Tag: Siddique Kappan

  • ಸುದೀರ್ಘ ಕಾನೂನು ಹೋರಾಟದ ಬಳಿಕ ಪತ್ರಕರ್ತ ಸಿದ್ದಿಕ್ ಕಪ್ಪನ್ ಜೈಲಿನಿಂದ ರಿಲೀಸ್

    ಸುದೀರ್ಘ ಕಾನೂನು ಹೋರಾಟದ ಬಳಿಕ ಪತ್ರಕರ್ತ ಸಿದ್ದಿಕ್ ಕಪ್ಪನ್ ಜೈಲಿನಿಂದ ರಿಲೀಸ್

    ಲಕ್ನೋ: ಹತ್ರಾಸ್ ಸಾಮೂಹಿಕ ಅತ್ಯಾಚಾರ ಪ್ರಕರಣದ ವರದಿಗೆ ತೆರಳುತ್ತಿದ್ದ ವೇಳೆ ಉತ್ತರ ಪ್ರದೇಶದ ಪೊಲೀಸರಿಂದ (Uttar Pradesh) ಬಂಧನಕ್ಕೊಳಗಾಗಿದ್ದ ಕೇರಳ ಮೂಲದ ಪತ್ರಕರ್ತ ಸಿದ್ದಿಕ್ ಕಪ್ಪನ್ (Siddique Kappan) ಲಕ್ನೋ ಜೈಲಿನಿಂದ ಬಿಡುಗಡೆಯಾಗಿದ್ದಾರೆ.

    ಜಾರಿ ನಿರ್ದೇಶನಾಲಯವು (ED) ಸಲ್ಲಿಸಿದ್ದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಅಲಹಾಬಾದ್ ಹೈಕೋರ್ಟ್‌ನಿಂದ (Allahabad High Court) ಡಿಸೆಂಬರ್ 23 ರಂದು ಜಾಮೀನು ಪಡೆದ ಒಂದು ತಿಂಗಳ ನಂತರ ಕಪ್ಪನ್ ಬಿಡುಗಡೆಯಾಗಿದ್ದಾರೆ. ಕಪ್ಪನ್ ಅವರ ಎಲ್ಲಾ ದಾಖಲೆಗಳನ್ನು ಪೂರ್ಣಗೊಳಿಸಿ ಬೆಳಗ್ಗೆ 8.30ಕ್ಕೆ ಬಿಡುಗಡೆ ಮಾಡಲಾಗಿದೆ ಎಂದು ಲಕ್ನೋ ಹಿರಿಯ ಜೈಲು ಸೂಪರಿಂಟೆಂಡೆಂಟ್ ಆಶಿಶ್ ತಿವಾರಿ ತಿಳಿಸಿದ್ದಾರೆ. ಇದನ್ನೂ ಓದಿ: ಸಾರ್ವಜನಿಕ ಸ್ಥಳಗಳಲ್ಲಿ ಕಮಲ ಪೇಂಟಿಂಗ್ – ಸಂಸದ ತೇಜಸ್ವಿ ಸೂರ್ಯ ವಿರುದ್ಧ BBMP ಗರಂ

    ಬಿಡುಗಡೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಕಪ್ಪನ್ (Siddique Kappan), 28 ತಿಂಗಳು ಸುದೀರ್ಘ ಹೋರಾಟದ ಬಳಿಕ ನಾನು ಹೊರಗಿದ್ದೇನೆ. ಮಾಧ್ಯಮಗಳಿಂದ ನನಗೆ ಸಾಕಷ್ಟು ಬೆಂಬಲ ಸಿಕ್ಕಿದೆ, ಅದರಿಂದ ಸಂತೋಷವಾಗಿದ್ದೇನೆ ಎಂದು ಅವರು ಹೇಳಿದರು. ಇದನ್ನೂ ಓದಿ: ಅಯೋಧ್ಯೆ ರಾಮಮಂದಿರ ನಿರ್ಮಾಣ – ನೇಪಾಳದಿಂದ ಬಂತು 6 ಕೋಟಿ ವರ್ಷ ಹಳೆಯ ಸಾಲಿಗ್ರಾಮ ಬಂಡೆ

    ತಮ್ಮ ವಿರುದ್ಧ ಪೊಲೀಸರು (Police) ಮಾಡಿರುವ ಆರೋಪಗಳ ಬಗ್ಗೆ ಮಾತನಾಡಿ, ನಾನು ಹತ್ರಾಸ್‌ಗೆ ವರದಿ ಮಾಡಲು ಹೋಗಿದ್ದೆ ಅದರಲ್ಲಿ ತಪ್ಪೇನಿದೆ? ನನ್ನ ಲ್ಯಾಪ್‌ಟಾಪ್ ಮತ್ತು ಮೊಬೈಲ್ ಫೋನ್ ಹೊರತುಪಡಿಸಿ ನನ್ನಲ್ಲಿ ಏನೂ ಸಿಕ್ಕಿಲ್ಲ. ನನ್ನ ಬಳಿ ಎರಡು ಪೆನ್ನುಗಳು ಮತ್ತು ನೋಟ್‌ಬುಕ್ ಕೂಡ ಇತ್ತು. ಅನಗತ್ಯ ಆರೋಪಗಳನ್ನು ನನ್ನ ಮೇಲೆ ಹೋರಿಸಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಪತ್ರಕರ್ತ ಸಿದ್ದಿಕ್ ಕಪ್ಪನ್‌ಗೆ ಸುಪ್ರೀಂಕೋರ್ಟ್‌ನಿಂದ ಜಾಮೀನು

    ಪತ್ರಕರ್ತ ಸಿದ್ದಿಕ್ ಕಪ್ಪನ್‌ಗೆ ಸುಪ್ರೀಂಕೋರ್ಟ್‌ನಿಂದ ಜಾಮೀನು

    ನವದೆಹಲಿ : ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (UAPA) ಅಡಿಯಲ್ಲಿ ಉತ್ತರ ಪ್ರದೇಶ ಪೊಲೀಸರಿಂದ (Uttar Pradesh) ಬಂಧನಕ್ಕೆ ಒಳಗಾದ ಪತ್ರಕರ್ತ ಸಿದ್ದಿಕ್ ಕಪ್ಪನ್(Siddique Kappan) ಅವರಿಗೆ ಸುಪ್ರೀಂಕೋರ್ಟ್(Supreme Court) ಇಂದು ಜಾಮೀನು ನೀಡಿದೆ. ಪ್ರಕರಣ ವಿಚಾರಣೆ ನಡೆಸಿದ ಮು.ನ್ಯಾ ಯು.ಯು ಲಲಿತ್ ನೇತೃತ್ವದ ತ್ರಿಸದಸ್ಯ ಪೀಠ ಜಾಮೀನು ಮಂಜೂರು ಮಾಡಿದೆ.

    ಮಲಯಾಳಂ ಸುದ್ದಿ ಪೋರ್ಟಲ್‌ನ ವರದಿಗಾರ ಮತ್ತು ಕೇರಳದ ಕಾರ್ಯನಿರತ ಪತ್ರಕರ್ತರ ಒಕ್ಕೂಟದ (KUWJ) ದೆಹಲಿ ಘಟಕದ ಕಾರ್ಯದರ್ಶಿಯಾಗಿದ್ದ ಕಪ್ಪನ್ 2020 ರ ಅಕ್ಟೋಬರ್‌ನಲ್ಲಿ ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ(Hathras) ನಡೆದ ಸಾಮೂಹಿಕ ಅತ್ಯಾಚಾರದ ಕುರಿತು ವರದಿ ಮಾಡಲು ತೆರಳುತ್ತಿದ್ದಾಗ ಬಂಧಿಸಲಾಯಿತು. ಇದನ್ನೂ ಓದಿ: ಕೋಟ್ಯಧಿಪತಿಯಾಗಿದ್ರೂ ಬಿಪಿಎಲ್ ಕಾರ್ಡ್‌ – ಜೆಡಿಎಸ್‌ ನಾಯಕನ ನಗರ ಸಭೆ ಸದಸ್ಯತ್ವ ರದ್ದು

    ಜಾಮೀನು ನಿರಾಕರಿಸಿದ್ದ ಹೈಕೋರ್ಟ್ ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಪೀಠ, ಪ್ರತಿಯೊಬ್ಬ ವ್ಯಕ್ತಿಗೆ ಮುಕ್ತ ಅಭಿವ್ಯಕ್ತಿಗೆ ಹಕ್ಕಿದೆ. ಕಪ್ಪನ್ ಸಂತ್ರಸ್ತರಿಗೆ ನ್ಯಾಯ ಸಿಗಬೇಕು.ಅದನ್ನು ಸಮಾಜಕ್ಕೆ ತೋರಿಸಬೇಕು ಮತ್ತು ಸಾಮಾನ್ಯರ ಪರ ಧ್ವನಿ ಎತ್ತಲು ಪ್ರಯತ್ನಿಸುತ್ತಿದ್ದಾರೆ. ಇದು ಕಾನೂನಿನ ದೃಷ್ಟಿಯಲ್ಲಿ ಅಪರಾಧವಾಗುತ್ತದೆಯೇ ಎಂದು ಪ್ರಶ್ನಿಸಿತು.

    ಇದಕ್ಕೆ ಉತ್ತರಪ್ರದೇಶ ಸರ್ಕಾರದ ಪರ ವಾದ ಮಂಡಿಸಿದ ಹಿರಿಯ ವಕೀಲ ಮಹೇಶ್ ಜೇಠ್ಮಲಾನಿ, ಹತ್ರಾಸ್ ಘಟನೆಯ ಸುತ್ತ ಅಪಪ್ರಚಾರ ನಡೆಯುತ್ತಿದೆ ಮತ್ತು ಕಪ್ಪನ್ ಗಲಭೆಗಳನ್ನು ಪ್ರಚೋದಿಸುವ ಪಿಎಫ್‌ಐನ ಪಿತೂರಿಯ ಭಾಗವಾಗಿದೆ ಎಂದು ಹೇಳಿದರು. ಸೆಪ್ಟೆಂಬರ್‌ 2020 ರಲ್ಲಿ ನಡೆದ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸಭೆಯಲ್ಲಿ ಸಿದ್ದಿಕ್ ಕಪ್ಪನ್ ಭಾಗಿಯಾಗಿದ್ದರು.

    ಈ ಸಭೆಯಲ್ಲಿ ಸೂಕ್ಷ್ಮ ಪ್ರದೇಶಗಳಿಗೆ ಹೋಗಿ ಗಲಭೆಗಳನ್ನು ಪ್ರಚೋದಿಸಲು ನಿರ್ಧರಿಸಲಾಯಿತು. ಪಿಎಫ್‌ಐನ ಉನ್ನತ ಸದಸ್ಯರು ಅವರು ಕಪ್ಪನ್ ಅವರ ಪಿತೂರಿಯನ್ನು ಬಹಿರಂಗಪಡಿಸಿದ್ದಾರೆ. ಇಡೀ ಪ್ರಚಾರವು ಹತ್ರಾಸ್ ಸಂತ್ರಸ್ತರಿಗೆ ನ್ಯಾಯವಾಗಿದ್ದರೂ, ಅದರ ಅಜೆಂಡಾವು ಪ್ರಧಾನಿ ರಾಜೀನಾಮೆ ನೀಡುವುದು ಆಗಿತ್ತು ಎಂದು ವಾದಿಸಿದರು.

     

    ಈ ವಾದವನ್ನು ತಿರಸ್ಕರಿಸಿದ ಪೀಠವು, 2011 ರಲ್ಲಿ ಇಂಡಿಯಾ ಗೇಟ್‌ನಲ್ಲಿ ನಿರ್ಭಯಾಗಾಗಿ ಪ್ರತಿಭಟನೆಗಳು ನಡೆದಿವೆ. ಬದಲಾವಣೆಯನ್ನು ತರಲು ಕೆಲವೊಮ್ಮೆ ಪ್ರತಿಭಟನೆಗಳು ಬೇಕಾಗುತ್ತವೆ. ಅದರ ನಂತರ ಕಾನೂನುಗಳಲ್ಲಿ ಬದಲಾವಣೆಯಾಗಿದೆ ಎಂದು ನಿಮಗೆ ತಿಳಿದಿಲ್ವೇ ಎಂದು ಪ್ರಶ್ನಿಸಿ ಜಾಮೀನು ಮಂಜೂರು ಮಾಡಿತು.

    ಜಾಮೀನು ನೀಡಲು ಹಲವು ಷರತ್ತುಗಳನ್ನು ಕೋರ್ಟ್‌ ವಿಧಿಸಿದೆ. ಆರು ವಾರಗಳ ಕಾಲ ದೆಹಲಿಯಲ್ಲಿ ಇರಬೇಕು. ಜಂಗ್‌ಪುರದ ಪೊಲೀಸ್ ಠಾಣೆಗೆ ವರದಿ ಮಾಡಿಕೊಳ್ಳಬೇಕು. ಆರು ವಾರಗಳ ನಂತರ ಕೇರಳಕ್ಕೆ ಹಿಂತಿರುಗಬಹುದು ಅಲ್ಲಿ ಪ್ರತಿ ಸೋಮವಾರ ಸ್ಥಳೀಯ ಪೊಲೀಸ್ ಠಾಣೆಗೆ ಹಾಜರಾಗಬೇಕು. ಪಾಸ್‌ಪೋರ್ಟ್ ಒಪ್ಪಿಸುವಂತೆ ನ್ಯಾಯಾಲಯ ಸೂಚನೆ ನೀಡಿತು.

    Live Tv
    [brid partner=56869869 player=32851 video=960834 autoplay=true]

  • ಪತ್ರಕರ್ತ ಸಿದ್ದಿಕ್ ಕಪ್ಪನ್ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾ

    ಪತ್ರಕರ್ತ ಸಿದ್ದಿಕ್ ಕಪ್ಪನ್ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾ

    ಅಲಹಾಬಾದ್: ಕೇರಳ ಮೂಲದ ಪತ್ರಕರ್ತ ಸಿದ್ದಿಕ್ ಕಪ್ಪನ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ವಜಾ ಮಾಡಿದೆ. ಮೆರಿಟ್ ಗಳ ಆಧಾರದ ಮೇಲೆ ಜಾಮೀನು ತಿರಸ್ಕರಿಸಲಾಗಿದೆ ಎಂದು ಅಲಹಾಬಾದ್ ಕೋರ್ಟ್ ಹೇಳಿದೆ.

    ಜಾಮೀನು ತಿರಸ್ಕರಿಸಿದ ಕೆಳ ಹಂತದ ನ್ಯಾಯಾಲಯದ ಆದೇಶ ವಿರುದ್ಧ ಸಿದ್ದಿಕ್ ಕಪ್ಪನ್ ಹೈಕೋರ್ಟ್‍ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ್ದ ನ್ಯಾ. ಕ್ರಿಶನ್ ಪಹಲ್ ಜಾಮೀನು ಅರ್ಜಿ ವಜಾ ಮಾಡಿದ್ದಾರೆ.

    ಸಿದ್ದಿಕ್ ಕಪ್ಪನ್, ಮಲಯಾಳಂ ಸುದ್ದಿ ಪೊರ್ಟಲ್‍ನ ವರದಿಗಾರರಾಗಿದ್ದರು. 2020 ಅಕ್ಟೋಬರ್ ನಲ್ಲಿ ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ನಡೆದ ದಲಿತ ಬಾಲಕಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ವರದಿ ಮಾಡಲು ಅವರು ಹತ್ರಾಸ್ ಗೆ ತೆರಳುತ್ತಿದ್ದರು. ಸಿದ್ದಿಕ್ ಸೇರಿದಂತೆ ಮೂವರನ್ನು ಹಾದಿ ಮಧ್ಯದಲ್ಲೆ ಪೊಲೀಸರು ಬಂಧಿಸಿದ್ದರು. ಇದನ್ನೂ ಓದಿ: ಸುಪ್ರೀಂ ಕೋರ್ಟ್‌ನ ಮುಂದಿನ CJI ಆಗಿ ಯು.ಯು.ಲಲಿತ್‌ ಹೆಸರು ಶಿಫಾರಸು

    ಬಂಧಿತ ಪತ್ರಕರ್ತರ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ), ಸೆಕ್ಷನ್ 124 ಎ (ದೇಶದ್ರೋಹ), ಸೆಕ್ಷನ್ 153 ಎ (ಧರ್ಮದ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು) ಮತ್ತು ಸೆಕ್ಷನ್ 295 ಎ (ಉದ್ದೇಶಪೂರ್ವಕ ಮತ್ತು ದುರುದ್ದೇಶಪೂರಿತ ಕೃತ್ಯಗಳು) ಸೆಕ್ಷನ್ 17 ಮತ್ತು 18 ರ ಅಡಿಯಲ್ಲಿ ಎಫ್‍ಐಆರ್ ದಾಖಲಿಸಲಾಯಿತು. ಭಾರತೀಯ ದಂಡ ಸಂಹಿತೆ ಮತ್ತು ಮಾಹಿತಿ ತಂತ್ರಜ್ಞಾನ ಕಾಯಿದೆಯ ಸೆಕ್ಷನ್ 65, 72 ಮತ್ತು 75 ರ ಧಾರ್ಮಿಕ ಭಾವನೆಗಳ ಕದಡುವ ಹುನ್ನಾರವನ್ನು ಸೇರಿಸಲಾಗಿದೆ.

    ಕಪ್ಪನ್ ಮತ್ತು ಇತರ ಸಹ-ಆರೋಪಿಗಳು ಉತ್ತರ ಪ್ರದೇಶದ ಹತ್ರಾಸ್ ಸಾಮೂಹಿಕ ಅತ್ಯಾಚಾರದ ಘಟನೆಯನ್ನು ವರದಿ ಮಾಡಲು ಹೊರಟಾಗ ಕಾನೂನನ್ನು ಮತ್ತು ಇತರ ಪರಿಸ್ಥಿತಿಯನ್ನು ಭಂಗಗೊಳಿಸಲು ಪ್ರಯತ್ನಿಸುತ್ತಿದ್ದಾರೆ ಎಂಬ ಪ್ರಾಥಮಿಕ ತನಿಖೆಯ ಆಧಾರದ ಮೇಲೆ ಮಥುರಾ ನ್ಯಾಯಾಲಯವು ಜುಲೈ 2021 ರಲ್ಲಿ ಕಪ್ಪನ್ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು.

    Live Tv
    [brid partner=56869869 player=32851 video=960834 autoplay=true]