Tag: Siddramothsava

  • ಕೋಲು ಹಿಡಿದು ರಾಜಕಾರಣ ಮಾಡಲ್ಲ, 80 ವರ್ಷ ಆದ್ಮೇಲೆ ಚುನಾವಣೆಗೆ ನಿಲ್ಲಲ್ಲ: ಸಿದ್ದರಾಮಯ್ಯ

    ಕೋಲು ಹಿಡಿದು ರಾಜಕಾರಣ ಮಾಡಲ್ಲ, 80 ವರ್ಷ ಆದ್ಮೇಲೆ ಚುನಾವಣೆಗೆ ನಿಲ್ಲಲ್ಲ: ಸಿದ್ದರಾಮಯ್ಯ

    ಚಾಮರಾಜನಗರ: ನಾನು ಕೋಲು ಹಿಡಿದು ರಾಜಕಾರಣ ಮಾಡಲ್ಲ. 80ರ ನಂತರ ಚುನಾವಣೆಗೆ ನಿಲ್ಲಲ್ಲ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಘೋಷಿಸಿದ್ದಾರೆ.

    ಕೊಳ್ಳೇಗಾಲದ ಬಸ್ತಿಪುರ ಬಡಾವಣೆಯಲ್ಲಿ ಆಯೋಜಿಸಿದ್ದ ಧಾರ್ಮಿಕ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಳೆದ 40 ವರ್ಷ ಪ್ರಾಮಾಣಿಕವಾಗಿ ಜನಸೇವೆ ಮಾಡಿದ್ದೇನೆ. ಮುಂದೆಯೂ ಸಹ ಮಾಡುತ್ತೇನೆ ಎಂದಿದ್ದಾರೆ. ಇದನ್ನೂ ಓದಿ: ಮಧ್ಯಂತರ ಚುನಾವಣೆಗೆ ಆಗ್ರಹ – ನನ್ನ ಮಹಾ ಸರ್ಕಾರವನ್ನು ಜನರೇ ಉರುಳಿಸಲಿ ಎಂದ ಉದ್ಧವ್ ಠಾಕ್ರೆ

    ನಾನು ಶಾಸಕನಾಗಿ 39 ವರ್ಷ ಪೂರೈಸಿದ್ದೇನೆ. ಮುಂದಿನ 5 ವರ್ಷ ಅಧಿಕಾರ ಮುಗಿಯುವುದರೊಳಗೆ ನನಗೆ 80 ವರ್ಷ ಕಳೆಯುತ್ತದೆ. ಹಾಗಾಗಿ 2023ರ ಚುನಾವಣೆಯೇ ನನ್ನ ಕೊನೆಯ ಚುನಾವಣೆ ಆಗಲಿದೆ. 80 ವರ್ಷ ಕಳೆದ ನಂತರ ನಾನು ಕೋಲು ಹಿಡಿದು ರಾಜಕಾರಣ ಮಾಡುವುದಿಲ್ಲ ಎಂದು ತಮ್ಮ ರಾಜಕೀಯ ನಿವೃತ್ತಿಯ ಸೂಚನೆ ನೀಡಿದ್ದಾರೆ. ಇದನ್ನೂಓದಿ: ಅಮರನಾಥದಲ್ಲಿ ಮೇಘಸ್ಪೋಟ, 8 ಮಂದಿ ಸಾವು – NDRF, BSF ತಂಡಗಳಿಂದ ಕಾರ್ಯಾಚರಣೆ

    ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಬಳಿಕ ಸಿದ್ದರಾಮಯ್ಯ ಅವರು `ಸಿದ್ದಪ್ಪ ಸ್ವಾಮಿ ಬನ್ನಿ, ಪವಾಡ ಗೆದ್ದಯ್ಯ ನೀವೇ ಬನ್ನಿ’ ಹಾಗೂ `ಆನು ಮಲೆ ಜೇನು ಮಲೆ, ಗುಂಜುಮಲೆ ಗುಲಗಂಜಿಮಲೆ’ ಮಲೆ ಮಹದೇಶ್ವರ ಪದಗಳನ್ನಾಡಿ ಮಹದೇಶ್ವರದ ಬೆಟ್ಟದಲ್ಲಿ ನಡೆದ ಪ್ರಸಂಗವನ್ನು ಹಂಚಿಕೊಂಡರು. ಇದನ್ನೂ ಓದಿ: ಅಮರನಾಥದಲ್ಲಿ ಮೇಘಸ್ಪೋಟ, 8 ಮಂದಿ ಸಾವು – NDRF, BSF ತಂಡಗಳಿಂದ ಕಾರ್ಯಾಚರಣೆ

    ಸಿದ್ದರಾಮೋತ್ಸವ ಅಲ್ಲ ಇದು ಅಮೃತ ಮಹೋತ್ಸವ: ನಾನು ಶಾಲೆಗೆ ಸೇರುವಾಗ ಅಂದಿನ ಮುಖ್ಯಶಿಕ್ಷಕರಾಗಿದ್ದ ರಾಜಪ್ಪ ಅವರು ಕೊಟ್ಟ ದಿನಾಂಕವೇ ನನ್ನ ಜನ್ಮದಿನಾಂಕವಾಗಿದೆ. ನನ್ನ ಹಿತೈಷಿಗಳು, ಅಭಿಮಾನಿಗಳು ಹಾಗೂ ಸ್ನೇಹಿತರು ಒಟ್ಟಾಗಿ ಸೇರಿ 75ನೇ ಜನ್ಮ ದಿನಾಚರಣೆಯನ್ನು ದಾವಣಗೆರೆಯಲ್ಲಿ ಆಚರಿಸುತ್ತಿದ್ದಾರೆ. ಸಿದ್ದರಾಮೋತ್ಸವ ಎಂಬುದಾಗಿ ಆರ್‌ಎಸ್‌ಎಸ್ ನವರು ಕರೆದಿದ್ದಾರೆ. ಸಿದ್ದರಾಮೋತ್ಸವ ಅಂಥಾ ಎಲ್ಲೂ ಇಲ್ಲ. ಆ ರೀತಿ ಉತ್ಸವ ನಡೆಯೋದು ಇಲ್ಲ. ಸಿದ್ದರಾಮಯ್ಯ-75 ಅಮೃತ ಮಹೋತ್ಸವ ಎಂದು ಆಚರಿಸಲಾಗುತ್ತಿದೆ ಎಂದು ಸ್ಪಷ್ಟಪಡಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಕಾಂಗ್ರೆಸ್‌ನಲ್ಲೇ ಮಾತಿಗೆ ಬೆಲೆಯಿಲ್ಲದಷ್ಟು ಡಿಕೆಶಿ ಡಮ್ಮಿ ಆಗಿದ್ದೇಕೆ? – ಟ್ವೀಟ್ ಮಾಡಿ ಕಾಲೆಳೆದ ಬಿಜೆಪಿ

    ಕಾಂಗ್ರೆಸ್‌ನಲ್ಲೇ ಮಾತಿಗೆ ಬೆಲೆಯಿಲ್ಲದಷ್ಟು ಡಿಕೆಶಿ ಡಮ್ಮಿ ಆಗಿದ್ದೇಕೆ? – ಟ್ವೀಟ್ ಮಾಡಿ ಕಾಲೆಳೆದ ಬಿಜೆಪಿ

    ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಮಾತು ಮೀರಿ ಸಿದ್ದರಾಮೋತ್ಸವ ಮಾಡುತ್ತಿದ್ದಾರೆ ಎಂದಾದರೆ ಅದು ಪಿತೂರಿ ಅಲ್ಲದೇ ಮತ್ತಿನ್ನೇನು? ಪಕ್ಷದ ಅಧ್ಯಕ್ಷರಿಗೇ ಇದನ್ನು ನಿಯಂತ್ರಿಸಲು ಸಾಧ್ಯವಿಲ್ಲದಷ್ಟು ಡಮ್ಮಿ ಡಿಕೆಶಿ ಆಗಿದ್ದೇಕೆ ಎಂದು ಪ್ರಶ್ನಿಸುವ ಮೂಲಕ ಬಿಜೆಪಿ ಕಾಲೆಳೆದಿದೆ.

    ಟ್ವೀಟ್‌ನಲ್ಲೇನಿದೆ?
    ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಹುಟ್ಟುಹಬ್ಬದ ಪ್ರಯುಕ್ತ ನಡೆಯುತ್ತಿರುವ ಸಿದ್ದರಾಮೋತ್ಸವ ವಿಚಾರವಾಗಿ ಬಿಜೆಪಿ ಟ್ವೀಟ್ ಮಾಡಿದ್ದು, ಡಿಕೆಶಿ ಅವರೇ ಕೆಪಿಸಿಸಿ ಅಧ್ಯಕ್ಷರಾದ ನಿಮ್ಮ ಮಾತು ಮೀರಿ ಸಿದ್ದರಾಮೋತ್ಸವ ಮಾಡುತ್ತಿದ್ದಾರೆ ಎಂದಾದರೆ, ನಿಮ್ಮ ಸಂದೇಶ ತಲುಪುತ್ತಿಲ್ಲ ಅಥವಾ ನಿಮ್ಮ ಮಾತಿಗೆ ಬೆಲೆ ಇಲ್ಲ ಎಂದರ್ಥವಲ್ಲವೇ?

    ವಿಪಕ್ಷ ನಾಯಕ ಸಿದ್ದರಾಮಯ್ಯರ ಹುಟ್ಟುಹಬ್ಬ ಅದ್ಧೂರಿಯಾಗಿ ನಡೆಯುತ್ತಿರುವುದು ಡಿ.ಕೆ.ಶಿವಕುಮಾರ್ ಅವರಿಗೆ ಗೊತ್ತಿಲ್ಲ ಎಂದಾದರೆ ಪಕ್ಷದಲ್ಲಿ ಡಿಕೆಶಿ ಬೆನ್ನ ಹಿಂದೆ ನಡೆಯುತ್ತಿರುವುದು ಪಿತೂರಿಯಲ್ಲದೆ ಮತ್ತೇನು? ಪಕ್ಷದ ಅಧ್ಯಕ್ಷರಿಗೇ ಇದನ್ನು ನಿಯಂತ್ರಿಸಲು ಸಾಧ್ಯವಿಲ್ಲದಷ್ಟು #ಡಮ್ಮಿಡಿಕೆಶಿ ಆಗಿದ್ದೇಕೆ.

    ವ್ಯಕ್ತಿ ಮುಖ್ಯವಲ್ಲ, ಪಕ್ಷ ಮುಖ್ಯ ಎಂಬ ಡಿ.ಕೆ.ಶಿವಕುಮಾರ್ ಅವರ ಮಾತನ್ನು ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಅವರ ಪಟಾಲಂ ಒಪ್ಪುತ್ತದೆಯೇ? ಸಿದ್ದರಾಮೋತ್ಸವ ಮಾಡುತ್ತೇವೆ ಎಂದು ಹೊರಟಿರುವ ಸಿದ್ದರಾಮಯ್ಯ ಬಣದ ನಾಯಕರನ್ನು ನಿಯಂತ್ರಿಸಲು ಡಿಕೆಶಿ ಅವರಿಗೇಕೆ ಸಾಧ್ಯವಾಗುತ್ತಿಲ್ಲ?.

    ಇತ್ತೀಚಿಗೆ ರಾಜಸ್ಥಾನದಲ್ಲಿ ಡಿಕೆಶಿ ಭಾಗವಹಿಸಿದ ಚಿಂತನಾ ಶಿಬಿರದಲ್ಲೂ, ಮೊನ್ನೆ ದೆಹಲಿಯಲ್ಲಿ ನಕಲಿ ಗಾಂಧಿಗಳ ಭೇಟಿ ಮಾಡಿದಾಗಲೂ, ಸಿದ್ದರಾಮಾತ್ಸವದ ಬಗ್ಗೆ ಯಾರೂ ಹೇಳಲಿಲ್ಲವೇ? ನಿಮ್ಮಿಬ್ಬರ ನಡುವೆ ಈಗ ಜೋಡೋ ಆಟವೋ ಅಥವಾ ತೋಡೋ ಆಟವೋ?.

    ರಾಜ್ಯ ಕಾಂಗ್ರೆಸ್ಸಿಗೆ ಅಧ್ಯಕ್ಷ ಯಾರು ಅನ್ನೋದೇ ಈಗ ಯಕ್ಷ ಪ್ರಶ್ನೆ. ನನ್ನ ಉತ್ಸವಕ್ಕೆ ರಾಹುಲ್ ಬರುತ್ತಾರೆ ಎಂದು ಸಿದ್ದರಾಮಯ್ಯ ಹೇಳ್ತಾರೆ. ರಾಹುಲ್ ಬರೋ ವಿಷಯವೇ ಗೊತ್ತಿಲ್ಲವೆಂದು ಡಿಕೆಶಿ ಹೇಳ್ತಾರೆ. ಅಧ್ಯಕ್ಷರಿಗೇ ಮಾಹಿತಿಯಿಲ್ಲದೇ ಬರ್ತಾರೆ ಅಂದ್ರೆ ಇದು ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆಯ ಸೂಚನೆಯೇ ಎಂದು ಬಿಜೆಪಿ ಸಂಶಯ ವ್ಯಕ್ತಪಡಿಸಿದೆ.

    Live Tv