Tag: siddu

  • ಮಹಾರಾಷ್ಟ್ರದಲ್ಲಿ ನಡೆದ ಕಥೆಗೆ ಸಿದ್ದು ನಾಯಕ

    ಮಹಾರಾಷ್ಟ್ರದಲ್ಲಿ ನಡೆದ ಕಥೆಗೆ ಸಿದ್ದು ನಾಯಕ

    ಕೆಮಿಸ್ಟ್ರಿ ಆಫ್ ಕರಿಯಪ್ಪ ಸಿನಿಮಾ ಮೂಲಕ ಕನ್ನಡ ಚಿತ್ರರಂಗದಲ್ಲಿ ಭರವಸೆ ಮೂಡಿಸಿರುವ ನಿರ್ದೇಶಕ ಕುಮಾರ್ ಈಗ ಹೊಸ ಸಿನಿಮಾ ಘೋಷಿಸಿದ್ದಾರೆ. ಕುಮಾರ್ ಅವರ ಹೊಸ ಪ್ರಯತ್ನಕ್ಕೆ ಲವ್ ಯೂ ಮುದ್ದು (Love U Muddu) ಎಂಬ ಕ್ಯಾಚಿ ಟೈಟಲ್ ಇಡಲಾಗಿದೆ. ಟೈಟಲ್ ಹೇಳುವಂತೆ ಇದೊಂದು ಪ್ರೇಮಕಥೆ. ಮಹಾರಾಷ್ಟ್ರದಲ್ಲಿ ನಡೆದ ನೈಜ ಪ್ರೇಮಕಥೆಯನ್ನು ಕುಮಾರ್ ಅವರು ಸಿನಿಮಾ ರೂಪಕ್ಕಿಳಿಸಿದ್ದಾರೆ. ಸದ್ಯ ಚಿತ್ರದ ಫಸ್ಟ್ ಲುಕ್ ಬಿಡುಗಡೆ ಮಾಡಲಾಗಿದೆ.

    ಲವ್ ಯೂ ಮುದ್ದು ಸಿನಿಮಾದಲ್ಲಿ ನಾಯಕನಾಗಿ ಸಿದ್ದು ನಟಿಸುತ್ತಿದ್ದು, ನವನಟಿ ರೇಷ್ಮಾ ನಾಯಕಿಯಾಗಿ ಸಾಥ್ ಕೊಟ್ಟಿದ್ದಾರೆ. ರಾಜೇಶ್ ನಟರಂಗ, ಗಿರೀಶ್ ಶಿವಣ್ಣ, ತಬಲಾ ನಾಣಿ, ಶ್ರೀವತ್ಸ, ಅಪೂರ್ವ ಹಾಗೂ ಉಷಾ ಸೇರಿದಂತೆ ಹಲವರು ತಾರಾಬಳಗದಲ್ಲಿದ್ದಾರೆ. ಇದನ್ನೂ ಓದಿ: ಮಲೇಷಿಯಾದಲ್ಲಿ ರಿಲೀಸ್ ಆಗಲಿದೆ ‘ಜನನಾಯಗನ್’ ಆಡಿಯೋ

    ಈಗಾಗಲೇ ಚಿತ್ರದ ಚಿತ್ರೀಕರಣ ಮುಕ್ತಾಯಗೊಂಡಿದೆ. ಕಾರ್ಕಳ, ಕುಮಟಾ, ಬೆಂಗಳೂರು ಸುತ್ತಮುತ್ತ 45 ದಿನಗಳ ಶೂಟಿಂಗ್ ನಡೆಸಲಾಗಿದೆ. ಕಿಶನ್ ಎಂಟರ್‌ಟೈನ್ಮೆಂಟ್ ಬ್ಯಾನರ್‌ನಡಿ ಕಿಶನ್ ಟಿಎನ್ ಲವ್ ಯೂ ಮುದ್ದು ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಕಾರ್ಯಕಾರಿ ನಿರ್ಮಾಪಕರಾಗಿ ಲಕ್ಷ್ಮಿಕಾಂತ್ TS ಸಾಥ್ ಕೊಟ್ಟಿದ್ದಾರೆ. ಕೃಷ್ಣ ದೀಪಕ್ ಛಾಯಾಗ್ರಹಣ, ಅನಿರುದ್ಧ್ ಶಾಸ್ತ್ರೀ ಸಂಗೀತ ನಿರ್ದೇಶನ ಹಾಗೂ ಸಿಎಸ್ ದೀಪು ಸಂಕಲನ ಚಿತ್ರಕ್ಕಿದೆ.

  • ‘ಸಂತೋಷ ಸಂಗೀತ’ ಚಿತ್ರಕ್ಕೆ ಪತಿ-ಪತ್ನಿಯೇ ನಾಯಕ, ನಾಯಕಿ

    ‘ಸಂತೋಷ ಸಂಗೀತ’ ಚಿತ್ರಕ್ಕೆ ಪತಿ-ಪತ್ನಿಯೇ ನಾಯಕ, ನಾಯಕಿ

    ಸಿದ್ದು.ಎಸ್ (Siddu) ನಿರ್ಮಿಸಿ, ನಿರ್ದೇಶಿಸಿರುವ, ಅರ್ನವ್ ವಿನ್ಯಾಸ್ (Arnav Vinyash) ಹಾಗೂ ರಾಣಿ ವರದ್ (Rani Varad) ನಾಯಕ – ನಾಯಕಿಯಾಗಿ ನಟಿಸಿರುವ ಚಿತ್ರ ‘ಸಂತೋಷ ಸಂಗೀತ’ (Santhosh Sangeet). ಇತ್ತೀಚೆಗೆ ನಡೆದ ಈ ಚಿತ್ರದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾಹಿತಿ ನೀಡಿದರು.

    ‘ನಾನು ಮೂಲತಃ ಎಂ.ಸಿ.ಎ ಪದವಿಧರ. ಮಹಾ ಸಿನಿಮಾ ಪ್ರೇಮಿ. ವಾರಕ್ಕೊಂದು ಸಿನಿಮಾ ನೋಡುವವನು. ಚೆನ್ನಾಗಿರುವ ಸಿನಿಮಾ ನೋಡಿದರೆ, ನಾನು ಈ ರೀತಿ ಸಿನಿಮಾ ಮಾಡಬೇಕೆಂದು ಆಸೆ ಪಡುತ್ತಿದ್ದವನು. ಆ ಆಸೆ ಈಗ ಈಡೇರಿದೆ. ಲಾಕ್ ಡೌನ್ ಸಮಯದಲ್ಲಿ ಕಥೆ ಬರೆದಿದ್ದೆ. ಅದನ್ನು ಈಗ ಸಿನಿಮಾ ರೂಪದಲ್ಲಿ ತಂದಿದ್ದೀನಿ. ನಾನೇ ನಿರ್ಮಾಣ ಹಾಗೂ ನಿರ್ದೇಶನ ಮಾಡಿದ್ದೇನೆ. ಈ ಚಿತ್ರದಲ್ಲಿ ಲವ್, ಕಾಮಿಡಿ, ವ್ಯಾಪಾರ ಹೀಗೆ ಎಲ್ಲಾ ತರಹದ ಕಮರ್ಷಿಯಲ್ ಅಂಶಗಳು ಈ ಚಿತ್ರದಲ್ಲಿದೆ. ಇದನ್ನು ಕಮರ್ಷಿಯಲ್  ಲವ್ ಜಾನರ್ ನ ಸಿನಿಮಾ ಎನ್ನಬಹುದು. ಅರ್ನವ್ ವಿನ್ಯಾಸ್ ಹಾಗೂ ರಾಣಿ ವರದ್ ಈ ಚಿತ್ರದ ನಾಯಕ – ನಾಯಕಿಯಾಗಿ ನಟಿಸಿದ್ದಾರೆ. ನಿಜ ಜೀವನದಲ್ಲೂ ಪತಿ -ಪತ್ನಿಯಾಗಿರುವ ಅರ್ನವ್ ಹಾಗೂ ರಾಣಿ ತೆರೆಯ ಮೇಲೂ ನಾಯಕ-ನಾಯಕಿಯಾಗಿ ನಟಿಸಿರುವುದು ಈ ಚಿತ್ರದ ವಿಶೇಷ. ದೊಡ್ಡಣ್ಣ, ಅವಿನಾಶ್, ಲಯ ಕೋಕಿಲ, ಕವನ, ಅಮಿತ್, ಕಾಮಿಡಿ ಕಿಲಾಡಿಗಳು ಖ್ಯಾತಿಯ ಲೋಕೇಶ್ ಸೂರ್ಯ ಮಡೆನೂರು ಮನು, ಹನೀಶ್ ಮುಂತಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ. ಬೆಂಗಳೂರಿನಲ್ಲೇ ಹೆಚ್ಚಿನ ಚಿತ್ರೀಕರಣ ‌ಮಾಡಿದ್ದೇವೆ. ಚಿತ್ರೀಕರಣ ಮುಕ್ತಾಯವಾಗಿದೆ  ಎಂದರು ನಿರ್ದೇಶಕರು. ಇದನ್ನೂ ಓದಿ:‘ಟೋಬಿ’ ಶೆಟ್ಟರ ಕೆನ್ನೆಗೆ ಮುತ್ತಿಟ್ಟ ಚೈತ್ರಾ- ರಾಜ್ ಬಿ ಶೆಟ್ಟಿ ಸ್ಪಷನೆ

    ಹೊಂಬಣ್ಣ, ಪ್ರೇಮಂ ಚಿತ್ರಗಳಲ್ಲಿ ನಟಿಸಿರುವ ನನಗೆ ಇದು ಮೂರನೇ ಚಿತ್ರ ಎಂದು ಮಾತು ಆರಂಭಿಸಿದ ನಾಯಕ ಅರ್ನವ್ ವಿನ್ಯಾಸ್, ಈ ಚಿತ್ರದಲ್ಲಿ ನನ್ನದು ಉದ್ಯಮಿಯ ಪಾತ್ರವೆಂದು ಹೇಳಿದರು. ಗಂಡ – ಹೆಂಡತಿ ಇಬ್ಬರು ಒಂದೇ ಉದ್ಯಮದಲ್ಲಿದ್ದಾಗ ಯಾವೆಲ್ಲಾ  ಸವಾಲು ಎದುರಾಗುತ್ತದೆ ಎಂಬುದನ್ನು ಈ ಚಿತ್ರದಲ್ಲಿ ತೋರಿಸಲಾಗಿದೆ ಎಂದರು ನಾಯಕಿ ರಾಣಿ ವರದ್.

    ಕವನ ಹಾಗೂ ಫಸ್ಟ್ rank ರಾಜು ಖ್ಯಾತಿಯ ಅಮಿತ್ ತಮ್ಮ ಪಾತ್ರದ ಬಗ್ಗೆ ಮಾತನಾಡಿದರು.  ಅತಿಥಿಗಳಾಗಿ ಆಗಮಿಸಿದ್ದ ಜೆ.ಪಿ ನಗರದ ಮಾಜಿ ಕಾರ್ಪೋರೇಟರ್ ಚಂದ್ರಶೇಖರ್ ರಾಜು ಅವರು ಸಂತೋಷ ಸಂಗೀತ ಚಿತ್ರತಂಡಕ್ಕೆ ಶುಭ ಕೋರಿದರು. ಪತ್ರಿಕಾಗೋಷ್ಠಿಗೂ ಮುನ್ನ ಚಿತ್ರದ ಶೀರ್ಷಿಕೆ ಅನಾವರಣಗೊಳಿಸಿ ಚಿತ್ರದ ಮೇಕಿಂಗ್ ವೀಡಿಯೋ ಪ್ರದರ್ಶಿಸಲಾಯಿತು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ದೇಶದಲ್ಲಿ ಇಬ್ಬರು ಸಿದ್ದು ಕಾಂಗ್ರೆಸ್ ಸರ್ವನಾಶ ಮಾಡುತ್ತಾರೆ: ಶೆಟ್ಟರ್

    ದೇಶದಲ್ಲಿ ಇಬ್ಬರು ಸಿದ್ದು ಕಾಂಗ್ರೆಸ್ ಸರ್ವನಾಶ ಮಾಡುತ್ತಾರೆ: ಶೆಟ್ಟರ್

    ಹುಬ್ಬಳ್ಳಿ: ದೇಶದಲ್ಲಿ ಇಬ್ಬರು ಸಿದ್ದು ಇದ್ದಾರೆ. ಒಬ್ಬ ಸಿದ್ದು ಪಂಜಾಬ್‌ನಲ್ಲಿ ಕಾಂಗ್ರೆಸ್ ನಾಶ ಮಾಡಿದ್ದಾರೆ. ನಮ್ಮ ರಾಜ್ಯದಲ್ಲಿ ಸಿದ್ದು ಅಂದರೆ ಸಿದ್ದರಾಮಯ್ಯ ಕಾಂಗ್ರೆಸ್ ಸರ್ವನಾಶ ಮಾಡುತ್ತಾರೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿಕೆ ನೀಡಿದರು.

    ಮಾಧ್ಯಮಗಳೊಂದಿಗೆ ಮಾತನಾಡಿದ ಶೆಟ್ಟರ್, ಸಿದ್ದರಾಮಯ್ಯ ಮತ್ತು ಡಿಕೆಶಿ ಬಣ ಬೇರೇ ಬೇರೆ ಇದೆ. ಈಗಾಗಲೇ ಅವರಲ್ಲಿ ಗುಂಪುಗಾರಿಕೆ ಆರಂಭವಾಗಿದೆ. ದೇಶದಲ್ಲಿ ಕಾಂಗ್ರೆಸ್ ಮುಕ್ತವಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳುತ್ತಿದ್ದರು. ಈಗ ಅದೇ ಮಾತಿನಂತೆ ದೇಶದಲ್ಲಿ ಕಾಂಗ್ರೆಸ್ ಮುಕ್ತವಾಗುತ್ತಿದೆ ಎಂದು ಭವಿಷ್ಯ ನುಡಿದರು. ಇದನ್ನೂ ಓದಿ: ಅಷ್ಟು ದೂರದಿಂದ ವಿದ್ಯಾರ್ಥಿಗಳನ್ನು ಕರೆದುಕೊಂಡು ಬಂದರೂ ಸರ್ಕಾರ ಏನೂ ಮಾಡಿಲ್ಲ ಅಂತಿದ್ದಾರೆ: ಸೂರ್ಯ ಅಸಮಾಧಾನ

    ರಾಜ್ಯದಲ್ಲಿ ಹಿಂದಿನ ಎಲ್ಲಾ ಸರ್ಕಾರಗಳು ಬಜೆಟ್ ಹಣವನ್ನು ಬಾಕಿ ಉಳಿಸಿಕೊಂಡಿವೆ. ಸಿದ್ದರಾಮಯ್ಯ ಅವರ ಇಂದಿರಾ ಕ್ಯಾಂಟೀನ್ ಹಣ ಸಾಕಷ್ಟು ಬಾಕಿ ಉಳಿದಿದೆ. ಈ ಬಗ್ಗೆ ಕಾಂಗ್ರೆಸ್ ನಾಯಕರು ಮಾತನಾಡಲಿ ಎಂದರು.

    ಮಹದಾಯಿ ವಿಚಾರದಲ್ಲಿ ಕಾಂಗ್ರೆಸ್ ನಿಲುವು ಸ್ಪಷ್ಟವಾಗಿಲ್ಲ. ಗೋವಾ ಚುನಾವಣೆ ಪ್ರಣಾಳಿಕೆಯಲ್ಲಿ ಕರ್ನಾಟಕಕ್ಕೆ ನೀರು ಕೊಡುವುದಿಲ್ಲ ಎಂದು ಹೇಳುತ್ತಾರೆ. ಆದರೆ ರಾಜ್ಯದಲ್ಲಿ ಮಹದಾಯಿ ನೀರಿಗಾಗಿ ಪಾದಯಾತ್ರೆ ಮಾಡುತ್ತೇವೆ ಎನ್ನುತ್ತಾರೆ ಎಂದು ಕಾಂಗ್ರೆಸ್ ನಾಯಕರ ವಿರುದ್ಧ ಜಗದೀಶ್ ಶೆಟ್ಟರ್ ಹರಿಹಾಯ್ದಿದ್ದಾರೆ. ಇದನ್ನೂ ಓದಿ: ಕಂದಾಯ ದಾಖಲೆ ಮನೆ ಬಾಗಿಲಿಗೆ- ಯೋಜನೆಗೆ ಸಿಎಂ ಚಾಲನೆ

    ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ ಮಾತನಾಡಿದ ಶೆಟ್ಟರ್ ನನ್ನ ನಿಲುವು ಸ್ಪಷ್ಟವಿದೆ. ನಾನು ಸಂಪುಟ ಸೇರುವುದಿಲ್ಲ. ನನ್ನ ರಾಜಕೀಯ ಅನುಭವದ ಪ್ರಕಾರ ರಾಜ್ಯದಲ್ಲಿ ಅವಧಿಗೂ ಮುನ್ನ ಚುನಾವಣೆ ನಡೆಯಲ್ಲ ಎಂದರು.