Tag: Siddheshwar Swamiji

  • ನಮ್ಮನೆಯಲ್ಲಿ ಕುರಾನ್ ಜೊತೆಗೆ ಶ್ರೀಗಳ ಆಶೀರ್ವಚನ ಕೇಳುತ್ತಿದ್ದೆವು: ಮುಸ್ಲಿಂ ಭಕ್ತರು

    ನಮ್ಮನೆಯಲ್ಲಿ ಕುರಾನ್ ಜೊತೆಗೆ ಶ್ರೀಗಳ ಆಶೀರ್ವಚನ ಕೇಳುತ್ತಿದ್ದೆವು: ಮುಸ್ಲಿಂ ಭಕ್ತರು

    ವಿಜಯಪುರ: ನಾವು ನಮ್ಮ ಮನೆಯಲ್ಲಿ ಕುರಾನ್ ಜೊತೆಗೆ ಶ್ರೀಗಳ ಆಶೀರ್ವಚನವನ್ನೂ ಕೇಳುತ್ತಿದ್ದೆವು. ಶ್ರೀಗಳ ಚಿಂತನೆ ಒಂದು ಧರ್ಮಕ್ಕೆ ಮಾತ್ರ ಸೀಮಿತವಲ್ಲ ಎಂದು ಸಿದ್ದೇಶ್ವರ ಸ್ವಾಮೀಜಿಯವರ (Siddheshwar Swamiji) ಮುಸ್ಲಿಂ (Muslim) ಭಕ್ತರು ಭಾವನಾತ್ಮಕವಾಗಿ ಹೇಳಿಕೆ ನೀಡಿದ್ದಾರೆ.

    ಸೋಮವಾರ ಸಂಜೆ 6 ಗಂಟೆ ವೇಳೆಗೆ ನಡೆದಾಡುವ ದೇವರು ಸಿದ್ದೇಶ್ವರ ಮಹಾಸ್ವಾಮಿ ಲಿಂಗೈಕ್ಯರಾಗಿರುವ ಹಿನ್ನೆಲೆ ಅವರ ಅಂತಿಮ ದರ್ಶನಕ್ಕಾಗಿ ಸಾವಿರಾರು ಭಕ್ತರ ದಂಡು ವಿಜಯಪುರಕ್ಕೆ (Vijayapura) ಆಗಮಿಸಿದೆ. ಇದೇ ವೇಳೆ ಅವರ ಅಂತಿಮ ದರ್ಶನಕ್ಕೆಂದು ಬಂದಿದ್ದ ಮುಸ್ಲಿಂ ಭಕ್ತರು ತಮಗಿದ್ದ ಅವರ ಮೇಲಿನ ಭಕ್ತಿ ಬಗ್ಗೆ ಗದ್ಗದಿತರಾಗಿ ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ್ದಾರೆ.

    “ನಾವು ಶ್ರೀಗಳು ಬದುಕಿದ್ದಾಗ ಅವರ ಮಠಕ್ಕೆ ಹೋಗಿ ಅವರ ಪ್ರವಚನ ಕೇಳಬೇಕೆಂದು ಬಹಳ ಬಾರಿ ಅಂದುಕೊಂಡಿದ್ದೆವು. ಆದರೆ ನಾವು ಇಂದು ಅವರು ನಮ್ಮೊಂದಿಗೆ ಇಲ್ಲದಿರುವಾಗ ಭೇಟಿಯಾಗುತ್ತೇವೆ ಎಂದುಕೊಂಡಿರಲಿಲ್ಲ. ಅವರ ಬಗೆಗಿನ ಒಂದು ನಿಜ ವಿಚಾರ ಏನೆಂದರೆ, ಅವರಿಗೆ ಮರಣ ಇಲ್ಲ ಎಂದು ಭಾವನಾತ್ಮಕವಾಗಿ ತಮ್ಮ ನೋವನ್ನು ತೋಡಿಕೊಂಡರು. ಇದನ್ನೂ ಓದಿ: ಉತ್ತರ ಕರ್ನಾಟಕದ ನಡೆದಾಡುವ ದೇವರು ಸಿದ್ದೇಶ್ವರ ಶ್ರೀ

    ಕಳೆದ 5 ದಿನಗಳಿಂದ ಸಿದ್ದೇಶ್ವರ ಸ್ವಾಮೀಜಿ ಅನಾರೋಗ್ಯದಿಂದ ಬಳಲುತ್ತಿದ್ದರು. ಸಿದ್ದೇಶ್ವರ ಸ್ವಾಮೀಜಿ ಆರೋಗ್ಯ ಸ್ಥಿರವಾಗಿತ್ತು. ಆದರೆ ಸೋಮವಾರ ಮಧ್ಯಾಹ್ನ ಮತ್ತು ಸಂಜೆಯ ಹೆಲ್ತ್ ಬುಲೆಟಿನ್‌ನಲ್ಲಿ ಸ್ವಾಮೀಜಿಗೆ ಉಸಿರಾಟ ತೊಂದರೆ ಜಾಸ್ತಿಯಾಗಿದೆ. ಸ್ವಾಮೀಜಿ ಬಿಪಿ ಸ್ವಲ್ಪ ಕಡಿಮೆಯಾಗಿದೆ. ಸ್ವಾಮೀಜಿ ಆಹಾರ ತೆಗೆದುಕೊಳ್ಳುತ್ತಿಲ್ಲ. ಆದರೂ ಸಿದ್ದೇಶ್ವರ ಸ್ವಾಮೀಜಿ ಅವರ ಆರೋಗ್ಯ ಸ್ಥಿರವಾಗಿದೆ. ನಾವು ನಮ್ಮ ಶಕ್ತಿ ಮೀರಿ ಪ್ರಯತ್ನ ಪಡುತ್ತಿದ್ದೇವೆ. ಸ್ವಾಮೀಜಿ ಆಸ್ಪತ್ರೆಗೆ ಬರಲು ಒಪ್ಪುತ್ತಿಲ್ಲ. ಏನು ಚಿಕಿತ್ಸೆ ಕೊಡುತ್ತಿರೋ ಇಲ್ಲೇ ಕೊಡಿ ಎಂದು ಸ್ವಾಮೀಜಿ ಹೇಳಿದ್ದರು ಎಂದು ವೈದ್ಯರು ತಿಳಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸೋಮವಾರ ಸಂಜೆ 6:05ಕ್ಕೆ ಅವರು ಲಿಂಗೈಕ್ಯರಾಗಿದ್ದಾರೆ.

    ಅವರ ಅಂತಿಮ ದರ್ಶನಕ್ಕಾಗಿ ನಗರದ ಸೈನಿಕ ಶಾಲೆ ಮೈದಾನದಲ್ಲಿ ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗಿದೆ. ಧರ್ಮದ ಎಲ್ಲೆಯನ್ನು ಮೀರಿ ಶ್ರೀಗಳ ದರ್ಶನ ಪಡೆಯಲು ಸಾವಿರಾರು ಜನರು ಹರಿದು ಬಂದಿದ್ದಾರೆ. ಇದನ್ನೂ ಓದಿ: ಸಿದ್ಧೇಶ್ವರ ಶ್ರೀ ಲಿಂಗೈಕ್ಯ – ಕನ್ನಡದಲ್ಲೇ ಟ್ವೀಟ್‌ ಮಾಡಿ ಪ್ರಧಾನಿ ಮೋದಿ ಸಂತಾಪ

    Live Tv
    [brid partner=56869869 player=32851 video=960834 autoplay=true]

  • ಉತ್ತರ ಕರ್ನಾಟಕದ ನಡೆದಾಡುವ ದೇವರು ಸಿದ್ದೇಶ್ವರ ಶ್ರೀ

    ಉತ್ತರ ಕರ್ನಾಟಕದ ನಡೆದಾಡುವ ದೇವರು ಸಿದ್ದೇಶ್ವರ ಶ್ರೀ

    ವಿಜಯಪುರ: ನಡೆದಾಡುವ ದೇವರು ಎಂದೇ ಪ್ರಖ್ಯಾತರಾಗಿದ್ದ ಶ್ರೀ ಸಿದ್ದೇಶ್ವರ ಸ್ವಾಮೀಜಿ (Siddheshwar Swamiji) ಅವರನ್ನು ಕರ್ನಾಟಕ, ಭಾರತದ ಅತ್ಯುತ್ತಮ ಆಧ್ಯಾತ್ಮಿಕ ಚಿಂತಕರು ಮತ್ತು ಪ್ರೇರಕ ಭಾಷಣಕಾರರಲ್ಲಿ ಒಬ್ಬರು ಎಂದು ಪರಿಗಣಿಸಲಾಗಿದೆ. ಅವರ ಭಾಷಣಗಳು ಪ್ರತಿಯೊಬ್ಬರ ಜೀವನದಲ್ಲಿ ಅದ್ಭುತ ರೂಪಾಂತರವನ್ನು ತರುತ್ತಿತ್ತು ಮತ್ತು ಅಂತಿಮವಾಗಿ ಶಾಂತಿಯುತ ಮತ್ತು ಸಂತೋಷದ ಜೀವನಕ್ಕೆ ಕಾರಣವಾಗುತ್ತಿತ್ತು.

    ಶ್ರೀ ಸಿದ್ದೇಶ್ವರ ಸ್ವಾಮೀಜಿ (82) ಅವರು 1948ರಲ್ಲಿ ವಿಜಯಪುರ (Vijayapura) ಜಿಲ್ಲೆಯ ತಾಳ ಬಿಜ್ಜರಗಿಯಲ್ಲಿ ಜನಿಸಿದರು. ಸ್ವಾಮೀಜಿಯನ್ನು ಉತ್ತರ ಕರ್ನಾಟಕದ ನಡೆದಾಡುವ ದೇವರು ಎಂದೇ ಪ್ರಖ್ಯಾತರಾಗಿದ್ದರು. 19ನೇ ವಯಸ್ಸಿನಲ್ಲಿ, ಸ್ವಾಮೀಜಿಯವರು ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ತತ್ವ ಶಿರೋಮಣಿ ಪುಸ್ತಕವನ್ನು ಬರೆದರು.

    ನಡೆದಾರುವ ನಾರಾಯಣ ಎಂದು ಕರೆಯಲ್ಪಡುವ ಸ್ವಾಮೀಜಿ ದೈವಭಕ್ತಿಯ ನಿಜವಾದ ಮತ್ತು ಜೀವಂತ ಉದಾಹರಣೆಯಾಗಿದ್ದರು. ಈ ಹೆಸರಿನ ಅರ್ಥ ಜೀವಂತ ದೇವರು ಹಾಗೂ ಸ್ವಾಮೀಜಿ ಸಮಾಜದ ಉನ್ನತಿ ಮತ್ತು ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದರು. ದಕ್ಷ ಶಿಕ್ಷಕ, ನಿಜವಾದ ಆಧ್ಯಾತ್ಮಿಕ ಆತ್ಮ, ಮಾನವತಾವಾದಿ ಮತ್ತು ಅನೇಕ ಉಪನ್ಯಾಸಗಳಲ್ಲಿ ವಿದ್ವಾಂಸರಾಗಿದ್ದ ಸಿದ್ದೇಶ್ವರ ಸ್ವಾಮೀಜಿ ಅವರು ಈ ಯುಗದ ಅತ್ಯಂತ ಜನಪ್ರಿಯ ಆಧ್ಯಾತ್ಮಿಕ ನಾಯಕರಲ್ಲಿ ಒಬ್ಬರಾಗಿದ್ದರು.

    ಸಿದ್ದೇಶ್ವರ ಸ್ವಾಮೀಜಿ ಶಿಕ್ಷಣ: 4ನೇ ತರಗತಿವರೆಗೆ ಓದಿದ ಬಳಿಕ ಮಲ್ಲಿಕಾರ್ಜುನ ಸ್ವಾಮೀಜಿ ಬಳಿ ಬಂದಿದ್ದರು. ಮಲ್ಲಿಕಾರ್ಜುನ ಸ್ವಾಮೀಜಿ ಬೆಳೆಯುವ ಅವರೆಕಾಯಿಯ ಬೇರಿನಲ್ಲಿ ಇದ್ದುದರಿಂದ ಅವರ ಚಾಣಾಕ್ಷತನ ತಡವಾಗಲಿಲ್ಲ. ಅವರು ಸಿದ್ದೇಶ್ವರನನ್ನು ಬೋಧಿಸಬಹುದಾದ ಸ್ಥಳಗಳಿಗೆ ಕರೆದೊಯ್ದರು.

    ವೇದಾಂತ ಕೇಸರಿ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ ಚಿಕ್ಕ ವಯಸ್ಸಿನಲ್ಲೇ ಆಧ್ಯಾತ್ಮಿಕತೆಯತ್ತ ತಮ್ಮ ಪ್ರಯಾಣವನ್ನು ಪ್ರಾರಂಭಿಸಿದರು. ಅವರು 20 ವರ್ಷವಾದಾಗ, ಅವರು ಮನೆಯಿಂದ ಹೊರಟು ಕರ್ನಾಟಕದ ಗದಗ ಜಿಲ್ಲೆಯ ನಾಗನೂರು ಕಡೆಗೆ ತೆರಳಿದರು. ಅಲ್ಲಿ ಶ್ರೀ ಶಿವಾನಂದ ಸ್ವಾಮೀಜಿಯವರನ್ನು ಭೇಟಿಯಾಗಿ ಶಿಷ್ಯರನ್ನಾಗಿ ಸ್ವೀಕರಿಸಿದರು. ಗದಗಿನ ಸದಾಶಿವ ಸ್ವಾಮೀಜಿ ಅವರ ಮಾರ್ಗದರ್ಶನದಲ್ಲಿ ಸಂಸ್ಕೃತ ಭಾಷೆಯಲ್ಲಿ ಪಾಂಡಿತ್ಯ ಗಳಿಸಿದರು.

    ಅದೇ ಸಮಯದಲ್ಲಿ, ಅವರ ಗುರುಗಳು ಅವರಿಗೆ ವೇದಾಂತ, ಯೋಗ, ಶರಣ ತತ್ವಶಾಸ್ತ್ರ ಮತ್ತು ಇನ್ನೂ ಅನೇಕ ಸಾಂಪ್ರದಾಯಿಕ ಅಭ್ಯಾಸಗಳನ್ನು ಕಲಿಸಿದರು. ಎಲ್ಲಾ ಸಂಪ್ರದಾಯಗಳಲ್ಲಿ ಚೆನ್ನಾಗಿ ಪಾರಂಗತರಾದ ಅವರು 1925ರಿಂದ ಪ್ರವಚನಗಳನ್ನು ನೀಡಲು ಪ್ರಾರಂಭಿಸಿದರು. ಅವರು ಅಚಲವಾದ ಧ್ವನಿಯಿಂದ ಆಶೀರ್ವದಿಸಲ್ಪಟ್ಟಿದ್ದರಿಂದ, ಅವರು ತಮ್ಮ ಗಾಯನ ಸಾಮಥ್ರ್ಯಗಳಿಗೆ ಹೆಸರುವಾಸಿಯಾಗಿದ್ದರು.

    ತಮ್ಮ ಆಧ್ಯಾತ್ಮಿಕ ಚಟುವಟಿಕೆಯ ಜೊತೆಗೆ, ಸಿದ್ದೇಶ್ವರರು ಕಾಲೇಜಿನಲ್ಲಿ ತಮ್ಮ ಅಧ್ಯಯನವನ್ನು ಮುಂದುವರಿಸಿದರು. ಕರ್ನಾಟಕ ವಿಶ್ವವಿದ್ಯಾನಿಲಯದಿಂದ ಪದವಿ ಪಡೆದ ನಂತರ, ಸಿದ್ದೇಶ್ವರರು ಕೊಲ್ಲಾಪುರ ವಿಶ್ವವಿದ್ಯಾಲಯದಿಂದ ತತ್ವಶಾಸ್ತ್ರದಲ್ಲಿ ಎಂಎ (ಮಾಸ್ಟರ್ ಆಫ್ ಆಟ್ರ್ಸ್) ಪದವಿಯನ್ನು ಮುಗಿಸಿದ್ದರು.

    ಅದಾದ ಬಳಿಕ ವರ್ಷಗಳಲ್ಲಿ, ಮಹಾರಾಷ್ಟ್ರ, ಗೋವಾ ಮತ್ತು ಕರ್ನಾಟಕದಾದ್ಯಂತ ಪ್ರವಚನಗಳನ್ನು ತಲುಪಿಸಲು ಅವರನ್ನು ಆಹ್ವಾನಿಸಲಾಯಿತು. 1982ರ ವರೆಗೆ, ಅವರು ತಮ್ಮ ಜೀವನದುದ್ದಕ್ಕೂ ಸ್ಥಳದಿಂದ ಸ್ಥಳಕ್ಕೆ ಹೋಗುತ್ತಿದ್ದರು. ಹೆಚ್ಚಾಗಿ ಕೃಷ್ಣಾ ನದಿಯ ದಡದ ಸುತ್ತಲೂ ಎಲ್ಲರಿಗೂ ಪ್ರಯೋಜನಕ್ಕಾಗಿ ಪ್ರವಚನಗಳನ್ನು ತಲುಪಿಸಿದರು. ಇದನ್ನೂ ಓದಿ: ಸಿದ್ಧೇಶ್ವರ ಶ್ರೀ ಲಿಂಗೈಕ್ಯ – ಕನ್ನಡದಲ್ಲೇ ಟ್ವೀಟ್‌ ಮಾಡಿ ಪ್ರಧಾನಿ ಮೋದಿ ಸಂತಾಪ

    ಜ್ಞಾನಯೋಗಾಶ್ರಮದ ಸಂಸ್ಥಾಪಕರು: ಸಿದ್ದೇಶ್ವರ ಸ್ವಾಮೀಜಿ ವಿಜಯಪುರದಲ್ಲಿ ಜ್ಞಾನಯೋಗಾಶ್ರಮದ ಸಂಸ್ಥಾಪಕರು. ಸ್ವಾಮೀಜಿಯವರ ಮಾತು ಮತ್ತು ನಡೆಯ ಮೂಲಕ ಸಾವಿರಾರು ಜನರ ಬದುಕನ್ನು ಹಸನುಗೊಳಿಸಿದ್ದರು. ಶ್ರೀ ಸಿದ್ದೇಶ್ವರ ಸ್ವಾಮೀಜಿ ಅವರು ಕಠಿಣವಾದ ವಿಷಯಗಳನ್ನು ಬಹಳ ಸಂವೇದನಾಶೀಲ ಮತ್ತು ಆನಂದದಾಯಕ ರೀತಿಯಲ್ಲಿ ಉಪದೇಶಿಸುತ್ತಿದ್ದರು. ಸಿದ್ದೇಶ್ವರ ಸ್ವಾಮೀಜಿ ಅವರ ಉಪನ್ಯಾಸಗಳು ಉತ್ತರ ಕರ್ನಾಟಕದ ಎಲ್ಲರಿಗೂ ಚಿರಪರಿಚಿತರಾಗಿದ್ದರು. ಇದನ್ನೂ ಓದಿ: ಶ್ರೀಗಳು ವೀಲ್‍ನಲ್ಲಿ ಬರೆದಿಟ್ಟಿರುವಂತೆ ಅಂತ್ಯಸಂಸ್ಕಾರ ಮಾಡಲಾಗುವುದು: ಯತ್ನಾಳ್

    Live Tv
    [brid partner=56869869 player=32851 video=960834 autoplay=true]

  • ವಿಜಯಪುರ: ಸಿದ್ಧೇಶ್ವರ ಶ್ರೀಗಳ ಅಂತಿಮ ದರ್ಶನಕ್ಕೆ ಸೈನಿಕ ಶಾಲೆಯತ್ತ ಭಕ್ತಸಾಗರ

    ವಿಜಯಪುರ: ಸಿದ್ಧೇಶ್ವರ ಶ್ರೀಗಳ ಅಂತಿಮ ದರ್ಶನಕ್ಕೆ ಸೈನಿಕ ಶಾಲೆಯತ್ತ ಭಕ್ತಸಾಗರ

    ವಿಜಯಪುರ: ಸೋಮವಾರ ಅಸ್ತಂಗತರಾದ ಜ್ಞಾನಯೋಗಾಶ್ರಮದ ಸಿದ್ಧೇಶ್ವರ ಶ್ರೀಗಳ (Siddheswhara Swamiji) ಪಾರ್ಥೀವ ಶರೀರವನ್ನು ಆಶ್ರಮದಿಂದ ಸೈನಿಕ ಶಾಲೆಗೆ ತರಲಾಯಿತು. ಶ್ರೀಗಳ ಅಂತಿಮ ದರ್ಶನಕ್ಕೆ ಮಂಗಳವಾರ ಬೆಳ್ಳಂಬೆಳಗ್ಗೆಯಿಂದಲೇ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರ ದಂಡು ಆಗಮಿಸುತ್ತಿದೆ.

    ಆಶ್ರಮದಿಂದ ಸೈನಿಕ ಶಾಲೆ ಮೈದಾನಕ್ಕೆ ಶ್ರೀಗಳ ಪಾರ್ಥೀವ ಶರೀರವನ್ನು ತೆರೆದ ವಾಹನದಲ್ಲಿ ತರಲಾಯಿತು. ಈ ವೇಳೆ ರಸ್ತೆಯ ಇಕ್ಕೆಲಗಳಲ್ಲಿ ನಿಂತಿದ್ದ ಭಕ್ತರು, ಶ್ರೀಗಳಿಗೆ ದೂರದಿಂದಲೇ ಕೈಮುಗಿದು ಕಂಬನಿ ಮಿಡಿದರು. ಸೈನಿಕ ಶಾಲೆ ಮುಂಭಾಗದಲ್ಲಿ ವಚನ ಪಠಣ, ಮಂತ್ರ ಪಠಣ ಮಾಡಲಾಯಿತು. ಇದನ್ನೂ ಓದಿ: ಸಿದ್ದೇಶ್ವರ ಶ್ರೀಗಳ ನಿಧನಕ್ಕೆ ಗಣ್ಯರಿಂದ ಕಣ್ಣೀರ ವಿದಾಯ

    ಶ್ರೀಗಳ ಅಂತಿಮ ದರ್ಶನಕ್ಕೆ ಸೈನಿಕ ಶಾಲೆಯತ್ತ ನಸುಕಿನ ಜಾವದಲ್ಲೇ ಸಹಸ್ರಾರು ಭಕ್ತರು ಆಗಮಿಸಿದ್ದಾರೆ. ಭಕ್ತರಿಗಾಗಿ ವಿಜಯಪುರ ಬಸ್ ನಿಲ್ದಾಣದಿಂದ ಸೈನಿಕ ಶಾಲೆಗೆ 25 ವಿಶೇಷ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ. ಸುಮಾರು 6 ಲಕ್ಷ ಭಕ್ತರಿಗೆ ಪ್ರಸಾದ, ನೀರು, ನೆರಳಿನ ವ್ಯವಸ್ಥೆ ಮಾಡಲಾಗಿದೆ. ಸರ್ಕಾರಿ ಗೌರವದಲ್ಲಿ ಸಿಎಂ ಬೊಮ್ಮಾಯಿ ಮತ್ತು ಸಂಪುಟ ಸಚಿವರು, ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಮಾಜಿ ಸಿಎಂ ಕುಮಾರಸ್ವಾಮಿ ಭಾಗಿಯಾಗಲಿದ್ದಾರೆ.

    ಸೈನಿಕ ಶಾಲೆಯಲ್ಲಿ ಶ್ರೀಗಳಿಗೆ ತ್ರಿವರ್ಣ ಧ್ವಜ ಹೊದಿಸಿ, ಗಾಜಿನ ಮಂಟಪದಲ್ಲಿ ಪಾರ್ಥೀವ ಶರೀರವನ್ನಿಟ್ಟು ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ಬೆಳಗ್ಗೆಯೇ 30 ಸಾವಿರಕ್ಕೂ ಹೆಚ್ಚು ಭಕ್ತರು ಅಂತಿಮ ದರ್ಶನಕ್ಕೆ ಆಗಮಿಸಿದ್ದರು. ರಾಜ್ಯದ ಪ್ರಮುಖ ಮಠಗಳ ಮಠಾಧೀಶರು, ರಾಜಕೀಯ ಮುಖಂಡರು ಹಾಗೂ ಅಧಿಕಾರಿಗಳು ಸಹ ಭಾಗವಹಿಸಿದ್ದಾರೆ. ಇದನ್ನೂ ಓದಿ: ಮಂಗಳವಾರ ವಿಜಯಪುರ ಶಾಲಾ-ಕಾಲೇಜು, ಸರ್ಕಾರಿ ಕಚೇರಿಗಳಿಗೆ ರಜೆ ಘೋಷಣೆ

    Live Tv
    [brid partner=56869869 player=32851 video=960834 autoplay=true]

  • ಸಿದ್ದೇಶ್ವರ ಶ್ರೀಗಳ ನಿಧನಕ್ಕೆ ಗಣ್ಯರಿಂದ ಕಣ್ಣೀರ ವಿದಾಯ

    ಸಿದ್ದೇಶ್ವರ ಶ್ರೀಗಳ ನಿಧನಕ್ಕೆ ಗಣ್ಯರಿಂದ ಕಣ್ಣೀರ ವಿದಾಯ

    ವಿಜಯಪುರ: ನಡೆದಾಡುವ ದೇವರು ಎಂದೇ ಖ್ಯಾತರಾಗಿರುವ ಜ್ಞಾನಯೋಗಿ ಆಶ್ರಮದ ಸಿದ್ದೇಶ್ವರ ಸ್ವಾಮೀಜಿ ಅವರು ನಿಧನರಾದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಭಕ್ತರ ಆಕ್ರಂದನ ಮುಗಿಲು ಮುಟ್ಟಿದೆ. ರಾಜ್ಯದ ಪ್ರಮುಖ ಗಣ್ಯರೂ ಕಂಬನಿ ಮಿಡಿಯುವ ಮೂಲಕ ಶ್ರೀಗಳಿಗೆ ಕಣ್ಣೀರ ವಿದಾಯಹೇಳಿದ್ದಾರೆ.

    ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂಗಳಾದ ಸಿಎಂ ಬಿ.ಎಸ್‌.ಯಡಿಯೂರಪ್ಪ, ಹೆಚ್‌.ಡಿ ಕುಮಾರಸ್ವಾಮಿ, ಸಿದ್ದರಾಮಯ್ಯ, ಕೇಂದ್ರ ಸಚಿವ ಜಿ.ಪರಮೇಶ್ವರ್‌, ಶಾಸಕ ಬಸನಗೌಡ ಪಾಟೀಲ ಯತ್ನಾಳ್‌, ಸಚಿವ ವಿ.ಸೋಮಣ್ಣ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಸೇರಿದಂತೆ ರಾಜ್ಯಾದ್ಯಂತ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

    ಬಸವರಾಜ ಬೊಮ್ಮಾಯಿ:
    ವಿಜಯಪುರದ ಜ್ಞಾನ ಯೋಗಾಶ್ರಮದ ಪರಮ ಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಯವರು ಲಿಂಗೈಕ್ಯರಾದ ಸುದ್ದಿ ತಿಳಿದು ಅತ್ಯಂತ ದುಃಖವಾಗಿದೆ. ತಮ್ಮ ಪ್ರವಚನಗಳ ಮೂಲಕ ಮನುಕುಲದ ಉದ್ಧಾರಕ್ಕೆ ಶ್ರಮಿಸಿದ ಶ್ರೀಗಳ ಸೇವೆ ಅಮೋಘ ಹಾಗೂ ಅನನ್ಯವಾದುದು. ಶ್ರೀಗಳ ಅಗಲಿಕೆ ನಾಡಿಗೆ ತುಂಬಲಾರದ ನಷ್ಟವಾಗಿದೆ. ಶ್ರೀಗಳ ಆತ್ಮಕ್ಕೆ ಸದ್ಗತಿ ಕೋರುತ್ತೇನೆ. ನಾಡಿನಾದ್ಯಂತ ಇರುವ ಶ್ರೀಗಳ ಭಕ್ತ ಸಮೂಹಕ್ಕೆ ಈ ದುಃಖವನ್ನು ಸಹಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ.

    ಹೆಚ್‌.ಡಿ ಕುಮಾರಸ್ವಾಮಿ:
    ನಮ್ಮ ಪಾಲಿಗೆ ನಡೆದಾಡುವ ಬೆಳಕು, ನಡೆದಾಡುವ ಅರಿವು, ನಡೆದಾಡುವ ದೇವರೇ ಆಗಿದ್ದ ಜ್ಞಾನ ಯೋಗಾಶ್ರಮದ ಜ್ಞಾನಯೋಗಿ ಪರಮಪೂಜ್ಯ ಶ್ರೀ ಶ್ರೀ ಸಿದ್ದೇಶ್ವರ ಸ್ವಾಮೀಜಿ ಅವರು ಶಿವೈಕ್ಯರಾಗಿದ್ದಾರೆ. ಸಮಾಜಕ್ಕೆ ಚಿಕಿತ್ಸರಾಗಿದ್ದ ಪೂಜ್ಯರು, ತಮ್ಮ ಪರಿಪೂರ್ಣ ಸಾರ್ಥಕ ಬದುಕಿನಿಂದಲೇ ನಮ್ಮನ್ನು ಪಾವನಗೊಳಿಸಿದವರು. ತಮ್ಮ ಪ್ರತಿ ಹೆಜ್ಜೆಯಲ್ಲೂ ಜ್ಞಾನದ ಬೆಳಕು ಮೂಡಿಸುತ್ತಿದ್ದ ಅವರ ನಿರ್ಗಮನ ಬಹುದೊಡ್ಡ ನಷ್ಟ. ಪೂಜ್ಯರು ಬಿಟ್ಟುಹೋಗಿರುವ ಅರಿವು ನಮಗೆಲ್ಲ ದಿವ್ಯಬೆಳಕು. ಆ ಬೆಳಕಿನಡಿಯಲ್ಲಿ ಮುನ್ನಡೆಯೋಣ ಎನ್ನುವ ಆಶಯ ನನ್ನದಾಗಿದೆ.

    ಡಿ.ಕೆ ಶಿವಕುಮಾರ್‌:
    ಖ್ಯಾತ ಪ್ರವಚನಕಾರರು ಹಾಗೂ ಜ್ಞಾನಕೋಶವೆಂದೇ ಪ್ರಸಿದ್ಧರಾದ ವಿಜಯಪುರದ ಜ್ಞಾನ ಯೋಗಾಶ್ರಮದ ಪರಮ ಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿ ಅವರು ಲಿಂಗೈಕ್ಯರಾದ ವಿಚಾರ ಕೇಳಿ ಅತೀವ ನೋವುಂಟಾಯಿತು. ಅವರ ಸಾವು ತುಂಬಲಾಗದ ನಷ್ಟವಾಗಿದೆ. ಅವರ ಆತ್ಮಕ್ಕೆ ಸದ್ಗತಿ ಸಿಗಲಿ, ಅವರ ಅಪಾರ ಭಕ್ತರಿಗೆ ನನ್ನ ಸಂತಾಪಗಳು.

    ಆರಗ ಜ್ಞಾನೇಂದ್ರ:
    ವಿಜಯಪುರದ ಜ್ಞಾನಯೋಗಾಶ್ರಮದ ಪರಮಪೂಜ್ಯ ಶ್ರೀ ಸಿದ್ದೇಶ್ವರ ಶ್ರೀಗಳು ನಿಧನರಾದ ಸುದ್ದಿ ತಿಳಿದು ಬಹಳ ದುಃಖ ಉಂಟಾಗಿದೆ. ನಾಡಿನ ಸಾಮಾಜಿಕ ಹಾಗೂ ಅಧ್ಯಾತ್ಮ ವಲಯಕ್ಕೆ ಅವರ ಸೇವೆ ಸ್ಮರಣೀಯವಾದುದು. ಶ್ರೀಗಳ ಆತ್ಮಕ್ಕೆ ಸದ್ಗತಿ ದೊರೆಯಲಿ. ಅನುಯಾಯಿಗಳಿಗೆ ಈ ನೋವು ಭರಿಸುವ ಶಕ್ತಿ ದೊರೆಯಲಿ. ಶ್ರೀಗಳು ‘ನಡೆದಾಡುವ ದೇವರು’ ಎಂದೇ ಹೆಸರು ಪಡೆದಿದ್ದರು. ತಮ್ಮ ಅಪಾರ ಜ್ಞಾನಧಾರೆಯನ್ನು ಜನರಿಗೆ ಎರೆದು ಬದುಕಿಗೆ ಉತ್ತಮ ಮಾರ್ಗದರ್ಶನ ನೀಡುತ್ತಿದ್ದರು. ಅವರ ಸೇವೆ ಅಜರಾಮರ.

    Live Tv
    [brid partner=56869869 player=32851 video=960834 autoplay=true]

  • ಮಂಗಳವಾರ ವಿಜಯಪುರ ಶಾಲಾ-ಕಾಲೇಜು, ಸರ್ಕಾರಿ ಕಚೇರಿಗಳಿಗೆ ರಜೆ ಘೋಷಣೆ

    ಮಂಗಳವಾರ ವಿಜಯಪುರ ಶಾಲಾ-ಕಾಲೇಜು, ಸರ್ಕಾರಿ ಕಚೇರಿಗಳಿಗೆ ರಜೆ ಘೋಷಣೆ

    ವಿಜಯಪುರ: ನಡೆದಾಡುವ ದೇವರು ಎಂದೇ ಖ್ಯಾತರಾಗಿರುವ ಜ್ಞಾನಯೋಗಿ ಆಶ್ರಮದ ಸಿದ್ದೇಶ್ವರ ಸ್ವಾಮೀಜಿ(82) ಅವರು ಲಿಂಗೈಕ್ಯರಾದ ಹಿನ್ನೆಲೆಯಲ್ಲಿ ಜನವರಿ 3 ರಂದು ವಿಜಯಪುರ ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳು ಹಾಗೂ ಸರ್ಕಾರಿ ಕಚೇರಿಗಳಿಗೆ ರಜೆ ಘೋಷಣೆ ಮಾಡಲಾಗಿದೆ.

    ಕನಿಷ್ಠ 10 ಲಕ್ಷ ಮಂದಿ ಶ್ರೀಗಳ ದರ್ಶನಕ್ಕೆ ಬರುವ ನಿರೀಕ್ಷೆಯಿದ್ದು, ಜನವರಿ 3ರ ಮಧ್ಯಾಹ್ನ 3 ಗಂಟೆವರೆಗೆ ಸಾರ್ವಜನಿಕರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಸಂಜೆ 5 ಗಂಟೆಗೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಗುತ್ತದೆ. ದರ್ಶನಕ್ಕೆ ಬರುವವರಿಗೆ ಪ್ರಸಾದ, ಕುಡಿಯುವ ನೀರಿನ ವ್ಯವಸ್ಥೆ ಎಲ್ಲವನ್ನೂ ಮಾಡಲಾಗುತ್ತದೆ. ಇದನ್ನೂ ಓದಿ: ವಿಜಯಪುರ ಜ್ಞಾನಯೋಗಾಶ್ರಮ ಮಠದ ಸಿದ್ದೇಶ್ವರ ಸ್ವಾಮೀಜಿ ವಿಧಿವಶ

    ಕಳೆದ ನಾಲ್ಕು ದಿನಗಳಿಂದ ಸಿದ್ದೇಶ್ವರ ಸ್ವಾಮೀಜಿ ಅನಾರೋಗ್ಯದಿಂದ ಬಳಲುತ್ತಿದ್ದರು. ಸಿದ್ದೇಶ್ವರ ಸ್ವಾಮೀಜಿ ಆರೋಗ್ಯ ಸ್ಥಿರವಾಗಿತ್ತು. ಆದರೆ ಮಧ್ಯಾಹ್ನ ಮತ್ತು ಸಂಜೆಯ ಹೆಲ್ತ್ ಬುಲೆಟಿನ್‍ನಲ್ಲಿ ಸ್ವಾಮೀಜಿಗೆ ಉಸಿರಾಟ ತೊಂದರೆ ಜಾಸ್ತಿಯಾಗಿದೆ. ಸ್ವಾಮೀಜಿ ಬಿಪಿ ಸ್ವಲ್ಪ ಕಡಿಮೆಯಾಗಿದೆ. ಸ್ವಾಮೀಜಿ ಆಹಾರ ತೆಗೆದುಕೊಳ್ಳುತ್ತಿಲ್ಲ. ಆದರೂ ಸಿದ್ದೇಶ್ವರ ಸ್ವಾಮೀಜಿ ಅವರ ಆರೋಗ್ಯ ಸ್ಥಿರವಾಗಿದೆ. ನಾವು ನಮ್ಮ ಶಕ್ತಿ ಮೀರಿ ಪ್ರಯತ್ನ ಪಡುತ್ತಿದ್ದೇವೆ. ಸ್ವಾಮೀಜಿ ಆಸ್ಪತ್ರೆಗೆ ಬರಲು ಒಪ್ಪುತ್ತಿಲ್ಲ. ಏನು ಚಿಕಿತ್ಸೆ ಕೊಡುತ್ತಿರೋ ಇಲ್ಲೇ ಕೊಡಿ ಸ್ವಾಮೀಜಿ ಹೇಳಿದ್ದರು ಎಂದು ವೈದ್ಯರು ತಿಳಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಸಂಜೆ 6:05ಕ್ಕೆ ಲಿಂಗೈಕ್ಯರಾಗಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ವಿಜಯಪುರ ಜ್ಞಾನಯೋಗಾಶ್ರಮ ಮಠದ ಸಿದ್ದೇಶ್ವರ ಸ್ವಾಮೀಜಿ ವಿಧಿವಶ

    ವಿಜಯಪುರ ಜ್ಞಾನಯೋಗಾಶ್ರಮ ಮಠದ ಸಿದ್ದೇಶ್ವರ ಸ್ವಾಮೀಜಿ ವಿಧಿವಶ

    ವಿಜಯಪುರ: ನಡೆದಾಡುವ ದೇವರು ಎಂದೇ ಖ್ಯಾತರಾಗಿದ್ದ ಜ್ಞಾನಯೋಗಿ ಆಶ್ರಮದ ಸಿದ್ದೇಶ್ವರ ಸ್ವಾಮೀಜಿ(82) ವಿಧಿವಶರಾಗಿದ್ದಾರೆ.

    ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಸಿದ್ದೇಶ್ವರ ಶ್ರೀಗಳ(Siddheshwar Swamiji)  ಆರೋಗ್ಯದಲ್ಲಿ ಏರುಪೇರು ಉಂಟಾಗಿ ವೈದ್ಯರ (Doctors) ತಂಡ ಚಿಕಿತ್ಸೆಯಲ್ಲಿ ನಿರತವಾಗಿತ್ತು. ಆಶ್ರಮದ ಕೊಠಡಿಯಲ್ಲೇ ಚಿಕಿತ್ಸೆ ಮುಂದುವರಿದಿತ್ತು. ಜಿಲ್ಲಾಧಿಕಾರಿ ಡಾ. ವಿಜಯ ಮಾಂತೇಶ ದಾನಮನ್ನವರ, ಎಸ್ಪಿ ಎಚ್. ಡಿ.ಆನಂದ್ ಕುಮಾರ್ ಹಾಗೂ ಹಲವು ಮಠಾಧೀಶರು ಆಶ್ರಮದ ಆವರಣದಲ್ಲಿ ಬೀಡು ಬಿಟ್ಟಿದ್ದರು.  ಆದರೆ ಚಿಕಿತ್ಸೆ ಫಲಿಸದೇ  ಇಂದು ಸಂಜೆ 6:05ಕ್ಕೆ ಸ್ವಾಮೀಜಿ ಲಿಂಗೈಕ್ಯರಾದರು.

    ಕಳೆದ ನಾಲ್ಕು ದಿನಗಳಿಂದ ಸಿದ್ದೇಶ್ವರ ಸ್ವಾಮೀಜಿ ಅನಾರೋಗ್ಯದಿಂದ ಬಳಲುತ್ತಿದ್ದರು. ಸಿದ್ದೇಶ್ವರ ಸ್ವಾಮೀಜಿ ಆರೋಗ್ಯ ಸ್ಥಿರವಾಗಿತ್ತು. ಆದರೆ ಮಧ್ಯಾಹ್ನ ಮತ್ತು ಸಂಜೆಯ ಹೆಲ್ತ್ ಬುಲೆಟಿನ್‍ನಲ್ಲಿ ಸ್ವಾಮೀಜಿಗೆ ಉಸಿರಾಟ ತೊಂದರೆ ಜಾಸ್ತಿಯಾಗಿದೆ. ಸ್ವಾಮೀಜಿ ಬಿಪಿ ಸ್ವಲ್ಪ ಕಡಿಮೆಯಾಗಿದೆ. ಸ್ವಾಮೀಜಿ ಆಹಾರ ತೆಗೆದುಕೊಳ್ಳುತ್ತಿಲ್ಲ. ಆದರೂ ಸಿದ್ದೇಶ್ವರ ಸ್ವಾಮೀಜಿ ಅವರ ಆರೋಗ್ಯ ಸ್ಥಿರವಾಗಿದೆ. ನಾವು ನಮ್ಮ ಶಕ್ತಿ ಮೀರಿ ಪ್ರಯತ್ನ ಪಡುತ್ತಿದ್ದೇವೆ. ಸ್ವಾಮೀಜಿ ಆಸ್ಪತ್ರೆಗೆ ಬರಲು ಒಪ್ಪುತ್ತಿಲ್ಲ. ಏನು ಚಿಕಿತ್ಸೆ ಕೊಡುತ್ತಿರೋ ಇಲ್ಲೇ ಕೊಡಿ ಸ್ವಾಮೀಜಿ ಹೇಳಿದ್ದರು ಎಂದು ಹೆಲ್ತ್‌ ಬುಲೆಟಿನ್‌ನಲ್ಲಿ ವೈದ್ಯರು ತಿಳಿಸಿದ್ದರು.

    ಡಿ.31ರಂದು ಭೇಟಿ ನೀಡಿದ್ದ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಶ್ರೀಗಳ ದರ್ಶನ ಪಡೆದಿದ್ದರು. ಸಿದ್ದೇಶ್ವರ ಸ್ವಾಮೀಜಿ ಅವರ ಆರೋಗ್ಯ ವಿಚಾರಿಸಿದ್ದರು. ಶ್ರೀಗಳು ಪ್ರಧಾನಿ ಮೋದಿ (Narendra Modi) ಅವರ ಜತೆ ಫೋನಿನಲ್ಲಿ ಮಾತನಾಡಿಸಿದ್ದರು. ಉನ್ನತ ಚಿಕಿತ್ಸೆ ನೀಡುವುದರ ಬಗ್ಗೆ ಪ್ರಧಾನಿಯವರು ಚರ್ಚಿಸಿದಾಗ ಕೈ ಮುಗಿದು ಧನ್ಯವಾದ ಅರ್ಪಿಸಿದ್ದರು. ಅಲ್ಲದೆ ಗುರುಗಳ ಕಿಡ್ನಿ, ಹೃದಯ, ಶ್ವಾಸಕೋಶ ಪ್ಯಾರಾಮೀಟರ್ಸ್ ಸಾಮಾನ್ಯವಾಗಿದೆ ಎಂಬುದಾಗಿ ಸಿಎಂ ತಿಳಿಸಿದ್ದರು.

    ಆರೋಗ್ಯ ಸ್ಥಿತಿ ಗಂಭೀರವಾಗಿದ್ದ ಹಿನ್ನೆಲೆಯಲ್ಲಿ ವಿಜಯಪುರದ ಜ್ಞಾನಯೋಗಾಶ್ರಮ ಮಠಕ್ಕೆ ಸುತ್ತೂರು ಶ್ರೀಗಳೂ ಭೇಟಿ ನೀಡಿ, ಆರೋಗ್ಯ ವಿಚಾರಿಸಿದ್ದರು. ಇದನ್ನೂ ಓದಿ: ಹೊಸವರ್ಷಕ್ಕೆ ಶಿವರಾಜ್ ಕುಮಾರ್ ನಟನೆಯ ‘ಘೋಸ್ಟ್’ ಮೋಷನ್ ಪೋಸ್ಟರ್

    ಜ್ಞಾನಯೋಗ ಸಂಪುಟ ಬಿಡುಗಡೆ: ಸಿದ್ದೇಶ್ವರ ಶ್ರೀಗಳು ರಚಿಸಿರುವ 20 ಸಾವಿರ ಪುಟಗಳ ಜ್ಞಾನಯೋಗ ಸಂಪುಟವನ್ನು ಗದುಗಿನ ಶ್ರೀಗಳಿಂದ ಪುಸ್ತಕ ಬಿಡುಗಡೆಗೊಳಿಸಲಾಗಿತ್ತು. ಸಿದ್ದೇಶ್ವರ ಸ್ವಾಮೀಜಿಗಳ ಗುರುಗಳಾದ ಮಲ್ಲಿಕಾರ್ಜುನ ಶ್ರೀಗಳ ಕುರಿತಾಗಿ ಬರೆದಿರುವ ಪುಸ್ತಕ ಇದಾಗಿದೆ.

    ಪುಸ್ತಕ ಬಿಡುಗಡೆ ಬಳಿಕ ಭಕ್ತರನ್ನು ಉದ್ದೇಶಿಸಿ ಸುತ್ತೂರು ಶ್ರೀಗಳು ಮಾತನಾಡಿ, ಸಿದ್ದೇಶ್ವರ ಶ್ರೀಗಳು ಅಪರೂಪದ ಕೃತಿಗಳನ್ನು ನೀಡಿದ್ದಾರೆ. ಅಲ್ಲದೇ ಶ್ರೀಗಳು ಆರೋಗ್ಯವಾಗಿದ್ದಾರೆ ವಿಶ್ರಾಂತಿ ಪಡೆಯುತ್ತಿದ್ದಾರೆಂದು ಅಭಯ ನೀಡಿದ್ದರು.

    Live Tv
    [brid partner=56869869 player=32851 video=960834 autoplay=true]

  • ಗೌರವಯುತವಾಗಿ ಪದ್ಮಶ್ರೀ ಪ್ರಶಸ್ತಿ ನಿರಾಕರಿಸಿದ ಜ್ಞಾನಯೋಗಾಶ್ರಮದ ಸಿದ್ಧೇಶ್ವರ ಸ್ವಾಮೀಜಿ

    ಗೌರವಯುತವಾಗಿ ಪದ್ಮಶ್ರೀ ಪ್ರಶಸ್ತಿ ನಿರಾಕರಿಸಿದ ಜ್ಞಾನಯೋಗಾಶ್ರಮದ ಸಿದ್ಧೇಶ್ವರ ಸ್ವಾಮೀಜಿ

    ವಿಜಯಪುರ: ಪದ್ಮಶ್ರೀ ಪ್ರಶಸ್ತಿಗೆ ಭಾಜನರಾದ ವಿಜಯಪುರ ಜಿಲ್ಲೆಯ ಜ್ಞಾನಯೋಗಾಶ್ರಮದ ಸಿದ್ಧೇಶ್ವರ ಸ್ವಾಮೀಜಿ ಅವರು ಪ್ರಶಸ್ತಿಯನ್ನು ಗೌರವಯುತವಾಗಿ ಹಿಂತಿರುಗಿಸುವ ನಿರ್ಧಾರವನ್ನು ಪ್ರಕಟಿಸಿದ್ದಾರೆ.

    ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರದಲ್ಲಿ ಅವರಿಗೆ ಪ್ರಶಸ್ತಿ ಹಿಂತಿರುಗಿಸುವ ಮನವಿಯನ್ನು ಮಾಡಿದ್ದಾರೆ. ಇದೇ ವೇಳೆ ನನ್ನನ್ನು ಸಂಪರ್ಕಿಸಿದೇ ಪ್ರಶಸ್ತಿಗೆ ಆಯ್ಕೆ ಮಾಡಿದ್ದಕ್ಕೆ ಧನ್ಯವಾದಗಳನ್ನು ತಿಳಿಸಿದ್ದಾರೆ.

    ನಾನೊಬ್ಬ ಸಾಮಾನ್ಯ ಆಧ್ಯಾತ್ಮಿಕ ಜೀವಿ, ಅದಕ್ಕಾಗಿ ನಾನು ಪ್ರಶಸ್ತಿಯನ್ನು ಹಿಂದಿರುಗಿಸುತ್ತಿದ್ದೇನೆ ತಾವುಗಳು ಅನ್ಯತ ತಪ್ಪು ಭಾವಿಸಬೇಡಿ ಎಂದು ಪತ್ರದಲ್ಲಿ ತಿಳಿಸಿದ್ದಾರೆ. ಈ ಹಿಂದೆಯೂ ಹಲವು ವಿಶ್ವವಿದ್ಯಾಲಯಗಳು ಗೌರವ ಡಾಕ್ಟರೇಟ್ ಕೊಡುವುದಾಗಿ ಸ್ವಾಮೀಜಿ ಅವರನ್ನು ಸಂಪರ್ಕಿಸಿದ್ದವು, ಈ ವೇಳೆಯೂ ಅವರು ಪ್ರಶಸ್ತಿಗಳನ್ನು ತಿರಸ್ಕರಿಸಿದ್ದರು.

    ಈ ವೇಳೆ ಇಂತಹ ಪ್ರಶಸ್ತಿಗಳು ಬೇರೆ ಬೇರೆ ಕ್ಷೇತ್ರಗಳಲ್ಲಿ ಅಸಾಧಾರಣ ಸಾಧನೆ ಮಾಡಿರುವ ಸಾಧಕರಿಗೆ ನೀಡಿ ಗೌರವಿಸಿ ಎಂದು ಮನವಿ ಮಾಡಿದ್ದಾರೆ.

    https://www.youtube.com/watch?v=ttnH724akH8

    https://www.youtube.com/watch?v=GJyM56B95hE