Tag: Singapore

  • ಸಿಂಗಾಪುರಕ್ಕೆ ಕುಟುಂಬ ಸದಸ್ಯರೊಂದಿಗೆ ತೆರಳಿದ ಹೆಚ್‌ಡಿಕೆ

    ಸಿಂಗಾಪುರಕ್ಕೆ ಕುಟುಂಬ ಸದಸ್ಯರೊಂದಿಗೆ ತೆರಳಿದ ಹೆಚ್‌ಡಿಕೆ

    ಬೆಂಗಳೂರು: ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ (HD Kumaraswamy) ಅವರು ಸಿಂಗಾಪುರಕ್ಕೆ (Singapore) ಹಾರಿದ್ದಾರೆ.

    ಶನಿವಾರ ಕುಮಾರಸ್ವಾಮಿ ಅವರ ಹುಟ್ಟುಹಬ್ಬವಿದ್ದು, ಜನ್ಮದಿನದ (Birthday) ಆಚರಣೆಗೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಕುಟುಂಬ ಮತ್ತು ಕೆಲ ಆಪ್ತರ ಜೊತೆ ಕುಮಾರಸ್ವಾಮಿ ಸಿಂಗಾಪುರಕ್ಕೆ ಪ್ರಯಾಣ ಬೆಳೆಸಿದ್ದಾರೆ. ಇದನ್ನೂ ಓದಿ: ಮತ್ತೆ ಕೊರೊನಾ ಹೆಚ್ಚಳ – ದೇಶದ ಒಟ್ಟು ಪ್ರಕರಣಗಳ ಪೈಕಿ 90% ಕೇರಳದಲ್ಲೇ ದಾಖಲು

     

    ಅಭಿಮಾನಿಗಳಲ್ಲಿ ಮನವಿ:
    ನನ್ನ ಜನ್ಮದಿನವಾದ ಡಿಸೆಂಬರ್ 16ರಂದು, ಅಂದರೆ ನಾಳೆ ನಾನು ಬೆಂಗಳೂರು ನಗರದಲ್ಲಿ ಲಭ್ಯವಿರುವುದಿಲ್ಲ. ಕಾರ್ಯಕರ್ತರಾದಿಯಾಗಿ ನನ್ನ ಮೇಲೆ ಪ್ರೀತಿ, ವಾತ್ಸಲ್ಯ ಇರಿಸಿರುವ ಪ್ರತಿಯೊಬ್ಬರೂ ನನ್ನ ವೈಯಕ್ತಿಕ ಭೇಟಿಗೆ ಪ್ರಯತ್ನಿಸದೇ ತಾವು ಇದ್ದಲ್ಲಿಂದಲೇ ಶುಭ ಕೋರಬೇಕಾಗಿ ನಿಮ್ಮೆಲ್ಲರಲ್ಲೂ ವಿನಂತಿ ಮಾಡಿಕೊಳ್ಳುತ್ತೇನೆ ಎಂದು ಹೆಚ್‌ಡಿಕೆ ಪೋಸ್ಟ್ ಮಾಡಿದ್ದಾರೆ. ಇದನ್ನೂ ಓದಿ: ಪ್ರತಾಪ್ ಸಿಂಹ ಭಯೋತ್ಪಾದಕ – ಮೈಸೂರು ಮಹಾರಾಜ ವೃತ್ತ ಬಳಿ ಫ್ಲೆಕ್ಸ್

     

  • ಸಮನ್ವಯ ಹೆಲ್ತ್‌ಕೇರ್ ರಾಘವೇಂದ್ರ ಶಾಸ್ತ್ರಿಗೆ ಸಿಂಗಾಪುರ ಸರ್ಕಾರದ ಪ್ರೆಸಿಡೆನ್ಶ್ಯಿಯಲ್ ರೆಸಿಲಿಯನ್ಸ್ ಪದಕ

    ಸಮನ್ವಯ ಹೆಲ್ತ್‌ಕೇರ್ ರಾಘವೇಂದ್ರ ಶಾಸ್ತ್ರಿಗೆ ಸಿಂಗಾಪುರ ಸರ್ಕಾರದ ಪ್ರೆಸಿಡೆನ್ಶ್ಯಿಯಲ್ ರೆಸಿಲಿಯನ್ಸ್ ಪದಕ

    ಬೆಂಗಳೂರು: ಸಮನ್ವಯ ಹೆಲ್ತ್‌ಕೇರ್‌ನ (Samanvay Healthcare) ವ್ಯವಸ್ಥಾಪಕ ನಿರ್ದೇಶಕರಾದ ರಾಘವೇಂದ್ರ ಶಾಸ್ತ್ರಿ (Raghavendra Shastry) ಅವರಿಗೆ ಸಿಂಗಾಪುರ ಸರ್ಕಾರವು (Government of Singapore) ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ ಅವರ ಅತ್ಯುತ್ತಮ ಕೆಲಸವನ್ನು ಗುರುತಿಸಿ ಪ್ರೆಸಿಡೆನ್ಶ್ಯಿಯಲ್ ರೆಸಿಲಿಯನ್ಸ್ ಪದಕ (Presidential Resilience Medal) ನೀಡಿ ಗೌರವಿಸಿದೆ.

    ಮೂಲತಃ ಬೆಂಗಳೂರಿನವರಾದ (Bengaluru) ರಾಘವೇಂದ್ರ ಶಾಸ್ತ್ರಿ ಅವರು ಕೋವಿಡ್ (Covid) ಸಮಯದಲ್ಲಿ 2 ತಿಂಗಳ ಕಾಲ ಪ್ರತಿದಿನ ಹಣ್ಣುಗಳು, ಬಿಸಿ ತಿಂಡಿಗಳು, ಪಾನೀಯಗಳ ಪೂರೈಕೆ ಮಾಡುವುದರೊಂದಿಗೆ ಎಲ್ಲಾ ಆಸ್ಪತ್ರೆಗಳ ವೈದ್ಯಕೀಯ ವಿಭಾಗ ಮತ್ತು ಆರೋಗ್ಯ ರಕ್ಷಣೆಗೆ ಸಹಕಾರ ನೀಡಿದ್ದರು. ಅಷ್ಟೇ ಅಲ್ಲದೇ ವಿವಿಧ ನೈಸರ್ಗಿಕ ಪದಾರ್ಥಗಳಾದ ಶುಂಠಿ, ಅರಶಿಣ ವಿವಿಧ ತೈಲ ಸಾರದ ಬಳಕೆ ಮಾಡಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ಬಗ್ಗೆ ಜನರಿಗೆ ಮಾಹಿತಿ ನೀಡಿದ್ದರು. ಇದನ್ನೂ ಓದಿ: ಮುಂದಿನ ವರ್ಷದಿಂದ್ಲೇ ಶಾಲಾ ಮಕ್ಕಳಿಗೆ ಉಚಿತ ʻಸೈಕಲ್‌ ಭಾಗ್ಯʼ – ಮಧು ಬಂಗಾರಪ್ಪ ಭರವಸೆ

    ಈ ಸಂದರ್ಭದಲ್ಲಿ ಮಾತನಾಡಿದ ಶಾಸ್ತ್ರಿ ಅವರು, ಕೋವಿಡ್ ಸಮಯದಲ್ಲಿ ವೈದ್ಯರ ಕಠಿಣ ಪರಿಶ್ರಮ ಮತ್ತು ಆರೋಗ್ಯ ಕಾರ್ಯಕರ್ತರಿಗೆ ಸಹಕಾರ ನೀಡಲು ಇದು ಉತ್ತಮ ಸಮಯ ಎಂದು ಭಾವಿಸಿದೆ ಎಂದು ಹೇಳಿದರು. ಇದನ್ನೂ ಓದಿ: ಪ್ರಧಾನಿ ಮೋದಿಯಿಂದ ‘ವಿಕ್ಷಿತ್ ಭಾರತ್ @2047: ಯುವಜನತೆಯ ಧ್ವನಿ’ ಚಾಲನೆ: ಸಾಕ್ಷಿಯಾದ ರಾಜ್ಯಪಾಲರು

    ಸಂಸ್ಕೃತಿ, ಸಮುದಾಯ ಮತ್ತು ಯುವಕರ ಸಂಸದೀಯ ಕಾರ್ಯದರ್ಶಿ ಎರಿಕ್ ಚುವಾ (Eric Chua) ಅವರು ರಾಘವೇಂದ್ರ ಶಾಸ್ತ್ರಿ ಅವರ ಪ್ರಯತ್ನ ನಿಜವಾಗಿಯೂ ಶ್ಲಾಘನೀಯ ಎಂದು ಬಣ್ಣಿಸಿದರು. ಇದನ್ನೂ ಓದಿ: ಲೋಕ ಸಮರ ಗೆಲ್ಲಲು ಕಾಂಗ್ರೆಸ್‌ ತಯಾರಿ – 4 ಕ್ಷೇತ್ರದಲ್ಲಿ ನಿಲ್ತಾರಾ ಸೆಲೆಬ್ರಿಟಿ ಅಭ್ಯರ್ಥಿಗಳು?

  • ಸಿಂಗಾಪುರದ ಅಧ್ಯಕ್ಷರಾಗಿ ಭಾರತೀಯ ಮೂಲದ ಥರ್ಮನ್ ಷಣ್ಮುಗರತ್ನಂ ಪ್ರಮಾಣ ವಚನ

    ಸಿಂಗಾಪುರದ ಅಧ್ಯಕ್ಷರಾಗಿ ಭಾರತೀಯ ಮೂಲದ ಥರ್ಮನ್ ಷಣ್ಮುಗರತ್ನಂ ಪ್ರಮಾಣ ವಚನ

    ಸಿಂಗಾಪುರ: ಇಲ್ಲಿನ ನೂತನ ಅಧ್ಯಕ್ಷರಾಗಿ ಭಾರತೀಯ ಮೂಲದ 66 ವರ್ಷದ ಥರ್ಮನ್ ಷಣ್ಮುಗರತ್ನಂ (Tharman Shanmugaratnam) ಅವರು ಇಂದು (ಗುರುವಾರ) ಪ್ರಮಾಣವಚನ ಸ್ವೀಕರಿಸಿದರು.

    ಸಿಂಗಾಪುರದ ಅರ್ಥಶಾಸ್ತ್ರಜ್ಞರಾಗಿರುವ ಇವರು ಸಿಂಗಾಪುರದ (Singapore President) 9ನೇ ಅಧ್ಯಕ್ಷರಾಗಿ ಆಯ್ಕೆಯಾದರು. ಸಿಂಗಾಪುರದ ಅಧ್ಯಕ್ಷರ ಅಧಿಕೃತ ನಿವಾಸದಲ್ಲಿ ನಡೆದ ಸಮಾರಂಭದಲ್ಲಿ ಭಾರತೀಯ ಮೂಲದ ಮುಖ್ಯ ನ್ಯಾಯಮೂರ್ತಿ ಸುಂದರೇಶ್ ಮೆನನ್ ಅವರು ಥರ್ಮನ್‌ ಅವರಿಗೆ ಪ್ರಮಾಣ ವಚನ ಬೋಧಿಸಿದರು.

    ಥರ್ಮನ್ ಅವರು ಆರು ವರ್ಷಗಳ ಅಧ್ಯಕ್ಷರಾಗಿ ಸೇವೆ ಸಲ್ಲಿಸಲಿದ್ದಾರೆ. ಸಮಾರಂಭದಲ್ಲಿ ಪ್ರಧಾನಿ ಲೀ ಸೈನ್ ಲೂಂಗ್, ಸಂಪುಟ ಸದಸ್ಯರು, ಸಂಸದರು, ಉನ್ನತ ಅಧಿಕಾರಿಗಳು ಮತ್ತು ರಾಜತಾಂತ್ರಿಕ ಸದಸ್ಯರು ಉಪಸ್ಥಿತರಿದ್ದರು. ಇದನ್ನೂ ಓದಿ: INDIA ಒಕ್ಕೂಟವು ಸನಾತನ ಧರ್ಮವನ್ನು ನಾಶ ಮಾಡಲು ಬಯಸಿದೆ: ಮೋದಿ ವಾಗ್ದಾಳಿ

    ಪ್ರಧಾನಿ ನರೇಂದ್ರ ಮೋದಿ ಅವರು ಥರ್ಮನ್ ಅವರಿಗೆ ಅಭಿನಂದನೆಗಳನ್ನು ತಿಳಿಸಿದ್ದಾರೆ. ಅಲ್ಲದೆ ಭಾರತ ಹಾಗೂ ಸಿಂಗಾಪುರ್ ಕಾರ್ಯತಂತ್ರದ ಪಾಲುದಾರಿಕೆಯನ್ನು ಇನ್ನಷ್ಟು ಬಲಪಡಿಸಲು ಷಣ್ಮುಗರತ್ನಂ ಅವರೊಂದಿಗೆ ಕೆಲಸ ಮಾಡಲು ಎದುರು ನೋಡುತ್ತಿದ್ದೇನೆ ಎಂದು ಹೇಳಿದ್ದಾರೆ.

    ಕಳೆದ ಶುಕ್ರವಾರ ನಡೆದ ಸಿಂಗಾಪುರ ಅಧ್ಯಕ್ಷೀಯ ಚುನಾವಣೆಯಲ್ಲಿ ಷಣ್ಮುಗರತ್ನಂ ಅವರು ಚೀನಾ ಮೂಲದ ಇಬ್ಬರು ಪ್ರತಿಸ್ಪರ್ಧಿಗಳನ್ನು ಸೋಲಿಸಿದ್ದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸಿಂಗಾಪುರ ಅಧ್ಯಕ್ಷರಾಗಿ ಆಯ್ಕೆಯಾದ ಭಾರತೀಯ ಮೂಲದ ಷಣ್ಮುಗರತ್ನಂಗೆ ಮೋದಿ ಅಭಿನಂದನೆ – ಯಾರಿವರು?

    ಸಿಂಗಾಪುರ ಅಧ್ಯಕ್ಷರಾಗಿ ಆಯ್ಕೆಯಾದ ಭಾರತೀಯ ಮೂಲದ ಷಣ್ಮುಗರತ್ನಂಗೆ ಮೋದಿ ಅಭಿನಂದನೆ – ಯಾರಿವರು?

    ಸಿಂಗಾಪುರ: ಸಿಂಗಾಪುರದ (Singapore) ನೂತನ ಅಧ್ಯಕ್ಷರಾಗಿ (President) ಆಯ್ಕೆಯಾಗಿರುವ ಭಾರತೀಯ ಮೂಲದ ಥರ್ಮನ್ ಷಣ್ಮುಗರತ್ನಂ (Tharman Shanmugaratnam) ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ.

    ಈ ಬಗ್ಗೆ ಎಕ್ಸ್‌ನಲ್ಲಿ ಬರೆದುಕೊಂಡಿರುವ ಮೋದಿ, ಅಧ್ಯಕ್ಷರಾಗಿ ಆಯ್ಕೆಯಾದ ನಿಮಗೆ ಅಭಿನಂದನೆಗಳು. ಭಾರತ ಹಾಗೂ ಸಿಂಗಾಪುರ ನಡುವಿನ ಕಾರ್ಯತಂತ್ರ ಪಾಲುದಾರಿಕೆಯನ್ನು ಮುಂದಿನ ದಿನಗಳಲ್ಲಿ ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ನಿಮ್ಮೊಂದಿಗೆ ಕಾರ್ಯನಿರ್ವಹಿಸಲು ಬಯಸುತ್ತೇವೆ ಎಂದಿದ್ದಾರೆ.

    ಶುಕ್ರವಾರ ನಡೆದ ಅಧ್ಯಕ್ಷೀಯ ಚುನಾವಣೆಯಲ್ಲಿ ಥರ್ಮನ್ ಷಣ್ಮುಗರತ್ನಂ ಭರ್ಜರಿ ಗೆಲುವು ಸಾಧಿಸಿ ಸಿಂಗಾಪುರದ 9ನೇ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

    ಷಣ್ಮುಗರತ್ನಂ ಯಾರು?
    ತಮಿಳುನಾಡು ಮೂಲದ ತಂದೆ ಹಾಗೂ ಚೀನಾ ಮೂಲದ ತಾಯಿಗೆ ಥರ್ಮನ್ ಷಣ್ಮುಗರತ್ನಂ 1957ರ ಫೆಬ್ರವರಿ 25ರಂದು ಸಿಂಗಾಪುರದಲ್ಲಿ ಜನಿಸಿದರು. ಅವರ ತಂದೆ ಕನಕರತ್ನಂ ಷಣ್ಮುಗರತ್ನಂ ಅವರು ಹೆಸರಾಂತ ರೋಗಶಾಸ್ತ್ರಜ್ಞ ಹಾಗೂ ಕ್ಯಾನ್ಸರ್ ಸಂಶೋಧಕರು. ತಾಯಿ ಗೃಹಿಣಿಯಾಗಿದ್ದರು.

    ಥರ್ಮನ್ ಅವರು ಆಂಗ್ಲೋ-ಚೈನೀಸ್ ಶಾಲೆಯಲ್ಲಿ ವ್ಯಾಸಂಗ ಮಾಡಿ, ಲಂಡನ್ ಸ್ಕೂಲ್ ಆಫ್ ಎಕನಾಮಿಕ್ಸ್‌ನಲ್ಲಿ ಅರ್ಥಶಾಸ್ತ್ರದಲ್ಲಿ ಬ್ಯಾಚುಲರ್ ಆಫ್ ಸೈನ್ಸ್ ಪದವಿಯನ್ನು ಪಡೆದಿದ್ದಾರೆ. ಕೇಂಬ್ರಿಡ್ಜ್ ವಿಶ್ವವಿದ್ಯಾಲಯದ ವುಲ್ಫ್‌ಸನ್ ಕಾಲೇಜಿನಲ್ಲಿ ಅರ್ಥಶಾಸ್ತ್ರದಲ್ಲಿ ಮಾಸ್ಟರ್ ಆಫ್ ಫಿಲಾಸಫಿ ಪದವಿಯನ್ನು ಪೂರ್ಣಗೊಳಿಸಿದರು. ಇದನ್ನೂ ಓದಿ: ಹೆಚ್‌ಡಿಕೆ ಆಸ್ಪತ್ರೆಯಿಂದ ಡಿಸ್ಚಾರ್ಜ್‌ – ಅಭಿಮಾನಿಯಿಂದ ಕುಂಕುಮ ಅಕ್ಷತೆ ಸ್ವೀಕರಿಸಿದ ಮಾಜಿ ಸಿಎಂ

    ನಂತರ ಅವರು ಹಾರ್ವರ್ಡ್ ವಿಶ್ವವಿದ್ಯಾನಿಲಯದ ಹಾರ್ವರ್ಡ್ ಕೆನಡಿ ಶಾಲೆಯಲ್ಲಿ ಮಾಸ್ಟರ್ ಇನ್ ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಪದವಿಯನ್ನು ಪೂರ್ಣಗೊಳಿಸಿದರು. ಶಾಲಾ ಜೀವನದಲ್ಲಿ ಅವರು ಸಕ್ರಿಯ ಕ್ರೀಡಾಪಟುವಾಗಿದ್ದರು.

    ವೃತ್ತಿಯಲ್ಲಿ ಅರ್ಥಶಾಸ್ತ್ರಜ್ಞರಾಗಿದ್ದು, ಮುಖ್ಯವಾಗಿ ಆರ್ಥಿಕ ಮತ್ತು ಸಾಮಾಜಿಕ ನೀತಿಗಳಿಗೆ ಸಂಬಂಧಿಸಿದ ಸಾರ್ವಜನಿಕ ಸೇವಾ ಪಾತ್ರಗಳಲ್ಲಿ ತಮ್ಮ ವೃತ್ತಿ ಜೀವನವನ್ನು ಕಳೆದಿದ್ದಾರೆ. ಅವರು ವಿವಿಧ ಉನ್ನತ ಮಟ್ಟದ ಅಂತಾರಾಷ್ಟ್ರೀಯ ಮಂಡಳಿಗಳು ಮತ್ತು ಪ್ಯಾನೆಲ್‌ಗಳನ್ನು ಸಹ ಮುನ್ನಡೆಸಿದ್ದಾರೆ. 2011-2023 ರಲ್ಲಿ ವಾಸ್ತವಿಕ ಕೇಂದ್ರ ಬ್ಯಾಂಕ್ ಸಿಂಗಾಪುರದ ಹಣಕಾಸು ಪ್ರಾಧಿಕಾರದ ಅಧ್ಯಕ್ಷರಾಗಿದ್ದರು. 2019-2023 ರ ನಡುವೆ ಸಿಂಗಾಪುರ ಹೂಡಿಕೆ ನಿಗಮದ ಉಪಾಧ್ಯಕ್ಷರಾಗಿದ್ದರು. ಇದನ್ನೂ ಓದಿ: ಬಹುಪತ್ನಿತ್ವ ನಿಷೇಧ – ಮಸೂದೆ ಮಂಡನೆಗೆ ಮುಂದಾದ ಅಸ್ಸಾಂ ಸರ್ಕಾರ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸಿಂಗಾಪುರದಲ್ಲಿ ‘ವಿರಾಟಪುರ ವಿರಾಗಿ’ ಶೋ: ಮೂಕವಿಸ್ಮಿತರಾದ ಪ್ರೇಕ್ಷಕರು

    ಸಿಂಗಾಪುರದಲ್ಲಿ ‘ವಿರಾಟಪುರ ವಿರಾಗಿ’ ಶೋ: ಮೂಕವಿಸ್ಮಿತರಾದ ಪ್ರೇಕ್ಷಕರು

    ನ್ನಡ ಸಂಘ ಸಿಂಗಾಪುರ (Singapore) ಆಯೋಜಿಸಿದ್ದ, ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಬಿ.ಎಸ್. ಲಿಂಗದೇವರು (BS Lingadevaru) ನಿರ್ದೇಶನದ ‘ವಿರಾಟಪುರ ವಿರಾಗಿ’ (Viratpura Viragi) ಸಿನಿಮಾದ ಪ್ರದರ್ಶನ ಅತ್ಯಂತ ಯಶಸ್ವಿಯಾಗಿ ನೆರವೇರಿತು. ಸಿನಿಮಾ ಪ್ರದರ್ಶನದ ನಂತರ ಪ್ರೇಕ್ಷಕರು ಭಾವುಕರಾಗಿದ್ದರು. ಹಾನಗಲ್ ಕುಮಾರಸ್ವಾಮಿಗಳ ಚರಿತೆಯನ್ನು ಕಣ್ತುಂಬಿಕೊಂಡು ಪುಳಕಿತರಾಗಿದ್ದರು.

    ಸಿಂಗಾಪುರ ಕನ್ನಡ ಸಂಘವು ಈ ಬಾರಿ ವಚನಾಂಜಲಿಯನ್ನು ವಿಶೇಷವಾಗಿ ಆಯೋಜಿಸಿತ್ತು. ಇದರ ಭಾಗವಾಗಿ ಶಿವಯೋಗಿಗಳಾದ ಶ್ರೀ ಹಾನಗಲ್ ಕುಮಾರಸ್ವಾಮಿಯವರ ಜೀವನಾಧಾರಿತ ಚಲನಚಿತ್ರ ‘ವಿರಾಟಪುರ ವಿರಾಗಿ’ಯ ಪ್ರದರ್ಶನವನ್ನು ಏರ್ಪಡಿಸಿ, ಅಲ್ಲಿನ ಕನ್ನಡಿಗರಿಗೆ ಕುಮಾರಸ್ವಾಮಿಗಳ ಚರಿತೆಯನ್ನು ತಿಳಿಸಿದ್ದು ವಿಶೇಷವಾಗಿತ್ತು. ಈ ಪ್ರದರ್ಶನದಲ್ಲಿ ನಿರ್ದೇಶಕರಾದ ಲಿಂಗದೇವರು, ಕುಮಾರಸ್ವಾಮಿಗಳ ಪಾತ್ರ ಮಾಡಿದ್ದ ಸುಚೇಂದ್ರ ಪ್ರಸಾದ್ (Suchendra Prasad)  ಭಾಗಿಯಾಗಿದ್ದರು.

    ಜನಸಾಮಾನ್ಯರ ಬದುಕನ್ನು ಉನ್ನತಗೊಳಿಸಲು ಹನ್ನೆರಡನೆಯ ಶತಮಾನದ ಶಿವಶರಣರು ಶ್ರಮಿಸಿರುವುದು ನಮಗೆಲ್ಲಾ ತಿಳಿದೇ ಇದೆ. ಶರಣರು ಸಾಹಿತ್ಯ ರಚಿಸಬೇಕೆಂಬ ಉದ್ದೇಶದಿಂದ ವಚನಗಳನ್ನು ಬರೆಯದೆ ದಿನನಿತ್ಯದ ತಮ್ಮ ಅನುಭವಗಳನ್ನು ವಚನದ ರೂಪದಲ್ಲಿ ಹೇಳಿದ್ದರಿಂದ ವಚನ ಸಾಹಿತ್ಯ ಒಂದು ಚಳಿವಳಿಯಾಯಿತು ಎಂಬುದು ಇತಿಹಾಸ. ವರ್ಣ-ಆಧಾರಿತ, ಜಾತಿ ಆಧಾರಿತ, ಲಿಂಗ-ಆಧಾರಿತ ಅಸಮಾನತೆಯನ್ನು ನಿರ್ಮೂಲಗೊಳಿಸಿ ಸರ್ವ ಸಮಾನತೆಯ ಸಮಾಜ ನಿರ್ಮಾಣಕ್ಕೆ ನಾಂದಿ ಹಾಡಿದವರು ಶಿವ ಶರಣರು. ಈ ಹಿನ್ನಲೆಯಲ್ಲಿ ಶ್ರೀ ಹಾನಗಲ್ ಕುಮಾರಸ್ವಾಮಿಯವರು ಎಲ್ಲರನ್ನು ಒಳಗೊಳ್ಳುವ ಮತ್ತು ಬಹುತ್ವ ಪರಂಪರೆಗೆ ಒತ್ತುಕೊಟ್ಟು ಸಮಸಮಾಜ ನಿರ್ಮಿಸಲು ಸ್ವಾತಂತ್ರ್ಯಪೂರ್ವದಲ್ಲಿ ಶ್ರಮಿಸಿದವರು. ಅಂತಹವರ  ಜೀವನಾಧಾರಿತ  ವಿರಾಟಪುರ ವಿರಾಗಿ ಸಿನಿಮಾವು ಶರಣರ ವಚನಗಳ ಅರ್ಥ ಮತ್ತು ಅಂತರಂಗದ ಅರಿವನ್ನು ಮೂಡಿಸುವಂಥದ್ದು.

    ಸಿನಿಮಾದಲ್ಲಿ ವಚನಗಳನ್ನು ಸನ್ನಿವೇಶಗಳಿಗೆ ಹೊಂದುವಂತೆ ಆಯ್ಕೆ ಮಾಡಿಕೊಂಡು, ಅದಕ್ಕೆ ಅತ್ಯುತ್ತಮ ಸಂಗೀತ ಸಂಯೋಜನೆ ಮಾಡಿರುವುದು ಪ್ರೇಕ್ಷಕರ ಹೃದಯವನ್ನು ಗೆಲ್ಲುವಲ್ಲಿ ಸಹಾಯವಾಗಿದೆ. ಇಡೀ ತಂಡವು ನಮ್ಮನ್ನು ಸ್ವಾತಂತ್ರ್ಯ ಪೂರ್ವ ಕಾಲಘಟ್ಟಕ್ಕೆ ಕೊಂಡೊಯ್ಯುವಲ್ಲಿ ಯಶಸ್ವಿಯಾಗಿದೆ. ಜನಸಾಮಾನ್ಯರನ್ನು ಆಧ್ಯಾತ್ಮದತ್ತ ಕರೆದುಕೊಳ್ಳಲು, ನೈತಿಕ ಮೌಲ್ಯಗಳನ್ನು ಹೆಚ್ಚಿಸಲು, ಅನುಭಾವದ ಚಿಂತನೆಗೆ ತೊಡಗಿಸಲು ಈ ಚಿತ್ರ ಕನ್ನಡಿಗರ ಹೆಮ್ಮೆಯ ಚಿತ್ರವಾಗಿದೆ ಎನ್ನುವ ಅಭಿಪ್ರಾಯ ಪ್ರದರ್ಶನದ ನಂತರ ವ್ಯಕ್ತವಾಯಿತು.

    ಸುಮಾರು ನಾಲ್ಕಾರು ದಶಕಗಳಿಂದ ಕನ್ನಡಿಗರು ಸಿಂಗಾಪೂರದಲ್ಲಿ ನೆಲೆಸಿದ್ದಾರೆ. ಕನ್ನಡಿಗರು ಸಂಘ ಜೀವಿಗಳು ಮತ್ತು ತಮ್ಮ ಸಂಸ್ಕೃತಿ,  ಪರಂಪರೆ ಮತ್ತು ಕನ್ನಡ ಭಾಷೆ ನಮ್ಮ ಅಸ್ಮಿತೆಯೆಂದು ನಂಬಿರುವವರು. ಈ ಹಿನ್ನೆಲೆಯಲ್ಲಿ 11ನೇ ಸೆಪ್ಟೆಂಬರ್ 1996 ರಂದು ಸಿಂಗಾಪೂರದ ರಿಜಿಸ್ಟ್ರಾರ್ ಆಫ್ ಸೊಸೈಟಿಯಲ್ಲಿ ನೋಂದಾಯಿಸುವ ಮೂಲಕ ಕನ್ನಡ ಸಂಘ ಉದಯವಾಯಿತು. ಅಂದಿನಿಂದ ಇಂದಿನವರೆಗೂ ಕನ್ನಡಿಗರ ಸಂಸ್ಕೃತಿ,  ಪರಂಪರೆ ಮತ್ತು ಕನ್ನಡ ಭಾಷೆಯನ್ನು ಶ್ರೀಮಂತಗೊಳಿಸಲು ಅನೇಕ ಕಾರ್ಯಕ್ರಮ ಗಳನ್ನು ಆಯೋಜಿಸುವ ಮೂಲಕ ಶ್ರಮಿಸುತ್ತಿದ್ದಾರೆ.

    ಕನ್ನಡ ಸಂಘ (ಸಿಂಗಾಪುರ)ವು ವಚನ ಸಾಹಿತ್ಯದ ಸಾರಾಮೃತವನ್ನು ಹರಡುವ, ಹಂಚುವ ಸದುದ್ದೇಶದಿಂದ ಸುಮಾರು 13 ವರ್ಷಗಳಿಂದ ನಡೆಸಿಕೊಂಡು ಬರುತ್ತಿರುವ ಕಾರ್ಯಕ್ರಮವೇ ವಚನಾಂಜಲಿ.  ಪ್ರತೀ ವರ್ಷ ವಿವಿಧ ರೂಪಗಳಲ್ಲಿ ಆಚರಿಸಿಕೊಂಡು ಬಂದಂತಹ ವಚನಾಂಜಲಿ, ಶಾಸ್ತ್ರೀಯ ಸಂಗೀತ, ಜನಪದ ಶೈಲಿಯ ಹಾಡುಗಳ ಮೂಲಕ, ಭರತ ನಾಟ್ಯದಲ್ಲಿನ ನೃತ್ಯ ರೂಪಕಗಳಲ್ಲಿ, ಸಾಂಸ್ಕೃತಿಕವಾಗಿ ಆಚರಿಸಿಕೊಂಡು ಬಂದಿರುವುದು ಒಂದೆಡೆಯಾದರೆ, ಸಾಹಿತ್ಯದ ಒಳ ಅರಿವನ್ನು ಅರಿಯುವ ಹಾದಿಯಲ್ಲಿ ವಿಚಾರ ಗೋಷ್ಠಿಗಳು, ವಿಚಾರ ಸಂಕಿರಣ, ಸಂವಾದಗಳ ಮೂಲಕ ಅರ್ಥಪೂರ್ಣವಾಗಿ ನಡೆಸಿಕೊಂಡು ಬರುತ್ತಿದೆ. ಅದರ ಭಾಗವಾಗಿ ಈ ಬಾರಿ ವಿರಾಟ ಪುರ ವಿರಾಗಿ ಸಿನಿಮಾ ಪ್ರದರ್ಶನವಾಯಿತು.

    ತುಂಬಿದ ಸಭಾಂಗಣದಲ್ಲಿ ವಿರಾಟಪುರ ವಿರಾಗಿ  ಚಲನಚಿತ್ರ ಪ್ರದರ್ಶನ, ವಚನ ಸಾಹಿತ್ಯದ ಬಗೆಗಿನ ವಿಚಾರ ಗೋಷ್ಠಿ, ವಚನ ಸ್ಪರ್ಧೆಗಳಲ್ಲಿನ ವಿಜೇತರಿಗೆ ಬಹುಮಾನ ವಿತರಣೆ ಕೊನೆಯಲ್ಲಿ ದಾಸೋಹದೊಂದಿಗೆ ಅನೇಕ ವಿಚಾರಗಳ ವಿವರಣೆ, ವಿಮರ್ಶೆ, ವಿತರಣೆ ಕಾರ್ಯಗಳು ಜರುಗಿದವು. ಕನ್ನಡ ಸಂಘ ಸಿಂಗಾಪುರ ಅಧ್ಯಕ್ಷ ವೆಂಕಟ ರತ್ನಯ್ಯ (Venkata Ratnaya)ಸೇರಿದಂತೆ ಹಲವರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಆ.20ಕ್ಕೆ ಸಿಂಗಾಪುರದಲ್ಲಿ ‘ವಿರಾಟಪುರ ವಿರಾಗಿ’: ನಿರ್ದೇಶಕ ಬಿ.ಎಸ್.ಲಿಂಗದೇವರು ಭಾಗಿ

    ಆ.20ಕ್ಕೆ ಸಿಂಗಾಪುರದಲ್ಲಿ ‘ವಿರಾಟಪುರ ವಿರಾಗಿ’: ನಿರ್ದೇಶಕ ಬಿ.ಎಸ್.ಲಿಂಗದೇವರು ಭಾಗಿ

    ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಬಿ.ಎಸ್.ಲಿಂಗದೇವರು (BS Lingadevaru) ನಿರ್ದೇಶನದಲ್ಲಿ ಮೂಡಿ ಬಂದಿರುವ ‘ವಿರಾಟಪುರ ವಿರಾಗಿ’ (Viratpur Viragi) ಸಿನಿಮಾ ಆಗಸ್ಟ್ 20ರಂದು ಸಿಂಗಾಪುರದ ಕನ್ನಡ ಸಂಘ ಆಯೋಜನೆ ಮಾಡಿರುವ ‘ವಚನಾಂಜಲಿ 2023’ರ ಕಾರ್ಯಕ್ರಮದಲ್ಲಿ ಪ್ರದರ್ಶನ ಕಾಣಲಿದೆ. ಈ ಕಾರ್ಯಕ್ರಮದಲ್ಲಿ ನಿರ್ದೇಶಕ ಬಿ.ಎಸ್.ಲಿಂಗದೇವರು ಮತ್ತು ನಾಯಕ ನಟ ಸುಚೇಂದ್ರ ಪ್ರಸಾದ್ (Suchendra Prasad) ಅವರು ಭಾಗಿಯಾಗಲಿದ್ದಾರೆ.

    ಆಗಸ್ಟ್ 20ರಂದು ಸಿಂಗಾಪುರದ (Singapore) ಸಿವಿಲ್ ಸರ್ವೀಸ್ ಕ್ಲಬ್ ನಲ್ಲಿ ಸಂಜೆ 5 ಗಂಟೆಯಿಂದ ರಾತ್ರಿ 9 ಗಂಟೆಯೊಳಗೆ ಈ ಕಾರ್ಯಕ್ರಮವನ್ನು ಸಿಂಗಪುರದ ಕನ್ನಡ ಸಂಘ ಆಯೋಜನೆ ಮಾಡಿದೆ. ಈ ಹಿಂದೆ ವಿರಾಟಪುರ ವಿರಾಗಿ ಸಿನಿಮಾ  ಆಸ್ಟ್ರೇಲಿಯಾದ (Australia) ಸಿಡ್ನಿಯಲ್ಲಿ(Sydney) ಪ್ರದರ್ಶನ ಕಂಡಿತ್ತು. ಇವೆಂಟ್ ಸಿನಿಮಾಸ್ ಲೈವರ್ ಪೋಲ್ ಆಸ್ಟ್ರೇಲಿಯಾದಲ್ಲಿ ಸಿನಿಮಾ ಪ್ರದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಇದನ್ನೂ ಓದಿ:‘ಬಾಹುಬಲಿ’ ಪ್ರಭಾಸ್- ಅನುಷ್ಕಾ ಶೆಟ್ಟಿ ಅಭಿಮಾನಿಗಳಿಗೆ ಕೊನೆಗೂ ಸಿಕ್ತು ಗುಡ್‌ ನ್ಯೂಸ್

    ಹಾನಗಲ್ಲ (Hanagalla) ಕುಮಾರಸ್ವಾಮಿಗಳ (Kumaraswamy) ಜೀವನವನ್ನು ಆಧರಿಸಿದ ಸಿನಿಮಾ ಇದಾಗಿದ್ದು, ಭಾರೀ ಬಜೆಟ್ ಸಿನಿಮಾಗಳೇ ಸೋಲಿನ ಹಾದಿ ಹಿಡಿದಿರುವ ಸಂದರ್ಭದಲ್ಲಿ ವಿರಾಟಪುರ ವಿರಾಗಿ ಸಿನಿಮಾ ಭಾರೀ ಯಶಸ್ಸು ಕಂಡಿದೆ. ಸತತ ಮೂವತ್ತೈದು ದಿನಗಳಿಂದ ಹಲವು ಕಡೆ ಸಿನಿಮಾ ಪ್ರದರ್ಶನ ಕಾಣುತ್ತಿದೆ. ಕಲಬುರಗಿ ನಗರವೊಂದರಲ್ಲೇ ನೂರು ಪ್ರದರ್ಶನಗಳನ್ನು ಕಂಡು ದಾಖಲೆ ಬರೆದಿದೆ. ಕರ್ನಾಟಕದಾದ್ಯಂತ ಈವರೆಗೂ ಮೂರು ಸಾವಿರಕ್ಕೂ ಹೆಚ್ಚು ಪ್ರದರ್ಶನಗಳನ್ನು ಕಂಡಿದೆ.

    ಸಿನಿಮಾ ಬಿಡುಗಡೆಗೆ ಮುನ್ನವೇ 75 ಸಾವಿರಕ್ಕೂ ಅಧಿಕ ಟಿಕೆಟ್ ಮಾರಾಟವಾಗಿ ಹೊಸ ದಾಖಲೆ ಬರೆದಿದ್ದ  ಈ ಸಿನಿಮಾ ಈವರೆಗೂ 750ಕ್ಕೂ ಹೆಚ್ಚು ಶೋಗಳು ಹೌಸ್ ಫುಲ್ ಆಗಿವೆ. 62ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿದೆ. ಕಲಬುರಗಿಯಲ್ಲೇ 82 ಶೋಗಳು ಹೌಸ್ ಫುಲ್ ಪ್ರದರ್ಶನ ಕಂಡಿದೆ. ಈ ವರ್ಷದಲ್ಲಿ ಹೆಚ್ಚು ಸದ್ದು ಮಾಡಿದ ಸಿನಿಮಾಗಳ ಪಟ್ಟಿಯಲ್ಲಿ ಈ ಚಿತ್ರ ಕೂಡ ಕಾಣಿಸಿಕೊಂಡಿದೆ.

     

    ಮಣಿಕಾಂತ್ ಕದ್ರಿ ಸಂಗೀತ ಸಂಯೋಜನೆಯಲ್ಲಿ ಮೂಡಿ ಬಂದ ಹಾಡುಗಳು ಕೂಡ ಕೇಳುಗರ ಗಮನ ಸೆಳೆದಿದ್ದು, ಈ ಸಿನಿಮಾವನ್ನು ಜನರಿಗೆ ತಲುಪಿಸುವುದಕ್ಕಾಗಿಯೇ ಹಾನಗಲ್ಲ ಕುಮಾರಸ್ವಾಮಿಗಳ ಭಕ್ತರು ರಥಯಾತ್ರೆ ಮತ್ತು ಗದಗ ಸೇರಿದಂತೆ ಹಲವು ಕಡೆ ಕಾರ್ಯಕ್ರಮಗಳನ್ನು ಆಯೋಜನೆ ಮಾಡಿದ್ದರು. ರಾಜ್ಯಾದ್ಯಂತ ರಥೆಯಾತ್ರೆ ಪ್ರವಾಸ ಮಾಡಿ, ಸಿನಿಮಾ ಮುಟ್ಟಿಸುವಲ್ಲಿ ಗೆದ್ದಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸಿಂಗಾಪುರದಲ್ಲಿ ಸರ್ಕಾರವನ್ನು ಉರುಳಿಸುವ ಷಡ್ಯಂತ್ರದ ಬಗ್ಗೆ ತಿಳಿದಿಲ್ಲ: ಸಿಎಂ

    ಸಿಂಗಾಪುರದಲ್ಲಿ ಸರ್ಕಾರವನ್ನು ಉರುಳಿಸುವ ಷಡ್ಯಂತ್ರದ ಬಗ್ಗೆ ತಿಳಿದಿಲ್ಲ: ಸಿಎಂ

    ಹಾವೇರಿ: ಸಿಂಗಾಪುರದಲ್ಲಿ (Singapore) ಸರ್ಕಾರವನ್ನು ಉರುಳಿಸಲು ಷಡ್ಯಂತ್ರ ನಡೆದಿರುವ ಬಗ್ಗೆ ನನಗೆ ಗೊತ್ತಿಲ್ಲ. ಹೇಳಿಕೆ ನೀಡಿರುವ ಡಿಕೆ ಶಿವಕುಮಾರ್ (DK Shivakumar) ಅವರನ್ನೇ ಕೇಳಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹೇಳಿದರು.

    ಹಾವೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬರ ಬರುತ್ತದೆ ಎಂದು ಬಿಜೆಪಿಯವರು ಟ್ರೋಲ್ ಮಾಡಿರುವ ಬಗ್ಗೆ ಉತ್ತರಿಸಿ, ಈಗ ಮಳೆಯಾಗುತ್ತಿಲ್ಲವೇ ಎಂದು ಪ್ರಶ್ನಿಸಿದರು. ಈ ಮೂಢ ನಂಬಿಕೆಗಳಲ್ಲಿ ಹಾಗೂ ಮೌಢ್ಯಗಳಲ್ಲಿ ನನಗೆ ನಂಬಿಕೆ ಇಲ್ಲ. ಬಿಜೆಪಿ ಅಧಿಕಾರದ ಅವಧಿಯಲ್ಲಿ ಪ್ರವಾಹ ಬಂದು ಒಂದು ಲಕ್ಷ ಮನೆಗಳು ಬಿದ್ದುಹೋಗಿದ್ದವು. ಪ್ರವಾಹ ಉಂಟಾಗುವುದು ಹಾಗೂ ಮಳೆ ಕೊರತೆಯಾಗುವುದು ಸ್ವಾಭಾವಿಕ. ಈಗ ಹವಾಮಾನ ಬದಲಾವಣೆ ಇದೆ. ಮುಂಗಾರು ಜೂನ್ ತಿಂಗಳಲ್ಲಿ ಪ್ರಾರಂಭವಾಗುವುದು ಜುಲೈನಲ್ಲಿ ಆಗುತ್ತಿದೆ. ಜಗತ್ತಿನ ಎಲ್ಲೆಡೆ ಹವಾಮಾನ ಬದಲಾವಣೆಯಾಗುತ್ತಿದೆ ಎಂದರು. ಇದನ್ನೂ ಓದಿ: ಯಾರು ಯಾರಿಗೂ ಪತ್ರ ಬರೆದಿಲ್ಲ – ಇದೆಲ್ಲಾ ಊಹಾಪೋಹದ ಸುದ್ದಿ: ಡಿಕೆಶಿ

    ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಒಂದಾಗುತ್ತಿರುವ ಬಗ್ಗೆ ನನಗೆ ತಿಳಿದಿಲ್ಲ, ಮಾತುಕತೆ ನಡೆಸುತ್ತಿದ್ದಾರೆ. ಅವರು ಒಂದಾದರೆ ನಮಗೇನೂ ಭಯವಿಲ್ಲ. ನಾವು 15-20 ಸ್ಥಾನಗಳನ್ನು ಗೆದ್ದೇ ಗೆಲ್ಲುತ್ತೇವೆ. ಅವರು ಒಂದಾದರೂ, ಒಂದಾಗದೇ ಇದ್ದರು ಗೆಲ್ಲುತ್ತೇವೆ ಎಂದು ಹೇಳಿದರು. ಇದನ್ನೂ ಓದಿ: ಕಾಂಗ್ರೆಸ್‌ನಲ್ಲಿ ಸಚಿವರ ವಿರುದ್ಧ ಶಾಸಕರ ಅಸಮಾಧಾನ – ಸಿಎಂಗೆ 25 ಶಾಸಕರ ದೂರು

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸಿಂಗಾಪುರದಲ್ಲಿ ತಂತ್ರಗಾರಿಕೆ – ಕಾಂಗ್ರೆಸ್ ಸರ್ಕಾರಕ್ಕೆ ಆಪರೇಷನ್ ಭೀತಿ?

    ಸಿಂಗಾಪುರದಲ್ಲಿ ತಂತ್ರಗಾರಿಕೆ – ಕಾಂಗ್ರೆಸ್ ಸರ್ಕಾರಕ್ಕೆ ಆಪರೇಷನ್ ಭೀತಿ?

    ಬೆಂಗಳೂರು: 135 ಸ್ಥಾನ ಗೆದ್ದಿರುವ ಕಾಂಗ್ರೆಸ್‌ ಸರ್ಕಾರಕ್ಕೆ (Congress Government) ಆಪರೇಷನ್‌ ಭೀತಿ ಕಾಡುತ್ತಿದ್ಯಾ ಎಂಬ ಗಂಭೀರವಾದ ಪ್ರಶ್ನೆ ಎದ್ದಿದೆ.

    ಈ ಪ್ರಶ್ನೆ ಏಳಲು ಕಾರಣ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ (DK Shivakumar) ಆಡಿರುವ ಒಂದು ಮಾತು. ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು ಬೆಂಗಳೂರಿನಲ್ಲಿ ಕುಳಿತು ತಂತ್ರ ಮಾಡಿದರೆ ಗೊತ್ತಾಗುತ್ತದೆ ಎಂದು ಸಿಂಗಾಪುರದಲ್ಲಿ (Singapore) ಸರ್ಕಾರ ಬೀಳಿಸಲು ತಂತ್ರ ಮಾಡುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

     

    ಯಾವುದೇ ವ್ಯಕ್ತಿಯನ್ನು ಉದ್ದೇಶಿಸದೇ ಡಿಕೆಶಿ ಈ ಮಾತು ಹೇಳಿದ್ದು, ಸರ್ಕಾರ ಅಸ್ತಿರಗೊಳಿಸಲು ತೆರೆಮರೆಯಲ್ಲೆ ಪ್ರಯತ್ನ ನಡೆಯುತ್ತಿದ್ಯಾ ಎಂಬ ಪ್ರಶ್ನೆ ಎದ್ದಿದೆ. ಇದನ್ನೂ ಓದಿ: ಪಬ್‌ಜೀ ಮೂಲಕವೇ ಭಾರತದ ಹಲವರನ್ನ ಸಂಪರ್ಕಿಸಿದ್ದಾಳೆ ಸೀಮಾ – ಸ್ಫೋಟಕ ರಹಸ್ಯ ಬಯಲು

    ಭಾನುವಾರ ನಡೆದ ಪಕ್ಷ ಸೇರ್ಪಡೆ ವೇದಿಕೆಯಲ್ಲೂ ಡಿಕೆ ಶಿವಕುಮಾರ್‌ ಈ ಮಾತನ್ನು ಹೇಳಿದ್ದರು. ಈಗ ಮತ್ತೊಮ್ಮೆ ಈ ಮಾತನ್ನು ಹೇಳುವ ಮೂಲಕ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದ್ದಾರೆ.

     

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸಿಂಗಾಪುರದಲ್ಲಿ ಆಪ್ತರ ಜೊತೆ ಹೆಚ್‌ಡಿಕೆ ವಿಶ್ರಾಂತಿ

    ಸಿಂಗಾಪುರದಲ್ಲಿ ಆಪ್ತರ ಜೊತೆ ಹೆಚ್‌ಡಿಕೆ ವಿಶ್ರಾಂತಿ

    ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆ (Karnataka Election 2023) ಮತದಾನ ಮುಗಿದಂತೆ ಸಿಂಗಾಪುರಕ್ಕೆ (Singapore) ಹಾರಿದ್ದ ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ (HD Kumaraswamy) ಅವರು ಆಪ್ತರ ಜೊತೆ ವಿಶ್ರಾಂತಿ ಪಡೆಯುತ್ತಿದ್ದಾರೆ.

    ಆಪ್ತರೊಂದಿಗೆ ಉಪಾಹಾರ ಸೇವಿಸಿ ಹೆಚ್‌ಡಿಕೆ ವಿಶ್ರಾಂತಿ ಪಡೆಯುತ್ತಿರುವ ಸಂಬಂಧದ ಫೋಟೋಗಳನ್ನು ಪಕ್ಷದ ಮುಖಂಡರು ಹಂಚಿಕೊಂಡಿದ್ದಾರೆ. ವಿಶ್ರಾಂತಿ ಪಡೆಯುತ್ತಿರುವ ಕುಮಾರಸ್ವಾಮಿ ಅವರು ಅಭ್ಯರ್ಥಿಗಳ ಜೊತೆ ನಿರಂತರ ಸಂಪರ್ಕದಲ್ಲಿದ್ದಾರೆ. ಇದನ್ನೂ ಓದಿ: ಮತ್ತೆ ಕರ್ನಾಟಕದಲ್ಲಿ ರೆಸಾರ್ಟ್‌ ರಾಜಕೀಯ? – ಶಾಸಕರು, ಪಕ್ಷೇತರರನ್ನು ಹಿಡಿದಿಟ್ಟುಕೊಳ್ಳಲು ಕಾಂಗ್ರೆಸ್‌ ತಂತ್ರ

    ಈ ಬಾರಿ ಅತಂತ್ರ ಫಲಿತಾಂಶ ಹೊರಬೀಳುವ ಸಾಧ್ಯತೆ ಇದೆ. ಹೀಗಾಗಿ ಗೆಲ್ಲುವ ಸಂಭವವಿರುವ ಅಭ್ಯರ್ಥಿಗಳ ಜೊತೆ ಹೆಚ್‌ಡಿಕೆ ಸಂಪರ್ಕದಲ್ಲಿದ್ದಾರೆ.

    ರಾಜ್ಯ ವಿಧಾನಸಭೆಗೆ ಮೇ 10 ರಂದು ಮತದಾನ ನಡೆಯಿತು. ಮತದಾನದ ಬೆನ್ನಲ್ಲೇ ನಡೆದ ಮತಗಟ್ಟೆ ಸಮೀಕ್ಷೆಗಳಲ್ಲಿ ಅತಂತ್ರ ಪರಿಸ್ಥಿತಿ ಎದುರಾಗುವ ಸಾಧ್ಯತೆಯ ಸೂಚನೆ ಸಿಕ್ಕಿದೆ. ಈ ಹಿನ್ನಲೆಯಲ್ಲಿ ಪ್ರಮುಖ ಮೂರು ಪಕ್ಷಗಳು ಅಲರ್ಟ್‌ ಆಗಿವೆ. ಮೇ 13 ರಂದು ಫಲಿತಾಂಶ ಹೊರಬೀಳಲಿದ್ದು, ಸ್ವತಂತ್ರ ಸರ್ಕಾರ ರಚನೆಯಾಗುತ್ತೋ ಇಲ್ಲ ಅತಂತ್ರ ಪರಿಸ್ಥಿತಿ ತಲೆದೋರುತ್ತೋ ಎಂಬುದು ಕುತೂಹಲ ಮೂಡಿಸಿದೆ. ಮೂರು ಪಕ್ಷಗಳ ನಾಯಕರು ಹೈವೋಲ್ಟೇಜ್‌ ಸಭೆ ನಡೆಸುತ್ತಿದ್ದು, ರಾಜಕೀಯ ಲೆಕ್ಕಾಚಾರ ಹಾಕುತ್ತಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್‌ಗೆ ಜೆಡಿಎಸ್ ಬೆಂಬಲ ಕೊಟ್ರೆ ಒಳ್ಳೆಯದಾಗುತ್ತೆ: ಸತೀಶ್ ಜಾರಕಿಹೊಳಿ

  • ಸಿಂಗಾಪುರ್‌ಗೆ ತೆರಳಿದ ಮಾಜಿ ಸಿಎಂ ಕುಮಾರಸ್ವಾಮಿ

    ಸಿಂಗಾಪುರ್‌ಗೆ ತೆರಳಿದ ಮಾಜಿ ಸಿಎಂ ಕುಮಾರಸ್ವಾಮಿ

    ಬೆಂಗಳೂರು: ಕರ್ನಾಟಕ ವಿಧಾನಸಭೆಗೆ ಚುನಾವಣೆ (Karnataka Assembly Election 2023) ಮುಗಿದ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ (HD Kumaraswamy) ಸಿಂಗಾಪುರ್ ಗೆ ತೆರಳಿದ್ದಾರೆ.

    ಮಧ್ಯರಾತ್ರಿ ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣದಿಂದ ಸಿಂಗಾಪುರ್ (Singapore) ನತ್ತ ಪ್ರಯಾಣ ಬೆಳೆಸಿದ್ದಾರೆ. ಕಳೆದ ಆರು ತಿಂಗಳಿನಿಂದ ಸತತ ಪ್ರಚಾರ, ಪ್ರವಾಸದಿಂದ ಸುಸ್ತಾಗಿದ್ದ ಹೆಚ್‍ಡಿಕೆ ಎರಡು ದಿನಗಳ ಕಾಲ ವಿಶ್ರಾಂತಿಗಾಗಿ ಸಿಂಗಾಪುರ್ ಪ್ರಯಾಣ ಬೆಳೆಸಿದ್ದಾರೆ.

    ಒಟ್ಟಿನಲ್ಲಿ ಸಮೀಕ್ಷೆ (EXIT POLLS) ಗಳ ಬಗ್ಗೆ ತಲೆ ಕೆಡಿಸಿಕೊಳ್ಳದ ಹೆಚ್‍ಡಿಕೆ ಫಲಿತಾಂಶದ ದಿನ ವಾಪಸ್ಸಾಗಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇದನ್ನೂ ಓದಿ: ಮಂಗಳೂರಿನಲ್ಲಿ ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ – ಮಿಥುನ್ ರೈ ಕಾರ್ ಮೇಲೆ ಕಲ್ಲು ತೂರಾಟ