Tag: simharoopini film

  • ‘ಸಿಂಹರೂಪಿಣಿ’ಯ ಯಶಸ್ವಿ 25ರ ಹೆಜ್ಜೆ

    ‘ಸಿಂಹರೂಪಿಣಿ’ಯ ಯಶಸ್ವಿ 25ರ ಹೆಜ್ಜೆ

    ‘ಕೆಜಿಎಫ್’ (KGF) ಖ್ಯಾತಿಯ ಸಾಹಿತಿ ಕಿನ್ನಾಳ್ ರಾಜ್ (Kinnal Raj) ನಿರ್ದೇಶನದ ‘ಸಿಂಹರೂಪಿಣಿ’ ಸಿನಿಮಾ ಅ.17ರಂದು ರಿಲೀಸ್‌ ಆಗಿತ್ತು. ಇದೀಗ ಈ ಚಿತ್ರ 25 ದಿನಗಳನ್ನು ಪೂರೈಸಿ ಮುನ್ನುಗ್ಗುತ್ತಿದೆ. ದೇವರ ಚಿತ್ರವನ್ನು ಕಮರ್ಷಿಯಲ್ ಅಂಶದೊಂದಿಗೆ ಮಾಸ್ ಆಗಿ ತೋರಿಸಿ ‘ಸಿಂಹರೂಪಿಣಿ’ ಚಿತ್ರ ಗೆದ್ದು ಬೀಗಿದೆ. ಇದನ್ನೂ ಓದಿ:ದರ್ಶನ್ ಸರ್‌ಗೆ ಬೇಲ್ ಸಿಕ್ಕಿದ್ದು ಖುಷಿಯಾಯ್ತು: ‘ಬಿಗ್‌ ಬಾಸ್‌’ ಎಲಿಮಿನೇಷನ್‌ ಬಳಿಕ ಧರ್ಮ ರಿಯಾಕ್ಷನ್

    ಇದೇ ಖುಷಿಯಲ್ಲಿ ಈ ಚಿತ್ರಕ್ಕಾಗಿ ಶ್ರಮಿಸಿದ ಕಲಾವಿದರಿಗೆ, ತಂತ್ರಜ್ಞರಿಗೆ ಪಾರಿತೋಷಕ ವಿತರಿಸುವ ಕಾರ್ಯಕ್ರಮವನ್ನು ಸ್ವಪ್ನ ಚಿತ್ರಮಂದಿರದಲ್ಲಿ ಹಮ್ಮಿಕೊಳ್ಳಲಾಗಿತ್ತು. ಕೆ.ಎಂ.ನಂಜುಂಡೇಶ್ವರ ಕಥೆ ಬರೆದು ಶ್ರೀ ಚಕ್ರ ಫಿಲಂಸ್ ಲಾಂಛನದಲ್ಲಿ ಅದ್ಧೂರಿಯಾಗಿ ನಿರ್ಮಾಣ ಮಾಡಿದ್ದಾರೆ. ‘ಕೆಜಿಎಫ್’, ‘ಸಲಾರ್’, ‘ಭೈರತಿ ರಣಗಲ್’ ಮುಂತಾದ ಹಿಟ್ ಸಿನಿಮಾಗಳಿಗೆ ಹಾಡುಗಳನ್ನು ಬರೆದಿರುವ ಕಿನ್ನಾಳ್ ರಾಜ್ ಚಿತ್ರ ಕಥೆ, ಸಾಹಿತ್ಯ ಬರೆದು ನಿರ್ದೇಶನ ಮಾಡಿದ್ದಾರೆ.

    ಡೈರೆಕ್ಟರ್ ಕಿನ್ನಾಳ್ ರಾಜ್ (Kinnal Raj) ಮಾತನಾಡಿ, ಚಿತ್ರ ಮಾಡಲು ಯೋಗ, ಯೋಗ್ಯತೆ ಅದಕ್ಕಿಂತ ಹೆಚ್ಚಾಗಿ ಅದೃಷ್ಟ ಕೂಡಿ ಬರಬೇಕು. ಇವೆಲ್ಲವೂ ನಮಗೆ ಸಿಕ್ಕಿದೆ. ಎಲ್ಲಾ ಕಲಾವಿದರು ಕಥೆ ಕೇಳಿದೊಡನೆ ಯಾವಾಗ ಬರಲಿ ಅಂತ ಹೇಳುತ್ತಿದ್ದರು. ಎಲ್ಲರೂ ಭಕ್ತಿಯಿಂದ, ಇಷ್ಟದಿಂದ ಸಿನಿಮಾ ಮಾಡಿದ್ದಾರೆ. ವ್ಯವಹಾರಿಕವಾಗಿ ನಿರ್ಮಾಪಕರು ಸೇಫ್ ಆಗಿದ್ದಾರೆ. ಈ ವೇಳೆ, ಮಾಧ್ಯಮದ ಸಹಕಾರ ಎಂದೂ ಮರೆಯುವಂತಿಲ್ಲ. ಚಿತ್ರಮಂದಿರಕ್ಕೆ ಭೇಟಿ ನೀಡಿದಾಗ ಕೋಣ ಏಕೆ ಕಡಿಯುತ್ತಾರೆ ಎಂಬುದನ್ನು ಅಚ್ಚುಕಟ್ಟಾಗಿ ತೋರಿಸಿದ್ದೀರಾ ಎಂದರು.

    ಸಿನಿಮಾದ ಸೆಕೆಂಡ್ ಆಫ್ ‘ಕಾಂತಾರ’ ಚಿತ್ರ ಮೀರಿಸುವಂತಿತ್ತು. ಭಕ್ತಿ ಕಥೆಗೆ ‘ಸಿಂಹರೂಪಿಣಿ’ ಸಾಕ್ಷಿಯಾಗಿದೆ ಎಂದು ಪ್ರೇಕ್ಷಕರು ಹೇಳುತ್ತಿದ್ದಾರೆ. 9 ತಿಂಗಳ ಶ್ರಮ ಸಾರ್ಥಕ ಅನಿಸಿದೆ. ಇದೇ ವೇಳೆ, ಬ್ಯಾಂಕಾಕ್ ಫಿಲಂ ಫೆಸ್ಟಿವಲ್‌ದಲ್ಲಿ ಪ್ರಶಸ್ತಿ ಲಭಿಸಿದ್ದು ಖುಷಿಯಾಗಿದೆ. ಈ ಚಿತ್ರದ ಪಾರ್ಟ್ 2 ಮಾಡುವ ಯೋಜನೆ ಇದೆ  ಎಂದಿದ್ದಾರೆ.

    ಈ ಸಮಾರಂಭದಲ್ಲಿ ಯಶಸ್ವಿನಿ, ಅಂಕಿತಾ ಗೌಡ, ಯಶ್ ಶೆಟ್ಟಿ, ಪುನೀತ್ ರುದ್ರನಾಗ್, ಆರವ್ ಲೋಹಿತ್, ಸಾಗರ್, ವಿಜಯ್ ಚೆಂಡೂರು, ಸಂಗೀತ ಸಂಯೋಜಕ ಆಕಾಶ್ ಪರ್ವ, ಛಾಯಾಗ್ರಾಹಕ ಕಿರಣ್ ಕುಮಾರ್, ಸಂಕಲನಕಾರ ಯುಡಿವಿ. ವೆಂಕಿ, ವಿತರಕ ರಮೇಶ್ ಮುಂತಾದವರು ಭಾಗಿಯಾಗಿ ಸಿನಿಮಾದ ಸಕ್ಸಸ್ ಸಂಭ್ರಮಿಸಿದ್ದಾರೆ.

  • ‘ಸಿಂಹರೂಪಿಣಿ’ ಟೀಸರ್ ರಿಲೀಸ್ ಮಾಡಿದ ‘ಕೆಜಿಎಫ್ 2’ ಸಂಗೀತ ನಿರ್ದೇಶಕ

    ‘ಸಿಂಹರೂಪಿಣಿ’ ಟೀಸರ್ ರಿಲೀಸ್ ಮಾಡಿದ ‘ಕೆಜಿಎಫ್ 2’ ಸಂಗೀತ ನಿರ್ದೇಶಕ

    ಹೊಸಬರ ‘ಸಿಂಹರೂಪಿಣಿ’ (Simharoopini) ಚಿತ್ರದ ಟೀಸರ್ ಬಿಡುಗಡೆ ಮಾಡಿ ‘ಕೆಜಿಎಫ್ 2’ (KGF 2) ಸಂಗೀತ ನಿರ್ದೇಶಕ ರವಿ ಬಸ್ರೂರು (Ravi Basrur) ಚಿತ್ರತಂಡಕ್ಕೆ ಶುಭಹಾರೈಸಿದ್ದಾರೆ. ಸದ್ಯ ಸಿನಿಮಾದ ಟೀಸರ್‌ಗೆ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಇದನ್ನೂ ಓದಿ:ರಶ್ಮಿಕಾ ಮಂದಣ್ಣಗೆ ಸ್ವೀಟ್ ಹಾರ್ಟ್ ಎಂದ ವಿಕ್ಕಿ ಕೌಶಲ್

    ಕಲಾವಿದರ ಭವನದಲ್ಲಿ ಸಿಂಹರೂಪಿಣಿ ಚಿತ್ರದ ಟೀಸರ್ ಬಿಡುಗಡೆ ಸಮಾರಂಭ ಅದ್ಧೂರಿಯಾಗಿ ನೆರವೇರಿದೆ. ಟೀಸರ್‌ ರಿಲೀಸ್‌ ಮಾಡಿ ಚಿತ್ರತಂಡಕ್ಕೆ ರವಿ ಬಸ್ರೂರು ಬೆಂಬಲಿಸಿದ್ದಾರೆ. ಈ ಚಿತ್ರಕ್ಕೆ ಕಿನ್ನಾಳ್ ರಾಜ್ ಚಿತ್ರಕಥೆ, ಸಂಭಾಷಣೆ, ಸಾಹಿತ್ಯದ ಜೊತೆ ನಿರ್ದೇಶನ ಕೂಡ ಮಾಡಿದ್ದಾರೆ. ದೊಡ್ಡಬಳ್ಳಾಪುರ ಕೆ.ಎಂ ನಂಜುಂಡೇಶ್ವರ ಕಥೆ ಬರೆದು ಶ್ರೀ ಚಕ್ರ ಫಿಲಿಂಸ್ ಅಡಿಯಲ್ಲಿ ನಿರ್ಮಾಣ ಮಾಡಿದ್ದಾರೆ. ಆಕಾಶ್ ಪರ್ವ ಸಂಗೀತ, ಕಿರಣ್ ಕುಮಾರ್ ಛಾಯಾಗ್ರಹಣ, ವೆಂಕಿ ಸಂಕಲನ, ಕಿಶೋರ್ ಕಲರಿಸ್ಟ್, ಸಾಹಸ ನಿರ್ದೇಶನ ಥ್ರಿಲ್ಲರ್ ಮಂಜು, ಚಂದ್ರು, ಬಂಡೆ ಮಂಜುನಾಗಪ್ಪ, ಸೌಂಡ್ ಎಫೆಕ್ಟ್ ನಂದು.ಜೆ ಇವರುಗಳ ಶ್ರಮದಿಂದ ಸಿದ್ಧಗೊಂಡಿರುವ 1.45 ನಿಮಿಷದ ತುಣುಕುಗಳು ದೊಡ್ಡ ಪರದೆ ಮೇಲೆ ಅನಾವರಣ ಮಾಡಲಾಯಿತು.

    ಪ್ಯಾನ್ ಇಂಡಿಯಾ ಸಂಗೀತ ಸಂಯೋಜಕ ರವಿ ಬಸ್ರೂರು ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಅವರು ಮಾತನಾಡಿ, ನಿರ್ದೇಶಕರು, ನಿರ್ಮಾಪಕರ ದೇವಿಯ ಮೇಲಿನ ಭಕ್ತಿ, ತಂತ್ರಜ್ಞರ ಕೆಲಸಗಳು ಚೆನ್ನಾಗಿ ಮೂಡಿ ಬಂದಿದೆ. ದೃಶ್ಯಗಳನ್ನು ನೋಡಿ ನನಗೆ ಆದಂತ ಕಂಪನ ಎಲ್ಲರಿಗೂ ಆಗಿದೆ ಅಂತ ಭಾವಿಸುತ್ತೇನೆ. ನನ್ನ ಮತ್ತು ನಿರ್ದೇಶಕರಾದ ಕಿನ್ನಾಳ್ ರಾಜ್ ಪಯಣ ಸುಮಾರು 15 ವರ್ಷದಷ್ಟು ಹಳೆಯದು. ಇವರ ನಿರ್ದೇಶನದಲ್ಲಿ ನಾನು ಸಂಗೀತ ಕಂಪೋಸ್ ಮಾಡಬೇಕೆಂದು ಆ ಸಮಯದಲ್ಲಿ ಮಾತಾಡಿಕೊಂಡಿದ್ದೇವು. ಅಲ್ಲಿಂದ ಒಂದಷ್ಟು ಸಿನಿಮಾಗಳಲ್ಲಿ ನಾವಿಬ್ಬರು ಸೇರಿದ್ದೇವು. ಉದ್ಯಮದ ಬೆಳವಣಿಗೆಗೆ ಇಂತಹ ಪ್ರತಿಭೆಗಳ ಪಾತ್ರ ತುಂಬ ಅಗತ್ಯವಿದೆ ಎಂದರು.

    ‘ಕಾಟೇರ’ ಖ್ಯಾತಿಯ ಜಡೇಶ್ ಕುಮಾರ್ ಪೋಸ್ಟರ್ ಬಿಡುಗಡೆ ಮಾಡಿದ ನಂತರ ಮಾತನಾಡಿ, ನಿರ್ದೇಶಕರು ನಮ್ಮ ಊರಿನ ಪಕ್ಕದವರು. ಪ್ರಾರಂಭದಿಂದಲೂ ಅವರ ಶ್ರಮವನ್ನು ನೋಡುತ್ತಾ ಬಂದಿದ್ದೇನೆ. ಈ ಚಿತ್ರದಲ್ಲಿ ನಮ್ಮ ಊರಿನ, ಭಾಗದ ಸಂಸ್ಕೃತಿಯನ್ನು ತೋರಿಸಲಾಗಿದೆ. ಅಂತಹ ಪ್ರಯತ್ನಗಳು ನಡೆದಾಗಲೇ ಮಾಹಿತಿಗಳು ಎಲ್ಲರಿಗೂ ತಿಳಿಯುತ್ತದೆ. ಮ್ಯೂಸಿಕ್ ಚೆನ್ನಾಗಿದೆ. ‘ಕಾಟೇರ’ ಕೋಣ ಇಲ್ಲಿಗೆ ಯಾಕೆ ಬಂತು ಅಂತ ಕೇಳಿದೆ. ಸಿನಿಮಾ ನೋಡಿ ಅಂತಾರೆ. ನಿಮ್ಮಗಳ ಪ್ರಯತ್ನಕ್ಕೆ ಶುಭವಾಗಲಿ ಎಂದು ಹಾರೈಸಿದರು.

    ಸಿನಿಮಾದ ಕುರಿತು ಡೈರೆಕ್ಟರ್ ಕಿನ್ನಾಳ್ ರಾಜ್ ಮಾತನಾಡಿ, ಜೀವನದಲ್ಲಿ ನನ್ನ ಹೆಸರು ಟೈಟಲ್ ಕಾರ್ಡ್ದಲ್ಲಿ ಕಾಣಿಸಬೇಕೆಂದು ಆಸೆಪಟ್ಟವನು. ರವಿಬಸ್ರೂರು ‘ಅಂಜನಿಪುತ್ರ’ ಸಿನಿಮಾಗೆ ಹಾಡು ಬರೆಯಲು ಅವಕಾಶ ಮಾಡಿಕೊಟ್ಟರು. ನಂತರ ‘ಕೆಜಿಎಫ್’ನಿಂದ ಎಲ್ಲರೂ ಗುರುತು ಹಿಡಿಯುವಂತಾಯಿತು. ಈಗ ತಾಯಿ ಚಿತ್ರ ಮಾಡುತ್ತಿದ್ದೇನೆ. ಶೀರ್ಷಿಕೆ ಹೇಳುವಂತೆ ಶ್ರೀ ಮಾರಮ್ಮ ದೇವಿ ಕುರಿತಾಗಿದ್ದು, ಗ್ರಾಫಿಕ್ಸ್ ತಂತ್ರಜ್ಞಾನ ಇರುವುದು ವಿಶೇಷ. ಸಪ್ತ ಮಾತ್ರ‍್ರಿಕೆಯರ ವಿಷಯಗಳನ್ನು ಹೊಂದಿದ್ದು, ರಾಕ್ಷಸನನ್ನು ಸಂಹಾರ ಮಾಡಲು ಪಾರ್ವತಿದೇವಿ ಏಳು ಅವತಾರಗಳಲ್ಲಿ ಭೂಮಿಗೆ ಬರುತ್ತಾಳೆ. ಅದರಲ್ಲಿ ಕೊನೆಯದು ಶ್ರೀ ಮಾರಮ್ಮ ದೇವಿಯದು ಆಗಿರುತ್ತದೆ. ತಾಯಿಯ ಮಹಿಮೆ,ಪವಾಡಗಳು, ಈಗಿನ ಟ್ರೆಂಡ್‌ಗೆ ತಕ್ಕಂತೆ ಕಮರ್ಷಿಯಲ್ ಅಂಶಗಳನ್ನು ತೋರಿಸುವ ಪ್ರಯತ್ನ ಮಾಡಲಾಗಿದೆ. ನಿರ್ಮಾಪಕರ ಹುಟ್ಟಿದ ಹಬ್ಬ, ಗುರುಪೂರ್ಣೀಮೆ ಶುಭದಿನವಾಗಿದ್ದರಿಂದ ಕಾರ್ಯಕ್ರಮ ಏರ್ಪಾಟು ಮಾಡಲಾಗಿದೆ. ಚಿತ್ರದಲ್ಲಿ 132 ಕಲಾವಿದರು ಅಭಿನಯಿಸಿದ್ದಾರೆ. ನಿರ್ಮಾಪಕರ ಕಥೆಗೆ ಚಿತ್ರರೂಪ ಕೊಟ್ಟಿದ್ದೇನೆ. ಹಾಡು ಬರೆಯಲು ಹೋದವನು, ಅಂತಿಮವಾಗಿ ನಿರ್ದೇಶನ ಮಾಡಲು ಹೇಳಿದ್ದೆ, ಇಲ್ಲಿಯ ತನಕ ತಂದು ನಿಲ್ಲಿಸಿದೆ. ಗ್ರಾಫಿಕ್ಸ್ 15 ನಿಮಿಷದ ಕಾಲ ಬರುತ್ತದೆ. ಸದ್ಯ ಸಿಜಿ ನಡೆಯುತ್ತಿದ್ದು, ಕೋಣ ಯಾಕೆ ಇದೆ ಎಂಬುದು ಸಿನಿಮಾ ನೋಡಿದರೆ ತಿಳಿಯುತ್ತದೆಂದು ಕುತೂಹಲ ಕಾಯ್ದಿರಿಸಿದರು.

    ನಿರ್ಮಾಪಕ ಕೆ.ಎಂ.ನಂಜುಡೇಶ್ವರ ಹೇಳುವಂತೆ ಪ್ರತಿಯೊಬ್ಬರ ಜೀವನದಲ್ಲಿ ಒಂದೊಂದು ಅನುಭವ ಆಗಿರುತ್ತದೆ. ತಾಯಿ ವಿರಾಜಮಾನವಾಗಿ ಕೂತಿದ್ದಾಳೆ. ನೀವುಗಳು ದರ್ಶನ ಮಾಡಿದ್ದೀರಾ. ನಿಮ್ಮ ಸಮಸ್ಯೆಗಳು ನಿವಾರಣೆಯಾಗುತ್ತದೆ. ತಾಯಿಯ ಅನುಭವವನ್ನು ಫೀಲ್ ಮಾಡಿ. ತ್ರಿಮೂರ್ತಿ, ತ್ರಿಶಕ್ತಿ , ಸರ್ವಶಕ್ತಿ ಸ್ವರೂಪಿಣಿ ಗ್ರಾಮ ದೇವತೆ ಮಾರಮ್ಮ. ಮೂರು ದೇವತೆಗಳು, ತ್ರಿಮೂರ್ತಿಗಳು. ಎಲ್ಲಾ ದೇವರುಗಳಿಗೆ ಮೂಲ ದೇವರು ಗ್ರಾಮ ದೇವತೆ. ನಿಮ್ಮೂರಿನ ದೇವತೆಯ ಪೂಜೆ ಮಾಡಿ, ಶ್ರೀಮನ್ ನಾರಾಯಣ ತಿರುಪತಿಯಲ್ಲಿ ದರ್ಶನವಾದಂತೆ ಆಗುತ್ತದೆ. ಚಿತ್ರ ನೋಡಿದ ಮೇಲೆ ನೀವುಗಳು ತಾಯಿ ಪ್ರೀತಿ ಬಗ್ಗೆ ಮಾತನಾಡುತ್ತಿರಾ. ಮನುಷ್ಯನಾಗಿ ಹುಟ್ಟಿ ಎಲ್ಲವನ್ನು ದೇವರ ಅನುಗ್ರಹದಿಂದ ಪಡೆದುಕೊಂಡು ನಾವು ಏನು ಮಾಡಿಲ್ಲ. ಅದಕ್ಕಾಗಿ ಸಿನಿಮಾ ಮಾಡಿದ್ದೇನೆ. ಅಮ್ಮ ಅಂತ ಒಂದು ಹೆಜ್ಜೆ ಇಟ್ಟರೆ, ತಾಯಿ ಮೂರು ಹೆಜ್ಜೆ ಮುಂದಿಡುತ್ತಾಳೆ. ನಮಗೆ ಹರಸಲು ಎಲ್ಲಾ ವರ್ಗದಿಂದ ಹಿತೈಷಿಗಳು ಬಂದಿದ್ದಾರೆ. ನಿಮ್ಮಗಳ ಪ್ರೋತ್ಸಾಹ ಇದೇ ರೀತಿ ಇರಬೇಕೆಂದು ಕೋರಿಕೊಂಡರು.

    ಖ್ಯಾತ ನಿರೂಪಕಿ ಅಂಕಿತಾ ಗೌಡ ಈ ಚಿತ್ರದ ಮೂಲಕ ನಾಯಕಿಯಾಗಿ ಗುರುತಿಸಿಕೊಂಡಿದ್ದಾರೆ. ದೇವಿಯಾಗಿ ಯಶಸ್ವಿನಿ ಸಿದ್ದೇಗೌಡ, ರವಿಬಸ್ರೂರು ಪುತ್ರಿ ಖುಷಿ ಬಸ್ರೂರು ಬಾಲ ದೇವಿಯಾಗಿ ಕಾಣಿಸಿಕೊಂಡಿದ್ದಾರೆ. ಇವರೊಂದಿಗೆ ಹರೀಶ್ ರಾಯ್, ಯಶ್ ಶೆಟ್ಟಿ, ದಿನೇಶ್ ಮಂಗಳೂರು, ಪುನೀತ್ ರುದ್ರನಾಗ್, ಭಜರಂಗಿ ಪ್ರಸನ್ನ, ನೀನಾಸಂ ಅಶ್ವತ್ಥ್, ಹಿರಿಯ ನಟ ಸುಮನ್, ತಮಿಳಿನ ದಿನಾ, ಸಾಗರ್ ಕೂಡ ಪ್ರಮುಖ ಪಾತ್ರ ನಿರ್ವಹಿಸಿದ್ದಾರೆ. ಉಳಿದಂತೆ ತಬಲನಾಣಿ, ವಿಜಯ್‌ಚೆಂಡೂರು, ದಿವ್ಯಾ ಆಲೂರು, ಮನಮೋಹನ್ ರೈ, ಆರವ್ ಲೋಹಿತ್, ಪಿಳ್ಳಣ್ಣ, ಮಧುಶ್ರೀ, ದಿವ್ಯಾ ಆಲೂರು., ವೇದಾಹಾಸನ್, ಸುನಂದಕಲ್ಬುರ್ಗಿ, ಶಶಿಕುಮಾರ್, ಕೆ.ಬಾಲಸುಬ್ರಮಣ್ಯಂ ಮುಂತಾದವರು ನಟಿಸಿದ್ದಾರೆ. ಕಲಾವಿದರು, ತಂತ್ರಜ್ಞರು ಹಾಗೂ ಚಿತ್ರಕ್ಕೆ ದುಡಿದವರನ್ನು ವೇದಿಕೆಗೆ ಆಹ್ವಾನಿಸಿ ಅವರುಗಳಿಗೂ ಮಾತನಾಡಲು ಅವಕಾಶ ಕಲ್ಪಸಿದ್ದು ನಿರ್ದೇಶಕರ ದೊಡ್ಡ ಗುಣವೆಂದು ಹೇಳಬಹುದು. ಸುಮಾರು ಎರಡೂವರೆ ಗಂಟೆಗಳ ಕಾಲ ನಡೆದ ಸುಂದರ ಸಮಾರಂಭವು ಎಲ್ಲರಿಗೂ ಭಕ್ತಿಭಾವದಲ್ಲಿ ಮಿಂದಂತೆ ಆಗಿತ್ತು.