Tag: siddarmaiah

  • ಸರ್ಕಾರಿ ಗುತ್ತಿಗೆ, ಖರೀದಿಯಲ್ಲಿ ಮುಸ್ಲಿಮರಿಗೆ ಮೀಸಲಾತಿ – ಇದು ಹಣಕಾಸು ತಜ್ಞರ ಒಡೆದಾಳುವ ಆರ್ಥಿಕತೆ: ಸುನಿಲ್‌ ಕುಮಾರ್‌ ಕಿಡಿ

    ಸರ್ಕಾರಿ ಗುತ್ತಿಗೆ, ಖರೀದಿಯಲ್ಲಿ ಮುಸ್ಲಿಮರಿಗೆ ಮೀಸಲಾತಿ – ಇದು ಹಣಕಾಸು ತಜ್ಞರ ಒಡೆದಾಳುವ ಆರ್ಥಿಕತೆ: ಸುನಿಲ್‌ ಕುಮಾರ್‌ ಕಿಡಿ

    ಬೆಂಗಳೂರು: ಇಷ್ಟು ದಿ‌ನ ಮುಸ್ಲಿಮರಿಗೆ (Muslims) ತೆರೆಮರೆಯಲ್ಲಿ ವಿಶೇಷ ಆದ್ಯತೆ ನೀಡುತ್ತಿದ್ದ ಸಿದ್ದರಾಮಯ್ಯ (Siddaramaiah) ಈಗ ಅದನ್ನು ಬಜೆಟ್‌ಗೂ (Budget) ವಿಸ್ತರಿಸಿದ್ದಾರೆ. ಹಣಕಾಸು ತಜ್ಞರ ಒಡೆದಾಳುವ ಆರ್ಥಿಕತೆ ಎಂದು ಕಾರ್ಕಳ ಬಿಜೆಪಿ ಶಾಸಕ ಸುನಿಲ್‌ ಕುಮಾರ್‌ (Sunil Kumar) ಆಕ್ರೋಶ ಹೊರ ಹಾಕಿದ್ದಾರೆ.

    ಸರ್ಕಾರಿ ಕಾಮಗಾರಿಗಳಲ್ಲಿ 2 ಕೋಟಿ ರೂ.ವರೆಗಿನ ಗುತ್ತಿಗೆ ಮತ್ತು 1 ಕೋಟಿ ರೂ.ವರೆಗಿನ ಖರೀದಿಯಲ್ಲಿ ಮುಸ್ಲಿಂ ಮೀಸಲಾತಿ ಕಲ್ಪಿಸುವುದಾಗಿ ರಾಜ್ಯ ಸರ್ಕಾರ ಬಜೆಟ್ ನಲ್ಲಿ ಘೋಷಿಸಿದೆ. ಸರ್ಕಾರದ ಹಿಂದೂ ವಿರೋಧಿ ನೀತಿಗೆ ಇದಕ್ಕಿಂತ ಬೇರೆ ಉದಾಹರಣೆ ಬೇಕೆ ಎಂದು ಪ್ರಶ್ನಿಸಿದ್ದಾರೆ.


    ಕಡುಬು ತಿನ್ನುವುದು ಕಹಿ ನೀರು ಕುಡಿಯುವುದು. ರಾಜ್ಯವನ್ನು 1,16,000 ಕೋಟಿ ರೂ. ಸಾಲದ ಶೂಲಕ್ಕೆ ದೂಡಿರುವ ಸಿದ್ದರಾಮಯ್ಯನವರ ಹದಿನಾರನೇ ಬಜೆಟ್ ಕರ್ನಾಟಕವನ್ನು ಅಕ್ಷರಶಃ ಆರ್ಥಿಕ ದುಸ್ಥಿತಿಗೆ ದೂಡಲಿದೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಅಲ್ಪಸಂಖ್ಯಾತರಿಗೆ ಬಂಪರ್‌: ಸಾಮೂಹಿಕ ವಿವಾಹದಲ್ಲಿ ಮದ್ವೆಯಾದ ಜೋಡಿಗಳಿಗೆ 50 ಸಾವಿರ – ಬಜೆಟ್‌ ಘೋಷಣೆಗಳೇನು?

     


    ಬಜೆಟ್ ಎನ್ನುವುದು ನನ್ನ ದೃಷ್ಟಿಯಲ್ಲಿ ಕೇವಲ ಬಿಳಿಹಾಳೆಯಲ್ಲ ಎಂದು ವ್ಯಾಖ್ಯಾನಿಸಿರುವ ಸಿದ್ದರಾಮಯ್ಯನವರು ಶಾಶ್ವತ ಯೋಜನೆಗಳತ್ತ ಗಮನ ಹರಿಸಿಲ್ಲ. ಕರಾವಳಿ ಭಾಗದ ಜಿಲ್ಲೆಗಳಿಗಂತೂ ಯಾವುದೇ ಕೊಡುಗೆ ಇಲ್ಲ. ಮಂಗಳೂರಿನಿಂದ ಕಾರವಾರದವರೆಗಿನ ಕೊಂಕಣ ರೈಲ್ವೆ ಯೋಜನೆಗೆ ಸರ್ಕಾರ ನೆರವಿನ ಹಸ್ತ ಚಾಚಿಲ್ಲ ಎಂದು ದೂರಿದ್ದಾರೆ.

    ಆಕರ್ಷಣೀಯ ಘೋಷಣೆಗಳು, ಕವಿವಾಣಿಯ ಉಲ್ಲೇಖದಲ್ಲೇ ಬಜೆಟ್ ಪುಸ್ತಕ ತುಂಬಿದ್ದು, ಶಿಕ್ಷಣ, ಆರೋಗ್ಯ, ಜಲಸಂನ್ಮೂಲ, ಗ್ರಾಮೀಣಾಭಿವೃದ್ಧಿ ಯೋಜನೆಗಳ ಆಮೂಲಾಗ್ರ ಅಭಿವೃದ್ಧಿಗೆ ಯಾವುದೇ ಕೊಡುಗೆ ಇಲ್ಲ ಎಂದು ಸಿಟ್ಟು ಹೊರಹಾಕಿದ್ದಾರೆ.

  • ಓರ್ವ ಸಚಿವ, ಓರ್ವ ಶಾಸಕನಿಗೆ ಶೀಘ್ರವೇ ಶೋಕಾಸ್‌ ನೋಟಿಸ್‌

    ಓರ್ವ ಸಚಿವ, ಓರ್ವ ಶಾಸಕನಿಗೆ ಶೀಘ್ರವೇ ಶೋಕಾಸ್‌ ನೋಟಿಸ್‌

    – ಶಿಸ್ತು ಕ್ರಮಕ್ಕೆ ಮುಂದಾದ ಕಾಂಗ್ರೆಸ್‌

    ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಶತಾಯಗತಾಯ ಶಿಸ್ತು ಕ್ರಮದ ಚಾಟಿ ಬೀಸಲೇಬೇಕು ಎಂಬ ತೀರ್ಮಾನಕ್ಕೆ ಕಾಂಗ್ರೆಸ್ ನಾಯಕರು ಬಂದಿದ್ದಾರೆ. ಸಿಎಂ ಸಿದ್ದರಾಮಯ್ಯ (CM Siddaramaiah) ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ (DK Shivakumar) ಎರಡು ಬಣದಲ್ಲಿ ಒಬ್ಬೊಬ್ಬರ ಟಾರ್ಗೆಟ್ ಮಾಡಿ ನೋಟಿಸ್ ನೀಡುವುದು ಬಹುತೇಕ ಫಿಕ್ಸ್ ಎನ್ನಲಾಗಿದೆ.

    ಸಿದ್ದರಾಮಯ್ಯ ಬಣದಲ್ಲಿ ಸಚಿವರೊಬ್ಬಗೆ ಮತ್ತು ಡಿಕೆಶಿ ಬಣದ ಶಾಸಕರೊಬ್ಬರಿಗೆ ಶೋಕಾಸ್ ನೋಟಿಸ್ ಫಿಕ್ಸ್ ಎನ್ನಲಾಗುತ್ತಿದೆ. ವಾರದೊಳಗೆ ಇಬ್ಬರಿಗೂ ನೋಟಿಸ್ ಕಳುಹಿಸುವ ಸಾಧ್ಯತೆಯಿದೆ. ಇದನ್ನೂ ಓದಿ: ಬೀದರ್‌ | ಕನ್ನಡ ಕೃಷಿ ಡಿಪ್ಲೊಮಾ ಕೋರ್ಸ್‌ ಬಂದ್‌

     

    ಕಾಂಗ್ರೆಸ್ ಅಂತರಿಕ ಭಿನ್ನಾಭಿಪ್ರಾಯಕ್ಕೆ ಮದ್ದು ಅರೆಯಲು ಶೀಘ್ರ ಶಾಸಕಾಂಗ ಪಕ್ಷದ ಸಭೆ ಕರೆಯಲು ಎಐಸಿಸಿಯಿಂದಲೇ (AICC) ಸೂಚನೆ ಬಂದಿದೆ. ಜುಲೈ ಎರಡನೇ ವಾರದಲ್ಲಿ ಶಾಸಕಾಂಗ ಪಕ್ಷದ ಸಭೆ ನಡೆಯುವ ಸಾಧ್ಯತೆಯಿದ್ದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಭಾಗವಹಿಸಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.  ಇದನ್ನೂ ಓದಿ: ಉದ್ಯಮಿ ವಿಜಯ್ ಮಲ್ಯ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್

    ಹೈಕಮಾಂಡ್ ಸಂದೇಶವನ್ನು ಎಐಸಿಸಿ ನಾಯಕರ ಮೂಲಕವೇ ಶಾಸಕರು ಹಾಗೂ ಸಚಿವರಿಗೆ ಹೇಳಿಸುವುದು ಎಐಸಿಸಿ ಲೆಕ್ಕಾಚಾರ ಎನ್ನಲಾಗಿದೆ. ಅಧಿವೇಶನಕ್ಕೆ ಮೊದಲೇ ಬೆಂಗಳೂರಿನಲ್ಲಿ ಶಾಸಕಾಂಗ ಪಕ್ಷದ ಸಭೆ ಕರೆದು ಸಚಿವ ಶಾಸಕರಿಗೆ ಶಿಸ್ತಿನ ಪಾಠ  ಹೇಳಲು ಎಐಸಿಸಿ ತೀರ್ಮಾನಿಸಲಾಗಿದೆ ಎನ್ನಲಾಗಿದೆ.

     

  • ಇಂಥದ್ದೇ ಡ್ರೆಸ್‌ ಹಾಕೊಳ್ಳಿ, ಬಟ್ಟೆ ಬಿಚ್ಚಾಕ್ಕೊಂಡು ಹೋಗಿ ಹೇಳಲ್ಲ- ದೇಗುಲಗಳಲ್ಲಿನ ಡ್ರೆಸ್‌ ಕೋಡ್‌ಗೆ ಸಿಎಂ ವಿರೋಧ

    ಇಂಥದ್ದೇ ಡ್ರೆಸ್‌ ಹಾಕೊಳ್ಳಿ, ಬಟ್ಟೆ ಬಿಚ್ಚಾಕ್ಕೊಂಡು ಹೋಗಿ ಹೇಳಲ್ಲ- ದೇಗುಲಗಳಲ್ಲಿನ ಡ್ರೆಸ್‌ ಕೋಡ್‌ಗೆ ಸಿಎಂ ವಿರೋಧ

    ಬೆಂಗಳೂರು: ಇತ್ತೀಚೆಗೆ ಹಂಪಿಯಲ್ಲಿ ಡ್ರೆಸ್ ಕೋಡ್ (Dress Code Temple) ಜಾರಿ ಮಾಡಲಾಗಿತ್ತು. ಆದರೆ ಇದೀಗ ದೇಗುಲಗಳಲ್ಲಿ ವಸ್ತ್ರಸಂಹಿತೆ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ವಿರೋಧ ವ್ಯಕ್ತಪಡಿಸುವುದರ ಜೊತೆಗೆ ವಿವಾದಾತ್ಮಕ ಹೇಳಿಕೆಯೊಂದನ್ನು ಕೂಡ ನೀಡಿದ್ದಾರೆ.

    ಬುಧವಾರ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ದೇವಸ್ಥಾನದಲ್ಲಿ ವಸ್ತ್ರಸಂಹಿತೆ ಬಗ್ಗೆ ಹಿರಿಯ ಸಾಹಿತಿ ಮರುಳಸಿದ್ಧಪ್ಪ ಅವರು ಸಿಎಂ ಮುಂದೆಯೇ ಅಕ್ಷೇಪ ವ್ಯಕ್ತಪಡಿಸಿದ್ದರು. ಮೈತುಂಬಾ ಬಟ್ಟೆ ಹಾಕಿಕೊಂಡು ಹೋಗಬೇಕು ನಿಜ. ಹಾಗಂತ‌ ಮಹಿಳೆಯರು ಸೀರೆ, ಪುರುಷರು ಪಂಚೆ ಉಡಬೇಕು ಅನ್ನೋದು ಯಾಕೆ? ಇದು ಪ್ರಜಾಪ್ರಭುತ್ವ ತತ್ವಕ್ಕೆ ಮಾರಕ ಅಂತಾ ಮರುಳ ಸಿದ್ಧಪ್ಪ ಆಕ್ಷೇಪ ಎತ್ತಿದರು.

    ಇದಾದ ಬಳಿಕ ವೇದಿಕೆಯಲ್ಲಿಯೇ ಸ್ಪಷ್ಟೀಕರಣ ನೀಡಿದ ಸಿಎಂ, ನಮ್ಮ ಮುಜರಾಯಿ ಇಲಾಖೆ ಈ ತೀರ್ಮಾನ ಎಲ್ಲಾ ಮಾಡಿಲ್ಲ. ಇಂಥದ್ದೇ ಡ್ರೆಸ್ ಹಾಕಬೇಡಿ ಅಥವಾ ಹಾಕಿ ಅನ್ನೋದು ತಪ್ಪು. ಶರ್ಟ್, ಪ್ಯಾಂಟ್ ಧರಿಸಿಕೊಂಡು ಹೋಗಬೇಡಿ, ಸೀರೆ ಹಾಕ್ಕೊಂಡು ಹೋಗಿ ಅಂತಾ ಹೇಳೋದು ಸರಿಯಲ್ಲ. ನಾವು ಇಂಥದ್ದೇ ಡ್ರೆಸ್ ಹಾಕಿಕೊಳ್ಳಿ ಅಥವಾ ಬಟ್ಟೆ ಬಿಚ್ಚಾಕ್ಕೊಂಡು ಬನ್ನಿ ಅಂತಾ ಹೇಳಲ್ಲ ಎಂದು ಸಿಎಂ ವಿವಾದಾತ್ಮಕ ಹೇಳಿಕೆ ನೀಡಿದರು.

    ಶುದ್ಧ ಮನಸ್ಸಿನಿಂದ ದೇವಸ್ಥಾನಕ್ಕೆ ಹೋಗಬೇಕು, ಶುದ್ಧ ಭಕ್ತಿ ಇಲ್ಲದೇ ಬಟ್ಟೆ ಸರಿಯಾಗಿ ಹಾಕಿಕೊಂಡು ಹೋದರೆ ಏನ್ ಪ್ರಯೋಜನ ಎಂದು ಸಿಎಂ ಇದೇ ವೇಳೆ ಪ್ರಶ್ನೆಯನ್ನು ಹಾಕಿದರು.  ಇದನ್ನೂ ಓದಿ: ವಿಕ್ಷಿತ್ ಭಾರತ್ ಬಜೆಟ್ – ಹಣಕಾಸು ಸಚಿವೆಗೆ ಪ್ರಧಾನಿ ಮೋದಿ ಶ್ಲಾಘನೆ

    ಖಾಸಗಿ ದೇಗುದಲ್ಲಿ ವಸ್ತ್ರ ಸಂಹಿತೆ ಜಾರಿಗೆ ತಂದಿದ್ದು ನಿಜ. ಆದರೆ ಸಿದ್ದರಾಮಯ್ಯ ಸರ್ಕಾರದ ಮುಜರಾಯಿ ಇಲಾಖೆ ದೇಗುಲದಲ್ಲಿ ಹಲವೆಡೆ ವಸ್ತ್ರ ಸಂಹಿತೆ ತಂದಿರುವ ನಿರ್ಧಾರಕ್ಕೆ ಖುದ್ದು ಸಿಎಂ ಅವರೇ ವಿರೋಧ ವ್ಯಕ್ತಪಡಿಸಿರುವುದು ಭಾರೀ ಚರ್ಚೆಗೆ ಗ್ರಾಸವಾಗಿದೆ.

  • ಮೂರನೇ ಅಲೆ ಭೀತಿ ಇದ್ದು ಜನರ ನೆರವಿಗೆ ನಿಲ್ಲಿ: ಕಾಂಗ್ರೆಸ್ ಮುಖಂಡರಿಗೆ ಸಿದ್ದರಾಮಯ್ಯ ಕರೆ

    ಮೂರನೇ ಅಲೆ ಭೀತಿ ಇದ್ದು ಜನರ ನೆರವಿಗೆ ನಿಲ್ಲಿ: ಕಾಂಗ್ರೆಸ್ ಮುಖಂಡರಿಗೆ ಸಿದ್ದರಾಮಯ್ಯ ಕರೆ

    ಬೆಂಗಳೂರು: ಕೋವಿಡ್ ಮೂರನೇ ಅಲೆಯ ಭೀತಿ ಶುರುವಾಗಿದ್ದು, ಮತ್ತೆ ಜನರ ನೆರವಿಗೆ ಟೊಂಕ ಕಟ್ಟಿ ನಿಲ್ಲುವಂತೆ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಪಕ್ಷದ ಶಾಸಕರು, ಸಂಸದರು, ಮುಖಂಡರಲ್ಲಿ ಮನವಿ ಮಾಡಿದ್ದಾರೆ.

    ಕೊರೊನಾದಿಂದ ಸಂಕಷ್ಟಕ್ಕೆ ಒಳಗಾದವರನ್ನು ತಲುಪಲು ಕೈಗೊಳ್ಳಬೇಕಾದ ಅಭಿಯಾನದ ಬಗ್ಗೆ ಚರ್ಚಿಸಲು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಝೂಮ್ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಕೋವಿಡ್ ಒಂದು ಮತ್ತು ಎರಡನೇ ಅಲೆಯ ಸಂದರ್ಭದಲ್ಲಿ ಜನರಿಗೆ ನೆರವಿನ ಹಸ್ತ ಚಾಚಿದ ಶಾಸಕರು, ಸಂಸದರು, ಮುಖಂಡರ ಕಾರ್ಯದ ಬಗ್ಗೆ ಸಿದ್ದರಾಮಯ್ಯ ಅವರು ಪ್ರಶಂಸೆ ವ್ಯಕ್ತಪಡಿಸಿದರು.

    ಕೊರೊನಾದಿಂದ ಪಾರಾಗಲು ಲಸಿಕೆ ಹಾಕಿಸಿಕೊಳ್ಳುವುದೊಂದೇ ಮಾರ್ಗ. ಆದರೆ ಲಸಿಕೆ ನೀಡುವ ಕಾರ್ಯ ಮಂದಗತಿಯಲ್ಲಿ ಸಾಗುತ್ತಿದೆ. ಡಿಸೆಂಬರ್ ವೇಳೆಗೆ ಎಲ್ಲರಿಗೂ ಲಸಿಕೆ ನೀಡುವುದಾಗಿ ಸರ್ಕಾರ ಹೇಳುತ್ತಿದೆ. ಆದರೆ ಕೆಲ ಜಿಲ್ಲೆಗಳಲ್ಲಿ ಲಸಿಕೆ ಸಿಗದೆ ಜನ ಪರದಾಡುವಂತ ಸ್ಥಿತಿ ನಿರ್ಮಾಣವಾಗಿದೆ. ಸರ್ಕಾರ ಆರಂಭಿಸಿದ ಲಸಿಕೆ ಅಭಿಯಾನ ನಿಂತಲ್ಲೇ ಇದೆ. ಆದರೆ, ನಮ್ಮ ಪಕ್ಷದ ಹಲವಾರು ಶಾಸಕರು ಜನರಿಗೆ ಉಚಿತವಾಗಿ ಲಸಿಕೆ ಕೊಡಿಸುವ ಕೆಲಸ ಮಾಡುತ್ತಿದ್ದಾರೆ. ಅಗತ್ಯಕ್ಕೆ ಅನುಗುಣವಾಗಿ ಲಸಿಕೆ ನೀಡಿ ಜನರನ್ನು ಕೊರೊನಾ ಮುಕ್ತ ಮಾಡುವ ಕಾರ್ಯವನ್ನು ಸರ್ಕಾರ ಮಾಡಬೇಕು. ಈ ವಿಷಯದಲ್ಲಿ ಪಕ್ಷದ ವತಿಯಿಂದಲೂ ಸರ್ಕಾರದ ಮೇಲೆ ಒತ್ತಡ ಹೇರಲಾಗುವುದು.

    ಎಐಸಿಸಿ ಸೂಚನೆ ಮೇರೆಗೆ ರಾಜ್ಯಾದ್ಯಂತ ಜನರನ್ನು ತಲುಪುವ ಅಭಿಯಾನವನ್ನು ಯಶಸ್ವಿಗೊಳಿಸಲು ಪ್ರತಿಯೊಬ್ಬರೂ ಶ್ರಮಿಸಬೇಕು ಎಂದು ಸಿದ್ದರಾಮಯ್ಯ ಅವರು ಮನವಿ ಮಾಡಿದರು. ಸರ್ಕಾರ ಘೋಷಣೆ ಮಾಡಿರುವ ಕೊರೊನಾ ಪ್ಯಾಕೇಜ್ ಜನರನ್ನು ತಲುಪಿಯೇ ಇಲ್ಲ. ಪರಿಹಾರ ಪಡೆಯುವ ಮಾರ್ಗ ತಿಳಿಯದೆ ಜನ ಪರದಾಡುತ್ತಿದ್ದಾರೆ. ಈ ಕುರಿತಾಗಿಯೂ ಶಾಸಕರು ಜನರಿಗೆ ನೆರವಾಗಬೇಕು.

    ಕೊರೋನಾದ ಮೊದಲ ಮತ್ತು ಎರಡನೆ ಅಲೆಗಳು ದೇಶದ ಕೋಟ್ಯಾಂತರ ಜನರನ್ನು ಬಾಧಿಸಿ, ಲಕ್ಷಾಂತರ ಜನರನ್ನು ಕೊಂದು ಹಾಕಿವೆ. ಜೊತೆಗೆ ಎಲ್ಲ ದುಡಿಯುವ ವರ್ಗಗಳ ಬದುಕು ನೆಲಕಚ್ಚುವಂತೆ ಮಾಡಿವೆ. ಆದರೆ, ಸಂಕಷ್ಟಕ್ಕೆ ಒಳಗಾದವರ ಕೂಗು ಕೇಂದ್ರ, ರಾಜ್ಯ ಸರ್ಕಾರಕ್ಕೆ ಕೇಳಿಸುತ್ತಿಲ್ಲ ಎಂದು ಸಿದ್ದರಾಮಯ್ಯ ಅವರು ಹೇಳಿದರು.

    ಕೊರೊನಾದಿಂದ ಮರಣ ಹೊಂದಿದವರ ಕುಟುಂಬಗಳಿಗೆ ಕೇವಲ ಒಂದು ಲಕ್ಷ ಪರಿಹಾರ ಘೋಷಿಸಲಾಗಿದೆ. ಅದನ್ನು 5 ಲಕ್ಷ ರೂ.ಗಳಿಗೆ ಏರಿಸುವಂತೆ ಸರ್ಕಾರವನ್ನು ಒತ್ತಾಯಿಸುವುದರ ಜೊತೆಗೆ ಪರಿಹಾರ ಎಲ್ಲರಿಗೂ ಸಿಗುವಂತೆ ಮಾಡಬೇಕಿದೆ. ಕೊರೊನಾ ಸಾವಿನ ಸಂಖ್ಯೆಯನ್ನೂ ಸರ್ಕಾರ ಮುಚ್ವಿಡುತ್ತಿದ್ದು ಸುಳ್ಳು ಅಂಕಿ ಅಂಶ ತೋರಿಸುತ್ತಿದೆ. ಇದನ್ನು ಬಯಲಿಗೆಳೆಯುವ ಕೆಲಸವೂ ಆಗಬೇಕಿದೆ ಎಂದರು. ಇದನ್ನೂ ಓದಿ: ವಿಕಲಚೇತನರು ದೇವರ ಮಕ್ಕಳಿದ್ದಂತೆ: ಲಕ್ಷ್ಮೀ ಹೆಬ್ಬಾಳ್ಕರ್

    ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಧ್ರುವ ನಾರಾಯಣ, ಈಶ್ವರ ಖಂಡ್ರೆ, ಸಲೀಂ ಅಹಮದ್ ಸೇರಿದಂತೆ ಹಾಲಿ ಮತ್ತು ಮಾಜಿ ಸಂಸದರು, ಶಾಸಕರು, ಪಕ್ಷದ ಜಿಲ್ಲಾಧ್ಯಕ್ಷರು ಇತರ ಮುಖಂಡರು ಸಭೆಯಲ್ಲಿದ್ದರು. ಇದನ್ನೂ ಓದಿ: ನಮ್ಮ ಪಕ್ಷ ಅಧಿಕಾರಕ್ಕೆ ಬರಲ್ಲ: ಎಸ್.ಆರ್.ಶ್ರೀನಿವಾಸ್

  • ಸಚಿವರು, ಶಾಸಕರು, ಸಂಸದರೆಲ್ಲರೂ ಯಾವ ಧರ್ಮದವರು? – ತೇಜಸ್ವಿ ಸೂರ್ಯ ವಿರುದ್ಧ ಸಿದ್ದರಾಮಯ್ಯ ಕಿಡಿ

    ಸಚಿವರು, ಶಾಸಕರು, ಸಂಸದರೆಲ್ಲರೂ ಯಾವ ಧರ್ಮದವರು? – ತೇಜಸ್ವಿ ಸೂರ್ಯ ವಿರುದ್ಧ ಸಿದ್ದರಾಮಯ್ಯ ಕಿಡಿ

    – ನಿಮ್ಮ ಮೆದುಳಲ್ಲಿರುವ ಕೋಮು ವೈರಸ್‍ಗೆ ಚಿಕಿತ್ಸೆ ಪಡ್ಕೊಳ್ಳಿ
    – ಪಿಎಂ ಕೇರ್ಸ್ ನಿಧಿಗೆ ರಾಜ್ಯದಿಂದ ಎಷ್ಟು ಹಣ ಸಂದಾಯವಾಗಿದೆ?

    ಬೆಂಗಳೂರು: ತಿನ್ನುವ ಅನ್ನದಿಂದ ಹಿಡಿದು ಮನುಷ್ಯನ ಪ್ರಾಣದ ವರೆಗೆ ಎಲ್ಲದರಲ್ಲಿಯೂ ಜಾತಿ-ಧರ್ಮವನ್ನು ಎಳೆದು ತರುವ ನಿಮ್ಮ ಕೊಳಕು ಬುದ್ದಿಯನ್ನು ಕೊರೊನಾ ರೋಗಕ್ಕೂ ಯಾಕೆ ಎಳೆದುತರ್ತೀರಿ ತೇಜಸ್ವಿ ಸೂರ್ಯ? ಕೊರೊನಾ ವೈರಸ್ ಗಿಂತಲೂ ಅಪಾಯಕಾರಿ ನಿಮ್ಮ ಮೆದುಳಲ್ಲಿರುವ ಕೋಮು ವೈರಸ್, ಅದಕ್ಕೆ ಚಿಕಿತ್ಸೆ ಪಡೆದುಕೊಳ್ಳಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ತೇಜಸ್ವಿ ಸೂರ್ಯ ವಿರುದ್ಧ ಕಿಡಿ ಕಾರಿದ್ದಾರೆ.

    ಸಾಮಾಜಿಕ ಜಾಲತಾಣದಲ್ಲಿ ತೇಜಸ್ವಿಸೂರ್ಯ, ರವಿಸುಬ್ರಹ್ಮಣ್ಯ, ಸತೀಶ್ ರೆಡ್ಡಿ ಅವರನ್ನು ಉದ್ದೇಶಿಸಿ ಪೋಸ್ಟ್ ಮಾಡಿ ಹಲವು ವಿಚಾರಗಳ ಬಗ್ಗೆ ಸಿದ್ದರಾಮಯ್ಯ ಪ್ರಶ್ನೆ ಕೇಳಿದ್ದಾರೆ.

    ಪೋಸ್ಟ್ ನಲ್ಲಿ ಏನಿದೆ?
    ತೇಜಸ್ವಿಸೂರ್ಯ, ರವಿಸುಬ್ರಹ್ಮಣ್ಯ, ಸತೀಶ್ ರೆಡ್ಡಿ ಅವರೇ,
    ಕೋವಿಡ್ ನಿರ್ವಹಣೆಯ ಗುಪ್ತ ಕಾರ್ಯಾಚರಣೆ ನಡೆಸಬೇಕಾಗಿರುವುದು ಬಿಬಿಎಂಪಿಯಲ್ಲಿರುವ ಅಧಿಕಾರಿಗಳ ವಿರುದ್ಧ ಅಲ್ಲ, ವಿಧಾನಸೌಧದಲ್ಲಿ ಕೂತಿರುವ ಮುಖ್ಯಮಂತ್ರಿಗಳು, ಸಚಿವರು ಮತ್ತು ಬಿಜೆಪಿ ಶಾಸಕರು ಮತ್ತು ಸಂಸದರ ವಿರುದ್ಧ. ಸಣ್ಣಮಿಕಗಳನ್ನು ಹಿಡಿದಿರುವುದು ದೊಡ್ಡ ತಿಮಿಂಗಲಗಳ ರಕ್ಷಣೆಗಾ?

    ಕೋವಿಡ್ ಪ್ರಾರಂಭದ ದಿನಗಳಲ್ಲಿಯೇ ನಾನು ಪತ್ರಿಕಾಗೋಷ್ಠಿ ನಡೆಸಿ ಕೋವಿಡ್ ನಿರ್ವಹಣೆಯಲ್ಲಿನ ಭ್ರಷ್ಟಾಚಾರವನ್ನು ದಾಖಲೆಸಹಿತ ಬಹಿರಂಗಗೊಳಿಸಿದ್ದೆ. ಅದರ ಜೊತೆ ಈಗ ನೀವು ಹೇಳುತ್ತಿರುವುದನ್ನೂ ಸೇರಿಸಿ ಹೈಕೋರ್ಟ್ ಹಾಲಿ ನ್ಯಾಯಾಧೀಶರಿಂದ ತನಿಖೆ ನಡೆಸಲು ಮುಖ್ಯಮಂತ್ರಿಗಳ ಮೇಲೆ ಒತ್ತಡ ಹೇರಿ.

    ಬೆಡ್ ಬ್ಲಾಕಿಂಗ್ ನಿಮ್ಮ ಗಮನಕ್ಕೆ ಬಂದು ಹತ್ತು ದಿನ ಆಯ್ತು ಅಂತೀರಿ. ಇಷ್ಟು ದಿನ ಅಧಿಕಾರಿಗಳ ಮನವೊಲಿಸುತ್ತಿದ್ದೀರಾ? ಬೇರೇನಾದರೂ ವ್ಯವಹಾರದ ಮಾತುಕತೆ ನಡೆದಿತ್ತಾ? ನಿಮ್ಮ ನಿಗೂಢ ಮೌನವನ್ನು ಹೇಗೆ ಅರ್ಥೈಸುವುದು?ತಿನ್ನುವ ಅನ್ನದಿಂದ ಹಿಡಿದು ಮನುಷ್ಯನ ಪ್ರಾಣದ ವರೆಗೆ ಎಲ್ಲದರಲ್ಲಿಯೂ ಜಾತಿ-ಧರ್ಮವನ್ನು ಎಳೆದು ತರುವ ನಿಮ್ಮ ಕೊಳಕು ಬುದ್ದಿಯನ್ನು ಕೊರೊನಾ ರೋಗಕ್ಕೂ ಯಾಕೆ ಎಳೆದುತರ್ತೀರಿ ತೇಜಸ್ವಿ ಸೂರ್ಯ? ಕೊರೊನಾ ವೈರಸ್ ಗಿಂತಲೂ ಅಪಾಯಕಾರಿ ನಿಮ್ಮ ಮೆದುಳಲ್ಲಿರುವ ಕೋಮು ವೈರಸ್, ಅದಕ್ಕೆ ಚಿಕಿತ್ಸೆ ಪಡ್ಕೊಳ್ಳಿ.

    ಬೆಡ್ ಬ್ಲಾಕಿಂಗ್ ದಂಧೆಯಲ್ಲಿ ಷಾಮೀಲಾಗಿರುವವರು ಒಂದೇ ಕೋಮಿನವರು ಎನ್ನುವ ರೀತಿಯಲ್ಲಿ ಆರೋಪಿಗಳ ಪಟ್ಟಿ ಓದಿದ ತೇಜಸ್ವಿ ಸೂರ್ಯ ಅವರೇ, ಮುಖ್ಯ ಆರೋಪಿಗಳಾದ ಮುಖ್ಯಮಂತ್ರಿಗಳಿಂದ ಹಿಡಿದು ಸಚಿವರು, ಶಾಸಕರು, ಸಂಸದರೆಲ್ಲರೂ ಯಾವ ಧರ್ಮದವರು? ಅದನ್ನೂ ಓದಿ ಹೇಳಿಬಿಡಿ. ‘ಯಥಾ ರಾಜಾ ತಥಾ ಮಂತ್ರಿ’. ‘ಮೈ ಬೀ ಕಾವೂಂಗಾ, ತುಮ್ ಬಿ ಕಾವೋ’ ಎನ್ನುವುದೇ ನಿಮ್ಮ ನರೇಂದ್ರ ಮೋದಿಯವರ ನಿಜವಾದ ಘೋಷಣೆ. ಅದನ್ನೇ ನೀವೆಲ್ಲ ಮಾಡ್ತಿದ್ದೀರಿ. ಪಾಲು ಹಂಚಿಕೆಯಲ್ಲಿ ಜಗಳವಾದಾಗ ಇಂತಹ ಕಿಡಿಗಳು ಸಿಡಿಯುತ್ತವೆ ಅಷ್ಟೇ.

    ಮುಖ್ಯಮಂತ್ರಿಗಳಿಂದ ಕರ್ತವ್ಯಲೋಪ-ಭ್ರಷ್ಟತೆ ನಡೆದಿದ್ದರೆ ಅವರ ವಿರುದ್ಧ ನೇರ ಆರೋಪಪಟ್ಟಿ ಸಲ್ಲಿಸಿ ಅವರನ್ನು ಕಿತ್ತು ಹಾಕಿ. ಇದಕ್ಕಾಗಿ ಸರ್ಕಾರಿ ಅಧಿಕಾರಿ-ಸಿಬ್ಬಂದಿಗಳನ್ನು ಯಾಕೆ ಬಳಸಿಕೊಳ್ತೀರಿ? ನಿಮ್ಮ ಆಂತರಿಕ ಕಿತ್ತಾಟಕ್ಕೆ ಕೊರೊನಾವನ್ನು ಯಾಕೆ ಬಳಸಿಕೊಳ್ತೀರಿ? ಕೋವಿಡ್ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎನ್ನುವುದು ಜಗಜ್ಜಾಹೀರಾಗಿದೆ. ನಿಮ್ಮ ಕೇಂದ್ರ ಸರ್ಕಾರ ಏನು ಕಡಿದುಕಟ್ಟೆ ಹಾಕಿದೆ ಅದನ್ನೂ ರಾಜ್ಯದ ಜನತೆಗೆ ತಿಳಿಸಿ.

    ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿಯೇ ಅಧಿಕಾರಕ್ಕೆ ಬಂದರೆ ರಾಜ್ಯದ ಜನತೆಯ ಭಾಗ್ಯದ ಬಾಗಿಲು ತೆರೆಯುತ್ತೆ ಎಂದು ಮತದಾರರ ದಿಕ್ಕುತಪ್ಪಿಸಿ ಅಧಿಕಾರಕ್ಕೆ ಬಂದಿದ್ದೀರಿ, ಈಗ ರಾಜ್ಯದಲ್ಲಿ ದೌರ್ಭಾಗ್ಯದ ಬಾಗಿಲು ತೆರೆದಿದೆ, ಸ್ಮಶಾನದಲ್ಲಿ ಹೆಣಗಳ ಸಾಲು ಬೆಳೆಯುತ್ತಿದೆ. ಇದೇನಾ ನರೇಂದ್ರ ಮೋದಿಯವರ ಅಚ್ಚೇ ದಿನ್?

    ಪಿಎಂ ಕೇರ್ಸ್ ನಿಧಿಗೆ ರಾಜ್ಯದಿಂದ ಎಷ್ಟು ಹಣ ಸಂದಾಯವಾಗಿದೆ? ಅದರಿಂದ ರಾಜ್ಯಕ್ಕೆ ಎಷ್ಟು ನೆರವು ಹರಿದು ಬಂದಿದೆ? ವೆಂಟಿಲೇಟರ್, ಐಸಿಯು, ಆಕ್ಸಿಜನ್ ರಾಜ್ಯಕ್ಕೆ ಎಷ್ಟು ಸಿಕ್ಕಿದೆ? ಮಾಹಿತಿ ಹಕ್ಕಿಗೆ ನಿಷೇಧ ಹೇರಿ ಮೋದಿ ರಕ್ಷಿಸುತ್ತಿರುವುದು ಯಾರನ್ನು? ತಮ್ಮನ್ನೋ? ಅಧಿಕಾರಿಗಳನ್ನೋ?

    ರಾಜ್ಯದ ಕೊರೊನಾ ರೋಗಿಗಳಿಗೆ ಬೆಡ್ ಕೊಡಿ, ವೆಂಟಿಲೇಟರ್ ಕೊಡಿ, ಆಕ್ಸಿಜನ್ ಕೊಡಿ ಎಂದು ಮುಖ್ಯಮಂತ್ರಿಗಳು ಭಿಕ್ಷುಕರ ರೀತಿ ಪ್ರಧಾನಿಯನ್ನು ಬೇಡುತ್ತಿದ್ದಾರೆ. ರಾಜ್ಯದ 25 ಬಿಜೆಪಿ ಸಂಸದರು ಯಾವ ಬಿಲ ಸೇರಿದ್ದಾರೆ? ಇಲ್ಲಿ ಹುಲಿಯಂತೆ ಕಿರುಚಾಡುವ ಸಂಸದರು ಪ್ರಧಾನಿ ಎದುರು ಇಲಿಗಳಾಗಿ ಬಿಲ ಸೇರುವುದು ಯಾಕೆ?

  • ಸಭೆಯಲ್ಲಿ ಸಿಎಂ ಸಿದ್ದರಾಮಯ್ಯನವರನ್ನು ಹಾಡಿ ಹೊಗಳಿದ ರಮೇಶ್ ಕುಮಾರ್

    ಸಭೆಯಲ್ಲಿ ಸಿಎಂ ಸಿದ್ದರಾಮಯ್ಯನವರನ್ನು ಹಾಡಿ ಹೊಗಳಿದ ರಮೇಶ್ ಕುಮಾರ್

    ಕೋಲಾರ: ಇಷ್ಟು ವರ್ಷದವರೆಗೂ ಯಾವ ಮುಖ್ಯಮಂತ್ರಿಗಳು ರೈತರ ಸಾಲವನ್ನು ಮನ್ನಾ ಮಾಡಿರಲಿಲ್ಲ. ಜಿಲ್ಲೆಗೆ ನಿರ್ಧಿಷ್ಟ ನೀರಾವರಿ ಯೋಜನೆಯನ್ನೂ ಮಾಡುವ ಗಂಡಸ್ತನವನ್ನು ಹೊಂದಿರಲಿಲ್ಲ. ಆದರೆ ನಮ್ಮ ಸಿಎಂ ರೈತರ ಸಾಲಮನ್ನಾ ಹಾಗೂ ಜಿಲ್ಲೆಗೆ ನಿರ್ಧಿಷ್ಟ ನೀರಾವರಿ ಯೋಜನೆ ಮಾಡಿದ್ದಾರೆ ಎಂದು ಆರೋಗ್ಯ ಸಚಿವ ರಮೇಶ್ ಕುಮಾರ್ ಸಿದ್ದರಾಮಯ್ಯ ಅವರನ್ನು ಹಾಡಿ ಹೊಗಳಿದ್ದಾರೆ.

    ಸೋಮವಾರ ನಗರದ ಪ್ರವಾಸಿ ಮಂದಿರದಲ್ಲಿ ಮನವೊಲಿಕೆ ಹಾಗೂ ಹೋರಾಟಗಾರರ ಸಭೆಯಲ್ಲಿ ರಮೇಶ್ ಕುಮಾರ್ ಮಾತನಾಡಿ ಸರ್ಕಾರದ ಸಾಧನೆಯನ್ನು ವಿವರಿಸಿದರು.

    20 ರಂದು ಕೋಲಾರ ಜಿಲ್ಲೆಗೆ ಸಿಎಂ ಸಿದ್ದರಾಮಯ್ಯ ಆಗಮನದ ಹಿನ್ನಲೆ ನಗರದ ಪ್ರವಾಸಿ ಮಂದಿರದಲ್ಲಿ ರಮೇಶ್ ಕುಮಾರ್ ನೇತೃತ್ವದಲ್ಲಿ ಹೋರಾಟಗಾರರ ಮನವೊಲಿಸುವ ಸಭೆ ಯಶಸ್ವಿಯಾಯಿತು. ಅಲ್ಲದೆ ಮುಖ್ಯಮಂತ್ರಿಗಳ ಕಾರ್ಯಕ್ರಮಕ್ಕೆ ಯಾವುದೇ ಅಡೆತಡೆಗಳನ್ನು ಮಾಡದಂತೆ ಮನವಿ ಮಾಡಿದರು. ಇನ್ನೂ 11 ಜನ ನೀರಾವರಿ ಹೋರಾಟಗಾರರ ಮೇಲಿನ ಪ್ರಕರಣಗಳನ್ನ ಹಿಂಪಡೆಯುವ ಕುರಿತು ಸರ್ಕಾರದ ಗಮನ ಸೆಳೆಯುವ ಭರವಸೆಯನ್ನು ನೀಡಿದರು.

     ಕೆಜೆ ಜಾರ್ಜ್ ಗಣಪತಿ ಪ್ರಕರಣದಲ್ಲಿ  ಜಾರ್ಜ್ ರಾಜೀನಾಮೆ ನೀಡಬೇಕೆಂಬ ಬಿಜೆಪಿ ನಾಯಕರ ಆಗ್ರಹಕ್ಕೆ ಪ್ರತಿಕ್ರಿಯಿಸಿದ ಅವರು, ಈಗಾಗಲೇ ಗಣಪತಿ ವಿಸರ್ಜನೆಯಾಗಿದೆ ಎಂದು ಹೇಳಿ ವ್ಯಂಗ್ಯವಾಡಿದರು. ಅಲ್ಲದೆ ಆರೋಪ ಸಾಭೀತಾದ ತಕ್ಷಣ ರಾಜೀನಾಮೆ ನೀಡುವಂತೆ ಯಾವ ಸುಪ್ರಿಂಕೋರ್ಟ್ ಆದೇಶ ಮಾಡಿಲ್ಲ. ಜೊತೆಗೆ ರಾಜೀನಾಮೆಗೆ ಆಗ್ರಹಿಸುವವರು ಸುಪ್ರಿಂಕೋರ್ಟ್ ಆದೇಶವನ್ನು ಮೊದಲು ಸರಿಯಾಗಿ ಓದಲಿ ಎಂದು ಹೇಳುವ ಮೂಲಕ ಬಿಜೆಪಿ ನಾಯಕರಿಗೆ ಟಾಂಗ್ ನೀಡಿದರು.

    ವೈಚಾರಿಕ ಅಭಿಪ್ರಾಯ ಭೇದ ವಿಕಾರ ರೂಪಕ್ಕೆ ತಾಳದೆ ಗೌರವಯುತವಾಗಿ ನಡೆದುಕೊಳ್ಳಬೇಕು ಹೀಗೆ ನಡೆದುಕೊಂಡರೆ ಮಾತ್ರ ನಾಯಕರಾಗಿ ದೇಶದ ಜನತೆಗೆ ಮಾದರಿಯಾಗಿರಲು ಸಾಧ್ಯವೆಂದು ರಮೇಶ್ ಕುಮಾರ್ ಹೇಳಿದರು.

  • ರಾಜ್ಯದ ರೈತರ ಸಾಲಮನ್ನಾ: ಸಿಎಂಗೆ ಅಭಿನಂದನೆಗಳ ಸುರಿಮಳೆ

    ರಾಜ್ಯದ ರೈತರ ಸಾಲಮನ್ನಾ: ಸಿಎಂಗೆ ಅಭಿನಂದನೆಗಳ ಸುರಿಮಳೆ

    – ಸಿಹಿ ಹಂಚಿ ಸಿಎಂ ನಿವಾಸದೆದುರು ಸಂಭ್ರಮಾಚರಣೆ

    ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ವಿಧಾನಸಭೆಯಲ್ಲಿ ರೈತರ ಸಾಲಮನ್ನಾ ಮಾಡುವ ಕುರಿತು ಘೋಷಣೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ರಾಜ್ಯದ ಬೇರೆ ಬೇರೆ ಭಾಗಗಳಿಂದ ರೈತರು ಆಗಮಿಸಿ ಸಿಎಂ ಅವರಿಗೆ ಅಭಿನಂದನೆ ಸಲ್ಲಿಸುತ್ತಿದ್ದಾರೆ.

    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧಿಕೃತ ಕಾವೇರಿ ನಿವಾಸಕ್ಕೆ ಭೇಟಿ ನೀಡುತ್ತಿರೋ ರೈತರು, ಮತ್ತಷ್ಟು ಸಾಲಮನ್ನಾ ಮಾಡುವಂತೆ ಮನವಿ ಮಾಡಿದ್ದಾರೆ. ಅಲ್ಲದೇ ಅವರ ನಿವಾಸದ ಎದುರು ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದ್ದಾರೆ. ಯೂತ್ ಕಾಂಗ್ರೆಸ್ ಕಾರ್ಯಕರ್ತರು ಸಿಎಂ ಸಿದ್ದರಾಮಯ್ಯರಂತೆ ಪಂಚೆ ಶಲ್ಯ ಹಾಕಿಕೊಂಡು ಸಿಎಂ ಅವರನ್ನು ಭೇಟಿ ಮಾಡಿದ್ದಾರೆ. ಇದೇ ವೇಳೆ ಸಿಎಂಗೆ ಬಸವಣ್ಣ ಮೂರ್ತಿ ಉಡುಗೊರೆಯಾಗಿ ನೀಡಲು ಮುಂದಾಗಿದ್ದಾರೆ.

    ರಾಜ್ಯ ಸರ್ಕಾರದಿಂದ ಸಹಕಾರಿ ಬ್ಯಾಂಕ್‍ಗಳಿಂದ ರೈತರು ಪಡೆದ ಅಲ್ಪವಾಧಿ 50 ಸಾವಿರ ರೂ. ಸಾಲವನ್ನು ಮನ್ನಾ ಮಾಡಲಾಗುವುದು. 2017ರ ಜೂನ್ 20ಕ್ಕೆ ಕೊನೆಗೊಂಡಂತೆ 50 ಸಾವಿರ ರೂ. ಸಾಲವನ್ನು ಮನ್ನಾ ಮಾಡಲಾಗುವುದು. ಒಟ್ಟು 8165 ಕೋಟಿ ರೂ. ಅಲ್ಪವಾಧಿ ಸಾಲ ಮನ್ನಾವಾಗಲಿದ್ದು ಇದರಿಂದಾಗಿ 22 ಲಕ್ಷ ರೈತರಿಗೆ ಸಹಾಯವಾಗಲಿದೆ ಎಂದು ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಹೇಳಿದ್ದರು.