Tag: Siddramaiha

  • ಬಿಜೆಪಿ ಸರ್ಕಾರ ದಲಿತ ಸಮುದಾಯಕ್ಕೆ ದ್ರೋಹ ಬಗೆದಿದೆ: ಸಿದ್ದರಾಮಯ್ಯ

    ಬಿಜೆಪಿ ಸರ್ಕಾರ ದಲಿತ ಸಮುದಾಯಕ್ಕೆ ದ್ರೋಹ ಬಗೆದಿದೆ: ಸಿದ್ದರಾಮಯ್ಯ

    ಬೆಂಗಳೂರು: ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ ಪರಿಶಿಷ್ಟ ಜಾತಿ ಉಪಯೋಜನೆ ಮತ್ತು ಪರಿಶಿಷ್ಟ ಪಂಗಡ ಉಪಯೋಜನೆ ಮೀಸಲಿಟ್ಟ ಹಣವನ್ನು ಕಾನೂನಿಗೆ ವಿರುದ್ಧವಾಗಿ ಮೂಲಸೌಕರ್ಯ ಯೋಜನೆಗಳಿಗೆ ಬಳಕೆ ಮಾಡುವ ಮೂಲಕ ರಾಜ್ಯದ ಬಿಜೆಪಿ ಸರ್ಕಾರ ದಲಿತ ಸಮುದಾಯಕ್ಕೆ ದ್ರೋಹ ಬಗೆದಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

    ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ನಮ್ಮ ಸರ್ಕಾರ ಜಾರಿಗೆ ತಂದಿರುವ ಎಸ್‍ಸಿಪಿ/ಟಿಎಸ್‍ಪಿ ಕಾಯ್ದೆಯ ಪ್ರಕಾರ ಒಟ್ಟು ಬಜೆಟ್‍ನ ಶೇಕಡಾ 24.1ರಷ್ಟು ಭಾಗವನ್ನು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕಲ್ಯಾಣ ಕಾರ್ಯಕ್ರಮಗಳಿಗಷ್ಟೇ ಬಳಸಬೇಕಾಗುತ್ತದೆ. ಆ ವರ್ಷ ಉಳಿಕೆಯಾದರೆ ಅದನ್ನು ನಂತರದ ವರ್ಷ ಖರ್ಚು ಮಾಡಬೇಕು. ನಿಗದಿತ ಪ್ರಮಾಣದಲ್ಲಿ ನಿಗದಿತ ಉದ್ದೇಶಕ್ಕೆ ಖರ್ಚು ಮಾಡದೆ ಇದ್ದರೆ ಸಂಬಂಧಿತ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಕೂಡಾ ಕಾಯ್ದೆಯಲ್ಲಿ ಅವಕಾಶ ನೀಡಲಾಗಿದೆ. 2021-22ರ ರಾಜ್ಯ ಬಜೆಟ್‍ನಲ್ಲಿ ಎಸ್‍ಸಿಪಿ/ಟಿಎಸ್‍ಪಿ ಕಾಯ್ದೆಯನ್ವಯ ಯೋಜನಾ ವೆಚ್ಚದ ಶೇಕಡಾ 24.1ರಷ್ಟು ಅಂದರೆ 26,695.64 ಕೋಟಿ ರೂ.ಗಳನ್ನು ಪರಿಶಿಷ್ಟ ಜಾತಿ ಮತ್ತು ಪಂಗಡದ ಕಲ್ಯಾಣಕ್ಕೆ ಮೀಸಲಿಡಲಾಗಿತ್ತು. ಆದರೆ ರಾಜ್ಯ ಸರ್ಕಾರ ಕಾಯ್ದೆಯನ್ನು ಉಲ್ಲಂಘಿಸಿ ಒಟ್ಟು ಹಣದಲ್ಲಿ 7,885.32 ಕೋಟಿ ರೂ.ಗಳನ್ನು ಮೂಲಸೌಕರ್ಯದ ಯೋಜನೆಗಳಿಗೆ ವ್ಯಯ ಮಾಡಿದೆ. ಇದು ಸಂಪೂರ್ಣವಾಗಿ ಕಾನೂನು ವಿರೋಧಿ ನಡೆಯಾಗಿದ್ದು ಇದಕ್ಕೆ ಕಾರಣಕರ್ತರಾದವರ ವಿರುದ್ದ ಎಸ್‍ಸಿಪಿ/ಟಿಎಸ್‍ಪಿ ಕಾಯ್ದೆಯನ್ವಯ ಕಾನೂನು ಕ್ರಮ ಕೈಗೊಳ್ಳಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಒತ್ತಾಯಿಸುತ್ತೇನೆ ಎಂದಿದ್ದಾರೆ. ಇದನ್ನೂ ಓದಿ: ಹುಬ್ಬಳ್ಳಿ ಗಲಭೆಗೆ ಬಿಜೆಪಿ ಕುಮ್ಮಕ್ಕು ಕಾರಣ: ಡಿಕೆಶಿ

    2018-21ರ ನಾಲ್ಕು ವರ್ಷಗಳ ಅವಧಿಯಲ್ಲಿ ಈ ರೀತಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಹಣದಲ್ಲಿ 7,885.32 ಕೋಟಿ ರೂ.ಗಳನ್ನು ನೀರಾವರಿ, ನಗರಾಭಿವೃದ್ಧಿ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆಗಳ ಯೋಜನೆಗಳಿಗೆ ಖರ್ಚು ಮಾಡಲಾಗಿದೆ. ಈ ಮೂಲಕ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಸಮುದಾಯ ನೇರ ಫಲಾನುಭವಿಗಳಾಗಿರುವ ಯೋಜನೆಗಳಿಗೆ ಹಣವನ್ನು ಕಡಿತಗೊಳಿಸಲಾಗಿದೆ. ಎಸ್‍ಸಿಪಿ/ಟಿಎಸ್‍ಪಿ ಹಣದ ಸ್ವಲ್ಪ ಭಾಗವನ್ನು ಸಾಮಾನ್ಯ ಮೂಲಸೌಕರ್ಯಗಳಿಗೆ ಬಳಸಲು ಕಾಯ್ದೆಯಲ್ಲಿ ಅವಕಾಶವಿದ್ದರೂ, ಇಷ್ಟೊಂದು ಪ್ರಮಾಣದ ಹಣವನ್ನು ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಸಮುದಾಯ ನೇರ ಫಲಾನುಭವಿಗಳಲ್ಲದ ಯೋಜನೆಗಳಿಗೆ ಬಳಸುವುದು ಆ ಸಮುದಾಯಕ್ಕೆ ಬಗೆಯುವ ದ್ರೋಹ ಮಾತ್ರವಲ್ಲ, ಕಾನೂನಿನ ಉಲ್ಲಂಘನೆಯೂ ಹೌದು ಎಂದು ವಾಗ್ದಾಳಿ ನಡೆಸಿದ್ದಾರೆ.

    ರಾಜ್ಯದ ಸಂಪನ್ಮೂಲಗಳನ್ನು ಹಂಚಿಕೆ ಮಾಡುವಾಗ ಅನುಸರಿಸಬೇಕಾದ ಸೂತ್ರಗಳು ಯಾವುವು ಎಂಬುದನ್ನು ಎಸ್‍ಸಿಪಿ/ಟಿಎಸ್‍ಪಿ ಕಾಯ್ದೆಯ ಸೆಕ್ಷನ್ 3ರಲ್ಲಿ ಸ್ಪಷ್ಟವಾಗಿ ಹೇಳಿದೆ. ಅದರ ಪ್ರಕಾರ ‘ವಿನಾಯಿತಿಸಲಾದ ವೆಚ್ಚ’ ಎಂದರೆ ಈ ಅಧಿನಿಯಮದ ಅನ್ವಯದಿಂದ ವಿನಾಯಿತಿಗೊಳಿಸಲಾದ ವೆಚ್ಚ ಮತ್ತು ವೇತನ, ವೇತನ ಸಹಾಯಾನುದಾನ, ಪಿಂಚಣಿ, ಆಡಳಿತಾತ್ಮಕ ವೆಚ್ಚ, ಮೂಲಧನ ಮರು ಸಂದಾಯ ಮತ್ತು ರಾಜ್ಯ ಸರ್ಕಾರ ತನ್ನದೇ ಸಾಲಗಳ ಲೆಕ್ಕದ ಮೇಲೆ ಬಡ್ಡಿ ಸಂದಾಯ ಮತ್ತು ರಾಜ್ಯ ಸರ್ಕಾರದ ಉದ್ಯಮಗಳ ಮೂಲಕ ಆಯವ್ಯಯ-ಹೊರತಾದ ಸಾಲಗಳು ಹಾಗೂ ರಾಜ್ಯ ಸರ್ಕಾರವು ಅಧಿಸೂಚಿಸಿದ ಆಡಳಿತಾತ್ಮಕ ಸ್ವರೂಪದ ಇತರ ಯಾವುದೇ ವೆಚ್ಚವನ್ನು ಒಳಗೊಳ್ಳುತ್ತದೆ. ಇವುಗಳನ್ನು ಹೊರತುಪಡಿಸಿ ಹಂಚಿಕೆ ಮಾಡಬಹುದಾದ ಮೊತ್ತದ ಆಧಾರದ ಮೇಲೆ ಎಸ್‍ಸಿಪಿ ಮತ್ತು ಟಿಎಸ್‍ಪಿಗೆ ಅನುದಾನವನ್ನು ನಿಗದಿಪಡಿಸಲಾಗುತ್ತದೆ. ಇದರ ಆಧಾರದ ಮೇಲೆ ಜನಸಂಖ್ಯೆಗನುಗುಣವಾಗಿ ಅನುದಾನವನ್ನು ನಿಗದಿಪಡಿಸಲಾಗುತ್ತದೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಭಿನ್ನಾಭಿಪ್ರಾಯ ಹತ್ತಿಕ್ಕಿ ಸತ್ಯವನ್ನು ಬಂಧಿಸಲು ಸಾಧ್ಯವಿಲ್ಲ: ಮೋದಿಗೆ ರಾಹುಲ್‌ ತಿರುಗೇಟು

    2012-13 ರಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಜನರಿಗಾಗಿ ಕೇವಲ 7,200 ಕೋಟಿ ರೂ.ಗಳನ್ನು ಮೀಸಲಿರಿಸಲಾಗಿತ್ತು. ಈ ಮೊತ್ತವು 2014-15ರ ವೇಳೆಗೆ 15834 ಕೋಟಿ ರೂ.ಗಳಿಗೆ ಏರಿಕೆಯಾಯಿತು. 2018ರ ಫೆಬ್ರವರಿಯಲ್ಲಿ ನಾನು ಬಜೆಟ್ ಮಂಡಿಸಿದಾಗ 29691.5 ಕೋಟಿ ರೂ.ಗಳನ್ನು ಈ ಯೋಜನೆಗೆ ಮೀಸಲಿರಿಸಿದ್ದೆ. ಆದರೆ ಕಳೆದ 3 ವರ್ಷಗಳಿಂದ ರಾಜ್ಯದ ಬಿಜೆಪಿ ಸರ್ಕಾರವು ಈ ವರ್ಗಗಳಿಗೆ ಖರ್ಚು ಮಾಡುವ ಅನುದಾನವನ್ನು ಒಂದೇ ಸಮನೆ ಕಡಿಮೆ ಮಾಡುತ್ತಿದೆ. ಬಜೆಟ್ ಗಾತ್ರ ಮಾತ್ರ ದೊಡ್ಡದಾಗುತ್ತಿದೆಯೇ ಹೊರತು, ಜನರ ಕಲ್ಯಾಣಕ್ಕಾಗಿ ಖರ್ಚು ಮಾಡುವ ಅನುದಾನ ಕಡಿಮೆಯಾಗುತ್ತಿದೆ. 2008-09 ರಿಂದ 2012-13ರ ವರೆಗಿನ ಐದು ವರ್ಷಗಳ ಅವಧಿಯಲ್ಲಿ ಬಿಜೆಪಿ ಅಧಿಕಾರದಲ್ಲಿದ್ದಾಗ ಎಸ್‍ಸಿಪಿ ಮತ್ತು ಟಿಎಸ್‍ಪಿಗೆ ಮೀಸಲಿಟ್ಟಿದ್ದ ಹಣ ಒಟ್ಟು 22,261 ಕೋಟಿ ರೂ.2018ರಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಐದು ವರ್ಷಗಳಲ್ಲಿ ಈ ಯೋಜನೆಗೆ 88,395 ಕೋಟಿ ರೂ. ಖರ್ಚು ಮಾಡಿದ್ದೆವು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಮಾಸ್ಟರ್ ಮೈಂಡ್ ನಾನಲ್ಲ, ಗಲಭೆಗೆ ನಾನು ಕಾರಣನಲ್ಲ – ಅಜ್ಞಾತ ಸ್ಥಳದಿಂದ ವೀಡಿಯೋ ಬಿಟ್ಟ ವಾಸಿಂ

  • ಬಿಜೆಪಿಯಲ್ಲಿ ಆಂತರಿಕ ಕಿತ್ತಾಟ, ಬಿಎಸ್‌ವೈ ಮನೆ ಮೇಲೆ ಐಟಿ ದಾಳಿ: ಎಚ್‍ಡಿಕೆ

    ಬಿಜೆಪಿಯಲ್ಲಿ ಆಂತರಿಕ ಕಿತ್ತಾಟ, ಬಿಎಸ್‌ವೈ ಮನೆ ಮೇಲೆ ಐಟಿ ದಾಳಿ: ಎಚ್‍ಡಿಕೆ

    -ಈಗಿನ RSS ದೇಶವನ್ನು ಹಾಳು ಮಾಡುವ ಸಂಘಟನೆ

    ಕಲಬುರಗಿ: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಆಪ್ತರ ಮನೆ ಮೇಲೆ ಐಟಿ ರೇಡ್ ಬಿಜೆಪಿಯ ಆಂತರಿಕ ಕಿತ್ತಾಟದಿಂದ ಬೆಳಕಿಗೆ ಬಂದಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.

    ಮಾಜಿ ಸಿಎಂ ಬಿಎಸ್‍ವೈ ಹಾಗೂ ಡಿಕೆಶಿ ಆಪ್ತರ ಮೇಲೆ ಐಟಿ ದಾಳಿ ಸಂಬಂಧಿಸಿದಂತೆ ಕಲಬುರಗಿ ಏರ್‌ಪೋರ್ಟ್‌ನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಐಟಿ ದಾಳಿ ಬಗ್ಗೆ ನನಗೆ ಯಾವುದೇ ರೀತಿಯ ಪ್ರತಿಕ್ರಿಯೆ ಇಲ್ಲ. ಆದರೆ ಉಪಚುನಾಣೆ ಸಂದರ್ಭದಲ್ಲಿ ಐಟಿ ದಾಳಿ ಸರ್ವೇ ಸಾಮಾನ್ಯ. ಆದರೆ ಬಿಎಸ್‍ವೈ ಆಪ್ತರ ಮೇಲೆ ದಾಳಿ ನಡೆದಿರುವುದು ಕುತೂಹಲ ಮೂಡಿಸಿದೆ. ಇದರಿಂದ ಅವರ ಪಕ್ಷದಲ್ಲಿ ಆಂತರಿಕ ಕಚ್ಚಾಟ ನಡೆಯುತ್ತಿದೆ ಎಂಬುದು ಸ್ಪಷ್ಟವಾಗಿದೆ ಎಂದು ದೂರಿದರು. ಇದನ್ನೂ ಓದಿ: ಬಿಎಸ್‍ವೈ ಆಪ್ತನ ಮನೆ ಮೇಲೆ ಐಟಿ ರೇಡ್

    ಉಪಚುನಾಣೆಯಲ್ಲಿ ಜೆಡಿಎಸ್ ಅಭ್ಯರ್ಥಿಗಳ ಬಗ್ಗೆ ಸಿದ್ದರಾಮಯ್ಯ ಹೇಳಿಕೆ ವಿಚಾರವಾಗಿ ಮಾತನಾಡಿ, ಯಾರು ಇವರು ನನಗೆ ಹೇಳೋಕೆ? ಅವರ ಯಾವ ಡೊಣ್ಣೆ ನಾಯಕ? ಅವರ ಪರ್ಮಿಷನ್ ತಗೋಂಡು ಅಭ್ಯರ್ಥಿ ಹಾಕಬೇಕಾ? ಎಲ್ಲಿ ಯಾವ ಅಭ್ಯರ್ಥಿ ನಿಲ್ಲಿಸಬೇಕೋ ಅಲ್ಲಿ ನಿಲ್ಲಿಸುತ್ತೇವೆ. ಅವರಿಗೆ ಪರಿಜ್ಞಾನ ಇದ್ದರೆ ನನ್ನ ಪಕ್ಷದ ಅಭ್ಯರ್ಥಿ ಬಗ್ಗೆ ಮಾತನಾಡಬಾರದು ಎಂದು ಕಿಡಿಕಾರಿದರು.

    ಆರ್‌ಎಸ್‌ಎಸ್‌ ಕುರಿತು ಎಚ್‍ಡಿ ದೇವೆಗೌಡರ ಹೇಳಿಕೆ ವಿಚಾರವಾಗಿ, ಸ್ವಾತಂತ್ರ ಪೂರ್ವದ ಆರ್‌ಎಸ್‌ಎಸ್‌ ಬೇರೆ, ಈಗಿನ ಆರ್‌ಎಸ್‌ಎಸ್‌ ಬೇರೆ. ಈಗಿನ ಆರ್‌ಎಸ್‌ಎಸ್‌ ದೇಶವನ್ನು ಹಾಳು ಮಾಡುವ ಸಂಘಟನೆ. ದೇವೆಗೌಡರು ಹೇಳಿದ್ದು ಆರ್‌ಎಸ್‌ಎಸ್‌ ಸ್ವಾತಂತ್ರ ಪೂರ್ವದ ಸಂಘಟನೆ ಬಗ್ಗೆ ಎಂದರು. ಇದನ್ನೂ ಓದಿ: ದಿಢೀರ್‌ ಆರ್‌ಎಸ್‌ಎಸ್‌ ವಿರುದ್ಧ ಎಚ್‌ಡಿಕೆ ಮುಗಿಬಿದ್ದಿದ್ದು ಯಾಕೆ?