Tag: sindhanoor

  • ರಾಯಚೂರು: ಬೈಕ್‍ಗೆ ವಾಹನ ಡಿಕ್ಕಿ- ಸವಾರರಿಬ್ಬರು ಸಾವು

    ರಾಯಚೂರು: ಬೈಕ್‍ಗೆ ವಾಹನ ಡಿಕ್ಕಿ- ಸವಾರರಿಬ್ಬರು ಸಾವು

    ರಾಯಚೂರು: ಅಪರಿಚಿತ ವಾಹನವೊಂದು ಬೈಕ್‍ಗೆ ಡಿಕ್ಕಿ ಹೊಡೆದು ಸವಾರರಿಬ್ಬರು ಸ್ಥಳದಲ್ಲೆ ಮೃತಪಟ್ಟಿರೋ ಘಟನೆ ಜಿಲ್ಲೆಯ ಸಿಂಧನೂರು ತಾಲೂಕಿನ ಬಾದರ್ಲಿ ಬಳಿ ನಡೆದಿದೆ.

    ಭಾನುವಾರ ತಡರಾತ್ರಿ ಘಟನೆ ನಡೆದಿದ್ದು, ಬೆಳಗ್ಗಿನ ಜಾವ ಬೆಳಕಿಗೆ ಬಂದಿದೆ. ಹುಬ್ಬಳ್ಳಿ ಕಡೆಯಿಂದ ಸಿಂಧನೂರಿಗೆ ಬರುತ್ತಿದ್ದ ವೇಳೆ ಬೈಕ್ ಸವಾರರಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ. ಅಪಘಾತದ ಬಳಿಕ ವಾಹನದ ಸಮೇತ ಚಾಲಕ ಪರಾರಿಯಾಗಿದ್ದಾನೆ. ಮೃತರು ಹುಬ್ಬಳ್ಳಿ ಮೂಲದವರು ಎನ್ನಲಾಗಿದ್ದು, ಅವರ ಗುರುತು ಪತ್ತೆಯಾಗಿಲ್ಲ.

    ಘಟನೆ ಕುರಿತು ಸಿಂಧನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತರ ಗುರುತು ಹಾಗೂ ಡಿಕ್ಕಿ ಹೊಡೆದ ಅಪರಿಚಿತ ವಾಹನ ಪತ್ತೆ ಹಚ್ಚಲು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

  • ಹುಚ್ಚು ನಾಯಿ ಕಚ್ಚಿ ಮಕ್ಕಳಿಗೆ ಗಂಭೀರ ಗಾಯ

    ಹುಚ್ಚು ನಾಯಿ ಕಚ್ಚಿ ಮಕ್ಕಳಿಗೆ ಗಂಭೀರ ಗಾಯ

    ರಾಯಚೂರು: ಸಿಂಧನೂರು ತಾಲೂಕಿನ ಸಾಲಗುಂದ ಗ್ರಾಮದಲ್ಲಿ ಹುಚ್ಚುನಾಯಿಯೊಂದು ಇಬ್ಬರು ಮಕ್ಕಳಿಗೆ ಕಡಿದು ಗಂಭೀರ ಗಾಯಗೊಳಿಸಿದೆ.

    6 ವರ್ಷದ ಅಜಯ್ ಮತ್ತು 4 ವರ್ಷದ ಕಾವೇರಿ ಹುಚ್ಚು ನಾಯಿ ಕಡಿತಕ್ಕೊಳಗಾಗಿರುವ ಮಕ್ಕಳು. ಮನೆ ಮುಂದೆ ಆಟವಾಡುತ್ತಿದ್ದ ಮಕ್ಕಳ ಮೇಲೆ ಏಕಾಏಕಿ ದಾಳಿ ನಡೆಸಿದ ಹುಚ್ಚುನಾಯಿ ಸಿಕ್ಕಸಿಕ್ಕಲ್ಲಿ ಕಚ್ಚಿ ಗಾಯಗೊಳಿಸಿದೆ. ಅಜಯ್‍ನ ಕುತ್ತಿಗೆ ಭಾಗಕ್ಕೆ ಬಲವಾಗಿದೆ ಕಚ್ಚಿದೆ. ಕಾವೇರಿಯ ತಲೆ ಹಾಗೂ ಮುಖಕ್ಕೆ ಕಚ್ಚಿದ್ದು ಮಕ್ಕಳ ಸ್ಥಿತಿ ಗಂಭೀರವಾಗಿದೆ.

    ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ಇಬ್ಬರನ್ನೂ ದಾಖಲಿಸಲಾಗಿದ್ದು ಚಿಕಿತ್ಸೆ ಮುಂದುವರೆದಿದೆ. ಹುಚ್ಚುನಾಯಿ ಗ್ರಾಮದ ಸುತ್ತಮುತ್ತ ಇನ್ನೂ ಓಡಾಡಿಕೊಂಡಿದ್ದು ಗ್ರಾಮದ ಜನರು ಭಯಭೀತರಾಗಿದ್ದಾರೆ. ತಕ್ಷಣ ಸಂಬಂಧಪಟ್ಟವರು ಕ್ರಮಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.