Tag: Siddu Moolimani

  • ಫ್ಯಾಥೋ ಸಾಂಗ್ ಬಿಕ್ಕಿ ಬಿಕ್ಕಿ ಅತ್ತ ಸಿದ್ದು

    ಫ್ಯಾಥೋ ಸಾಂಗ್ ಬಿಕ್ಕಿ ಬಿಕ್ಕಿ ಅತ್ತ ಸಿದ್ದು

    ಟೈಟಲ್ ಹಾಗೂ ಕಂಟೆಂಟ್ ಮೂಲಕ ಕುತೂಹಲ ಹೆಚ್ಚಿಸಿರುವ ಲವ್ ಯು ಮುದ್ದು ಸಿನಿಮಾದಿಂದ ಮತ್ತೊಂದು ಹಾಡು ರಿಲೀಸ್ ಆಗಿದೆ. ಈಗಾಗಲೇ ಬಿಡುಗಡೆಯಾಗಿದ್ದ ಟೈಟಲ್ ಟ್ರ್ಯಾಕ್‌ಗೆ ಒಳ್ಳೆ ರೆಸ್ಪಾನ್ಸ್ ಸಿಕ್ಕಿದ್ದು, ಇದೀಗ ಚಿತ್ರತಂಡ ಬರುತಿದೆ ಅಳುವು ಎಂಬ ಗೀತೆಯನ್ನು ಅನಾವರಣ ಮಾಡಿದೆ. ಲವ್ ಯು ಮುದ್ದು ಸಿನಿಮಾದ ಫ್ಯಾಥೋ ಸಾಂಗ್ ರಿಲೀಸ್ ಆಗಿದೆ.

    ತನ್ನ ಪ್ರೇಯಸಿ ದೂರವಾದ ಯುವಕನ ಪಾಡು-ಒದ್ದಾಟ ಹೇಗೆ ಇರಲಿದೆ ಎಂಬ ಕುರಿತಾದ ಹಾಡು ಇದಾಗಿದೆ. ಬರುತಿದೆ ಅಳುವು ಎಂಬ ಗೀತೆಗೆ ನಿರ್ದೇಶಕ ಕುಮಾರ್ ಸಾಹಿತ್ಯ ಬರೆದಿದ್ದಾರೆ. ಜಸ್ಕರಣ್ ಸಿಂಗ್ ಧ್ವನಿಯಾಗಿದ್ದಾರೆ. ಆರವ್ ರಿಷಿಕ್ ಸಂಗೀತ ಒದಗಿಸಿದ್ದಾರೆ. ಬರುತಿದೆ ಅಳುವು ಎನ್ನುತ್ತಾ ನಾಯಕ ಸಿದ್ದು ಹಾಡಿನಲ್ಲಿ ನಟಿಸಿದ್ದಾರೆ. ಇದನ್ನೂ ಓದಿ: ಕಾಂತಾರ ಚಾಪ್ಟರ್ 18 ದಿನಕ್ಕೆ 765 ಕೋಟಿ ಕಲೆಕ್ಷನ್

    ‘ಕೆಮಿಸ್ಟ್ರಿ ಆಫ್ ಕರಿಯಪ್ಪ’ ಸಿನಿಮಾ ಖ್ಯಾತಿಯ ಕುಮಾರ್ ಈ ಬಾರಿ ನೈಜ ಪ್ರೇಮಕಥೆಯನ್ನ ಹೇಳೋದಿಕ್ಕೆ ಹೊರಟಿದ್ದಾರೆ. ಮಹಾರಾಷ್ಟ್ರದಲ್ಲಿ ನಡೆದ ಪ್ರೇಮಕಥೆಯೊಂದನ್ನ ಆಧರಿಸಿ ಲವ್ ಯು ಮುದ್ದು ಸಿನಿಮಾ ಮಾಡಲಾಗಿದೆ. ಕಿರುತೆರೆಯಲ್ಲಿ ಹಲವು ಧಾರಾವಾಹಿಗಳಲ್ಲಿ ನಟಿಸಿದ್ದ ಮತ್ತು ಅಜ್ಞಾತವಾಸಿ ಸಿನಿಮಾದಲ್ಲಿ ನಟಿಸಿದ್ದ ಸಿದ್ದು ಈ ಸಿನಿಮಾಕ್ಕೆ ನಾಯಕ. ಯುವನಟಿ ರೇಷ್ಮಾ ನಾಯಕಿ. ಈ ಸಿನಿಮಾದಲ್ಲಿ ರಾಜೇಶ್ ನಟರಂಗ, ತಬಲಾ ನಾಣಿ, ಗಿರೀಶ್ ಶಿವಣ್ಣ, ಶ್ರೀವತ್ಸ ಮತ್ತು ಸ್ವಾತಿ ನಟಿಸಿದ್ದಾರೆ.

    ಕಿಶನ್ ಎಂಟರ್ಟೈನ್ಮೆಂಟ್ ಬ್ಯಾನರ್‌ನಡಿ ಕಿಶನ್ ಟಿಎನ್ ಚಿತ್ರ ನಿರ್ಮಾಣ ಮಾಡಿದ್ದಾರೆ. ಕಾರ್ಯಕಾರಿ ನಿರ್ಮಾಪಕರಾಗಿ ಲಕ್ಷ್ಮಿಕಾಂತ್ TS ಇದ್ದಾರೆ. ಕೃಷ್ಣ ದೀಪಕ್ ಛಾಯಾಗ್ರಹಣ, ಅನಿರುದ್ಧ್ ಶಾಸ್ತ್ರೀ ಸಂಗೀತ ನಿರ್ದೇಶನ ಹಾಗೂ ಸಿಎಸ್ ದೀಪು ಸಂಕಲನ ಚಿತ್ರಕ್ಕಿದೆ. ಲವ್ ಯು ಮುದ್ದು ಚಿತ್ರದ ಚಿತ್ರೀಕರಣವನ್ನು ಕಾರ್ಕಳ, ಕುಮಟಾ, ಬೆಂಗಳೂರು ಸುತ್ತಮುತ್ತ 45 ದಿನಗಳ ಶೂಟಿಂಗ್ ನಡೆಸಲಾಗಿದೆ.ಇದನ್ನೂ ಓದಿ: ದೇವರ ಮಕ್ಕಳ ಜೊತೆ ದೀಪಾವಳಿ ಆಚರಿಸಿದ ನಟಿ ಸಮಂತಾ

  • ಅಭಿರಾಮಚಂದ್ರನಿಗೆ ಸೆನ್ಸಾರ್ ಅಭಯ

    ಅಭಿರಾಮಚಂದ್ರನಿಗೆ ಸೆನ್ಸಾರ್ ಅಭಯ

    ಬಿಡುಗಡೆಗೆ ಸಜ್ಜಾಗಿರುವ ಅಭಿರಾಮಚಂದ್ರ (Abhiramchandra) ಸಿನಿಮಾ ಸೆನ್ಸಾರ್ (Censor) ಮಂಡಳಿಯಲ್ಲಿ ಪಾಸ್ ಆಗಿದೆ. ನಾಗೇಂದ್ರ ಗಾಣಿಗ ನಿರ್ದೇಶನದ ಈ ಚಿತ್ರಕ್ಕೆ ಯು/ಎ ಪ್ರಮಾಣ ಪತ್ರ ಸಿಕ್ಕಿದೆ. ಕಿರಿಕ್ ಪಾರ್ಟಿ ಸಿನಿಮಾಗೆ ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡಿರುವ ನಾಗೇಂದ್ರ ಗಾಣಿಗ (Nagendra Ganiga) ಅಭಿರಾಮಚಂದ್ರ ಮೂಲಕ ನಿರ್ದೇಶಕರಾಗಿ ಮೊದಲ ಹೆಜ್ಜೆ ಇಟ್ಟಿದ್ದಾರೆ.

    ಬಾಲ್ಯದ ಸ್ನೇಹ, ಪ್ರೀತಿ ಹಾಗೂ ತ್ರಿಕೊನ ಪ್ರೇಮಕಥೆ ಹೊತ್ತ ಚಿತ್ರದಲ್ಲಿ ರಥ ಕಿರಣ ಸಿದ್ದು ಮೂಲಿಮನಿ (Siddu Moolimani), ನಾಟ್ಯರಂಗ ಮುಖ್ಯ ಭೂಮಿಕೆಯಲ್ಲಿದ್ದಾರೆ. ನಾಯಕಿಯಾಗಿ ಶಿವಾನಿ ರೈ (Shivani Rai) ನಟಿಸಿದ್ದಾರೆ. ಕುಂದಾಪುರ, ಬೆಂಗಳೂರು, ಮೈಸೂರಿನಲ್ಲಿ ಸಿನಿಮಾವನ್ನು ಸೆರೆ ಹಿಡಿಯಲಾಗಿದೆ. ರವಿ ಬಸ್ರೂರು ಸಂಗೀತ ನಿರ್ದೇಶನದಲ್ಲಿ ಅಭಿರಾಮಚಂದ್ರ ಸಿನಿಮಾ ಮೂಡಿ ಬರ್ತಿದ್ದು, ರವಿ ಬಸ್ರೂರು ಪುತ್ರ ಪವನ್ ಕೂಡ ಈ ಚಿತ್ರದಲ್ಲಿ ಬಣ್ಣ ಹಚ್ಚಿದ್ದು, ವೀಣಾ ಸುಂದರ್, ಸುಂದರ್ ವೀಣಾ, ಎಸ್.ನಾರಾಯಣ್, ಪ್ರಕಾಶ್ ತೂಮಿನಾಡು ಸೇರಿದಂತೆ ಹಲವು ಕಲಾವಿದರು ಚಿತ್ರದ ತಾರಾಬಳಗದಲ್ಲಿದ್ದಾರೆ. ಇದನ್ನೂ ಓದಿ:‘RRR’ ರೈಟರ್ ವಿಜೇಂದ್ರ ಪ್ರಸಾದ್‌ ಜೊತೆ ಕೇದರನಾಥ್‌ಗೆ ಕಂಗನಾ ಭೇಟಿ

    ಎ.ಜಿ.ಎಸ್ ಎಂಟಟೈನ್ಮೆಂಟ್ ಹಾಗೂ ರವಿ ಬಸ್ರೂರು ಮ್ಯೂಸಿಕ್ ಮತ್ತು ಮೂವೀಸ್ ಬ್ಯಾನರ್ ನಡಿ ಎ.ಜಿ.ಸುರೇಶ್ ಹಾಗೂ ಮಲ್ಲೇಶ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ರವಿ ಬಸ್ರೂರು ಸಂಗೀತ ನಿರ್ದೇಶನ, ಸಂದೀಪ್ ವಲ್ಲೂರಿ ಛಾಯಾಗ್ರಹಣ, ಸುರೇಶ್ ಆರುಮುಗಂ ಸಂಕಲನ ಚಿತ್ರಕ್ಕಿದೆ. ಫಸ್ಟ್ ಲುಕ್ ಮೂಲಕ ಗಮನಸೆಳೆದಿರುವ ಅಭಿರಾಮಚಂದ್ರ ಶೀಘ್ರದಲ್ಲಿಯೇ ತೆರೆಗೆ ಬರಲಿದೆ.

  • ‘ಅಭಿರಾಮಚಂದ್ರ’ನಿಗೆ ಕರುನಾಡ ಚಕ್ರವರ್ತಿ ಶಿವಣ್ಣ ಸಾಥ್

    ‘ಅಭಿರಾಮಚಂದ್ರ’ನಿಗೆ ಕರುನಾಡ ಚಕ್ರವರ್ತಿ ಶಿವಣ್ಣ ಸಾಥ್

    ಥ ಕಿರಣ್, ಸಿದ್ದು ಮೂಲಿಮನಿ, ಮತ್ತು ನಾಟ್ಯ ರಂಗ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ ‘ಅಭಿರಾಮಚಂದ್ರ’ (Abhiramachandra) ಸಿನಿಮಾದ ಟೀಸರ್ ರಿಲೀಸ್ ಆಗಿದೆ. ಚಿತ್ರದ ಟೀಸರ್ ರಿಲೀಸ್ ಮಾಡಿಕೊಡುವ ಮೂಲಕ ಶಿವಣ್ಣ ಸಿನಿಮಾ ತಂಡಕ್ಕೆ ಸಾಥ್ ನೀಡಿದ್ದಾರೆ.  ಟೀಸರ್ ನೋಡಿ ಚಿತ್ರತಂಡಕ್ಕೆ ಭೇಷ್ ಎಂದಿದ್ದಾರೆ.

    ‘ಅಭಿರಾಮಚಂದ್ರ’ ಟೀಸರ್ ರಿಲೀಸ್ ಮಾಡಿದ್ದು, ಬಹಳ ಖುಷಿಯಾಯ್ತು. ನಾಗೇಂದ್ರ ಗಾಣಿಗ ಡೈರೆಕ್ಷನ್ ಮಾಡಿದ್ದಾರೆ. ತುಂಬಾ ಬ್ಯೂಟಿಫುಲ್ ವಿಷ್ಯೂವಲ್ಸ್ ಇತ್ತು. ಬರೀ ಮಕ್ಕಳ ಕಥೆ ಇದೆ. ಸ್ಟೋರಿಯಲ್ಲಿ ಬೇರೆ ಬೇರೆ ತಿರುವು ಕಾಣುತ್ತಿದೆ. ಅದನ್ನು ನಾವು ಹೇಳೋದಕ್ಕಿಂತ ಡೈರೆಕ್ಟರ್ ಹೇಳಿದರೆ ಒಳ್ಳೆಯದು. ಟೀಸರ್ ನೋಡ್ತಿದ್ರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ನೆನಪಾಯ್ತು. ಆ ಸಿನಿಮಾ ಥರ ಹಿಟ್ ಆಗಲಿ, ಟೈಟಲ್ ತುಂಬಾ ಪಾಸಿಟಿವ್ ಆಗಿದೆ. ಸಿನಿಮಾ ಮೇ ನಲ್ಲಿ ರಿಲೀಸ್ ಆಗ್ತಿದ್ದು, ನಾನು ನೋಡ್ತೇನೆ. ನೀವು ನೋಡಿ, ರವಿಬಸ್ರೂರ್ ಮ್ಯೂಸಿಕ್ ಮಾಡಿದ್ದಾರೆ. ಇಡೀ ತಂಡಕ್ಕೆ ಒಳ್ಳೆಯದಾಗಲಿ ಎಂದು ಶಿವಣ್ಣ (Shivanna) ಹಾರೈಸಿದ್ದಾರೆ.

    ಶಾಲಾ ದಿನಗಳ ಪ್ರೀತಿ, ತುಂಟಾಟ, ಮುಗ್ದ ಸ್ನೇಹ, ಸುಂದರ ನೋಟ ಅಭಿರಾಮಚಂದ್ರ ಟೀಸರ್‌ಗೆ ಮೆಚ್ಚುಗೆ ವ್ಯಕ್ತವಾಗ್ತಿದೆ. ‘ಕಿರಿಕ್ ಪಾರ್ಟಿ’ ಚಿತ್ರಕ್ಕೆ ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡಿರುವ ನಾಗೇಂದ್ರ ಗಾಣಿಗ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದು, ಇದು ಇವರ ಚೊಚ್ಚಲ ಸಿನಿಮಾ. ರಥ ಕಿರಣ, ಸಿದ್ದು ಮೂಲಿಮನಿ, ನಾಟ್ಯರಂಗ ಚಿತ್ರದ ಮುಖ್ಯ ಭೂಮಿಕೆಯಲ್ಲಿದ್ದಾರೆ. ಶಿವಾನಿ ರೈ ನಾಯಕಿ ಆಗಿ ನಟಿಸಿದ್ದಾರೆ.

     

    View this post on Instagram

     

    A post shared by Siddu Moolimani (@sidmoolimani)

    ಕುಂದಾಪುರ, ಬೆಂಗಳೂರು, ಮೈಸೂರು ಭಾಗದಲ್ಲಿ ಶೂಟಿಂಗ್ ನಡೆಸಲಾಗಿದ್ದು, ರವಿ ಬಸ್ರೂರು (Ravi basrur) ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ. ರವಿ ಬಸ್ರೂರು ಮೂವೀಸ್ ನಡಿ ಸಿನಿಮಾವನ್ನು ಪ್ರಸ್ತುತ ಪಡಿಸಲಾಗುತ್ತಿದೆ. ರವಿ ಬಸ್ರೂರು ಪುತ್ರ ಪವನ್ ಕೂಡ ಈ ಚಿತ್ರದಲ್ಲಿ ಬಣ್ಣ ಹಚ್ಚಿದ್ದು, ವೀಣಾ ಸುಂದರ್, ಸುಂದರ್, ಎಸ್.ನಾರಾಯಣ್, ಪ್ರಕಾಶ್ ತೂಮಿನಾಡು ಸೇರಿದಂತೆ ಹಲವು ಕಲಾವಿದರು ಚಿತ್ರದ ತಾರಾಬಳಗದಲ್ಲಿದ್ದಾರೆ.

    AGS Entertainment ಹಾಗೂ ರವಿ ಬಸ್ರೂರು ಮ್ಯೂಸಿಕ್ ಮತ್ತು ಮೂವೀಸ್ ಬ್ಯಾನರ್‌ನಲ್ಲಿ ಎ.ಜಿ.ಸುರೇಶ್ ಹಾಗೂ ಮಲ್ಲೇಶ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ರವಿ ಬಸ್ರೂರು ಸಂಗೀತ ನಿರ್ದೇಶನ, ಸಂದೀಪ್ ವಲ್ಲೂರಿ ಛಾಯಾಗ್ರಹಣ, ಸುರೇಶ್ ಆರುಮುಗಂ ಸಂಕಲನ ಚಿತ್ರಕ್ಕಿದೆ. ಶೂಟಿಂಗ್ ಮುಗಿಸಿ ಪೋಸ್ಟ್ ಪ್ರೊಡಕ್ಷನ್ ಕೊನೆ ಹಂತದಲ್ಲಿರುವ ‘ಅಭಿರಾಮಚಂದ್ರ’ ಸಿನಿಮಾ ಮೇ ತಿಂಗಳಲ್ಲಿ ತೆರೆಗೆ ಬರಲಿದೆ.

  • ದಾಂಪತ್ಯ ಜೀವನಕ್ಕೆ ಕಾಲಿಟ್ಟ `ಗಟ್ಟಿಮೇಳ’ ನಟಿ ಪ್ರಿಯಾ- ಸಿದ್ದು ಮೂಲಿಮನಿ

    ದಾಂಪತ್ಯ ಜೀವನಕ್ಕೆ ಕಾಲಿಟ್ಟ `ಗಟ್ಟಿಮೇಳ’ ನಟಿ ಪ್ರಿಯಾ- ಸಿದ್ದು ಮೂಲಿಮನಿ

    ಕಿರುತೆರೆಯ ಮತ್ತೊಂದು ಜೋಡಿ ಇದೀಗ ಹಸೆಮಣೆ ಏರಿದ್ದಾರೆ. `ಗಟ್ಟಿಮೇಳ’ (Gattimela) ನಟಿ ಪ್ರಿಯಾ ಆಚಾರ್ (Priya Achar) ಮತ್ತು `ಪಾರು’ (Paaru) ನಟ ಸಿದ್ದು ಮೂಲಿಮನಿ (Siddu Moolimani) ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

    ಚಿತ್ರರಂಗದಲ್ಲಿ ಗಟ್ಟಿಮೇಳದ ಸೌಂಡ್ ಜೋರಾಗಿದೆ. `ಪಾರು’ ಹೀರೋ ಶರತ್ ಪದ್ಮನಾಭ್ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬೆನ್ನಲ್ಲೇ ಕಿರುತೆರೆಯ ಮತ್ತೊಂದು ಹಸೆಮಣೆ ಏರುವ ಮೂಲಕ ಜೋಡಿ ಸಿಹಿಸುದ್ದಿ ಕೊಟ್ಟಿದ್ದಾರೆ. ಇದನ್ನೂ ಓದಿ: ಆನಂದ್ ಮಹಿಂದ್ರಾ ಜೊತೆ `ನಾಟು ನಾಟು’ ಹಾಡಿಗೆ ಹೆಜ್ಜೆ ಹಾಕಿದ ರಾಮ್ ಚರಣ್

    ಹಲವು ವರ್ಷಗಳ ಪ್ರೀತಿಗೆ ಇದೀಗ ಸಿದ್ದು-ಪ್ರಿಯಾ ಮದುವೆಯೆಂಬ (Wedding) ಮುದ್ರೆ ಒತ್ತಿದ್ದಾರೆ. ಬೆಂಗಳೂರಿನ ಖಾಸಗಿ ರೆಸಾರ್ಟ್‌ವೊಂದರಲ್ಲಿ ಭಾನುವಾರ (ಫೆ.12)ರಂದು ಪಾರು ನಟ ಸಿದ್ದು- ʻಗಟ್ಟಿಮೇಳʼ ಖ್ಯಾತಿಯ ನಟಿ ಪ್ರಿಯಾ ಆಚಾರ್ ಹಸೆಮಣೆ ಏರಿದ್ದಾರೆ. ಗುರುಹಿರಿಯರು, ಆಪ್ತರ ಸಮ್ಮುಖದಲ್ಲಿ ಈ ಜೋಡಿ ಮದುವೆಯಾಗಿದ್ದಾರೆ. ಈ ಮದುವೆ ಸಂಭ್ರಮಕ್ಕೆ `ಗಟ್ಟಿಮೇಳ’ ಮತ್ತು `ಪಾರು’ ಸೀರಿಯಲ್ ತಂಡ ಸಾಕ್ಷಿಯಾಗಿದೆ.

     

    View this post on Instagram

     

    A post shared by Priya j achar???? (@priya_j_achar)

    ಫೆ.12ರಂದು ಮದುವೆಯಾಗಿರುವ ಈ ಜೋಡಿ, ಇದೀಗ ಫೆ.14ರಂದು ದಾವಣಗೆರೆಯಲ್ಲಿ ಆರತಕ್ಷತೆ ಹಮ್ಮಿಕೊಂಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • `ಗಟ್ಟಿಮೇಳ’ ನಟಿ ಪ್ರಿಯಾ ಜೊತೆ ಸಿದ್ದು ಮದುವೆ ಡೇಟ್ ಫಿಕ್ಸ್

    `ಗಟ್ಟಿಮೇಳ’ ನಟಿ ಪ್ರಿಯಾ ಜೊತೆ ಸಿದ್ದು ಮದುವೆ ಡೇಟ್ ಫಿಕ್ಸ್

    ಹಿರಿತೆರೆ ಮಾತ್ರವಲ್ಲ ಕಿರುತೆರೆಯಲ್ಲೂ ಮದುವೆ ದಿಬ್ಬಣದ ಸೌಂಡ್ ಜೋರಾಗಿದೆ. ಇತ್ತೀಚಿಗೆ `ಪಾರು’ ಸೀರಿಯಲ್ ಹೀರೋ ಶರತ್ ಪದ್ಮನಾಭ್ ಹಸೆಮಣೆ ಏರಿದ್ದರು. ಈಗ ಇದೇ ಸೀರಿಯಲ್‌ನ ಸಿದ್ದು ಮೂಲಿಮನಿ (Siddu Moolimani) ಮತ್ತು `ಗಟ್ಟಿಮೇಳ’ (Gattimela) ನಟಿ ಪ್ರಿಯಾ (Priya) ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ.

    ಕಿರುತೆರೆಯ ಲವ್ ಬರ್ಡ್ಸ್ ಪ್ರಿಯಾ ಮತ್ತು ಸಿದ್ದು ಮದುವೆಗೆ (Wedding) ಈಗಾಗಲೇ ಕೌಂಟ್‌ಡೌನ್ ಶುರುವಾಗಿದೆ. ವಾಹಿನಿಯ ರಿಯಾಲಿಟಿ ಶೋನಲ್ಲಿ ಶುರುವಾದ ಸ್ನೇಹ, `ಧಮಾಕ’ (Dhamaka) ಸಿನಿಮಾದ ಚಿತ್ರೀಕರಣದ ಸಮಯದಲ್ಲಿ ಜೋಡಿಹಕ್ಕಿಗಳಾದರು. ಈ ವೇಳೆ ಇಬ್ಬರಿಗೂ ಪ್ರೇಮಾಂಕುರವಾಗಿತ್ತು. ಈಗ ಹಿರಿಯರ ಒಪ್ಪಿಗೆಯ ಮೇರೆಗೆ ಪ್ರಿಯಾ- ಸಿದ್ದು ಹೊಸ ಬಾಳಿಗೆ ಕಾಲಿಡಲು ರೆಡಿಯಾಗಿದ್ದಾರೆ. ಇದನ್ನೂ ಓದಿ: ಅಣ್ಣನ ಮದುವೆಯಲ್ಲಿ ಮಿಂಚಿದ ನಟಿ ಪೂಜಾ ಹೆಗ್ಡೆ

     

    View this post on Instagram

     

    A post shared by Priya j achar???? (@priya_j_achar)

    ಕಳೆದ ನವೆಂಬರ್‌ನಲ್ಲಿ ಪ್ರಿಯಾ ಮತ್ತು ಸಿದ್ದು ಎಂಗೇಜ್‌ಮೆಂಟ್ ಮಾಡಿಕೊಳ್ಳುವ ಮೂಲಕ ಫ್ಯಾನ್ಸ್‌ಗೆ ಸರ್ಪ್ರೈಸ್ ನೀಡಿದ್ದರು. ಈಗ ಮದುವೆಗೆ ತೆರೆಮರೆಯಲ್ಲಿ ಭರ್ಜರಿ ತಯಾರಿ ನಡೆಯುತ್ತಿದೆ. ಗಟ್ಟಿಮೇಳ ನಟಿ ಪ್ರಿಯಾ ಜೊತೆ ಇದೇ ಫೆಬ್ರವರಿಯಲ್ಲಿ ಖಾಸಗಿ ರೆಸಾರ್ಟ್‌ವೊಂದರಲ್ಲಿ ಸಿದ್ದು ಮದುವೆಯಾಗುತ್ತಿದ್ದಾರೆ.

     

    View this post on Instagram

     

    A post shared by Priya j achar???? (@priya_j_achar)

    ಇನ್ನೂ ಸಿದ್ದು ಮೂಲಿಮನಿ, ರಂಗಿತರಂಗ, ವಿಕ್ರಾಂತ್ ರೋಣ, ಧಮಾಕ, ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ನಟಿ ಪ್ರಿಯಾ ʻಗಟ್ಟಿಮೇಳʼ ಸೀರಿಯಲ್ ಜೊತೆ ಹೊಸ ಸಿನಿಮಾ ಕೂಡ ಮಾಡ್ತಿದ್ದಾರೆ. ಸದ್ಯದಲ್ಲೇ ಈ ಕುರಿತು ಅಪ್‌ಡೇಟ್ ಹೊರಬೀಳಲಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಪ್ರಿಯಾಗೆ ಕಾಲ್ಗೆಜ್ಜೆ ತೊಡಿಸಿ ಮಂಡಿಯೂರಿ ಪ್ರಪೋಸ್ ಮಾಡಿದ `ಪಾರು’ ನಟ ಸಿದ್ದು

    ಪ್ರಿಯಾಗೆ ಕಾಲ್ಗೆಜ್ಜೆ ತೊಡಿಸಿ ಮಂಡಿಯೂರಿ ಪ್ರಪೋಸ್ ಮಾಡಿದ `ಪಾರು’ ನಟ ಸಿದ್ದು

    ಕಿರುತೆರೆಯ ಲವ್ ಬರ್ಡ್ಸ್ ಸಿದ್ದು ಮೂಲಿಮನಿ(Siddumoolimani) ಮತ್ತು ಪ್ರಿಯಾ ಆಚಾರ್ (Priya Achar) ನವೆಂಬರ್ ತಿಂಗಳಲ್ಲಿ ನಿಶ್ಚಿತಾರ್ಥ ಮಾಡಿಕೊಳ್ಳುವ ಮೂಲಕ ತಮ್ಮ ಪ್ರೀತಿ ವಿಚಾರವನ್ನು ಬಹಿರಂಗಪಡಿಸಿದ್ದರು. ಈ ಮೂಲಕ ಫ್ಯಾನ್ಸ್‌ಗೆ ಗುಡ್ ನ್ಯೂಸ್ ನೀಡಿದ್ದರು. ಹೊಸ ವರ್ಷದ ಸಂಭ್ರಮದ ವೇಳೆ ಪ್ರಿಯಾಗೆ ರೊಮ್ಯಾಂಟಿಕ್ ಆಗಿ ಪ್ರಪೋಸ್ ಮಾಡಿದ್ದಾರೆ.

     

    View this post on Instagram

     

    A post shared by Priya j achar???? (@priya_j_achar)

    ಟಿವಿ ಪರದೆಯ ಕ್ಯೂಟ್ ಜೋಡಿ ಪ್ರಿಯಾ ಮತ್ತು ಸಿದ್ದು, ಹೊಸ ವರ್ಷದ ಶುಭಾರಂಭ ಕಾರ್ಯಕ್ರಮದಲ್ಲಿ ತಮ್ಮ ಲವ್ ಸ್ಟೋರಿ ಹೇಳಿಕೊಳ್ಳುವುದರ ಮೂಲಕ ಮಂಡಿಯೂರಿ ಪ್ರಪೋಸ್ ಮಾಡಿದ್ದಾರೆ. ಇನ್ನೂ ಈ ವೇಳೆ ಪ್ರೀತಿ ಮತ್ತು ಮದುವೆ ವಿಚಾರ ಮಾತನಾಡಿದರೆ ಮಾತ್ರ ನನಗೆ ತುಂಬಾ ಸಂಕೋಚ ನಾಚಿಕೆ ಆಗುತ್ತದೆ. ನನಗೆ ಸ್ಟೇಜ್ ಭಯ ಇಲ್ವೇ ಇಲ್ಲ. ಆದರೆ ಆ ವಿಷಯ ಯಾರಾದರೂ ಕೇಳಿದರೆ ನಾಚಿಕೆ ಆಗುತ್ತೆ. ನಾವು ಡಿಕೆಡಿ ರಿಯಾಲಿಟಿ ಶೋ ಮೂಲಕ ಸ್ನೇಹಿತರಾಗಿದ್ವೀ ಪ್ರೀತಿ ಶುರುವಾಗಿದ್ದು ನಮ್ಮ ʻಧಮಾಕʼ ಶೂಟ್‌ನಲ್ಲಿ ಎಂದು ಪ್ರಿಯಾ ಮಾತನಾಡಿದ್ದಾರೆ.

    ನಮ್ಮ ಮನದ ಮೂರು ಮುಖ್ಯ ಪದಗಳನ್ನು ಹೇಳುವ ಸಮಯ, ಅದನ್ನ ನಾನೇ ಹೇಳುವೆ. ಬಿಡು ನೀ ಭಯವ ನನಗೆ ಅರ್ಥ ಆಗುತ್ತೆ. ಇದು ಹೃದಯ ವಿಷಯ, ಪ್ರೀತಿ ಅಂತ ಹೆಸರಿಡಲು. ನನ್ನ ಹುಡುಗಿ ಎಂದು ಕರೆಯಲು ಇಲ್ಲಸಲ್ಲದ ಮಾತಾಡಲು ನಾನಲ್ಲ ಮಾಮೂಲು ಪ್ರೇಮಿ. ಇದನ್ನೂ ಓದಿ: ನಾನಿಲ್ಲಿ ಗೆದ್ದಿರುವಂಥದ್ದು ನಿಮ್ಮಿಂದ, ನೀವು ನನ್ನನ್ನು ಗೆಲ್ಲಿಸಿದ್ದೀರಿ: ರೂಪೇಶ್ ಶೆಟ್ಟಿ

    ಈ ಸಂಬಂಧಕ್ಕೆ ನಾವು ಹೆಸರಿಟ್ಟಿಲ್ಲ. ಒಬ್ಬರಿಗೊಬ್ಬರು ಪ್ರಪೋಸ್ ಮಾಡಿಲ್ಲ ಪ್ರೀತಿ ಅನ್ನೋ ವಿಚಾರ ಹೇಳಿಕೊಂಡಿಲ್ಲ ಮನಸ್ಸಿನಲ್ಲಿ ಮಾತ್ರ ಮದ್ವೆ ಅನ್ನೋ ವಿಚಾರವಿತ್ತು. ನಮ್ಮ ಭಾವನೆಗಳು ಮನೆಯಲ್ಲಿ ಸುಲಭವಾಗಿ ಗೊತ್ತಾಯಿತು. ಆಗ ಮದುವೆ ಮಾತುಕತೆ ಶುರುವಾಯ್ತು. ಆಗ ಬರೆದ ಕವಿತೆ ಕೊನೆ ಸಾಲುಗಳನ್ನು ಈಗ ಹೇಳುವೆ. ಚಂದನೆಯ ಅರಸಿ ನೀನು. ನಾನು ನಿನ್ನ ಜನುಮ ಜನುಮದ ಸಾಮಿ ನಿನ್ನನ್ನು ಪ್ರೀತಿಸುವೆ..ಮದುವೆ ಆಗುವೆಯಾ? ಎಂದು ಮಂಡಿಯೂರಿ ಸಿದ್ದು ಪ್ರಪೋಸ್ ಮಾಡುತ್ತಾರೆ. ಬಳಿಕ ಮತ್ತೆ ಕಾಲ್ಗೆಜ್ಜೆ ತೊಡಿಸಿ ರೊಮ್ಯಾಂಟಿಕ್ ಆಗಿ ಪ್ರಪೋಸ್ ಮಾಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ‘ಧರಣಿ ಮಂಡಲ ಮಧ್ಯದೊಳಗೆ’  ಚಿತ್ರ ತಂಡದಿಂದ ಮತ್ತೊಂದು ಹೊಸ ಚಿತ್ರಕ್ಕೆ ಚಾಲನೆ

    ‘ಧರಣಿ ಮಂಡಲ ಮಧ್ಯದೊಳಗೆ’ ಚಿತ್ರ ತಂಡದಿಂದ ಮತ್ತೊಂದು ಹೊಸ ಚಿತ್ರಕ್ಕೆ ಚಾಲನೆ

    ಗಾಗಲೇ ಒಂದು ಹೊಸ ರೀತಿಯ ಸದಭಿರುಚಿಯ ಚಿತ್ರ ಧರಣಿ ಮಂಡಲ ಮಧ್ಯದೊಳಗೆ  ಚಿತ್ರ ತಂಡ ಈಗ ಮತ್ತೊಂದು ಹೊಸ ಚಿತ್ರಕ್ಕೆ ಚಾಲನೆ ನೀಡುವ‌ ಮೂಲಕ    “K A” ಎಂಬ ಅರ್ಧ ಶೀರ್ಷಿಕೆಯನ್ನು ಅನಾವರಣ ಗೊಳಿಸಿ ಪ್ರಾರಂಭದಲ್ಲೇ  ಕುತೂಹಲವನ್ನು ಕಾಯ್ದಿರಿಸಿದ್ದಾರೆ.

    ವಿಜಯನಗರದ ಶ್ರೀ ವರಸಿದ್ಧಿ ವಿನಾಯಕ ಮತ್ತು ಶ್ರೀ ಲಕ್ಷ್ಮೀ ವೆಂಕಟೇಶ್ವರ ದೇವಾಲಯದಲ್ಲಿ ಶೀರ್ಷಿಕೆ ಅನಾವರಣದ ಕಾರ್ಯ ನೆಡೆದಿದೆ. ಧರಣಿ ಮಂಡಲ ಮಧ್ಯದೊಳಗೆ ಚಿತ್ರಕ್ಕೆ ಸಹ ನಿರ್ದೇಶಕನಾಗಿ ಕಾರ್ಯ ನಿರ್ವಹಿಸಿದ್ದ  ಸಂತೋಷ್ ಈಗ ಸ್ವತಂತ್ರ ನಿರ್ದೇಶಕನಾಗಿ ಮೊದಲ ಬಾರಿಗೆ ಆಕ್ಷನ್ ಕಟ್ ಹೇಳಲು ಸಜ್ಜಾಗಿದ್ದಾರೆ. ನಾಯಕ ನಟರಾಗಿ ಯಶ್ ಶೆಟ್ಟಿ ಹಾಗೂ ಸಿದ್ದು ಮೂಲಿಮನಿ ಬಣ್ಣ ಹಚ್ಚಿದ್ದಾರೆ

    ಯಶ್ ಶೆಟ್ಟಿ ಈಗಾಗಲೇ ಹಲವಾರು ಚಿತ್ರಗಳಲ್ಲಿ ಅಭಿನಯಿಸಿ ಪ್ರೇಕ್ಷಕರ ಮನ ಗೆದ್ದಿದ್ದಾರೆ. ಹಾಗೆಯೇ ಸಿದ್ದು ಮೂಲಿಮನಿ ಕೂಡ ತಮ್ಮ ಅಭಿನಯ ಚತುರತೆಯನ್ನು ಪ್ರೇಕ್ಷಕರ ಮುಂದಿಟ್ಟು ತಾನೊಬ್ಬ ಒಳ್ಳೆಯ ಕಲಾವಿದ ಎನ್ನುವುದನ್ನು ನಿರೂಪಿಸಿದ್ದಾರೆ. ತಾಂತ್ರಿಕವಾಗಿ “ಧರಣಿ ಮಂಡಲ ಮಧ್ಯದೊಳಗೆ” ಚಿತ್ರದಲ್ಲಿ ಕಾರ್ಯ ನಿರ್ವಹಿಸಿದ್ದ ಬಹುತೇಕ ತಂತ್ರಜ್ಞರು ಈ ಚಿತ್ರದಲ್ಲಿ ಕೈ ಜೋಡಿಸಿದ್ದಾರೆ. ಇದನ್ನೂ ಓದಿ: ಪುತ್ರಿ ಐಶ್ವರ್ಯ ಜೊತೆ ತಿರುಪತಿ ದೇವಸ್ಥಾನಕ್ಕೆ ರಜನಿಕಾಂತ್ ಭೇಟಿ

    ಛಾಯಾಗ್ರಾಹಕ ನಾಗಿ ಕೀರ್ತನ್ ಪೂಜಾರಿ, ಸಂಗೀತ ನಿರ್ದೇಶಕರಾಗಿ ರೋಣದ ಬಕ್ಕೇಷ್ ಹಾಗೂ ಕಾರ್ತೀಕ್‌ ಚಿನ್ನೋಜಿ ರಾವ್ ಜಂಟಿಯಾಗಿ ಕೆಲಸ ಮಾಡುತ್ತಿದ್ದಾರೆ, ಗೀತ ರಚನೆ ಗೌಸ್ ಪೀರ್, ಸಂಕಲನಕಾರನಾಗಿ ಉಜ್ವಲ್ ಚಂದ್ರ,ಸಾಹಸ ನಿರ್ದೇಶಕನಾಗಿ ಚಂದ್ರು ಬಂಡೆ,ಪ್ರಶಾಂತ್ ಚಿತ್ರದ ಕಲೆಯ ಭಾಗದ ಜವಾಬ್ದಾರಿ ಹೊತ್ತಿದ್ದಾರೆ, ಸಂಭಾಷಣೆಗೆ  ಅಭಿನಂದನ್ ದೇಶ್ ಪ್ರಿಯ, ಪ್ರಶಾಂತ್, ಶಿವಕುಮಾರ್, ಕಡ್ಡಿಪುಡಿ ಕಾಂತರಾಜ್ ಜೊತೆಯಾಗಿದ್ದಾರೆ. ಚಿತ್ರ ಸದ್ಯದಲ್ಲೇ ಸೆಟ್ಟೇರಲಿದ್ದು ಮುಂದಿನ ದಿನಗಳಲ್ಲಿ ಚಿತ್ರತಂಡ ಚಿತ್ರದ ಬಗ್ಗೆ ಮತ್ತಷ್ಟು  ಮಾಹಿತಿ ನೀಡಲಿದೆ.

    Live Tv
    [brid partner=56869869 player=32851 video=960834 autoplay=true]

  • ʻಗಟ್ಟಿಮೇಳʼ ನಟಿ ಜೊತೆ ಎಂಗೇಜ್‌ಮೆಂಟ್‌ ಮಾಡಿಕೊಂಡ ಸಿದ್ದು ಮೂಲಿಮನಿ

    ʻಗಟ್ಟಿಮೇಳʼ ನಟಿ ಜೊತೆ ಎಂಗೇಜ್‌ಮೆಂಟ್‌ ಮಾಡಿಕೊಂಡ ಸಿದ್ದು ಮೂಲಿಮನಿ

    `ಸತ್ಯ’ ಧಾರಾವಾಹಿಯ ನಟ ಸಾಗರ್ ಗೌಡ ಎಂಗೇಜ್ ಆದ ಬೆನ್ನಲ್ಲೇ ಕಿರುತೆರೆಯ ಮತ್ತೊಂದು ಜೋಡಿ ಹೊಸ ಬಾಳಿಗೆ ಕಾಲಿಡಲು ರೆಡಿಯಾಗಿದ್ದಾರೆ. `ಪಾರು’ (Paaru Serial) ಸೀರಿಯಲ್ ನಟ ಸಿದ್ದು (Siddu Moolimani) ಜೊತೆ ಪ್ರಿಯಾ ಜೆ ಆಚಾರ್ (Priya J Achar) ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

    `ಪಾರು’ ಸೀರಿಯಲ್ ಮೂಲಕ ಮನೆ ಮಾತಾದ ನಟ ಸಿದ್ದು ಮೂಲಿಮನಿ ನವೆಂಬರ್ 20ರಂದು ಗಟ್ಟಿಮೇಳ ಧಾರಾವಾಹಿ ನಟಿ ಪ್ರಿಯಾ ಜೊತೆ ಎಂಗೇಜ್‌ಮೆಂಟ್ ಮಾಡಿಕೊಂಡಿದ್ದಾರೆ. ಡ್ಯಾನ್ಸ್ ಶೋವೊಂದರಲ್ಲಿ ಪರಿಚಿತರಾದ ಈ ಜೋಡಿ ಆ ನಂತರ `ಧಮಾಕ’ ಚಿತ್ರದಲ್ಲಿ ಒಟ್ಟಿಗೆ ನಟಿಸಿದ್ದರು. ಈ ವೇಳೆ ಸ್ನೇಹ ಬೆಳೆದು, ಪ್ರೀತಿಗೆ ತಿರುಗಿದೆ. ಆ ನಂತರದಲ್ಲಿ ಗುರುಹಿರಿಯರ ಒಪ್ಪಿಗೆ ಪಡೆದು, ಇದೀಗ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಸದ್ಯ ಈ ಜೋಡಿ ಹಸೆಮಣೆ ಏರಲಿದ್ದಾರೆ.

    ಸಿದ್ದು ಮೂಲಿಮನಿ ಕನ್ನಡದ ಸಾಕಷ್ಟು ಸಿನಿಮಾಗಳಿಗೆ ಬಣ್ಣ ಹಚ್ಚಿದ್ದಾರೆ. ಧಮಾಕ, ವಿಕ್ರಾಂತ್‌ರೋಣ, ರಂಗಿತರಂಗ ಚಿತ್ರಗಳಲ್ಲಿ ನಟಿಸಿದ್ದಾರೆ. ಇನ್ನೂ ಪ್ರಿಯಾ `ಗಟ್ಟಿಮೇಳ’ ಸೀರಿಯಲ್ ಜೊತೆ ಪರಭಾಷೆ ಧಾರಾವಾಹಿಯಲ್ಲೂ ಕಾಣಿಸಿಕೊಳ್ಳುತ್ತಿದ್ದಾರೆ. ಇದನ್ನೂ ಓದಿ:‘ಕಾಮಿಡಿ ಕಿಲಾಡಿ’ ನಯನಾ ವಿರುದ್ಧ ಜೀವ ಬೆದರಿಕೆ ದೂರು ದಾಖಲು

    View this post on Instagram

     

    A post shared by Siddu Moolimani (@sidmoolimani)

    ನಟಿ ಪ್ರಿಯಾ ಹುಟ್ಟುರಾದ ದಾವಣಗೆರೆಯಲ್ಲಿ ಎಂಗೇಜ್‌ಮೆಂಟ್ ನಡೆದಿದೆ. ಈ ಸಂಭ್ರಮಕ್ಕೆ ಪಾರಾ ಮತ್ತು ಗಟ್ಟಿಮೇಳ ಸೀರಿಯಲ್ ತಂಡ ಸಾಕ್ಷಿಯಾಗಿದ್ದಾರೆ. ಹಾಗೇ ಸಾಕಷ್ಟು ನಟ ನಟಿಯರು ಕೂಡ ನವಜೋಡಿಗೆ ಶುಭಹಾರೈಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಫೇಮಸ್ ಜೋಡಿಯ ‘ಧಮಾಕ’ ಸಿನಿಮಾದಿಂದ ಬಂತು ಮತ್ತೊಂದು ಟ್ರ್ಯಾಕ್

    ಫೇಮಸ್ ಜೋಡಿಯ ‘ಧಮಾಕ’ ಸಿನಿಮಾದಿಂದ ಬಂತು ಮತ್ತೊಂದು ಟ್ರ್ಯಾಕ್

    ನ್ನಡ ಚಿತ್ರರಂಗದಲ್ಲಿ ಜನಪ್ರಿಯ ಹಾಸ್ಯನಟ ಕಾಮಿಡಿ ಕಿಲಾಡಿ ಖ್ಯಾತಿಯ ಶಿವರಾಜ್ ಕೆ.ಆರ್.ಪೇಟೆ ನಾಯಕರಾಗಿ ನಟಿಸುತ್ತಿರುವ ಧಮಾಕ ಸಿನಿಮಾದ ಮತ್ತೊಂದು ಹಾಡು ಬಿಡುಗಡೆಯಾಗಿದೆ. ಈ ಹಿಂದೆ ರಿಲೀಸ್ ಆಗಿದ್ದ ತುಕಾಲಿ ಸಿಂಗಿಂಗ್ ಗೆ ಬೇಜಾನ್ ರೆಸ್ಪಾನ್ಸ್ ಸಿಕ್ಕಿತ್ತು, ಇದೀಗ ಸಿದ್ದು ಮೂಲಿಮನಿ ಹಾಗೂ ಪ್ರಿಯಾ ಆಚಾರ್ ಭರ್ಜರಿ ಸ್ಟೆಪ್ಸ್ ಹಾಕಿರುವ ನಾನು ಹೋಗೋಕು ಮೊದ್ಲು ಎಂಬ ಹಾಡು ಬಿಡುಗಡೆಯಾಗಿದೆ.

    ನಿರ್ದೇಶಕ ಲಕ್ಷ್ಮೀ ರಮೇಶ್ ಸಾಹಿತ್ಯದ ಮೆಲೋಡಿ ಹಾಡಿಗೆ ಕಂಚಿನ ಕಂಠದ ಗಾಯಕ ವಿಜಯ್ ಪ್ರಕಾಶ್ ಹಾಗೂ ಮಾನಸ ಹೊಳ್ಳ ಧ್ವನಿಯಾಗಿದ್ದು, ವಿಕಾಸ್ ವಸಿಷ್ಠ ಸಂಗೀತ ನಿರ್ದೇಶನ ಮಾಡಿದ್ದಾರೆ. ಅದ್ಭುತ ಸಾಹಿತ್ಯ, ಸಂಗೀತ, ಕೊರಿಯೋಗ್ರಾಫಿ ಇರುವ ಹಾಡಿಗೆ ಸಿನಿರಸಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ:ಪುನೀತ್ ರಾಜ್‌ಕುಮಾರ್ ಮಾಡಬೇಕಿದ್ದ ಪಾತ್ರಕ್ಕೆ `ಪುಷ್ಪ’ ಸ್ಟಾರ್ ಫೈನಲ್

    ಪ್ರತಿಭಾನ್ವಿತ ನಿರ್ದೇಶಕ ಲಕ್ಷ್ಮೀ ರಮೇಶ್ ಧಮಾಕಾಗೆ ಆಕ್ಷನ್ ಕಟ್ ಹೇಳಿದ್ದು, ಇದು ಇವರ ಚೊಚ್ಚಲ ಸಿನಿಮಾವಾಗಿದೆ. ಕಾಮಿಡಿ ಕಿಲಾಡಿ ಶೋ ಮೂಲಕವೇ ಗುರುತಿಸಿಕೊಂಡಿರುವ ನಯನಾ ಶರತ್ ‘ಧಮಾಕ’ ಸಿನಿಮಾದಲ್ಲಿ ಶಿವರಾಜ್ ಕೆ.ಆರ್ ಪೇಟೆ ಜೊತೆ ನಟಿಸ್ತಿದ್ದಾರೆ. ಉಳಿದಂತೆ ಸಿದ್ದು ಮೂಲಿಮನಿ, ಪ್ರಿಯಾ ಆಚಾರ್, ಪ್ರಕಾಶ್‌ ತುಂಬಿನಾಡ್, ಮೋಹನ್ ಜುನೇಜಾ, ಕೋಟೆ ಪ್ರಭಾಕರ್, ಮೈಕೋ ನಾಗರಾಜ್, ಅರುಣಾ ಬಾಲರಾಜ್ ತಾರಾಗಣದಲ್ಲಿ ಕಾಣಿಸಿಕೊಂಡಿದ್ದಾರೆ. ಎಸ್‌ಆರ್ ಮೀಡಿಯಾ ಪ್ರೊಡಕ್ಷನ್ಸ್‌ ಮತ್ತು ನಂದಿ ಎಂಟರ್‌ಟೇನ್‌ಮೆಂಟ್ಸ್ ಬ್ಯಾನರ್‌ ಅಡಿಯಲ್ಲಿ ಈ ಸಿನಿಮಾ ನಿರ್ಮಾಣಗೊಂಡಿದೆ. ಹಾಲೇಶ್ ಸಿನಿಮೆಟೊಗ್ರಫಿ, ವಿನಯ್ ಕೂರ್ಗ್ ಸಂಕಲನ ಧಮಾಕಾ ಸಿನಿಮಾದಲ್ಲಿದೆ.

     

    Live Tv
    [brid partner=56869869 player=32851 video=960834 autoplay=true]

  • ಗೃಹ ಸಚಿವ ಅರಗ ಜ್ಞಾನೇಂದ್ರರಿಂದ ‘ಓಮಿನಿ’ ಸಿನಿಮಾ ಟ್ರೇಲರ್ ಬಿಡುಗಡೆ

    ಗೃಹ ಸಚಿವ ಅರಗ ಜ್ಞಾನೇಂದ್ರರಿಂದ ‘ಓಮಿನಿ’ ಸಿನಿಮಾ ಟ್ರೇಲರ್ ಬಿಡುಗಡೆ

    ಮಿನಿ ಕಾರು ಹೌದು. ಆದರೆ ಲ್ಯಾಟಿನ್ ಭಾಷೆಯಲ್ಲಿ “ಓಮಿನಿ” ಗೆ ಎಲ್ಲಾ ಎಂಬ ಅರ್ಥವಿದೆ. ಇತ್ತೀಚೆಗೆ ಈ ಚಿತ್ರದ ಟ್ರೇಲರ್ ಬಿಡುಗಡೆ ‌ಸಮಾರಂಭ ಅದ್ದೂರಿಯಾಗಿ ನಡೆಯಿತು. ಸನ್ಮಾನ್ಯ ಗೃಹಸಚಿವರಾದ ಅರಗ ಜ್ಞಾನೇಂದ್ರ ಈ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿ ಶುಭ ಕೋರಿದರು. ತೀರ್ಥಹಳ್ಳಿ ಸುಂದರವಾದ ಊರು. ಅಲ್ಲಿನ ಗಾಳಿ, ನೀರಿಗೆ ಏನೋ ಅದ್ಭುತ ಶಕ್ತಿ ಇದೆ ಅನಿಸುತ್ತದೆ. ರಾಷ್ಟ್ರಕವಿ ಕುವೆಂಪು, ಮಾಜಿ ಮುಖ್ಯಮಂತ್ರಿ ಕಡಿದಾಳ್ ಮಂಜಪ್ಪ ಅವರು ಸೇರಿದಂತೆ ಅನೇಕ ಗಣ್ಯರು ನಮ್ಮ ತಾಲ್ಲೂಕಿನವರು ಎಂದು ಹೇಳಿಕೊಳ್ಳಲು ಹೆಮ್ಮೆಯಾಗುತ್ತದೆ. ಈ “ಓಮಿನಿ” ಚಿತ್ರದ ನಿರ್ದೇಶಕ ಮಂಜು ಕೂಡ ನಮ್ಮೂರಿನವರು.  ಇವರೆಲ್ಲಾ ಬಂದು ನನ್ನನ್ನು ಸಮಾರಂಭಕ್ಕೆ ಆಹ್ವಾನಿಸಿದಾಗ ಬರಲ್ಲ ಎಂದು ಹೇಳಲು ಆಗಲಿಲ್ಲ. ಅವರೆಲ್ಲರ ಪ್ರೀತಿ ನನ್ನ ಇಲ್ಲಿಯವರೆಗೂ ಕರೆತಂದಿದೆ. ಚಿತ್ರಕ್ಕೆ ಒಳ್ಳೆಯದಾಗಲಿ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹಾರೈಸಿದರು.

    ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾ.ಮ.ಹರೀಶ್, ರವಿಸಿಂಗ್ ಮುಂತಾದ ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು. “ಓಮಿನಿ” ಎಂದರೆ ಲ್ಯಾಟಿನ್ ಭಾಷೆಯಲ್ಲಿ ಎಲ್ಲಾ ಎಂದು ಅರ್ಥ. ಆದರೆ “ಓಮಿನಿ” ಕಾರ್ ಸಹ ನಮ್ಮ ಚಿತ್ರದಲ್ಲಿ ಪ್ರಮುಖ ಪಾತ್ರವಹಿಸಿದೆ. ಇಂದು ಟ್ರೇಲರ್ ಬಿಡುಗಡೆಯಾಗಿದೆ. ಆಗಸ್ಟ್ 19 ರಂದು ಚಿತ್ರ ತೆರೆಗೆ ಬರಲಿದೆ‌. ಇದು ನನ್ನ ಪಾಲಿಗೆ ಅತೀ ದೊಡ್ಡ ಸಮಾರಂಭ. ನಮ್ಮೂರಿನವರೇ ಆದ ಸನ್ಮಾನ್ಯ‌ ಗೃಹ ಸಚಿವರು ಈ ಕಾರ್ಯಕ್ರಮಕ್ಕೆ ಬಂದಿದ್ದಾರೆ. ನನ್ನ ಬಾಯಲ್ಲಿ ಪದಗಳೇ ಹೊರಡುತ್ತಿಲ್ಲ.‌ ಗೃಹ ಸಚಿವರಿಗೆ ಎಷ್ಟು ಕಾರ್ಯದೊತ್ತಡ ಇರುತ್ತದೆ ಎಂಬುದು ಎಲ್ಲರಿಗೂ ಗೊತ್ತು. ಅಂತಹ ಬಿಡುವಿಲ್ಲದ ಕಾರ್ಯದೊತ್ತಡದ ನಡುವೆ ಈ ಕಾರ್ಯಕ್ರಮಕ್ಕೆ ಬಂದು ಹಾರೈಸಿರುವುದು ತುಂಬಾ ಸಂತೋಷವಾಗುತ್ತಿದೆ. ನಾನು ನಿರ್ದೇಶನದೊಂದಿಗೆ ಹಲವು ಜವಾಬ್ದಾರಿ ಹೊತ್ತುಕೊಂಡಿದ್ದೀನಿ. ಪ್ರಮುಖಪಾತ್ರದಲ್ಲೂ ಕಾಣಿಸಿಕೊಂಡಿದ್ದೀನಿ ಎಂದರು ನಿರ್ದೇಶಕ ಮಂಜು ಹೆದ್ದೂರ್. ಇದನ್ನೂ ಓದಿ:ಬ್ರೇಕಪ್ ನಂತರ ಸ್ಟಾರ್ ನಟಿ ಸಹೋದರನ ಜೊತೆ ಇಲಿಯಾನಾ ಡೇಟಿಂಗ್

    ಇದೊಂದು ವಿಭಿನ್ನ ಕಥೆಯ ಚಿತ್ರ. ಚಿತ್ರವೊಂದರಲ್ಲಿ ಚಿತ್ರವನ್ನು ತೋರಿಸುವ ಪ್ರಯತ್ನ ಮಾಡಿದ್ದೇವೆ. ಲವ್, ಸಸ್ಪೆನ್ಸ್, ಹಾರಾರ್ ಎಲ್ಲಾ‌ ಅಂಶಗಳು ನಮ್ಮ ಚಿತ್ರದಲ್ಲಿದೆ.‌ ನಮ್ಮ ಚಿತ್ರದಲ್ಲಿ “ಓಮಿನಿ” ಪ್ರಮುಖಪಾತ್ರ ವಹಿಸುತ್ತದೆ. ತೀರ್ಥಹಳ್ಳಿಯ ಸುಂದರ ಪರಿಸರದಲ್ಲೇ ಹೆಚ್ಚು ಚಿತ್ರೀಕರಣ ನಡೆದಿದೆ‌. ಅತೀ ದೊಡ್ಡದಾದ ದಾವಣಗೆರೆಯ ಗ್ಲಾಸ್ ಹೌಸ್ ನಲ್ಲಿ ಚಿತ್ರೀಕರಣವಾಗಿರುವುದು ವಿಶೇಷ.  ಆಗಸ್ಟ್ 19 ರಂದು ರಾಜ್ಯಾದ್ಯಂತ “ಓಮಿನಿ” ಸಂಚಾರ ಆರಂಭವಾಗಲಿದೆ.  ಇದು ನಾನು ನಾಯಕನಾಗಿ ನಟಿಸಿರುವ ಮೊದಲ ಚಿತ್ರ. ನೋಡಿ. ಹಾರೈಸಿ ಎಂದರು ನಾಯಕ ಸಿದ್ದು ಮೂಲಿಮನಿ.

    ಹಲವು ವರ್ಷಗಳ ನಂತರ ಕನ್ನಡ ಚಿತ್ರವೊಂದರಲ್ಲಿ ನಟಿಸಿದ್ದೇನೆ. ಒಳ್ಳೆಯ ಪಾತ್ರ‌ ನೀಡಿದ್ದಾರೆ.‌ ನಾನು ಮಲೆನಾಡ ಹುಡುಗಿ. ಅದೇ ಊರಿನ ಹುಡುಗಿ ಪಾತ್ರ ಸಿಕ್ಕಿರುವುದು ಖುಷಿಯಾಗಿದೆ ಎಂದರು ನಾಯಕಿ ಅಶ್ವಿನಿ ಚಂದ್ರಶೇಖರ್. ಗೀತರಚನೆಕಾರ ಪ್ರಮೋದ್ ಮರವಂತೆ ಸೇರಿದಂತೆ ಅನೇಕ ಚಿತ್ರತಂಡದ ಸದಸ್ಯರು ಹಾಗೂ ಗಣ್ಯರು “ಓಮಿನಿ” ಬಗ್ಗೆ ಮಾತನಾಡಿದರು.  ಶ್ರೀ ಬೆಳ್ಳುಡಿ ಫಿಲಂಸ್ ಹಾಗೂ ಎಸ್ ಆರ್ ಗ್ರೂಪ್ಸ್ ಲಾಂಛನದಲ್ಲಿ ಈ ಚಿತ್ರ ನಿರ್ಮಾಣವಾಗಿದೆ. ಮಂಜು ಹೆದ್ದೂರ್ ಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಅರ್ಜುನ್ ರಾಮು ಸಂಗೀತ ನಿರ್ದೇಶನ ಹಾಗೂ ಎಂ.ಬಿ.ಅಳ್ಳಿಕಟ್ಟಿ ಛಾಯಾಗ್ರಹಣ ಈ ಚಿತ್ರಕ್ಕಿದೆ. ಸಿದ್ದು ಮೂಲಿಮನಿ, ಪೂಜಾ ಜನಾರ್ದನ, ಅಶ್ವಿನಿ ಚಂದ್ರಶೇಖರ್, ಭರತ್‌ ಬೋಪ್ಪಣ್ಣ, ಮಂಜು ಹೆದ್ದೂರ್, ಆಕಾಂಕ್ಷ ಪಟಮಕ್ಕಿ, ಮೋಹನ್ ಜುನೇಜ, ಪ್ರಕಾಶ್ ತುಮ್ಮಿನಾಡು, ಮನಸ್ವಿತ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

    Live Tv
    [brid partner=56869869 player=32851 video=960834 autoplay=true]