Tag: Silver Medal

  • ಟೋಕಿಯೋ ಪ್ಯಾರಾಲಿಂಪಿಕ್ಸ್‌ನಲ್ಲಿ ವೀರ ಕನ್ನಡಿಗ ಸುಹಾಸ್ ಬೆಳ್ಳಿ ಸಾಧನೆ

    ಟೋಕಿಯೋ ಪ್ಯಾರಾಲಿಂಪಿಕ್ಸ್‌ನಲ್ಲಿ ವೀರ ಕನ್ನಡಿಗ ಸುಹಾಸ್ ಬೆಳ್ಳಿ ಸಾಧನೆ

    ಟೋಕಿಯೋ: ಟೋಕಿಯೋ ಪ್ಯಾರಾಲಿಂಪಿಕ್ಸ್ ನಲ್ಲಿ ವೀರ ಕನ್ನಡಿಗ ಬೆಳ್ಳಿ ಗೆದ್ದಿದ್ದಾರೆ. ಕರ್ನಾಟಕ ಮೂಲದ ಐಎಎಸ್ ಅಧಿಕಾರಿ ಸುಹಾಸ್ ಯತಿರಾಜ್ ಬ್ಯಾಡ್ಮಿಂಟನ್‍ನಲ್ಲಿ ಬೆಳ್ಳಿ ಪದಕ ಮುಡಿಗೇರಿಸಿಕೊಂಡಿದ್ದು, ಈ ಮೂಲಕ ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ.

    ಬ್ಯಾಡ್ಮಿಂಟನ್ ಫೈನಲ್‍ನ SL4 ವಿಭಾಗದಲ್ಲಿ ಫ್ರಾನ್ಸ್ ನ ಲುಕಾಸ್ ಮಜೂರ್ ಎದುರು 15-21, 21-17, 21-15 ಅಂತರದಲ್ಲಿ ಸೋಲು ಅನುಭವಿಸಿ ಬೆಳ್ಳಿ ಕೊರಳಿಗೇರಿಸಿಕೊಂಡಿದ್ದಾರೆ. ಇಂದು ಮುಂಜಾನೆ ಚಿನ್ನದ ಪದಕಕ್ಕಾಗಿ ನಡೆದ ಪಂದ್ಯದಲ್ಲಿ ಫ್ರಾನ್ಸ್ ನ ಲುಕಾಸ್ ಮಜೂರ್ ವಿರುದ್ಧ ಸೋತಿದ್ದಾರೆ. ಇದನ್ನೂ ಓದಿ: ಬ್ಯಾಡ್ಮಿಂಟನ್ ಅವಳಿ ಪದಕ- ಪ್ರಮೋದ್ ಭಗತ್‍ಗೆ ಚಿನ್ನ, ಮನೋಜ್ ಸರ್ಕಾರ್‌ಗೆ ಕಂಚು

    ಶಿವಮೊಗ್ಗ ಮೂಲದ ಯತಿರಾಜ್ ಹಾಗೂ ಹಾಸನ ಮೂಲದ ಜಯಶ್ರೀ ಅವರ ಪುತ್ರ ಸುಹಾಸ್ ಬೆಳ್ಳಿ ಪದಕವನ್ನು ಮುಡಿಗೇರಿಸಿಕೊಂಡಿದ್ದಾರೆ. ಸದ್ಯ ಉತ್ತರ ಪ್ರದೇಶದ ನೋಯ್ಡಾದಲ್ಲಿ ಸುಹಾಸ್ ಜಿಲ್ಲಾಧಿಕಾರಿಯಾಗಿದ್ದಾರೆ. ಸುಹಾಸ್ ಅವರ ಪತ್ನಿ ರಿತು ಗಾಜಿಯಾಬಾದ್‍ನಲ್ಲಿ ಸಹಾಯಕ ವಿಭಾಗಾಧಿಕಾರಿ ಆಗಿದ್ದಾರೆ.

    ಸುಹಾಸ್ ಯತಿರಾಜ್ ಸಾಧನೆಗೆ ರಾಷ್ಟ್ರಪತಿ ರಾಮ್‍ನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅಭಿನಂದನೆ ಸಲ್ಲಿಸಿದ್ದಾರೆ. ಸುಹಾಸ್ ಅವರ ಬೆಳ್ಳಿ ಬೇಟೆಯೊಂದಿಗೆ ಪ್ಯಾರಾ ಒಲಿಂಪಿಕ್ಸ್ ನಲ್ಲಿ ಭಾರತದ ಪದಕಗಳ ಸಂಖ್ಯೆ 19ಕ್ಕೆ ಏರಿದೆ. 5 ಚಿನ್ನ, 8 ಬೆಳ್ಳಿ, 6 ಕಂಚು ಪದಕಗಳನ್ನು ಭಾರತ ಗೆದ್ದಿದೆ.

  • ಡಿಸ್ಕಸ್ ಥ್ರೋ ಬೆಳ್ಳಿ ಪದಕ ಗೆದ್ದ ಯೋಗೇಶ್ ಕಥುನಿಯಾ

    ಡಿಸ್ಕಸ್ ಥ್ರೋ ಬೆಳ್ಳಿ ಪದಕ ಗೆದ್ದ ಯೋಗೇಶ್ ಕಥುನಿಯಾ

    ಟೋಕಿಯೋ: ಪ್ಯಾರಾಲಂಪಿಕ್ಸ್ ಪುರುಷರ ಡಿಸ್ಕಸ್ ಥ್ರೋ ಎಫ್ 56 ವಿಭಾಗದಲ್ಲಿ ಭಾರತದ ಯೋಗೇಶ್ ಕಥುನಿಯಾ ಬೆಳ್ಳಿ ಪದಕ ಮುಡಿಗೇರಿಸಿಕೊಂಡಿದ್ದಾರೆ.

    24 ವರ್ಷದ ಯೋಗೇಶ್ ಕಥುನಿಯಾ ಪ್ಯಾರಾಲಂಪಿಕ್ಸ್ ಪುರುಷರ ಡಿಸ್ಕಸ್ ಥ್ರೋ ಎಫ್ 56 ವಿಭಾಗದಲ್ಲಿ 44.38 ಮೀಟರ್ ಎಸೆತದೊಂದಿಗೆ ಬೆಳ್ಳಿ ಪದಕಕ್ಕೆ ಕೊರಳೊಡ್ಡಿದ್ದಾರೆ. ಈ ಮೂಲಕ ಭಾರತಕ್ಕೆ ಐದನೇ ಪದಕ ತಂದುಕೊಟ್ಟಿದ್ದಾರೆ. ಈ ಹಿಂದೆ ದುಬೈನಲ್ಲಿ ನಡೆದಿದ್ದ ವಲ್ರ್ಡ್ ಪ್ಯಾರಾ ಅಥ್ಲಿಟಿಕ್ಸ್ ಚಾಂಪಿಯನ್‍ಶಿಪ್‍ನಲ್ಲಿ ಕಂಚು ಗೆದ್ದಿದ್ದರು.  ಇದನ್ನೂ ಓದಿ: ಶೂಟಿಂಗ್‍ನಲ್ಲಿ ಚಿನ್ನ ಗೆದ್ದ ಅವನಿ ಲೇಖರಾ

    ಯೋಗೇಶ್ ಕಥುನಿಯಾ ಸಾಧನೆಗೆ ಪ್ರಧಾನಿ ಮೋದಿ ಟ್ವಿಟ್ಟರ್‍ ನಲ್ಲಿ ಮೆಚ್ಚುಗೆ ಸೂಚಿಸಿದ್ದಾರೆ. ನಿನ್ನೆ ವಿನೋದ್ ಕುಮಾರ್ ಡಿಸ್ಕಸ್ ಥ್ರೋನ ಎಫ್ 52 ವಿಭಾಗದಲ್ಲಿ 19.91 ಮೀಟರ್ ಎಸೆದು ಬೆಳ್ಳಿ ಪದಕ ಗೆದ್ದು ವಿಶ್ವ ದಾಖಲೆ ಸರಿದೂಗಿಸಿದ್ದರು. ಆದರೆ ಅವರ ಪದಕಕ್ಕೆ ತಡೆ ಹಿಡಿಯಲಾಗಿದ್ದು ಇಂದು ಅಧಿಕೃತ ಘೋಷಣೆ ಹೊರಬರಲಿದೆ. ಇದನ್ನೂ ಓದಿ: ಡಿಸ್ಕಸ್ ಥ್ರೋ ವಿನೋದ್ ಕುಮಾರ್ ಕಂಚಿನ ಪದಕಕ್ಕೆ ತಡೆ

    ಟೋಕಿಯೋ 2020 ಪ್ಯಾರಾಲಿಂಪಿಕ್ಸ್‍ನಲ್ಲಿ ಭಾರತವು ಇದುವರೆಗೆ 1 ಚಿನ್ನ, 3 ಬೆಳ್ಳಿ, 1 ಕಂಚಿನ ಪದಕ ಗೆದ್ದಿದೆ. ಇದನ್ನೂ ಓದಿ: ಪ್ಯಾರಾಲಂಪಿಕ್ಸ್‌ನಲ್ಲಿ ಬೆಳ್ಳಿ ಪದಕ – ಇತಿಹಾಸ ನಿರ್ಮಿಸಿದ ಭವಿನಾಬೆನ್ ಪಟೇಲ್

  • ಪ್ಯಾರಾಲಂಪಿಕ್‍ನಲ್ಲಿ ಹೈ ಜಂಪ್‍ನಲ್ಲಿ ಗೆದ್ದ ನಿಶಾದ್ ಕುಮಾರ್‌ – ಪ್ರಧಾನಿ ಮೋದಿ ವಿಶ್

    ಪ್ಯಾರಾಲಂಪಿಕ್‍ನಲ್ಲಿ ಹೈ ಜಂಪ್‍ನಲ್ಲಿ ಗೆದ್ದ ನಿಶಾದ್ ಕುಮಾರ್‌ – ಪ್ರಧಾನಿ ಮೋದಿ ವಿಶ್

    ನವದೆಹಲಿ: ಟೋಕಿಯೋ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಮತ್ತೊಂದು ಬೆಳ್ಳಿ ಪದಕ ಲಭಿಸಿದೆ. ಜಪಾನ್ ರಾಜಧಾನಿ ಟೋಕಿಯೊದ ಪ್ಯಾರಾಲಿಂಪಿಕ್ಸ್‌ನಲ್ಲಿ ನಡೆದ ಹೈ ಜಂಪ್‍ನಲ್ಲಿ ಭಾರತದ ನಿಶಾದ್ ಕುಮಾರ್ ಬೆಳ್ಳಿ ಪದಕ ಗೆದ್ದಿದ್ದಾರೆ.

     Nishad Kumar

    ಭಾರತದ ಭಾವಿನಬೆನ್ ಪಟೇಲ್ ಅವರು ಭಾನುವಾರ ಟೇಬಲ್ ಟೆನಿಸ್ (ಟಿಟಿ) ನಲ್ಲಿ ಭಾರತದ ಮೊದಲ ಪ್ಯಾರಾಲಿಂಪಿಕ್ಸ್ ಪದಕ ಗೆಲ್ಲುವ ಮೂಲಕ ಇತಿಹಾಸ ಸೃಷ್ಟಿಸಿದ್ದರು. ಇದೀಗ ನಿಶಾದ್ ಕುಮಾರ್ ಹೈಜಂಪ್ ನಲ್ಲಿ ಬೆಳ್ಳಿ ಪದಕ ಜಯಿಸುವುದರೊಂದಿಗೆ ಭಾರತಕ್ಕೆ ಎರಡು ಬೆಳ್ಳಿ ಪದಕ ಬಂದಿದೆ. ಇದನ್ನೂ ಓದಿ:ಮದುವೆಯಲ್ಲಿ ತಂಬಾಕು ಸೇವಿಸುತ್ತಿದ್ದ ವರನಿಗೆ ವಧುವಿನಿಂದ ಕಪಾಳಮೋಕ್ಷ

    ಬೆಳ್ಳಿ ಪದಕ ವಿಜೇತ ನಿಶಾದ್ ಕುಮಾರ್‌ಗೆ ಪ್ರಧಾನಿ ಮೋದಿ ಟ್ವೀಟ್ ಮೂಲಕ ಶುಭ ಕೋರಿದ್ದಾರೆ. ಟೋಕಿಯೊದಿಂದ ಸಂತೋಷದಾಯಕ ಸುದ್ದಿ ಬಂದಿದೆ. ಪುರುಷರ ಹೈ ಜಂಪ್ ಟಿ 47 ನಲ್ಲಿ ನಿಶಾದ್ ಕುಮಾರ್ ಬೆಳ್ಳಿ ಪದಕ ಗೆದ್ದಿರುವುದಕ್ಕೆ ಸಂತೋಷವಾಗಿದೆ. ಅವರು ಅತ್ಯುತ್ತಮ ಕ್ರೀಡಾಪಟು ಮತ್ತು ಅತ್ಯುತ್ತಮ ಕೌಶಲ್ಯ ಮತ್ತು ಸ್ಥಿರತೆಯನ್ನು ಹೊಂದಿದ್ದಾರೆ. ಅವರಿಗೆ ಅಭಿನಂದನೆಗಳು ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ:ಗೃಹ ಪ್ರವೇಶಕ್ಕೂ ಮುನ್ನವೇ ಮನೆ ಕಳ್ಳತನ

     

     

  • ಪ್ಯಾರಾಲಂಪಿಕ್ಸ್‌ನಲ್ಲಿ ಬೆಳ್ಳಿ ಪದಕ – ಇತಿಹಾಸ ನಿರ್ಮಿಸಿದ ಭವಿನಾಬೆನ್ ಪಟೇಲ್

    ಪ್ಯಾರಾಲಂಪಿಕ್ಸ್‌ನಲ್ಲಿ ಬೆಳ್ಳಿ ಪದಕ – ಇತಿಹಾಸ ನಿರ್ಮಿಸಿದ ಭವಿನಾಬೆನ್ ಪಟೇಲ್

    ಟೋಕಿಯೋ: ಪ್ಯಾರಾಲಿಂಪಿಕ್ಸ್ ವನಿತಾ ವಿಭಾಗದ ಟೇಬಲ್ ಟೆನಿಸ್ ಸ್ಪರ್ಧೆಯಲ್ಲಿ ಭಾರತದ ಭವಿನಾಬೆನ್ ಪಟೇಲ್ ಬೆಳ್ಳಿ ಪದಕ ಗೆದ್ದು ಇತಿಹಾಸ ಸೃಷ್ಟಿಸಿದ್ದಾರೆ.

    ಫೈನಲ್ ಪಂದ್ಯದಲ್ಲಿ ಚೀನಾದ ಯಿಂಗ್ ಜ್ಯೂ ಅವರು ಭವಿನಾಬೆನ್ ಪಟೇಲ್, 7-11, 5-11, 6-11 ನೇರ ಸೆಟ್‍ಗಳಿಂದ ಜಯಗಳಿಸಿದರು. ಫೈನಲ್ ಸೋತರೂ ಟೇಬಲ್ ಟೆನಿಸ್ ಸ್ಪರ್ಧೆಯಲ್ಲಿ ಭಾರತದ ಪರ ಮೊದಲ ಪದಕ ಪಡೆದ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದಾರೆ. ಇದನ್ನೂ ಓದಿ: ರೋಹಿತ್ ಶರ್ಮಾ ಔಟ್ ಆಗ್ತಿದ್ದಂತೆ 4ನೇ ಕ್ರಮಾಂಕದಲ್ಲಿ ಬ್ಯಾಟ್ ಹಿಡಿದು ಮೈದಾನಕ್ಕಿಳಿದ ‘ಜಾರ್ವೋ’!

    ಈ ಮೊದಲು ನಡೆದ ಕ್ವಾರ್ಟರ್ ಫೈನಲ್ ಪಂದಲ್ಲಿ ಪರಿಕ್ ರ್ಯಾನ್ಕೊವಿಕ್ ಅವರನ್ನು ಸೋಲಿಸಿ ಸೆಮಿಫೈನಲ್ ಪ್ರವೇಶಿಸಿದ್ದರು. ನಂತರ ಸೆಮಿಪೈನಲ್ ಪಂದ್ಯದಲ್ಲಿ ವಿಶ್ವದ ಮೂರನೇ ಶ್ರೇಯಾಂಕಿತ ಜಾಂಗ್ ಮಿಯಾವೂ ಅವರನ್ನು 7-11, 11-7, 11-4, 9-11, 11-8, ಸೆಟ್‍ಗಳ ಅಂತರದಿಂದ ಪರಾಭವಗೊಳಿಸಿ ಫೈನಲ್ ಪ್ರವೇಶಿಸಿದ್ದರು. ಇದನ್ನೂ ಓದಿ: ಕ್ರಿಶ್ಚಿಯಾನೊ ರೊನಾಲ್ಡೊ ಹೊಸ ಕ್ಲಬ್ ಸೇರ್ಪಡೆ: ಟ್ರೆಂಡ್ ಆಯ್ತು ನಂ-7

    ಗುಜರಾತ್ ಮೂಲದ34 ವರ್ಷದ ಭವಿನಾಬೆನ್ 12 ವರ್ಷದವರಿದ್ದಾಗ ಪೋಲಿಯೊ ಕಾಣಿಸಿಕೊಂಡಿತ್ತು. ಬಳಿಕ ಕ್ರೀಡೆಯಲ್ಲಿ ತೊಡಗಿಕೊಂಡು ಇದೀಗ ಟೋಕಿಯೋ ಪ್ಯಾರಾಲಿಂಪಿಕ್ಸ್ ಮಹಿಳಾ ವಿಭಾಗದ ಟೇಬಲ್ ಟೆನಿಸ್ ವಿಭಾಗದಲ್ಲಿ ಭಾರತವನ್ನು ಪ್ರತಿನಿಧಿಸಿ ಪದಕ ಗೆದ್ದು ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

     

  • ಮೀರಾಬಾಯಿ ಗೆದ್ದಿರುವ ಬೆಳ್ಳಿ ಪದಕ ಚಿನ್ನದ್ದಾಗುವ ಸಾಧ್ಯತೆ

    ಮೀರಾಬಾಯಿ ಗೆದ್ದಿರುವ ಬೆಳ್ಳಿ ಪದಕ ಚಿನ್ನದ್ದಾಗುವ ಸಾಧ್ಯತೆ

    ಟೋಕಿಯೋ: ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಮೊದಲ ಪದಕ ತಂದುಕೊಟ್ಟ ವೇಟ್‍ಲಿಫ್ಟರ್ ಮೀರಾಬಾಯಿ ಅವರ ಬೆಳ್ಳಿ ಪದಕ ಇದೀಗ ಚಿನ್ನದ ಪದಕವಾಗುವ ಸಾಧ್ಯತೆಯೊಂದು ದಟ್ಟವಾಗಿದೆ.

    ಟೋಕಿಯೋ ಒಲಿಂಪಿಕ್ಸ್‌ನಲ್ಲಿ 49 ಕೆ.ಜಿ ವಿಭಾಗದ ವೇಟ್‍ಲಿಫ್ಟಿಂಗ್‍ನಲ್ಲಿ ಚೀನಾದ ಹೊ ಜಿಹೂಹು ಒಟ್ಟು 210 ಕೆಜಿ (94+116 ಕೆಜಿ) ಭಾರ ಎತ್ತಿ ಚಿನ್ನದ ಪದಕ ಬೇಟೆಯಾಡಿದರೆ, ಮೀರಾಬಾಯಿ ಚಾನು 202 ಕೆಜಿ (87+115 ಕೆಜಿ) ಭಾರ ಎತ್ತಿ ಬೆಳ್ಳಿ ಪದಕವನ್ನು ತಮ್ಮದಾಗಿಸಿಕೊಂಡಿದ್ದರು. ಇಂಡೋನೇಷ್ಯಾದ ಐಸಾಹ್ ವಿಂಡಿ ಕಾಂಟಿಕಾ ವಿಂಡಿ 194 ಕೆಜಿ (84+110ಕೆಜಿ) ಕಂಚಿನ ಪದಕ ಪಡೆದಿದ್ದರು. ಆದರೆ ಇದೀಗ ಚೀನಾದ ಹೊ ಜಿಹೂಹು ಡೋಪಿಂಗ್ ಪರೀಕ್ಷೆಯಲ್ಲಿ ಫೈಲ್ ಆಗಿರುವುದರಿಂದಾಗಿ ಅವರು ಅನರ್ಹರಾಗಿ ಅವರ ಬಳಿಕ ದ್ವೀತಿಯ ಸ್ಥಾನ ಪಡೆದ ಮೀರಾಬಾಯಿಗೆ ಚಿನ್ನದ ಪದಕ ಸಿಗುವ ಕುರಿತು ವರದಿಯಾಗಿದೆ.

    ಟೋಕಿಯೋ ಒಲಿಂಪಿಕ್ಸ್ ಸಮಿತಿ ತಿಳಿಸಿರುವಂತೆ, ಹೊ ಜಿಹೂಹು ಮೊದಲ ಡೋಪಿಂಗ್ ಪರೀಕ್ಷೆಯಲ್ಲಿ ಫೈಲ್ ಆಗಿದ್ದು, ಅವರು ಸ್ಪರ್ಧೆಗು ಮುಂಚೆ ಯಾವುದಾದರು ಔಷಧಿಯನ್ನು ತೆಗೆದುಕೊಂಡಿದ್ದಾರಾ ಎಂದು ತಿಳಿಯಲು ಎರಡನೇ ಪರೀಕ್ಷೆ ನಡೆಸಲು ತೀರ್ಮಾನಿಸಿದೆ.

    ಟೋಕಿಯೋ ಒಲಿಂಪಿಕ್ಸ್‌ನಲ್ಲಿ 49 ಕೆ.ಜಿ ವಿಭಾಗದ ವೇಟ್‍ಲಿಫ್ಟಿಂಗ್‍ನಲ್ಲಿ 26 ವರ್ಷದ ಮೀರಾಬಾಯಿ ಚಾನು ಬೆಳ್ಳಿ ಪದಕ ಗೆದ್ದಿದ್ದರು. ಈ ಮೂಲಕ ಯಶಸ್ವಿಯಾಗಿ ತನ್ನ ಸ್ಪರ್ಧೆ ಮುಗಿಸಿರುವ ಮೀರಾಬಾಯಿ ಚಾನು ಇಂದು ನವದೆಹಲಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ. ಅವರು ಬರುತ್ತಿದ್ದಂತೆ ದೇಶದಲ್ಲಿ ಅದ್ಧೂರಿ ಸ್ವಾಗತ ಸಿಕ್ಕಿದೆ. ಇದನ್ನೂ ಓದಿ: ಬೆಳ್ಳಿ ಪದಕ ಗೆದ್ದ ಮೀರಾಬಾಯಿಗೆ ಡೊಮಿನೊಸ್ ಕಡೆಯಿಂದ ಜೀವನ ಪೂರ್ತಿ ಪಿಜ್ಜಾ

    49 ಕೆಜಿ ವಿಭಾಗದ ಭಾರ ಎತ್ತುವ ಸ್ಪರ್ಧೆಯಲ್ಲಿ ಮೀರಾಬಾಯಿ ಚಾನು ಬೆಳ್ಳಿ ಪದಕ ಗೆದ್ದು ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಮೊದಲ ಪದಕ ಗಳಿಸಿ ಕೊಟ್ಟ ಕೀರ್ತಿಗೆ ಭಾಜನರಾಗಿದ್ದಾರೆ. 84 ಕೆಜಿ ಮತ್ತು 87 ಕೆಜಿ ಭಾರವನ್ನು ಯಶಸ್ವಿಯಾಗಿ ಎತ್ತಿದ ಮಿರಾಬಾಯ್ ಚಾನು 89 ಕೆಜಿ ಭಾರ ಎತ್ತುವಲ್ಲಿ ವಿಫಲರಾದರು. ಆದರೆ ಚೀನಾದ ಸ್ಪರ್ಧಿ ಜಿಹೂಹು 94 ಕೆಜಿ ಭಾರ ಎತ್ತಿ ಒಲಿಂಪಿಕ್ ದಾಖಲೆ ಬರೆದರು. ಇದು ಒಲಿಂಪಿಕ್ಸ್‍ನಲ್ಲಿ ಭಾರ ಎತ್ತುವ ಸ್ಪರ್ಧೆಯಲ್ಲಿ ಭಾರತದ ಶ್ರೇಷ್ಠ ಸಾಧನೆಯಾಗಿದೆ. ಈ ಹಿಂದೆ ಸಿಡ್ನಿ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಕರ್ಣಂ ಮಲ್ಲೇಶ್ವರಿ ಕಂಚಿನ ಪದಕ ಗೆದ್ದು ಸಾಧನೆ ಮಾಡಿದ್ದರು. 69 ಕೆಜಿ ವಿಭಾಗದಲ್ಲಿ ಕರ್ಣಂ ಮಲ್ಲೇಶ್ವರಿ ಅವರು ಕಂಚಿನ ಪದಕ ಗಳಿಸಿದ್ದರು.

  • ನನ್ನ ದೇಶಕ್ಕಾಗಿ ಬೆಳ್ಳಿ ಪದಕ ಗೆದ್ದಿದ್ದು ಅತೀವ ಆನಂದ ನೀಡಿದೆ: ಮೀರಾಬಾಯಿ ಚಾನು

    ನನ್ನ ದೇಶಕ್ಕಾಗಿ ಬೆಳ್ಳಿ ಪದಕ ಗೆದ್ದಿದ್ದು ಅತೀವ ಆನಂದ ನೀಡಿದೆ: ಮೀರಾಬಾಯಿ ಚಾನು

    ಟೋಕಿಯೋ: ಒಲಿಂಪಿಕ್ಸ್ ನಲ್ಲಿ ಭಾರತಕ್ಕೆ ಮೊದಲ ಪದಕ ಗಳಿಸಿಕೊಟ್ಟ ಹೆಮ್ಮೆಯ ವೇಟ್‍ಲಿಫ್ಟರ್ ಮೀರಾಬಾಯಿ ಚಾನು ನನ್ನ ದೇಶಕ್ಕಾಗಿ ಬೆಳ್ಳಿ ಪದಕ ಗೆದ್ದಿರುವುದು ಅತೀವ ಆನಂದ ನೀಡಿದೆ ಎಂದು ಹೇಳಿದ್ದಾರೆ.

    ಪದಕ ಗೆದ್ದ ಖುಷಿಯನ್ನು ಟ್ವೀಟ್ ಮೂಲಕ ಹಂಚಿಕೊಂಡ ಮೀರಾಬಾಯಿ ಚಾನು, ಇದು ನನಗೆ ಕನಸು ನನಸಾದ ಗಳಿಗೆ. ಈ ಗೆಲುವನ್ನು ನನ್ನ ದೇಶ ಹಾಗೂ ನನ್ನ ಗೆಲುವಿಗಾಗಿ ನನ್ನ ಜರ್ನಿಯುದ್ದಕ್ಕೂ ಪಾರ್ಥಿಸಿದ ಕೋಟ್ಯಂತರ ಜನರಿಗೆ ಅರ್ಪಿಸುತ್ತೇನೆ. ತಮ್ಮ ಕುಟುಂಬದ ಪ್ರೋತ್ಸಾಹ ನನ್ನೊಂದಿಗೆ ಸದಾ ಇತ್ತು. ತಮ್ಮ ತಾಯಿ ತಮಗಾಗಿ ಮಾಡಿದ ತ್ಯಾಗ ಮತ್ತು ತನ್ನ ಮೇಲೆ ನಂಬಿಕೆಯಿಂದ ಈ ಗೆಲುವು ಸಾಧ್ಯವಾಯಿತು. ಸರ್ಕಾರದ ಪ್ರೋತ್ಸಾಹ ಹಾಗೂ ಕೋಚ್ ವಿಜಯ್ ಶರ್ಮಾ ಅವರಿಗೆ ಈ ಮೂಲಕ ಕೃತಜ್ಞತೆ ಸಲ್ಲಿಸುತ್ತಿರುವುದಾಗಿ ಟ್ವಿಟ್ಟರ್‍ ನಲ್ಲಿ ಬರೆದುಕೊಂಡು ಪೋಸ್ಟ್ ಮಾಡಿದ್ದಾರೆ.

    ಮೀರಾಬಾಯಿ ಚಾನುಗೆ ಡಾ.ನಾರಾಯಣಗೌಡ ಅಭಿನಂದನೆ
    ಟೋಕಿಯೋ ಒಲಿಂಪಿಕ್ಸ್‍ನ ಮಹಿಳೆಯರ 49 ಕೆಜಿ ವಿಭಾಗದ ವೇಟ್‍ಲಿಫ್ಟಿಂಗ್‍ನಲ್ಲಿ ಬೆಳ್ಳಿ ಪದಕ ಗೆದ್ದ ಮಣಿಪುರದ ಮೀರಾಬಾಯಿ ಚಾನು ಅವರಿಗೆ ಕರ್ನಾಟಕದ ಯುವ ಸಬಲೀಕರಣ ಮತ್ತು ಕ್ರೀಡೆ ಸಚಿವ ಡಾ. ನಾರಾಯಣಗೌಡ ಅಭಿನಂದನೆ ಸಲ್ಲಿಸಿದ್ದಾರೆ.


    ಮೀರಾಬಾಯಿ ಚಾನು ಅವರ ಮೇಲೆ ಸಾಕಷ್ಟು ನಿರೀಕ್ಷೆ ಇತ್ತು. ಭಾರತೀಯರ ನಿರೀಕ್ಷೆ ಹುಸಿಗೊಳಿಸದ ಮೀರಾ ಅವರು ಮೊದಲ ದಿನವೇ ಬೆಳ್ಳಿ ಪದಕ ಗೆದ್ದು ಶುಭಾರಂಭ ಮಾಡಿದ್ದಾರೆ. ಮೀರಾ ಅವರ ಗೆಲುವು ಭಾರತದ ಎಲ್ಲ ಕ್ರೀಡಾಪಟುಗಳಲ್ಲಿ ಇನ್ನಷ್ಟು ಹುಮ್ಮಸ್ಸು ತುಂಬುವಂತೆ ಮಾಡಿದೆ. ಪದ್ಮಶ್ರೀ, ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಗೆ ಭಾಜನರಾಗಿರುವ ಮೀರಾಬಾಯಿ ಚಾನು ಅವರು ಒಲಿಂಪಿಕ್ಸ್ ನಲ್ಲಿ ಬೆಳ್ಳಿ ಪದಕ ಗೆಲ್ಲುವ ಮೂಲಕ ಭಾರತದ ಕೀರ್ತಿಯನ್ನು ಹೆಚ್ಚಿಸಿದ್ದಾರೆ ಎಂದು ಪದಕ ಬೇಟೆಗೆ ನಾಂದಿ ಹಾಡಿದ ಮೀರಾ ಅವರಿಗೆ ಸಚಿವರು ಹೃದಯಪೂರ್ವಕವಾಗಿ ಅಭಿನಂದನೆ ಸಲ್ಲಿಸಿದ್ದಾರೆ. ಇದನ್ನೂ ಓದಿ:ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಮೊದಲ ಪದಕ ಸಂಭ್ರಮ – ಮೀರಾಬಾಯಿ ಚಾನುವಿಗೆ ಬೆಳ್ಳಿ!

     ಭಾರತಕ್ಕೆ ಮೊದಲ ಪದಕ ಸಂಭ್ರಮ:
    49 ಕೆಜಿ ವಿಭಾಗದ ಭಾರ ಎತ್ತುವ ಸ್ಪರ್ಧೆಯಲ್ಲಿ 26 ವರ್ಷದ ಮೀರಾಬಾಯಿ ಚಾನು ಬೆಳ್ಳಿ ಪದಕ ಗೆದ್ದು ಟೋಕಿಯೋ ಒಲಿಂಪಿಕ್ಸ್ ನಲ್ಲಿ ಭಾರತಕ್ಕೆ ಮೊದಲ ಪದಕ ಗಳಿಸಿ ಕೊಟ್ಟಿದ್ದಾರೆ. ಚೀನಾದ ಹೊ ಜಿಹೂಹು ಒಟ್ಟು 210 ಕೆಜಿ (94+116 ಕೆಜಿ) ಭಾರ ಎತ್ತಿ ಚಿನ್ನದ ಪದಕ ಬೇಟೆಯಾಡಿದರೆ, ಮೀರಾಬಾಯಿ ಚಾನು 202 ಕೆಜಿ (87+115 ಕೆಜಿ) ಭಾರ ಎತ್ತಿ ಬೆಳ್ಳಿ ಪದಕವನ್ನು ತಮ್ಮದಾಗಿಸಿಕೊಂಡರು. ಇಂಡೋನೇಷ್ಯಾದ ಐಸಾಹ್ ವಿಂಡಿ ಕಾಂಟಿಕಾ ವಿಂಡಿ 194 ಕೆಜಿ (84+110ಕೆಜಿ) ಕಂಚಿನ ಪದಕ ಪಡೆದರು.

    84 ಕೆಜಿ ಮತ್ತು 87 ಕೆಜಿ ಭಾರವನ್ನು ಯಶಸ್ವಿಯಾಗಿ ಎತ್ತಿದ ಮಿರಾಬಾಯ್ ಚಾನು 89 ಕೆಜಿ ಭಾರ ಎತ್ತುವಲ್ಲಿ ವಿಫಲರಾದರು. ಆದರೆ ಚೀನಾದ ಸ್ಪರ್ಧಿ ಜಿಹೂಹು 94 ಕೆಜಿ ಭಾರ ಎತ್ತಿ ಒಲಿಂಪಿಕ್ ದಾಖಲೆ ಬರೆದರು. ಇದು ಒಲಿಂಪಿಕ್ಸ್ ನಲ್ಲಿ ಭಾರ ಎತ್ತುವ ಸ್ಪರ್ಧೆಯಲ್ಲಿ ಭಾರತದ ಶ್ರೇಷ್ಠ ಸಾಧನೆಯಾಗಿದೆ. ಈ ಹಿಂದೆ ಸಿಡ್ನಿ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಕರ್ಣಂ ಮಲ್ಲೇಶ್ವರಿ ಕಂಚಿನ ಪದಕ ಗೆದ್ದು ಸಾಧನೆ ಮಾಡಿದ್ದರು. 69 ಕೆಜಿ ವಿಭಾಗದಲ್ಲಿ ಕರ್ಣಂ ಮಲ್ಲೇಶ್ವರಿ ಅವರು ಕಂಚಿನ ಪದಕ ಗಳಿಸಿದ್ದರು.

  • ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಮೊದಲ ಪದಕ ಸಂಭ್ರಮ – ಮೀರಾಬಾಯಿ ಚಾನುವಿಗೆ ಬೆಳ್ಳಿ!

    ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಮೊದಲ ಪದಕ ಸಂಭ್ರಮ – ಮೀರಾಬಾಯಿ ಚಾನುವಿಗೆ ಬೆಳ್ಳಿ!

    ಟೋಕಿಯೋ: ಟೋಕಿಯೋ ಒಲಿಂಪಿಕ್ಸ್ ನಲ್ಲಿ ಮೊದಲ ದಿನವೇ ಭಾರತ ಶುಭಾರಂಭ ಮಾಡಿದೆ. 49 ಕೆಜಿ ವಿಭಾಗದ ಭಾರ ಎತ್ತುವ ಸ್ಪರ್ಧೆಯಲ್ಲಿ 26 ವರ್ಷದ ಮೀರಾಬಾಯಿ ಚಾನು ಬೆಳ್ಳಿ ಪದಕ ಗೆದ್ದು ಟೋಕಿಯೋ ಒಲಿಂಪಿಕ್ಸ್ ನಲ್ಲಿ ಭಾರತಕ್ಕೆ ಮೊದಲ ಪದಕ ಗಳಿಸಿ ಕೊಟ್ಟಿದ್ದಾರೆ.

    ಚೀನಾದ ಹೊ ಜಿಹೂಹು ಒಟ್ಟು 210 ಕೆಜಿ (94+116 ಕೆಜಿ) ಭಾರ ಎತ್ತಿ ಚಿನ್ನದ ಪದಕ ಬೇಟೆಯಾಡಿದರೆ, ಮೀರಾಬಾಯಿ ಚಾನು 202 ಕೆಜಿ (87+115 ಕೆಜಿ) ಭಾರ ಎತ್ತಿ ಬೆಳ್ಳಿ ಪದಕವನ್ನು ತಮ್ಮದಾಗಿಸಿಕೊಂಡರು. ಇಂಡೋನೇಷ್ಯಾದ ಐಸಾಹ್ ವಿಂಡಿ ಕಾಂಟಿಕಾ ವಿಂಡಿ 194 ಕೆಜಿ (84+110ಕೆಜಿ) ಕಂಚಿನ ಪದಕ ಪಡೆದರು.

    84 ಕೆಜಿ ಮತ್ತು 87 ಕೆಜಿ ಭಾರವನ್ನು ಯಶಸ್ವಿಯಾಗಿ ಎತ್ತಿದ ಮಿರಾಬಾಯ್ ಚಾನು 89 ಕೆಜಿ ಭಾರ ಎತ್ತುವಲ್ಲಿ ವಿಫಲರಾದರು. ಆದರೆ ಚೀನಾದ ಸ್ಪರ್ಧಿ ಜಿಹೂಹು 94 ಕೆಜಿ ಭಾರ ಎತ್ತಿ ಒಲಿಂಪಿಕ್ ದಾಖಲೆ ಬರೆದರು.

    ಇದು ಒಲಿಂಪಿಕ್ಸ್ ನಲ್ಲಿ ಭಾರ ಎತ್ತುವ ಸ್ಪರ್ಧೆಯಲ್ಲಿ ಭಾರತದ ಶ್ರೇಷ್ಠ ಸಾಧನೆಯಾಗಿದೆ. ಈ ಹಿಂದೆ ಸಿಡ್ನಿ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಕರ್ಣಂ ಮಲ್ಲೇಶ್ವರಿ ಕಂಚಿನ ಪದಕ ಗೆದ್ದು ಸಾಧನೆ ಮಾಡಿದ್ದರು. 69 ಕೆಜಿ ವಿಭಾಗದಲ್ಲಿ ಕರ್ಣಂ ಮಲ್ಲೇಶ್ವರಿ ಅವರು ಕಂಚಿನ ಪದಕ ಗಳಿಸಿದ್ದರು.

    ಮಣಿಪುರದ ಚಾನು ಬೆಳ್ಳಿ ಪದಕ ಪಡೆಯುತ್ತಿದ್ದಂತೆಯೇ ಸಾಮಾಜಿಕ ಜಾಲತಾಣಗಳಲ್ಲಿ ಸ್ಟಾರ್ ಆದ್ರು. ಮೀರಾಬಾಯಿ ಚಾನು ಹೆಸರು ಟ್ವಿಟ್ಟರ್‍ನಲ್ಲಿ ಟ್ರೆಂಡ್ ಆಗಲು ಶುರುವಾಯಿತು. ಮೀರಾಬಾಯಿ ಸಾಧನೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರಾದ ಸ್ಮೃತಿ ಇರಾನಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮೊದಲಾದ ಗಣ್ಯರು ಅಭಿನಂದನೆ ಸಲ್ಲಿಸಿದ್ದಾರೆ.

  • ಬೆಳ್ಳಿ ಗೆದ್ದು ವಿಶ್ವ ಚಾಂಪಿಯನ್ ಶಿಪ್‍ನಿಂದ ಹೊರ ಬಿದ್ದ ದೀಪಕ್ ಪುನಿಯಾ

    ಬೆಳ್ಳಿ ಗೆದ್ದು ವಿಶ್ವ ಚಾಂಪಿಯನ್ ಶಿಪ್‍ನಿಂದ ಹೊರ ಬಿದ್ದ ದೀಪಕ್ ಪುನಿಯಾ

    ನವದೆಹಲಿ: ಭಾರತದ ಯುವ ಕುಸ್ತಿ ಪಟು ದೀಪಕ್ ಪುನಿಯಾ ಅವರು ಬೆಳ್ಳಿ ಗೆಲ್ಲುವ ಮೂಲಕ ಕಾಲು ನೋವಿನ ಸಮಸ್ಯೆಯಿಂದ ವಿಶ್ವ ಚಾಂಪಿಯನ್ ಕುಸ್ತಿ ಸ್ಪರ್ಧೆಯಿಂದ ಹೊರ ಬಿದ್ದಿದ್ದಾರೆ.

    ಸೆಮಿಫೈನಲ್ ಪಂದ್ಯದ ವೇಳೆ ಎಡಗಾಲು ಪಾದಕ್ಕೆ ಗಾಯವಾದ ಕಾರಣ ಅವರು, 86 ಕೆ.ಜಿ ವಿಭಾಗದಲ್ಲಿ ಇರಾನಿನ ಶ್ರೇಷ್ಠ ಕುಸ್ತಿ ಪಟು ಹಜ್ಸನ್ ಯಾಜ್ದಾನಿ ಅವರ ವಿರುದ್ಧ ಆಡಬೇಕಾದ ವಿಶ್ವ ಚಾಂಪಿಯನ್ ಶಿಪ್‍ನ ಫೈನಲ್ ಆಟವಾನ್ನು ಆಡುವುದಿಲ್ಲ ಎಂದು ಹೇಳಿದ್ದಾರೆ.

    ಈ ವಿಚಾರವಾಗಿ ಮಾತನಾಡಿದ ದೀಪಕ್ ಪುನಿಯಾ ಅವರು, ಸೆಮಿಫೈನಲ್ ಪಂದ್ಯದ ವೇಳೆ ನನ್ನ ಎಡಗಾಲಿಗೆ ಗಾಯವಾಗಿದೆ. ಎಡಗಾಲು ಭಾರವನ್ನು ತಡೆಯುತ್ತಿಲ್ಲ. ಈ ಸ್ಥಿತಿಯಲ್ಲಿ ಸ್ಪರ್ಧೆಯಲ್ಲಿ ಭಾಗವಹಿಸುವುದು ತುಂಬಾ ಕಷ್ಟ. ಈ ಪಂದ್ಯ ಶ್ರೇಷ್ಠ ಆಟಗಾರ ಯಾಜ್ದಾನಿ ವಿರುದ್ಧ ಆಟವಾಡಲು ಒಳ್ಳೆಯ ಅವಕಾಶವಿತ್ತು. ಆದರೆ ನನಗೆ ಆಡಲು ಆಗುತ್ತಿಲ್ಲ ಎಂದು ಹೇಳಿದ್ದಾರೆ.

    ಶನಿವಾರ ಸ್ವಿಜರ್ಲ್ಯಾಂಡ್ ನ ಸ್ಟೀಫನ್ ರೀಚ್‍ಮುತ್ ಅವರ ವಿರುದ್ಧ ಸೆಮಿಫೈನಲ್ ಪಂದ್ಯದ ವೇಳೆ ದೀಪಕ್ ಅವರ ಎಡಗಾಲಿಗೆ ಪೆಟ್ಟಾಗಿತ್ತು. ಇದಕ್ಕೂ ಮುನ್ನ ದೀಪಕ್ ಪುನಿಯಾ ಅವರು ಕೊಲಂಬಿಯಾದ ಕಾರ್ಲೋಸ್ ಮೆಂಡೆಜ್ ಮತ್ತು ಖಜಕಿಸ್ತಾನದ ಅಡಿಲೆಡ್ ದಾವ್ಲುಂಬಾಯೆವ್ ವಿರುದ್ಧ ಗೆದ್ದು ಫೈನಲ್ ಪ್ರವೇಶ ಮಾಡಿದ್ದರು. ಆದರೆ ಫೈನಲ್ ಸಮಯದಲ್ಲಿ ಗಾಯವಾದ ಕಾರಣ ಅವರಿಗೆ ಫೈನಲ್ ಆಡಲು ಆಗಾದೆ ಬೆಳ್ಳಿ ಪದಕವನ್ನು ಪಡೆದುಕೊಂಡಿದ್ದಾರೆ.

    ಕಳೆದ ವರ್ಷ ಜೂನಿಯರ್ ವಿಶ್ವ ಚಾಂಪಿಯನ್‍ಶಿಪ್‍ನಲ್ಲಿ ಚಿನ್ನದ ಪದಕ ಗೆದ್ದಿದ್ದ ದೀಪಕ್ ಪುನಿಯಾ ಈ ಬಾರಿಯೂ ಚಿನ್ನದ ಪದಕ ಗೆಲ್ಲುವ ವಿಶ್ವಾಸ ಮೂಡಿಸಿದ್ದರು. ಆದರೆ ಗಾಯದ ಸಮಸ್ಯೆಯಿಂದ ಚಿನ್ನದ ಪದಕ ಕೈತಪ್ಪಿದೆ. 2010 ರಲ್ಲಿ ಮಾಸ್ಕೋದಲ್ಲಿ ನಡೆದ ವಿಶ್ವ ಚಾಂಪಿಯನ್‍ಶಿಪ್‍ನಲ್ಲಿ 66 ಕೆ.ಜಿ ವಿಭಾಗದಲ್ಲಿ ಭಾರತದ ಸುಶೀಲ್ ಕುಮಾರ್ ಅವರು ಚಿನ್ನ ಗೆದ್ದಿದ್ದರು.

    ಈ ಬಾರಿಯ ಕುಸ್ತಿ ವಿಶ್ವ ಚಾಂಪಿಯನ್‍ಶಿಪ್ ಭಾರತದ ರಾಹುಲ್ ಅವೇರ್ ಅವರು 61 ಕೆ.ಜಿ ವಿಭಾಗದಲ್ಲಿ ಕಂಚಿನ ಪದಕಕ್ಕಾಗಿ ಇಂದು ಹೋರಾಡಲಿದ್ದಾರೆ.

  • ರಾಷ್ಟ್ರೀಯ ಮಟ್ಟದ ಐಸ್ ಸ್ಕೇಟಿಂಗ್: ಮಂಗಳೂರಿನ ಅನಘಾಗೆ ಬೆಳ್ಳಿ ಪದಕ

    ರಾಷ್ಟ್ರೀಯ ಮಟ್ಟದ ಐಸ್ ಸ್ಕೇಟಿಂಗ್: ಮಂಗಳೂರಿನ ಅನಘಾಗೆ ಬೆಳ್ಳಿ ಪದಕ

    ಮಂಗಳೂರು: ದೆಹಲಿಯ ಗುರುಗ್ರಾಮದಲ್ಲಿ ಐಸ್ ಸ್ಕೇಟಿಂಗ್ ಅಸೋಸಿಯೇಷನ್ ಆಫ್ ಇಂಡಿಯಾ ಆಯೋಜಿಸಿದ ರಾಷ್ಟ್ರೀಯ ಸ್ಪೀಡ್ ಐಸ್ ಸ್ಕೇಟಿಂಗ್ ಚಾಂಪಿಯನ್‍ಶಿಪ್-2019 ನಲ್ಲಿ ಮಂಗಳೂರಿನ ಅನಘಾ ಬೆಳ್ಳಿ ಪದಕ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾಳೆ.

    2019ರ ಆಗಸ್ಟ್ 8 ಹಾಗೂ 9 ರಂದು ನಡೆದ ರಾಷ್ಟ್ರೀಯ ಮಟ್ಟದ ಐಸ್ ಸ್ಕೇಟಿಂಗ್‍ನ 500 ಮೀಟರ್ ಐಸ್ ರಿಂಕ್ ರೇಸ್‍ನ 10 ವರ್ಷದೊಳಗಿನ ವಿಭಾಗದಲ್ಲಿ ಅನಘಾ ಬೆಳ್ಳಿ ಪದಕ ಪಡೆದಿದ್ದಾಳೆ.

    ಮಂಗಳೂರಿನ ಡಾ.ರಾಜೇಶ್ ಹುಕ್ಕೇರಿ ಹಾಗೂ ಡಾ.ಅನಿತಾ ರಾಜೇಶ್ ದಂಪತಿಯ ಪುತ್ರಿಯಾದ ಅನಘಾ ಬಿಜೈ ಲೂಡ್ರ್ಸ್ ಸೆಂಟ್ರಲ್ ಸ್ಕೂಲ್‍ನ 4 ನೇ ತರಗತಿಯ ವಿದ್ಯಾರ್ಥಿನಿಯಾಗಿದ್ದಾಳೆ. ಮಂಗಳೂರಿನ ಹೈ ಫ್ಲೈಯರ್ಸ್ ಸ್ಕೇಟಿಂಗ್ ಕ್ಲಬ್‍ನ ಸದಸ್ಯೆಯಾಗಿರುವ ಅನಘಾ ತರಬೇತುದಾರರಾದ ಮೋಹನ್ ದಾಸ್.ಕೆ ಹಾಗೂ ಜಯರಾಜ್ ಅವರಿಂದ ತರಬೇತಿ ಪಡೆಯುತ್ತಿದ್ದಾಳೆ. ಇದರ ಜೊತೆಗೆ ರಾಷ್ಟ್ರೀಯ ಐಸ್ ಸ್ಕೇಟಿಂಗ್ ತರಬೇತುದಾರ ಅವಧೂತ್ ಥಾವಡೆ ಅವರಿಂದಲೂ ಅನಘಾ ಐಸ್ ಸ್ಕೇಟಿಂಗ್ ತರಬೇತಿ ಪಡೆಯುತ್ತಿದ್ದಾಳೆ.

  • ರಾಷ್ಟ್ರಮಟ್ಟದ ರೋಲರ್ ಸ್ಕೇಟಿಂಗ್ ಚಾಂಪಿಯನ್‍ಶಿಪ್: ಬೆಳ್ಳಿ ಪದಕಕ್ಕೆ ಮುತ್ತಿಟ್ಟ ಮಂಗ್ಳೂರು ಪಟು

    ರಾಷ್ಟ್ರಮಟ್ಟದ ರೋಲರ್ ಸ್ಕೇಟಿಂಗ್ ಚಾಂಪಿಯನ್‍ಶಿಪ್: ಬೆಳ್ಳಿ ಪದಕಕ್ಕೆ ಮುತ್ತಿಟ್ಟ ಮಂಗ್ಳೂರು ಪಟು

    ಬೆಂಗಳೂರು: ರಾಷ್ಟ್ರಮಟ್ಟದ ರೋಲರ್ ಸ್ಕೇಟಿಂಗ್ ಚಾಂಪಿಯನ್‍ಶಿಪ್ -2019ರಲ್ಲಿ ಮಂಗಳೂರಿನ ಸ್ಕೇಟಿಂಗ್ ಪಟು ಡ್ಯಾಷೆಲ್ ಅಮಂಡಾ ಕೊನ್ಸೆಸ್ಸೊ ಬೆಳ್ಳಿ ಪದಕ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ.

    ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದಲ್ಲಿ ರೋಲರ್ ಸ್ಕೇಟಿಂಗ್ ಫೇಡರೇಷನ್ ಆಫ್ ಇಂಡಿಯಾ ಹಾಗೂ ಉತ್ತರ ಪ್ರದೇಶ ರೋಲರ್ ಸ್ಪೋಟ್ರ್ಸ್ ಅಸೋಸಿಯೇಷನ್ ಆಲ್ ಇಂಡಿಯಾ ರೋಲರ್ ಸ್ಕೇಟಿಂಗ್ ಚಾಂಪಿಯನ್‍ಶಿಪ್ ಆಯೋಜಿಸಿತ್ತು. ಇದರಲ್ಲಿ 14 ವರ್ಷದೊಳಗಿನ ವಿಭಾಗ, 500 ಮೀಟರ್ ರಿಂಕ್ ರೇಸ್‍ನಲ್ಲಿ ಮಂಗಳೂರಿನ ಡ್ಯಾಷೆಲ್ ಅಮಂಡಾ ಕೊನ್ಸೆಸ್ಸೊ ಅವರು ಬೆಳ್ಳಿ ಪದಕಕ್ಕೆ ಭಾಜನರಾಗಿದ್ದಾರೆ.

    ಡ್ಯಾಷೆಲ್ ಅಮಂಡಾ ಕೊನ್ಸೆಸ್ಸೊ ನಗರದ ಮಾಲೆಮಾರ್ ನಿವಾಸಿಯಾದ ಫ್ರಾನ್ಸಿಸ್ ಕೊನ್ಸೆಸ್ಸೊ ಹಾಗೂ ಡೋರಿಸ್ ಕೊನ್ಸೆಸ್ಸೊ ದಂಪತಿಯ ಪುತ್ರಿ. ಮಂಗಳೂರಿನ ನೀರು ಮಾರ್ಗದ ಕೇಂಬ್ರಿಡ್ಜ್ ಶಾಲೆಯ ವಿದ್ಯಾರ್ಥಿನಿಯಾಗಿದ್ದಾಳೆ. ಡ್ಯಾಷೆಲ್ ಅವರು ಹೈಫ್ಲೈಯರ್ಸ್ ಸ್ಕೇಟಿಂಗ್ ಕ್ಲಬ್ ಸದಸ್ಯರಾಗಿದ್ದು, ಮೋಹನ್.ಕೆ ಅವರಿಂದ ತರಬೇತಿ ಪಡೆಯುತ್ತಿದ್ದಾರೆ.