೀಗಳ ಆರೋಗ್ಯ ಸಂಬಂಧ ಸಂಪೂರ್ಣ ಮಾಹಿತಿ ಸಿಗಲಿದೆ. ಸದ್ಯ ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ಇನ್ನಷ್ಟು ಚೇತರಿಕೆ ಕಂಡುಬರುತ್ತಿದೆ. ಭಕ್ತರು ಚಿಂತಿಸುವ ಅಗತ್ಯವಿಲ್ಲ ಎಂದು ಮಠದ ಸದಸ್ಯರು ತಿಳಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ನಡೆದಾಡುವ ದೇವರ ಆರೋಗ್ಯ ವಿಚಾರಿಸಿದ ಪೇಜಾವರ ಶ್ರೀಗಳು

    ನಡೆದಾಡುವ ದೇವರ ಆರೋಗ್ಯ ವಿಚಾರಿಸಿದ ಪೇಜಾವರ ಶ್ರೀಗಳು

    ತುಮಕೂರು: ಸಿದ್ದಗಂಗಾ ಶ್ರೀಗಳು ಆರೋಗ್ಯವಾಗಿದ್ದಾರೆ ಭಕ್ತಾಧಿಗಳು ಆತಂಕ ಪಡುವ ಅವಶ್ಯಕತೆ ಇಲ್ಲ ಎಂದು ಇಂದು ಬೆಳಗ್ಗೆ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ಪೇಜಾವರ ಶ್ರೀಗಳು ಹೇಳಿದರು.

    ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸಿದ್ದಗಂಗಾ ಶ್ರೀಗಳ ಆರೋಗ್ಯ ವಿಚಾರಿಸಿದ್ದೇನೆ. ಅವರನ್ನು ನೋಡಿ ಸಮಾಧಾನವಾಯ್ತು. ಅವರು ಆರೋಗ್ಯವಾಗಿದ್ದಾರೆ. ವೈದ್ಯರ ಬಳಿ ನಾನು ಮಾತನಾಡಿದ್ದೇನೆ ಯಾವುದೇ ಆತಂಕವಿಲ್ಲ. ಶ್ರೀಗಳಿಗೆ ಯಾವುದೇ ತೊಂದರೆಯಾಗುವುದಿಲ್ಲ. ಭಕ್ತಾಧಿಗಳು ಆತಂಕ ಪಡುವ ಅವಶ್ಯಕತೆ ಇಲ್ಲ ಎಂದು ತಿಳಿಸಿದರು.

    ಸಿದ್ದಗಂಗಾ ಶ್ರೀಗಳನ್ನು ನಾನು ನೋಡಿ ಬಂದಿದ್ದೇನೆ. ಅವರು ವಿಶ್ರಾಂತಿಯಲ್ಲಿದ್ದಾರೆ ಹಾಗಾಗಿ ಮಾತನಾಡಿಸಲು ಆಗಲಿಲ್ಲ. ಚಿಕ್ಕ ಶ್ರೀಗಳು ಹಾಗೂ ಮಠದ ಇತರೇ ಸದಸ್ಯರು ಕೂಡ ಶ್ರೀಗಳ ಬಳಿ ಇದ್ದಾರೆ. ಎಲ್ಲರನ್ನೂ ನಾನು ಭೇಟಿ ಮಾಡಿ ಮಾತನಾಡಿದ್ದೇನೆ. ನಡೆದಾಡುವ ದೇವರಿಗೆ ಯಾವುದೇ ತೊಂದರೆಯಿಲ್ಲ ಎಂದು ಪೇಜಾವರ ಶ್ರೀಗಳು ಹೇಳಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮಠದಲ್ಲಿ ಇಷ್ಟಲಿಂಗ ಪೂಜೆ ನೆರವೇರಿಸಿದ ಶತಾಯುಷಿ

    ಮಠದಲ್ಲಿ ಇಷ್ಟಲಿಂಗ ಪೂಜೆ ನೆರವೇರಿಸಿದ ಶತಾಯುಷಿ

    ತುಮಕೂರು: ಚೆನ್ನೈನ ರೇಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ವಾಪಸ್ಸಾಗಿದ್ದ ಸಿದ್ದಗಂಗಾ ಶ್ರೀಗಳು ಇಂದು ವಿಶ್ರಾಂತಿಯಿಂದ ಎದ್ದು ಇಷ್ಟಲಿಂಗ ಪೂಜೆ ನೆರವೇರಿಸಿದ್ದಾರೆ.

    ಚೆನ್ನೈನ ರೇಲಾ ಆಸ್ಪತ್ರೆಯಲ್ಲಿ ಕಳೆದ 13 ದಿನದಿಂದ ಚಿಕಿತ್ಸೆ ಪಡೆಯುತ್ತಿದ್ದ ಸಿದ್ದಗಂಗಾ ಶ್ರೀಗಳು ಗುಣಮುಖರಾಗಿ ಬುಧವಾರ ಶ್ರೀಮಠಕ್ಕೆ ವಾಪಸ್ಸಾಗಿದ್ದರು. ಇಂದು ಮುಂಜಾನೆಯೇ ವಿಶ್ರಾಂತಿಯಿಂದ ಇದ್ದ ಶ್ರೀಗಳು ಸ್ನಾನ ಮುಗಿಸಿ ಬಳಿಕ ಇಷ್ಟಲಿಂಗಕ್ಕೆ ಪೂಜೆ ಸಲ್ಲಿಸಿದ್ದಾರೆ. ಎಂದಿನಂತೆ ಶ್ರೀಗಳು ಇಡ್ಲಿ, ಹಣ್ಣು ಹಂಪಲನ್ನು ಸೇವಿಸಿದ್ದು, ಸಿದ್ದಗಂಗಾ ಆಸ್ಪತ್ರೆ ವೈದ್ಯರು ಶ್ರಿಗಳ ಆರೋಗ್ಯದ ಮೇಲೆ ನಿಗಾವಹಿಸುತ್ತಿದ್ದಾರೆ.

    ಆಸ್ಪತ್ರೆಯಲ್ಲಿಯೇ ಶ್ರೀಗಳಿಗೆ ಇನ್ನೂ ಕೆಲದಿನಗಳ ವಿಶ್ರಾಂತಿ ಅವಶ್ಯಕತೆ ಇದ್ದರೂ ಶ್ರಿಗಳು ಮಠ ಹಾಗೂ ವಿದ್ಯಾರ್ಥಿಗಳನ್ನು ನೋಡುವ ಹಂಬಲ ವ್ಯಕ್ತಪಡಿಸಿದ್ದರು. ಹಾಗಾಗಿ ತುರ್ತಾಗಿ ಶ್ರೀಮಠಕ್ಕೆ ಕರೆದುಕೊಂಡು ಬರಲಾಗಿತ್ತು. ಸಿದ್ದಗಂಗಾ ಶ್ರೀಗಳನ್ನು ಕರೆದುಕೊಂಡು ಬರಲು ಎಲ್ಲಾ ರೀತಿಯ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿತ್ತು. ಆದರಿಂದ ಯಾವುದೇ ತೊಂದರೆ ಇಲ್ಲದೇ ಶ್ರೀಗಳು ಶ್ರೀಮಠಕ್ಕೆ ಬಂದು ತಲುಪಿದ್ದರು.

    ಸ್ವಾಮೀಜಿಗೆ ಶಸ್ತ್ರಚಿಕಿತ್ಸೆ ಮಾಡಿದ ಬಳಿಕ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ಅವರು ಮೊದಲಿನ ತರ ಊಟ, ಪೂಜೆ ಮಾಡುತ್ತಿದ್ದಾರೆ. ಎಂದಿನಂತೆ ತಮ್ಮ ನಿತ್ಯದ ಕೆಲಸಗಳನ್ನು ಹಾಗೂ ಪೂಜೆಗಳನ್ನು ಮುಗಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಇನ್ನೂ ಒಂದು ವಾರ ಸಿದ್ದಗಂಗಾ ಶ್ರೀಗಳಿಗೆ ಐಸಿಯುನಲ್ಲೇ ಚಿಕಿತ್ಸೆ

    ಇನ್ನೂ ಒಂದು ವಾರ ಸಿದ್ದಗಂಗಾ ಶ್ರೀಗಳಿಗೆ ಐಸಿಯುನಲ್ಲೇ ಚಿಕಿತ್ಸೆ

    ಚೆನ್ನೈ: ನಡೆದಾಡುವ ದೇವರು ಶ್ರೀ ಸಿದ್ದಗಂಗಾ ಶ್ರೀಗಳ ಆರೋಗ್ಯ ಚೇತರಿಸಿಕೊಳ್ಳುತ್ತಿದೆ. ನ್ಯೂಟ್ರೀಷನ್‍ಗಳನ್ನು ನೀಡಲಾಗುತ್ತಿದ್ದು ಇನ್ನೂ ಒಂದು ವಾರಗಳ ಕಾಲ ಐಸಿಯುನಲ್ಲೇ ಶ್ರೀಗಳಿಗೆ ಚಿಕಿತ್ಸೆ ನೀಡಲಾಗುತ್ತದೆ ಎಂದು ರೇಲಾ ಆಸ್ಪತ್ರೆಯ ಡಾ. ಪರಮೇಶ್ವರ್ ತಿಳಿಸಿದ್ದಾರೆ.

    ಶ್ರೀಗಳಿಗೆ ಶಸ್ತ್ರಚಿಕಿತ್ಸೆ ಮಾಡಿ ಸುಮಾರು 9 ದಿನಗಳು ಕಳೆದಿದೆ. ಅವರು ಚಿಕಿತ್ಸೆಗೆ ಉತ್ತಮ ರೀತಿಯಲ್ಲಿ ಸ್ಪಂದಿಸುತ್ತಿದ್ದಾರೆ, ಆರೋಗ್ಯದಲ್ಲಿ ಚೇತರಿಕೆ ಕಾಣಿಸುತ್ತಿದೆ. ಎಂದಿನಂತೆ ರಕ್ತನಾಳ ಮೂಲಕವೇ ನ್ಯೂಟ್ರೀಷನ್‍ಗಳನ್ನು ನೀಡಲಾಗುತ್ತಿದೆ. ಶ್ರೀಗಳಿಗೆ ಇನ್ನೂ ಒಂದು ವಾರಗಳ ಕಾಲ ಐಸಿಯುನಲ್ಲೇ ಚಿಕಿತ್ಸೆ ನೀಡಲಾಗುತ್ತದೆ ಎಂದು ಡಾ. ಪರಮೇಶ್ವರ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

    ಸಿದ್ದಗಂಗಾ ಶ್ರೀಗಳಿಗೆ ಯಾವುದೇ ಸೋಂಕು ತಗಲದಂತೆ ನೋಡಿಕೊಳ್ಳಲಾಗುತ್ತಿದೆ. ಉತ್ತಮ ಚಿಕಿತ್ಸೆ ನೀಡಲಾಗುತ್ತಿದೆ. ಶ್ರೀಗಳಿಗೆ ಪ್ರೋಟೀನ್ ಹಾಗೂ ನ್ಯೂಟ್ರಿಷನ್ ಕೊರತೆ ಇದ್ದು, ಸರಿಯಾದ ಪ್ರಮಾಣದಲ್ಲಿ ನ್ಯೂಟ್ರೀಷನ್‍ನನ್ನು ನೀಡಲಾಗುತ್ತಿದೆ. ಈಗ ಶ್ರೀಗಳು ಆರೋಗ್ಯವಾಗಿದ್ದಾರೆ ಎಲ್ಲರೊಡನೆ ಮಾತನಾಡುತ್ತಿದ್ದಾರೆ ಯಾರು ಚಿಂತಿಸುವ ಅಗತ್ಯವಿಲ್ಲ ಎಂದು ಮಾಹಿತಿ ನೀಡಿದ್ದಾರೆ.

    ಶ್ರೀಗಳು ಗುಣಮುಖರಾದ ಮೇಲೆ ಐಸಿಯುನಿಂದಾನೇ ನೇರವಾಗಿ ಡಿಸ್ಚಾರ್ಜ್ ಆಗುವ ಸಾಧ್ಯತೆ ಇದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • 4 ದಿನ ಐಸಿಯುನಲ್ಲೇ ಚಿಕಿತ್ಸೆ- ಮತ್ತಷ್ಟು ಚೇತರಿಸಿಕೊಂಡಿದ್ದಾರೆ ನಡೆದಾಡೋ ದೇವ್ರು

    4 ದಿನ ಐಸಿಯುನಲ್ಲೇ ಚಿಕಿತ್ಸೆ- ಮತ್ತಷ್ಟು ಚೇತರಿಸಿಕೊಂಡಿದ್ದಾರೆ ನಡೆದಾಡೋ ದೇವ್ರು

    ಚೆನ್ನೈ: ಸಿದ್ದಗಂಗಾ ಶ್ರೀಗಳಿಗೆ ಸೋಂಕು ತಾಗಿರುವ ಹಿನ್ನೆಲೆಯಲ್ಲಿ ವಾರ್ಡ್ ನಿಂದ ಮತ್ತೆ ಐಸಿಯುಗೆ ಶಿಫ್ಟ್ ಮಾಡಿ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ ಅಂತಾ ರೇಲಾ ಆಸ್ಪತ್ರೆಯ ವೈದ್ಯ ಡಾ. ಪರಮೇಶ್ವರ್ ತಿಳಿಸಿದ್ದಾರೆ.

    ಮಾಧ್ಯಮದವರ ಜೊತೆ ಮಾತನಾಡಿದ ಅವರು, ಶ್ರೀಗಳಿಗೆ ಸೋಂಕು ತಾಗಿದ್ದರಿಂದ ಅವರನ್ನು ರೇಲಾ ಆಸ್ಪತ್ರೆಯಲ್ಲಿ ಐಸಿಯುನಲ್ಲಿ ದಾಖಲಿಸಲಾಗಿದೆ. ಗುರುವಾರದಂದು ಶ್ರೀಗಳ ಆರೋಗ್ಯದಲ್ಲಿ ಚೇತರಿಕೆಯಾಗಿದ್ದರಿಂದ ಅವರನ್ನು ವಾರ್ಡ್ ಗೆ ಶಿಫ್ಟ್ ಮಾಡಲಾಗಿತ್ತು. ಆದರೆ ಈಗ ಸೋಂಕು ತಗಲಿರುವ ಪರಿಣಾಮ ಅವರನ್ನು ಮತ್ತೆ ಐಸಿಯುಗೆ ಶಿಫ್ಟ್ ಮಾಡಲಾಗಿದೆ. ಹಾಗೆಯೇ ಇನ್ನು 4 ದಿನಗಳ ಕಾಲ ಐಸಿಯುನಲ್ಲೇ ಚಿಕಿತ್ಸೆ ಮುಂದುವರಿಯುತ್ತದೆ. ಅಲ್ಲದೆ ಸದ್ಯ ಶ್ರೀಗಳು ಐಸಿಯುನಲ್ಲಿ ಮತ್ತಷ್ಟು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.

    ಸಿದ್ದಗಂಗಾ ಶ್ರೀಗಳನ್ನು ನೋಡಲು ಬರುವವರ ಸಂಖ್ಯೆಯಲ್ಲಿ ಹೆಚ್ಚಳವಾದ್ದರಿಂದ ಅವರಿಗೆ ಸೋಂಕು ತಗುಲಿದೆ. ಇದು ಸೂಕ್ಷ್ಮವಾದ ಸಂಗತಿ ಹೀಗೆ ಸೋಂಕು ಹೆಚ್ಚಾದರೆ ಶ್ರೀಗಳಿಗೆ ತೊಂದರೆಯಾಗುತ್ತದೆ. ಆದ್ದರಿಂದ ಡಾ. ರೇಲಾ ಅವರು ಶ್ರೀಗಳನ್ನು ಐಸಿಯುಗೆ ಶಿಫ್ಟ್ ಮಾಡಿ ಚಿಕಿತ್ಸೆ ನೀಡಲು ನಿರ್ಧರಿಸಿದರು. ಈಗ ಯಾವುದೇ ರೀತಿಯ ಭಯಪಡುವ ಅಗತ್ಯವಿಲ್ಲ. ಶ್ರೀಗಳು ಕ್ಷೇಮವಾಗಿದ್ದಾರೆ. ಬಹುಶಃ ಮುಂದಿನ ವಾರ ಶ್ರೀಗಳನ್ನು ಡಿಸ್ಚಾರ್ಜ್ ಮಾಡುಬಹುದು ಎಂದು ಅವರು ತಿಳಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv