ಶಿವಮೊಗ್ಗ: ಸಿಗಂದೂರು (Sigandur) ಬಳಿಯ ಕೂರನಕೊಪ್ಪದ ಬಳಿ ಪ್ರವಾಸಿಗರಿದ್ದ ಟಿಟಿ ವಾಹನ ಪಲ್ಟಿಯಾಗಿ (Accident) 12 ಮಹಿಳೆಯರು ಹಾಗೂ ಚಾಲಕ ಗಾಯಗೊಂಡಿದ್ದಾರೆ. ಇವರೆಲ್ಲ ಬೆಂಗಳೂರಿನಿಂದ (Bengaluru) ಸಿಗಂದೂರು ಚೌಡೇಶ್ವರಿ ದರ್ಶನಕ್ಕೆ ಆಗಮಿಸಿದ್ದರು.
ಬೆಂಗಳೂರಿನಿಂದ ರೈಲಿನ ಮೂಲಕ ಸಾಗರಕ್ಕೆ 12 ಮಹಿಳೆಯರ ತಂಡ ಬಂದಿತ್ತು. ಅಲ್ಲಿಂದ ಟಿಟಿ ವಾಹನ ಮಾಡಿಕೊಂಡು ಸಿಗಂದೂರು ಚೌಡೇಶ್ವರಿ ದರ್ಶನಕ್ಕೆ ಹೋಗುತ್ತಿದ್ದರು. ಈ ವೇಳೆ ಕೂರನಕೊಪ್ಪ ಸಮೀಪದಲ್ಲಿ ಟಿಟಿ ವಾಹನಪಲ್ಟಿಯಾಗಿದೆ.
12 ಮಹಿಳೆಯರಲ್ಲಿ ಮೂರು ಮಹಿಳೆಯರಿಗೆ ಗಂಭೀರ ಗಾಯವಾಗಿದೆ. ಸಾಗರ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಲಾಗಿದೆ. ನಂತರ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅಪಘಾತ ನಡೆದಿದೆ.
ಶಿವಮೊಗ್ಗ: ಪ್ರವಾಸಿಗರನ್ನು ಸೆಳೆಯಲು ಸಿಗಂದೂರು (Sigandur) ಸಮೀಪ ಲಿಂಗನಮಕ್ಕಿ ಜಲಾಶಯದ ಹಿನ್ನೀರಿನ (Sharavati Backwater) ಭಾಗದಲ್ಲಿ ವಾಟರ್ ಏರೋಡ್ರೋಮ್ (Water Aerodrome Project) ಸ್ಥಾಪಿಸಲು ಕೇಂದ್ರ ವಿಮಾನಯಾನ ಸಚಿವಾಲಯ ಯೋಜಿಸಿದೆ.
ಕರ್ನಾಟಕದ 7 ಕಡೆ ಉಡಾನ್ ಯೋಜನೆ ಅಡಿ ವಾಟರ್ ಏರೋ ಡ್ರೋಮ್ ಸ್ಥಾಪಿಸಲು ಸ್ಥಳ ಗುರುತಿಸಲಾಗಿದೆ. ಉಡುಪಿಯ ಬೈಂದೂರು, ಮಲ್ಪೆ, ಉತ್ತರ ಕನ್ನಡ ಜಿಲ್ಲೆಯ ಸೂಪಾ ಡ್ಯಾಮ್‌ನ ಗಣೇಶಗುಡಿ, ಮೈಸೂರಿನ ಕಬಿನಿ ಹಿನ್ನೀರು, ಕಾರವಾರದ ಕಾಳಿ ನದಿ ಸೇತುವೆ ಸಮೀಪ, ಮಂಗಳೂರು ಮತ್ತು ಸಿಗಂದೂರು ಸಮೀಪ ವಾಟರ್ ಏರೋ ಡ್ರೋಮ್ ಸ್ಥಾಪನೆಗೆ ಯೋಜಿಸಲಾಗಿದೆ. ಇದನ್ನೂ ಓದಿ: ಬೆಂಗಳೂರು – ಸಿಗಂದೂರು ನಡುವೆ ಕೆಎಸ್ಆರ್‌ಟಿಸಿ ನಾನ್ ಎಸಿ ಸ್ಲೀಪರ್ ಬಸ್ ಸಂಚಾರ ಆರಂಭ
ಏನಿದು ವಾಟರ್ ಏರೋಡ್ರೋಮ್?
ನೀರಿನ ಮೇಲೆ ವಿಮಾನಗಳು ಟೇಕಾಫ್ ಮತ್ತು ಲ್ಯಾಂಡಿಂಗ್ ಮಾಡಲು ನಿರ್ದಿಷ್ಟ ಸ್ಥಳ ಗುರುತಿಸಿ ವಿಮಾನ ನಿಲ್ದಾಣ ನಿರ್ಮಿಸಲಾಗುತ್ತದೆ. ಇದನ್ನು ವಾಟರ್ ಏರೋ ಡ್ರೋಮ್ ಎನ್ನಲಾಗುತ್ತದೆ. ಸಾಮಾನ್ಯವಾಗಿ ವಿಸ್ತಾರವಾದ ನದಿಗಳು, ಜಲಾಶಯಗಳ ಹಿನ್ನೀರು ಭಾಗ, ಕರಾವಳಿ ಪ್ರದೇಶಗಳಲ್ಲಿ ವಾಟರ್ ಏರೋಡ್ರೋಮ್ ನಿರ್ಮಿಸಲಾಗುತ್ತದೆ. ಉಡಾನ್ 5.5 ಯೋಜನೆ ಅಡಿ ವಾಟರ್ ಏರೋಡ್ರೋಮ್‌ಗೆ ಟೆಂಡರ್ ಪ್ರಕ್ರಿಯೆ ಆರಂಭವಾಗಿದೆ. ಕರ್ನಾಟಕದ 7 ಸ್ಥಳಗಳ ಪೈಕಿ ಈಗಾಗಲೇ ಕಬಿನಿ ಮತ್ತು ಮಂಗಳೂರಿನಲ್ಲಿ ವಾಟರ್ ಏರೋ ಡ್ರೋಮ್ ಸ್ಥಾಪನೆಗೆ ಕಂಪನಿಗಳು ಮುಂದೆ ಬಂದಿವೆ. ಉಳಿದೆಡೆಗೆ ಟೆಂಡರ್ ಪ್ರಕ್ರಿಯೆ ಮುಂದುವರಿದಿದೆ.
ಸಿಗಂದೂರಿಗೆ ಹೆಚ್ಚಾದ ಪ್ರವಾಸಿಗರು
ಸಿಗಂದೂರು ಚೌಡೇಶ್ವರಿ ದೇವಸ್ಥಾನಕ್ಕೆ ದೊಡ್ಡ ಸಂಖ್ಯೆಯ ಭಕ್ತರು ಆಗಮಿಸುತ್ತಾರೆ. ಈ ಹಿಂದೆ ಲಾಂಚ್‌ನಲ್ಲಿ ಶರಾವತಿ ನದಿ ದಾಟಿ ಭಕ್ತರು ದೇಗುಲಕ್ಕೆ ಹೋಗಿ ಬರುತ್ತಿದ್ದರು. ಈಗ ಸೇತುವೆ ನಿರ್ಮಾಣವಾಗಿದ್ದು, ಮತ್ತಷ್ಟು ಪ್ರವಾಸಿಗರನ್ನು ಸೆಳೆಯುತ್ತಿದೆ. ಇದರ ಮಧ್ಯೆ ಸಿಗಂದೂರು ಸೇತುವೆ ಆಚೀಚೆ ಲಾಂಚ್‌ನಲ್ಲಿಯೇ ಹೊಟೇಲ್ ಆರಂಭಿಸುವ ಕುರಿತು ಚರ್ಚೆಗಳ ಚಾಲ್ತಿಯಲ್ಲಿವೆ. ಇತ್ತ ಕೇಂದ್ರ ಸರ್ಕಾರ ಲಿಂಗನಮಕ್ಕಿ ಜಲಾಶಯದ ಹಿನ್ನೀರಿನಲ್ಲಿ ವಾಟರ್ ಏರೋಡ್ರೋಮ್ ಸ್ಥಾಪಿಸುವ ಯೋಜನೆ ರೂಪಿಸಿದ್ದು ಪ್ರವಾಸಿಗರಲ್ಲಿ ಕುತೂಹಲ ಮೂಡಿಸಿದೆ. ಇದನ್ನೂ ಓದಿ: ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ – ಪೊಲೀಸರಿಂದ ಪುಂಡನಿಗೆ ದಂಡದ ರುಚಿ!
ಶಿವಮೊಗ್ಗ: ನೂತನ ಸೇತುವೆ ಉದ್ಘಾಟನೆಯಾದ ಬೆನ್ನಲ್ಲೇ ಬೆಂಗಳೂರಿನಿಂದ (Bengaluru) ಸಿಗಂದೂರಿಗೆ (Siganduru) ಕೆಎಸ್‌ಆರ್‌ಟಿಸಿ ನಾನ್ ಎಸಿ ಬಸ್ ಸಂಚಾರ ಆರಂಭವಾಗಿದೆ. ಈ ಬಗ್ಗೆ ಕೆಎಸ್ಆರ್ಟಿಸಿ ಪ್ರಕಟಣೆಯಲ್ಲಿ ತಿಳಿಸಿದೆ.
ಪ್ರಯಾಣಿಕರ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು (KSRTC) ಬೆಂಗಳೂರು ಮತ್ತು ಸಿಗಂದೂರು ನಡುವೆ ಹೊಸದಾಗಿ ನಾನ್ ಎಸಿ ಸ್ಲೀಪರ್ ಬಸ್ (Non AC Sleeper Bus) ಪ್ರಾರಂಭಿಸಿದೆ. ಆ. 22 ರಿಂದ ಸಂಚಾರ ಆರಂಭಿಸಿದೆ. ಬೆಂಗಳೂರಿನಿಂದ ರಾತ್ರಿ 9:40ಕ್ಕೆ ಹೊರಟು ಚಿತ್ರದುರ್ಗ, ಹೊಳಲ್ಕೆರೆ, ಚನ್ನಗಿರಿ, ಮತ್ತು ಶಿವಮೊಗ್ಗ ತಲುಪಲಿದೆ. ಬಳಿಕ ಸಿಗಂದೂರನ್ನು ಬೆಳಗ್ಗೆ 6 ಗಂಟೆಗೆ ತಲುಪಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ. ಇದನ್ನೂ ಓದಿ: 60 ವರ್ಷಗಳ ಕನಸು ನನಸು | ಇಂದು ಸಿಗಂದೂರು ಸೇತುವೆ ಲೋಕಾರ್ಪಣೆ – ಬ್ರಿಡ್ಜ್ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ
ಸಿಗಂದೂರು ಕಡೆಯಿಂದ ರಾತ್ರಿ 8 ಗಂಟೆಗೆ ಹೊರಡಲಿದ್ದು, ಬೆಂಗಳೂರಿಗೆ ಬೆಳಗಿನ ಜಾವ 4:15 ಕ್ಕೆ ತಲುಪಲಿದೆ. ಟಿಕೆಟ್ ದರ 950 ರೂ. ನಷ್ಟಿದೆ. ಟಿಕೆಟ್‌ಗಳನ್ನು KSRTCಯ ಅಧಿಕೃತ ವೆಬ್‌ಸೈಟ್‌ಗಳಾದ www.ksrtc.in ಮತ್ತು www.ksrtc.karnataka.gov.in ಮೂಲಕ ಕಾಯ್ದಿರಿಸಬಹುದು. ಮಾಹಿತಿಗಾಗಿ 080-26252625, 7760990100,7760990560, 7760990287 ನಂಬರ್ಗಳನ್ನು ಸಂಪರ್ಕಿಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
ಬಸ್ ಸಂಚಾರದಿಂದ ಬೆಂಗಳೂರಿನಿಂದ ಸಿಗಂದೂರು ದೇವಾಲಯಕ್ಕೆ ತೆರಳುವವರಿಗೆ ಅನುಕೂಲವಾಗಲಿದೆ. ಅಲ್ಲದೇ ಒಂದೇ ದಿನದಲ್ಲಿ ಸಿಗಂದೂರು ಸಮೀಪದ ಕೆಲವು ಪ್ರವಾಸಿ ತಾಣಗಳಲ್ಲಿ ಸುತ್ತಿ ವಾಪಸ್ ಬರುವ ಅವಕಾಶ ಸಿಕ್ಕಂತಾಗಿದೆ. ಇದನ್ನೂ ಓದಿ: ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ – ಪೊಲೀಸರಿಂದ ಪುಂಡನಿಗೆ ದಂಡದ ರುಚಿ!
ಶಿವಮೊಗ್ಗ: ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗ (Shivamogga) ಜಿಲ್ಲೆಗೆ ಮತ್ತೊಂದು ಪ್ರವಾಸಿ ತಾಣದ ಮುಕಟವೊಂದು ಸೇರ್ಪಡೆಯಾಗಲಿದ್ದು, ಸೋಮವಾರ (ಜು. 14) ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ (Nithin Gadkari) ಐತಿಹಾಸಿಕ ಸಿಗಂದೂರು ಸೇತುವೆ ಲೋಕಾರ್ಪಣೆಗೊಳಿಸಲಿದ್ದಾರೆ.
ಶಿವಮೊಗ್ಗ ಎಂದಾಕ್ಷಣ ಥಟ್ಟನೆ ನೆನಪಾಗೋದು ವಿಶ್ವ ವಿಖ್ಯಾತ ಜೋಗ ಜಲಪಾತ, ಕುವೆಂಪು ಕವಿ ಮನೆ, ಸಕ್ರೈಬೈಲು ಆನೆ ಬಿಡಾರ, ನಿಸರ್ಗ ತಾಣ ಆಗುಂಬೆ. ಹೀಗೆ ಹತ್ತಾರು ಪ್ರವಾಸಿ ತಾಣಗಳನ್ನ ತನ್ನ ಮಡಿಲಿನಲ್ಲಿ ಇಟ್ಟುಕೊಂಡಿರುವ ಶಿವಮೊಗ್ಗ ಜಿಲ್ಲೆಗೆ ಮತ್ತೊಂದು ಮುಕುಟ ಸೇರ್ಪಡೆಗೊಳ್ಳುತ್ತಿದೆ. ಅದೇ ಶರಾವತಿ ಹಿನ್ನೀರಿನಲ್ಲಿ ನಿರ್ಮಾಣ ಆಗಿರುವ ಸಿಗಂದೂರಿನ ಹೊಸ ಸೇತುವೆ (Sigandur Bridge). ಇದನ್ನೂ ಓದಿ: ಲೈಂಗಿಕ ಬಯಕೆ ತೀರಿಸುವಂತೆ ಕಾಲೇಜು HODಯಿಂದ ಕಿರುಕುಳ – ಬೆಂಕಿ ಹಚ್ಚಿಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ
ಶರಾವತಿ ಹಿನ್ನೀರು ಪ್ರದೇಶಗಳಾದ ಕರೂರು ಬಾರಂಗಿ ಹೋಬಳಿಯ ನಾಲ್ಕು ಗ್ರಾಮ ಪಂಚಾತಿ ವ್ಯಾಪ್ತಿಯ ಜನರಿಗೆ ಹಾಗೂ ಪ್ರಸಿದ್ಧ ಸಿಗಂದೂರು, ಕೊಲ್ಲೂರು ದೇವಾಲಯಕ್ಕೆ ಸಂಪರ್ಕಕ್ಕಾಗಿ ಲಾಂಚ್ ಒಂದೇ ಆಧಾರವಾಗಿತ್ತು. ಹೀಗಾಗಿ ಕಳೆದ ಹಲವು ದಶಕಗಳಿಂದ ಈ ಭಾಗದ ಜನರು ಕಳಸವಳ್ಳಿ- ಅಂಬಾರಗೋಡ್ಲು- ಸಿಗಂದೂರು ಸೇತುವೆ ಮಾಡುವಂತೆ ಒತ್ತಾಯಿಸುತ್ತಿದ್ದರು. ಇದನ್ನೂ ಓದಿ: ಸಿನಿಮಾ ಹಾಡಿಗೆ ಡ್ಯಾನ್ಸ್ ಮಾಡುತ್ತಲೇ ಕುಸಿದು ಬಿದ್ದು ಸೇಲ್ಸ್ ಎಕ್ಸಿಕ್ಯೂಟಿವ್ ಸಾವು
ಹೀಗಾಗಿ 2019ರಲ್ಲಿ ಕೇಬಲ್ ಸೇತುವೆ ಕಾಮಗಾರಿ ಪ್ರಾರಂಭವಾಗಿತ್ತು. ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು 450 ಕೋಟಿ ರೂ. ವೆಚ್ಚದ ಕಾಮಗಾರಿಯ ಉದ್ಘಾಟನೆಯನ್ನು ಮಾಡಿದ್ದರು. 2020ರ ಡಿಸೆಂಬರ್‌ನಲ್ಲಿ ಪ್ರಾರಂಭವಾಗಿದ್ದ ಕಾಮಗಾರಿಯು ಅಂತ್ಯಗೊAಡಿದ್ದು, ನಾಳೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಈ ಸೇತುವೆಯನ್ನು ಲೋಕಾರ್ಪಣೆ ಮಾಡಲಿದ್ದಾರೆ. ಇದನ್ನೂ ಓದಿ: Tamil Nadu | ಡೀಸೆಲ್ ಸಾಗಿಸುತ್ತಿದ್ದ ಗೂಡ್ಸ್ ರೈಲಿನಲ್ಲಿ ಭಾರೀ ಅಗ್ನಿ ಅವಘಡ
ಈ ಸೇತುವೆಯು ಪ್ರಸಿದ್ಧ ಧಾರ್ಮಿಕ ಕ್ಷೇತ್ರಗಳಾದ ಕೊಲ್ಲೂರು ಮತ್ತು ಸಿಗಂದೂರು ದೇವಸ್ಥಾನಗಳನ್ನು ಸಂಪರ್ಕಿಸಲಿದೆ. 2.24 ಕಿ.ಮೀ ಉದ್ದದ ದೇಶದಲ್ಲೇ ಎರಡನೇ ಅತಿದೊಡ್ಡ ಕೇಬಲ್ ಆಧಾರಿತ ಸೇತುವೆ ಇದಾಗಿದೆ. ಈ ಸೇತುವೆಯ ಸುಮಾರು 2.24ಕಿ.ಮೀ. ಉದ್ದ ಹಾಗೂ 16 ಮೀಟರ್ ಅಗಲವನ್ನು ಹೊಂದಿದೆ. 740 ಮೀ. ಕೇಬಲ್‌ನ ಆಧಾರದ ಮೇಲೆ ನಿಂತಿರುವ ಸೇತುವೆ ಇದಾಗಿದೆ.
ಶರಾವತಿ ಹಿನ್ನೀರು ಭಾಗದ ಜನರ ಕನಸು ಒಂದೆಡೆ ನನಸಾದ್ರೆ, ಮತ್ತೊಂದೆಡೆ ಮಲೆನಾಡು ಶಿವಮೊಗ್ಗ ಪ್ರವಾಸೋದ್ಯಮಕ್ಕೆ ಈ ಕೇಬಲ್ ಆಧಾರಿತ ಸೇತುವೆ ಮತ್ತೊಂದು ಹೆಮ್ಮೆಯ ಸಂಗತಿಯಾಗಿದೆ.
ಶಿವಮೊಗ್ಗ: ಶರಾವತಿ ಹಿನ್ನೀರಿನ (Sharavati Backwater) ಪ್ರದೇಶದ ಹೊಳೆಬಾಗಿಲಿನಲ್ಲಿ ಪ್ರಯಾಣಿಕರನ್ನು ಕರೆದುಕೊಂಡು ಹೋಗುತ್ತಿದ್ದ ಲಾಂಚ್ ನೀರಿನ ಮಧ್ಯದಲ್ಲಿ ತಾಂತ್ರಿಕ ಸಮಸ್ಯೆ ಉಂಟಾಗಿ ನಿಂತಿರುವ ಘಟನೆ ಗುರುವಾರ ಸಂಜೆ ನಡೆದಿದೆ.
ಲಾಂಚಿನಲ್ಲಿ ನೂರಕ್ಕೂ ಹೆಚ್ಚು ಪ್ರಯಾಣಿಕರು ಹಾಗೂ ವಾಹನಗಳನ್ನು ತೆಗೆದುಕೊಂಡು ಹೋಗುವ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಇದರಿಂದ ಪ್ರಯಾಣಿಕರು ಆತಂಕಕ್ಕೆ ಒಳಗಾಗಿದ್ದರು. ಬಳಿಕ ಸೇತುವೆ ಕಾಮಗಾರಿಗೆ ಬಂದಿದ್ದ ಲಾಂಚ್ ಮೂಲಕ ಹಗ್ಗ ಕಟ್ಟಿ ಕೆಟ್ಟು ನಿಂತಿದ್ದ ಲಾಂಚ್‍ನ್ನು ದಡಕ್ಕೆ ತರಲಾಯಿತು. ಇದನ್ನೂ ಓದಿ: ತಾಯಿ ಚಾಮುಂಡಿ ದರ್ಶನ ಪಡೆದ ನಟ ದರ್ಶನ್
ಮತ್ತೊಂದು ಲಾಂಚ್ ಹೋಗಲು ಸ್ವಲ್ಪ ತಡವಾಗುತ್ತಿದ್ದರು ಸಹ ಕೆಟ್ಟ ನಿಂತಿದ್ದ ಲಾಂಚ್ ಪಕ್ಕದಲ್ಲೇ ನಿರ್ಮಾಣಗೊಳ್ಳುತ್ತಿರುವ ಸಿಗಂದೂರು ಸೇತುವೆಯ (Sigandur Bridge) ಪಿಲ್ಲರ್‌ಗೆ ಲಾಂಚ್ ಡಿಕ್ಕಿಯಾಗುವ ಸಾಧ್ಯತೆ ಇತ್ತು ಎನ್ನಲಾಗಿದೆ. ಇದನ್ನೂ ಓದಿ: ಎಂಎಲ್‌ಸಿ ರವಿಕುಮಾರ್ ಮೇಲೆ ನಿಯಮಾವಳಿಗಳ ಪ್ರಕಾರ ಕ್ರಮ – ಹೊರಟ್ಟಿ
ಕಾರವಾರ: ಅಲೆಯ ಅಬ್ಬರಕ್ಕೆ (Sea Waves) ಯುವಕನೋರ್ವ ಸಮುದ್ರದಲ್ಲಿ ಕೊಚ್ಚಿ ಹೋದ ಘಟನೆ ಮುರುಡೇಶ್ವರದಲ್ಲಿ (Murdeshwar) ಸೋಮವಾರ ನಡೆದಿದೆ. ಈ ವೇಳೆ ಮುಳುಗುತ್ತಿದ್ದ ಇಬ್ಬರನ್ನು ಲೈಫ್‍ಗಾರ್ಡ್ ಸಿಬ್ಬಂದಿ ರಕ್ಷಿಸಿದ್ದಾರೆ.
ಹುಬ್ಬಳ್ಳಿಯ ಸಂತೋಷ್ ಹುಲಿಗುಂಡ (19) ಸಮುದ್ರಪಾಲಾದ ಯುವಕನಾಗಿದ್ದು, ಹಸನ್ ಮಜಗೀಗೌಡ (20) ಹಾಗೂ ಸಂಜೀವ್ (20) ಎಂಬುವವರನ್ನು ಲೈಫ್‍ಗಾರ್ಡ್ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ಅಲೆಗೆ ಕೊಚ್ಚಿಹೋದ ಯುವಕನ ಶವಕ್ಕಾಗಿ ಶೋಧ ಕಾರ್ಯ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ತುಂಬಿ ತುಳುಕುತ್ತಿದ್ದ ಸಾರಿಗೆ ಬಸ್‍ನಿಂದ ಬಿದ್ದು ಬಾಲಕಿ ಸಾವು
ಹುಬ್ಬಳ್ಳಿ ಹಾಗೂ ಕಲಕಟಗಿಯಿಂದ 22 ಜನ ಪ್ರವಾಸಕ್ಕೆ ಬಂದಿದ್ದು, ಸಿಗಂದೂರು (Sigandur), ಕೊಲ್ಲೂರು ಪ್ರವಾಸ ಮುಗಿಸಿ ಮುರುಡೇಶ್ವರಕ್ಕೆ ಬಂದಿದ್ದರು. ಈ ವೇಳೆ ಪ್ರವಾಸಿಗರಿಗೆ ಲೈಫ್ ಗಾರ್ಡ್ ಸಿಬ್ಬಂದಿ ಎಚ್ಚರಿಕೆ ನೀಡಿದ್ದಾರೆ. ಆದರೂ ಮೂರು ಜನ ಪ್ರವಾಸಿಗರು ಸಮುದ್ರಕ್ಕಿಳಿದಿದ್ದಾರೆ. ಇದರಿಂದ ಈ ಅವಘಡ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಮುರುಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಿಷೇಧದ ನಡುವೆಯೂ ಪ್ರವಾಸಿಗರ ಹುಚ್ಚಾಟ
ಉತ್ತರ ಕನ್ನಡ (Uttara Kannada) ಜಿಲ್ಲೆಯ ಕರಾವಳಿ ಭಾಗದಲ್ಲಿ ಪ್ರವಾಸಿಗರಿಗೆ ಕಡಲಲ್ಲಿ ಇಳಿಯದಂತೆ ನಿಷೇಧ ಹೇರಲಾಗಿದೆ. ಆದರೂ ಜಿಲ್ಲೆಯ ಮುರುಡೇಶ್ವರ ಹಾಗೂ ಗೋಕರ್ಣಕ್ಕೆ (Gokarna) ಬರುವ ಪ್ರವಾಸಿಗರು ಲೈಫ್‍ಗಾರ್ಡ್‍ಗಳ ಸೂಚನೆಯನ್ನು ಲೆಕ್ಕಿಸದೆ ಸಮುದ್ರಕ್ಕಿಳಿಯುತಿದ್ದಾರೆ. ಕಳೆದ ವರ್ಷ 11 ಜನ ಸಮುದ್ರದ ಪಾಲಾಗಿದ್ದರು. ಹೀಗಾಗಿ ಮಳೆಗಾಲ ಹಾಗೂ ಚಂಡಮಾರುತದ ಸಂದರ್ಭದಲ್ಲಿ ಜಲಸಾಹಸ ಕ್ರೀಡೆಗಳಿಗೆ ನಿಷೇಧ ಹೇರಲಾಗುತ್ತದೆ. ಬರುವ ಪ್ರವಾಸಿಗರು ಮೋಜು ಮಸ್ತಿಯಿಂದಾಗಿ ತಮ್ಮ ಜೀವಕ್ಕೆ ತಾವೇ ಆಪತ್ತು ತಂದುಕೊಳ್ಳುತಿದ್ದಾರೆ. ಇದನ್ನೂ ಓದಿ: ವಾಟ್ಸಾಪ್‍ನಲ್ಲಿ ಔರಂಗಜೇಬ್ ಡಿಪಿ ಹಾಕಿದ್ದ ವ್ಯಕ್ತಿಯ ಬಂಧನ