Tag: siddaramaiah padayatre

  • ಮೇಕೆದಾಟು ನಡಿಗೆಯಲ್ಲಿ ಸುಸ್ತಾದ ಸಿದ್ದರಾಮಯ್ಯ – ಕಾರಿನಲ್ಲಿ ವಾಪಸ್‌

    ಮೇಕೆದಾಟು ನಡಿಗೆಯಲ್ಲಿ ಸುಸ್ತಾದ ಸಿದ್ದರಾಮಯ್ಯ – ಕಾರಿನಲ್ಲಿ ವಾಪಸ್‌

    ರಾಮನಗರ: ಮೇಕೆದಾಟು ಪಾದಯಾತ್ರೆಯ ಪಾಲ್ಗೊಂಡಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಅವರು ನಾಲ್ಕು ಕಿ.ಮೀ. ನಡೆದು ಸುಸ್ತಾಗಿ ಬೇರೊಂದು ಕಾರಿನಲ್ಲಿ ವಾಪಸ್ಸಾಗಿದ್ದಾರೆ.

    73 ವರ್ಷ ವಯಸ್ಸಿನ ಸಿದ್ದರಾಮಯ್ಯ ಅವರು ಮೇಕೆದಾಟು ಪಾದಯಾತ್ರೆಯಲ್ಲಿ ಡಿ.ಕೆ.ಶಿವಕುಮಾರ್‌ ಅವರೊಂದಿಗೆ ನೇತೃತ್ವ ವಹಿಸಿದ್ದರು. ಜನವರಿ 18ರವರೆಗೆ ನಡೆಯುವ ಈ ಪಾದಯಾತ್ರೆಗೆ ಇಂದು ಕನಕಪುರ ತಾಲ್ಲೂಕಿನ ಕಾವೇರಿ ತಟ, ಸಂಗಮದಲ್ಲಿ ಚಾಲನೆ ನೀಡಲಾಯಿತು. ಕೋವಿಡ್‌ ಕಾರಣ ಸರ್ಕಾರ ವೀಕೆಂಡ್‌ ಕರ್ಫ್ಯೂ ವಿಧಿಸಿದ್ದರೂ ಅಪಾರ ಸಂಖ್ಯೆಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದಾರೆ. ಇದನ್ನೂ ಓದಿ: ರೈತ ಗೀತೆ ಮೂಲಕ ಮೇಕೆದಾಟು ಪಾದಯಾತ್ರೆಗೆ ಕಾಂಗ್ರೆಸ್‌ ಚಾಲನೆ

    ಡಿ.ಕೆ.ಶಿವಕುಮಾರ್‌ ಮತ್ತು ಸಿದ್ದರಾಮಯ್ಯ ಅವರು ಮೇಕೆದಾಟು ಪಾದಯಾತ್ರೆಯ ನೇತೃತ್ವ ವಹಿಸಿದ್ದರು. ಇಂದು 15 ಕಿ.ಮೀ. ಪಾದಯಾತ್ರೆ ನಡೆಸಿ ಕನಕಪುರ ತಲುಪಲು ಯೋಜನೆ ಹಾಕಿಕೊಳ್ಳಲಾಗಿತ್ತು. ಆದರೆ ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದ ಸಿದ್ದರಾಮಯ್ಯ ಅವರು ನಾಲ್ಕು ಕಿ.ಮೀ. ನಡೆಯುವಷ್ಟರಲ್ಲಿ ಸುಸ್ತಾಗಿದ್ದಾರೆ. ಸುಸ್ತಾಗಿ ಕುಳಿತ ಅವರನ್ನು ಕಾರಿನಲ್ಲಿ ವಾಪಸ್‌ ಕರೆದುಕೊಂಡು ಹೋಗಲಾಯಿತು.

    ಕಾಂಗ್ರೆಸ್‌ ನಡೆಸುತ್ತಿರುವ ಪಾದಯಾತ್ರೆ ವಿರುದ್ಧ ಬಿಜೆಪಿ ನಾಯಕರು ಟೀಕೆ ವ್ಯಕ್ತಪಡಿಸಿದ್ದಾರೆ. ಇದು ರಾಜಕೀಯ ಪ್ರೇರಿತ ಪಾದಯಾತ್ರೆ ಎಂದು ಟೀಕಿಸಿದೆ. ಅಲ್ಲದೇ ಕೋವಿಡ್‌ ನಿಯಮ ಉಲ್ಲಂಘಿಸಿದ್ದಾರೆ ಎಂದು ಕಾಂಗ್ರೆಸ್‌ನವರ ವಿರುದ್ಧ ಶಿಸ್ತುಕ್ರಮ ಜರುಗಿಸುವ ಬಗ್ಗೆ ತೀರ್ಮಾನಿಸಲು ಸರ್ಕಾರ ಸಭೆ ಕೂಡ ಕರೆದಿದೆ. ಇದನ್ನೂ ಓದಿ: ಕಾಂಗ್ರೆಸ್‍ನ ಮೇಕೆದಾಟು ಪಾದಯಾತ್ರೆ ರಾಜಕೀಯ ಪ್ರೇರಿತ: ಬೊಮ್ಮಾಯಿ