Tag: sikar

  • ಮಗಳನ್ನು ಕೋಚಿಂಗ್ ಸೆಂಟರ್‌ಗೆ ಕರೆದೊಯ್ಯುತ್ತಿದ್ದ ವ್ಯಕ್ತಿ ರಾಜಸ್ಥಾನದ ಗ್ಯಾಂಗ್‌ವಾರ್‌ಗೆ ಬಲಿ

    ಮಗಳನ್ನು ಕೋಚಿಂಗ್ ಸೆಂಟರ್‌ಗೆ ಕರೆದೊಯ್ಯುತ್ತಿದ್ದ ವ್ಯಕ್ತಿ ರಾಜಸ್ಥಾನದ ಗ್ಯಾಂಗ್‌ವಾರ್‌ಗೆ ಬಲಿ

    ಜೈಪುರ: ತನ್ನ ಮಗಳನ್ನು ಕೋಚಿಂಗ್ ಸೆಂಟರ್‌ಗೆ (Coaching Center) ಕರೆದೊಯ್ಯುತ್ತಿದ್ದ ವ್ಯಕ್ತಿಯೊಬ್ಬರು ಶನಿವಾರ ರಾಜಸ್ಥಾನದ (Rajasthan) ಸಿಕಾರ್‌ನಲ್ಲಿ (Sikar) ನಡೆದ ಗ್ಯಾಂಗ್‌ವಾರ್‌ನಲ್ಲಿ (Gang War) ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಮತ್ತೊಬ್ಬ ಗ್ಯಾಂಗ್‌ಸ್ಟರ್ ಸಾವನ್ನಪ್ಪಿದ್ದು, ಇನ್ನೊಬ್ಬ ವ್ಯಕ್ತಿಗೆ ಗಾಯಗಳಾಗಿವೆ.

    ವರದಿಗಳ ಪ್ರಕಾರ ನಾಲ್ವರು ದುಷ್ಕರ್ಮಿಗಳು ಗುಂಡು ಹಾರಿಸಿದ್ದು, ಈ ವೇಳೆ ತಾರಾಚಂದ್ ಕಡ್ವಾಸರ್ ಅವರಿಗೆ ಗುಂಡು ತಗುಲಿ ಸಾವನ್ನಪ್ಪಿದ್ದಾರೆ. ಅವರ 16 ವರ್ಷದ ಮಗಳು ಮೃತ ತಂದೆಯನ್ನು ತಬ್ಬಿಕೊಂಡು ಗೋಗರೆಯುತ್ತಿರುವ ಭಾವನಾತ್ಮಕ ವೀಡಿಯೋವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದೆ.

    ಸಿಕಾರ್ ನಗರದ ಪಿಪ್ರಾಲಿ ರಸ್ತೆಯಲ್ಲಿ ಗ್ಯಾಂಗ್‌ಸ್ಟರ್ ರಾಜು ಥೇತ್‌ನನ್ನು ಗುರಿಯಾಗಿಸಿಕೊಂಡು 4 ಜನರು ಗುಂಡು ಹಾರಿಸಿದ್ದಾರೆ. ಈ ವೇಳೆ ಥೇತ್ ಹಾಗೂ ತಾರಾಚಂದ್‌ಗೆ ಗುಂಡು ತಗುಲಿ ಸಾವನ್ನಪ್ಪಿದ್ದಾರೆ. ಘಟನೆಯ ವೀಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಆರೋಪಿಗಳನ್ನು ಈಗಾಗಲೇ ಗುರುತಿಸಲಾಗಿದೆ. ಅವರನ್ನು ಬಂಧಿಸಲು ಪೊಲೀಸರು ರಾಜ್ಯಾದ್ಯಂತ ಶೋಧ ನಡೆಸುತ್ತಿದ್ದಾರೆ. ಇದನ್ನೂ ಓದಿ: ದತ್ತಜಯಂತಿಗೆ ಕಾಫಿನಾಡಲ್ಲಿ ಪೊಲೀಸ್ ಸರ್ಪಗಾವಲು – ಡಿ.5 ರಿಂದ 9ರವರೆಗೆ ಪ್ರವಾಸಿಗರಿಗೆ ನಿಷೇಧ

    ಘಟನೆ ನಡೆದಿರುವ ಸ್ಥಳದಲ್ಲಿ ಹಲವಾರು ಹಾಸ್ಟೆಲ್ ಹಾಗೂ ಕೋಚಿಂಗ್ ಸೆಂಟರ್‌ಗಳಿದ್ದು, ಮೃತ ಗ್ಯಾಂಗ್‌ಸ್ಟರ್ ಥೇತ್‌ನ ಸಹೋದರ ಕೂಡಾ ಆ ಪ್ರದೇಶದಲ್ಲಿ ಹಾಸ್ಟೆಲ್ ನಡೆಸುತ್ತಿದ್ದರು. ಮೃತ ಥೇತ್ ಬೆಂಬಲಿಗರು ಸಿಕಾರ್‌ನಲ್ಲಿ ಬಂದ್‌ಗೆ ಕರೆ ನೀಡಿದ್ದಾರೆ. ಹಂತಕರನ್ನು ತಕ್ಷಣವೇ ಬಂಧಿಸುವಂತೆ ಒತ್ತಾಯಿಸಿದ್ದಾರೆ. ಇದನ್ನೂ ಓದಿ: 3 ದಿನವಾದ್ರೂ ಸಿಗದ ಚಾಲಾಕಿ ಚಿರತೆ – 4ನೇ ದಿನಕ್ಕೆ ಕಾರ್ಯಾಚರಣೆ

    Live Tv
    [brid partner=56869869 player=32851 video=960834 autoplay=true]

  • ದೇವಸ್ಥಾನದಲ್ಲಿ ಕಾಲ್ತುಳಿತ- ಮೂವರು ಸಾವು

    ದೇವಸ್ಥಾನದಲ್ಲಿ ಕಾಲ್ತುಳಿತ- ಮೂವರು ಸಾವು

    ಜೈಪುರ: ರಾಜಸ್ಥಾನದ ಸಿಕಾನಲ್ಲಿರುವ ಖಾತು ಶ್ಯಾಮ್ ದೇವಸ್ಥಾನದಲ್ಲಿ ಕಾಲ್ತುಳಿತಕ್ಕೆ ಮೂವರು ಸಾವನ್ನಪ್ಪಿದ್ದು, ಹಲವರಿಗೆ ಗಂಭೀರ ಗಾಯಗಳಾದ ಘಟನೆ ನಡೆದಿದೆ.

    ಇಂದು ಮುಂಜಾನೆ ಮಾಸಿಕ ಜಾತ್ರೆ ನಿಮಿತ್ತ ಅನೇಕ ಜನರು ಸೇರಿದ್ದರು. ಈ ಸಂದರ್ಭದಲ್ಲಿ ದೇವಾಲಯದ ಪ್ರವೇಶ ದ್ವಾರದಲ್ಲಿ ನೂಕು ನುಗ್ಗಲು ಉಂಟಾಗಿ ಈ ಘಟನೆ ನಡೆದಿದೆ. ಘಟನೆಯಲ್ಲಿ ಮೂವರು ಮಹಿಳೆಯರು ಮೃತಪಟ್ಟಿದ್ದು, ಭಕ್ತರ ನಡುವೆ ನೂಕುನುಗ್ಗಲಾಗಿ ಹಲವರಿಗೆ ಗಂಭೀರ ಗಾಯಗಳಾಗಿವೆ.

    ಗಾಯಗೊಂಡವರ ಇಬ್ಬರನ್ನು ಚಿಕಿತ್ಸೆಗಾಗಿ ಜೈಪುರ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಗೆ ಸಂಬಂಧಿಸಿದ ಮಾಹಿತಿ ಪಡೆಯಲು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ – FIR ದಾಖಲಿಸಿ ಅಧಿಕೃತವಾಗಿ ತನಿಖೆ ಆರಂಭಿಸಿದ ಎನ್ಐಎ

    POLICE JEEP

    ಖಾತು ಶ್ಯಾಮ್‍ನನ್ನು ಕಲಿಯುಗದ ದೇವರು ಎಂದು ಪರಿಗಣಿಸಲಾಗುತ್ತದೆ. ವಿಷ್ಣುವಿನ 10ನೇ ಅವತಾರ ಎಂಬ ನಂಬಿಕೆಯಿಂದ ಪೂಜೆ ನಡೆಯುತ್ತಿದೆ. ಇದು ಯಾತ್ರಾರ್ಥಿಗಳ ಪ್ರಮುಖ ಸ್ಥಳದಲ್ಲೊಂದಾಗಿದೆ. ಇದನ್ನೂ ಓದಿ: ಹೈಬ್ರಿಡ್ ಉಗ್ರನನ್ನು ಬಂಧಿಸಿದ ಭದ್ರತಾ ಪಡೆ

    Live Tv
    [brid partner=56869869 player=32851 video=960834 autoplay=true]

  • ಜೈ ಶ್ರೀರಾಮ್, ಮೋದಿ ಜಿಂದಾಬಾದ್ ಹೇಳಲು ನಿರಾಕರಿಸಿದ ಆಟೋ ಚಾಲಕನ ಮೇಲೆ ಹಲ್ಲೆ

    ಜೈ ಶ್ರೀರಾಮ್, ಮೋದಿ ಜಿಂದಾಬಾದ್ ಹೇಳಲು ನಿರಾಕರಿಸಿದ ಆಟೋ ಚಾಲಕನ ಮೇಲೆ ಹಲ್ಲೆ

    – ಇಬ್ಬರ ಬಂಧನ

    ಜೈಪುರ: ಜೈ ಶ್ರೀರಾಮ್ ಹಾಗೂ ಮೋದಿ ಜಿಂದಾಬಾದ್ ಎಂದು ಹೇಳದ ಆಟೋ ಚಾಲಕನ ಮೇಲೆ ಹಲ್ಲೆ ನಡೆಸಿದ ಇಬ್ಬರನ್ನು ಪೊಲಿಸರು ಬಂಧಿಸಿದ್ದಾರೆ.

    ಈ ಘಟನೆ ಶನಿವಾರ ರಾಜಸ್ಥಾನದ ಸಿಕರ್ ಎಂಬಲ್ಲಿ ನಡೆದಿದೆ. ಗಫರ್ ಅಹ್ಮದ್ ಕಚ್ಛಾವಾ(52) ಹಲ್ಲೆಗೊಳಗಾದ ವ್ಯಕ್ತಿಯಾಗಿದ್ದು, ಬಂಧಿತರನ್ನು ಶಂಭು ದಯಾಳ್(35) ಹಾಗೂ ರಾಜೇಂದ್ರ(30) ಎಂದು ಗುರುತಿಸಲಾಗಿದೆ.

    ಇಬ್ಬರು ನನ್ನ ಗಡ್ಡ ಹಿಡಿದುಕೊಂಡು ತಳ್ಳಿ ಹಲ್ಲೆಗೈದಿದ್ದಾರೆ. ಅಲ್ಲದೆ ಪಾಕಿಸ್ತಾನಕ್ಕೆ ಹೋಗು ಎಂದು ಗದರಿಸಿರುವುದಾಗಿ ಆಟೋ ಚಾಲಕ ಗಫರ್ ಪೊಲೀಸರ ಬಳಿ ತಮ್ಮ ಅಳಲು ತೋಡಿಕೊಂಡಿದ್ದಾರೆ. ಈ ಬಗ್ಗೆ ಗಫರ್ ದೂರು ನೀಡಿದ ಬಳಿಕ ಕೇಲವ 6 ಗಂಟೆಯಲ್ಲಿ ಆರೋಪಿಗಳನ್ನು ಅರೆಸ್ಟ್ ಮಾಡಲಾಗಿದೆ.

    ಗಫರ್ ಪೊಲೀಸರಿಗೆ ನೀಡಿದ ದೂರಿನಲ್ಲಿ, ಆರೋಪಿಗಳು ನನ್ನ ಕೈಯಿಂದ ವಾಚ್ ಹಾಗೂ ಹಣವನ್ನು ಕಸಿದುಕೊಂಡರು. ನಂತರ ನನ್ನ ಕೆನ್ನೆಗೆ ಹೊಡೆದು ಹಲ್ಲು ಮುರಿದಿದ್ದಾರೆ. ಕಣ್ಣು, ಮುಖ ನೋಡದೆ ಹಿಗ್ಗಾಮುಗ್ಗ ಥಳಿಸಿದ್ದು, ಪರಿಣಾಮ ಕಣ್ಣು ಊದುಕೊಂಡಿದೆ ಎಂದು ತಿಳಿಸಿದ್ದಾರೆ.

    ಗಫರ್ ಶುಕ್ರವಾರ ಮುಂಜಾನೆ 4 ಗಂಟೆಯ ಸುಮಾರಿಗೆ ಪ್ರಯಾಣಿಕರೊಬ್ಬರನ್ನು ಅವರ ಗ್ರಾಮಕ್ಕೆ ಬಿಟ್ಟು ವಾಪಸ್ ಬರುತ್ತಿದ್ದರು. ಈ ವೇಳೆ ಕಾರಿನಲ್ಲಿ ಬಂದ ಇಬ್ಬರು ಗಫರ್ ಅವರನ್ನು ತಡೆದಿದ್ದಾರೆ. ಅಲ್ಲದೆ ಗಫರ್ ಬಳಿ ತಂಬಾಕು ಕೊಡುವಂತೆ ಕೇಳಿದ್ದಾರೆ. ತಂಬಾಕು ಕೇಳಿದ ತಕ್ಷಣ ಗಫರ್ ಅವರಿಗೆ ನೀಡಿದ್ದರೂ, ಅದನ್ನು ತೆಗೆದುಕೊಳ್ಳಲು ಆರೋಪಿಗಳು ನಿರಾಕರಿಸಿದ್ದಾರೆ. ಅಲ್ಲದೆ ಮೋದಿ ಜಿಂದಾಬಾದ್ ಹಾಗೂ ಜೈ ಶ್ರೀರಾಮ್ ಎಂದು ಹೇಳುವಂತೆ ಒತ್ತಾಯಿಸಿದ್ದಾರೆ. ನನ್ನ ಆಟೋವನ್ನು ನೆಲಕ್ಕೆ ತಳ್ಳಿ ನನ್ನ ಮೇಲೆ ಹಿಗ್ಗಾಮುಗ್ಗವಾಗಿ ಕೋಲಿನಿಂದ ಹಲ್ಲೆ ಮಾಡಿದ್ದಾರೆ ಎಂದು ಪೊಲೀಸರಿಗೆ ಗಫರ್ ನಡೆದ ಘಟನೆಯ ಬಗ್ಗೆ ವಿವರಿಸಿದ್ದಾರೆ.

    ಗಫರ್ ನೀಡಿದ ದೂರಿನಂತೆ ಘಟನೆಯ ಸಂಬಂಧ ಇಬ್ಬರನ್ನು ಬಂಧಿಸಲಾಗಿದೆ. ಪಾನಮತ್ತ ಸ್ಥಿತಿಯಲ್ಲಿ ಸಂತ್ರಸ್ತನೊಂದಿಗೆ ಆರೋಪಿಗಳು ಅನುಚಿತವಾಗಿ ವರ್ತಿಸಿದ್ದಾರೆ ಎಂದು ಪ್ರಾಥಮಿಕ ತನಿಖೆಯ ವೇಳೆ ಬಯಲಾಗಿದೆ ಅಂತ ಸಿಕರ್ ನ ಹಿರಿಯ ಪೊಲೀಸ್ ಅಧಿಕಾರಿ ಪುಷ್ಪೇಂದ್ರ ಸಿಂಗ್ ತಿಳಿಸಿದ್ದಾರೆ.