Tag: Siddaramothsava

  • ಜನಶಕ್ತಿಯ ಮುಂದೆ ದ್ವೇಷ ಶಕ್ತಿ ನಡೆಯಲ್ಲ: ಬಿಜೆಪಿಗೆ ಸಿದ್ದು ಟಾಂಗ್‌

    ಜನಶಕ್ತಿಯ ಮುಂದೆ ದ್ವೇಷ ಶಕ್ತಿ ನಡೆಯಲ್ಲ: ಬಿಜೆಪಿಗೆ ಸಿದ್ದು ಟಾಂಗ್‌

    ದಾವಣಗೆರೆ: ಬಿಜೆಪಿಯವರು ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ಜನಶಕ್ತಿಯ ಮುಂದೆ ದ್ವೇಷ ಶಕ್ತಿ ನಡೆಯಲ್ಲ ಎಂದು ಸಿದ್ದರಾಮಯ್ಯ ಟಾಂಗ್‌ ಕೊಟ್ಟರು.

    ತಮ್ಮ 75ನೇ ಜನ್ಮದಿನದ ಅಂಗವಾಗಿ ನಗರದಲ್ಲಿ ಆಯೋಜಿಸಿದ್ದ ಸಿದ್ದರಾಮೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಅವರಿಗೆ ಅನಗತ್ಯ ಕಿರುಕುಳ ಕೊಟ್ಟರು. ಸೋನಿಯಾ ಗಾಂಧಿ ಅವರ ವಯಸ್ಸು ನೋಡದೇ ಗಂಟೆಗಟ್ಟಲೆ ವಿಚಾರಣೆ ಮಾಡಿದರು. ಅಮಾಯಕರ ವಿಚಾರಣೆಗೆ ಸಂವಿಧಾನದಲ್ಲಿ ಅವಕಾಶ ಇಲ್ಲ. ಸೇಡಿನ ರಾಜಕಾರಣ ಮಾಡುವ ಕೋಮುವಾದಿ ಭ್ರಷ್ಟ ಬಿಜೆಪಿಯನ್ನು ಕಿತ್ತೊಗೆಯಬೇಕು ಎಂದು ಜನತೆಗೆ ಕರೆ ನೀಡಿದರು. ಇದನ್ನೂ ಓದಿ: ಬಗ್ಗಿ ಬಗ್ಗಿ ನಮಸ್ಕಾರ ಮಾಡೋರನ್ನು ದೂರ ಇಡಿ- ಸಿದ್ದುಗೆ ರಮೇಶ್ ಕುಮಾರ್ ಕಿವಿಮಾತು

    ಒಂದು ನಾಯಕ, ಒಂದು ಚಿನ್ಹೆ, ಸರ್ವಾಧಿಕಾರ ಭಾವನೆಯೊಂದಿಗೆ ಸಂವಿಧಾನ ಬದಲಾಯಿಸಲು ಆರ್‌ಎಸ್‌ಎಸ್‌, ಬಿಜೆಪಿ ಹೊರಟಿದೆ. ಈ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದು ಕಾಂಗ್ರೆಸ್. ಹಲವು ಕಾಂಗ್ರೆಸ್ಸಿಗರು ಪ್ರಾಣ ತ್ಯಾಗ ಮಾಡಿದ್ದಾರೆ. ಸ್ವಾತಂತ್ರ್ಯ ಹೋರಾಟದಲ್ಲಿ ಬಿಜೆಪಿ ಪಾತ್ರ ಇಲ್ಲ ಎಂದು ತಿರುಗೇಟು ನೀಡಿದರು.

    ಈಗಿನ ಬಿಜೆಪಿ ಸರ್ಕಾರದಲ್ಲಿ ಕೋಮುವಾದಿತನ, ಭ್ರಷ್ಟಾಚಾರ ಮಿತಿಮೀರಿದೆ. ಇಷ್ಟೊಂದು ಕೋಮುವಾದಿತನ, ಭ್ರಷ್ಟಾಚಾರ ನಾನು ನೋಡಿಲ್ಲ. ಕೋಮುವಾದಿ ಬಿಜೆಪಿ ಕಿತ್ತೊಗೆದು ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ತರುವ ಪ್ರತಿಜ್ಞೆ ಮಾಡಿ ಎಂದು ಜನತೆಗೆ ಕರೆ ಕೊಟ್ಟರು.

    ದೇಶದಲ್ಲಿ ಆತಂಕದ ವಾತಾವರಣ ಇದೆ. ಮೋದಿ ಪ್ರಧಾನಿ ಆದ ಮೇಲೆ ಜನರಿಗೆ ಸಂಕಷ್ಟ ಎದುರಾಗಿದೆ. ಪ್ರಜಾಪ್ರಭುತ್ವ ಸಂಕಷ್ಟದಲ್ಲಿದೆ, ಸಾಂವಿಧಾನಿಕ ರಕ್ಷಣೆ ಇಲ್ಲ. ಅವರು ಹಿಂದೂ ರಾಷ್ಟ್ರದ ನಿರ್ಮಾಣ ಎನ್ನುತ್ತಾ ಲೂಟಿ ಮಾಡಲು ಅಧಿಕಾರಕ್ಕೆ ಬಂದಿದ್ದಾರೆ. ಸಂವಿಧಾನ ಬದಲಾವಣೆ, ಸರ್ವಾಧಿಕಾರ ತರೋದು ಬಿಜೆಪಿಯ ಉದ್ದೇಶ. ಬಿಜೆಪಿ ನಾಯಕರೇ, ಮೋದಿಯವರೇ ನೀವೆಲ್ಲಿದ್ದರೂ ಕಾಂಗ್ರೆಸ್ ಮುಗಿಸಲು ಸಾಧ್ಯವಿಲ್ಲ. ಸಂವಿಧಾನ ಬದಲಾಯಿಸಲು ಈ ದೇಶದ ಜನ ಬಿಡಲ್ಲ. ನಿಮ್ಮ ಕನಸು ನನಸಾಗಲ್ಲ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಅಕ್ಕಿಕಾಳಿನ ಆಕೃತಿ ನಿರ್ಮಿಸಿ, ಅನ್ನಭಾಗ್ಯ ಸ್ಮರಿಸಿದ ಸಿದ್ದು ಅಭಿಮಾನಿ

    ದೇಶದ ಅಧಿಕಾರವನ್ನು ಜನಕಾಳಜಿ ಇರೋರೇ ಹಿಡಿಯಬೇಕು. ಅದಕ್ಕೆ ರಾಹುಲ್ ಗಾಂಧಿ‌ ಯೋಗ್ಯರು. ಮೋದಿಯವರು ವಚನ ಭ್ರಷ್ಟರಾಗಿದ್ದಾರೆ. ಮೋದಿ ಪ್ರಧಾನಿ ಆಗೋ ಮುಂಚೆ ದೇಶದ ಸಾಲ ಎಷ್ಟಿತ್ತು, ಈಗ ಎಷ್ಟಿದೆ? ಮೋದಿ ಪ್ರಧಾನಿ ಆದ ಮೇಲೆ ಎಂಟು ವರ್ಷದ ಬಳಿಕ 155 ಲಕ್ಷ ಕೋಟಿ ರೂ. ಸಾಲ ಆಗಿದೆ. 102 ಲಕ್ಷ ಕೋಟಿ ಸಾಲವನ್ನು ಎಂಟು ವರ್ಷದಲ್ಲಿ ಮಾಡಿದ್ದಾರೆ ಎಂದು ಟೀಕಿಸಿದರಲ್ಲದೇ, 2024ಕ್ಕೆ ದೇಶದಲ್ಲಿ ಮತ್ತೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುತ್ತೆ. ರಾಹುಲ್ ಗಾಂಧಿ ದೇಶದ ಪ್ರಧಾನಿ ಆಗ್ತಾರೆ. ರಾಹುಲ್ ಗಾಂಧಿ ಈ ದೇಶದ ಆಶಾಕಿರಣ ಎಂದು ತಿಳಿಸಿದರು.

    ಕರಾವಳಿಯಲ್ಲಿ ಇತ್ತೀಚೆಗೆ ಮೂರು ಕೊಲೆಗಳಾಗಿವೆ. ಮಸೂದ್, ಪ್ರವೀಣ್, ಫಾಝಿಲ್ ಕೊಲೆ ಆಯ್ತು. ಬೊಮ್ಮಾಯಿ ಇಡೀ ಕರ್ನಾಟಕದ ಮುಖ್ಯಮಂತ್ರಿ ನಾ? ಅಥವಾ ಒಂದು ಧರ್ಮಕ್ಕೆ ಸೇರಿದ ಮುಖ್ಯಮಂತ್ರಿ ನಾ? ಬೊಮ್ಮಾಯಿ ಪ್ರವೀಣ್‌ಗೆ ಪರಿಹಾರ ಕೊಟ್ಟಂತೆ ಯಾಕೆ ಮಸೂದ್, ಫಾಝಿಲ್‌ಗೆ ಕೊಡ್ಲಿಲ್ಲ? ಸಬ್ ಕಾ ಸಾತ್ ಸಬ್ ಕಾ ವಿಕಾಸ್ ಹೇಳಲು ನೈತಿಕತೆ ಇಲ್ಲ. ಬೊಮ್ಮಾಯಿಗೆ ರಾಜ್ಯ ಆಳಲು ನೈತಿಕತೆ ಇಲ್ಲ. ಅಲ್ಪಸಂಖ್ಯಾತರು ಭಯದಲ್ಲಿ ಬದುಕುತ್ತಿದ್ದಾರೆ. ಮಾನ ಮರ್ಯಾದೆ ಇದ್ರೆ ರಾಜೀನಾಮೆ ಕೊಟ್ಟು ಮನೆಗೆ ಹೋಗಿ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಬೆಳ್ಳಿತೆರೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಬಯೋಪಿಕ್

    ಕರ್ನಾಟಕದಲ್ಲಿ ಇನ್ನೂ ಕೃಷಿ, ಎಪಿಎಂಸಿ ಕಾಯ್ದೆ ವಾಪಸ್ ತಗೊಂಡಿಲ್ಲ ಸರ್ಕಾರ. ನಮ್ಮ ಸರ್ಕಾರ ಇದ್ದಾಗ ನಾವು ನುಡಿದಂತೆ ನಡೆದಿದ್ದೇವೆ. ಇದರ ಬಗ್ಗೆ ನನಗೆ ಹೆಮ್ಮೆ ಇದೆ. ಇತಿಹಾಸದಲ್ಲಿ ಕಾಂಗ್ರೆಸ್ ಸರ್ಕಾರ ಮಾತ್ರ ನುಡಿದಂತೆ ನಡೆದಿರೋದು. ನೀವು ಏನ್ಮಾಡಿದೀರಿ ಬೊಮ್ಮಾಯಿ? ರಾಜ್ಯದ ಜನ ನಿರ್ಧಾರ ಮಾಡಿದ್ದಾರೆ. ಭ್ರಷ್ಟ ಬಿಜೆಪಿ ಸರ್ಕಾರ ಕಿತ್ತೊಗೆದು ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ತರುವ ನಿರ್ಧಾರ ಮಾಡಿದ್ದಾರೆ ಜನ ಎಂದು ಹೇಳಿದರು.

    2022 ರ ಆಗಸ್ಟ್‌ 15ಕ್ಕೆ ನಮಗೆ ಸ್ವಾತಂತ್ರ್ಯ ದೊರಕಿ 75 ವರ್ಷ ತುಂಬ್ತಿದೆ. ಈ ವರ್ಷ ಇಡೀ ದೇಶದಲ್ಲಿ ಅಮೃತ ಮಹೋತ್ಸವ ಆಚರಣೆ ಮಾಡುತ್ತಿದ್ದೇವೆ. ರಾಜ್ಯ, ದೇಶದ ಜನತೆಗೆ ಸ್ವಾತಂತ್ರ್ಯೋತ್ಸವದ ಶುಭಕೋರುತ್ತೇನೆ. ಕಾಕತಾಳೀಯ ಎಂಬಂತೆ ಇವತ್ತಿಗೆ ನನಗೆ 75 ವರ್ಷ ತುಂಬಿದೆ. ನಾನು ಎಂದೂ ಜನ್ಮದಿನ ಆಚರಿಸಿಕೊಂಡಿಲ್ಲ. ಪಕ್ಷದ ಸ್ನೇಹಿತರು, ಹಿತೈಷಿಗಳು, ಅಭಿಮಾನಿಗಳು 75 ತುಂಬ್ತಿದೆ, ಸಕ್ರಿಯ ರಾಜಕಾರಣದಲ್ಲಿ ಇದ್ದೀರಿ ಅಂತಾ ಜನ್ಮದಿನ‌ ಮಾಡಿಕೊಳ್ಳಲು ಒತ್ತಾಯ ಮಾಡಿದ್ರು. ಅವರ ಒತ್ತಾಯಕ್ಕೆ ಮಣಿದು 75ನೇ ಹುಟ್ಟುಹಬ್ಬ ಆಚರಣೆಗೆ ಒಪ್ಪಿದೆ. ಎಲ್ಲರ ಆಶೀರ್ವಾದ, ಶುಭಾಶಯ ಬಯಸುತ್ತಿದ್ದೇನೆ. ಸಿದ್ದರಾಮಯ್ಯ ಅವರ ಮೇಲೆ ವಿಶೇಷ ಪ್ರೀತಿಯಿಂದ ಬಂದಿದ್ದೀನಿ ಅಂತಾ ರಾಹುಲ್ ಗಾಂಧಿ ಹೇಳಿದ್ರು. ಅವರಿಗೆ ಕೋಟಿ ಕೋಟಿ ನಮನ ಸಲ್ಲಿಸುತ್ತೇನೆ. ನಾನು ಕಾಂಗ್ರೆಸ್ ಸೇರಿದಾಗಿನಿಂದ ಇವತ್ತಿನವರೆಗೂ ನನ್ನ ಮೇಲೆ ಅವರು ಅಪಾರ ಪ್ರೀತಿ ಇಟ್ಟುಕೊಂಡಿದ್ದಾರೆ. ನಾನು ಬೇರೆ ಪಕ್ಷದಿಂದ ಬಂದಿದ್ದರೂ ನನ್ನ ಮೇಲೆ ಪ್ರೀತಿ ಇದೆ. ನಾನು ಸಿಎಂ‌ ಆಗಲು ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಕಾರಣ ಎಂದು ಕೃತಜ್ಞತೆ ಸಲ್ಲಿಸಿದರು. ಇದನ್ನೂ ಓದಿ: ಸಿದ್ದರಾಮೋತ್ಸವ ಹೌಸ್ ಫುಲ್- ಸಿದ್ದರಾಮಯ್ಯ ಬಗ್ಗೆ ಹಾಡಿಗೆ ಕಂಬಳಿ ಬೀಸಿ ಡ್ಯಾನ್ಸ್ ಮಾಡಿದ ಅಭಿಮಾನಿಗಳು

    ಜನಶಕ್ತಿಯ ಆಶೀರ್ವಾದ ಇಲ್ಲದಿದ್ರೆ ದೀರ್ಘಕಾಲ ರಾಜಕೀಯ, ಜನಸೇವೆ ಮಾಡಕ್ಕಾಗಲ್ಲ. ಜನರ ಆಶೀರ್ವಾದ, ಪ್ರೀತಿಯಿಂದ ಶಾಸಕ, ಮಂತ್ರಿ, ಮುಖ್ಯಮಂತ್ರಿ ಆಗಿ ಸೇವೆ ಮಾಡಲು ಅವಕಾಶ ಸಿಕ್ತು. ಎಲ್ಲಿವರೆಗೆ ದೈಹಿಕ, ಮಾನಸಿಕವಾಗಿ ಸದೃಢ ಆಗಿರುತ್ತೇನೋ ಅಲ್ಲಿಯವರೆಗೂ ಸಕ್ರಿಯ ರಾಜಕೀಯ ಮಾಡ್ತಾ ಜನರ ಸೇವೆ ಮಾಡ್ತೇನೆ. ಡಿಕೆಶಿ ಮತ್ತು ನನ್ನ ಬಗ್ಗೆ ವಿಪಕ್ಷಗಳು ಸುಳ್ಳು ಹೇಳಿಕೆ ನೀಡಿ ಜನರಿಗೆ ತಪ್ಪು ಮಾಹಿತಿ ನೀಡುತ್ತಿವೆ. ನಮ್ಮ ಮಧ್ಯೆ ಬಿರುಕಿದೆ ಎನ್ನುವುದು ವಿಪಕ್ಷಗಳ ಭ್ರಮೆ. ನಾನು ಮತ್ತು ಡಿಕೆಶಿ ಒಟ್ಟಾಗಿ ಇದ್ದೇವೆ. ನಮ್ಮ ಮಧ್ಯೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ರಾಹುಲ್ ಗಾಂಧಿ ನೇತೃತ್ವದಲ್ಲಿ ಮತ್ತೆ ಕಾಂಗ್ರೆಸ್ ಅನ್ನು ಅಧಿಕಾರಕ್ಕೆ ತರಲು ಜನರ ಆಶೀರ್ವಾದ ಇರಬೇಕು ಎಂದು ಆಶಯ ವ್ಯಕ್ತಪಡಿಸಿದರು.

    Live Tv
    [brid partner=56869869 player=32851 video=960834 autoplay=true]

  • ಮುಖ್ಯಮಂತ್ರಿ ಆಗಬೇಕಾದರೆ ಜನಾದೇಶ ಬೇಕು: ಸಿದ್ದರಾಮಯ್ಯ ಟೀಂಗೆ ಎಂಟಿಬಿ ತಿರುಗೇಟು

    ಮುಖ್ಯಮಂತ್ರಿ ಆಗಬೇಕಾದರೆ ಜನಾದೇಶ ಬೇಕು: ಸಿದ್ದರಾಮಯ್ಯ ಟೀಂಗೆ ಎಂಟಿಬಿ ತಿರುಗೇಟು

    ಬೆಂಗಳೂರು: ರಾಜ್ಯದಲ್ಲಿ ಯಾರೇ ಮುಖ್ಯಮಂತ್ರಿ ಆಗಬೇಕಾದರೂ ಮೊದಲು ಜನಾದೇಶ ಮುಖ್ಯ ಎಂದು ಸಿದ್ದರಾಮಯ್ಯ ಟೀಂಗೆ ಸಚಿವ ಎಂಟಿಬಿ ನಾಗರಾಜ್ ತಿರುಗೇಟು ಕೊಟ್ಟಿದ್ದಾರೆ.

    ಸಿದ್ದರಾಮೋತ್ಸವದ ಬಗ್ಗೆ ವಿಧಾನಸೌಧದಲ್ಲಿ ಮಾತನಾಡಿದ ಅವರು, ನಾವು ನಮ್ಮ ಸರ್ಕಾರದ ಸಾಧನೆ ತಿಳಿಸಲು ಜನೋತ್ಸವ ಮಾಡುತ್ತಿದ್ದೇವೆ. ಆದರೆ ಸಿದ್ದರಾಮಯ್ಯ ಅವರ ಟೀಂ ಸಿದ್ದರಾಮೋತ್ಸವ ಮಾಡುತ್ತಿದೆ. ಅವರು ಸಿದ್ದರಾಮೋತ್ಸವ ಮಾಡಲಿ, ನಾವು ಜನೋತ್ಸವ ಮಾಡುತ್ತೇವೆ. ಸಿದ್ದರಾಮೋತ್ಸವ ಮಾಡಿದರೆ ನಮಗೇನು ಅಭ್ಯಂತರ ಇಲ್ಲ ಎಂದಿದ್ದಾರೆ. ಇದನ್ನೂ ಓದಿ: ಗೋಮಾಂಸ ಪ್ರಕರಣವನ್ನು ಪ್ರಸ್ತಾಪಿಸಿ ಸಿದ್ದುವನ್ನು ಸಿಂಹ ಎಂದು ಕೊಂಡಾಡಿದ ಜಮೀರ್

    ಸಿದ್ದರಾಮಯ್ಯ ಸಿಎಂ ಎಂಬ ಅವರ ಶಿಷ್ಯರ ಹೇಳಿಕೆಗೆ ತಿರುಗೇಟು ಕೊಟ್ಟ ಎಂಟಿಬಿ, ಯಾರೇ ಮುಖ್ಯಮಂತ್ರಿ ಆಗಬೇಕಾದರೂ ಜನರ ತೀರ್ಮಾನ ಮುಖ್ಯ. ಸಿಎಂ ಆಗಬೇಕಾದರೆ ಜನಾದೇಶ ಮೊದಲು‌ ಅವಶ್ಯಕತೆ ಇದೆ. ಜನರು ತೀರ್ಮಾನ ಕೊಡದೇ ಸಿಎಂ ಆಗಲು ಸಾಧ್ಯವಿಲ್ಲ ಅಂತಾ ಸಿದ್ದರಾಮಯ್ಯ ಟೀಂಗೆ ಎಂಟಿಬಿ ನಾಗರಾಜ್ ಟಾಂಗ್‌ ನೀಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಸಿದ್ದರಾಮೋತ್ಸವ ಅಲ್ಲ ಅದು ಸಿದ್ದರಾಮಯ್ಯ ಅವರ ಕೊನೆಗಾಲದ ಉತ್ಸವ: ಲಕ್ಷ್ಮಣ ಸವದಿ ವ್ಯಂಗ್ಯ

    ಸಿದ್ದರಾಮೋತ್ಸವ ಅಲ್ಲ ಅದು ಸಿದ್ದರಾಮಯ್ಯ ಅವರ ಕೊನೆಗಾಲದ ಉತ್ಸವ: ಲಕ್ಷ್ಮಣ ಸವದಿ ವ್ಯಂಗ್ಯ

    ಬಾಗಲಕೋಟೆ: ಸಿದ್ದರಾಮೋತ್ಸವ ಅದು ಸಿದ್ದರಾಮಯ್ಯರ ಕೊನೆಗಾಲೋತ್ಸವ ಆಗುತ್ತದೆ ಎಂದು ಮಾಜಿ ಸಚಿವ ಲಕ್ಷ್ಮಣ ಸವದಿ ವ್ಯಂಗ್ಯವಾಡಿದ್ದಾರೆ.

    ಬಾಗಲಕೋಟೆ ಜಿಲ್ಲೆ ಜಮಖಂಡಿಯಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಸಿದ್ದರಾಮೋತ್ಸವದಿಂದ ಬಿಜೆಪಿಗೆ ಹುಮ್ಮಸ್ಸು, ಆತ್ಮಸ್ಥೈರ್ಯ ಬಂದಿದೆ. ಹೊಸ ಅಲೆಯನ್ನು ಸೃಷ್ಟಿ ಮಾಡುವ ಶಕ್ತಿ ಬಿಜೆಪಿ ಕಾರ್ಯಕರ್ತರಿಗೆ ಇದೆ. ಹೀಗಾಗಿ ಸಿದ್ದರಾಮೋತ್ಸವ ಬಗ್ಗೆ ಬಿಜೆಪಿ ಗಂಭೀರವಾಗಿ ತೆಗೆದುಕೊಂಡಿಲ್ಲ. ಸಿದ್ದರಾಮೋತ್ಸವ ಅಲ್ಲ, ಸಿದ್ದರಾಮ ಕೊನೆಗಾಲೋತ್ಸವ ಆಗುತ್ತೆ ಎಂದು ಟೀಕಿಸಿದ್ದಾರೆ. ಇದನ್ನೂ ಓದಿ: ಅವಿವಾಹಿತೆಗೂ ಗರ್ಭಪಾತಕ್ಕೆ ಅವಕಾಶ: ಸುಪ್ರೀಂ ಕೋರ್ಟ್‌ ಮಹತ್ವದ ತೀರ್ಪು

    ಕಾಂಗ್ರೆಸ್ಸಿನ ತಾಯಿ ಬಂಜೆ: ಕಾಂಗ್ರೆಸ್ ದೇಶದಲ್ಲಿ ಬೆರಳೆಣಿಕೆಯಷ್ಟು ಮಾತ್ರ ಇದೆ. ರಾಜಾಸ್ಥಾನ ಸೇರಿ ಕೆಲ ಸಣ್ಣಪುಟ್ಟ ರಾಜ್ಯಗಳಲ್ಲಿ ಮಾತ್ರವೇ ಉಳಿದಿದೆ. ಕಾಂಗ್ರೆಸ್ ಬಗ್ಗೆ ಕೂಸು ಹುಟ್ಟುವ ಮೊದಲೇ ಕುಲಾಯಿ ಹೊಲಿಸುತ್ತಾರೆ ಅಂತಾರೆ. ನಾನು ಈ ಮಾತು ಒಪ್ಪಲ್ಲ. ಗರ್ಭಿಣಿ ಆದರೆ ತಾನೆ ಕುಲಾಯಿ ಹೊಲಿಸುವುದು. ಕಾಂಗ್ರೆಸ್ಸಿನ ತಾಯಿ ಬಂಜೆ ಆಗಿದ್ದಾಳೆ. ಆ ತಾಯಿ ಗರ್ಭಿಣಿಯೂ ಆಗಲ್ಲ, ಕೂಸೂ ಹಡಿಯಲ್ಲ… ಹೀಗಾಗಿ ಕುಲಾಯಿ ಹೊಲಿಸುವ ಪ್ರಸಂಗವೂ ಬರಲ್ಲ ಲೇವಡಿ ಮಾಡಿದ್ದಾರೆ.

    ಕಾಂಗ್ರೆಸ್ ಪಕ್ಷದಲ್ಲೇ ಸಾಕಷ್ಟು ಅಸಮಾಧಾನ ಇದೆ. ಸಿದ್ದರಾಮಯ್ಯ ಈಗಾಗಲೇ 5 ವರ್ಷ ಮುಖ್ಯಮಂತ್ರಿ ಆಗಿದ್ದಾರೆ. ಅಧಿಕಾರ ಅನುಭವಿಸಿ ಮತ್ತೆ ಸಿಎಂ ಆಗುವುದು ಸರಿಯಲ್ಲ ಅನ್ನೋದು ಕಾಂಗ್ರೆಸ್ ನಾಯಕರ ಅಭಿಪ್ರಾಯ. ಡಿ.ಕೆ.ಶಿವಕುಮಾರ್ ಮುಂದಿನ ಮುಖ್ಯಮಂತ್ರಿ ಆಗ್ಬೇಕು ಅಂತಾರೆ, ಮಲ್ಲಿಕಾರ್ಜುನ ಖರ್ಗೆ ಅವರಿಗೆ ವಯಸ್ಸಾಗಿದೆ. ಒಮ್ಮೆ ಆದ್ರೂ ಸಿಎಂ ಆಗಿ ನಿವೃತ್ತಿ ಆಗ್ಬೇಕು ಅಂತಾ ಇದ್ದಾರೆ. ಈ ನಡುವೆ ಕಾಂಗ್ರೆಸ್ ಅಧ್ಯಕ್ಷನಾಗಿ ಹೆಚ್ಚುಕಾಲ ಸೇವೆ ಮಾಡಿದರೂ ತಮ್ಮನ್ನ ಸೋಲಿದ್ರಲ್ಲಾ ಅನ್ನೋ ಬೇಸರ ಪರಮೇಶ್ವರ್ ಅವರದ್ದು, ಅವರಿಗೂ ಸಿಎಂ ಆಗಬೇಕು ಅನ್ನೋ ಆಸೆ. ಇತ್ತೀಚೆಗೆ ಮಾಜಿ ಸಚಿವ ಎಚ್.ಸಿ.ಮಹದೇವಪ್ಪ ಅವರೂ ಸಿಎಂ ಆಗಬೇಕು ಅನ್ನುತ್ತಿದ್ದಾರೆ. ಇನ್ನು ಒಂದೆರಡು ತಿಂಗಳಲ್ಲಿ ಕಾಂಗ್ರೆಸ್ ನಲ್ಲಿ 2 ಡಜನ್ ಜನರು ಸಿಎಂ ಆಗಲು ಎದ್ದು ನಿಲ್ಲುವ ಸಂಭವವಿದೆ ಎಂದು ಕುಟುಕಿದ್ದಾರೆ. ಇದನ್ನೂ ಓದಿ: ಪ್ರೇಯಸಿ ಕತ್ತು ಹಿಸುಕಿ ಕೊಂದು, ತಾನು ಆತ್ಮಹತ್ಯೆ ಮಾಡಿಕೊಂಡ ಭಗ್ನ ಪ್ರೇಮಿ 

    ಕಾಂಗ್ರೆಸ್ ಪಕ್ಷದಲ್ಲಿ ನಾಯಕತ್ವ ಕೊರತೆಯಿದೆ. ದೋಣಿ ದಡ ಮುಟ್ಟಿಸಲು ಪರಿಣಿತ ನಾವಿಕ ಬೇಕಾಗಿದೆ. ನಾವಿಕನಿಲ್ಲದ ದೋಣಿ ಮುಂದೆ ಬರಲ್ಲ. ದೇಶದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಭವಿಷ್ಯ ಇಲ್ಲ. ಕರ್ನಾಟಕದಲ್ಲಿ ಕಾಂಗ್ರೆಸ್ಸಿಗರು ಹಗಲು ಕನಸು ಕಾಣ್ತಿದ್ದಾರೆ. ರಾಜ್ಯದಲ್ಲಿ ಮುಂದಿನ 5 ವರ್ಷ ಬಿಜೆಪಿಯೇ ಆಡಳಿತಕ್ಕೆ ಬರಲಿದೆ. ಮುಖ್ಯಮಂತ್ರಿ ಆದವರು 5 ವರ್ಷ ಉತ್ತಮ ಆಡಳಿತ ನೀಡುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಮೋದಿ ಸೋಲಿಸಲು ಕಾಂಗ್ರೆಸ್‌ನವರು ಪಾಕಿಸ್ತಾನದ ಬೆಂಬಲ ಕೇಳಿದ್ರು – ಪ್ರಹ್ಲಾದ್ ಜೋಶಿ

    ಮೋದಿ ಸೋಲಿಸಲು ಕಾಂಗ್ರೆಸ್‌ನವರು ಪಾಕಿಸ್ತಾನದ ಬೆಂಬಲ ಕೇಳಿದ್ರು – ಪ್ರಹ್ಲಾದ್ ಜೋಶಿ

    ಬೆಂಗಳೂರು: ಈ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರನ್ನ ಸೋಲಿಸಲು ಕಾಂಗ್ರೆಸ್‌ನವರು ಪಾಕಿಸ್ತಾನದ ಬೆಂಬಲ ಕೇಳಿದ್ರು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

    ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ನವರು ಮೋದಿ ಅವರನ್ನು ಸೋಲಿಸಲು ಪಾಕಿಸ್ತಾನದ ಬೆಂಬಲ ಕೇಳಿದ್ದರು. ಈ ತರಹದ ವ್ಯಕ್ತಿಗಳು ಭಯೋತ್ಪಾದನೆಯ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಟೀಕಿಸಿದ್ದಾರೆ. ಇದನ್ನೂ ಓದಿ: ಶ್ರೀಲಂಕಾ ಅಧ್ಯಕ್ಷರ ಮನೆಯಲ್ಲಿ ಪ್ರತಿಭಟನಾಕಾರರಿಗೆ ಸಿಕ್ತು ಲಕ್ಷ ಲಕ್ಷ ಹಣ!

    Congress

    ಕಾಂಗ್ರೆಸ್ ಇಡೀ ದೇಶದಲ್ಲಿ ಭಯೋತ್ಪಾದನೆ ವಿಷಯದಲ್ಲಿ ಪ್ರೆಸ್‌ಮೀಟ್ ಮಾಡುತ್ತಿದ್ದು, ಇದೊಂದು ಹಾಸ್ಯಾಸ್ಪದ ಸಂಗತಿಯಾಗಿದೆ. ಕಾಂಗ್ರೆಸ್‌ನಿಂದಲೇ ಭಯೋತ್ಪಾದನೆ ಪ್ರಾರಂಭವಾಯಿತು. ಆಗ ದೇಶದ ಮೂಲೆ ಮೂಲೆಯಲ್ಲೂ ಭಯೋತ್ಪಾದನಾ ಚಟುವಟಿಕೆಗಳು ನಡೆದಿವೆ. ಈಗ ದೇಶದ ಯಾವುದೇ ಭಾಗದಲ್ಲೂ ಭಯೋತ್ಪಾದನೆ ನಡೆಯುತ್ತಿಲ್ಲ. ಹಾಗಾಗಿ ಕಾಂಗ್ರೆಸ್ ತನ್ನ ವೋಟ್‌ಬ್ಯಾಂಕ್ ರಾಜಕಾರಣ ಮಾಡಲಾಗುತ್ತಿಲ್ಲ ಎಂದು ಕುಟುಕಿದ್ದಾರೆ. ಇದನ್ನೂ ಓದಿ: ಹೊಳೆಗೆ ಕಾರು ಉರುಳಿದ ಪ್ರಕರಣಕ್ಕೆ ಟ್ವಿಸ್ಟ್- ಆಕ್ಸಿಡೆಂಟ್ ಆಗೋ 4 ನಿಮಿಷ ಮೊದಲೇ ಕರೆ ಮಾಡಿದ್ದ ಯುವಕರು..!

    ಕಾಂಗ್ರೆಸ್ ನೀತಿಯಿಂದಲೇ ಭಯೋತ್ಪಾದನೆ ಪ್ರಾರಂಭವಾಯಿತು. ಒಂದು ರೀತಿಯಲ್ಲಿ ಕಾಂಗ್ರೆಸ್ ಪ್ರಾಯೋಜಿತ ಭಯೋತ್ಪಾದನೆಗಳೇ ನಡೆದಿವೆ. ತುಷ್ಟೀಕರಣದ ರಾಜಕಾರಣದ ಪರಾಕಾಷ್ಟೇ ಎಷ್ಟರ ಮಟ್ಟಿಗೆ ಇತ್ತೆಂದರೆ, ಬಾಟ್ಲಾಹೌಸ್ ಎನ್‌ಕೌಂಟರ್‌ನಲ್ಲಿ ಭಯೋತ್ಪಾದಕರು ಸತ್ತಾಗ ಸೋನಿಯಾಗಾಂಧಿ ಅವರು ಕಣ್ಣೀರು ಹಾಕಿದ್ದರೆಂದು ಪಕ್ಷವೇ ಘೋಷಣೆ ಮಾಡಿದೆ. ತುಕಡೆ-ತುಕಡೆ ಗ್ಯಾಂಗ್ ಅಫ್ಜಲ್ ಗುರು ಪರ ಘೋಷಣೆ ಹಾಕಿದಾಗ ಅವರ ಪರ ನಿಂತವರು ರಾಹುಲ್ ಗಾಂಧಿ. ಈ ರೀತಿ ಹಲವು ಉದಾಹರಣೆಗಳಿವೆ ಅಂದು ಜೋಶಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಡಿಕೆಶಿ ಅವರೇ ಸಿದ್ದರಾಮಯ್ಯರ ಟಾರ್ಗೆಟ್: ಸಿದ್ದರಾಮೋತ್ಸವ ಮಾಡ್ತಿರೋದಕ್ಕೆ ನಮಗೆ ಹೊಟ್ಟೆಕಿಚ್ಚಿಲ್ಲ. ಕಾಂಗ್ರೆಸ್ ಪಕ್ಷದವರಿಗೇ ಹೊಟ್ಟೆಕಿಚ್ಚಿದೆ. ಸಿದ್ದರಾಮಯ್ಯ ಅವರು ಕಾಂಗ್ರೆಸ್‌ಗೆ ಬಂದು ಮೊದಲು ಖರ್ಗೆಯವರನ್ನ ಮುಳುಗಿಸಿದರು. ನಂತರ ಪರಮೇಶ್ವರ್‌ರನ್ನ ಮುಳುಗಿಸಿದರು. ಈಗ ಸಿದ್ದರಾಮಯ್ಯ ಅವರ ಮುಂದಿನ ಟಾರ್ಗೆಟ್ ಡಿ.ಕೆ.ಶಿವಕುಮಾರ್. ಹಾಗಾಗಿ ಸಿದ್ದರಾಮೋತ್ಸವ ಮಾಡಿದಷ್ಟೂ ನಮಗೇ ಲಾಭ. ಅದಕ್ಕೆ ನಾನು ಶುಭ ಹಾರೈಸುತ್ತೇನೆ ಎಂದು ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಸಿದ್ದರಾಮೋತ್ಸವ ಮುಗೀತಿದ್ದಂತೆ ಕಾಂಗ್ರೆಸ್ ಇಬ್ಭಾಗ- ಈಶ್ವರಪ್ಪ ಭವಿಷ್ಯ

    ಸಿದ್ದರಾಮೋತ್ಸವ ಮುಗೀತಿದ್ದಂತೆ ಕಾಂಗ್ರೆಸ್ ಇಬ್ಭಾಗ- ಈಶ್ವರಪ್ಪ ಭವಿಷ್ಯ

    ಶಿವಮೊಗ್ಗ: ಸಿದ್ದರಾಮೋತ್ಸವ ಮುಗಿಯುತ್ತಿದ್ದಂತೆ ಕಾಂಗ್ರೆಸ್ ಇಬ್ಭಾಗ ಆಗುತ್ತದೆ. ಇದರಲ್ಲಿ ಯಾವುದೇ ಅನುಮಾನ ಇಲ್ಲ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಭವಿಷ್ಯ ನುಡಿದಿದ್ದಾರೆ.

    ಶಿವಮೊಗ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಸಿದ್ದರಾಮೋತ್ಸವ ವಿರೋಧ ಮಾಡುತ್ತೇನೆ ಅಂತಾ ಡಿಕೆಶಿ ಧೈರ್ಯವಾಗಿ ಹೇಳಬಹುದಿತ್ತು. ಬಹಿರಂಗವಾಗಿ ನನಗೂ ಸಿದ್ದರಾಮಯ್ಯ ಅವರಿಗೆ ವೈಮನಸ್ಸು ಇದೆ ಅಂತ ಒಪ್ಪಿಕೊಳ್ಳದ ಡಿಕೆಶಿ ಶಿಖಂಡಿ ರೂಪದಲ್ಲಿ ಹೇಳಿಕೆ ಕೊಡುತ್ತಿದ್ದಾರೆ ಎಂದು ಕುಟುಕಿದ್ದಾರೆ. ಇದನ್ನೂ ಓದಿ: ಸಿದ್ದರಾಮೋತ್ಸವಕ್ಕೆ ರಾಹುಲ್ ಗಾಂಧಿ ಬರೋದು ಗ್ಯಾರಂಟಿ; ಆದರೆ…!

    ಸಿದ್ದರಾಮಯ್ಯ, ಡಿಕೆಶಿ ಚುನಾವಣೆಯಲ್ಲಿ ಗೆಲ್ಲುತ್ತಾರೋ, ಸೊಲುತ್ತಾರೋ ಗೊತ್ತಿಲ್ಲ. ಸಿದ್ದರಾಮಯ್ಯನಿಗೆ ಇನ್ನೂ ಕ್ಷೇತ್ರವೇ ಗೊತ್ತಿಲ್ಲ. ಆಗಲೇ ಮುಖ್ಯಮಂತ್ರಿ ಅಂತಾರೆ. ಜನತೆ ಇವರನ್ನು ನೋಡುತ್ತಿದ್ದಾರೆ. ಸಿದ್ದರಾಮಯ್ಯ ಹಾಗೂ ಡಿಕೆಶಿ ಇಬ್ಬರನ್ನೂ ಜನರೇ ಸೋಲಿಸುತ್ತಾರೆ. ಹಿಂದೆ ಸರ್ಕಾರವನ್ನು ಉರುಳಿಸಿದರು. ಬರೋ ಚುನಾವಣೆಯಲ್ಲಿ ಕಾಂಗ್ರೆಸ್ ವಿಪಕ್ಷವಾಗಿಯೂ ಉಳಿಯುವುದಿಲ್ಲ ಎಂದು ಹೇಳಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಸಿದ್ದರಾಮೋತ್ಸವಕ್ಕೆ ರಾಹುಲ್ ಗಾಂಧಿ ಬರೋದು ಗ್ಯಾರಂಟಿ; ಆದರೆ…!

    ಸಿದ್ದರಾಮೋತ್ಸವಕ್ಕೆ ರಾಹುಲ್ ಗಾಂಧಿ ಬರೋದು ಗ್ಯಾರಂಟಿ; ಆದರೆ…!

    ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ 75ನೇ ಹುಟ್ಟುಹಬ್ಬದ ಪ್ರಯುಕ್ತ ನಡೆಯುವ ಸಿದ್ದರಾಮೋತ್ಸವದಲ್ಲಿ ಎಐಸಿಸಿ ನಾಯಕ ರಾಹುಲ್‌ ಗಾಂಧಿ ಭಾಗವಹಿಸುವುದು ಖಚಿತವಾಗಿದೆ. ಆದರೆ ಕೊನೆಗಳಿಗೆಯಲ್ಲಿ ಬದಲಾವಣೆ ಆಗಬಹುದು ಎಂದು ರಾಹುಲ್‌ ಗಾಂಧಿ ಕಚೇರಿಯಿಂದ ಮಾಹಿತಿ ರವಾನೆಯಾಗಿದೆ.

    ಆಗಸ್ಟ್ 3 ರಂದು ದಾವಣಗೆರೆಯಲ್ಲಿ ನಡೆಯುವ ಸಿದ್ದರಾಮೋತ್ಸವದಲ್ಲಿ ಎಐಸಿಸಿ ನಾಯಕರ ರಾಹುಲ್ ಗಾಂಧಿ ಭಾಗವಹಿಸುವುದು ಖಚಿತವಾಗಿದೆ. ಸಿದ್ದರಾಮಯ್ಯ ಅಮೃತ ಮಹೋತ್ಸವದಲ್ಲಿ ರಾಹುಲ್ ಗಾಂಧಿ ಭಾಗವಹಿಸುತ್ತಾರೆ ಎಂದು ರಾಹುಲ್ ಗಾಂಧಿ ಕಚೇರಿಯಿಂದ ಸಿದ್ದರಾಮಯ್ಯಗೆ ಮಾಹಿತಿ ತಲುಪಿಸಲಾಗಿದೆ. ಇದನ್ನೂ ಓದಿ: ಗುತ್ತಿಗೆ, ಹೊರ ಗುತ್ತಿಗೆ ನೌಕರರ ವೇತನ ಪರಿಷ್ಕರಣೆಗೆ ಯತ್ನ, ಆರೋಗ್ಯ ವಿಮೆ ವಿಸ್ತರಣೆ: ಸುಧಾಕರ್

    Siddaramaiah

    ಸಿದ್ದರಾಮೋತ್ಸವ ಸಮಾವೇಶದಲ್ಲಿ ಭಾಗವಹಿಸುತ್ತಾರೆ. ಆದರೂ ಕೊನೆಗಳಿಗೆಯಲ್ಲಿ ಬದಲಾವಣೆ ಆಗಬಹುದು. ಸ್ವತಃ ರಾಹುಲ್ ಗಾಂಧಿ ಕಚೇರಿಯಿಂದ ಸಿದ್ದರಾಮಯ್ಯಗೆ ಬಂದಿರುವ ಸಂದೇಶ. ಜುಲೈ 31 ರಂದು ಇಡಿ ವಿಚಾರಣೆಗೆ ಹಾಜರಾಗುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಸಮನ್ಸ್ ನೀಡಲಾಗಿದೆ. ವಿಚಾರಣೆ ಆಗಸ್ಟ್ 3 ಕ್ಕೂ ಮುಂದುವರಿದರೆ ರಾಹುಲ್ ಗಾಂಧಿ ಸಿದ್ದರಾಮೋತ್ಸವಕ್ಕೆ ಬರಲು ಆಗಲ್ಲ ಎಂದು ರಾಹುಲ್ ಗಾಂಧಿ ಕಚೇರಿಯಿಂದ ಮಾಹಿತಿ ರವಾನಿಸಲಾಗಿದೆ.

    ಆಗಸ್ಟ್ 3 ರಂದು ಸೋನಿಯಾ ಗಾಂಧಿಯವರ ವಿಚಾರಣೆ ಇದ್ದರೆ ರಾಹುಲ್ ಗಾಂಧಿ ಕರ್ನಾಟಕಕ್ಕೆ ಬರಲು ಸಾಧ್ಯವಿಲ್ಲ. ಆಗಸ್ಟ್ 3 ರಂದು ರಾಹುಲ್ ಗಾಂಧಿಯವರನ್ನೇ ವಿಚಾರಣೆಗೆ ಕರೆದರೆ ಸಿದ್ದರಾಮೋತ್ಸವಕ್ಕೆ ಬರಲ್ಲ. ಈ ಬೆಳವಣಿಗೆ ನಡೆಯದಿದ್ದರೆ ಖಂಡಿತ ಆಗಸ್ಟ್ 3 ರಂದು ರಾಹುಲ್ ಗಾಂಧಿ ಅಮೃತ ಮಹೋತ್ಸವದಲ್ಲಿ ಭಾಗವಹಿಸುತ್ತಾರೆ ಎಂದು ರಾಹುಲ್ ಗಾಂಧಿ ಕಚೇರಿಯಿಂದ ಸಿದ್ದರಾಮಯ್ಯಗೆ ಸಂದೇಶ ತಲುಪಿದೆ. ಇದನ್ನೂ ಓದಿ: ಭ್ರಷ್ಟಾಚಾರದ ಇನ್ನೊಂದು ಮುಖವೇ ಕಾಂಗ್ರೆಸ್: ರೇಣುಕಾಚಾರ್ಯ

    Live Tv
    [brid partner=56869869 player=32851 video=960834 autoplay=true]

  • ಸಿದ್ದರಾಮೋತ್ಸವಕ್ಕೆ ಡಿಕೆಶಿ ಕೆಂಪೇಗೌಡ ಉತ್ಸವ ಟಕ್ಕರ್

    ಸಿದ್ದರಾಮೋತ್ಸವಕ್ಕೆ ಡಿಕೆಶಿ ಕೆಂಪೇಗೌಡ ಉತ್ಸವ ಟಕ್ಕರ್

    ಬೆಂಗಳೂರು: ಸಿದ್ದರಾಮಯ್ಯನವರ ಸಿದ್ದರಾಮೋತ್ಸವಕ್ಕೆ ಭರ್ಜರಿ ಕೌಂಟರ್ ಕೊಡಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ ಎನ್ನಲಾಗುತ್ತಿದೆ.

    SIDDARAMAIAH

    ಹಳೆ ಮೈಸೂರು ಭಾಗದಲ್ಲಿ ಅದ್ದೂರಿ ಕೆಂಪೇಗೌಡರ ಉತ್ಸವಕ್ಕೆ ಒಕ್ಕಲಿಗ ಸಮುದಾಯದ ನಾಯಕರು ಹಾಗೂ ಸ್ವಾಮೀಜಿಗಳು ಆಸಕ್ತಿ ತೋರುತ್ತಿದ್ದಾರೆ ಎಂಬ ಸುದ್ದಿ ಕೇಳಿಬಂದಿದ್ದು, ಸಮುದಾಯದ ವತಿಯಿಂದ ಕೆಂಪೇಗೌಡ ಉತ್ಸವದ ಅಂಗವಾಗಿ ಬೃಹತ್ ಸಮಾವೇಶ ನಡೆಸಿದರೆ ಸಮಾವೇಶದ ಸಂಪೂರ್ಣ ಜವಾಬ್ದಾರಿ ಹೊರಲು ಡಿ.ಕೆ. ಶಿವಕುಮಾರ್ ಮುಂದಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ: ಭಾರೀ ಮಳೆಗೆ ಕಳಸ, ಹೊರನಾಡು ಸಂಪರ್ಕ ಕಡಿತ – ಬೆಳ್ತಂಗಡಿ ಶಾಲಾ, ಕಾಲೇಜುಗಳಿಗೆ ರಜೆ

    ಈ ಮೂಲಕ, ರಾಜಕೀಯ ಎದುರಾಳಿಗಳಿಗೆ ತಮ್ಮ ಸಮುದಾಯದ ಶಕ್ತಿ ಹಾಗೂ ಬೆಂಬಲದ ಸಂದೇಶ ರವಾನಿಸುವುದು ಡಿಕೆಶಿ ಲೆಕ್ಕಾಚಾರವಾಗಿದೆ. ಈ ಮಧ್ಯೆ ಸಿದ್ದರಾಮಯ್ಯ ಅಮೃತ ಮಹೋತ್ಸವದ ಮಾಹಿತಿಯನ್ನ ಅಮೃತ ಮಹೋತ್ಸವ ಸಮಿತಿ ಇಂದು ಅಧಿಕೃತವಾಗಿ ಪ್ರಕಟಿಸಲಿದೆ. ಇದನ್ನೂ ಓದಿ: ಜುಲೈ 12ಕ್ಕೆ ಚಾಮರಾಜಪೇಟೆ ಬಂದ್ – ಬೆಂಬಲ ನೀಡಲು ಮುಸ್ಲಿಂ ವ್ಯಾಪಾರಿಗಳು ನಿರಾಕರಣೆ

    ಬೆಂಗಳೂರಿನ ಖಾಸಗಿ ಹೋಟೆಲ್‍ನಲ್ಲಿ ಬೆಳಗ್ಗೆ 10ಕ್ಕೆ ಸಭೆ ನಡೆಯಲಿದೆ. ಆರ್.ವಿ.ದೇಶಪಾಂಡೆ ನೇತೃತ್ವದ ಅಮೃತೋತ್ಸವ ಸಮಿತಿಯ ಸದಸ್ಯರಾದ ಮಹದೇವಪ್ಪ, ಬೈರತಿ ಸುರೇಶ್, ಕೆ.ಜೆ.ಜಾರ್ಜ್, ಪಿಜಿಆರ್ ಸಿಂಧ್ಯ, ಜಯಮಾಲ, ಬಿ.ಎಲ್.ಶಂಕರ್, ವಿ.ಆರ್.ಸುದರ್ಶನ್, ಜಮೀರ್ ಅಹಮ್ಮದ್ ಸೇರಿದಂತೆ ಘಟಾನುಘಟಿಗಳು ಸಭೆಯಲ್ಲಿ ಭಾಗಿ ಆಗಲಿದ್ದಾರೆ. ಆಗಸ್ಟ್ 3ರ ಸಮಾವೇಶ, ಪೂರ್ವ ಸಿದ್ಧತೆ ಮಾಹಿತಿ ಹಂಚಿಕೊಳ್ಳಲಿದ್ದಾರೆ.

    Live Tv
    [brid partner=56869869 player=32851 video=960834 autoplay=true]