Tag: sikandar film

  • ಸಲ್ಮಾನ್ ಖಾನ್ ಸಿನಿಮಾದಲ್ಲಿ ಕನ್ನಡದ ನಟ ಕಿಶೋರ್?

    ಸಲ್ಮಾನ್ ಖಾನ್ ಸಿನಿಮಾದಲ್ಲಿ ಕನ್ನಡದ ನಟ ಕಿಶೋರ್?

    ಬಾಲಿವುಡ್ ನಟ ಸಲ್ಮಾನ್ ಖಾನ್ (Salman Khan) ಮತ್ತು ರಶ್ಮಿಕಾ ಮಂದಣ್ಣ (Rashmika Mandanna) ನಟನೆಯ ‘ಸಿಖಂದರ್’ (Sikandar) ಸಿನಿಮಾದಲ್ಲಿ ಕನ್ನಡದ ನಟ ಕಿಶೋರ್ (Kishore) ಎಂಟ್ರಿ ಕೊಟ್ಟಿದ್ದಾರೆ ಎನ್ನಲಾದ ಸುದ್ದಿಯೊಂದು ಈಗ ಚರ್ಚೆಗೆ ಗ್ರಾಸವಾಗಿದೆ. ಇದನ್ನೂ ಓದಿ:ದರ್ಶನ್‌ ಮಧ್ಯಂತರ ಜಾಮೀನು ಆದೇಶ ನಾಳೆಗೆ

    ಎ.ಆರ್ ಮುರುಗದಾಸ್ ನಿರ್ದೇಶನದ ಈ ಚಿತ್ರದ ಮೂಲಕ ಕಿಶೋರ್ ನಟಿಸಿದ್ದಾರೆ ಎನ್ನಲಾಗಿದೆ. ಈಗಾಗಲೇ ಚಿತ್ರೀಕರಣದಲ್ಲಿ ಕೂಡ ಅವರು ಭಾಗಿಯಾಗಿದ್ದಾರೆ ಎನ್ನಲಾಗಿದೆ. ಕಿಶೋರ್ ಈ ತಂಡವನ್ನು ಸೇರಿರುವ ಬಗ್ಗೆ ನಟನಾಗಲಿ, ‘ಸಿಖಂದರ್’ ಚಿತ್ರತಂಡವಾಗಲಿ ಅಧಿಕೃತ ಘೋಷಣೆ ಮಾಡಿಲ್ಲ. ಸದ್ಯ ಹರಿದಾಡುತ್ತಿರುವ ಸುದ್ದಿ ನಿಜನಾ? ಎಂದು ಅನೌನ್ಸ್ ಆಗುವವರೆಗೂ ಕಾಯಬೇಕಿದೆ.

    ಇನ್ನೂ ಕಿಶೋರ್ ಅವರು ಯಾವುದೇ ಪಾತ್ರ ಕೊಟ್ಟರೂ ಆ ಪಾತ್ರವೇ ತಾವಾಗಿ ನಟಿಸುವ ಕಲಾವಿದ. ತೆಲುಗು, ತಮಿಳು ಚಿತ್ರಗಳಲ್ಲಿ ಈಗಾಗಲೇ ನಟಿಸಿ ಸೈ ಎನಿಸಿಕೊಂಡಿದ್ದಾರೆ. ರಜನಿಕಾಂತ್ (Rajanikanth) ಜೊತೆ ‘ಜೈಲರ್’, ‘ವೆಟ್ಟೈಯಾನ್‌’ ಸಿನಿಮಾದಲ್ಲಿ ಅವರು ನಟಿಸಿದ್ದಾರೆ. ಜೊತೆಗೆ ಕನ್ನಡದ ಸಿನಿಮಾದಲ್ಲೂ ಅವರಿಗೆ ಬೇಡಿಕೆ ಇದೆ.

  • ಸಲ್ಮಾನ್, ರಶ್ಮಿಕಾ ನಟನೆಯ ‘ಸಿಖಂದರ್’ ಚಿತ್ರತಂಡ ಸೇರಿಕೊಂಡ ಕಾಜಲ್ ಅಗರ್ವಾಲ್

    ಸಲ್ಮಾನ್, ರಶ್ಮಿಕಾ ನಟನೆಯ ‘ಸಿಖಂದರ್’ ಚಿತ್ರತಂಡ ಸೇರಿಕೊಂಡ ಕಾಜಲ್ ಅಗರ್ವಾಲ್

    ಲ್ಮಾನ್ ಖಾನ್, ರಶ್ಮಿಕಾ ಮಂದಣ್ಣ (Rashmika Mandanna) ನಟನೆಯ ಬಹುನಿರೀಕ್ಷಿತ ‘ಸಿಖಂದರ್’ (Sikandar) ಸಿನಿಮಾಗೆ ಸೌತ್ ಸ್ಟಾರ್ ನಟಿ ಕಾಜಲ್ ಅಗರ್ವಾಲ್ (Kajal Aggarwal) ಎಂಟ್ರಿ ಕೊಟ್ಟಿದ್ದಾರೆ. ಈ ಮೂಲಕ ಬಾಲಿವುಡ್‌ನ ಬಿಗ್ ಆಫರ್‌ವೊಂದನ್ನು ನಟಿ ಬಾಚಿಕೊಂಡಿದ್ದಾರೆ ಎನ್ನಲಾದ ಸುದ್ದಿಯೊಂದು ಸೋಶಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ.

    ಈಗಾಗಲೇ ‘ಸಿಖಂದರ್’ ಸಿನಿಮಾದ ಶೂಟಿಂಗ್ ಭರದಿಂದ ನಡೆಯುತ್ತಿದೆ. ಸಲ್ಮಾನ್ ಖಾನ್ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ರಶ್ಮಿಕಾ ನಂತರ ಮತ್ತೋರ್ವ ನಟಿ ಕಾಜಲ್ ಚಿತ್ರಕ್ಕೆ ಸಾಥ್ ನೀಡುತ್ತಿದ್ದಾರೆ. ಅವರು ‘ಸಿಖಂದರ್’ ಸಲ್ಮಾನ್ (Salman Khan) ಜೊತೆ ಪ್ರಮುಖ ಪಾತ್ರದಲ್ಲಿ ‘ಮಗಧೀರ’ ನಟಿ ಕಾಣಿಸಿಕೊಳ್ತಿದ್ದಾರೆ ಎನ್ನಲಾಗಿದೆ. ಆದರೆ ನಟಿಯ ಎಂಟ್ರಿಯ ಹಾಗೂ ಆ ಪಾತ್ರದ ಕುರಿತು ಚಿತ್ರತಂಡ ಅಧಿಕೃತವಾಗಿ ತಿಳಿಸುವವರೆಗೂ ಕಾಯಬೇಕಿದೆ.

    ಕಾಜಲ್ ಎಂಟ್ರಿಯ ಬಗ್ಗೆ ಗುಸು ಗುಸು ಶುರುವಾಗ್ತಿದ್ದಂತೆ ಸಿನಿಮಾ ಕುರಿತು ಫ್ಯಾನ್ಸ್‌ಗೆ ನಿರೀಕ್ಷೆ ಹೆಚ್ಚಾಗಿದೆ. ಸಲ್ಮಾನ್, ರಶ್ಮಿಕಾ, ಕಾಜಲ್ ಈ ಮೂವರನ್ನು ತೆರೆಯ ಮೇಲೆ ಕಣ್ತುಂಬಿಕೊಳ್ಳೋಕೆ ಫ್ಯಾನ್ಸ್ ಕಾಯ್ತಿದ್ದಾರೆ. ಇದನ್ನೂ ಓದಿ:‘ಕಾಂತ’ ಚಿತ್ರಕ್ಕಾಗಿ ಕೈಜೋಡಿಸಿದ ರಾಣಾ ದಗ್ಗುಬಾಟಿ, ದುಲ್ಕರ್ ಸಲ್ಮಾನ್

    ಇನ್ನೂ ಈ ಚಿತ್ರವನ್ನು ಸ್ಟಾರ್ ಡೈರೆಕ್ಟರ್ ಎ.ಆರ್ ಮುರಗದಾಸ್ ನಿರ್ದೇಶನ ಮಾಡ್ತಿದ್ದಾರೆ. ಚಿತ್ರದಲ್ಲಿ ಪ್ರತೀಕ್ ಬಬ್ಬರ್, ಸತ್ಯರಾಜ್ ಸೇರಿದಂತೆ ಹಲವರು ನಟಿಸುತ್ತಿದ್ದಾರೆ. ಮುಂದಿನ ವರ್ಷ ಸಿನಿಮಾ ರಿಲೀಸ್ ಆಗಲಿದೆ.

  • ಸಲ್ಮಾನ್ ಖಾನ್ ಜೊತೆಗಿನ ರಶ್ಮಿಕಾ ನಟನೆಯ ಸಿನಿಮಾ ಬಗ್ಗೆ ಹೊರಬಿತ್ತು ಇಂಟರೆಸ್ಟಿಂಗ್ ಅಪ್‌ಡೇಟ್

    ಸಲ್ಮಾನ್ ಖಾನ್ ಜೊತೆಗಿನ ರಶ್ಮಿಕಾ ನಟನೆಯ ಸಿನಿಮಾ ಬಗ್ಗೆ ಹೊರಬಿತ್ತು ಇಂಟರೆಸ್ಟಿಂಗ್ ಅಪ್‌ಡೇಟ್

    ‘ಅನಿಮಲ್’ (Animal) ಸಿನಿಮಾದ ಸಕ್ಸಸ್ ನಂತರ ಸಲ್ಮಾನ್ ಖಾನ್ ಜೊತೆ ‘ಸಿಖಂದರ್’ (Sikandar Film) ಸಿನಿಮಾದಲ್ಲಿ ನಾಯಕಿಯಾಗಿ ರಶ್ಮಿಕಾ ಮಂದಣ್ಣ (Rashmika Mandanna) ನಟಿಸುತ್ತಿದ್ದಾರೆ. ಈ ಸಿನಿಮಾದ ಆ್ಯಕ್ಷನ್ ಸೀಕ್ವೆನ್ಸ್ ಚಿತ್ರೀಕರಣ ಮಾಡಲು ದಿನಾಂಕ ಫಿಕ್ಸ್‌ ಆಗಿದೆ.

    ಮೊದಲ ಬಾರಿಗೆ ಸಲ್ಮಾನ್ ಜೊತೆ ಕಾಣಿಸಿಕೊಳ್ಳುತ್ತಿರುವ ರಶ್ಮಿಕಾ ನಟನೆಯ ‘ಸಿಖಂದರ್’ ಸಿನಿಮಾದ ಶೂಟಿಂಗ್ ಕಳೆದ ಜೂನ್‌ನಿಂದಲೇ ಶುರುವಾಗಿದೆ. ಇದೀಗ ಆ.26ರಿಂದ 3 ರೀತಿಯ ಭರ್ಜರಿ ಆ್ಯಕ್ಷನ್ ಸೀನ್ಸ್ ಶೂಟಿಂಗ್ ಮಾಡಲು ಚಿತ್ರತಂಡ ಪ್ಲ್ಯಾನ್ ಮಾಡಿದೆ. ಮುಂಬೈನ ಚಿತ್ರಕೂಟ ಗ್ರೌಂಡ್ಸ್‌ನಲ್ಲಿ ಶೂಟಿಂಗ್ ಮಾಡಲು ಚಿತ್ರತಂಡ ಯೋಜನೆ ರೂಪಿಸಿದೆ. ಇದನ್ನೂ ಓದಿ:ಪವಿತ್ರಾಗೌಡ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ – ಆಗಸ್ಟ್‌ 27ಕ್ಕೆ ಮತ್ತೆ ವಿಚಾರಣೆ‌

    ಇನ್ನೂ ಈ ಚಿತ್ರವನ್ನು ಖ್ಯಾತ ನಿರ್ದೇಶಕ ಮುರುಗದಾಸ್ ನಿರ್ದೇಶನ ಮಾಡುತ್ತಿದ್ದಾರೆ. ಸಾಲು ಸಾಲು ಸಿನಿಮಾಗಳ ಸೋಲಿನ ಹಿನ್ನೆಲೆ ಸೌತ್ ನಿರ್ದೇಶಕನ ಜೊತೆ ಸಲ್ಮಾನ್ ಕೈಜೋಡಿಸಿದ್ದಾರೆ.

  • ನಯನತಾರಾ, ತ್ರಿಷಾ ಹಿಂದಿಕ್ಕಿದ ರಶ್ಮಿಕಾ ಮಂದಣ್ಣ- ದುಬಾರಿ ಸಂಭಾವನೆ ಪಡೆದ ನಟಿ

    ನಯನತಾರಾ, ತ್ರಿಷಾ ಹಿಂದಿಕ್ಕಿದ ರಶ್ಮಿಕಾ ಮಂದಣ್ಣ- ದುಬಾರಿ ಸಂಭಾವನೆ ಪಡೆದ ನಟಿ

    ಕೊಡಗಿನ ಬ್ಯೂಟಿ ರಶ್ಮಿಕಾ ಮಂದಣ್ಣ (Rashmika Mandanna) ಇದೀಗ ಸ್ಯಾಂಡಲ್‌ವುಡ್‌ಗೆ ನಿಲುಕದ ನಕ್ಷತ್ರ ಆಗಿದ್ದಾರೆ. ಬೇಡಿಕೆಯ ಜೊತೆ ನಟಿಯ ಸಂಭಾವನೆ ದುಪ್ಪಟ್ಟಾಗಿದೆ. ಸದ್ಯ ನಯನತಾರಾ (Nayanathara), ತ್ರಿಷಾರನ್ನು ಹಿಂದಿಕ್ಕಿ ರಶ್ಮಿಕಾ ಸುದ್ದಿಯಲ್ಲಿದ್ದಾರೆ. ಮುಂಬರುವ ಸಲ್ಮಾನ್ ಖಾನ್ (Salman Khan) ಚಿತ್ರಕ್ಕೆ ದುಬಾರಿ ಸಂಭಾವನೆಗೆ ನಟಿ ಬೇಡಿಕೆ ಇಟ್ಟಿದ್ದಾರೆ.

    ಸೌತ್‌ನ ಸ್ಟಾರ್ ಡೈರೆಕ್ಟರ್ ಎ.ಆರ್ ಮುರುಗದಾಸ್ ಮತ್ತು ಬಾಲಿವುಡ್ ನಟ ಸಲ್ಮಾನ್ ಖಾನ್ ಚಿತ್ರಕ್ಕೆ ಕನ್ನಡದ ನಟಿ ರಶ್ಮಿಕಾ ಮಂದಣ್ಣ ನಾಯಕಿಯಾಗಿರೋದು ಹಳೆಯ ಸುದ್ದಿ. ಈಗ ಲೇಟೆಸ್ಟ್ ಸುದ್ದಿ ಏನಪ್ಪಾ ಅಂದರೆ ಸಂಭಾವನೆ ವಿಚಾರದಲ್ಲಿ ದಕ್ಷಿಣದ ಸೂಪರ್ ಸ್ಟಾರ್ ನಟಿಯರಾದ ನಯನತಾರಾ ಮತ್ತು ತ್ರಿಷಾಗೆ ಕೊಡಗಿನ ನಟಿ ಠಕ್ಕರ್ ಕೊಟ್ಟಿದ್ದಾರೆ.

    ಸಾಕಷ್ಟು ವರ್ಷಗಳಿಂದ ನಟಿಸುತ್ತಿರುವ ನಯನತಾರಾ, ತ್ರಿಷಾ (Trisha) ಒಂದು ಸಿನಿಮಾಗೆ 10ರಿಂದ 12 ಕೋಟಿ ರೂ. ಸಂಭಾವನೆ ಪಡೆಯುತ್ತಾರೆ. ಆದರೆ ರಶ್ಮಿಕಾ, ಸಲ್ಮಾನ್ ನಟನೆಯ ‌’ಸಿಖಂದರ್’ (Sikandar Film) ಚಿತ್ರದಲ್ಲಿ ನಟಿಸಲು 15 ಕೋಟಿ ರೂ. ಸಂಭಾವನೆಗೆ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ:ಧ್ರುವ ಸರ್ಜಾ ನಟನೆಯ ‘ಬಹದ್ದೂರ್’ ರೀ ರಿಲೀಸ್

    ಆದರೆ ನಟಿಯ ಜೊತೆ ಮಾತುಕತೆ ನಡೆಸಿದ ಚಿತ್ರತಂಡ ಕಡೆಯದಾಗಿ 13 ಕೋಟಿ ರೂ. ಸಂಭಾವನೆ ನೀಡಲು ಮುಂದಾಗಿದೆ ಎನ್ನಲಾಗಿದೆ. ಈ ಮೂಲಕ ಖ್ಯಾತ ನಟಿಯರಿಗೆ ‘ಪುಷ್ಪ’ ನಟಿ ಠಕ್ಕರ್ ಕೊಟ್ಟಿದ್ದಾರೆ. ಇದೀಗ ಭಾರೀ ಸಂಭಾವನೆ ಪಡೆಯುವ ನಟಿಯರಲ್ಲಿ ರಶ್ಮಿಕಾ ಮಂದಣ್ಣ ಕೂಡ ಅಗ್ರ ಸ್ಥಾನದಲ್ಲಿದ್ದಾರೆ.

    ಸದ್ಯ ಪುಷ್ಪ 2, ಅನಿಮಲ್ ಪಾರ್ಕ್, ದಿ ಗರ್ಲ್‌ಫ್ರೆಂಡ್, ರೈನ್‌ಬೋ, ಸಿಖಂದರ್, ಚಾವಾ ಸೇರಿದಂತೆ ಹಲವು ಸಿನಿಮಾಗಳು ರಶ್ಮಿಕಾ ಕೈಯಲ್ಲಿವೆ.

  • Sikandar: ಸಲ್ಮಾನ್, ರಶ್ಮಿಕಾ ನಟನೆಯ ಸಿನಿಮಾ ಶೂಟಿಂಗ್ ಶುರುವಾಗೋದು ಯಾವಾಗ?

    Sikandar: ಸಲ್ಮಾನ್, ರಶ್ಮಿಕಾ ನಟನೆಯ ಸಿನಿಮಾ ಶೂಟಿಂಗ್ ಶುರುವಾಗೋದು ಯಾವಾಗ?

    ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣಗೆ (Rashmika Mandanna) ಬಾಲಿವುಡ್‌ನಲ್ಲಿ ಅದೃಷ್ಟದ ಬಾಗಿಲು ತೆರೆದಿದೆ. ಬಿಟೌನ್ ಸ್ಟಾರ್ ಸಲ್ಮಾನ್ ಖಾನ್ (Salman Khan) ಜೊತೆ ರಶ್ಮಿಕಾ ನಟಿಸೋದು ಕೂಡ ಪಕ್ಕಾ ಆಗಿದೆ. ‘ಸಿಖಂದರ್‌’ ಚಿತ್ರದ (Sikandar Film) ಶೂಟಿಂಗ್ ಯಾವಾಗ ಶುರುವಾಗಲಿದೆ ಎಂಬುದಕ್ಕೆ ಇದೀಗ ಉತ್ತರ ಕೂಡ ಸಿಕ್ಕಿದೆ.

    ಸಿನಿಮಾ ಸಕ್ಸಸ್‌ಗಾಗಿ ಎದುರು ನೋಡ್ತಿರುವ ಸಲ್ಮಾನ್ ಖಾನ್ ಇದೀಗ ಕಾಲಿವುಡ್ ಸ್ಟಾರ್ ನಿರ್ದೇಶಕ ಎ.ಆರ್ ಮುರುಗದಾಸ್ ಜೊತೆ ಕೈಜೋಡಿಸಿದ್ದಾರೆ. ಈ ಚಿತ್ರಕ್ಕೆ ರಶ್ಮಿಕಾ ಮಂದಣ್ಣ ಲೀಡ್ ರೋಲ್‌ನಲ್ಲಿ ಕಾಣಿಸಿಕೊಳ್ತಿದ್ದಾರೆ. ಇದನ್ನೂ ಓದಿ:ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟ ನಟಿ ಮಯೂರಿ

    ಇದೇ ಜೂನ್ 18ರಿಂದ ಮುಂಬೈ ಸೇರಿದಂತೆ ಹಲವೆಡೆ ಚಿತ್ರದ ಶೂಟಿಂಗ್ ಶುರುವಾಗಲಿದೆ. ಸಲ್ಮಾನ್‌ಗಾಗಿ ನಿರ್ದೇಶಕ ಉತ್ತಮ ಕಥೆಯನ್ನೇ ಬರೆದಿದ್ದಾರೆ. ಸಲ್ಮಾನ್ ಮತ್ತು ರಶ್ಮಿಕಾ ಕೂಡ ಚಿತ್ರತಂಡ ಸೇರಿಕೊಳ್ಳಲಿದ್ದಾರೆ.

    ಅಂದಹಾಗೆ, ಕುಬೇರ, ಪುಷ್ಪ 2, ಅನಿಮಲ್ 2, ರೈನ್‌ಬೋ, ಗರ್ಲ್‌ಫ್ರೆಂಡ್ ಸಿನಿಮಾ ಸೇರಿದಂತೆ ಹಲವು ಪ್ರಾಜೆಕ್ಟ್‌ಗಳು ರಶ್ಮಿಕಾ ಮಂದಣ್ಣ ಕೈಯಲ್ಲಿವೆ.

  • ರಶ್ಮಿಕಾ ಮಂದಣ್ಣ ಬಳಿಕ ‘ಸಿಖಂದರ್’ ಚಿತ್ರತಂಡ ಸೇರಿಕೊಂಡ ತ್ರಿಷಾ

    ರಶ್ಮಿಕಾ ಮಂದಣ್ಣ ಬಳಿಕ ‘ಸಿಖಂದರ್’ ಚಿತ್ರತಂಡ ಸೇರಿಕೊಂಡ ತ್ರಿಷಾ

    ಸೌತ್ ಬೆಡಗಿ ತ್ರಿಷಾ ಕೃಷ್ಣನ್ (Trisha Krishnan) ಇದೀಗ 14 ವರ್ಷಗಳ ನಂತರ ಬಾಲಿವುಡ್‌ನತ್ತ ಮುಖ ಮಾಡಿದ್ದಾರೆ. ತ್ರಿಷಾ ಕೂಡ ಮತ್ತೊಮ್ಮೆ ಬಿಟೌನ್ ಅಡ್ಡಾಗೆ ಎಂಟ್ರಿ ಕೊಟ್ಟಿದ್ದಾರೆ. ಬ್ಯಾಡ್ ಬಾಯ್ ಸಲ್ಮಾನ್ ಖಾನ್‌ಗೆ ತ್ರಿಷಾ ನಾಯಕಿಯಾಗ್ತಿದ್ದಾರೆ ಎಂಬ ಸುದ್ದಿ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

    2010ರಲ್ಲಿ ತೆರೆಕಂಡ ‘ಕಟ್ಟಾ ಮೀಟಾ’ ಚಿತ್ರದಲ್ಲಿ ಜಿಲ್ಲಾಧಿಕಾರಿಯ ಪಾತ್ರದಲ್ಲಿ ನಟಿಸಿದ್ದರು. ಅಕ್ಷಯ್ ಕುಮಾರ್‌ಗೆ (Akshay Kumar) ನಾಯಕಿ ತ್ರಿಷಾ ಕಾಣಿಸಿಕೊಂಡಿದ್ದರು. ಅದಾದ ನಂತರ ಬಾಲಿವುಡ್‌ಗೆ ಗುಡ್ ಬೈ ಹೇಳಿದ್ದರು. ಈಗ ಹಲವು ವರ್ಷಗಳ ನಂತರ ಸ್ಟಾರ್ ನಟನಿಗೆ ಜೋಡಿಯಾಗುವ ಮೂಲಕ ಸದ್ದು ಮಾಡುತ್ತಿದ್ದಾರೆ.

    ಸಲ್ಮಾನ್ ಖಾನ್ (Salman Khan) ನಟನೆಯ ‘ಸಿಖಂದರ್’ (Sikandar Film) ಚಿತ್ರದಲ್ಲಿ ರಶ್ಮಿಕಾ ಮಂದಣ್ಣ (Rashmika Mandanna) ನಾಯಕಿ ಎಂದು ಅಧಿಕೃತ ಘೋಷಣೆ ಮಾಡಿತ್ತು ಚಿತ್ರತಂಡ. ಈ ಬೆನ್ನಲ್ಲೇ ಸಿಖಂದರ್‌ ಸಲ್ಮಾನ್‌ಗೆ ಮತ್ತೋರ್ವ ನಾಯಕಿಯಾಗಿ ತ್ರಿಷಾ ಕೂಡ ಎಂಟ್ರಿ ಕೊಡ್ತಿದ್ದಾರೆ ಎನ್ನಲಾಗಿದೆ. ಸೆಕೆಂಡ್ ಲೀಡ್ ನಾಯಕಿಯಾಗಿ ನಟಿಸುತ್ತಾರೆ ಎಂಬ ಸುದ್ದಿ ಚರ್ಚೆಗೆ ಗ್ರಾಸವಾಗಿದೆ. ಅಧಿಕೃತ ಘೋಷಣೆ ಆಗುವವರೆಗೂ ಕಾದುನೋಡಬೇಕಿದೆ.


    ತ್ರಿಷಾಗೆ 41 ವರ್ಷ ವಯಸ್ಸಾಗಿದ್ರೂ ಅವರಿಗೆ ಡಿಮ್ಯಾಂಡ್ ಕಮ್ಮಿಯಾಗಿಲ್ಲ. ಅವರ ಕೈಯಲ್ಲಿ ಸದ್ಯ 5 ಚಿತ್ರಗಳಿವೆ. ತಮಿಳಿನ ವಿಧ ಮುಯರ್ಚಿ, ಮಲಯಾಳಂನ ‘ರಾಮ್’ ಮತ್ತು ‘ಐಡೆಂಟಿಟಿ’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಕಮಲ್ ಹಾಸನ್ ನಟನೆಯ ಥಗ್ ಲೈಫ್, ಮೆಗಾಸ್ಟಾರ್ ಚಿರಂಜೀವಿ ನಟನೆಯ ‘ವಿಶ್ವಾಂಭರ’ ಸಿನಿಮಾದಲ್ಲಿ ತ್ರಿಷಾ ನಾಯಕಿಯಾಗಿದ್ದಾರೆ.