Tag: sihi-kahi chandru

  • ಹೊಸ ಸೀಸನ್‌ನೊಂದಿಗೆ ಇನ್ನಷ್ಟು ಹೊಸತನದಲ್ಲಿ ಶುರುವಾಗ್ತಿದೆ ‘ಬೊಂಬಾಟ್ ಭೋಜನ ಸೀಸನ್ 5’

    ಹೊಸ ಸೀಸನ್‌ನೊಂದಿಗೆ ಇನ್ನಷ್ಟು ಹೊಸತನದಲ್ಲಿ ಶುರುವಾಗ್ತಿದೆ ‘ಬೊಂಬಾಟ್ ಭೋಜನ ಸೀಸನ್ 5’

    ನ್ನಡ ಕಿರುತೆರೆಯಲ್ಲಿ ಅಡುಗೆ ಶೋ ಅಂದ್ರೆ ಥಟ್ಟನೆ ನೆನಪಾಗೋದೇ ‘ಬೊಂಬಾಟ್ ಭೋಜನ’. ಸಾವಿರಕ್ಕೂ ಹೆಚ್ಚು ಸಂಚಿಕೆಗಳನ್ನು ದಾಟಿ ಹೊಸ ಮೈಲಿಗಲ್ಲು ಸೃಷ್ಟಿಸಿರುವ ಈ ಶೋ ಈಗಾಗಲೇ 4 ಸೀಸನ್ ಗಳನ್ನು ಯಶಸ್ವಿಯಾಗಿ ಪೂರೈಸಿದೆ. ಇದೀಗ ಇನ್ನಷ್ಟು ಹೊಸತನವನ್ನೊಳಗೊಂಡು 5ನೇ ಆವೃತ್ತಿಯೊಂದಿಗೆ ವೀಕ್ಷಕರ ಮುಂದೆ ಬರಲು ಸಜ್ಜಾಗಿದೆ.

    ಈ ಬಾರಿ ‘ಬೊಂಬಾಟ್ ಭೋಜನ ಸೀಸನ್ 5’ರ (Bombat Bhojana 5) ಪ್ರಮುಖ ವಿಶೇಷತೆಯಂದ್ರೆ ‘ಬೊಂಬಾಟ್ ಭೋಜನ ಸೀಸನ್ 5’ ಇನ್ಮುಂದೆ ಬೊಂಬಾಟ್ ಭೋಜನದ ಗಾಡಿ ರಾಜ್ಯಾದ್ಯಂತ ಸಂಚರಿಸಿ ನಿಮ್ ಊರಿಗೆ, ನಿಮ್ ಕೇರಿಗೆ, ನಿಮ್ ಗಲ್ಲಿಗಳಿಗೆ ಬಂದು ರುಚಿ ರುಚಿಯಾದ ಅಡುಗೆಯನ್ನು ತಯಾರಿಸಿ ಆ ರುಚಿಯನ್ನು ಅಲ್ಲಿನ ಜನರಿಗೆ ತಿಳಿಸಿಕೊಡಲಿದೆ. ಇದು ಈ ಸೀಸನ್‌ನ ಮುಖ್ಯ ಆಕರ್ಷಣೆ.

    ಈ ಸೀಸನ್ ಅಲ್ಲಿ ಏನೆಲ್ಲಾ ಇರುತ್ತೆ ಎಂದು ಹೇಳೋದಾದ್ರೆ:

    1. ಸ್ಪೆಷಲ್ ಊಟ : ಸಿಹಿ ಕಹಿ ಚಂದ್ರು ಅವರು ರುಚಿ-ರುಚಿಯಾದ ಅಡುಗೆಯನ್ನು ತಿಳಿಸುತ್ತಾರೆ.
    2. ಹೋಟೆಲ್ ಊಟ : ಕರ್ನಾಟಕದಾದ್ಯಂತ ಚಲಿಸಿ, ಜನಪ್ರಿಯತೆಗಳಿಸಿರುವ ವರ್ಷಗಳ ಇತಿಹಾಸವಿರುವ ಹೋಟೆಲ್‌ಗಳಿಗೆ ಧಾವಿಸಿ ಅಲ್ಲಿನ ಜನಪ್ರಿಯ ತಿನಿಸುಗಳನ್ನು ಸವಿದು ಜನರಿಗೆ ತಿಳಿಸುವುದು.
    3. ಊಟ ರೆಡಿ : ಜನಸಾಮಾನ್ಯರು / ಸೆಲೆಬ್ರಿಟಿಸ್‌ಗಳು ಬಂದು ವಿವಿಧ ರೀತಿಯ ಕೈರುಚಿಯನ್ನು ತಿಳಿಸುವುದು.
    4. ಆರೋಗ್ಯ ಅಡುಗೆ : ಡಾ|| ಗೌರಿ ಸುಬ್ರಮಣ್ಯರವರು ಜನರಿಗೆ ಉಪಯುಕ್ತವಾದ ಮನೆಮದ್ದನ್ನು ಇಲ್ಲಿ ತಿಳಿಸುತ್ತಾರೆ.
    5. ಸವಿಯೂಟ : ಬೇರೆ ಬೇರೆ ಜಿಲ್ಲೆಗಳಲ್ಲಿರುವ ಲೇಡೀಸ್ ಕ್ಲಬ್ ಗಳಿಗೆ ಹೋಗಿ ಅಲ್ಲಿನ ಜನರೊಂದಿಗೆ ಬೆರೆತು, ಅಡುಗೆ ಮಾಂತ್ರಿಕ ಸಿಹಿ ಕಹಿ ಚಂದ್ರು ರವರು ವಿಭಿನ್ನ ಅಡುಗೆ ಡಿಶ್ ಗಳನ್ನು ತಯಾರಿಸುತ್ತಾರೆ.

    ಇದೆಲ್ಲದರ ಜೊತೆಗೆ ವಾಹಿನಿಯಲ್ಲಿ ಇದೇ ಮೊದಲ ಬಾರಿಗೆ ಪ್ರತೀ ಶನಿವಾರ ಮಾಂಸ ಪ್ರಿಯರಿಗಾಗಿ ಸಿದ್ಧವಾಗ್ತಿದೆ ‘ಬೊಂಬಾಟ್ ಬಾಡೂಟ’. ಅಡುಗೆ ಮಾಂತ್ರಿಕ ಆದರ್ಶ್ ತಟಪತಿ ಈ ಕಾರ್ಯಕ್ರಮವನ್ನು ನಡೆಸಿಕೊಡಲಿದ್ದಾರೆ. ಇದರಲ್ಲಿ ಖಾರ ಮಸಾಲ, ಮಿರ್ಚಿ ಮಸಾಲ ಹಾಗು ನಾಟಿ ಮಸಾಲ ಎಂಬ ವಿಭಾಗಗಳು ಹೊಂದಿರುತ್ತದೆ.

    ನಳ ಮಹಾರಾಜ ಸಿಹಿ ಕಹಿ ಚಂದ್ರು (Sihi Kahi Chandru) ರವರ ನೇತೃತ್ವದಲ್ಲಿ ಶುರುವಾಗುತ್ತಿರುವ ‘ಬೊಂಬಾಟ್ ಭೋಜನ ಸೀಸನ್ 5’ ಇದೇ ಸೋಮವಾರದಿಂದ ಮಧ್ಯಾಹ್ನ 12 ಗಂಟೆಗೆ ನಿಮ್ಮ ನೆಚ್ಚಿನ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತಿದೆ ತಪ್ಪದೇ ವೀಕ್ಷಿಸಿ.

  • ‘ಬೊಂಬಾಟ್ ಭೋಜನ’ದಲ್ಲಿ ಶಿಲ್ಪಿ ಅರುಣ್ ಯೋಗಿರಾಜ್

    ‘ಬೊಂಬಾಟ್ ಭೋಜನ’ದಲ್ಲಿ ಶಿಲ್ಪಿ ಅರುಣ್ ಯೋಗಿರಾಜ್

    ಸ್ಟಾರ್ ಸುವರ್ಣ ವಾಹಿಯಲ್ಲಿ ಸಾವಿರ ಸಂಚಿಕೆಗಳನ್ನು ದಾಟಿ, ಹೊಸ ಮೈಲಿಗಲ್ಲು ಸೃಷ್ಟಿಸಿರುವ  ಅಡುಗೆ ಶೋ ‘ಬೊಂಬಾಟ್ ಭೋಜನ’ದಲ್ಲಿ (Bombat Bhoja) ಈ ಬಾರಿ ರಾಮನವಮಿ ಹಬ್ಬದ ಪ್ರಯುಕ್ತ ವಿಶೇಷ ಸಂಚಿಕೆಯನ್ನು ಪ್ರಸಾರ ಮಾಡಲಾಗುತ್ತಿದೆ.

    ಈ ರಾಮನವಮಿಯ ವಿಶೇಷ ಸಂಚಿಕೆಯನ್ನು ಅಯೋಧ್ಯೆಯ ರಾಮಲಲ್ಲಾ ವಿಗ್ರಹವನ್ನು ಕೆತ್ತಿರುವ ಶಿಲ್ಪಿ ಅರುಣ್ ಯೋಗಿರಾಜ್ ರವರ ಮನೆಯಲ್ಲಿ ಸಂಭ್ರಮದಿಂದ ಆಚರಿಸಲಾಗಿದೆ. ಕನ್ನಡ ಕಿರುತೆರೆಯಲ್ಲಿ ಇದೇ ಮೊದಲ ಬಾರಿಗೆ ಅರುಣ್ ಯೋಗಿರಾಜ್ ರವರ ತುಂಬು ಕುಟುಂಬವನ್ನು ನೀವು ಈ ವಿಶೇಷ ಸಂಚಿಕೆಯಲ್ಲಿ ಕಾಣಬಹುದು. ಇನ್ನು ರಾಮಲಲ್ಲಾ ವಿಗ್ರಹದ ಬಗ್ಗೆ, ಅದನ್ನು ಕೆತ್ತುವಾಗ ಆದ ಅನುಭವದ ಬಗ್ಗೆ ಈ ವಿಶೇಷ ಸಂಚಿಕೆಯಲ್ಲಿ ಎಳೆಎಳೆಯಾಗಿ ಹೇಳಿದ್ದಾರೆ.

    ಬೊಂಬಾಟ್ ಭೋಜನದ ರೂವಾರಿಯಾಗಿರುವ ಸಿಹಿ ಕಹಿ ಚಂದ್ರು (Sihi Kahi Chandru)ರವರು ಅರುಣ್ ಯೋಗಿರಾಜ್ Arun Yogiraj ಗೆ ಗೌರವಾರ್ಪಣೆಯೊಂದಿಗೆ, ಸನ್ಮಾನಿಸಿದ್ದಾರೆ. ಜೊತೆಗೆ ಈ ವಿಶೇಷ ಸಂಚಿಕೆಯಲ್ಲಿ ಗಾಯಕರಾದ  ಶ್ರೀ ಚಿನ್ಮಯಿ ಅತ್ರೇಯಸ್ ರವರು ಅತಿಥಿಯಾಗಿ ಆಗಮಿಸಿದ್ದು, ರಾಮನಾಮವನ್ನು ಭಕ್ತಿಯಿಂದ ಹಾಡಿ ಮನರಂಜಿಸಿದ್ದಾರೆ.

     

    ಬೊಂಬಾಟ್ ಭೋಜನದಲ್ಲಿ ರಾಮನವಮಿ ವಿಶೇಷ ಸಂಚಿಕೆಯು ಇದೇ ಬುಧವಾರ (ಏ.17) ಮಧ್ಯಾಹ್ನ 12 ಗಂಟೆಗೆ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗಲಿದೆ.

  • ‘ಬೊಂಬಾಟ್ ಭೋಜನ’ದಲ್ಲಿ ಯುಗಾದಿ ಸಂಭ್ರಮ-ಹಬ್ಬದೂಟಕ್ಕೆ ಆಗಮಿಸಿದ ಸ್ಯಾಂಡಲ್ವುಡ್ ಸ್ಟಾರ್ಸ್

    ‘ಬೊಂಬಾಟ್ ಭೋಜನ’ದಲ್ಲಿ ಯುಗಾದಿ ಸಂಭ್ರಮ-ಹಬ್ಬದೂಟಕ್ಕೆ ಆಗಮಿಸಿದ ಸ್ಯಾಂಡಲ್ವುಡ್ ಸ್ಟಾರ್ಸ್

    ಸ್ಟಾರ್ ಸುವರ್ಣ ವಾಹಿಯಲ್ಲಿ ಸಾವಿರ ಸಂಚಿಕೆಗಳನ್ನು ದಾಟಿ, ಹೊಸ ಮೈಲಿಗಲ್ಲು ಸೃಷ್ಟಿಸಿ ಕರುನಾಡಿನ ಮನಗೆದ್ದ ಅಡುಗೆ ಶೋ ಬೊಂಬಾಟ್ ಭೋಜನದಲ್ಲಿ (Bombat Bhojana) ಇದೀಗ ನವ ಸಂವತ್ಸರದ ಮೊದಲ ಹಬ್ಬ ಯುಗಾದಿಯ (Ugadi) ಸಂಭ್ರಮಾಚರಣೆ ಬೊಂಬಾಟ್ ಆಗಿ ನಡೆಯುತ್ತಿದೆ. ಇದನ್ನೂ ಓದಿ: ಮದುವೆಗೂ ಮುನ್ನ ಮೊದಲ ಪ್ರೀತಿಯ ಬಗ್ಗೆ ಸನ್ನಿ ಶಾಕಿಂಗ್ ಕಾಮೆಂಟ್

    ಸಿಹಿ ಕಹಿ ಚಂದ್ರು (Sihi Kahi Chandru) ಅವರ ನಿರೂಪಣೆಯಲ್ಲಿ ಮೂಡಿ ಬರುತ್ತಿರುವ ಈ ಶೋ, ಮನೆ ಮಂದಿಗೆ ರುಚಿಕರವಾದ ಅಡುಗೆಯನ್ನು ಮಾಡಿ ಬಡಿಸುವಲ್ಲಿ ವೀಕ್ಷಕರಿಗೆ ಸಹಾಯಕವಾಗಿದೆ. ಪ್ರಸ್ತುತ 4ನೇ ಆವೃತ್ತಿಯೊಂದಿಗೆ ಮುಂದುವರಿಯುತ್ತಿರುವ ‘ಬೊಂಬಾಟ್ ಭೋಜನ’ ಕಾರ್ಯಕ್ರಮದಲ್ಲಿ ಈ ಬಾರಿ ವರ್ಷದ ಮೊದಲ ಹಬ್ಬ ಯುಗಾದಿಯನ್ನು ಅದ್ದೂರಿಯಾಗಿ ಆಚರಿಸಲಾಗುತ್ತಿದ್ದು, ವಾರವಿಡೀ ಸ್ಯಾಂಡಲ್‌ವುಡ್ ತಾರೆಗಳು ಆಗಮಿಸಲಿದ್ದಾರೆ.

    ಬೇವು ಬೆಲ್ಲದ ಸವಿ ಹಂಚಲು ಇದೇ ಏಪ್ರಿಲ್ 8ರಂದು ಸೋಮವಾರ ನಟ ಸತೀಶ್ ನೀನಾಸಂ, ಮಂಗಳವಾರ ನಟಿ ನಿಶ್ವಿಕಾ ನಾಯ್ಡು (Nishvika Naidu) ಹಾಗೂ ಬೆಳ್ಳುಳ್ಳಿ ಕಬಾಬ್ ಖ್ಯಾತಿಯ ಚಂದ್ರು, ಬುಧವಾರ ನಟ ದಿಗಂತ್, ಗುರುವಾರ ಶಿವರಾಜ್ ಕೆಆರ್ ಪೇಟೆ, ಶುಕ್ರವಾರ ಕಿರುತೆರೆ ನಟ ಕಿರಣ್ ರಾಜ್ (Kiran Raj) ಹಾಗೂ ಶನಿವಾರ ‘ಸರ್ಕಾರಿ ಹಿ.ಪ್ರಾ.ಶಾಲೆ ಕಾಸರಗೋಡು’ ಸಿನಿಮಾ ಖ್ಯಾತಿಯ ದಡ್ಡ ಪ್ರವೀಣ ಆಗಮಿಸುತ್ತಿದ್ದಾರೆ. ಹೀಗಾಗಿ ವಾರಪೂರ್ತಿ ಮಧ್ಯಾಹ್ನ ವೀಕ್ಷಕರಿಗೆ ಬೊಂಬಾಟ್ ಮನರಂಜನೆ ಸಿಗಲಿದೆ.

    ಯುಗಾದಿಯ ಪ್ರಯುಕ್ತ ಬೊಂಬಾಟ್ ಭೋಜನದಲ್ಲಿ ಬರುತ್ತಿದೆ ಹಬ್ಬದ ವಿಶೇಷ ಸಂಚಿಕೆಗಳು ಏಪ್ರಿಲ್ 8ರಿಂದ ಏಪ್ರಿಲ್ 14 ರವರೆಗೆ ಸೋಮ-ಶನಿವಾರ ಮಧ್ಯಾಹ್ನ 12 ಗಂಟೆಗೆ ಸ್ಟಾರ್ ಸುವರ್ಣ ವಾಹಿನಿಯಲ್ಲಿ ತಪ್ಪದೇ ವೀಕ್ಷಿಸಿ.

  • ಸಾವಿರ ಸಂಚಿಕೆ ಮುಗಿಸಿದ ಬೊಂಬಾಟ್ ಭೋಜನ

    ಸಾವಿರ ಸಂಚಿಕೆ ಮುಗಿಸಿದ ಬೊಂಬಾಟ್ ಭೋಜನ

    ಟ-ನಿರ್ದೇಶಕ ಸಿಹಿಕಹಿ ಚಂದ್ರು (Sihi Kahi Chandru) ಸ್ಟಾರ್ ಸುವರ್ಣದಲ್ಲಿ ನಡೆಸಿಕೊಡುತ್ತಿರುವ ‘ಬೊಂಬಾಟ್‍ ಭೋಜನ’ ((Bombat Bhojana)) ಕಾರ್ಯಕ್ರಮವು ಇದೀಗ 1000 ಸಂಚಿಕೆಗಳನ್ನು ಪೂರೈಸಿದೆ.   ಈ ಕಾರ್ಯಕ್ರಮದ ಮೂರನೇ ಆವೃತ್ತಿ ಇದೀಗ ಮುಗಿದಿದ್ದು, ಜನವರಿ 15ರಂದು ಮಕರ ಸಂಕ್ರಾಂತಿಯಂದು ನಾಲ್ಕನೇ ಆವೃತ್ತಿ ಆರಂಭವಾಗಲಿದೆ.

    ಮೂರನೇ ಸೀಸನ್‍ 1000 ಕಂತುಗಳನ್ನು ಮುಗಿಸಿರುವ ಹಾಗೂ  ನಾಲ್ಕನೆಯ ಆವೃತ್ತಿ ಆರಂಭವಾಗಲಿರುವ ಈ ಹೊತ್ತಿನಲ್ಲಿ ಚಂದ್ರು ಸಂಭ್ರಮದ ಸಮಾರಂಭವೊಂದನ್ನು ಆಯೋಜಿಸಿದ್ದರು.  ಆಪ್ತರು, ಮಿತ್ರರು ಮತ್ತು ವಾಹಿನಿಯವರನ್ನು ಆಮಂತ್ರಿಸಿ ಒಂದು ವಿಶೇಷ ಕಾರ್ಯಕ್ರಮವನ್ನು ಮಾಡಿ, ಬಂದವರಿಗೆ “ಬೊಂಬಾಟ್ ಭೋಜನ” ಹಾಕಿಸಿ ಕಾರ್ಯಕ್ರಮದ ಬಗ್ಗೆ ಹೆಚ್ಚಿನ ವಿವರಣೆ ನೀಡಿದರು.

    ಮೂರನೆಯ ಆವೃತ್ತಿಯ ಬಗ್ಗೆ  ಮಾತನಾಡಿದ ಚಂದ್ರು, ‘ನಾಡಿನ ಹಲವು ಜಿಲ್ಲೆಗಳಿಗೆ ಹೋಗಿ ಅಲ್ಲಿನ ಮಹಿಳಾ ಮಂಡಳಿ ಸದಸ್ಯರಿಗೆ ಅಡಿಗೆ ಮಾಡಿ ತೋರಿಸಲಾಗಿದೆ. ಆಹ್ವಾನಿಸಿದವರ ಮನೆಗೆ ಹೋಗಿ ಅವರು ಪ್ರೀತಿಯಿಂದ ಮಾಡಿದ ತಿಂಡಿಯನ್ನು ಸವಿದು ಬಂದಿದ್ದೇನೆ. ಬರೀ ಅಡುಗೆಯಷ್ಟೇ ಅಲ್ಲ, ‘ಅಂದ ಚೆಂದ’ ಎಂಬ ಹೊಸ ವಿಭಾಗಗಳ ಮೂಲಕ ಮಹಿಳೆಯರು ತಮ್ಮ ಅಂದ ಹೆಚ್ಚಿಸಿಕೊಳ್ಳು ಮೇಕಪ್‍, ಕೇಶವಿನ್ಯಾಸ ತರಬೇತಿ ನೀಡಲಾಗಿದೆ. ಗೌರಿಯಮ್ಮ ನಡೆಸಿಕೊಡುವ ‘ಅಂಗೈಲಿ ಆರೋಗ್ಯ’ ವಿಭಾಗದಲ್ಲಿ ಹಲವು ಆರೋಗ್ಯದ ಟಿಪ್ಸ್ ಗಳನ್ನು ನೀಡಲಾಗಿದೆ. ಈ ಬಾರಿ ಅಮೇರಿಕಾ, ಆಫ್ರಿಕಾ ಮುಂತಾದ ಕಡೆ ಹೋಗಿ ಅಡುಗೆ ಕಾರ್ಯಕ್ರಮ ಮಾಡಿ ಬಂದಿರುವುದು ವಿಶೇಷ ಎಂದರು.

    ‘ಬೊಂಬಾಟ್ ಭೋಜನ ” ಸೀಸನ್ 3ರಲ್ಲಿ  ‘ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಭಾಸ್ಕರ್ ರಾವ್‍, ಸುಧಾ ಮೂರ್ತಿ, ಗುರುರಾಜ ಕರ್ಜಗಿ ಸೇರಿದಂತೆ ಹಲವರು ಗಣ್ಯರು  ಭಾಗವಹಿಸಿದ್ದಾರೆ. ನಾನು ಶಿವಕುಮಾರ್ ‍ಇಬ್ಬರೂ ಬಾಲ್ಯ ಸ್ನೇಹಿತರು. ಯಾವತ್ತೂ ಏನೂ ಕೇಳಿರಲಿಲ್ಲ. ಈ ಕಾರ್ಯಕ್ರಮಕ್ಕೆ ಬರುವಂತೆ ಕೇಳಿದಾಗ, ಸಂತೋಷದಿಂದ ಬಂದು ಭಾಗವಹಿಸಿದರು. ಗುರುರಾಜ ಕರ್ಜಗಿ ನಮ್ಮ ಮೇಷ್ಟ್ರು. ಅವರು ಸಹ ಪ್ರೀತಿಯಿಂದ ಬಂದರು. ಹೀಗೆ ಹಲವು ಗಣ್ಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ’ ಎಂದು ಚಂದ್ರು ತಿಳಿಸಿದರು.

    ‘ಬೊಂಬಾಟ್‍ ಭೋಜನ’ ಮೂರು ಸೀಸನ್‍ಗಳಿಂದ 2000ಕ್ಕೂ ಹೆಚ್ಚು ಕಂತುಗಳು ಪ್ರಸಾರವಾಗಿವೆ. ಇದೊಂದು ದಾಖಲೆ ಎಂದು ಮಾಹಿತಿ ನೀಡಿದ ಸಿಹಿಕಹಿ ಚಂದ್ರು, ಮುಂದಿನ ದಿನಗಳಲ್ಲಿ ನೋಡಿಕೊಂಡು ಗಿನ್ನೀಸ್‍ ಅಥವಾ ಲಿಮ್ಕಾ ಬುಕ್‍ ಆಫ್‍ ರೆಕಾರ್ಡ್ಸ್ ಸಂಸ್ಥೆಗಳಿಗೆ  ಸೂಕ್ತ ದಾಖಲೆ ಸಲ್ಲಿಸುವುದಾಗಿ ಹೇಳಿದರು. ಈ ಸಂದರ್ಭದಲ್ಲಿ ‘ಬೊಂಬಾಟ್‍ ಭೋಜನ 3’ ಪುಸ್ತಕವನ್ನು ಬಿಡುಗಡೆ ಮಾಡಲಾಯಿತು. ಹಾಗೆಯೇ, ಚಂದ್ರು ಅವರನ್ನು ಸ್ಟಾರ್ ಸುವರ್ಣ ವಾಹಿನಿಯಿಂದ ಆತ್ಮೀಯವಾಗಿ ಸನ್ಮಾನಿಸಲಾಯಿತು.

  • ಶಂಕರ್ ನಾಗ್ ಇದ್ದಿದ್ರೆ ಕರ್ನಾಟಕದಲ್ಲಿ ಸ್ಲಮ್ ಇರ್ತಾ ಇರಲಿಲ್ಲ- ಸಿಹಿ ಕಹಿ ಚಂದ್ರು

    ಶಂಕರ್ ನಾಗ್ ಇದ್ದಿದ್ರೆ ಕರ್ನಾಟಕದಲ್ಲಿ ಸ್ಲಮ್ ಇರ್ತಾ ಇರಲಿಲ್ಲ- ಸಿಹಿ ಕಹಿ ಚಂದ್ರು

    ಕಿರುತೆರೆಯ ಜನಪ್ರಿಯ ವೀಕೆಂಡ್ ವಿತ್ ರಮೇಶ್ (Weekend With Ramesh) ಕಾರ್ಯಕ್ರಮದಲ್ಲಿ ಈ ವಾರ ಸಿಹಿ- ಕಹಿ ಚಂದ್ರು (Sihi Kahi Chandru) ಅವರು ಸಾಧಕರ ಸೀಟ್ ಅಲಂಕರಿಸಿದ್ದಾರೆ. ತಮ್ಮ ಬಾಲ್ಯದ ತುಂಟಾಟ, ನಟನೆ, ಅಡುಗೆ ಹೀಗೆ ಸಾಕಷ್ಟು ವಿಚಾರಗಳ ಬಗ್ಗೆ ಹಿರಿಯ ನಟ ಸಿಹಿ ಕಹಿ ಚಂದ್ರು ಅವರು ಮಾತನಾಡಿದ್ದಾರೆ. ಈ ವೇಳೆ ಶಂಕರ್ ನಾಗ್ (Shankar Nag) ಜೊತೆಗಿನ ಒಡನಾಟದ ಬಗ್ಗೆ ಚಂದ್ರು ಅವರು ಬಿಚ್ಚಿಟ್ಟಿದ್ದಾರೆ.

    ವೀಕೆಂಡ್ ಟೆಂಟ್‌ನಲ್ಲಿ ಶಂಕರ್‌ನಾಗ್ (Shankar Nag) ಪರಿಚಯ ತಮಗೆ ಆಗಿದ್ದು ಹೇಗೆ? ಎಂಬುದರಿಂದ ಮಾತು ಆರಂಭಿಸಿದ ಸಿಹಿ-ಕಹಿ ಚಂದ್ರು, ನಾನು ಕಾಲೇಜು ಪ್ರೆಸಿಡೆಂಟ್ ಆಗಿದ್ದಾಗ ಶಂಕರ್‌ನಾಗ್ ಅವರನ್ನು ಕಾಲೇಜಿಗೆ ಅತಿಥಿಯಾಗಿ ಆಹ್ವಾನಿಸಲು ಹೋಗಿದ್ದೆ ಆಗ ಅವರು ಪುಸ್ತಕವೊಂದನ್ನು ಕೊಟ್ಟು ಓದಿಕೊಂಡು ಬಂದು ಚರ್ಚಿಸುವಂತೆ ಹೇಳಿದರು. ನನಗೆ ಅರ್ಥವಾಗದಾಗ ಅವರೇ ಅದನ್ನು ಹೇಗೆ ಓದಬೇಕು ಎಂದು ಹೇಳಿಕೊಟ್ಟರು, ಅದಾದ ಮೇಲೆ ಓದಿ ಅವರೊಟ್ಟಿಗೆ ಚರ್ಚಿಸಿದೆ. ಆಗ ಅವರು ನಮ್ಮ ಕಾಲೇಜಿಗೆ ಬರಲು ಒಪ್ಪಿಕೊಂಡು ಅತಿಥಿಯಾಗಿ ಬಂದರು ಎಂದು ಶಂಕರ್‌ನಾಗ್ ಅವರೊಟ್ಟಿಗಿನ ಮೊದಲ ಭೇಟಿಯನ್ನು ಸ್ಮರಿಸಿದರು. ಬಳಿಕ ನೋಡಿಸ್ವಾಮಿ ನಾವಿರೋದೆ ಹೀಗೆ ನಾಟಕದ ರಿಹರ್ಸಲ್‌ಗೆ ಹೋಗುತ್ತಿದ್ದರು. ಅಲ್ಲಿ ಶಂಕರ್ ನಾಗ್ ಅವರು ತಮ್ಮನ್ನು ಗುರುತಿಸಿ ‘ಮಾಲ್ಗುಡಿ ಡೇಸ್’ (Malgudi Days) ತಂಡಕ್ಕೆ ಸೇರಿಸಿಕೊಂಡ ವಿಷಯ ಹೇಳಿದರು. ಆಗ ಶಂಕರ್‌ನಾಗ್ ಅವರು ಹೇಗೆ ಪಟ-ಪಟನೆ ಕೆಲಸ ಮಾಡುತ್ತಿದ್ದರು ಎಂಬ ವಿಚಾರವನ್ನ ಚಂದ್ರು ಬಿಚ್ಚಿಟ್ಟರು. ಇದನ್ನೂ ಓದಿ:ಸಾವಿನ ಬಗ್ಗೆ ಸುಳ್ಳು ಸುದ್ದಿ, ಅಪಪ್ರಚಾರ ಮಾಡಿದವರಿಗೆ ದ್ವಾರಕೀಶ್ ಸ್ಪಷ್ಟನೆ

    ‘ನರಸಿಂಹ’ (Narasimha) ಎಂಬ ಹೆಸರಿನ ಸಿನಿಮಾದಲ್ಲಿ ಶಂಕರ್ ನಾಗ್ (Shankarnag) ಜೊತೆ ನಟಿಸುತ್ತಿದ್ದೆ, ಹೊಸ ಮನೆ ಕಟ್ಟಿಸಿದ್ದೀನಿ ನಿನಗೆ ತೋರಿಸುತ್ತೀನಿ ಎಂದು ಅವರ ಮೆಟಡೋರ್‌ನಲ್ಲಿ ಕೂಡಿಸಿಕೊಂಡು ಕರೆದುಕೊಂಡು ಹೋದರು. ಅದಾಗಲೇ ದೊಡ್ಡ ನಟರಾಗಿದ್ದ ಅವರು ಯಾವುದೋ ದೊಡ್ಡ ಮನೆ ಕಟ್ಟಿದ್ದಾರೆ ಎಂದುಕೊಂಡು ಹೋಗಿ ನೋಡಿದರೆ ಅಲ್ಲಿ ಸಣ್ಣ ಮನೆ ಇತ್ತು. ಒಂದು ಕೋಣೆಯ ಸರಳವಾದ ಮನೆ ನನಗೆ ಆಶ್ಚರ್ಯವಾಯಿತು ಎಂದು ನೆನಪು ಮಾಡಿಕೊಂಡರು.

    ಈ ಮನೆಯನ್ನು ಬರೀ ಎರಡು ದಿನದಲ್ಲಿ ಕಟ್ಟಿದ್ದೀವಿ, ರೆಡಿಮೇಡ್ ಬ್ಲಾಕ್ಸ್‌ಗಳನ್ನು ಬಳಸಿ ಕಟ್ಟಿರುವ ಮನೆ ಇದು. ಇದು ಜರ್ಮನಿಯ ತಂತ್ರಜ್ಞಾನ. ಇದನ್ನು ಕಟ್ಟಲು ಖರ್ಚಾಗಿರುವುದು ಹದಿನೈದು ಸಾವಿರ ರೂಪಾಯಿ ಅಷ್ಟೇ. ಇಂಥಹಾ ಸರಳ ಮನೆಯನ್ನು ರಾಜ್ಯದ ಎಲ್ಲಕಡೆ ಕಟ್ಟಿಸಬೇಕು ಅಂದುಕೊಂಡಿದ್ದೇನೆ. ಈ ತಂತ್ರಜ್ಞಾನ ಬಳಸಿ ಮನೆ ಕಟ್ಟಿಸಿದರೆ ರಾಜ್ಯದಲ್ಲಿರುವ ಸ್ಲಮ್‌ಗಳೆಲ್ಲ ನಿರ್ಮೂಲನೆ ಆಗುತ್ತವೆ, ಗುಡಿಸಲು ವಾಸ ಎಂಬುದೇ ಇರಲ್ಲ. ಈ ಮನೆ ಕಟ್ಟಿಸಲು ಸರ್ಕಾರದಿಂದ ಹತ್ತುಸಾವಿರ ಸಬ್ಸಿಡಿ ಕೊಡಿಸಲು ಪ್ರಯತ್ನ ಮಾಡುತ್ತಿದ್ದೀನಿ, ಸರ್ಕಾರದಿಂದ ರಿಯಾಯಿತಿ ಸಿಕ್ಕರೆ ನಾನು ಕರ್ನಾಟಕದಲ್ಲಿರುವ ಸ್ಲಮ್ ನಿರ್ಮೂಲನೆ ಮಾಡುತ್ತೇನೆ ಎಂದು ಹೇಳಿದ್ದರು. ಬಡವರ ಪರವಾಗಿ ಶಂಕರ್ ನಾಗ್‌ಗೆ ಇರುವ ಕಾಳಜಿ ಬಗ್ಗೆ ಚಂದ್ರು ವಿವರಿಸಿದರು.

    ಅವರು ಅಂದು ಆಡಿದ ಆ ಮಾತು ನಾನು ಜೀವನದಲ್ಲಿ ಮರೆಯುವಂತಿಲ್ಲ, ಆಗಿನ ಕಾಲಕ್ಕೆ ಅವರದ್ದು ಅದೆಂಥ ಯೋಚನೆ, ಆ ಯೋಜನೆ ಬಂದಿದ್ದರೆ ನಿಜವಾಗಿಯೂ ನಮ್ಮದು ಗುಡಿಸಲು ಮುಕ್ತ ರಾಜ್ಯವಾಗಿಬಿಟ್ಟಿರುತ್ತಿತ್ತು. ಶಂಕರ್‌ನಾಗ್ ಇದ್ದಿದ್ದೇ ಹಾಗೆ ಸದಾ ಸಕ್ರಿಯ, ಕೆಲಸ ಮಾಡುವಾಗಲೂ ಚಟ-ಪಟ ಎನ್ನುತ್ತಾ ಕೆಲಸ ಮಾಡುತ್ತಿದ್ದರು ಎಂದ ಚಂದ್ರು, ಶಂಕರ್‌ನಾಗ್ ಅವರು ನನ್ನ ಬದುಕಿನ ಗುರು ಎಂದು ಸಿಹಿ ಕಹಿ ಚಂದ್ರು ಬಿಚ್ಚಿಟ್ಟರು.