Tag: Siddeshwara Sri

  • ಸಿದ್ದೇಶ್ವರ ಶ್ರೀಗಳ ಅಸ್ಥಿ ಸಂಗ್ರಹ- ಭಾನುವಾರ ಕೂಡಲಸಂಗಮ, ಗೋಕರ್ಣದ ಸಾಗರದಲ್ಲಿ ವಿಸರ್ಜನೆ

    ಸಿದ್ದೇಶ್ವರ ಶ್ರೀಗಳ ಅಸ್ಥಿ ಸಂಗ್ರಹ- ಭಾನುವಾರ ಕೂಡಲಸಂಗಮ, ಗೋಕರ್ಣದ ಸಾಗರದಲ್ಲಿ ವಿಸರ್ಜನೆ

    ವಿಜಯಪುರ: ನಡೆದಾಡುವ ದೇವರು ಶ್ರೀ ಸಿದ್ದೇಶ್ವರ ಶ್ರೀ (Siddeshwara Sri) ಗಳ ಅಂತ್ಯಸಂಸ್ಕಾರ ಮುಗಿದು ಮೂರು ದಿನ ಕಳೆದಿದೆ. ಶ್ರೀಗಳ ಅಸ್ಥಿ ಭಸ್ಮವನ್ನಿಂದು ತೆಗೆದು ಸಂಗ್ರಹಿಸಿ ಇಡಲಾಯಿತು. ವೀಶೇಷ ಪೂಜೆ ಪುನಸ್ಕಾರ ಮಾಡಿ ಅಸ್ಥಿ ಸಂಗ್ರಹ ಕಾರ್ಯಕ್ರಮ ಜರುಗಿತು.

    ಗುರುವಾರ ಬೆಳಗ್ಗೆ 4 ಗಂಟೆಗೆ ಶ್ರೀಗಳ ಅಸ್ಥಿ (Ash) ಜಾಗದಲ್ಲಿ ಅಸ್ಥಿ ಸಂಗ್ರಹಕ್ಕೆ ಪೂರ್ವ ಸಿದ್ಧತೆ ಮಾಡಿಕೊಳ್ಳಲಾಯಿತು. ನಂತರ 6 ಗಂಟೆಗೆ ರಾಮಕೃಷ್ಣ ಆಶ್ರಮದ ಗುರುಗಳು ಸೇರಿದಂತೆ ಆಶ್ರಮದ ಅಧ್ಯಕ್ಷ ಬಸವಲಿಂಗ ಸ್ವಾಮಿಜಿ ನೇತೃತ್ವದಲ್ಲಿ ಚಿತೆಗೆ ವಿಶೇಷ ಪೂಜೆ ನೆರವೇರಿಸಲಾಯಿತು. ಇದನ್ನೂ ಓದಿ: ನಮ್ಮನೆಯಲ್ಲಿ ಕುರಾನ್ ಜೊತೆಗೆ ಶ್ರೀಗಳ ಆಶೀರ್ವಚನ ಕೇಳುತ್ತಿದ್ದೆವು: ಮುಸ್ಲಿಂ ಭಕ್ತರು

    ಮೊದಲು ಅಸ್ಥಿ ಇರುವ ಜಾಗಕ್ಕೆ ನೀರು ಸಿಂಪಡಿಸಲಾಯಿತು. ನಂತರ ಚಿತೆಗೆ ನೀರು, ತುಪ್ಪಾ, ಹಾಲು ಹಾಕಲಾಯಿತು. ತದನಂತರ ಊದಿನ ಕಡ್ಡಿ ಬೆಳಗಿ ಕರ್ಪೂರದ ಆರತಿ ಮಾಡಲಾಯಿತು. ಚಿತೆಯ ಸುತ್ತ ಕರ್ಪೂರ ಹಚ್ಚಿ ಮಂತ್ರಘೋಷ, ಭಜನೆ, ಪ್ರಾರ್ಥನೆ ಮಾಡಲಾಯಿತು. ಇದೇ ವೇಳೆ ಮಾತನಾಡಿದ ಆಶ್ರಮದ ಅಧ್ಯಕ್ಷ ಬಸವಲಿಂಗ ಸ್ವಾಮೀಜಿ, ಜನವರಿ 8 ಭಾನುವಾರದಂದು ಶ್ರೀಗಳು ನಮ್ಮನ್ನಗಲಿ 7ನೇ ದಿನವಾಗುತ್ತೆ. ಅಂದು ಅಸ್ಥಿ ವಿಸರ್ಜನೆ ಕಾರ್ಯಕ್ರಮ ನಡೆಯಲಿದೆ. ಬಾಗಲಕೋಟೆ ಜಿಲ್ಲೆಯ ಕೂಡಲಸಂಗಮದಲ್ಲಿ ನಂತರ ಗೋಕರ್ಣದ ಸಾಗರದಲ್ಲಿ ಅಸ್ಥಿ ವಿಸರ್ಜನೆ ಮಾಡೋದಾಗಿ ತಿಳಿಸಿದರು.

    ಸಿದ್ದೇಶ್ವರ ಶ್ರೀಗಳ ಅಸ್ಥಿ ಪೂಜೆಯಲ್ಲಿ ಭಕ್ತರು ಭಾಗಿಯಾಗಿ ಕೈ ಮುಗಿದು ಪುನೀತರಾದ್ರು. ಓಂ ನಮ: ಶಿವಾಯ ಅಂತಾ ಜಪಿಸುತ್ತಾ ಭಕ್ತರು ಶ್ರೀಗಳನ್ನ ನೆನದು ಕಣ್ಣೀರಿಟ್ಟರು. ಇದನ್ನೂ ಓದಿ: ಉತ್ತರ ಕರ್ನಾಟಕದ ನಡೆದಾಡುವ ದೇವರು ಸಿದ್ದೇಶ್ವರ ಶ್ರೀ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಇಂದು ಸಿದ್ದೇಶ್ವರ ಶ್ರೀಗಳ ಚಿತಾಭಸ್ಮ ವಿಸರ್ಜನೆ- ಭಕ್ತರಿಗೆ ಕೊಡಲ್ಲ ಪೂಜ್ಯರ ಚಿತಾಭಸ್ಮ

    ಇಂದು ಸಿದ್ದೇಶ್ವರ ಶ್ರೀಗಳ ಚಿತಾಭಸ್ಮ ವಿಸರ್ಜನೆ- ಭಕ್ತರಿಗೆ ಕೊಡಲ್ಲ ಪೂಜ್ಯರ ಚಿತಾಭಸ್ಮ

    ವಿಜಯಪುರ: ಸರಳತೆಯ ಸ್ವರೂಪ ಶ್ರೀ ಸಿದ್ದೇಶ್ವರ ಶ್ರೀ (Siddeshwara Sri) ಗಳ ಚಿತೆಯ ದರ್ಶನಕ್ಕೆ ಭಕ್ತ ಸಾಗರ ಹರಿದು ಬರುತ್ತಿದೆ. ಭಕ್ತರಿಗೆ ಚಿತೆಯ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಶ್ರೀಗಳ ಮುಂದಿನ ಕಾರ್ಯಕ್ರಮಗಳ ಬಗ್ಗೆ ಚರ್ಚೆ ನಡೆಸಲಾಗುತ್ತಿದೆ.

    ವಿಜಯಪುರ (Vijayapura) ದ ಜ್ಞಾನ ಯೋಗಾಶ್ರಮದ ನಡೆದಾಡುವ ದೇವರು ಸಿದ್ದೇಶ್ವರ ಶ್ರೀಗಳ ಅಂತ್ಯಸಂಸ್ಕಾರದ ಸ್ಥಳದ ದರ್ಶನಕ್ಕೆ ಭಕ್ತರು ಸಾಲು ಗಟ್ಟಿ ಆಗಮಿಸುತ್ತಿದ್ದಾರೆ. ಇತ್ತ ಶ್ರೀಗಳ ಚಿತಾಭಸ್ಮವನ್ನು ವಿಸರ್ಜಿಸುವ ಬಗ್ಗೆ ಇತರೆ ಶ್ರೀಗಳು ಚರ್ಚೆ ನಡೆಸುತ್ತಿದ್ದಾರೆ. ಗುರುವಾರ ಮೂರನೇ ದಿನದ ಕಾರ್ಯಕ್ರಮ ನಡೆಯಲಿದೆ. ಚಿತೆಗೆ ಹಾಲು, ನೀರು ಹಾಕಿ ಮಂತ್ರಗಳೊಂದಿಗೆ ಪೂಜೆ ಸಲ್ಲಿಸಿ ಮುಂದಿನ ಕಾರ್ಯಕ್ರಮ ಮಾಡಲಾಗುತ್ತೆ ಎಂದು ಜ್ಞಾನಯೋಗಾಶ್ರಮದ ಅಧ್ಯಕ್ಷ ಬಸವಲಿಂಗ ಸ್ವಾಮೀಜಿ ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಪಂಚಭೂತಗಳಲ್ಲಿ ಸರಳತೆಯ ಶತಮಾನದ ಸಂತ ಸಿದ್ದೇಶ್ವರ ಶ್ರೀ ಲೀನ

    ಮೂರನೇ ದಿನವಾದ ಇಂದು (ಗುರುವಾರ) ಮುಂದಿನ ವಿಧಿ-ವಿಧಾನ ಕಾರ್ಯಕ್ರಮಗಳು ನಡೆಯಲಿವೆ. ಚಿತೆಯನ್ನ ಯಾವ ನದಿಯಲ್ಲಿ ಬಿಡುವುದು, ಯಾವಾಗ ಸೇರಿದಂತೆ ಅನೇಕ ವಿಷಯಗಳ ಬಗ್ಗೆ ಚರ್ಚಿಸಿ ನಿರ್ಧರಿಸಲಾಗುವುದು. ಅಲ್ಲದೆ ಶ್ರೀಗಳ ಚಿತೆಯ ಭಸ್ಮವನ್ನ ಭಕ್ತರಿಗೆ ನೀಡುತ್ತೇವೆ ಅಂತಾ ಕನ್ನೇರಿ ಮಠದ ಕಾಡಸಿದ್ದೇಶ್ವರ ಶ್ರೀಗಳು ಹೇಳಿದ್ದರು. ಆದ್ರೆ ಯಾರಿಗೂ ಚಿತಾ ಭಸ್ಮವನ್ನ ಕೊಡಲ್ಲ. ವಿಭೂತಿಯನ್ನ ಭಕ್ತರು ತಂದು ಚಿತೆಯ ಹತ್ತಿರ ಇಟ್ಟು ಅದನ್ನೇ ಅವರು ಮನೆಗಳಲ್ಲಿ ಪೂಜಿಸಬೇಕು ಅಂತಾ ಬಸವಲಿಂಗ ಸ್ವಾಮೀಜಿ ತಿಳಿಸಿದ್ದಾರೆ.

    ಒಟ್ಟಾರೆ ಶ್ರೀಗಳ ಚಿತೆಯ ಸ್ಥಳದ ದರ್ಶನಕ್ಕೆ ಭಕ್ತ ಸಾಗರ ಹರಿದು ಬರ್ತಿದ್ದು, ಶ್ರೀಗಳ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಗ್ತಿದೆ. ಇದನ್ನೂ ಓದಿ: ಸಿದ್ದೇಶ್ವರ ಶ್ರೀಗಳ ಅಂತಿಮ ದರ್ಶನಕ್ಕೆ ವೃದ್ಧೆಯನ್ನು ಹೆಗಲ ಮೇಲೆ ಹೊತ್ತು ತಂದ ವ್ಯಕ್ತಿ!

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಸಿದ್ದೇಶ್ವರ ಶ್ರೀಗಳ ಅಂತ್ಯಸಂಸ್ಕಾರಕ್ಕೆ ಭರದ ಸಿದ್ಧತೆ- ಸಂಜೆ 5 ಗಂಟೆ ವೇಳೆಗೆ ಪಾರ್ಥಿವ ಶರೀರಕ್ಕೆ ಅಗ್ನಿ ಸ್ಪರ್ಶ

    ಸಿದ್ದೇಶ್ವರ ಶ್ರೀಗಳ ಅಂತ್ಯಸಂಸ್ಕಾರಕ್ಕೆ ಭರದ ಸಿದ್ಧತೆ- ಸಂಜೆ 5 ಗಂಟೆ ವೇಳೆಗೆ ಪಾರ್ಥಿವ ಶರೀರಕ್ಕೆ ಅಗ್ನಿ ಸ್ಪರ್ಶ

    ವಿಜಯಪುರ: ನಡೆದಾಡುವ ದೇವರು ಎಂದೇ ಪ್ರಸಿದ್ಧರಾಗಿರುವ ಸಿದ್ದೇಶ್ವರ ಶ್ರೀ (Siddeshwara Sri) ಗಳ ಅಂತ್ಯಸಂಸ್ಕಾರಕ್ಕೆ ಭರ್ಜರಿ ತಯಾರಿ ನಡೆಯುತ್ತಿದೆ.

    ವಿಜಯಪುರ (Vijayapura) ದ ಜ್ಞಾನಯೋಗಾಶ್ರಮದಲ್ಲಿ ಅಂತ್ಯಸಂಸ್ಕಾರಕ್ಕೆ ಜಿಲ್ಲಾಡಳಿತದಿಂದ ಸರ್ವ ಸಿದ್ಧತೆ ನಡೆಸಲಾಗುತ್ತಿದೆ. ಶ್ರೀಗಳ ಇಚ್ಛೆಯಂತೆ ಅವರು ಮಾಡಿದ ವಿಲ್ ಪ್ರಕಾರ ಅಗ್ನಿ ಸ್ಪರ್ಷ ಮಾಡಿ ಅಂತ್ಯಸಂಸ್ಕಾರ (Funeral) ನೆರವೇರಿಸಲಾಗುತ್ತಿದೆ. ಇದನ್ನೂ ಓದಿ: ಶ್ರೀಗಳು ವಿಲ್‍ನಲ್ಲಿ ಬರೆದಿಟ್ಟಿರುವಂತೆ ಅಂತ್ಯಸಂಸ್ಕಾರ ಮಾಡಲಾಗುವುದು: ಯತ್ನಾಳ್

    ಅಂತ್ಯಸಂಸ್ಕಾರದ ಕಟ್ಟೆ ಕಾಮಗಾರಿ ನಡೆಯುತ್ತಿದ್ದು, ಅಂತ್ಯಸಂಸ್ಕಾರಕ್ಕೆ ಸಾರ್ವಜನಿಕರಿಗೆ ನಿಷೇಧ ಹೇರಲಾಗಿದೆ. ಕೇವಲ ಕುಟುಂಬಸ್ಥರು, ಗಣ್ಯರು, ಸ್ವಾಮೀಜಿಗಳಿಗೆ ಮಾತ್ರ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಳ್ಳಲು ಅವಕಾಶ ನೀಡಲಾಗುತ್ತದೆ. ಅಂತ್ಯಸಂಸ್ಕಾರದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಲ್ಹಾದ್ ಜೊಶಿ ಸೇರಿದಂತೆ ಅನೇಕ ಸಚಿವರು ಭಾಗಿಯಾಗಲಿದ್ದಾರೆ. ಇದನ್ನೂ ಓದಿ: ನಮ್ಮನೆಯಲ್ಲಿ ಕುರಾನ್ ಜೊತೆಗೆ ಶ್ರೀಗಳ ಆಶೀರ್ವಚನ ಕೇಳುತ್ತಿದ್ದೆವು: ಮುಸ್ಲಿಂ ಭಕ್ತರು

    ಗಣ್ಯರಿಗೆ 500 ಆಸನ, ಸ್ವಾಮಿಜಿಗಳಿಗೆ 150 ಆಸನ ಹಾಗೂ ಕುಟುಂಬಸ್ಥರಿಗೆ 100 ಆಸನಗಳ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. 3 ಗಂಟೆಗೆ ಅಂತಿಮ ದರ್ಶನ ಪುರ್ಣಗೊಳಿಸಿ ನಗರದ ಪ್ರಮುಖ ಬೀದಿಗಳಲ್ಲಿ ಪಾದಾಯಾತ್ರೆ ಮೂಲಕ ಪಾರ್ಥಿವ ಶರೀರ ಆಶ್ರಮಕ್ಕೆ ಬರಲಿದೆ. ಸಂಜೆ 5 ಗಂಟೆ ಸುಮಾರಿಗೆ ಅಂತ್ಯಸಂಸ್ಕಾರ ನಡೆಸಲಾಗುತ್ತದೆ. ಸುತ್ತೂರು ಶ್ರೀ ಗಳು ಅಂತ್ಯಸಂಸ್ಕಾರದ ಬಗ್ಗೆ ಮಾಹಿತಿ ಪಡೆದಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ವಿಜಯಪುರದ ಜೀವಂತ ದೇವರ ಅಗಲುವಿಕೆಯಿಂದ ನಾಡಿಗೇ ಆಘಾತ: ನಳಿನ್ ಕುಮಾರ್ ಕಟೀಲ್

    ವಿಜಯಪುರದ ಜೀವಂತ ದೇವರ ಅಗಲುವಿಕೆಯಿಂದ ನಾಡಿಗೇ ಆಘಾತ: ನಳಿನ್ ಕುಮಾರ್ ಕಟೀಲ್

    ಮಂಗಳೂರು: ವಿಜಯಪುರ ಜ್ಞಾನಯೋಗಾಶ್ರಮದ ಜ್ಞಾನ ಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ (Siddeshwara Swamiji), ವಿಜಯಪುರದ ಜೀವಂತ ದೇವರು ಎಂದೇ ಪ್ರಸಿದ್ಧರಾದವರು. ಅವರ ಅಗಲುವಿಕೆಯು ನಾಡಿಗೆ ಮಾತ್ರವಲ್ಲದೆ ದೇಶ ವಿದೇಶಗಳಲ್ಲಿನ ಅವರ ಅಪಾರ ಭಕ್ತಸಮೂಹಕ್ಕೆ ಆಘಾತವನ್ನು ಉಂಟು ಮಾಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್ (Nalin Kumar Kateel) ಅವರು ತಮ್ಮ ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.

    ಪರಮ ಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳು ಅತ್ಯಂತ ಸರಳ ಸಜ್ಜನಿಕೆಯ ಸಾಕಾರ ಮೂರ್ತಿ, ನನ್ನದು-ತನ್ನದೆಂಬ ಮಮಕಾರ ತೊರೆದ ಮಹಾಪುರುಷರೇ ಶ್ರೀ ಸಿದ್ದೇಶ್ವರ ಸ್ವಾಮಿಗಳವರು, ಇವರು ಸಂತರಷ್ಟೇ ಅಲ್ಲ ಜ್ಞಾನೋಪಾಸಕರು ಕೂಡ ಆಗಿದ್ದರು. ಆಧ್ಯಾತ್ಮದ ಬಗ್ಗೆ ತುಂಬ ಆಳವಾದ ಅಧ್ಯಯನ ಚಿಂತನೆಗಳನ್ನು ನಡೆಸಿರುವ ಶ್ರೇಷ್ಠ ಅನುಭಾವಿಗಳೂ ಮಧುರ ಸ್ವಭಾವದವರೂ ಆಗಿದ್ದು ಕನ್ನಡ, ಸಂಸ್ಕೃತ, ಇಂಗ್ಲಿಷ್, ಮರಾಠಿ ಮತ್ತು ಹಿಂದಿ ಭಾಷೆಗಳಲ್ಲಿ ನಿಷ್ಟಾಂತರಾಗಿದ್ದರು. ಒಬ್ಬ ಜ್ಞಾನಯೋಗಿಗಳ ರೂಪದಲ್ಲಿ ಅವರು ಮುಂದೆಯೂ ನಮ್ಮೊಂದಿಗೆ ಇರುತ್ತಾರೆ ಎಂದು ಅವರು ತಿಳಿಸಿದ್ದಾರೆ.

    ವಿಜಯಪುರದ ಜ್ಞಾನಯೋಗಾಶ್ರಮ ಜನತೆಗೆ ಜ್ಞಾನದಾಸೋಹ ನೀಡುವ ವಿಶಿಷ್ಟ ಕೇಂದ್ರವಾಗಿದೆ. ವಿಜಯಪುರ ಜ್ಞಾನಯೋಗಾಶ್ರಮದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಂತರ ಶ್ರೀ ಸಿದ್ದೇಶ್ವರರು ತಮ್ಮ ಗುರುಗಳ ಮಾರ್ಗದರ್ಶನದಲ್ಲೇ ಆಶ್ರಮದ ಚಟುವಟಿಕೆಗಳನ್ನು ಮುಂದುವರಿಸಿಕೊಂಡು ಬಂದವರು. ಸಿದ್ದೇಶ್ವರರ ಪ್ರವಚನ ಕೇಳಿದವರು ಅದರಲ್ಲೇ ಅನುರಕ್ತರಾಗಿ ಬಿಡುತ್ತಾರೆ. ಅವರ ಪ್ರವಚನ ಕಾರ್ಯಕ್ರಮ ಎಲ್ಲಿ ಏರ್ಪಡಿಸಿದರೂ ಸಹ ಅಲ್ಲಿಗೆ ಸಾವಿರಾರು ಸಂಖ್ಯೆಯಲ್ಲಿ ಜನ ಸೇರುತ್ತಿದ್ದರು. ಒಂದು ಗಂಟೆಯ ಅವರ ಪ್ರವಚನದುದ್ದಕ್ಕೂ ಸೇರಿದ ಅಷ್ಟು ತುಂಬು ತನ್ಮಯತೆಯಿಂದ ಕುಳಿತಿರುತ್ತಿದ್ದರು. ಸೂಜಿಗಲ್ಲಿನಂತಹ ಸೆಳೆತ, ಅವರು ಭಾಷೆ, ಧಾಟಿ, ಪದಪ್ರಯೋಗ, ಉದಾಹಣೆಗಳ ಮೂಲಕ ಪ್ರಚಲಿತ ಸಂಗತಿಗಳನ್ನು ಸಮ್ಮಿಳಿತಗೊಳಿಸುತ್ತಿದ್ದರು ಎಂದು ವಿವರಿಸಿದ್ದಾರೆ. ತಮ್ಮ ಗುರುಗಳು ಸ್ಥಾಪಿಸಿದ ನೂರಾರು ವಿದ್ಯಾ ಸಂಸ್ಥೆಗಳನ್ನು ಸಿದ್ದೇಶ್ವರರು ಮುಂದುವರಿಸಿಕೊಂಡು ಬರುತ್ತಿದ್ದರು. ಕೆರೆಯ ನೀರನ್ನು ಕೆರೆಗೆ ಚೆಲ್ಲಿ ಎಂಬ ದಾಸ ವಾಣಿಯಂತೆ ಅವರು ನಡೆದವರು ಎಂದಿದ್ದಾರೆ. ಇದನ್ನೂ ಓದಿ: ನಮ್ಮನೆಯಲ್ಲಿ ಕುರಾನ್ ಜೊತೆಗೆ ಶ್ರೀಗಳ ಆಶೀರ್ವಚನ ಕೇಳುತ್ತಿದ್ದೆವು: ಮುಸ್ಲಿಂ ಭಕ್ತರು

    ಪೂಜ್ಯರು ಉಪನಿಷತ್ತುಗಳು, ಭಗವದ್ಗೀತೆ, ಯೋಗಸೂತ್ರ, ವಚನಶಾಸ್ತ್ರ ಮುಂತಾದ ವಿಷಯಗಳ ಬಗೆಗೆ ತಾವು ಹೇಗೆ ಗುರು ಮುಖೇನ ಕಲಿತ ಜ್ಞಾನವನ್ನು ಬಳಸಿಕೊಂಡು ಬೋಧಪ್ರದ ಪ್ರವಚನಗಳನ್ನು ನೀಡುತ್ತಿದ್ದರು. ಗಹನವಾದ ವೇದಾಂತ ತತ್ವಗಳನ್ನು ಅತ್ಯಂತ ಸರಳವಾಗಿ ಜನಮಾನಸದಲ್ಲಿ ಉಳಿಯುವಂತೆ ವಿವರಿಸುವುದೇ ಅವರ ವೈಶಿಷ್ಟ್ಯವಾಗಿತ್ತು. ಅವರ ಭಾಷಣಗಳು ಪ್ರತಿಯೊಬ್ಬರ ಜೀವನದಲ್ಲಿ ಅದ್ಭುತ ರೂಪಾಂತರವನ್ನು ತರುತ್ತಿದ್ದವು. ಶ್ರೀ ಸಿದ್ದೇಶ್ವರ ಸ್ವಾಮೀಜಿಯವರು ಜೀವಂತ ದೇವರಿಗೆ ಹೋಲಿಸಬಹುದಾದ ಮಾನವರಲ್ಲಿ ಒಬ್ಬರು ಎಂದು ತಿಳಿಸಿದ್ದಾರೆ.

    ಅವರು ವಚನಗಳ ಬಗ್ಗೆ ಹೊಸ ಬೆಳಕನ್ನು ಚೆಲ್ಲಿದ್ದಾರೆ. ಶ್ರೀ ಸಿದ್ದೇಶ್ವರ ಸ್ವಾಮೀಜಿಯವರು ಸರಳವಾದ ಸ್ಪೂರ್ತಿದಾಯಕ ಜೀವನ ಶೈಲಿಯನ್ನು ಹೊಂದಿದವರು. ಅವರು ಜೀವನವನ್ನು ಆಧ್ಯಾತ್ಮಿಕತೆಗೆ ಮೀಸಲಿಟ್ಟಿದ್ದಾರೆ ಮತ್ತು ಭಾರತದ ಸಂತರು ಮತ್ತು ಸಿಯರ್ಸ್ ಕೃತಿಗಳ ಆಧಾರದ ಮೇಲೆ ಹಲವಾರು ಪುಸ್ತಕಗಳನ್ನು ಬರೆದಿದ್ದಾರೆ. ಅವರ ಪುಸ್ತಕಗಳು ನಮಗೆ ಮಾರ್ಗದರ್ಶನ ನೀಡಲಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಪದ್ಮಶ್ರೀ ಪ್ರಶಸ್ತಿ, ಕರ್ನಾಟಕ ವಿಶ್ವವಿದ್ಯಾನಿಲಯ ಅವರಿಗೆ ಗೌರವ ಡಾಕ್ಟರೇಟ್ ಅನ್ನು ನಯವಾಗಿಯೇ ನಿರಾಕರಿಸಿದ್ದು ಅವರ ಶ್ರೇಷ್ಠ ವ್ಯಕ್ತಿತ್ವಕ್ಕೆ ಕೈಗನ್ನಡಿ ಎಂದು ಅವರು ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಸಿದ್ದೇಶ್ವರ ಶ್ರೀಗಳ ಹೆಲ್ತ್‌ಬುಲೆಟಿನ್- ದ್ರವಾಹಾರ ಸೇವಿಸ್ತಿದ್ದು, ಭಕ್ತರಿಗೆ ಆತಂಕ ಬೇಡ

    ಸಿದ್ದೇಶ್ವರ ಶ್ರೀಗಳ ಹೆಲ್ತ್‌ಬುಲೆಟಿನ್- ದ್ರವಾಹಾರ ಸೇವಿಸ್ತಿದ್ದು, ಭಕ್ತರಿಗೆ ಆತಂಕ ಬೇಡ

    – ವಿದ್ಯಾರ್ಥಿಗಳಿಂದ ಶ್ರೀಗಳಿಗಾಗಿ ಪ್ರಾರ್ಥನೆ

    ವಿಜಯಪುರ: ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ (Siddeshwara Swamiji) ಗಳ ಆರೋಗ್ಯ ಸ್ಥಿರವಾಗಿದೆ ಎಂದು ಡಾ.ಎಸ್.ಬಿ ಪಾಟೀಲ್ (Dr. S B Patil) ತಂಡದಿಂದ ಹೆಲ್ತ್ ಬುಲೆಟಿನ್ ಬಿಡುಗಡೆಯಾಗಿದೆ.

    ಜಾಸ್ತಿ ಆಹಾರ ಸ್ವೀಕರಿಸ್ತಿಲ್ಲ ಅಷ್ಟೇ. ಗಂಜಿ, ನೀರು, ದ್ರವಾಹಾರ ಕೊಡ್ತಿದ್ದೀವಿ. ಬೇಗ ಚೇತರಿಕೆ ಆಗ್ತಾರೆ. ಹೆಚ್ಚಿನ ಚಿಕಿತ್ಸೆಯ ಅಶ್ಯಕತೆ ಇಲ್ಲ. ಭಕ್ತರ ಜೊತೆ ಶ್ರೀಗಳು ಮಾತನಾಡಿದ್ದಾರೆ ಎಂದು ಡಾ. ಎಸ್.ಬಿ. ಪಾಟೀಲ್, ಡಾ.ಮಲ್ಲನ್ಣ ಮೂಲಿಮನಿ ಸ್ಪಷ್ಟನೆ ನೀಡಿದರು. ಇದನ್ನೂ ಓದಿ: ಸಿದ್ದೇಶ್ವರ ಸ್ವಾಮೀಜಿ ನನ್ನನ್ನು ಗುರುತು ಹಿಡಿದರು : ಬೊಮ್ಮಾಯಿ

    ಸಿದ್ದೇಶ್ವರ ಸ್ವಾಮೀಜಿ ಆರೋಗ್ಯ ಚೇತರಿಕೆ ಕಾಣುತ್ತಿದ್ದು, ಜ್ಞಾನಯೋಗಾಶ್ರಮಕ್ಕೆ ನಾಯಕರ ದಂಡೇ ಹರಿದುಬರುತ್ತಿದೆ. ಕಾಂಗ್ರೆಸ್ ನಾಯಕರ ಎಂ.ಬಿ ಪಾಟೀಲ್, ಎಂ.ಎಲ್.ಸಿ ಪ್ರಕಾಶ್ ಹುಕ್ಕೇರಿ, ಎಂ.ಬಿ ಪಾಟೀಲ್ ಜೊತೆ ಶ್ರೀಗಳು ಮೆದು ಧ್ವನಿಯಲ್ಲಿ ಮಾತನಾಡಿದರು. ಮಾಜಿ ಸಿಎಂ ಸಿದ್ದರಾಮಯ್ಯ ಕೂಡ ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ.

    ಸಿದ್ದೇಶ್ವರ ಶ್ರೀಗಳು ಆರಾಮಾಗಿದ್ದಾರೆ. ಯಾವುದೇ ಆತಂಕ ಪಡುವುದು ಬೇಡ. ಭಕ್ತರು ವದಂತಿಗೆ ಕಿವಿಗೊಡಬೇಡಿ ಎಂದು ಸಿದ್ದೇಶ್ವರ ಶ್ರೀ ಭೇಟಿ ಬಳಿಕ ಸುತ್ತೂರು ಶ್ರೀ (Suttur Sri) ಗಳು ಸ್ಪಷ್ಟನೆ ನೀಡಿದ್ದಾರೆ. ಇತ್ತ ಸಿದ್ದೇಶ್ವರ ಶ್ರೀಗಳ ಆರೋಗ್ಯಕ್ಕಾಗಿ ವಿದ್ಯಾರ್ಥಿಗಳು ತಿಕೋಟ ತಾಲೂಕಿನ ಬಿಜ್ಜರಗಿ ಗ್ರಾಮದ ಮಾಣಿಕೇಶ್ವರ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ.

    ಜ್ಞಾನಯೋಗಾಶ್ರಮದ ಎದುರು ಸಿದ್ದೇಶ್ವರ ಸ್ವಾಮೀಜಿ ಬೇಗ ಗುಣಮುಖರಾಗಲಿ ಎಂದು ಭಕ್ತಗಣ ಹಾಗೂ ಶ್ರೀಗಳು ಸಿದ್ದೇಶ್ವರ ಸ್ವಾಮೀಜಿಯವರ ಗುರುಗಳಾಗಿದ್ದ ಮಲ್ಲಿಕಾರ್ಜುನ ಸ್ವಾಮೀಜಿ ಅವ್ರ ಗದ್ದುಗೆಗೆ ವಿಷೇಶ ಪೂಜೆ ಸಲ್ಲಿಸಿದ್ರು. ಹೂ, ಹಾರ, ಕಾಯಿ ಮೂಲಕ ವಿಶೇಷ ಪ್ರಾರ್ಥನೆ ಸಲ್ಲಿಸಿ, ಮಂಗಳಾರತಿ ಮಾಡಿ, ಆದ್ಯಾತ್ಮದ ದೇವರು ಗುಣಮುಖರಾಗಲಿ ಎಂದು ಪ್ರಾರ್ಥಿಸಿದ್ರು.

    Live Tv
    [brid partner=56869869 player=32851 video=960834 autoplay=true]

  • ನಡೆದಾಡುವ ದೇವರು ಸಿದ್ದೇಶ್ವರ ಶ್ರೀಗಳ ಆರೋಗ್ಯ ಸ್ಥಿರ- ಭಕ್ತರಿಗೆ ದರ್ಶನ

    ನಡೆದಾಡುವ ದೇವರು ಸಿದ್ದೇಶ್ವರ ಶ್ರೀಗಳ ಆರೋಗ್ಯ ಸ್ಥಿರ- ಭಕ್ತರಿಗೆ ದರ್ಶನ

    ವಿಜಯಪುರ: ನಡೆದಾಡುವ ದೇವರು ಶ್ರೀ ಸಿದ್ದೇಶ್ವರ ಶ್ರೀ (Siddeshwara Sri) ಗಳು ಆರೋಗ್ಯ ಸ್ಥಿರವಾಗಿದೆ. ಶ್ರೀಗಳು ಆರೋಗ್ಯ ಚೇತರಿಕೆ ಆಗುತ್ತಿದೆ. ಶ್ರೀಗಳ ಭೇಟಿಗಾಗಿ ಗಣ್ಯಾತೀಗಣ್ಯರು, ಜನಪ್ರತಿನಿಧಿಗಳು ಸೇರಿದಂತೆ ಮಠಾಧೀಶರು ತಂಡೋಪ ತಂಡವಾಗಿ ಬರುತ್ತಿದ್ದಾರೆ. ಇನ್ನು ಭಕ್ತಸಾಗರವೂ ಸಹಸ್ರಾರೂ ಸಂಖ್ಯೆಯಲ್ಲಿ ಹರಿದುಬರುತ್ತಿದೆ.

    ವಿಜಯಪುರ (Vijayapura) ದ ಜ್ಞಾನ ಯೋಗಾಶ್ರಮದ ನಡೆದಾಡುವ ದೇವರು ಶ್ರೀ ಸಿದ್ದೇಶ್ವರ ಶ್ರೀಗಳು ಆರೋಗ್ಯ ಸ್ಥಿರವಾಗಿದೆ. ಶ್ರೀಗಳು ಆರೋಗ್ಯ ಚೇತರಿಕೆ ಆಗುತ್ತಿದೆ. ಪಲ್ಸ್, ಬಿಪಿ ಸರಿಯಾಗಿದೆ. ಯಾವುದೇ ಆತಂಕ ಇಲ್ಲ ಅಂತ ವೈದ್ಯರು ತಿಳಿಸಿದ್ದಾರೆ. ಶ್ರೀ ಸಿದ್ದೇಶ್ವರ ಶ್ರೀಗಳಿಗೆ ವೈದ್ಯರಿಂದ ಚಿಕಿತ್ಸೆ ಮುಂದುವರಿದಿದೆ.

    ಶ್ರೀಗಳ ದರ್ಶನಕ್ಕೆ ಭಕ್ತಸಾಗರವೇ ಹರಿದುಬರುತ್ತಿದೆ. ಸ್ವಾಮೀಜಿ ದರ್ಶನಕ್ಕಾಗಿ ಭಕ್ತಗಣ ಕಾಯ್ದುಕುಳಿತಿದ್ರು. ಜ್ಞಾನಯೋಗಿ ಆಶ್ರಮದ ಆವರಣದಲ್ಲಿ ಭಕ್ತರ ಸಾಗರವೇ ಸೇರಿತ್ತು. ದೇವರ ದರ್ಶನ ಆಗಬೇಕು, ಮತ್ತೆ ಅವರು ಪ್ರವಚನ ಹೇಳಬೇಕು ಅಂತ ಭಕ್ತರು ಕಣ್ಣೀರಿಟ್ಟರು.

    ಹೀಗಾಗಿ ಜ್ಞಾನಯೋಗಾಶ್ರಮ ಆವರಣದಲ್ಲಿ ಎಲ್‍ಇಡಿ (LED) ಮೂಲಕ ಶ್ರೀಗಳ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಭಕ್ತರಿಗೆ ಸಿದ್ದೇಶ್ವರ ಶ್ರೀಗಳು ದರ್ಶನ ನೀಡಿದ್ರು. ಶ್ರೀಗಳ ದರ್ಶನವಾಗುತ್ತಿದ್ದಂತೆ ಭಾವುಕರಾದ ಭಕ್ತರು ಸಾಷ್ಟಾಂಗ ನಮಸ್ಕಾರ ಹಾಕಿ ನಮನ ಸಲ್ಲಿಸಿದರು. ಸಿದ್ದೇಶ್ವರ ಸ್ವಾಮೀಜಿಗೆ ಜೈಕಾರ ಕೂಗಿದ್ರು.

    ಆದಿಚುಂಚನ ಶ್ರೀಗಳು, ವಚನಾನಂದ ಶ್ರೀಗಳು ಸೇರಿದಂತೆ ನಾನಾ ಮಠಾಧೀಶರು ಜ್ಞಾನಯೋಗಾಶ್ರಮಕ್ಕೆ ಭೇಟಿ ನೀಡಿದ್ರು. ಸಿದ್ದೇಶ್ವರ ಶ್ರೀಗಳನ್ನ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಇದನ್ನೂ ಓದಿ: ಕಾರಿನಲ್ಲಿ ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ- ಡೆತ್‌ನೋಟ್‌ನಲ್ಲಿ ಪ್ರಭಾವಿ ರಾಜಕಾರಣಿ ಹೆಸರು ಉಲ್ಲೇಖ

    ಶಾಸಕ ಬಸನಗೌಡ ಪಾಟೀಲ ಯತ್ನಾಳ್, ವಿಜಯೇಂದ್ರ ಸೇರಿದಂತೆ ಜಿಲ್ಲೆಯ ಹಲವು ಶಾಸಕರು, ಮಾಜಿ ಶಾಸಕರು ಸೇರಿದಂತೆ ಗಣ್ಯರು ತಂಡೋಪ ತಂಡವಾಗಿ ಬಂದು ಶ್ರೀಗಳ ದರ್ಶನ ಪಡೆದರು. ವೈದ್ಯರ ತಂಡದೊಂದಿಗೆ ಸುದೀರ್ಘ ಸಮಾಲೋಚನೆ ನಡೆಸಿದರು. ಸದ್ಯ ಸಿದ್ದೇಶ್ವರ ಶ್ರೀಗಳು ಆರೋಗ್ಯವಾಗಿದ್ದಾರೆ ಅಂತ ವೈದ್ಯರು ಹೇಳಿದ್ದಾರೆ. ಆದ್ರೆ ಭಕ್ತರು ಮಾತ್ರ ಮಠದ ಹೊರಗಡೆನೇ ಶ್ರೀಗಳ ದರ್ಶನಕ್ಕೆ ಕಾದು ಕುಳಿತಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಚರಂಡಿ ನಂತ್ರ ಹಿರೇಹಳ್ಳದಲ್ಲಿ ತಾವೇ ಇಳಿದು ಸ್ವಚ್ಛತೆಗೆ ಮುಂದಾದ ಗವಿ ಸಿದ್ದೇಶ್ವರ ಶ್ರೀ

    ಚರಂಡಿ ನಂತ್ರ ಹಿರೇಹಳ್ಳದಲ್ಲಿ ತಾವೇ ಇಳಿದು ಸ್ವಚ್ಛತೆಗೆ ಮುಂದಾದ ಗವಿ ಸಿದ್ದೇಶ್ವರ ಶ್ರೀ

    ಕೊಪ್ಪಳ: ಕಳೆದ ಜಾತ್ರೆಯ ಸಮಯದಲ್ಲಿ ಚರಂಡಿಯನ್ನು ತಾವೇ ಕ್ಲೀನ್ ಮಾಡಿ ತಮ್ಮ ಸರಳತೆ ಮೆರೆದಿದ್ದ ಗವಿ ಸಿದ್ದೇಶ್ವರ ಶ್ರೀಗಳು ಇದೀಗ ಹಿರೇಹಳ್ಳದಲ್ಲಿ ತಾವೇ ಇಳಿದು ಸ್ವಚ್ಛತೆಗೆ ಮುಂದಾಗಿದ್ದಾರೆ.

    ಕೊಪ್ಪಳ ತಾಲೂಕಿನ ದದೇಗಲ್ ಬಳಿ ಹಿರೇಹಳ್ಳ ಪುನಶ್ಚೇತನ ಕಾರ್ಯಕ್ರಮಕ್ಕೆ ಕಳೆದ ಮಾರ್ಚ್ 1ರಂದು ಚಾಲನೆ ನೀಡಲಾಗಿದೆ. ಸುಮಾರು 25 ಕಿಲೋ ಮೀಟರ್ ಹಿರೇಹಳ್ಳವನ್ನು ಪುನಶ್ಚೇತನ ಮಾಡಲು ಶ್ರೀಗಳು ಸಂಕಲ್ಪ ಮಾಡಿದ್ದಾರೆ.

    ಅದರ ನಿಮಿತ್ಯ ಹಿರೇಹಳ್ಳದ ಮುಳ್ಳು ಕಂಟಿಗಳು ಬೆಳೆದ ಜಾಗದಲ್ಲಿ ಶ್ರೀಗಳು ಜನ ಸಾಮಾನ್ಯರಂತೆ ಕೆಲಸ ಮಾಡೋದು ಮೊಬೈಲಿನಲ್ಲಿ ಸೆರೆಯಾಗಿದೆ. ಹಳ್ಳದಲ್ಲಿ ತಾವೇ ಜನರೊಂದಿಗೆ ಇಳಿದು ಕಸವನ್ನು ಕಿತ್ತು ಹಾಕಿದ್ದಾರೆ. ಗವಿ ಮಠದ ಪೀಠಾಧಿಪತಿ ಆದರೂ ನಾನು ಓರ್ವ ಸಾಮಾನ್ಯ ಎಂದುಕೊಂಡು ಅಭಿನವ ಗವಿ ಸಿದ್ದೇಶ್ವರ ಶ್ರೀಗಳು ಕೆಲಸ ಮಾಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv