ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಇಂದು ತಮ್ಮ 15 ನೇ ಬಜೆಟ್ (Karnataka Budget 2024) ಮಂಡನೆ ಮಾಡಿದ್ದು, ಈ ಬಾರಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಪಶುವೈದ್ಯಕೀಯ ಕಾಲೇಜು ಕಾರ್ಯಾರಂಭಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದರು.
ರಾಜ್ಯದ ಆಯ್ದ 20 ತಾಲೂಕುಗಳ ಪಶು ಆಸ್ಪತ್ರೆಗಳನ್ನು ಪಾಲಿಕ್ಲಿನಿಕ್‌ಗಳನ್ನಾಗಿ ಮೇಲ್ದರ್ಜೆಗೇರಿಸಲು 10 ಕೋಟಿ ರೂ. ಅನುದಾನ ನೀಡಲಾಗುವುದು. ಇನ್ನು ದುಸ್ಥಿತಿಯಲ್ಲಿರುವ 200 ಪಶುವೈದ್ಯ ಸಂಸ್ಥೆಗಳಿಗೆ 100 ಕೋಟಿ ರೂ. ವೆಚ್ಚದಲ್ಲಿ ನೂತನ ಕಟ್ಟಡ ನಿರ್ಮಾಣ ಮಾಡುವ ಗುರಿ ಇದೆ ಎಂದು ಸಿಎಂ ತಿಳಿಸಿದರು.
ವಲಸೆ ಕುರಿಗಾರರ ಅಭ್ಯುದಯಕ್ಕೆ ಕ್ರಮ ಹಾಗೂ ಅವರ ಮೇಲಿನ ಶೋಷಣೆ ಮತ್ತು ದೌರ್ಜನ್ಯ ತಡೆಯಲು ‘ಕುರಿಗಾಹಿಗಳ ಮತ್ತು ಸ್ವತ್ತುಗಳ ಮೇಲೆ ದೌರ್ಜನ್ಯ ತಡೆ ಕಾಯ್ದೆ’ ಜಾರಿಗೊಳಿಸುವ ಯೋಜನೆಯಿಂದೆ ಎಂದರು.
ಬೆಂಗಳೂರು: ರಾಜ್ಯದಲ್ಲಿ ಪರಿಷ್ಕೃತ ಪ್ರವಾಸೋದ್ಯಮ ನೀತಿ 2024-29 ಅನ್ನು ಜಾರಿಗೆ ತರಲು ಕ್ರಮಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಇಂದು ತಮ್ಮ ಬಜೆಟ್ (Karnataka Budget 2024) ಮಂಡನೆಯ ವೇಳೆ ಹೇಳಿದ್ದಾರೆ.
ಕೊಪ್ಪಳ ಜಿಲ್ಲೆಯ ಅಂಜನಾದ್ರಿ ಬೆಟ್ಟ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಪ್ರವಾಸಿ ಸೌಲಭ್ಯ ಅಭಿವೃದ್ಧಿಪಡಿಸಲು 100 ಕೋಟಿ ರೂ. ಅನುದಾನ ನೀಡಲಾಗುವುದು. ರಾಜ್ಯದ 10 ಪ್ರವಾಸಿ ತಾಣಗಳಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಕೇಬಲ್ ಕಾರ್/ರೋಪ್ ವೇ ಸೌಲಭ್ಯ ಒದಗಿಸಲಾಗುವುದು ಎಂದಿದ್ದಾರೆ. ಇದನ್ನೂ ಓದಿ: ಮಂಗಳೂರಿಗೆ ವಾಟರ್ ಮೆಟ್ರೋ?
ಕಲಬುರಗಿಯಲ್ಲಿ ವಚನ ಮಂಟಪ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗುವುದು. ಗೋಕಾಕ್ ಜಲಪಾತ ಪ್ರೇಕ್ಷಣಿಯ ಸ್ಥಳವಾಗಿ ಅಭಿವೃದ್ಧಿಪಡಿಸಲಾಗುವುದು. ರಾಜ್ಯದ 530 ಸಂರಕ್ಷಿತ ಸ್ಮಾರಕಗಳನ್ನ 3ಡಿ ಲೇಸರ್ ಸ್ಕ್ಯಾನಿಂಗ್ ಮೂಲಕ ಡಿಜಿಟಲ್ ದಾಖಲೀಕರಣ, ಕೆಎಸ್‍ಟಿಡಿಸಿ ವತಿಯಿಂದ ಬಾಗಲಕೋಟೆ ಜಿಲ್ಲೆ ಐಹೊಳೆಯಲ್ಲಿ ಸುಸಜ್ಜಿತ ಹೋಟೆಲ್ ನಿರ್ಮಾಣ ಮಾಡುವ ಗುರಿ ಇದೆ ಎಂದು ತಿಳಿಸಿದರು.
ಬೀದರ್ ಮತ್ತು ವಿಜಯಪುರಲ್ಲಿ ಪುರಾತನ ನೀಡು ಸರಬರಾಜು ವ್ಯವಸ್ಥೆ ಪುನಶ್ಚೇತನಕ್ಕೆ 15 ಕೋಟಿ ಅನುದಾನ ನೀಡುವುದಾಗಿ ಸಿಎಂ ಘೋಷಣೆ ಮಾಡಿದ್ದಾರೆ. ಜೊತೆಗೆ ಬಂಡೀಪುರ, ದಾಂಡೇಲಿ, ಕಬಿನಿಯಲ್ಲಿ 25 ಕೋಟಿ ವೆಚ್ಚದಲ್ಲಿ ಇಂಟರ್‍ಪ್ರಿಟೇಷನ್ ಸೆಂಟರ್ ಹಾಗೂ ಶ್ರೀ ರೇಣುಕಾ ಯಲ್ಲಮ್ಮ ಕ್ಷೇತ್ರ ಪ್ರವಾಸೋದ್ಯಮ ಅಭಿವರದ್ಧಿ ಮಂಡಳಿ ರಚನೆಗೆ ಅಧಿಸೂಚನೆ ಹೊರಡಿಸಲಾಗುವುದು ಎಂದು ಸಿಎಂ ಹೇಳಿದರು.
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಈಗ ಪೆನ್‌ಡ್ರೈವ್ ಪಾಲಿಟಿಕ್ಸ್ (Pendrive Politics) ಜೋರಾಗಿದೆ. ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ (HD Kumaraswamy) ರಾಜ್ಯ ಸರ್ಕಾರದ ವಿರುದ್ಧ ವಿವಿಧ ಇಲಾಖೆಗಳ ಅಕ್ರಮದ ಬಗ್ಗೆ ಆರೋಪ ಮಾಡ್ತಿದ್ದಾರೆ.
ಇದರ ನಡುವೆ ಈವರೆಗೆ ಒಂದು ಲೆಕ್ಕ ಸೋಮವಾರದಿಂದ ಅಸಲಿ ಲೆಕ್ಕ ಶುರು ಎಂಬಂತಾಗಿದೆ. ಪೆನ್‌ಡ್ರೈವ್ ಮೂಲಕ ನೆಕ್ಸ್ಟ್ ಪಾಲಿಟಿಕ್ಸ್ ಡ್ರೈವ್ ಶುರುವಾದಂತಿದೆ. 4 ಇಲಾಖೆಗಳ ವರ್ಗಾವಣೆ ವಿಚಾರಗಳ ಬಗ್ಗೆ ಹೆಚ್‌ಡಿಕೆ ತಲಾಶ್ ಆರಂಭಿಸಿದ್ದಾರೆ. ಹುಡುಕಲು ಹೋದ ಹೆಚ್‌ಡಿಕೆಗೆ ಸಿಕ್ಕಿದ್ದೇನು..? ಬಿಟ್ಟಿದ್ದೇನು..? ಎಂಬ ಚರ್ಚೆಗಳು ಶುರುವಾಗಿದೆ. ಇದನ್ನೂ ಓದಿ: ಮಾನನಷ್ಟ ಪ್ರಕರಣದಲ್ಲಿ ರಾಹುಲ್‌ಗೆ ಹಿನ್ನಡೆ – ಮುಂದಿನ ರಾಜಕೀಯ ಭವಿಷ್ಯ ಏನು?
ಸದನದಲ್ಲಿ ಬಿಜೆಪಿ (BJP) ಸಹಕಾರದೊಂದಿಗೆ ಸಿದ್ದರಾಮಯ್ಯ (Siddaramaiah) ಟೀಂ ಟಾರ್ಗೆಟ್ ಮಾಡಿದ್ದಾರೆ ಎನ್ನಲಾಗ್ತಿದೆ. ಹೆಚ್‌ಡಿಕೆ ನಂಬಿಕಸ್ಥ ಅಧಿಕಾರಿಗಳೇ ಪೆನ್‌ಡ್ರೈವ್ ಅಸಲಿಗೆ ಕಾರಣ ಎಂಬ ಚರ್ಚೆ ಶುರುವಾಗಿದೆ. 4 ಇಲಾಖೆಗಳಲ್ಲಿ ಮೂವರು ಪ್ರಭಾವಿಗಳ ಸಂಭಾಷಣೆ ಬಗ್ಗೆ ಮಾಹಿತಿ ಸಂಗ್ರಹ ಮಾಡಿದ್ದಾರೆ. ಪೆನ್‌ಡ್ರೈವ್ ಪ್ರಮುಖ ಅಧಿಕಾರಿಗಳ ವಿಚಾರದಲ್ಲಿ ಸಂಭಾಷಣೆ ನಡೆಸಿರುವ ಆಡಿಯೋ ಇದೆ ಎನ್ನಲಾಗಿದೆ. ಇದನ್ನೂ ಓದಿ: ರಾಹುಲ್ ಗಾಂಧಿಗೆ ಹಿನ್ನಡೆ- ಮಾನನಷ್ಟ ಪ್ರಕರಣದಲ್ಲಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಜಾ
ಈ ಆಡಿಯೋಗಳನ್ನೇ ಮುಂದಿಟ್ಟುಕೊಂಡು ಹೆಚ್‌ಡಿಕೆ ಪೆನ್‌ಡ್ರೈವ್ ಬ್ರಹ್ಮಾಸ್ತ್ರ ಹೂಡಲಿದ್ದಾರೆ. ಬಜೆಟ್ ಬಳಿಕ ಅಸಲಿ ಆಟ ಶುರುವಾಗಲಿದೆ ಅಂತಾ ಆಪ್ತರ ಬಳಿ ಕುಮಾರಸ್ವಾಮಿ ಹೇಳಿಕೊಂಡಿದ್ದಾರಂತೆ. ಹಾಗಾಗಿ ಮುಂದಿನವಾರ ರಾಜ್ಯ ರಾಜಕಾರಣದಲ್ಲಿ ರಣರೋಚಕ ಕದನ ಸಾಧ್ಯತೆ ಇದೆ.
ಬೆಂಗಳೂರು: 2023-24ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಬೆಂಗಳೂರು ನಗರಾಭಿವೃದ್ಧಿಗೆ ಹಲವು ಅನುದಾನ ಪ್ರಕಟಿಸಿದ್ದಾರೆ.
ಭಾಷಣದಲ್ಲಿ ಹೇಳಿದ್ದೇನು?
ಬಜೆಟ್ ಮಂಡಿಸಿದ ಸಿಎಂ, ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ ನಗರಾಭಿವೃದ್ಧಿಗೆ ವಿಶೇಷ ಆದ್ಯತೆ ನೀಡಿ ಪ್ರಾರಂಭಿಸಿದ ನಗರೋತ್ಥಾನ, ಇಂದಿರಾ ಕ್ಯಾಂಟೀನ್ ನಂತಹ ಹಲವಾರು ಜನಪರ ಯೋಜನೆಗಳನ್ನ ನಿರ್ಲಕ್ಷಿಸುವ ಮೂಲಕ ಹಿಂದಿನ ಸರ್ಕಾರದ ಅವಧಿಯಲ್ಲಿ ನಗರಗಳ ಅಭಿವೃದ್ಧಿಯು (Bengaluru Development) ಕುಂಠಿತಗೊಂಡಿರುತ್ತದೆ. ಅಲ್ಲದೇ, 2022-23ನೇ ಸಾಲಿಗೆ 45,000 ಕೋಟಿ ರೂ.ಗಳ ಅಪೂರ್ಣ ಕಾಮಗಾರಿಗಳ ಮತ್ತು ಬಾಕಿ ಮೊತ್ತದ ಹೊರೆಯನ್ನು ಹಿಂದಿನ ಸರ್ಕಾರ ನಮ್ಮ ಸರ್ಕಾರದ ಮೇಲೆ ಹೊರಿಸಿರುತ್ತದೆ. ಪ್ರಸ್ತುತ ಇರುವ ಆಯವ್ಯಯದ ಮಿತಿಯಲ್ಲಿ ಬಾಕಿ ಹೊರೆಯನ್ನು ತೀರಿಸಲು ಕನಿಷ್ಠ 6-8 ವರ್ಷಗಳ ಕಾಲಾವಕಾಶದ ಅಗತ್ಯತೆ ಇರುತ್ತದೆ. ಇದು ಅವರ ಅಶಿಸ್ತು ಮತ್ತು ಅವಿವೇಚನೆಗೆ ಹಿಡಿದ ಕನ್ನಡಿಯಾಗಿರುತ್ತದೆ. ಆದಾಗ್ಯೂ, ನಮ್ಮ ಸರ್ಕಾರ ನಗರಗಳ ಅಭಿವೃದ್ಧಿಗಾಗಿ ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಿದೆ.
ಬೆಂಗಳೂರು ನಗರದ ಮೂಲಸೌಕರ್ಯ ಅಭಿವೃದ್ಧಿಗಾಗಿ ಅಮೃತ ನಗರೋತ್ಥಾನ, ಹೈಡೆನ್ಸಿಟಿ ಕಾರಿಡಾರ್, ವೈಟ್ ಟಾಪಿಂಗ್ ರಸ್ತೆ, ತ್ಯಾಜ್ಯ ನಿರ್ವಹಣೆ, ರಾಜಕಾಲುವೆಗಳ ತೆರವು ಮತ್ತು ದುರಸ್ತಿ, ರಸ್ತೆ ಗುಂಡಿ ಮುಚ್ಚುವುದು ಮತ್ತಿತರ ಹಲವಾರು ಪ್ರಗತಿಯಲ್ಲಿರುವ ಯೋಜನೆಗಳಿಗೆ ಪ್ರಸ್ತುತ 12,000 ಕೋಟಿ ರೂ.ಗಳಿಗೂ ಹೆಚ್ಚು ಮೊತ್ತ ವ್ಯಯಿಸಲಾಗುತ್ತಿದೆ. ಇದಲ್ಲದೇ ಸಂಚಾರ ದಟ್ಟಣೆ ನಿವಾರಣೆಗಾಗಿ 30,000 ಕೋಟಿ ರೂ.ಗಳಿಗೂ ಹೆಚ್ಚಿನ ಅಂದಾಜು ವೆಚ್ಚದಲ್ಲಿ ನಮ್ಮ ಮೆಟ್ರೋ ಹಾಗೂ ಬೆಂಗಳೂರು ಉಪನಗರ ರೈಲು ಯೋಜನೆ ಜಾರಿಗೊಳಿಸಲಾಗುತ್ತಿದೆ. ಈ ಯೋಜನೆಗಳು ಪೂರ್ಣಗೊಳ್ಳಲು 5 ವರ್ಷಗಳ ಕಾಲಾವಕಾಶದ ಅಗತ್ಯವಿದೆ. ಇಷ್ಟು ಬೃಹತ್ ಮೊತ್ತದ ಕಾಮಗಾರಿಗಳು ಅನುಷ್ಠಾನಗೊಳ್ಳುತ್ತಿದ್ದರೂ ಹಿಂದಿನ ಸರ್ಕಾರದ ಮಿತಿ ಮೀರಿದ ಭ್ರಷ್ಟಾಚಾರ ಹಾಗೂ ಅಸಮರ್ಪಕ ನಿರ್ವಹಣೆಯ ಕಾರಣದಿಂದ ನಗರದ ಮೂಲ ಸೌಕರ್ಯಗಳಲ್ಲಿ ಗಮನಾರ್ಹ ಬದಲಾವಣೆ ಕಂಡು ಬಂದಿರುವುದಿಲ್ಲ.
ʻಬ್ರ್ಯಾಂಡ್ ಬೆಂಗಳೂರುʼ ಪರಿಕಲ್ಪನೆಯು ಬೆಂಗಳೂರು ನಗರದ ನಿವಾಸಿಗಳ ಸುರಕ್ಷತೆ ಹಾಗೂ ಅನುಕೂಲವನ್ನು ಕೇಂದ್ರಬಿಂದುವಾಗಿಸಿದೆ. ಈ ಪರಿಕಲ್ಪನೆಯು ನಗರದ ಸಂಚಾರ ವ್ಯವಸ್ಥೆ, ಪರಿಸರ, ಘನತ್ಯಾಜ್ಯ ನಿರ್ವಹಣೆ, ಸಾರ್ವಜನಿಕ ಸ್ಥಳಗಳ ಸದ್ಬಳಕೆ, ಸಾರ್ವಜನಿಕರ ಆರೋಗ್ಯ, ಪ್ರಾಣಿಗಳ ಆರೋಗ್ಯ, ಜನಸ್ನೇಹಿ ಇ-ಆಡಳಿತ, ನೀರಿನ ಭದ್ರತೆ ಹಾಗೂ ಪ್ರವಾಹ ನಿರ್ವಹಣೆ – ಈ 9 ಸವಾಲುಗಳನ್ನು ಯಶಸ್ವಿಯಾಗಿ ಎದುರಿಸುವ ಮೂಲಕ ಬೆಂಗಳೂರನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಏರಿಸುವುದು ನಮ್ಮ ಗುರಿಯಾಗಿದೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿನ 20 ತ್ಯಾಜ್ಯ ನೀರು ಸಂಸ್ಕರಣಾ ಘಟಕಗಳನ್ನು ಮೇಲ್ದರ್ಜೆಗೇರಿಸಲು 1,411 ಕೋಟಿ ರೂ. ಮೊತ್ತದ ಯೋಜನೆಗಳಿಗೆ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಸಂಪನ್ಮೂಲದಿಂದ ಅನುಷ್ಠಾನಗೊಳಿಸಲು ಅನುಮೋದನೆ ನೀಡಿದ್ದು, ಮಾರ್ಚ್ 2026 ರೊಳಗೆ ಪೂರ್ಣಗೊಳಿಸಲು ಯೋಜಿಸಲಾಗಿದೆ. ಈ ಯೋಜನೆಗಳ ಮೂಲಕ ಬೆಂಗಳೂರಿನಲ್ಲಿ ಸುಸ್ಥಿರ ಜಲ ಮತ್ತು ಪರಿಸರ ಸಂರಕ್ಷಣೆಯಾಗಲಿದೆ.
ನೈಋತ್ಯ ರೈಲ್ವೆ ಇಲಾಖೆಯವರು ಬೈಯ್ಯಪ್ಪನಹಳ್ಳಿ ಪ್ರದೇಶದಲ್ಲಿ ನಿರ್ಮಿಸಿರುವ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಅನ್ನು ತಲುಪಲು ಸರಿಯಾದ ಮೆಟ್ರೋ ಮತ್ತು ರಸ್ತೆಗಳ ಸಂಪರ್ಕ ಇಲ್ಲದೇ ಇರುವುದರಿಂದ ಲಕ್ಷಾಂತರ ಪ್ರಯಾಣಿಕರಿಗೆ ಅನಾನುಕೂಲ ಹಾಗೂ ಸಂಚಾರ ದಟ್ಟಣೆಗೆ ಕಾರಣವಾಗಿದೆ. ಈ ಸಮಸ್ಯೆಯ ನಿವಾರಣೆಗಾಗಿ 263 ಕೋಟಿ ರೂ.ಗಳ ವೆಚ್ಚದಲ್ಲಿ ಒಂದು ಹೊಸ ಮೇಲ್ಸೇತುವೆ ನಿರ್ಮಿಸಲಾಗುವುದು.
ಪದೇ ಪದೇ ದುರಸ್ತಿಗೆ ಮರುಕಳಿಸುವ ವೆಚ್ಚವನ್ನು ತಪ್ಪಿಸಲು ನಗರದ ರಸ್ತೆಗಳನ್ನು ವೈಟ್ ಟ್ಯಾಪಿಂಗ್ ಮಾಡಲು ಕ್ರಿಯಾ ಯೋಜನೆ ರೂಪಿಸಲಾಗಿದೆ. ನಮ್ಮ ಸರ್ಕಾರದಿಂದ 2016-17 2017-18ರಲ್ಲಿ ವೈಟ್ ಟಾಪಿಂಗ್ ರಸ್ತೆಗಳಾಗಿ ಅಭಿವೃದ್ಧಿಪಡಿಸಲಾದ 190 ಕಿ.ಮೀ. ರಸ್ತೆಗಳು ಇಂದಿಗೂ ಅತ್ಯುತ್ತಮ ಸ್ಥಿತಿಯಲ್ಲಿವೆ. ತದನಂತರ, ಹಿಂದಿನ ಸರ್ಕಾರ ಯಾವುದೇ ವೈಟ್ ಟ್ಯಾಪಿಂಗ್ ಯೋಜನೆಯನ್ನು ಕೈಗೊಂಡಿರುವುದಿಲ್ಲ. ಈ ಯೋಜನೆಯನ್ನು ಪುನರಾರಂಭಿಸಿ 2023-24ನೇ ಸಾಲಿನಲ್ಲಿ 800 ಕೋಟಿ ರೂ. ವೆಚ್ಚದಲ್ಲಿ 100 ಕಿ.ಮೀ. ಉದ್ದದ ಮುಖ್ಯ ರಸ್ತೆಗಳನ್ನು ವೈಟ್ ಟಾಸ್ ರಸ್ತೆಗಳಾಗಿ ಅಭಿವೃದ್ಧಿಪಡಿಸಲಾಗುವುದು.
ಬೆಂಗಳೂರು ನಗರದಲ್ಲಿರುವ ಹೆಚ್ಚಿನ ಸಂಚಾರ ದಟ್ಟಣೆಯನ್ನು ಹೊಂದಿರುವ 192 ಕಿ.ಮೀ. ಉದ್ದದ ವಿವಿಧ 12 ಪ್ರಮುಖ ರಸ್ತೆಗಳನ್ನು ಹೈಡೆನ್ಸಿಟಿ ಕಾರಿಡಾರ್‌ಗಳೆಂದು (High Density Corridor) 2016ರಲ್ಲಿ ಗುರುತಿಸಲಾಗಿರುತ್ತದೆ. ಈ ಪೈಕಿ 92 ಕಿ.ಮೀ. ಉದ್ದದ ರಸ್ತೆಗಳನ್ನು ಅಭಿವೃದ್ಧಿಪಡಿಸಲಾಗಿದೆ. 2023-24ನೇ ಸಾಲಿನಲ್ಲಿ 83 ಕಿ.ಮೀ. ಉದ್ದದ ರಸ್ತೆಗಳನ್ನು ರಸ್ತೆಗಳನ್ನು 273 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುವುದು.
ಬೆಂಗಳೂರು ನಗರದಲ್ಲಿ ಹೆಚ್ಚುತ್ತಿರುವ ಸಂಚಾರ ದಟ್ಟಣೆ ನಿವಾರಣೆಗಾಗಿ ರೂಪಿಸಿರುವ ಬೆಂಗಳೂರು ಪೆರಿಫೆರಲ್ ರಿಂಗ್ ರಸ್ತೆ ನಿರ್ಮಾಣ ಪ್ರಕ್ರಿಯೆಯು ಕಳೆದ 15 ವರ್ಷಗಳಿಂದ ನೆನೆಗುದಿಗೆ ಬಿದ್ದಿದೆ. ಈ ಯೋಜನೆಗೆ ಎದುರಾದ ತಾಂತ್ರಿಕ ಅಡಚಣೆಗಳನ್ನು ನಿವಾರಿಸಲು ಸರ್ವೋಚ್ಛ ನ್ಯಾಯಾಲಯದಿಂದ ದಿನಾಂಕ: 25.11.2021 ರಂದು ಅನುಮತಿ ದೊರಕಿದೆ. ಇದೀಗ ನಮ್ಮ ಸರ್ಕಾರವು ಎಲ್ಲಾ ಕಾನೂನಾತ್ಮಕ ಸಮಸ್ಯೆಗಳನ್ನ ಬಗೆಹರಿಸಿಕೊಂಡು ತ್ವರಿತವಾಗಿ ಯೋಜನೆಯನ್ನ ಜಾರಿಗೊಳಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಳೆನೀರು ಸರಾಗವಾಗಿ ಹರಿಯದಿರಲು ರಾಜಕಾಲುವೆಗಳ ಒತ್ತುವರಿ ಪ್ರಮುಖ ಕಾರಣವಾಗಿದ್ದು, ಇದರಿಂದಾಗಿ ಪ್ರವಾಹ ಉಂಟಾಗುವುದಲ್ಲದೆ, ಮಳೆ ಬಂದಾಗ ರಸ್ತೆಗಳಲ್ಲಿ ನೀರು ನಿಂತು, ಮನೆಗಳಿಗೆ ನೀರು ನುಗ್ಗಿ ಅನಾಹುತಗಳು ಸಂಭವಿಸುತ್ತಿವೆ. ಈ ಸಮಸ್ಯೆಯನ್ನು ನಿವಾರಿಸಲು ಕಂದಾಯ ಇಲಾಖೆ ಗುರುತಿಸಿರುವ ಒತ್ತುವರಿಗಳನ್ನು ಆದ್ಯತೆ ಮೇಲೆ ತೆರವುಗೊಳಿಸಲಾಗುವುದು.
ಬೆಂಗಳೂರು ನಗರದಲ್ಲಿ ವೈಜ್ಞಾನಿಕ ತ್ಯಾಜ್ಯ ವಿಲೇವಾರಿಗೆ ನಮ್ಮ ಸರ್ಕಾರ ಆದ್ಯತೆ ನೀಡಲಿದೆ. ಬೆಂಗಳೂರು ನಗರದ 97 ಲಕ್ಷ ಟನ್ ನಷ್ಟು ಹಳೆ ತ್ಯಾಜ್ಯವನ್ನು (Legacy Waste) ಜೈವಿಕ ಗಣಿಗಾರಿಕೆ ಮತ್ತು ಜೈವಿಕ ಪರಿಹಾರದ ಮೂಲಕ ಸಂಸ್ಕರಿಸಲಾಗುವುದು ಮತ್ತು ಮುಂದಿನ ಐದು ವರ್ಷಗಳ ಅವಧಿಯಲ್ಲಿ ಇಂತಹ 256 ಎಕರೆ ಭೂಮಿಯನ್ನು ಉದ್ಯಾನವನಗಳಾಗಿ ಪರಿವರ್ತಿಸಲಾಗುವುದು.
ಸುಮಾರು 5.7 ಲಕ್ಷ ಪ್ರಯಾಣಿಕರು ದಿನಂಪ್ರತಿ ಸಂಚರಿಸುವ 70 ಕಿ.ಮೀ. ಉದ್ದದ ಸಂಪರ್ಕ ಜಾಲವನ್ನು ಹೊಂದಿರುವ ನಮ್ಮ ಮೆಟ್ರೋ ರಾಷ್ಟ್ರದಲ್ಲಿಯೇ 2ನೇ ಅತೀ ದೊಡ್ಡ ಮೆಟ್ರೋ ಸೇವೆಯಾಗಿರುತ್ತದೆ. 2040 ಅಂತ್ಯದ ವೇಳೆಗೆ ಬೈಯಪ್ಪನಹಳ್ಳಿಯಿಂದ ಕೃಷ್ಣರಾಜಪುರದವರೆಗೆ, ಕೆಂಗೇರಿಯಿಂದ ಚಲ್ಲಘಟ್ಟದವರೆಗೆ, ನಾಗಸಂದ್ರದಿಂದ ಮಾದಾವರದವರೆಗೆ, ಆರ್.ವಿ ರಸ್ತೆಯಿಂದ ಬೊಮ್ಮಸಂದ್ರದವರೆಗೆ ಒಟ್ಟು 27 ಕಿ.ಮೀ.ಗಳ ನೂತನ ಮಾರ್ಗಗಳನ್ನು ಪ್ರಾರಂಭಿಸಲಾಗುವುದು. ಮುಂದಿನ 3 ವರ್ಷಗಳಲ್ಲಿ ಈಗಿರುವ 70 ಕಿಮೀ ನ ಸಂಪರ್ಕಜಾಲವನ್ನ 176 ಕಿಮೀಗೆ ವಿಸ್ತರಿಸುವ ಮೂಲಕ ಮೆಟ್ರೊ ಕಾರ್ಯಾಚರಣೆಯ ಸಂಪರ್ಕ ಜಾಲವನ್ನು ಎರಡೂವರೆ ಪಟ್ಟು ಹೆಚ್ಚಿಸಲಾಗುವುದು. ಪ್ರಗತಿಯಲ್ಲಿರುವ ಏರ್‌ಪೋರ್ಟ್ ಲೈನ್ ಕಾಮಗಾರಿಯನ್ನು ಪೂರ್ಣಗೊಳಿಸಿ 2026 ರಲ್ಲಿ ಕಾರ್ಯಾರಂಭ ಮಾಡಲಾಗುವುದು.
ಇದಲ್ಲದೇ, ಮೆಟ್ರೋ 3ನೇ ಹಂತದಡಿ ಅಂದಾಜು 16,328 ಕೋಟಿ ರೂ. ವೆಚ್ಚದಲ್ಲಿ ಕೆಂಪಾಪುರದಿಂದ ಜೆ.ಪಿ. ನಗರ 4ನೇ ಹಂತದವರೆಗಿನ ಮತ್ತು ಹೊಸಹಳ್ಳಿಯಿಂದ ಕಡಬಗೆರೆವರೆಗಿನ ಪಶ್ಚಿಮ ಓ.ಆರ್.ಆರ್. ಮಾರ್ಗವನ್ನು ಒಳಗೊಳ್ಳುವಂತಹ 45 ಕಿ.ಮೀ. ಉದ್ದದ ಮಾರ್ಗದ ವಿಸ್ತ್ರತ ಯೋಜನಾ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಅನುಮೋದನೆಗಾಗಿ ಸಲ್ಲಿಸಲಾಗಿದೆ. ಅಷ್ಟೇ ಅಲ್ಲದೆ, 15,000 ಕೋಟಿ ರೂ. ಅಂದಾಜು ವೆಚ್ಚದ, ಹೆಬ್ಬಾಳದಿಂದ ಸರ್ಜಾಪುರದವರೆಗಿನ 37 ಕಿ.ಮೀ. ಉದ್ದದ ಯೋಜನೆಯನ್ನು ಪ್ರಸಕ್ತ ಸಾಲಿನಲ್ಲಿ ಕೇಂದ್ರ ಸರ್ಕಾರಕ್ಕೆ ಅನುಮೋದನೆಗಾಗಿ ಸಲ್ಲಿಸಲಾಗುವುದು.
ಬೆಂಗಳೂರು ರೂಪಿಸಲಾಗಿರುವ ನಗರದ ಸುಗಮ ಸಂಚಾರಕ್ಕೆ ಪೂರಕವಾಗಿ ಬೆಂಗಳೂರು ಉಪನಗರ ರೈಲು ಯೋಜನೆಯನ್ನು ಜಾರಿಗೊಳಿಸಲು ಡಬಲ್ ಇಂಜಿನ್ ಎಂದು ಹೇಳಿಕೊಳ್ಳುವ ಹಿಂದಿನ ಸರ್ಕಾರವು ವಿಫಲವಾಗಿದೆ. ಈ ಯೋಜನೆಯ ಒಟ್ಟು ಮೊತ್ತ 15,767 ಕೋಟಿ ರೂ.ಗಳಾಗಿದ್ದು, ಕೇಂದ್ರ ಸರ್ಕಾರದ ಪಾಲು 3,242 ಕೋಟಿ ರೂ.ಗಳು, ರಾಜ್ಯ ಸರ್ಕಾರದ ಪಾಲು 5,087 ಕೋಟಿ ರೂ.ಗಳು ಮತ್ತು ಸಾಲದ (ಬಾಹ್ಯ ಮೂಲಗಳಿಂದ) ಮೊತ್ತ 7,438 ಕೋಟಿ ರೂ.ಗಳಾಗಿರುತ್ತದೆ. ಸದರಿ ಯೋಜನೆಗೆ ಈವರೆಗೂ ಕೇಂದ್ರ ಸರ್ಕಾರವು 500 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದ್ದು, ರಾಜ್ಯ ಸರ್ಕಾರದಿಂದ 660 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿರುತ್ತದೆ. ಪ್ರಸ್ತುತ ಸಾಲಿನಲ್ಲಿ ಈ ಯೋಜನೆಗೆ ರಾಜ್ಯ ಸರ್ಕಾರವು 1,000 ಕೋಟಿ ರೂ.ಗಳನ್ನು ಒದಗಿಸಲಾಗಿದೆ.
ಪಾರಂಪರಿಕ ಮತ್ತು ದ್ರವ ತ್ಯಾಜ್ಯದ ಸಮರ್ಪಕ ನಿರ್ವಹಣೆ ಹಾಗೂ ಒಳಚರಂಡಿ ನೀರು ಸಂಸ್ಕರಿಸುವ ಆಧುನಿಕ ಪದ್ಧತಿಗಳನ್ನು ಅಳವಡಿಸುವ ಮೂಲಕ ನದಿಗಳು ಮತ್ತು ಕೆರೆಗಳಿಗೆ ಹರಿಯುವ ಮಾಲಿನ್ಯ ನಿಯಂತ್ರಿಸಲು 1,250 ಕೋಟಿ ರೂ. ವೆಚ್ಚದಲ್ಲಿ ಬೆಂಗಳೂರಿನಲ್ಲಿ ಮತ್ತು ಇತರೇ ಪಟ್ಟಣಗಳಲ್ಲಿ 2,150 ಕೋಟಿ ರೂ. ವೆಚ್ಚದಲ್ಲಿ ಒಟ್ಟಾರೆ 3,400 ಕೋಟಿ ರೂ.ಗಳ ಅನುದಾನದಲ್ಲಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು.
ಕೇಂದ್ರ ಪುರಸ್ಕೃತ ಸ್ವಚ್ಛ ಭಾರತ 2.0 ಯೋಜನೆಯನ್ನು ವೆಚ್ಚ ಹಂಚಿಕೆ ಆಧಾರದಲ್ಲಿ ಜಾರಿಗೊಳಿಸಿದ್ದು, ಬಿಬಿಎಂಪಿ ಸೇರಿದಂತೆ ರಾಜ್ಯದ 314 ನಗರ ಸ್ಥಳೀಯ ಸಂಸ್ಥೆಗಳಿಗೆ ಒಟ್ಟು 4,500 ಕೋಟಿ ರೂ.ಗಳ ಕ್ರಿಯಾ ಯೋಜನೆಗೆ ಅನುಮೋದನೆ ದೊರೆತಿದೆ. ಇದರಲ್ಲಿ ಕೇಂದ್ರ ಸರ್ಕಾರದ ಪಾಲು 1,900 ಕೋಟಿ ರೂ. ಮತ್ತು ರಾಜ್ಯ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಪಾಲು 2,600 ಕೋಟಿ ರೂ. ಗಳಾಗಿವೆ. ಈ ಯೋಜನೆಯಡಿಯಲ್ಲಿ ಸುಸ್ಥಿರ ಘನತ್ಯಾಜ್ಯ ನಿರ್ವಹಣೆ ಮತ್ತು ಬಳಸಿದ ನೀರಿನ ನಿರ್ವಹಣೆ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು.
ಕೇಂದ್ರ ಪುರಸ್ಕೃತ ಅಮೃತ್ 2.0 ಯೋಜನೆಯಡಿ ರಾಜ್ಯದ ಒಂದು ಲಕ್ಷಕ್ಕಿಂತ ಕಡಿಮೆ ಜನಸಂಖ್ಯೆ ಇರುವ 287 ಪಟ್ಟಣಗಳಲ್ಲಿ ನೀರು ಸರಬರಾಜು ಮತ್ತು ಜಲಮೂಲಗಳ ಸಂರಕ್ಷಣೆ ಕಾಮಗಾರಿ ಕೈಗೊಳ್ಳಲು 9,230 ಕೋಟಿ ರೂ. ಗಳ ಮೊತ್ತದಲ್ಲಿ ಯೋಜಿಸಲಾಗಿದೆ. ಈ ಅನುದಾನದಲ್ಲಿ ಕೇಂದ್ರ ಸರ್ಕಾರದ ಪಾಲು 4,615 ಕೋಟಿ ರೂ.ಗಳು, ರಾಜ್ಯ ಸರ್ಕಾರದ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಪಾಲು 4,612 ಕೋಟಿ ರೂ.ಗಳಾಗಿರುತ್ತದೆ. ಪ್ರಸಕ್ತ ಸಾಲಿನಲ್ಲಿ ಈ ಯೋಜನೆಗೆ ಒಟ್ಟು 800 ಕೋಟಿ ರೂ. ಗಳನ್ನು ಒದಗಿಸಲಾಗಿದೆ.
ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ ಜಾರಿಗೆ ತಂದ ಇಂದಿರಾ ಕ್ಯಾಂಟೀನ್ ಯೋಜನೆಯು ನಗರ ಪ್ರದೇಶಗಳಲ್ಲಿ ಬಡವರು ಹಾಗೂ ಶ್ರಮಿಕರಿಗೆ ಅತ್ಯಂತ ಕಡಿಮೆ ದರದಲ್ಲಿ ಊಟ, ಉಪಾಹಾರ ಒದಗಿಸುವ ಮೂಲಕ ಅವರ ನೆಮ್ಮದಿಗೆ ಕಾರಣವಾಗಿತ್ತು. ಆದರೆ ಹಿಂದಿನ ಸರ್ಕಾರ ವಿವಿಧ ನೆಪಗಳೊಡ್ಡಿ, ಈ ಯೋಜನೆಯನ್ನು ಸ್ಥಗಿತಗೊಳಿಸಿ, ಬಡವರ ವಿರೋಧಿ ಕ್ರಮವನ್ನು ಅನುಸರಿಸಿತು. ಇದೀಗ ಮೊದಲನೇ ಹಂತದಲ್ಲಿ (Phase-1) ಹೊಸ ಮೆನುವಿನೊಂದಿಗೆ, ಇಂದಿರಾ ಕ್ಯಾಂಟೀನ್ ಯೋಜನೆಯನ್ನು ಬಿಬಿಎಂಪಿ ಹಾಗೂ ರಾಜ್ಯದ – ನಗರ ಸ್ಥಳೀಯ ಸಂಸ್ಥೆಗಳಲ್ಲಿ ಪುನರಾರಂಭ ಮಾಡಲಾಗುವುದು. 2ನೇ ಹಂತದಲ್ಲಿ (Phase-2) ಎಲ್ಲಾ ಹೊಸ ಪಟ್ಟಣಗಳಲ್ಲಿ ಮತ್ತು ಬಿಬಿಎಂಪಿಯ ಹೊಸ ವಾರ್ಡ್‌ಗಳಲ್ಲಿ ಈ ಯೋಜನೆಯನ್ನು ವಿಸ್ತರಿಸಲಾಗುವುದು. ಪ್ರಸಕ್ತ ಸಾಲಿನಲ್ಲಿ ಇಂದಿರಾ ಕ್ಯಾಂಟೀನ್‌ಗಳ ದುರಸ್ತಿ, ನವೀಕರಣ ಹಾಗೂ ನಿರ್ವಹಣೆಗೆ ರಾಜ್ಯ ಸರ್ಕಾರವು 100 ಕೋಟಿ ರೂ. ಒದಗಿಸಲಿದೆ.
ತ್ಯಾಜ್ಯ ಸಂಗ್ರಹಣೆ ಮತ್ತು ಸಂಸ್ಕರಣೆಯನ್ನು ಹೆಚ್ಚು ವೈಜ್ಞಾನಿಕವಾಗಿ ಮತ್ತು ಸುಸ್ಥಿರ ರೀತಿಯಲ್ಲಿ ವಿಲೇವಾರಿ ಮಾಡಲು ಬೆಂಗಳೂರು ಘನತಾಜ್ಯ ನಿರ್ವಹಣಾ ಸಂಸ್ಥೆಯ (BSWMCL) ಪರಿಣಾಮಕಾರಿ ಕಾರ್ಯಾಚರಣೆಗಾಗಿ 100 ಕೋಟಿ ರೂ.ಗಳನ್ನು ಒದಗಿಸಲಾಗುವುದು.
ಬೆಂಗಳೂರು: 2023-24ನೇ ಸಾಲಿನ ರಾಜ್ಯ ಬಜೆಟ್ (Karnataka Budget) ಮಂಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ಸಾವಿರಾರು ಕೋಟಿ ರೂ. ನಷ್ಟವಾಗಿದೆ. ರಾಜ್ಯದ ಹೊಸ ಯೋಜನೆಗಳ ಅನುಷ್ಠಾನಕ್ಕೆ ತೀವ್ರ ಅನುದಾನ ಕೊರತೆ ತಲೆದೋರಿದೆ 26,954 ಕೋಟಿ GST ಕೊರೆತೆಯಾಗಿದ್ದು, ಆರ್ಥಿಕ ಪರಿಸ್ಥಿತಿಗೆ ಇದು ಬಹುದೊಡ್ಡ ಆಘಾತ ಉಂಟು ಮಾಡಿದೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸಿದ್ದರಾಮಯ್ಯ ಭಾಷಣದಲ್ಲಿ ಹೇಳಿದ್ದೇನು?
ಕೇಂದ್ರ ಸರ್ಕಾರ ವಿಧಿಸುವ ಸೆಸ್ (Cess) ಮತ್ತು ಸರ್‌ಚಾರ್ಜ್ (Surcharge) ರಾಜ್ಯಗಳಿಗೆ ಹಂಚಿಕೆ ಮಾಡದೆ ತನ್ನ ಬಳಿಯೇ ಉಳಿಸಿಕೊಳ್ಳುತ್ತದೆ. ತೆರಿಗೆಗಳ ಮೇಲೆ ವಿಧಿಸುವ ಸೆಸ್ ಮತ್ತು ಸರ್ ಚಾರ್ಜ್ ಹೆಚ್ಚುತ್ತಿರುವುದರಿಂದ ರಾಜ್ಯಗಳಿಗೆ ಸಂದಾಯವಾಗುವ ತೆರಿಗೆ ಪಾಲು ಕಡಿಮೆಯಾಗಿರುತ್ತದೆ. 2022-23ರಲ್ಲಿ ಎಲ್ಲಾ ರಾಜ್ಯಗಳಿಂದ ಒಟ್ಟು 5,20,570 ಕೋಟಿ ರೂ.ಗಳನ್ನು ಕೇಂದ್ರ ಸರ್ಕಾರವು ಸೆಸ್ ಮತ್ತು ಸರ್‌ಚಾರ್ಜ್ ಮೂಲಕ ಸಂಗ್ರಹಿಸಿರುವುದರಿಂದ ನಮ್ಮ ರಾಜ್ಯಕ್ಕೆ ಸುಮಾರು 7,780 ಕೋಟಿ ರೂ.ಗಳಷ್ಟು ನಷ್ಟವಾಗಿರುತ್ತದೆ. ನಮ್ಮ ಸರ್ಕಾರವು ಕೇಂದ್ರದ ಈ ನಡೆಯನ್ನು ಬಲವಾಗಿ ವಿರೋಧಿಸುತ್ತದೆ.
ಹೊಸ ಯೋಜನೆಗಳಿಗೆ ಅನುದಾನ ಕೊರತೆ:
ಕೇಂದ್ರ ಸರ್ಕಾರವು, ಕೇಂದ್ರ ಪುರಸ್ಕೃತ ಯೋಜನೆಗಳ ಅನುಷ್ಠಾನಕ್ಕಾಗಿ ರಾಜ್ಯಗಳಿಗೆ ನೀಡುವ ಅನುದಾನವನ್ನು ಕಡಿಮೆ ಮಾಡುತ್ತಾ ಬಂದಿದೆ. ಕೇಂದ್ರದ ಪಾಲು ಕಡಿಮೆಯಾಗಿರುವುದರಿಂದ ರಾಜ್ಯದ ಜನರ ಹಿತದೃಷ್ಟಿಯಿಂದ ಕೇಂದ್ರ ಪುರಸ್ಕೃತ ಯೋಜನೆಗಳಲ್ಲಿ ರಾಜ್ಯದ ಪಾಲನ್ನು ಹೆಚ್ಚಿಸುವ ಅನಿವಾರ್ಯತೆ ಉಂಟಾಗಿದೆ ಹಾಗೂ ಇದರಿಂದಾಗಿ ರಾಜ್ಯದ ಹೊಸ ಯೋಜನೆಗಳಿಗೆ ಅನುದಾನದ ತೀವ್ರ ಕೊರತೆ ತಲೆದೋರಿದೆ.
ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆಗಳಲ್ಲಿ ಕೇಂದ್ರ ಸರ್ಕಾರವು ರಾಜ್ಯದ 14.13 ಲಕ್ಷ ಫಲಾನುಭವಿಗಳಿಗೆ ಮಾತ್ರ ಪಿಂಚಣಿಯನ್ನು ನೀಡುತ್ತಿದ್ದು, ರಾಜ್ಯ ಸರ್ಕಾರವು ತನ್ನ ಸ್ವಂತ ಸಂಪನ್ಮೂಲಗಳಿಂದ ಹೆಚ್ಚುವರಿ 64.21 ಲಕ್ಷ ಫಲಾನುಭವಿಗಳಿಗೆ ಪಿಂಚಣಿಯನ್ನು ನೀಡುತ್ತಿದೆ. 2022-23 ರಲ್ಲಿ ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆಗಳಿಗೆ ಕೇಂದ್ರ ಸರ್ಕಾರ ಕೇವಲ 447 ಕೋಟಿ ರೂ. ನೀಡಿದರೆ, ರಾಜ್ಯ ಸರ್ಕಾರವು 8,636 ಕೋಟಿ ರೂ.ಗಳನ್ನು ನೀಡಿರುತ್ತದೆ. ಅಂದ್ರೆ ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆಗಳಿಗೆ ಕೇಂದ್ರ ಸರ್ಕಾರ ಕೇವಲ ಶೇ.4.9 ರಷ್ಟು ಅನುದಾನ ನೀಡಿದರೆ ಬಾಕಿ ಶೇ.95.1 ರಷ್ಟು ಅನುದಾನವನ್ನ ರಾಜ್ಯ ಸರ್ಕಾರವೇ ನೀಡುತ್ತಿದೆ.
ಈ ಹಿಂದಿನ ಸರ್ಕಾರವು ಬದ್ಧ ವೆಚ್ಚಗಳಿಗೆ ಕಡಿವಾಣ ಹಾಕಿ ಜನಕಲ್ಯಾಣ ಕಾರ್ಯಕ್ರಮಗಳಿಗೆ ಸಂಪನ್ಮೂಲ ಕ್ರೋಢೀಕರಿಸಲು ವಿಫಲವಾಗಿರುತ್ತದೆ. ಆಯವ್ಯಯ ಗಾತ್ರವು 2018-19 2023-24ರ ವರೆಗೆ ಶೇ.50ರಷ್ಟು ಹೆಚ್ಚಳವಾಗಿರುತ್ತದೆ. ಆದ್ರೆ ಬದ್ಧ ವೆಚ್ಚಗಳಾದ ವೇತನ, ಬಡ್ಡಿ ಪಾವತಿ ಮತ್ತು ಪಿಂಚಣಿ ವೆಚ್ಚಗಳು ಈ 5 ವರ್ಷಗಳಲ್ಲಿ ಶೇ.81ರಷ್ಟು ಹೆಚ್ಚಾಗಿರುತ್ತದೆ ಎಂದು ವಿವರಿಸಿದ್ದಾರೆ.
ಹಿಂದಿನ ಸರ್ಕಾರದ ಆಡಳಿತದಿಂದ ರಾಜ್ಯದ ಆರ್ಥಿಕತೆಯು ಕತ್ತಲೆಯಲ್ಲಿ ಮುಳುಗಿದ್ದರೂ, ರಾಜ್ಯದ ಆರ್ಥಿಕತೆಯನ್ನು ಪುನಶ್ಚತನಗೊಳಿಸಲು ದೃಢ ನಿಲುವನ್ನು ತೆಗೆದುಕೊಳ್ಳಲು ನಾನು ಯಾವುದೇ ಕಾರಣಕ್ಕೂ ಹಿಂಜರಿಯುವುದಿಲ್ಲ. ರಾಜ್ಯದ ಜನತೆಯು ನಮ್ಮ ಸರ್ಕಾರದ ಮೇಲೆ ನಂಬಿಕೆಯನ್ನಿರಿಸಿ ಸ್ಪಷ್ಟ ಬಹುಮತ ನೀಡಿರುತ್ತಾರೆ. ಜನರ ಆಶೋತ್ತರಗಳನ್ನು ಈಡೇರಿಸಲು ನಾನು ಕಂಕಣಬದ್ಧವಾಗಿರುತ್ತೇನೆ. ನಮ್ಮ ಸರ್ಕಾರವು ಎಲ್ಲಾ 5 ಗ್ಯಾರಂಟಿಗಳನ್ನು ಪೂರೈಸಲು, ಅಗತ್ಯವಿರುವ ಆದಾಯವನ್ನು ಸೃಜಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಿದೆ. ಪ್ರಸಕ್ತ ಸಾಲಿನಲ್ಲಿ ಬಂಡವಾಳ ಹೂಡಿಕೆ ಹಾಗೂ ನೇರ ನಗದು ವರ್ಗಾವಣೆಯಿಂದ ರಾಜ್ಯದ ಆರ್ಥಿಕತೆಯನ್ನು ಉತ್ತೇಜಿಸಿ, ದೊಡ್ಡ ಪ್ರಮಾಣದ ಉದ್ಯೋಗ ಸೃಷ್ಟಿಗೆ ಸ್ಪಷ್ಟ ಯೋಜನೆಗಳನ್ನು ರೂಪಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.
ಡಬಲ್ ಎಂಜಿನ್ ಸರ್ಕಾರ ವಿಫಲ:
15ನೇ ಹಣಕಾಸು ಆಯೋಗವು ತನ್ನ ಅಂತಿಮ ವರದಿಯಲ್ಲಿ ರಾಜ್ಯ ಕೇಂದ್ರಿತ ಕಾಮಗಾರಿಗಳ/ಯೋಜನೆಗಳಿಗೆ ಅನುದಾನವನ್ನು ಶಿಫಾರಸ್ಸು ಮಾಡಿರುತ್ತದೆ. ನಮ್ಮ ರಾಜ್ಯಕ್ಕೆ 3,000 ಕೋಟಿ ರೂ.ಗಳ ಅನುದಾನವನ್ನು ಕೆರೆಗಳ ಸಮಗ್ರ ಅಭಿವೃದ್ಧಿಗಾಗಿ ಮತ್ತು 3,000 ಕೋಟಿ ರೂ.ಗಳನ್ನು ಬೆಂಗಳೂರು ನಗರದ ಪೆರಿಫೆರಲ್ ರಿಂಗ್ ರಸ್ತೆಗಾಗಿ ಎಂದು ರಾಜ್ಯ-ಕೇಂದ್ರಿತ ಅನುದಾನವನ್ನು ಶಿಫಾರಸ್ಸು ಮಾಡಿರುತ್ತದೆ. ಆದರೆ, ಕೇಂದ್ರ ಸರ್ಕಾರವು ಅನುದಾನವನ್ನು ನಮ್ಮ ರಾಜ್ಯಕ್ಕೆ ನೀಡಿರುವುದಿಲ್ಲ. ಕೇಂದ್ರದ ವಿತ್ತ ಮಂತ್ರಿಯವರು ನಮ್ಮ ರಾಜ್ಯದಿಂದಲೇ ಆಯ್ಕೆಯಾಗಿದ್ದರೂ, ನಮ್ಮದು ಡಬಲ್ ಎಂಜಿನ್ ಎಂದು ಹೇಳಿಕೊಳ್ಳುವ ಸರ್ಕಾರವಿದ್ದರೂ ಸಹ, ಕೇಂದ್ರದಿಂದ ಈ ಅನುದಾನವನ್ನು ಪಡೆಯುವಲ್ಲಿ ಹಿಂದಿನ ಸರ್ಕಾರವು ಅಸಮರ್ಥವಾಗಿರುತ್ತದೆ.
26,954 ಕೋಟಿ ರೂ. ಜೆಎಸ್‌ಟಿ ಕೊರತೆ:
ರಾಜ್ಯದಲ್ಲಿ ಜಿಎಸ್‌ಟಿ ತೆರಿಗೆ ಜಾರಿಗೆ ತರುವ ಸಮಯದಲ್ಲಿ ಕೇಂದ್ರ ಸರ್ಕಾರವು ರಾಜ್ಯದ ಜಿಎಸ್‌ಟಿ ತೆರಿಗೆಯು ವರ್ಷವಾರು ಶೇ.14 ರಷ್ಟು ಬೆಳವಣಿಗೆಯಾಗಲಿದೆ ಎಂದು ಭರವಸೆ ನೀಡಿತ್ತು. ಆದ್ರೆ ಕಳೆದ 5 ವರ್ಷಗಳ ರಾಜ್ಯದ ಜಿಎಸ್‌ಟಿ ತೆರಿಗೆ ಸಂಗ್ರಹಣೆಯನ್ನು ಗಮನಿಸಿದರೆ ಕೇಂದ್ರ ಸರ್ಕಾರದ ಭರವಸೆ ಹುಸಿಯಾಗಿರುವುದು ಸಾಬೀತಾಗಿದೆ. ಅಲ್ಲದೇ, ಕೇಂದ್ರ ಸರ್ಕಾರವು ರಾಜ್ಯಗಳಿಗೆ ನೀಡುತ್ತಿದ್ದ ಜಿಎಸ್‌ಟಿ ಪರಿಹಾರವನ್ನು 2022 ಜುಲೈನಿಂದ ಸ್ಥಗಿತಗೊಳಿಸಿರುತ್ತದೆ. ಇದರಿಂದಾಗಿ 2023-24ರ ಆರ್ಥಿಕ ವರ್ಷದಲ್ಲಿಯೇ ಸುಮಾರು 26,954 ಕೋಟಿ ರೂ.ಗಳಷ್ಟು ಜಿಎಸ್‌ಟಿ ಕೊರತೆ ಉಂಟಾಗಿ ರಾಜ್ಯದ ಆರ್ಥಿಕ ಪರಿಸ್ಥಿತಿಗೆ ಇದು ಬಹುದೊಡ್ಡ ಆಘಾತ ಉಂಟು ಮಾಡಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
– ಆ್ಯಸಿಡ್ ದಾಳಿಗೊಳಗಾದ ಮಹಿಳಾ ಸಂತ್ರಸ್ತರಿಗೆ 5 ಲಕ್ಷದ ವರೆಗೆ ಬಡ್ಡಿ ರಹಿತ ಸಾಲಕ್ಕೆ ಅಸ್ತು
ಬೆಂಗಳೂರು: 2023-24ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ (Karnataka Budget 2023) ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ರಾಜ್ಯದ ಮಹಿಳೆಯರಿಗೆ ಬಂಪರ್ ಉಡುಗೊರೆ ನೀಡಿದ್ದಾರೆ.
ತಮ್ಮ ಬಜೆಟ್ ಭಾಷಣದಲ್ಲಿ ರಾಜ್ಯದಲ್ಲಿನ ಆ್ಯಸಿಡ್ ದಾಳಿಗೆ ಒಳಗಾದ ಸಂತ್ರಸ್ತರನ್ನು ಸಮಾಜದ ಮುಖ್ಯ ವಾಹಿನಿಗೆ ತರುವ ಉದ್ದೇಶದಿಂದ ಅವರಿಗೆ ಸ್ವಯಂ ಉದ್ಯೋಗಕ್ಕಾಗಿ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಮೂಲಕ 5 ಲಕ್ಷ ರೂ. ವರೆಗೆ ಬಡ್ಡಿ ರಹಿತ ಸಾಲ ಸೌಲಭ್ಯ ಒದಗಿಸಲು 2 ಕೋಟಿ ರೂ. ಅನುದಾನ ಮತ್ತು ರಾಜೀವ್ ಗಾಂಧಿ ವಸತಿ ನಿಗಮದ ಮೂಲಕ ವಸತಿ ಸೌಲಭ್ಯವನ್ನು ಒದಗಿಸಲಾಗುವುದು. ಒಟ್ಟಾರೆ ಪ್ರಸಕ್ತ ಸಾಲಿನಲ್ಲಿ ಮಹಿಳಾ ಉದ್ದೇಶಿತ ಯೋಜನೆಗಳಿಗೆ 70,427 ಕೋಟಿ ರೂ., ಮಕ್ಕಳ ಉದ್ದೇಶಿತ ಯೋಜನೆಗಳಿಗೆ 2023-24 ನೇ ಸಾಲಿನಲ್ಲಿ 51,229 ಕೋಟಿ ರೂ. ಅನುದಾನ ಒದಗಿಸಿದ್ದಾರೆ. ಇದನ್ನೂ ಓದಿ: ಮತ್ತಷ್ಟು ದುಬಾರಿಯಾಗಲಿದೆ ಎಣ್ಣೆ – ಈಗ ಎಷ್ಟು ಸುಂಕವಿದೆ? ಎಷ್ಟು ಏರಿಕೆಯಾಗುತ್ತೆ?
ಕಾಂಗ್ರೆಸ್ ಸರ್ಕಾರದ ಪ್ರಮುಖ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ನಮ್ಮ ರಾಜ್ಯದ ಮಹಿಳೆಯರಿಗೆ ಬದುಕಿನ ನಿರ್ವಹಣೆಯನ್ನು ಇನ್ನಷ್ಟು ಸುಗಮಗೊಳಿಸಲು ಮತ್ತು ಆರ್ಥಿಕ ಭದ್ರತೆ ಒದಗಿಸುವಲ್ಲಿ ಪ್ರಮುಖ ಪಾತ್ರ ವಹಿಸಲಿದೆ. ಈ ಯೋಜನೆಗಾಗಿ ನೋಂದಣಿ ಪ್ರಕ್ರಿಯೆ ಶೀಘ್ರವೇ ಪ್ರಾರಂಭವಾಗಲಿದ್ದು, ಮಹಿಳೆಯರ ಖಾತೆಗೆ ನೇರವಾಗಿ ಮಾಸಿಕ 2,000 ರೂ.ಗಳನ್ನು ವರ್ಗಾಯಿಸಲಾಗುವುದು. ಯೋಜನೆಗಾಗಿ ವಾರ್ಷಿಕ ಸುಮಾರು 30,000 ಕೋಟಿ ರೂ. ವೆಚ್ಚವಾಗಲಿದ್ದು, ಇದು ಇಡೀ ದೇಶದಲ್ಲಿಯೇ ಅತೀ ದೊಡ್ಡ ಆರ್ಥಿಕ ಭದ್ರತಾ ಯೋಜನೆಯಾಗಲಿದೆ ಎಂದು ಹೇಳಿದ್ದಾರೆ.
ಇದರೊಂದಿಗೆ ವಿಶೇಷಚೇತನರಿಗೆ ಆರ್ಥಿಕ ಸದೃಢತೆ ಒದಗಿಸಲು ಸಾಮಾಜಿಕವಾಗಿ ಇಲಾಖೆಯಲ್ಲಿ ನೋಂದಣಿಯಾಗಿರುವ ಸುಮಾರು 4,000 ವಿಶೇಷಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನಗಳನ್ನ 30 ಕೋಟಿ ರೂ. ವೆಚ್ಚದಲ್ಲಿ ಒದಗಿಸಲಾಗುವುದು. ಅಲ್ಲದೆ, ನೋಂದಣಿಯಾಗದಿರುವ ಅರ್ಹ ಫಲಾನುಭವಿಗಳನ್ನು ಗುರುತಿಸಿ ಸೌಲಭ್ಯ ಒದಗಿಸಲು ಕ್ರಮ ವಹಿಸಲಾಗುವುದು. ಇದನ್ನೂ ಓದಿ: Karnataka Budget 2023: ಡಾ.ರಾಜ್ ಸ್ಮಾರಕದ ಬಳಿ ಸಿನಿ ವಸ್ತು ಸಂಗ್ರಹಾಲಯ
ಮಹಿಳಾ ಉದ್ಯಮಿಗಳು ಆತಿಥ್ಯ, ಆರೈಕೆ ಮತ್ತು ಪ್ರವಾಸೋದ್ಯಮದಂತಹ ಸೇವಾ ವಲಯದಲ್ಲಿ ಮಹಿಳೆಯರು ಹೆಚ್ಚಿನ ಅವಕಾಶ ಪಡೆಯುತ್ತಿದ್ದಾರೆ. ಆದ್ದರಿಂದ ಸೇವಾ ವಲಯದಲ್ಲಿ ಮಹಿಳಾ ಉದ್ಯಮಿಗಳನ್ನು ಉತ್ತೇಜಿಸಲು ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯ ಮೂಲಕ ಶೇ.4ರ ಬಡ್ಡಿ ದರದಲ್ಲಿ ನೀಡಲಾಗುವ ಸಾಲದ ಮಿತಿಯನ್ನ 2 ಕೋಟಿ ರೂ.ಗಳಿಂದ 5 ಕೋಟಿ ರೂ.ಗಳಿಗೆ ಹೆಚ್ಚಿಸಲಾಗುವುದು. 2023-24ನೇ ಸಾಲಿನಲ್ಲಿ 10 ಬುದ್ಧಿಮಾಂದ್ಯ ಮಕ್ಕಳ ವಸತಿ ಶಾಲೆಗಳನ್ನ 7 ಜಿಲ್ಲೆಗಳಲ್ಲಿ NGOಗಳ ಸಹಯೋಗದೊಂದಿಗೆ 2 ಕೋಟಿ ರೂ. ವೆಚ್ಚದಲ್ಲಿ ಪ್ರಾರಂಭಿಸಲಾಗುವುದು ಎಂದು ಘೋಷಣೆ ಮಾಡಿದ್ದಾರೆ