Tag: Siddhanth Kapoor

  • ಡ್ರಗ್ಸ್‌ ಕೇಸ್‌ – ಸಿದ್ಧಾಂತ್‌ ಕಪೂರ್‌ಗೆ ಜಾಮೀನು, ಇಂದು ನಡೆಯಲಿದೆ ವಿಚಾರಣೆ

    ಡ್ರಗ್ಸ್‌ ಕೇಸ್‌ – ಸಿದ್ಧಾಂತ್‌ ಕಪೂರ್‌ಗೆ ಜಾಮೀನು, ಇಂದು ನಡೆಯಲಿದೆ ವಿಚಾರಣೆ

    ಬೆಂಗಳೂರು: ದಿ ಪಾರ್ಕ್ ಹೋಟೆಲ್‍ನಲ್ಲಿ ಡ್ರಗ್ಸ್‌ ಪಾರ್ಟಿ ಪ್ರಕರಣದಲ್ಲಿ ಬಂಧಿತ ಬಾಲಿವುಡ್ ನಟ ಸಿದ್ಧಾಂತ್ ಕಪೂರ್ ಸೇರಿ ಐವರಿಗೆ ಸ್ಟೇಷನ್ ಬೇಲ್ ನೀಡಲಾಗಿದೆ. ಇಂದು ಸಹ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ.

    ಐವರ ವಿರುದ್ಧ ಹಲಸೂರು ಠಾಣೆಯಲ್ಲಿ ಎನ್‍ಡಿಪಿಎಸ್ ಕಾಯ್ದೆ 20ಎ, 22ಬಿ, 27ಬಿನಡಿ ಪ್ರಕರಣ ದಾಖಲು ಮಾಡಲಾಗಿದೆ. ಸಿದ್ಧಾಂತ್ ಕಪೂರ್, ಮೈಂಡ್ ಫೈರ್ ಸೊಲ್ಯೂಷನ್ ಬಿಸಿನೆಸ್ ಮ್ಯಾನೇಜರ್ ಅಖಿಲ್ ಸೋನಿ, ಉದ್ಯಮಿ ಹರ್ ಜೋತ್ ಸಿಂಗ್, ಡಿಜಿಟಲ್ ಮಾರ್ಕೆಟಿಂಗ್ ಉದ್ಯಮಿ ಹನಿ ಹಾಗೂ ಫೋಟೋಗ್ರಾಫರ್ ಅಖಿಲ್ ಮೇಲೆ ಎಫ್‍ಐಆರ್ ದಾಖಲಾಗಿದೆ.

    ಪಾರ್ಟಿ ಸ್ಥಳದಲ್ಲಿ 7 ಎಂಡಿಎಂಎ ಮಾತ್ರೆಗಳು, 10 ಗ್ರಾಂ ಗಾಂಜಾವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಿಚಾರಣೆ ವೇಳೆ ಸಿದ್ದಾಂತ್ ಕಪೂರ್ ಮೊಬೈಲ್‍ನಲ್ಲಿದ್ದ ಅಶ್ಲೀಲ ವಿಡಿಯೋಗಳನ್ನು ಕಂಡು ಪೊಲೀಸರು ದಂಗಾಗಿದ್ದಾರೆ.

    ನಟಿಯ ತಮ್ಮ ಆದ್ದರಿಂದ ಡಿಜೆಗಾಗಿ ಸಿದ್ದಾಂತ್ ಕಪೂರ್ ದಿನವೊಂದಕ್ಕೆ 1 ಲಕ್ಷ ರೂಪಾಯಿ ಬೇಡಿಕೆ ಇಡುತ್ತಿದ್ದ. ಅಲ್ಲದೇ ಡ್ರಗ್ಸ್‌ ಪಾರ್ಟಿಗೆ ಮಾಡೆಲ್‍ಗಳನ್ನು ಕರೆತಂದಿದ್ದ ಎನ್ನಲಾಗುತ್ತಿದೆ. ಇದನ್ನೂ ಓದಿ: ಮದುವೆಗೆ ಸಜ್ಜಾದ ನಿರೂಪಕಿ ಅನುಶ್ರೀ: ಹುಡುಗ ಯಾರು?

    ಬ್ರೆಜಿಲ್ ಜರ್ಮನ್ ಮಾಡೆಲ್‍ಗಳನ್ನು ಮುಂದಿಟ್ಟುಕೊಂಡು ಡ್ರಗ್ಸ್‌ ಡೀಲ್ ಮಾಡ್ತಿದ್ದ ಬಗ್ಗೆ ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ. ಸದ್ಯ ಪಾರ್ಟಿ ಆಯೋಜಕರು, ಹೋಟೆಲ್‍ಗೆ ನೋಟಿಸ್ ನೀಡಲಾಗಿದೆ.

  • ಡ್ರಗ್ಸ್ ಕೇಸ್: ಬಾಲಿವುಡ್ ನಟಿ ಶ್ರದ್ಧಾ ಕಪೂರ್ ಸಹೋದರ, ನಟ ಸಿದ್ಧಾಂತ್ ಕಪೂರ್ ಬಂಧನ

    ಡ್ರಗ್ಸ್ ಕೇಸ್: ಬಾಲಿವುಡ್ ನಟಿ ಶ್ರದ್ಧಾ ಕಪೂರ್ ಸಹೋದರ, ನಟ ಸಿದ್ಧಾಂತ್ ಕಪೂರ್ ಬಂಧನ

    ಬೆಂಗಳೂರು: ಬಾಲಿವುಡ್ ಖ್ಯಾತ ನಟಿ ಶ್ರದ್ಧಾ ಕಪೂರ್ ಸಹೋದರ ಮತ್ತು ಬಾಲಿವುಡ್ ನಟ, ಡಿಜೆ ಸಿದ್ಧಾಂತ್ ಕಪೂರ್ ಅವರನ್ನು ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬಂಧಿಸಿದ್ದಾರೆ.

    ಎಂ.ಜಿ ರಸ್ತೆಯ ಟ್ರಿನಿಟಿ ಸರ್ಕಲ್‍ನಲ್ಲಿ ಪ್ರತಿಷ್ಠಿತ 5 ಸ್ಟಾರ್ ದಿ ಪಾರ್ಕ್ ಹೋಟೆಲ್ ಮೇಲೆ ಹಲಸೂರು ಪೊಲೀಸರು ದಾಳಿ ಮಾಡಿದ್ದಾರೆ. ಪಾರ್ಟಿಯಲ್ಲಿ ತೊಡಗಿದ್ದ ಯುವಕ ಯುವತಿ ಸೇರಿ ಒಟ್ಟು 50 ಜನರನ್ನ ವಶಕ್ಕೆ ಪಡೆದಿದ್ದರು. ಈ ಗುಂಪಿನಲ್ಲಿದ್ದ 35 ಜನರಿಗೆ ಮೆಡಿಕಲ್ ಟೆಸ್ಟ್ ಮಾಡಿಸಿದ್ದು, ಐವರು ಮಾದಕವಸ್ತು ಸೇವನೆ ಮಾಡಿರೋದು ದೃಢವಾಗಿದೆ. ಈ ಗುಂಪಿನಲ್ಲಿ ಸಿದ್ಧಾಂತ್ ಕಪೂರ್ ಸಹ ಇರುವುದು ಖಚಿತವಾಗಿದೆ. ಈ ಪರಿಣಾಮ ಸಿದ್ಧಾಂತ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಭರ್ಜರಿ ಡ್ರಗ್ಸ್ ಪಾರ್ಟಿ – ಬಾಲಿವುಡ್ ನಟನ ಪುತ್ರ ಸೇರಿ 50ಕ್ಕೂ ಹೆಚ್ಚು ಮಂದಿ ವಶ

    ಸಿದ್ಧಾಂತ್  ಹೋಟೆಲ್‍ನಲ್ಲಿ ಡಿಜೆ ಪ್ಲೈಯರ್ ಆಗಿದ್ದು, ಡ್ರಗ್ಸ್ ಸೇವನೆ ಮಾಡಿರೋದು ದೃಢವಾಗಿದೆ. ಸಿದ್ಧಾಂತ್ ಬಾಲಿವುಡ್ ಹಿರಿಯ ನಟ ಶಕ್ತಿ ಕಪೂರ್ ಮಗ ಆಗಿದ್ದು, ಶ್ರದ್ಧಾ ಕಪೂರ್ ಸಹೋದರ ಆಗಿದ್ದಾರೆ.

    ಅಖೀಲ್ ಸೋನಿ, ಅಜೋದ್ ಸಿಂಗ್ ಪಂಜಾಬ್, ಅಖೀಲ್, ಅನಿ, ದರ್ಶನ್ ಸುರೇಶ್ ಬಂಧಿತ ಆರೋಪಿಗಳು. ಆರೋಪಿಗಳೇಲ್ಲರು ಟೆಕ್ಕಿಗಳಾಗಿದ್ದು, ರಾತ್ರಿ ಪಾರ್ಟಿ ಮಾಡಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳಿಂದ ಸ್ಪಷ್ಟನೆ ಕೊಟ್ಟಿದ್ದಾರೆ.