Tag: Sign Language Feed

  • ಐಪಿಎಲ್‌ ಇತಿಹಾಸದಲ್ಲಿ ಇದೇ ಮೊದಲು – ಶ್ರವಣದೋಷಿತರಿಗಾಗಿ ಸಂಕೇತ ಭಾಷೆಯಲ್ಲಿ ಕಾಮೆಂಟ್ರಿ!

    ಐಪಿಎಲ್‌ ಇತಿಹಾಸದಲ್ಲಿ ಇದೇ ಮೊದಲು – ಶ್ರವಣದೋಷಿತರಿಗಾಗಿ ಸಂಕೇತ ಭಾಷೆಯಲ್ಲಿ ಕಾಮೆಂಟ್ರಿ!

    ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್‌ನ (IPL 2024) ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಕ್ರಿಕೆಟ್ ಪಂದ್ಯಗಳ ನೇರಪ್ರಸಾರದಲ್ಲಿ ಈಗ ಸಂಕೇತ ಭಾಷೆಯಲ್ಲಿ (ಸೈನ್‌ ಲಾಂಗ್ವೇಜ್‌ – Sign Language Feed) ಕಾಮೆಂಟ್ರಿ ಪ್ರಸಾರ ಮಾಡುವ ಮಹತ್ಕಾರ್ಯಕ್ಕೆ ಸ್ಟಾರ್ಸ್‌ಸ್ಪೋರ್ಟ್ಸ್‌ ವಾಹಿನಿ ಮುಂದಾಗಿದೆ.

    ಟೂರ್ನಿಯ ಅಧಿಕೃತ ಪ್ರಸಾರಕ ಸ್ಟಾರ್ ಸ್ಪೋರ್ಟ್ಸ್ ವಾಹಿನಿಯು ಇಂಡಿಯಾ ಸೈನಿಂಗ್ ಹ್ಯಾಂಡ್ (ಐಎಸ್‌ಹೆಚ್‌ ನ್ಯೂಸ್‌) ಜೊತೆಗೂಡಿ ಈ ಸಂಕೇತ ಭಾಷೆಯಲ್ಲಿ ಕಾಮೆಂಟ್ರಿಯನ್ನು (Cricket Commentary) ಪ್ರಸಾರ ಮಾಡಲಿದೆ. ಆಡಿಯೋ ಕಾಮೆಂಟ್ರಿಯಿಂದ ದೃಷ್ಟಿದೋಷವುಳ್ಳ ಮಕ್ಕಳಿಗೆ ಅನುಕೂಲವಾಗಲಿದೆ. ಆದ್ರೆ ಸಂಕೇತ ಭಾಷೆ ಕಾಮೆಂಟ್ರಿಯಿಂದ ಶ್ರವಣ ದೋಷವುಳ್ಳವರು ಪಂದ್ಯದ ವಿವರಣೆ ಅರಿಯಲು ಸಾಧ್ಯವಾಗಲಿದೆ. ಇದನ್ನೂ ಓದಿ: IPL 2024: ಆರೆಂಜ್‌ ಕ್ಯಾಪ್‌ ಮತ್ತು ಪರ್ಪಲ್‌ ಕ್ಯಾಪ್‌ ವಿನ್ನರ್ಸ್‌ ಲಿಸ್ಟ್‌ – ಶಾನ್‌ ಮಾರ್ಷ್‌ನಿಂದ ಗಿಲ್‌ ವರೆಗೆ

    ಅಲ್ಲದೇ ಐಪಿಎಲ್‌ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಭಾರತೀಯ ಸಂಕೇತ ಭಾಷೆ ಬಳಸಿಕೊಂಡು ಕಾಮೆಂಟ್ರಿ ನೀಡಲಾಗುತ್ತದೆ. ಪ್ರತಿ ಬಾಲ್‌ ಟು ಬಾಲ್‌ ಮಾಹಿತಿಯನ್ನೂ ತಿಳಿಸಿಕೊಡಲಾಗುತ್ತದೆ ಎಂದು ಅಧಿಕೃತ ಪ್ರಸಾರಕ ಸಂಸ್ಥೆಯು ಪ್ರಕಟಣೆಯಲ್ಲಿ ತಿಳಿಸಿದೆ. ಇದನ್ನೂ ಓದಿ: IPL 2024: ಟಾಪ್‌ ಟು ಬಾಟಮ್‌ ದಾಖಲೆ ಇರೋದು ಆರ್‌ಸಿಬಿ ಹೆಸರಲ್ಲೇ – ಇದು ಅಭಿಮಾನಿಗಳಿಗೆ ಹೆಗ್ಗಳಿಕೆ

    ಶುಕ್ರವಾರ (ಮಾ.22) ಉದ್ಘಾಟನಾ ಪಂದ್ಯದಲ್ಲಿ 5 ಬಾರಿ ಚಾಂಪಿಯನ್ಸ್‌ ಚೆನ್ನೈ ಸೂಪರ್‌ ಕಿಂಗ್ಸ್‌ (CSK) ಹಾಗೂ 3 ಬಾರಿ ರನ್ನರ್‌ ಅಪ್‌ ಪ್ರಶಸ್ತಿ ಪಡೆದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡಗಳು (RCB) ಮುಖಾಮುಖಿಯಾಗಲಿವೆ. ಆರ್‌ಸಿಬಿ ಮತ್ತು ಚೆನ್ನೈ ನಡುವೆ 31 ಪಂದ್ಯಗಳು ನಡೆದಿದ್ದು, 20 ಪಂದ್ಯಗಳಲ್ಲಿ ಚೆನ್ನೈ, 10 ಪಂದ್ಯಗಳಲ್ಲಿ ಆರ್‌ಸಿಬಿ ಗೆಲುವು ಸಾಧಿಸಿದೆ. 1 ಪಂದ್ಯ ಫಲಿತಾಂಶವಿಲ್ಲದೇ ರದ್ದಾಗಿದೆ. ಇದನ್ನೂ ಓದಿ: 2023ರಲ್ಲಿ ಫೈನಲ್ಲಿನಲ್ಲಿ ಏನಾಯ್ತು – ಲಕ್ಷ, ಕೋಟಿ ಬಾಚಿಕೊಂಡವರು ಈಗ ಏನ್‌ ಮಾಡ್ತಾರೆ?

    ಯಾರ ನಡುವೆ, ಯಾವ ದಿನ, ಎಲ್ಲಿ ಪಂದ್ಯ?
    1. ಚೆನ್ನೈ ಸೂಪರ್ ಕಿಂಗ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು – ಮಾರ್ಚ್ 22 ಚೆನ್ನೈ,
    2. ಪಂಜಾಬ್ ಕಿಂಗ್ಸ್ vs ಡೆಲ್ಲಿ ಕ್ಯಾಪಿಟಲ್ಸ್, ಮಾರ್ಚ್ 23, ಮೊಹಾಲಿ,
    3. ಕೋಲ್ಕತ್ತಾ ನೈಟ್​ ರೈಡರ್ಸ್ vs ಸನ್​ರೈಸರ್ಸ್ ಹೈದರಾಬಾದ್, ಮಾರ್ಚ್ 23, ಕೋಲ್ಕತ್ತಾ
    4. ರಾಜಸ್ಥಾನ್ ರಾಯಲ್ಸ್ vs ಲಕ್ನೋ ಸೂಪರ್ ಜೈಂಟ್ಸ್, ಮಾರ್ಚ್ 24, ಜೈಪುರ
    5. ಗುಜರಾತ್ ಟೈಟಾನ್ಸ್ vs ಮುಂಬೈ ಇಂಡಿಯನ್ಸ್, ಮಾರ್ಚ್ 24, ಅಹಮದಾಬಾದ್
    6. ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಪಂಜಾಬ್ ಕಿಂಗ್ಸ್, ಮಾರ್ಚ್ 25, ಬೆಂಗಳೂರು
    7. ಚೆನ್ನೈ ಸೂಪರ್ ಕಿಂಗ್ಸ್ vs ಗುಜರಾತ್ ಟೈಟಾನ್ಸ್, ಮಾರ್ಚ್ 26, ಚೆನ್ನೈ
    8. ಸನ್​ರೈಸರ್ಸ್ ಹೈದರಾಬಾದ್ vs ಮುಂಬೈ ಇಂಡಿಯನ್ಸ್, ಮಾರ್ಚ್ 27, ಹೈದರಾಬಾದ್
    9. ಆರ್‌ಆರ್‌ vs ಡೆಲ್ಲಿ ಕ್ಯಾಪಿಟಲ್ಸ್, ಮಾರ್ಚ್ 28 ಜೈಪುರ
    10. ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಕೋಲ್ಕತ್ತಾ ನೈಟ್​ ರೈಡರ್ಸ್, ಮಾರ್ಚ್ 29 ಬೆಂಗಳೂರು
    11. ಲಕ್ನೋ ಸೂಪರ್ ಜೈಂಟ್ಸ್ vs ಪಂಜಾಬ್ ಕಿಂಗ್ಸ್, ಮಾರ್ಚ್ 30, ಲಕ್ನೋ
    12. ಗುಜರಾತ್ ಟೈಟಾನ್ಸ್ vs ಸನ್​ರೈಸರ್ಸ್ ಹೈದರಾಬಾದ್, ಮಾರ್ಚ್ 31, ಅಹಮದಾಬಾದ್
    13. ಡೆಲ್ಲಿ ಕ್ಯಾಪಿಟಲ್ಸ್ vs ಚೆನ್ನೈ ಸೂಪರ್ ಕಿಂಗ್ಸ್, ಮಾರ್ಚ್ 31, ವಿಶಾಖಪಟ್ಟಣಂ
    14. ಮುಂಬೈ ಇಂಡಿಯನ್ಸ್ vs ರಾಜಸ್ಥಾನ್ ರಾಯಲ್ಸ್, ಏಪ್ರಿಲ್ 1, ಮುಂಬೈ
    15. ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಲಕ್ನೋ ಸೂಪರ್ ಜೈಂಟ್ಸ್, ಏಪ್ರಿಲ್ 2, ಬೆಂಗಳೂರು
    16. ಡೆಲ್ಲಿ ಕ್ಯಾಪಿಟಲ್ಸ್ vs ಕೋಲ್ಕತ್ತಾ ನೈಟ್​ ರೈಡರ್ಸ್, ಏಪ್ರಿಲ್ 3, ವಿಶಾಖಪಟ್ಟಣಂ
    17. ಗುಜರಾತ್ ಟೈಟಾನ್ಸ್ vs ಪಂಜಾಬ್ ಕಿಂಗ್ಸ್, ಏಪ್ರಿಲ್ 4, ಅಹಮದಾಬಾದ್
    18. ಸನ್​ರೈಸರ್ಸ್ ಹೈದರಾಬಾದ್ vs ಚೆನ್ನೈ ಸೂಪರ್ ಕಿಂಗ್ಸ್, ಏಪ್ರಿಲ್ 5, ಹೈದರಾಬಾದ್
    19. ರಾಜಸ್ಥಾನ್ ರಾಯಲ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು, ಏಪ್ರಿಲ್ 6, ಜೈಪುರ
    20. ಮುಂಬೈ ಇಂಡಿಯನ್ಸ್ vs ಡೆಲ್ಲಿ ಕ್ಯಾಪಿಟಲ್ಸ್, ಏಪ್ರಿಲ್ 7, ಮುಂಬೈ
    21. ಲಕ್ನೋ ಸೂಪರ್ ಜೈಂಟ್ಸ್ vs ಗುಜರಾತ್ ಟೈಟಾನ್ಸ್, ಏಪ್ರಿಲ್ 7, ಲಕ್ನೋ