Tag: Sindhanur

  • ಬಳ್ಳಾರಿ | 200ಕ್ಕೂ ಹೆಚ್ಚು ಬಾಡಿಗೆ ಕಾರುಗಳನ್ನು ಅಡವಿಟ್ಟು ಹಣಪಡೆದು ಪರಾರಿ

    ಬಳ್ಳಾರಿ | 200ಕ್ಕೂ ಹೆಚ್ಚು ಬಾಡಿಗೆ ಕಾರುಗಳನ್ನು ಅಡವಿಟ್ಟು ಹಣಪಡೆದು ಪರಾರಿ

    ಬಳ್ಳಾರಿ: ಬಾಡಿಗೆ ಪಡೆದ 200ಕ್ಕೂ ಹೆಚ್ಚು ಕಾರುಗಳನ್ನು (Rented Car) ಗಿರವಿಯಿಟ್ಟು ಹಣಪಡೆದು ವಂಚಕನೋರ್ವ ಪರಾರಿಯಾಗಿರುವ ಘಟನೆ ಬಳ್ಳಾರಿಯಲ್ಲಿ (Ballari) ನಡೆದಿದೆ.

    ರಾಯಚೂರು (Raichur) ಜಿಲ್ಲೆಯ ಸಿಂಧನೂರಿನ (Sindhanur) ಎಂ.ಡಿ ಜಹೀದ್ ಭಾಷಾ ಅಲಿಯಾಸ್ ಸೋನೊ 200ಕ್ಕೂ ಹೆಚ್ಚು ಜನರಿಗೆ ವಂಚಿಸಿ ಪರಾರಿಯಾಗಿದ್ದಾನೆ. ಎರಡು ಮೂರು ತಿಂಗಳು ಕಾರಿಗೆ ಬಾಡಿಗೆ ಕೊಟ್ಟು ಬಳಿಕ ಕೈ ಕೊಟ್ಟಿದ್ದಾನೆ. ಆರು ತಿಂಗಳಿಂದ ಸತತವಾಗಿ ಬಳ್ಳಾರಿಯ ತನ್ನ ಸ್ನೇಹಿತರ ಮೂಲಕ ಕಾರುಗಳನ್ನ ಇತರರಿಂದ ಬಾಡಿಗೆ ಪಡೆದಿದ್ದ ಎಂ.ಡಿ ಜಹೀದ್ ಪಾಷಾ ಸಿಂಧನೂರಿನಲ್ಲಿ ಕಾರುಗಳನ್ನ ಗಿರವಿ ಇಟ್ಟು ಹಣಪಡೆದು ಎಸ್ಕೇಪ್ ಆಗಿದ್ದಾನೆ. ಇದನ್ನೂ ಓದಿ: ವೋಟರ್‌ ಐಡಿ ದುರುಪಯೋಗ ತಡೆಗೆ ಪರಿಹಾರ; ಇ-ಸೈನ್ ವ್ಯವಸ್ಥೆ ಆರಂಭಿಸಿದ ಚುನಾವಣಾ ಆಯೋಗ

    ಜಹೀದ್ ಪಾಷಾ ನೇರವಾಗಿ ಕಾರು ಮಾಲಿಕರಿಗೆ ಸಂಪರ್ಕವೇ ಇರಲಿಲ್ಲ. ಎಲ್ಲವನ್ನೂ ಸ್ಥಳೀಯ ಸ್ನೇಹಿತರ ಮೂಲಕ ವ್ಯವಹಾರ ಮುಗಿಸಿ ಬಾಡಿಗೆ ಅಗ್ರಿಮೆಂಟ್ ಕೊಟ್ಟಿದ್ದ. ಇತ್ತೀಚೆಗೆ ಬಾಡಿಗೆ ಕೊಡದಿದ್ದ ಹಿನ್ನೆಲೆ ಕಾರು ಮಾಲೀಕರು ಕಾರಿನ ಜಿಪಿಎಸ್ ಟ್ರೇಸ್ ಮಾಡಿ ಹೋದಾಗ ಘಟನೆ ಬೆಳಕಿಗೆ ಬಂದಿದೆ. ಜಹೀದ್ ಪಾಷಾ ಬಾಡಿಗೆ ಪಡೆದಿದ್ದ ಕಾರುಗಳನ್ನು ಇತರ ದೊಡ್ಡ ದೊಡ್ಡ ಜನರ ಬಳಿ ಗಿರವಿಯಿಟ್ಟಿದ್ದಾನೆ. ಇದೀಗ ಕಾರು ಮಾಲೀಕರು ವಂಚಕನ ವಿರುದ್ಧ ಬಳ್ಳಾರಿ ಬ್ರೂಸ್ ಪೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ. ಇದನ್ನೂ ಓದಿ: ಬಿಜೆಪಿ ಸರ್ಕಾರದಲ್ಲಿ ನಡೆದಿದೆ ಎನ್ನಲಾದ ಹಗರಣಗಳ ತನಿಖೆಗೆ ರಚಿಸಿದ್ದ ಆಯೋಗ ದಿಢೀರ್‌ ರದ್ದು

  • ವರದಕ್ಷಿಣೆ ಕಿರುಕುಳ ನೀಡಿ ಹತ್ಯೆ ಆರೋಪ – ಪತಿ ಕುಟುಂಬಸ್ಥರ ವಿರುದ್ಧ ಕೊಲೆ ಕೇಸ್‌ ದಾಖಲು

    ವರದಕ್ಷಿಣೆ ಕಿರುಕುಳ ನೀಡಿ ಹತ್ಯೆ ಆರೋಪ – ಪತಿ ಕುಟುಂಬಸ್ಥರ ವಿರುದ್ಧ ಕೊಲೆ ಕೇಸ್‌ ದಾಖಲು

    ರಾಯಚೂರು: ಸಿಂಧನೂರು (Sindhanur) ತಾಲೂಕಿನ ಸಿಎಸ್ಎಫ್ ಕ್ಯಾಂಪ್‌ನಲ್ಲಿ ವರದಕ್ಷಿಣೆ (Dowry) ಕಿರುಕುಳ ನೀಡಿ ನೇಣು ಬಿಗಿದು ಮಹಿಳೆಯನ್ನು ಕೊಲೆ ಮಾಡಿದ ಆರೋಪ ಕೇಳಿಬಂದಿದೆ.

    ಮಾಬಮ್ಮ (26) ಮೃತಪಟ್ಟ ಗೃಹಿಣಿಯಾಗಿದ್ದಾಳೆ. ವರದಕ್ಷಿಣೆಗಾಗಿ ಕಿರುಕುಳ ನೀಡಿ ನೇಣು ಹಾಕಿ ಕೊಲೆ ಮಾಡಲಾಗಿದೆ ಎಂದು ಮೃತಳ ಪೋಷಕರು ಆರೋಪಿಸಿದ್ದಾರೆ. ನಾಲ್ಕು ವರ್ಷಗಳ ಹಿಂದೆ ಮಾಬಮ್ಮಳನ್ನು ಹುಸೇನಬಾಷಾ ಜೊತೆ ಮದುವೆ ಮಾಡಲಾಗಿತ್ತು. ಮದುವೆಯಾದ ಒಂದುವರೆ ವರ್ಷದ ಬಳಿಕ ವರದಕ್ಷಿಣೆಗಾಗಿ ನಿತ್ಯ ಕಿರುಕುಳ ನೀಡಲಾಗಿದೆ. ತವರು ಮನೆಯಿಂದ ವರದಕ್ಷಿಣೆ ತರುವಂತೆ ಪೀಡಿಸಿ ನಿತ್ಯ ಪತಿ ಜಗಳವಾಡುತ್ತಿದ್ದ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಇದನ್ನೂ ಓದಿ: ತುಂಗಭದ್ರಾ ನದಿಯಲ್ಲಿ ನಾಪತ್ತೆಯಾಗಿದ್ದ ಮೂವರು ಯುವಕರು ಶವವಾಗಿ ಪತ್ತೆ

    ಈ ಸಂಬಂಧ ಬಳಗಾನೂರು ಪೊಲೀಸ್ ಠಾಣೆಯಲ್ಲಿ ಪತಿ ಹುಸೇನ್ ಬಾಷಾ ,ಮಾವ ನಬೀಸಾಬ್, ಮೈದುನ ಹಸೇನ್ ಬಾಷಾ ವಿರುದ್ಧ ಕೊಲೆ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ಆರಂಭಿಸಿದ್ದಾರೆ. ಇದನ್ನೂ ಓದಿ: ಬಿಹಾರದಲ್ಲಿ ಗುಂಡಿಕ್ಕಿ ಮತ್ತೋರ್ವ ಬಿಜೆಪಿ ನಾಯಕನ ಹತ್ಯೆ

  • ಸಿಂಧನೂರು-ಬೆಂಗಳೂರು, ಹುಬ್ಬಳ್ಳಿಗೆ ನೂತನ ರೈಲು ಸೇವೆ ಆರಂಭ

    ಸಿಂಧನೂರು-ಬೆಂಗಳೂರು, ಹುಬ್ಬಳ್ಳಿಗೆ ನೂತನ ರೈಲು ಸೇವೆ ಆರಂಭ

    ರಾಯಚೂರು: ಸಿಂಧನೂರಿನಿಂದ ಬೆಂಗಳೂರು, ಹುಬ್ಬಳ್ಳಿಗೆ ನೂತನ ರೈಲು ಸೇವೆ ಆರಂಭಿಸಲಾಗಿದ್ದು, ಹೊಸ ಮಾರ್ಗಕ್ಕೆ ಕೇಂದ್ರ ರೈಲ್ವೆ ಖಾತೆ ಹಾಗೂ ಜಲಶಕ್ತಿ ರಾಜ್ಯ ಸಚಿವ ವಿ.ಸೋಮಣ್ಣ ಚಾಲನೆ ನೀಡಿದರು.

    ಸಿಂಧನೂರು ನಗರದಲ್ಲಿನ ರೈಲು ನಿಲ್ದಾಣದಲ್ಲಿ ನೂತನ ರೈಲಿಗೆ ಹಸಿರು ನಿಶಾನೆ ತೋರಿದರು. ಬಳಿಕ ಮಾತನಾಡಿದ ಅವರು, ನರೇಂದ್ರ ಮೋದಿ‌ ಪ್ರಧಾನಿಯಾದ ನಂತರ ರೈಲ್ವೆ ಇಲಾಖೆಯಲ್ಲಿ ಹಲವು ಕ್ರಾಂತಿಕಾರಕ ಕೆಲಸಗಳಾಗಿವೆ ಎಂದು ಬಣ್ಣಿಸಿದರು.

    ಹಲವು ವರ್ಷಗಳ ಕನಸಿನ ರೈಲು ಸಂಚಾರಕ್ಕೆ ಇಂದು ಚಾಲನೆ ಸಿಕ್ಕಿದೆ. ಮಧ್ಯಾಹ್ನ 1:30ಕ್ಕೆ ಸಿಂಧನೂರಿನಿಂದ ಹೊರಟು, ಹುಬ್ಬಳ್ಳಿ ಮೂಲಕ ಮುಂಜಾನೆ 3:55ಕ್ಕೆ ರೈಲು ಬೆಂಗಳೂರು ತಲುಪಲಿದೆ.

  • ಜೋಳ ಖರೀದಿ ಕೇಂದ್ರ ತೆರೆಯಲು ಒತ್ತಾಯಿಸಿ ಸಿಂಧನೂರು ಬಂದ್ – ರೈತರ ಹೋರಾಟಕ್ಕೆ ಸಾರ್ವಜನಿಕರ ಬೆಂಬಲ

    ಜೋಳ ಖರೀದಿ ಕೇಂದ್ರ ತೆರೆಯಲು ಒತ್ತಾಯಿಸಿ ಸಿಂಧನೂರು ಬಂದ್ – ರೈತರ ಹೋರಾಟಕ್ಕೆ ಸಾರ್ವಜನಿಕರ ಬೆಂಬಲ

    – ಬಸ್ ಸಂಚಾರ, ವ್ಯಾಪಾರ ವಹಿವಾಟು, ಶಾಲಾ-ಕಾಲೇಜು ಬಂದ್

    ರಾಯಚೂರು: ಜೋಳ ಖರೀದಿ ಕೇಂದ್ರ ಪುನರಾರಂಭಕ್ಕೆ ಒತ್ತಾಯಿಸಿ ರೈತ ಸಂಘಟನೆಗಳು ಸಿಂಧನೂರು (Sindhanuru) ಬಂದ್‌ಗೆ ಕರೆ ನೀಡಿದ್ದು, ಬಸ್ ಸಂಚಾರ, ವ್ಯಾಪಾರ ವಹಿವಾಟು, ಶಾಲಾ-ಕಾಲೇಜು ಸ್ಥಗಿತಗೊಂಡಿವೆ.

    ವ್ಯಾಪಾರಸ್ಥರು, ಹೋಟೆಲ್ ಮಾಲೀಕರು, ತರಕಾರಿ ವ್ಯಾಪಾರಿಗಳು ಬಂದ್‌ಗೆ ಸಾಥ್ ನೀಡಿದ್ದು, ವ್ಯಾಪಾರ ವಹಿವಾಟುಗಳು ಬಂದ್ ಆಗಿವೆ. ರೈತರ ಮನವಿಗೆ ಸ್ಪಂದಿಸಿ ಶಾಲಾ-ಕಾಲೇಜುಗಳ ಆಡಳಿತ ಮಂಡಳಿಗಳು ವಿದ್ಯಾರ್ಥಿಗಳಿಗೆ ರಜೆ ನೀಡಿವೆ. ಬಸ್ ಸಂಚಾರ ಸ್ಥಗಿತಗೊಂಡಿದ್ದು, ಆಟೋ ಚಾಲಕರು ಸಹ ಬಂದ್‌ಗೆ ಬೆಂಬಲ ಸೂಚಿಸಿದ್ದಾರೆ.ಇದನ್ನೂ ಓದಿ: ತಾಂತ್ರಿಕ ಸಮಿತಿ ವರದಿ ಆಧರಿಸಿಯೇ ಹೇಮಾವತಿ ಕೆನಾಲ್ ನಿರ್ಮಾಣ: ಪರಮೇಶ್ವರ್

    ಸಿಂಧನೂರು ತಹಶೀಲ್ದಾರ್ ಕಚೇರಿ ಮುಂದೆ ನಡೆದಿರುವ ಅನಿರ್ದಿಷ್ಟಾವಧಿ ಹೋರಾಟದ ಭಾಗವಾಗಿ ರೈತರು ಸಿಂಧನೂರು ಬಂದ್‌ಗೆ ಕರೆ ನೀಡಿದ್ದಾರೆ. ರೈತರ ಜೋಳ ಹಾಳಾಗುತ್ತಿದ್ದು, ಜೋಳ ಖರೀದಿ ಕೇಂದ್ರ ತೆರೆದು ಬೆಂಬಲ ಬೆಲೆಯಡಿ ಖರೀದಿಸಲು ಒತ್ತಾಯಿಸಿದ್ದಾರೆ.

    ಇದಕ್ಕೂ ಮುನ್ನ ರಸ್ತೆಯಲ್ಲಿ ಅನ್ನ ಊಟ ಮಾಡಿ ಪ್ರತಿಭಟಿಸಿದ್ದ ರೈತರು, ಜೋಳ ಖರೀದಿಗೆ ಆಗ್ರಹಿಸಿ ಅರೆ ಬೆತ್ತಲೆ ಹೋರಾಟ ನಡೆಸಿ ಸರ್ಕಾರಕ್ಕೆ ಮನವಿ ಮಾಡಿದ್ದರು. ಸರ್ಕಾರದಿಂದ ಯಾವುದೇ ಸ್ಪಂದನೆ ಇಲ್ಲದ ಹಿನ್ನೆಲೆ ಸಿಂಧನೂರು ಬಂದ್‌ಗೆ ಕರೆ ನೀಡಿದ್ದಾರೆ. ರೈತ ಸಂಘಟನೆಗಳು ನೀಡಿದ ಬಂದ್‌ಗೆ ವಿವಿಧ ಸಂಘಟನೆಗಳು ಬೆಂಬಲ ಸೂಚಿಸಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.ಇದನ್ನೂ ಓದಿ: ಬೆಳಗಾವಿಯಲ್ಲಿ ಅಪ್ರಾಪ್ತೆಯ ಮೇಲೆ ಗ್ಯಾಂಗ್ ರೇಪ್| ಐವರನ್ನು ಬಂಧಿಸಿದ್ದೇವೆ: ಪರಮೇಶ್ವರ್‌

  • ಸಿಂಧನೂರು | ಸರ್ಕಾರಿ ಹುದ್ದೆಗಾಗಿ ನಗರಸಭೆ ಅಧ್ಯಕ್ಷೆ ಸ್ಥಾನಕ್ಕೆ ರಾಜೀನಾಮೆ

    ಸಿಂಧನೂರು | ಸರ್ಕಾರಿ ಹುದ್ದೆಗಾಗಿ ನಗರಸಭೆ ಅಧ್ಯಕ್ಷೆ ಸ್ಥಾನಕ್ಕೆ ರಾಜೀನಾಮೆ

    ರಾಯಚೂರು: ಜಿಲ್ಲೆಯ ಸಿಂಧನೂರು ನಗರಸಭೆ (Sindhanur Municipal Council) ಅಧ್ಯಕ್ಷೆ ಪ್ರಿಯಾಂಕ ನಾಯಕ್ ಸರ್ಕಾರಿ ಹುದ್ದೆಗೆ ಏರಲು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

    ರಾಯಚೂರು ಜಿಲ್ಲಾಧಿಕಾರಿಗಳಿಗೆ ನಗರಸಭೆ ಅಧ್ಯಕ್ಷೆ ಹಾಗೂ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಕಾಂಗ್ರೆಸ್ ಬೆಂಬಲದೊಂದಿಗೆ ನಗರಸಭೆ ಅಧ್ಯಕ್ಷೆಯಾಗಿದ್ದ ಪ್ರಿಯಾಂಕ ನಾಯಕ್ 2025 ಫೆ.13 ರಂದು ಅಧ್ಯಕ್ಷೆಯಾಗಿ ಪದಗ್ರಹಣ ಮಾಡಿದ್ದರು. ಇಂಜಿನಿಯರಿಂಗ್ ಪದವಿಧರೆಯಾಗಿರುವ ಪ್ರಿಯಾಂಕ ಸ್ಪರ್ಧಾತ್ಮಕ ಪರೀಕ್ಷೆ (Competitive Exam) ಬರೆದಿದ್ದರು. ಹುದ್ದೆಯ ಅಂತಿಮ ಪಟ್ಟಿಯಲ್ಲಿ ಹೆಸರು ಬಂದಿದ್ದರಿಂದ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಐತಿಹಾಸಿಕ ಕ್ಷಣ; ಯುನೆಸ್ಕೋದ ʻಮೆಮೋರಿ ಆಫ್ ದಿ ವರ್ಲ್ಡ್ ರಿಜಿಸ್ಟರ್‌ʼಗೆ ಭಗವದ್ಗೀತೆ, ನಾಟ್ಯಶಾಸ್ತ್ರ ಸೇರ್ಪಡೆ

    ಅಕ್ಟೋಬರ್ ಅಂತ್ಯಕ್ಕೆ ನಗರಸಭೆ ಅಧಿಕಾರವಧಿ ಪೂರ್ಣಗೊಳ್ಳಲಿದೆ.‌ ಆದ್ರೆ ಸರ್ಕಾರಿ ಹುದ್ದೆಗೇರುವ ಭವಿಷ್ಯದ ದೃಷ್ಟಿಯಿಂದ ಅಧ್ಯಕ್ಷ ಈಗಲೇ ರಾಜೀನಾಮೆ ನೀಡಿದ್ದಾರೆ. ಇದನ್ನೂ ಓದಿ: ಹಿಂದೂಗಳ ಮೇಲಿನ ದಾಳಿಯಂತೆ ಪ್ರತಿಬಿಂಬಿಸುವ ಪ್ರಯತ್ನ – ಬಾಂಗ್ಲಾದೇಶಕ್ಕೆ ವಿದೇಶಾಂಗ ಸಚಿವಾಲಯ ತಿರುಗೇಟು

    ಒಟ್ಟು 32 ಸದಸ್ಯ ಬಲದ ಸಿಂಧನೂರು ನಗರಸಭೆಯಲ್ಲಿ ಅಧ್ಯಕ್ಷ ಸ್ಥಾನ ಎಸ್‌ಟಿ ಮೀಸಲಾತಿ ಬಂದಿತ್ತು. ಕಾಂಗ್ರೆಸ್ ಪಕ್ಷದ ಸದಸ್ಯ ಬಲ 20 ಇದ್ದರೂ ಎಸ್‌ಟಿ ಸದಸ್ಯರಿರಲಿಲ್ಲ. ಜೆಡಿಎಸ್ ಸದಸ್ಯೆಯಾಗಿದ್ದ ಪ್ರಿಯಾಂಕ ನಾಯಕ್‌ಗೆ ಕಾಂಗ್ರೆಸ್ ಬೆಂಬಲ ಸಿಕ್ಕಿತ್ತು. ಅಧ್ಯಕ್ಷೆಯಾಗಿ ಎರಡು ತಿಂಗಳ ಅಧಿಕಾರವಧಿ ಪೂರೈಸಿರುವ ಪ್ರಿಯಾಂಕ ನಾಯಕ್ ಈಗ ರಾಜೀನಾಮೆ ಸಲ್ಲಿಸಿದ್ದಾರೆ. 10 ದಿನಗಳ ಒಳಗೆ ರಾಜೀನಾಮೆ ವಾಪಸ್ ಪಡೆಯದಿದ್ದರೇ ರಾಜೀನಾಮೆ ಅಂಗಿಕಾರವಾಗಲಿದೆ. ಇದನ್ನೂ ಓದಿ: ಪರೀಕ್ಷಾ ಸಿಬ್ಬಂದಿ ಜನಿವಾರ ತೆಗೆಯಬೇಕು ಅಂದಿದ್ದು ತಪ್ಪು, ಅಂತಹ ಯಾವುದೇ ಮಾರ್ಗಸೂಚಿ ಇಲ್ಲ: ಕೆಇಎ

  • ಮಂತ್ರಾಲಯ | ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ವಿದ್ಯಾರ್ಥಿ ಹೃದಯ ಸ್ತಂಭನದಿಂದ ಸಾವು

    ಮಂತ್ರಾಲಯ | ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ವಿದ್ಯಾರ್ಥಿ ಹೃದಯ ಸ್ತಂಭನದಿಂದ ಸಾವು

    ರಾಯಚೂರು: ಜ.21ರಂದು ಸಿಂಧನೂರು (Sindhanur) ಬಳಿ ನಡೆದ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಮಂತ್ರಾಲಯ (Mantralya) ರಾಯರ ಮಠದ ಸಂಸ್ಕೃತ ವಿದ್ಯಾರ್ಥಿ ಇಂದು ಮುಂಜಾನೆ ಹೃದಯ ಸ್ತಂಭನದಿಂದ (Cardiac Arrest) ಮೃತಪಟ್ಟಿದ್ದಾನೆ.

    ಜಯಸಿಂಹ (23) ಮೃತ ವಿದ್ಯಾರ್ಥಿ. ಈತ ರಾಯಚೂರಿನ ಖಾಸಗಿ ಆಸ್ಪತ್ರೆಯಲ್ಲಿ ಕಳೆದ 23 ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ. ಸಿಂದನೂರಿನಲ್ಲಿ ನಡೆದ ಅಪಘಾತದಲ್ಲಿ ಜಯಸಿಂಹನ ತಲೆ, ಬೆನ್ನು, ಶಾಸ್ವಕೋಶ ಸೇರಿ ದೇಹದ ಹಲವೆಡೆ ತೀವ್ರ ಗಾಯಗಳಾಗಿದ್ದವು. ಇದನ್ನೂ ಓದಿ: Fashion | ಕಪಲ್ ರಿಂಗ್ ಗಿಫ್ಟ್‌ ಕೊಟ್ಟು ಪ್ರೇಮಿಗಳ ದಿನ ಆಚರಿಸಿ

    ಜನವರಿ 21ರಂದು ಮಂತ್ರಾಲಯದಿಂದ ಕೊಪ್ಪಳದ ಆನೆಗುಂದಿಗೆ ಹೊರಟಿದ್ದ ಕ್ರೂಸರ್ ವಾಹನ ಪಲ್ಟಿಯಾಗಿತ್ತು. ಈ ಅಪಘಾತದಲ್ಲಿ ನಾಲ್ಕು ಜನ ಸಾವನ್ನಪ್ಪಿದ್ದರು. 10 ಜನರಿಗೆ ಗಾಯಗಳಾಗಿದ್ದವು. ಸಿಂಧನೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದನ್ನೂ ಓದಿ: ಪದ್ಮಶ್ರೀ ಪುರಸ್ಕೃತೆ, ಜನಪದ ಗಾನ ಕೋಗಿಲೆ ಸುಕ್ರಿ ಬೊಮ್ಮಗೌಡ ವಿಧಿವಶ

  • ಸಿಂಧನೂರು ದಸರಾ ಮಹೋತ್ಸವಕ್ಕೆ ಸಿಎಂ ಚಾಲನೆ

    ಸಿಂಧನೂರು ದಸರಾ ಮಹೋತ್ಸವಕ್ಕೆ ಸಿಎಂ ಚಾಲನೆ

    ರಾಯಚೂರು: ಜಿಲ್ಲೆಯ ಸಿಂಧನೂರಿನಲ್ಲಿ (Sindhanur) ಪ್ರಥಮ ಬಾರಿಗೆ 9 ದಿನಗಳ ಕಾಲ ಆಚರಿಸುತ್ತಿರುವ ದಸರಾ ಮಹೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ (CM Siddaramaiah) ಚಾಲನೆ ನೀಡಿದರು. ನಗರದ ಗಾಂಧಿ ವೃತ್ತದಲ್ಲಿ ಮಳೆ ನಡುವೆಯು ಅಂಬಾದೇವಿಗೆ ಪೂಜೆ ಸಲ್ಲಿಸಿ ದಸರಾ ಮೆರವಣಿಗೆ ಚಾಲನೆ ನೀಡಿದರು. ಮೆರವಣಿಗೆಯಲ್ಲಿ ವಿವಿಧ ಕಲಾ ತಂಡಗಳು ಭಾಗಿಯಾಗಿದ್ದವು.

    ದಸರಾ (Dasara) ಮೆರವಣಿಗೆ ಬಳಿಕ ನಗರದ ಸರ್ಕಾರಿ ಪದವಿ ಕಾಲೇಜು ಮೈದಾನದಲ್ಲಿ ಏರ್ಪಡಿಸಿದ್ದ ಅಭಿವೃದ್ದಿ ಕಾಮಗಾರಿ ಶಂಕುಸ್ಥಾಪನೆ ಹಾಗೂ ಕಲಂ 371 ಜೆ ದಶಮಾನೋತ್ಸವ ಅಂಗವಾಗಿ ಆಯೋಜಿಸಿದ್ದ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿ, ದಸರಾ ಖುಷಿ, ಸಂತೋಷ ತರುವಂತ ಹಬ್ಬ. ನಮ್ಮ ಸಂಸ್ಕೃತಿಯನ್ನ ರಾಜ್ಯ ದೇಶಕ್ಕೆ ಸಾರುವಂತ ಹಬ್ಬ ಇದು. ಸಿಂಧನೂರಿನಲ್ಲಿ ಪಕ್ಷಾತೀತವಾಗಿ ದಸರಾ ಮಾಡುತ್ತಿರುವುದು ಸಂತೋಷದ ವಿಷಯ. ಎಲ್ಲೆಡೆ ದಸರಾ ಮಾಡುತ್ತಿದ್ದಾರೆ. ಅದ್ಧೂರಿಯಾಗಿ ದಸರಾ ಆಚರಿಸಲು ನಾನು ಕರೆ ಕೊಟ್ಟಿದ್ದೇನೆ. ಕಳೆದ ವರ್ಷ ಬರಗಾಲಯಿತ್ತು. ಈ ವರ್ಷ ಎಲ್ಲಾ ಜಲಾಶಯಗಳು ತುಂಬಿವೆ. ಒಳ್ಳೆಯ ಬೆಳೆಯಿದೆ ಎಂದರು. ಇದನ್ನೂ ಓದಿ: ದೇಶದ ರೈತರಿಗೆ ನವರಾತ್ರಿ ಗಿಫ್ಟ್‌ – ಶನಿವಾರ ಪ್ರಧಾನಿ ಮೋದಿಯಿಂದ 20,000 ಕೋಟಿ ರೂ. ಬಿಡುಗಡೆ

    371ಜೆ ಸೆರ್ಪಡೆಯಾದಾಗಿನಿಂದ ಹೈಕ ಭಾಗಕ್ಕೆ ವಿಶೇಷ ಸೌಲಭ್ಯ ಕೊಡಲಾಗುತ್ತಿದೆ. 371ಜೆ ಜಾರಿ ಮಾಡಲು ಹೆಚ್ ಕೆ ಪಾಟೀಲ್ ನೇತೃತ್ವದ ಉಪ ಸಮಿತಿ ಮಾಡಲಾಗಿತ್ತು. ಉಪ ಸಮಿತಿ ವರದಿಯನ್ನ ಯತಾವತ್ತಾಗಿ ಜಾರಿ ಮಾಡಲಾಯಿತು. 371ಜೆಗಾಗಿ ಸಾವಿರಾರು ಜನ ಹೋರಾಟ ಮಾಡಿದರು ಧರ್ಮಸಿಂಗ್, ಖರ್ಗೆ ಸತತ ಪ್ರಯತ್ನದಿಂದ ಜಾರಿಯಾಯಿತು. ನಾವು ಧರ್ಮಸಿಂಗ್, ಖರ್ಗೆಯವರಿಗೆ ಅಭಿನಂದನೆ ಸಲ್ಲಿಸಲೇಬೇಕು. 371ಜೆ ಜಾರಿಯಾಗಿ 10 ವರ್ಷ ಆಗಿದೆ ಎಂದು ಹೇಳಿದರು. ಇದನ್ನೂ ಓದಿ: Iran Israel War | ನನ್ನ ಕರೆಗೆ ಸ್ಪಂದಿಸಿ ಧೈರ್ಯ ತುಂಬಿದ್ದು ʻಪಬ್ಲಿಕ್ ಟಿವಿʼ – ಧನ್ಯವಾದ ಹೇಳಿದ ಕನ್ನಡಿಗ

    ಕಲಬುರಗಿ (Kalaburagi) ಕ್ಯಾಬಿನೆಟ್ ಮೀಟಿಂಗ್‌ನಲ್ಲಿ 57 ವಿಷಯದಲ್ಲಿ 47 ವಿಷಯಗಳು ಕಲ್ಯಾಣ ಕರ್ನಾಟಕಕ್ಕೆ ಸೇರಿದ್ದವು. ಸಭೆಯಲ್ಲಿ 11,770 ಕೋಟಿ ರೂ. ಮಂಜೂರಾತಿ ಕೊಟ್ಟೆವು. ನಂಜುಡಪ್ಪ ವರದಿ ಜಾರಿಯಿಂದ ಏನಾಗಿದೆ ಅನ್ನೋದರ ಅಧ್ಯಯನಕ್ಕೆ ಗೋವಿಂದರಾವ್ ಸಮಿತಿ ರಚನೆ ಮಾಡಿದ್ದೇವೆ. ವರದಿ ಬಂದ ಮೇಲೆ ಮತ್ತೆ ಜಾರಿ ಮಾಡುವ ಕೆಲಸ ಮಾಡುತ್ತೇವೆ. ಕೆಕೆಆರ್ ಡಿಬಿಗೆ ಈ ವರ್ಷ 5 ಸಾವಿರ ಕೋಟಿ ರೂ. ಮಂಜೂರು ಮಾಡಿದ್ದಾರೆ. ಇದು ಮತಕ್ಕೋಸ್ಕರ ಮಾಡಿಲ್ಲ. ಹಿಂದುಳಿದ ಭಾಗದ ಜನ ಮುಂದೆ ಬರಬೇಕು. ಈ ಭಾಗದ ಯುವಕರು ಉನ್ನತ ಹುದ್ದೆಗಳಿಗೆ ಏರಬೇಕು. ಭಾಗದಲ್ಲಿ 1.9 ಲಕ್ಷ ಹುದ್ದೆ ಗುರುತು ಮಾಡಿದ್ದೇವೆ. ಇದರಲ್ಲಿ 1.79 ಲಕ್ಷ ಭರ್ತಿ ಮಾಡಿದ್ದೇವೆ. ಉಳಿದ ಹುದ್ದೆ ಹಂತ ಹಂತವಾಗಿ ಭರ್ತಿ ಮಾಡುತ್ತೇವೆ ಎಂದು ತಿಳಿಸಿದರು. ಇದನ್ನೂ ಓದಿ: ಬೆಳಗಾವಿ ಡಿಸಿಸಿ ಬ್ಯಾಂಕ್‌ನಲ್ಲಿ ಭಿನ್ನಮತ ಸ್ಫೋಟ – ಅಧ್ಯಕ್ಷ ಸ್ಥಾನಕ್ಕೆ ರಮೇಶ್ ಕತ್ತಿ ರಾಜೀನಾಮೆ

  • ಸಾಲಬಾಧೆ ತಾಳದೆ ವಿದ್ಯುತ್ ತಂತಿ ಹಿಡಿದು ರೈತ ಆತ್ಮಹತ್ಯೆ

    ಸಾಲಬಾಧೆ ತಾಳದೆ ವಿದ್ಯುತ್ ತಂತಿ ಹಿಡಿದು ರೈತ ಆತ್ಮಹತ್ಯೆ

    ರಾಯಚೂರು: ರೈತನೋರ್ವ (Farmer) ಸಾಲಬಾಧೆ (Indebtedness) ತಾಳದೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಯಚೂರು (Raichur) ಜಿಲ್ಲೆಯ ಸಿಂಧನೂರು (Sindhanur) ತಾಲೂಕಿನ ಉಪ್ಪಲದೊಡ್ಡಿ ಗ್ರಾಮದಲ್ಲಿ ನಡೆದಿದೆ.

    ಮಲ್ಲಪ್ಪ ತೆಗ್ಗಿಹಾಳ (32) ಸಾವನ್ನಪ್ಪಿರುವ ಯುವ ರೈತ. ಬ್ಯಾಂಕ್ ಹಾಗೂ ಖಾಸಗಿಯಾಗಿ ಲಕ್ಷಾಂತರ ರೂ. ಸಾಲ ಮಾಡಿಕೊಂಡಿದ್ದ ರೈತ ಸಾಲ ತೀರಿಸಲು ಆಗದೆ ಆತ್ಮಹತ್ಯೆಗೆ ಶರಣಾಗಿದ್ದಾನೆ. ಇದನ್ನೂ ಓದಿ: ರಾಹುಲ್‌ ವಿರುದ್ಧ ವಿಡಿಯೋ – ಯೂಟ್ಯೂಬರ್‌ ಬಂಧನಕ್ಕೆ ನೋಯ್ಡಾಗೆ ತೆರಳಿ ಬರಿಗೈಯಲ್ಲಿ ಕರ್ನಾಟಕ ಪೊಲೀಸರು ವಾಪಸ್‌

    ತನ್ನ ಮನೆಯ ಬಳಿ ವಿದ್ಯುತ್ ತಂತಿ ಹಿಡಿದು ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಘಟನೆ ಹಿನ್ನೆಲೆ ತುರ್ವಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಜೈಲುಪಾಲಾದ ಅಮ್ಮನ ಕಂಡು ಬಿಕ್ಕಿ ಬಿಕ್ಕಿ ಅತ್ತ ಪವಿತ್ರಾ ಗೌಡ ಮಗಳು

  • ಬಿಜೆಪಿ ಟಿಕೆಟ್ ಕೈತಪ್ಪಿದ್ದಕ್ಕೆ ಸಂಸದ ಸಂಗಣ್ಣ ಕರಡಿ ಕಣ್ಣೀರು

    ಬಿಜೆಪಿ ಟಿಕೆಟ್ ಕೈತಪ್ಪಿದ್ದಕ್ಕೆ ಸಂಸದ ಸಂಗಣ್ಣ ಕರಡಿ ಕಣ್ಣೀರು

    ರಾಯಚೂರು: ಕೊಪ್ಪಳ (Koppal) ಲೋಕಸಭಾ ಟಿಕೆಟ್ ಕೈ ತಪ್ಪಿದ ಹಿನ್ನೆಲೆ ಸಂಸದ ಸಂಗಣ್ಣ ಕರಡಿ (Sanganna Karadi) ಕಾರ್ಯಕರ್ತರ ಎದುರು ವೇದಿಕೆಯಲ್ಲಿ ಕಣ್ಣೀರು ಹಾಕಿದ್ದಾರೆ.

    ರಾಯಚೂರಿನ (Raichur) ಸಿಂಧನೂರಿನಲ್ಲಿ ನೂತನ ರೈಲು ಆರಂಭ ಕಾರ್ಯಕ್ರಮದಲ್ಲಿ ಭಾವುಕರಾದ ಸಂಗಣ್ಣ ಕರಡಿ ಕಾರ್ಯಕರ್ತರ ಎದುರು ಕಣ್ಣೀರಿಟ್ಟರು. ವೇದಿಕೆಯ ಮೇಲೂ ಭಾವುಕರಾಗಿ ನಿವೃತ್ತಿ ಬಗ್ಗೆ ಭಾಷಣ ಮಾಡಿದರು. ಇದನ್ನೂ ಓದಿ: ನಾನು ಮೋದಿ ಮುಖ ನೋಡಿ ಕೆಲಸ ಮಾಡಲ್ಲ: ಮಾಧುಸ್ವಾಮಿ

    ಸಿಂಧನೂರಿಗೆ ರೈಲು ಬಂದಿರುವುದು ಎಲ್ಲರಿಗೂ ಖುಷಿಯಾಗಿದೆ. ಕಾರ್ಯಕರ್ತರಿಗೆ ಸಂಗಣ್ಣನವರು ನಮ್ಮನ್ನ ಬಿಟ್ಟರು ಎನ್ನುವ ಭಾವನೆ ಮೂಡುತ್ತಿದೆ. ಆ ಒಂದು ಕೊರಗಿಗೆ ನಾನು ಭಾವುಕನಾಗಿ ಮಾತನಾಡಿದ್ದೇನೆ. ಅದನ್ನು ಬಿಟ್ಟರೆ ಏನಿಲ್ಲ. ನಮ್ಮಲ್ಲಿ ಸ್ಥಳೀಯವಾಗಿ ಬಹಳ ಜನ ನಾಯಕರಿದ್ದಾರೆ ಅವರು ನಾಯಕತ್ವ ವಹಿಸಿಕೊಳ್ಳುತ್ತಾರೆ ಎಂದರು. ಇದನ್ನೂ ಓದಿ: ಮುಂಬರುವ ಚುನಾವಣೆಯಲ್ಲಿ ಮೋದಿ ಸರ್ಕಾರ ಸೋಲಿಸಲು ನಿರ್ಧರಿಸಿದೆ: ಎಸ್‌.ಆರ್ ಹೀರೆಮಠ

    ಯಾರಿಗೆ ಹೃದಯ ಇರುತ್ತೆ ಅವರಿಗೆ ಭಾವುಕತೆ ಬರುತ್ತೆ. ನಾನು ಕಾರ್ಯಕರ್ತರನ್ನು ನೋಡಿ ಭಾವುಕನಾಗಿದ್ದೇನೆ, ಅಧಿಕಾರ ಹೋಗುತ್ತೆ ಅಂತಲ್ಲಾ. ನನಗೆ ಟಿಕೆಟ್ ಕೊಡದಿರುವುದಕ್ಕೆ ಕಾರಣ ಇರಬಹುದು, ಅದು ವರಿಷ್ಠರಿಗೆ ಗೊತ್ತು. ಯುವಕರಿಗೆ ಕೊಡಬೇಕು ಅನ್ನೋ ಕಾರಣಾನೂ ಇರಬಹುದು. ಆದರೆ ನನಗೆ ಕೆಲಸದ ಅಭಾವ ಇದೆ. ನನಗೆ ಯಾವ ಶಾಪ್ ಇಲ್ಲಾ ಬ್ಯುಸಿನೆಸ್ ಇಲ್ಲಾ. ತೋಟದಲ್ಲಿನ ಮಾವು ಸಹ ಒಣಗಿಹೋಗಿ ನಷ್ಟವಾಗಿದೆ ಎಂದು ಭಾವುಕರಾದರು. ಇದನ್ನೂ ಓದಿ: ಬಿಎಸ್‌ವೈ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣ ಸಿಐಡಿಗೆ ವರ್ಗಾವಣೆ

  • ಸಿಂಧನೂರಿನಲ್ಲಿ ಸರಣಿ ಕಳ್ಳತನ – 60 ಮೊಬೈಲ್, ಬೈಕ್, ಲ್ಯಾಪ್‍ಟಾಪ್ ದೋಚಿದ ಕಳ್ಳರು

    ಸಿಂಧನೂರಿನಲ್ಲಿ ಸರಣಿ ಕಳ್ಳತನ – 60 ಮೊಬೈಲ್, ಬೈಕ್, ಲ್ಯಾಪ್‍ಟಾಪ್ ದೋಚಿದ ಕಳ್ಳರು

    ರಾಯಚೂರು: ಜಿಲ್ಲೆಯ ಸಿಂಧನೂರಿನಲ್ಲಿ (Sindhanur) ಒಂದೇ ದಿನ ಮೂರು ಕಡೆ ಕಳ್ಳತನವಾಗಿದ್ದು, ಲಕ್ಷಾಂತರ ರೂ. ಮೌಲ್ಯದ ವಸ್ತುಗಳನ್ನ ಕಳ್ಳರು ದೋಚಿದ್ದಾರೆ.

    ನಗರದ ಬಸ್ ನಿಲ್ದಾಣದ ಬಳಿ ಸಲೀಂ ಎಂಬವರ ಮೊಬೈಲ್ ಅಂಗಡಿಯ ಬೀಗ ಒಡೆದು ಸುಮಾರು 5 ಲಕ್ಷ ರೂ. ಮೌಲ್ಯದ 60 ಮೊಬೈಲ್‍ಗಳನ್ನು ಕಳ್ಳತನ ಮಾಡಲಾಗಿದೆ. ಇದರಲ್ಲಿ ಕೆಲವು ಹೊಸ ಮೊಬೈಲ್ ಸೇರಿದಂತೆ ಇನ್ನು ಕೆಲವು ರಿಪೇರಿಗೆ ಬಂದಿದ್ದ ಮೊಬೈಲ್‍ಗಳು ಎಂದು ತಿಳಿದುಬಂದಿದೆ. ಇಬ್ಬರು ಕಳ್ಳರ ಚಲನವಲನ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅಲ್ಲದೇ ಕಳ್ಳತನದ ವೇಳೆ ಸಿಸಿ ಕ್ಯಾಮೆರಾಗಳನ್ನು ಬೇರೆಡೆಗೆ ತಿರುಗಿಸಿದ್ದಾರೆ. ಇದನ್ನೂ ಓದಿ: ನಡುರಸ್ತೆಯಲ್ಲೇ ವೃದ್ಧನ ಬರ್ಬರ ಹತ್ಯೆ- ದೃಶ್ಯ ಮೊಬೈಲ್‍ನಲ್ಲಿ ಸೆರೆ

    ಮೊಬೈಲ್ ಅಂಗಡಿ ಅಷ್ಟೇ ಅಲ್ಲದೇ, ಅದೇ ಪ್ರದೇಶದಲ್ಲಿ ಇನ್ನೂ ಎರಡು ಕಡೆ ಕಳ್ಳತನ ಮಾಡಲಾಗಿದೆ. ಮನೆ ಒಂದರ ಕೆಳಗೆ ನಿಲ್ಲಿಸಿದ್ದ ಒಂದು ಬೈಕ್ ಹಾಗೂ ಗ್ರಾಮ ಲೆಕ್ಕಾಧಿಕಾರಿಯೊಬ್ಬರ ಮನೆಗೆ ನುಗ್ಗಿ ಒಂದು ಲ್ಯಾಪ್‍ಟಾಪ್ ಕಳ್ಳತನ ಮಾಡಲಾಗಿದೆ. ಬಳಿಕ ಕಳ್ಳರು ಕದ್ದ ಬೈಕ್‍ನಲ್ಲೇ ಪರಾರಿಯಾಗಿದ್ದಾರೆ.

    ಸ್ಥಳಕ್ಕೆ ಶ್ವಾನದಳ ಹಾಗೂ ಬೆರಳಚ್ಚು ತಜ್ಞರ ತಂಡ ಭೇಟಿ ನೀಡಿ ಪರಿಶೀಲಿಸಿದೆ. ಈ ಸಂಬಂಧ ಸಿಂಧನೂರು ನಗರ ಪೊಲೀಸ್ (Police) ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಇದನ್ನೂ ಓದಿ: ಮಾಜಿ ಸಂಸದ ಶಿವರಾಮೇಗೌಡ ವಿರುದ್ಧ ಎಫ್‍ಐಆರ್