Tag: Sidramulla Khan

  • ಸಿದ್ರಾಮುಲ್ಲಾ ಖಾನ್‌ ಬಿರುದು ನಾವಲ್ಲ, ಜನರೇ ನೀಡಿದ್ದಾರೆ – ಸಿದ್ದುಗೆ ಬಿಜೆಪಿ ಟಾಂಗ್‌

    ಸಿದ್ರಾಮುಲ್ಲಾ ಖಾನ್‌ ಬಿರುದು ನಾವಲ್ಲ, ಜನರೇ ನೀಡಿದ್ದಾರೆ – ಸಿದ್ದುಗೆ ಬಿಜೆಪಿ ಟಾಂಗ್‌

    ಬೆಂಗಳೂರು: ಸಿದ್ದರಾಮಯ್ಯ (Siddaramaiah) ಅವರನ್ನು ಸಿದ್ರಾಮುಲ್ಲಾ ಖಾನ್‌ (Sidramulla Khan) ಎಂದು ಕರೆದಿರುವ ಸಿ.ಟಿ.ರವಿ (C.T.Ravi) ಅವರ ಹೇಳಿಕೆಯನ್ನು ಬಿಜೆಪಿ (BJP) ಸಮರ್ಥಿಸಿಕೊಂಡಿದೆ. ಸಿದ್ರಾಮುಲ್ಲಾ ಖಾನ್‌ ಎಂಬ ಬಿರುದನ್ನು ನಾವಲ್ಲ, ಜನರೇ ನೀಡಿದ್ದಾರೆ ಎಂದು ಸರಣಿ ಟ್ವೀಟ್‌ಗಳ ಮೂಲಕ ಸಿದ್ದು ವಿರುದ್ಧ ಬಿಜೆಪಿ ಕಿಡಿಕಾರಿದೆ.

    ಬಿಜೆಪಿ ಟ್ವೀಟ್‌ನಲ್ಲೇನಿದೆ?
    ಹಿಜಾಬ್‌‌ ಸಮರ್ಥನೆಗೆ ಸ್ವಾಮೀಜಿಗಳು ಹಿಜಾಬ್ ಹಾಕಲ್ವಾ, ಹಿಂದೂ ಮಹಿಳೆಯರು ದುಪಟ್ಟಾ ಹಾಕಲ್ವಾ ಎಂದು ಎಲ್ಲದರಲ್ಲೂ ಹಿಜಾಬನ್ನೇ ಕಂಡ ಮೌಲ್ವಿ ನಮ್ಮ ಸಿದ್ರಾಮುಲ್ಲಾ ಖಾನ್. ಗೋ ಹತ್ಯೆಯಾದರೂ ಬೀಫ್ ಮಾರ್ಕೆಟ್ ನಿಲ್ಲಬಾರದೆಂದ ಹರಿಕಾರ‌ ಸಿದ್ದರಾಮಯ್ಯ. ಇಂಥವರು ಖಾನ್ ಆಗದೇ ಕೇಶವ ಆಗಲು ಸಾಧ್ಯವೇ? ಇದನ್ನೂ ಓದಿ: ಸಿದ್ರಾಮುಲ್ಲಾ ಖಾನ್ ಹೇಳಿಕೆಯಿಂದ ಇಷ್ಟು ಉರಿಯುತ್ತೆ ಅಂದಿದ್ರೆ 10 ವರ್ಷದ ಮೊದಲೇ ಹೇಳ್ತಿದ್ದೆ – CT ರವಿ

    26/11 ಮುಂಬೈ ದಾಳಿಯಲ್ಲಿ ಸಾರ್ವಜನಿಕರ ಪ್ರಾಣ ಉಳಿಸಲು ಪ್ರಾಣಾರ್ಪಣೆ ಮಾಡಿದ ಮೇಜರ್ ಸಂದೀಪ್‌ ಉನ್ನಿಕೃಷ್ಣನ್‌‌ರವರ ವೀರಗಾಥೆಯುಳ್ಳ “ಕರಾಳ ರಾತ್ರಿ” ಪಾಠವನ್ನು ಕೈಬಿಟ್ಟವರು ತಾವು. ರಾಷ್ಟ್ರೀಯತೆಯ ಪರಮ ವಿರೋಧಿ ಸಿದ್ದರಾಮಯ್ಯ, ಹೀಗಿರುವಾಗ ತಮ್ಮನ್ನು ಸಿದ್ರಾಮುಲ್ಲಾ ಖಾನ್‌ ಎಂದು ಕರೆಯದೆ ಬೇರೆ ಬಿರುದು ಕೊಟ್ಟಾರೆಯೇ?

    ನಳಂದಾ ವಿಶ್ವವಿದ್ಯಾಲಯವನ್ನು ಸುಟ್ಟು ಸರ್ವನಾಶ ಮಾಡಿದ್ದು ಇಸ್ಲಾಮಿಕ್‌ ಭಯೋತ್ಪಾದನೆ ಎಂಬುದನ್ನು ಒಪ್ಪದ ಸಿದ್ದರಾಮಯ್ಯ, ಆ ಇತಿಹಾಸವನ್ನು ಮರೆಮಾಚಲು ಯತ್ನಿಸಿದರು. ಇಂದಿಗೂ ಇಸ್ಲಾಮಿಕ್‌ ಭಯೋತ್ಪಾದನೆಯ ಕ್ರೌರ್ಯವನ್ನು ಒಪ್ಪದೇ ಮುಘಲ್ ಆಕ್ರಮಣಕಾರರ ಮಾನಸಿಕತೆಯಲ್ಲಿರುವ ಕಾರಣಕ್ಕೆ ಜನರೇ ಸಿದ್ರಾಮುಲ್ಲಾ ಖಾನ್‌ ಬ್ರಾಂಡ್ ಮಾಡಿರುವುದು. ಇದನ್ನೂ ಓದಿ: ಮೈದಾನ ಖಾಲಿ ಇದೆ, ನಾವೂ ತಯಾರಿದ್ದೇವೆ ನೀವು ಅಖಾಡಕ್ಕೆ ಧುಮುಕಿ – ಪರೋಕ್ಷವಾಗಿ ಜಾರಕಿಹೊಳಿಗೆ ಲಕ್ಷ್ಮೀ ಹೆಬ್ಬಾಳ್ಕರ್ ಆಹ್ವಾನ

    ಟಿಪ್ಪು ಎಕ್ಸ್‌ಪ್ರೆಸ್‌ ಎಂಬ ಹೆಸರನ್ನು ಬದಲಾಯಿಸಿ ಜನ ಇಂದಿಗೂ ಸ್ಮರಿಸುವ-ಆರಾಧಿಸುವ ‘ಒಡೆಯರ್’‌ ಎಕ್ಸ್‌ಪ್ರೆಸ್‌ ಎಂದು ಕರೆದಾಗ ನಿಮಗೆ ಆದ ಅಸಹನೆಯನ್ನು ನಾಡಿನ ಜನ ಕಂಡಿದ್ದಾರೆ ಸಿದ್ದರಾಮಯ್ಯ. ಟಿಪ್ಪುವಿನ ಆಸ್ಥಾನ ವಿದೂಷಕರಂತಾಗಿರುವ ತಮ್ಮನ್ನು ಸಿದ್ರಾಮುಲ್ಲಾ ಖಾನ್‌ ಎನ್ನದೇ ಮೋಸ ಮಾಡುವ ಮೀರ್ ಸಾದಿಕ್ ಎನ್ನಬಹುದೆ?

    ದೇಶಾದ್ಯಂತ ಮತಾಂಧತೆಯನ್ನು ಪಸರಿಸುತ್ತಾ ಅಲ್ಲಲ್ಲಿ ಭಯೋತ್ಪಾದಕ ದಾಳಿ ನಡೆಸಲು ಹೊಂಚು ಹಾಕುತ್ತಿದ್ದ ಪಿಎಫ್‌ಐನ 175 ಗೂಂಡಾಗಳ ಮೇಲಿದ್ದ ಕೇಸುಗಳನ್ನು ವಿಚಾರಣೆಯಿಲ್ಲದೆ ಹಿಂಪಡೆದದ್ದಕ್ಕಾಗಿ ವಿಚಾರವಾದಿ ಸಿದ್ದರಾಮಯ್ಯಗೆ ಸಿದ್ರಾಮುಲ್ಲಾ ಖಾನ್‌ ಎಂಬ ಬಿರುದನ್ನು ನಾವಲ್ಲ, ಜನರೇ ನೀಡಿದ್ದಾರೆ.

    ಕ್ಷಣವೂ ವಿವೇಚಿಸದೆ ತಲಾಖ್‌ ಎಂದು ಮಹಿಳೆಯರ ಬದುಕು ಬರ್ಬಾದ್‌ ಮಾಡುವ ಮನಸ್ಥಿತಿಯವರಿಗೆ ಬೆನ್ನುತಟ್ಟುವ ಶಾದಿ ಭಾಗ್ಯ ಕಲ್ಪಿಸಿದ್ದು ಸಿದ್ದರಾಮಯ್ಯ. ಕೇವಲ ಒಂದು ಸಮುದಾಯದ ಓಲೈಕೆ ಮಾಡಲು ಸೆಕ್ಯುಲರಿಸಂ ಹೆಸರಿನಲ್ಲೇ ತುಷ್ಟೀಕರಣಕ್ಕಿಳಿದಿರಿ. ಇಂಥವರನ್ನು ಸಿದ್ರಾಮುಲ್ಲಾ ಖಾನ್‌ ಎನ್ನದೆ ಮತ್ತೇನೆಂದು ಕರೆದಾರು? ಇದನ್ನೂ ಓದಿ: ದೇಶದ್ರೋಹಿ ಚಟುವಟಿಕೆ ಮಾಡುವವರಿಗೆ ಮುಸ್ಲಿಂ ಮುಖಂಡರೇ ಬುದ್ಧಿ ಹೇಳಬೇಕು: ಬಿ.ವೈ.ರಾಘವೇಂದ್ರ

    ತಮ್ಮವರನ್ನೇ ತುಳಿಯುವ ಸಿದ್ದರಾಮಯ್ಯರ ಮನಸ್ಥಿತಿ ಕಂಡು ದೇವೇಗೌಡರು ಅಂದೇ ಅವರನ್ನು ಹೊರಹಾಕಿದರು. ಆಗ ಕಾಂಗ್ರೆಸ್‌ ಸೇರಲು ಬಲಪ್ರದರ್ಶನದ ಅಗತ್ಯ ಬಂತು. ಹಾಗಾಗಿ ಅಹಿಂದ ಎಂಬ ಏಣಿ ಕಟ್ಟಿ ನಂತರ ಅಲ್ಪಸಂಖ್ಯಾತರ ಓಲೈಕೆಗಾಗಿ ಹಿಂದುಳಿದವರು & ದಲಿತರನ್ನು ಹತ್ತಿದ ಏಣಿ ತುಳಿಯುವಂತೆ ಎಡಗಾಲಲ್ಲಿ ತುಳಿದದ್ದನ್ನು ಜನ ಮರೆತಿಲ್ಲ.

    ಕನ್ನಡಿಗರು ಸಿದ್ದರಾಮಯ್ಯರನ್ನು ಸಿದ್ರಾಮುಲ್ಲಾ ಖಾನ್‌ ಎಂದು ವಿನಾಕಾರಣ ಕರೆಯುತ್ತಿಲ್ಲ. ಸರ್ವಜನಾಂಗದ ಶಾಂತಿಯ ತೋಟಕ್ಕೆ ಮತಾಂಧ ಟಿಪ್ಪುವನ್ನು ನುಗ್ಗಿಸಿ, ನಮ್ಮ ನಾಡಿನ ಅಸ್ಮಿತೆಗೆ ಕೊಳ್ಳಿಯಿಟ್ಟ ಪೆಡಂಭೂತದ ಜಯಂತಿಯನ್ನು ಸರಕಾರಿ ಆಚರಣೆಯಾಗಿ ತಂದವರು ಅವರು. ಇಂಥವರು ಸಿದ್ರಾಮುಲ್ಲಾ ಖಾನ್ ಅಲ್ಲದೇ ಇನ್ಯಾರು ಎಂದು ಬಿಜೆಪಿ ಖಾರವಾಗಿ ಪ್ರಶ್ನಿಸಿದೆ.

    Live Tv
    [brid partner=56869869 player=32851 video=960834 autoplay=true]

  • ಸಿದ್ರಾಮುಲ್ಲಾ ಖಾನ್ ಹೇಳಿಕೆಯಿಂದ ಇಷ್ಟು ಉರಿಯುತ್ತೆ ಅಂದಿದ್ರೆ 10 ವರ್ಷದ ಮೊದಲೇ ಹೇಳ್ತಿದ್ದೆ – CT ರವಿ

    ಸಿದ್ರಾಮುಲ್ಲಾ ಖಾನ್ ಹೇಳಿಕೆಯಿಂದ ಇಷ್ಟು ಉರಿಯುತ್ತೆ ಅಂದಿದ್ರೆ 10 ವರ್ಷದ ಮೊದಲೇ ಹೇಳ್ತಿದ್ದೆ – CT ರವಿ

    ಚಿಕ್ಕಮಗಳೂರು: ಸಿದ್ರಾಮುಲ್ಲಾ ಖಾನ್ (Sidramulla Khan) ಎಂದು ಹೇಳುತ್ತಿದ್ದಂತೆ ಕಾಂಗ್ರೆಸ್ಸಿಗರಿಗೆ ಏಕೆ ಹೀಗೆ ಮೈ ಉರಿಯುತ್ತಿದೆ. ಹೀಗೆ ಉರಿಯುತ್ತೆ ಅಂತಾ ಗೊತ್ತಾಗಿದ್ದರೇ 10 ವರ್ಷದ ಮೊದಲೇ ಹೇಳುತ್ತಿದ್ದೆ ಎಂದು ಬಿಜೆಪಿ (BJP) ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ (CT Ravi) ಮತ್ತೆ ಲೇವಡಿ ಮಾಡಿದ್ದಾರೆ.

    ಚಿಕ್ಕಮಗಳೂರಿನ ಬಸವನಹಳ್ಳಿಯಲ್ಲಿರುವ ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, `ಸಿದ್ರಾಮುಲ್ಲಾ ಖಾನ್’ ಹೇಳಿಕೆಯನ್ನ ಸಮರ್ಥಿಸಿಕೊಂಡಿದ್ದಾರೆ. ಸಿದ್ರಾಮುಲ್ಲಾ ಖಾನ್ ಅನ್ನೋದು ಬೈಗುಳವಾ? ಅದು ಬೈಗುಳ ಅಲ್ಲಾ. ನಿಮಗೆ ಉರಿ ಹತ್ತಿದ್ಯಾಕೆ ಎಂದು ಕಾಂಗ್ರೆಸ್ಸಿಗರಿಗೆ (Congress Leaders) ಕಿಚಾಯಿಸಿದ್ದಾರೆ. ನೀವು ದೇಶದ ಪ್ರಧಾನಿಗೆ (PrimeMinister Of India) ಕೊಲೆಗಡುಕ, ನರಹಂತಕ, ರಾವಣ, ಭಸ್ಮಾಸುರ ಎಂದೆಲ್ಲಾ ಕರೆದ್ರಿ. ಸಿದ್ರಾಮುಲ್ಲಾ ಖಾನ್ ಎಂಬ ಒಂದೇ ಒಂದು ಹೇಳಿಕೆಗೆ ಉರಿ ಹತ್ತಿಸಿಕೊಂಡಿದ್ದಾರೆ ಎಂದು ಟೀಕಿಸಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ ಹೆಸರು ದೇವರ ಹೆಸರಿನಿಂದ ಬಂದಿದೆ, ಟೀಕಿಸಿದ್ರೆ ಹುಷಾರ್: ಎಂ.ಬಿ ಪಾಟೀಲ್

    `ಸಿದ್ರಾಮುಲಾ ಖಾನ್’ ನಿಮ್ಮ ಭಾವನೆಗೆ ಕೊಟ್ಟ ಬಿರುದು ಎಂದು ತಿಳಿಯಬಹುದಿತ್ತು. ಯಡಿಯೂರಪ್ಪನವರಿಗೆ ರಾಜಾಹುಲಿ ಅಂತಾರೆ. ಸಿದ್ದರಾಮಯ್ಯನವರಿಗೆ ಹುಲಿಯಾ ಅಂತಾರೆ. ಹಾಗೆ ಇದು ಕೂಡ ಒಂದು ಬಿರುದು. ನಾನಂತು ಹಿಂದೂಗಳಿಗೆ ಅನ್ಯಾಯ ಮಾಡಿದ್ದೆ, ದತ್ತಪೀಠಕ್ಕೆ ಅನ್ಯಾಯ ಮಾಡಿದ್ದೆ. ಟಿಪ್ಪು ಜಯಂತಿ ಪರ ಇದ್ದೆ ಎಂದು ಜನ ಕೊಟ್ಟ ಬಿರುದು ಅಂತಾ ಭಾವಿಸುತ್ತಾರೆ ಅಂದುಕೊಂಡಿದ್ದೆ ಎಂದು ಕುಟುಕಿದ್ದಾರೆ. ಇದನ್ನೂ ಓದಿ: ರೆಡ್ಡಿ ಮೊಮ್ಮಗಳ ನಾಮಕರಣಕ್ಕೆ ರಾಮುಲು ಗೈರು- ಮುರಿದು ಬಿತ್ತಾ ದಶಕಗಳ ಗೆಳೆತನದ ನಂಟು..?

    ನಾವು ಪ್ರತಿಭಟನೆ ಪ್ರಾರಂಭಿಸಿದ್ರೆ ಸಿ.ಟಿ ರವಿ ಎಲ್ಲೂ ಓಡಾಡೋಕೆ ಆಗಲ್ಲ ಅನ್ನೋ ಎಂ.ಬಿ ಪಾಟೀಲ್ (MB Patil) ಹೇಳಿಕೆಗೆ ಪ್ರತಿಕ್ರಿಯಿಸಿ, ಅವರೇನು ಬೆದರಿಕೆ ಹಾಕ್ತಾರಾ. ಪ್ರಜಾಪ್ರಭುತ್ವದಲ್ಲಿ ಈ ಬೆದರಿಕೆ ನಡೆಯಲ್ಲ. ಅವರು ಶ್ರೀಮಂತರೇ ಇರಬಹುದು, ಪಾಳೇಗಾರರೇ ಇರಬಹುದು. ನಾನೊಬ್ಬ ಸಾಮಾನ್ಯ ರೈತನ ಮಗ, ಪಾಳೇಗಾರ ಮನೆತನದವನಲ್ಲ. ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಅಂಬೇಡ್ಕರ್ ಕೊಟ್ಟಿದ್ದು ಒಂದೇ ಒಂದು ವೋಟು. ಈ ಪಾಳೇಗಾರಿಕೆ ಮನಸ್ಥಿತಿಯನ್ನು ಎಂ.ಬಿ.ಪಾಟೀಲರು ಬದಲಾಯಿಸಿಕೊಳ್ಳಬೇಕು. ನೀವು ಮನಸ್ಥಿತಿ ಬದಲಾಯಿಸಿಕೊಳ್ಳದಿದ್ದರೆ ನಿಮ್ಮ ಚಾಲೆಂಜ್ ಸ್ವೀಕರಿಸುತ್ತೇನೆ. ನಿಮ್ಮೂರಿಗೆ ಬರ್ತೀನಿ. ನಾನು ಏನ್ ಹೇಳಬೇಕು ಅಂದುಕೊಂಡಿದ್ದೇನೋ ಅದನ್ನ ನಿಮ್ಮೂರಿನಲ್ಲೇ ಹೇಳ್ತೀನಿ. ನಿಮ್ಮ ಮುಖದ ಎದುರೇ ಹೇಳ್ತೀನಿ ಎಂದು ತಿರುಗೇಟು ನೀಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]