Tag: Singapore

  • ನಾನು ಅಪರಾಧಿಯಲ್ಲ: ಸಿಂಗಾಪುರ ಭೇಟಿಗೆ ಅನುಮತಿ ಸಿಗದೇ ಕೇಜ್ರಿವಾಲ್ ಅಸಮಾಧಾನ

    ನಾನು ಅಪರಾಧಿಯಲ್ಲ: ಸಿಂಗಾಪುರ ಭೇಟಿಗೆ ಅನುಮತಿ ಸಿಗದೇ ಕೇಜ್ರಿವಾಲ್ ಅಸಮಾಧಾನ

    ನವದೆಹಲಿ: ಜಾಗತಿಕ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಸಿಂಗಾಪುರಕ್ಕೆ ಭೇಟಿ ನೀಡಲು ಬಯಸಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಕೇಂದ್ರದ ಅನುಮತಿ ವಿಳಂಬವಾಗಿದೆ. ಇದರಿಂದ ಅಸಮಾಧಾನ ವ್ಯಕ್ತಪಡಿಸಿರುವ ಕೇಜ್ರಿವಾಲ್ ಇದರ ಹಿಂದೆ ರಾಜಕೀಯ ಕಾರಣವಿದೆ ಎಂದು ಆರೋಪಿಸಿದ್ದಾರೆ.

    ನಾನು ಅಪರಾಧಿಯಲ್ಲ, ನಾನು ದೆಹಲಿಯ ಚುನಾಯಿತ ಮುಖ್ಯಮಂತ್ರಿ. ಸಿಂಗಾಪುರದಲ್ಲಿ ನಡೆಯುತ್ತಿರುವ ಜಾಗತಿಕ ಶೃಂಗಸಭೆಯಲ್ಲಿ ಭಾಗಿಯಾಗುವುದೇ ಒಂದು ಹೆಮ್ಮೆಯ ವಿಚಾರ. ಆದರೆ ಕೇಂದ್ರ ನನಗೆ ಸಿಂಗಾಪುರ ಭೇಟಿಗೆ ಅನುಮತಿ ನೀಡುತ್ತಿಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ.

    ಶೃಂಗಸಭೆಗೆ ಭೇಟಿ ನೀಡದಂತೆ ನನ್ನನ್ನು ಏಕೆ ತಡೆಯಲಾಗುತ್ತಿದೆ ಎಂಬುದು ನನ್ನ ತಿಳುವಳಿಕೆಯನ್ನೇ ಮೀರಿದ ವಿಚಾರ. ದೇಶದ ಆಂತರಿಕ ಭಿನ್ನಾಭಿಪ್ರಾಯಗಳು ಜಾಗತಿಕ ಮಟ್ಟದಲ್ಲಿ ಪ್ರತಿಬಿಂಬಿಸಬಾರದು. ಈ ಭೇಟಿ ಇಡೀ ದೇಶಕ್ಕೆ ಹೆಮ್ಮೆ ತಂದು ಕೊಡುತ್ತದೆ ಎಂದು ಹೇಳಿದರು. ಇದನ್ನೂ ಓದಿ: 7,500 ಭಾರತೀಯ ಸೈನಿಕರಿಗೆ ಆಭರಣ ಸಂಸ್ಥೆಯಿಂದ ಉಂಗುರ ಗಿಫ್ಟ್

    ಕೇಜ್ರಿವಾಲ್ ಅವರನ್ನು ಜೂನ್‌ನಲ್ಲಿ ಸಿಂಗಾಪುರದ ಹೈ ಕಮಿಷನರ್ ಸೈಮನ್ ವಾಂಗ್ ಅವರು ಶೃಂಗಸಭೆಗೆ ಆಹ್ವಾನಿಸಿದ್ದರು. ಈ ಬಗ್ಗೆ ಕೇಜ್ರಿವಾಲ್ ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು, ಭೇಟಿಗೆ ಅನುಮತಿ ನೀಡುವಂತೆ ಮನವಿ ಮಾಡಿದ್ದರು. ಆದರೆ ಅವರ ಭೇಟಿಗೆ ಇನ್ನೂ ಅನುಮತಿ ಸಿಕ್ಕಿಲ್ಲ.

    ಜಾಗತಿಕ ಶೃಂಗಸಭೆಯಲ್ಲಿ ದೆಹಲಿ ಮಾದರಿಯನ್ನು ಪ್ರಸ್ತುತಪಡಿಸಲು ಸಿಂಗಾಪುರ ಸರ್ಕಾರ ನಮ್ಮನ್ನು ಆಹ್ವಾನಿಸಿದೆ. ಶೃಂಗಸಭೆಯಲ್ಲಿ ವಿಶ್ವದ ಅನೇಕ ದೊಡ್ಡ ನಾಯಕರ ಮುಂದೆ ದೆಹಲಿ ಮಾದರಿಯನ್ನು ಪ್ರಸ್ತುತಪಡಿಸಬೇಕಾಗಿದೆ. ಇಂದು ಇಡೀ ಜಗತ್ತು ದೆಹಲಿ ಮಾದರಿಯ ಬಗ್ಗೆ ತಿಳಿದುಕೊಳ್ಳಲು ಬಯಸುತ್ತದೆ. ಈ ಆಹ್ವಾನ ದೇಶಕ್ಕೆ ಹೆಮ್ಮೆ ಹಾಗೂ ಗೌರವದ ವಿಷಯವಾಗಿದೆ ಎಂದು ಕೇಜ್ರಿವಾಲ್ ಮೋದಿ ಅವರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ದ್ರೌಪದಿ ಮುರ್ಮು, ಸಿನ್ಹಾ ಇಬ್ಬರಿಗೂ ವೋಟು ಹಾಕಲ್ಲ: ರಾಷ್ಟ್ರಪತಿ ಚುನಾವಣೆ ಬಹಿಷ್ಕರಿಸಿದ ಅಕಾಲಿ ದಳ ಶಾಸಕ

    Live Tv
    [brid partner=56869869 player=32851 video=960834 autoplay=true]

  • ಲಂಕಾ ಅಧ್ಯಕ್ಷ ರಾಜಪಕ್ಸೆ ಮಾಲ್ಡೀವ್ಸ್‌ನಿಂದ ಸಿಂಗಾಪುರಕ್ಕೆ ಪಲಾಯನ

    ಲಂಕಾ ಅಧ್ಯಕ್ಷ ರಾಜಪಕ್ಸೆ ಮಾಲ್ಡೀವ್ಸ್‌ನಿಂದ ಸಿಂಗಾಪುರಕ್ಕೆ ಪಲಾಯನ

    ಸಿಂಗಾಪುರ: ಶ್ರೀಲಂಕಾದಲ್ಲಿ ಆರ್ಥಿಕ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಮಾಲ್ಡೀವ್ಸ್‌ಗೆ ಪಲಾಯನ ಮಾಡಿದ್ದ ಅಧ್ಯಕ್ಷ ಗೋಟಬಯ ರಾಜಪಕ್ಸೆ ಇದೀಗ ಸೌದಿ ಏರ್‌ಲೈನ್ಸ್ ಮೂಲಕ ಸಿಂಗಾಪುರಕ್ಕೆ ತೆರಳಿದ್ದಾರೆ.

    ಲಂಕಾದಲ್ಲಿ ಆರ್ಥಿಕ ಬಿಕ್ಕಟ್ಟಿನಿಂದಾಗಿ ಅಲ್ಲಿನ ಜನರು ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ. ಅಷ್ಟೇ ಅಲ್ಲದೇ ರಾಜಪಕ್ಸೆ ಮತ್ತು ಪ್ರಧಾನಿ ರನಿಲ್ ವಿಕ್ರಮಸಿಂಘೆ ಅವರು ಅಧಿಕಾರದಿಂದ ಕೆಳಗಿಳಿಯುವಂತೆ ಒತ್ತಾಯಿಸಿ ಪ್ರತಿಭಟನಾಕಾರರು ಶನಿವಾರ ಅವರ ಅಧ್ಯಕ್ಷೀಯ ಭವನಕ್ಕೆ ಮುತ್ತಿಗೆ ಹಾಕಿ, ಅಲ್ಲೇ ಠಿಕಾಣಿ ಹೂಡಿದ್ದರು.

    ಈ ಹಿನ್ನೆಲೆಯಲ್ಲಿ ಅಲ್ಲಿಂದ ತಪ್ಪಿಸಿಕೊಂಡು ಬಂದ ರಾಜಪಕ್ಸೆ ಬುಧವಾರ ಬೆಳಗ್ಗೆ ಶ್ರೀಲಂಕಾದಿಂದ ಪತ್ನಿ ಹಾಗೂ ಇಬ್ಬರು ಅಂಗರಕ್ಷಕರೊಂದಿಗೆ ಮಾಲ್ಡೀವ್ಸ್‌ಗೆ ತೆರಳಿದ್ದರು. ವಿಮಾನ ನಿಲ್ದಾಣದಲ್ಲಿ ಅವರನ್ನು ಸ್ಪೀಕರ್ ಮೊಹಮ್ಮದ್ ನಶೀದ್ ಸ್ವಾಗತಿಸಿದರು. ರಾಜಪಕ್ಸೆ ತಮ್ಮ ರಾಜೀನಾಮೆಯನ್ನು ಹಸ್ತಾಂತರಿಸಬೇಕಿದ್ದ ದಿನವೇ ದೇಶದಿಂದ ಪಲಾಯನ ಮಾಡಿದ್ದರು.

    ಬುಧವಾರ ರಾತ್ರಿಯೇ ಸಿಂಗಾಪುರಕ್ಕೆ ತೆರಳಬೇಕಿತ್ತು. ಆದರೆ ಭದ್ರತೆಯ ಕಾರಣದಿಂದಾಗಿ ಅವರು ಪಲಾಯನ ಮಾಡಿರಲಿಲ್ಲ. ಈ ಹಿನ್ನೆಲೆಯಲ್ಲಿ ಇದೀಗ ಸಿಂಗಾಪುರಕ್ಕೆ ತರಳಿರುವ ಅವರು ಸದ್ಯಕ್ಕೆ ಇಲ್ಲೇ ವಾಸಿಸುವ ನಿರೀಕ್ಷೆಯಿದೆ. ಇದನ್ನೂ ಓದಿ: ಶ್ರೀಲಂಕಾದಲ್ಲಿ ಕ್ಷಣಕ್ಷಣಕ್ಕೂ ವಿಷಮ ಸ್ಥಿತಿ – ಓರ್ವ ನಾಗರಿಕ ಸಾವು, 35 ಮಂದಿಗೆ ಗಾಯ

    ಶ್ರೀಲಂಕಾದಲ್ಲಿ ಕ್ಷಣಕ್ಷಣಕ್ಕೂ ಪರಿಸ್ಥಿತಿ ಹದಗೆಡುತ್ತಿದೆ. ಹಂಗಾಮಿ ಅಧ್ಯಕ್ಷರಾಗಿ ರನೀಲ್ ವಿಕ್ರಮಸಿಂಘೆ ನೇಮಕಗೊಂಡ ಬೆನ್ನಲ್ಲೇ ಅಲ್ಲಿನ ಜನ ಮತ್ತೆ ಸಿಡಿದೆದ್ದಿದ್ದಾರೆ. ವಿಕ್ರಮಸಿಂಘೆ ಕಚೇರಿಗೆ ನುಗ್ಗಿ ಜನ ದಾಂಧಲೆ ನಡೆಸಿದ್ದಾರೆ. ಸೇನಾ ಪಡೆಗಳ ಅಶ್ರುವಾಯು ಸೇರಿ ಹಲವು ರೀತಿಯ ಬಲ ಪ್ರಯೋಗಕ್ಕೂ ಬೆದರದೇ ಅಧ್ಯಕ್ಷರ ಭವನದ ಬಳಿಕ ಪ್ರಧಾನಿ ಕಚೇರಿಯನ್ನೂ ಆಕ್ರಮಿಸಿ ಗಲಾಟೆ ಮಾಡಿದ್ದಾರೆ. ಘರ್ಷಣೆಯಲ್ಲಿ ಓರ್ವ ಸಾವನ್ನಪ್ಪಿದ್ದು, 35ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಕ್ಷಣ ಕ್ಷಣಕ್ಕೂ ಬೀದಿಗಳಲ್ಲಿ ಪ್ರತಿಭಟನೆ ಹೆಚ್ಚುತ್ತಿದೆ. ರಾಜಪಕ್ಸೆ ಪಲಾಯನ – ಶ್ರೀಲಂಕಾದಲ್ಲಿ ತುರ್ತು ಪರಿಸ್ಥಿತಿ ಘೋಷಣೆ

    Live Tv
    [brid partner=56869869 player=32851 video=960834 autoplay=true]

  • ಟಾಯ್ಲೆಟ್‌ ನೀರು ಮರುಬಳಸಿ ತಯಾರಿಸಿದ ಬಿಯರ್‌ ಸೂಪರ್‌ ಎಂದ ಮದ್ಯಪ್ರಿಯರು!

    ಟಾಯ್ಲೆಟ್‌ ನೀರು ಮರುಬಳಸಿ ತಯಾರಿಸಿದ ಬಿಯರ್‌ ಸೂಪರ್‌ ಎಂದ ಮದ್ಯಪ್ರಿಯರು!

    ಸಿಂಗಾಪುರ್: ಬಿಯರ್‌ ಹೊಸ ಬ್ರ್ಯಾಂಡ್‌ವೊಂದು ಸಿಂಗಾಪುರದಲ್ಲಿ ಮಾರುಕಟ್ಟೆಗೆ ಲಗ್ಗೆಯಿಟ್ಟಿದೆ. ವಿಶೇಷ ಬ್ರ್ಯಾಂಡ್‌ನ ಬಿಯರ್‌ ಸಿಂಗಾಪುರ ಮದ್ಯಪ್ರಿಯರ ಮನಗೆದ್ದಿದೆ.

    ಬ್ರಿಯರ್‌ ಬ್ರ್ಯಾಂಡ್‌ ಹೆಸರು ʼನ್ಯೂಬ್ರೂʼ (NEWBrew). ಶೌಚ ನೀರನ್ನು ಮರುಬಳಸಿ ಕುಡಿಯುವ ನೀರಾಗಿ ಸಂಸ್ಕರಿಸಿ ಈ ಬಿಯರ್‌ ತಯಾರಿಸಲು ಬಳಸಲಾಗುತ್ತದೆ. ಹೊಸ ಬ್ರ್ಯಾಂಡ್‌ನ ಬಿಯರ್‌ ಈಗಾಗಲೇ ಮಾರುಕಟ್ಟೆಗೆ ಬಂದಿದ್ದು, ಮದ್ಯಪ್ರಿಯರು ಆಸಕ್ತಿಯಿಂದ ಕೊಳ್ಳುತ್ತಿದ್ದಾರೆ. ಇದನ್ನೂ ಓದಿ: 45,000 ಸಾವಿರ ಬದಲಿಗೆ 1.42 ಕೋಟಿ ಸ್ಯಾಲರಿ ಹಾಕಿದ ಕಂಪನಿ – ಹಣ ಜೊತೆ ಉದ್ಯೋಗಿ ಎಸ್ಕೇಪ್

    ಆಲ್ಕೊಹಾಲ್‌ಯುಕ್ತ ಪಾನೀಯವು ದೇಶದ ರಾಷ್ಟ್ರೀಯ ಜಲ ಸಂಸ್ಥೆ, PUB ಮತ್ತು ಸ್ಥಳೀಯ ಕ್ರಾಫ್ಟ್ ಬ್ರೂವರಿ ಬ್ರೂವರ್ಕ್ಜ್ ಸಹಯೋಗದಲ್ಲಿ ತಯಾರಿಸಲ್ಪಟ್ಟಿದೆ. ʼನ್ಯೂಬ್ರೂʼ ಏಪ್ರಿಲ್‌ನಿಂದ ಸೂಪರ್‌ ಮಾರುಕಟ್ಟೆಗಳಲ್ಲಿ ಮಾರಾಟವಾಗುತ್ತಿದೆ.

    ಇದನ್ನು ಟಾಯ್ಲೆಟ್‌ ನೀರನ್ನು ಮರುಬಳಸಿ ತಯಾರಿಸಲಾಗಿದೆ ಎಂದು ಸ್ಪಷ್ಟವಾಗಿ ನಂಬಲು ಸಾಧ್ಯವಾಗಲಿಲ್ಲ ಎಂದು ಗ್ರಾಹಕ ಚೆವ್ ವೀ ಲಿಯಾನ್ ಹೇಳಿದ್ದಾರೆ. ಸೂಪರ್‌ ಮಾರುಕಟ್ಟೆಯಲ್ಲಿ ಹೊಸ ಬ್ರ್ಯಾಂಡ್‌ನ ಬಿಯರ್‌ ಖರೀದಿಸಿದ ಅವರು, ಇದು ಸಾಮಾನ್ಯವಾಗಿ ಇತರೆ ಬಿಯರ್‌ಗಳಂತೆಯೇ ರುಚಿ ಹೊಂದಿದೆ. ನನಗೆ ಬಿಯರ್‌ ಅಂದರೆ ಇಷ್ಟ ಎಂದು ತಿಳಿಸಿದ್ದಾರೆ.

    ಕೊಳಚೆ ನೀರನ್ನು ಕುಡಿಯುವ ನೀರಾಗಿ ಸಂಸ್ಕರಿಸುವ ಪರಿಕಲ್ಪನೆಗೆ ಆರಂಭದಲ್ಲಿ ವ್ಯಾಪಕ ವಿರೋಧವಿತ್ತು. ಕಳೆದ ದಶಕದಲ್ಲಿ ಪ್ರಪಂಚದಾದ್ಯಂತ ಶುದ್ಧ ನೀರಿನ ಪೂರೈಕೆ ತೊಂದರೆ ಎದುರಾಗಿತ್ತು. ಈ ವೇಳೆ ಸಂಸ್ಕರಿಸಿದ ನೀರಿಗೆ ಬೆಂಬಲ ವ್ಯಕ್ತವಾಯಿತು.

    ನಾನಾ ಬ್ರ್ಯಾಂಡ್‌ ಬಿಯರ್‌ಗಳು ಮಾರುಕಟ್ಟೆಯಲ್ಲಿದ್ದು, ಇದು ವಿಶೇಷ ಎಂದು ನಮಗೆ ಮನವರಿಕೆಯಾಗುವುದಿಲ್ಲ. ಬಿಯರ್‌ ಬೇಕೆನಿಸಿದರೆ, ಸಾಮಾನ್ಯ ನೀರಿನಿಂದ ತಯಾರಿಸಿದ ಯಾವುದನ್ನಾದರೂ ಆರಿಸಿಕೊಳ್ಳುತ್ತೇನೆ ಎಂದು ಸಿಂಗಾಪುರದ ವಿದ್ಯಾರ್ಥಿ ಲೋ ಯು ಚೆನ್ ಹೇಳಿದ್ದಾರೆ. ಇದನ್ನೂ ಓದಿ: ವಿಶ್ವದ ಅತ್ಯಂತ ದುಬಾರಿ ಬೆಲೆಯ ಪನ್ನೀರ್ – ಕೆಜಿಗೆ 80 ಸಾವಿರ ರೂಪಾಯಿ

    Live Tv

  • ಎಸ್‍ಡಿಎಂ ಕಾಲೇಜಿನ ಮಾಜಿ ಪ್ರಾಂಶುಪಾಲ ಡಾ. ಬಿ. ಯಶೋವರ್ಮ ನಿಧನ

    ಎಸ್‍ಡಿಎಂ ಕಾಲೇಜಿನ ಮಾಜಿ ಪ್ರಾಂಶುಪಾಲ ಡಾ. ಬಿ. ಯಶೋವರ್ಮ ನಿಧನ

    ಮಂಗಳೂರು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಉಜಿರೆಯ ಮಾಜಿ ಪ್ರಾಂಶುಪಾಲ ಡಾ. ಬಿ ಯಶೋವರ್ಮ ಅವರು ವಿಧಿವಶರಾಗಿದ್ದಾರೆ.

    66 ವರ್ಷದ ಯಶೋವರ್ಮ ಅವರು ಕಳೆದ ಕೆಲವು ತಿಂಗಳಿನಿಂದ ಅನಾರೋಗ್ಯದ ಹಿನ್ನೆಲೆಯಲ್ಲಿ ಸಿಂಗಾಪುರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಭಾನುವಾರ ಮಧ್ಯರಾತ್ರಿ ಚಿಕಿತ್ಸೆ ಫಲಿಸದೆ ನಿಧರಾಗಿದ್ದಾರೆ. ಇದನ್ನೂ ಓದಿ: ಶಾಲಾ ಪಠ್ಯದಲ್ಲಿ ಕೆಂಪೇಗೌಡ, ಸಿದ್ದರೂಢ ಜಾತ್ರೆ – ಮೋದಿ `ವೋಕಲ್ ಫಾರ್ ಲೋಕಲ್’ ಮಂತ್ರವೂ ಸೇರ್ಪಡೆ

    ಯಶೋವರ್ಮ ಅವರು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಪ್ರಾಂಶುಪಾಲರಾಗಿ ದೀರ್ಘಕಾಲ ಸೇವೆ ಸಲ್ಲಿಸಿದ್ದರು. ಪ್ರಸ್ತುತ ಎಸ್‍ಡಿಎಂ ಎಜುಕೇಶನ್ ಸೊಸೈಟಿ ಕಾರ್ಯದರ್ಶಿಯಾಗಿದ್ದರು. ಡಾ. ಬಿ.ಯಶೋವರ್ಮ ಅವರು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರ ಪತ್ನಿ ಡಾ. ಹೇಮಾವತಿ ಹೆಗ್ಗಡೆಯವರ ಸಹೋದರರಾಗಿದ್ದಾರೆ.

  • ಶಶಿ ತರೂರು ಒಬ್ಬ ಮೂರ್ಖ: ದಿ ಕಾಶ್ಮೀರ್ ಫೈಲ್ಸ್ ನಿರ್ದೇಶಕನ ಖಡಕ್ ಉತ್ತರ

    ಶಶಿ ತರೂರು ಒಬ್ಬ ಮೂರ್ಖ: ದಿ ಕಾಶ್ಮೀರ್ ಫೈಲ್ಸ್ ನಿರ್ದೇಶಕನ ಖಡಕ್ ಉತ್ತರ

    ದಿ ಕಾಶ್ಮೀರ್ ಫೈಲ್ಸ್ ಸಿನಿಮಾವನ್ನು ಸಿಂಗಪೂರನಲ್ಲಿ ಬ್ಯಾನ್ ಮಾಡಿರುವ ವಿಚಾರ ನಿನ್ನೆಯಿಂದ ನಾನಾ ರೂಪ ಪಡೆದುಕೊಳ್ಳುತ್ತಿದೆ. ಬ್ಯಾನ್ ಮಾಡಿರುವ ಸುದ್ದಿಯನ್ನು ಶಶಿ ತರೂರು ಟ್ವಿಟ್ ಮಾಡಿದ್ದರು. ಇದೊಂದು ಸರಕಾರಿ ಪ್ರಯೋಜಿತ ಸಿನಿಮಾ ಎಂದು ಟೀಕಿಸಿದ್ದರು. ಈ ವಿಚಾರಕ್ಕೆ ಸಂಬಂಧಿಸಿದಂತೆ ಬಾಲಿವುಡ್ ಖ್ಯಾತ ನಟ ಅನುಪಮ್ ಖೇರ್ ಕೂಡ ಶಶಿ ತರೂರ್ ಗೆ ಚಾಟಿ ಬೀಸಿದ್ದರು. ಇದೀಗ ಚಿತ್ರದ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಕೂಡ ಕಿಡಿಕಾರಿದ್ದಾರೆ. ಇದನ್ನೂ ಓದಿ : ಮಗುವಿಗಾಗಿ ಪ್ಲ್ಯಾನ್ ಮಾಡಿದ್ದಾರಂತೆ ದೀಪಿಕಾ ಪಡುಕೋಣೆ, ರಣವೀರ್ ಸಿಂಗ್

    ದಿ ಕಾಶ್ಮೀರ್ ಫೈಲ್ಸ್ ದೇಶಾದ್ಯಂತ ಭರ್ಜರಿ ಪ್ರದರ್ಶನ ಕಂಡಿದೆ. ಇದೀಗ ಓಟಿಟಿಯಲ್ಲೂ ಪ್ರರ್ದಶನಕ್ಕೆ ಸಿದ್ಧವಾಗಿದೆ. ಈ ಹೊತ್ತಿನಲ್ಲಿ ಸಿನಿಮಾವನ್ನು ಸಿಂಗಾಪೂರನಲ್ಲಿ ರಿಲೀಸ್ ಮಾಡಲು ಸಿದ್ಧತೆ ಮಾಡಿಕೊಂಡಿತ್ತು ಚಿತ್ರತಂಡ. ಸಿಂಗಾಪೂರನಲ್ಲಿ ಪ್ರದರ್ಶನವಾಗಬೇಕಾದರೆ, ಅಲ್ಲಿಯೂ ಸೆನ್ಸಾರ್ ಆಗಬೇಕು. ಆಗ ಈ ಸಿನಿಮಾ ಸಿಂಗಾಪೂರನಲ್ಲಿ ಪ್ರದರ್ಶನಕ್ಕೆ ಯೋಗ್ಯವಾಗಿಲ್ಲ ಎಂದು ಅಭಿಪ್ರಾಯ ಪಟ್ಟಿತ್ತು. ಅದನ್ನೇ ಶಶಿ ತರೂರು ಟ್ವಿಟ್ ಮಾಡಿದ್ದರು. ಇದನ್ನೂ ಓದಿ : ದಿ ಕಾಶ್ಮೀರ್ ಫೈಲ್ಸ್ ವಿವಾದ : ಶಶಿ ತರೂರು ಮತ್ತು ಅನುಪಮ್ ಖೇರ್ ಜಟಾಪಟಿ

    ಶಶಿ ತರೂರು ಟ್ವಿಟ್ ಗೆ ಪ್ರತಿಕ್ರಿಯೆ ನೀಡಿರುವ ವಿವೇಕ್ ಅಗ್ನಿಹೋತ್ರಿ,, ‘ಶಶಿ ತರೂರು ಸದಾ ತಪ್ಪು ಹುಡುಕುವ ಒಬ್ಬ ಮೂರ್ಖ. ದೂರುವುದೇ ಚಟ ಮಾಡಿಕೊಂಡಿದ್ದಾರೆ. ಇವರಿಂದ ಇನ್ನೇನು ನಿರೀಕ್ಷಿಸುವುದಕ್ಕೆ ಸಾಧ್ಯ?’ ಎಂದು ಖಾರವಾಗಿಯೇ ಪ್ರತಿಕ್ರಿಯೆ ನೀಡಿದ್ದಾರೆ. ‘ಶಶಿ ತರೂರು ಪತ್ನಿ ಕಾಶ್ಮೀರಿ ಎನ್ನುವುದು ನಿಜವಾದರೆ, ಅವರ ಗೌರವಕ್ಕಾದರೂ ಒಳ್ಳೆಯದನ್ನು ಯೋಚಿಸಿ’ ಎಂದು ಸಲಹೆಯನ್ನೂ ಅವರು ನೀಡಿದ್ದಾರೆ. ಇದನ್ನೂ ಓದಿ : ಜ್ಯೂ.ರವಿಚಂದ್ರನ್ ಖ್ಯಾತಿಯ ಲಕ್ಷ್ಮಿ ನಾರಾಯಣ್ ನಿಧನ

    ಸಿಂಗಪೂರ ಸಿನಿಮಾ ಕಾನೂನು ಬಗ್ಗೆಯೂ ವಿವರಿಸಿರುವ ವಿವೇಕ್ ಅಗ್ನಿಹೋತ್ರಿ, ‘ಅದೊಂದು ಪುರಾತನ, ಅತೀ ಹಿಂದುಳಿದ ಸೆನ್ಸಾರ್ ಬೋರ್ಡ್. ಇನ್ನೂ ಪುರಾತನ ಆಲೋಚನೆಗಳನ್ನೇ ಮುಂದುವರೆಸಿಕೊಂಡು ಹೋಗುತ್ತಿದೆ. ಅದು ಅಪ್ ಗ್ರೇಡ್ ಆಗಬೇಕು’ ಎಂದು ಅವರು ಹೇಳಿದ್ದಾರೆ.

  • ದಿ ಕಾಶ್ಮೀರ್ ಫೈಲ್ಸ್ ವಿವಾದ : ಶಶಿ ತರೂರು ಮತ್ತು ಅನುಪಮ್ ಖೇರ್ ಜಟಾಪಟಿ

    ದಿ ಕಾಶ್ಮೀರ್ ಫೈಲ್ಸ್ ವಿವಾದ : ಶಶಿ ತರೂರು ಮತ್ತು ಅನುಪಮ್ ಖೇರ್ ಜಟಾಪಟಿ

    ಕಾಂಗ್ರೆಸ್ ಸಂಸತ್ ಸದಸ್ಯ ಶಶಿ ತರೂರ್ ನಿನ್ನೆಯಷ್ಟೇ ‘ದಿ ಕಾಶ್ಮೀರ್ ಫೈಲ್ಸ್’ ಕುರಿತಾಗಿ ಟ್ವಿಟ್ ವೊಂದನ್ನು ಮಾಡಿದ್ದರು. ನ್ಯೂಸ್ ಚಾನೆಲ್ ವೊಂದರ ವರದಿಯನ್ನು  ಲಿಂಕ್ ಮಾಡಿ, ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾವನ್ನು ಸಿಂಗಪುರದ‍ಲ್ಲಿ ಬ್ಯಾನ್ ಮಾಡಲಾಗಿದೆ. ಭಾರತದಲ್ಲಿ ಆಡಳಿತ ನಡೆಸುತ್ತಿರುವ ಪಕ್ಷದ ಪ್ರಯೋಜಿತ ಸಿನಿಮಾ ದಿ ಕಾಶ್ಮೀರ್ ಫೈಲ್ಸ್’ ಎಂದು ಬರೆದುಕೊಂಡಿದ್ದರು. ಈ ಟ್ವಿಟ್ ಭಾರೀ ವಿವಾದಕ್ಕೆ ಕಾರಣವಾಗಿತ್ತು. ಇದನ್ನೂ ಓದಿ : ಬೆಸ್ಟ್ ಆಕ್ಟರ್ ಅವಾರ್ಡ್ ಪಡೆದಿದ್ದ ‘ನಾನು ಮತ್ತು ಗುಂಡ’ ಸಿನಿಮಾದ ‌ಶ್ವಾನ ನಿಧನ

    ಈ ಟ್ವಿಟ್ ಗೆ ದಿ ಕಾಶ್ಮೀರ್ ಫೈಲ್ಸ್ ಸಿನಿಮಾದಲ್ಲಿ ನಟಿಸಿರುವ ಅನುಪಮ್ ಖೇರ್ ತೀವ್ರ ತರಹದಲ್ಲಿ ಪ್ರತಿಕ್ರಿಯೆ ನೀಡಿದ್ದರು. ತರೂರು ಅವರ ದಿವಂಗತ ಪತ್ನಿ ಸುನಂದಾ ಪುಷ್ಕರ್ ಅವರು ಈ ಹಿಂದೆ ಟ್ವಿಟ್ ಮಾಡಿದ್ದ ಪೋಸ್ಟ್ ವೊಂದನ್ನು ಟ್ಯಾಗ್ ಮಾಡಿ, ಮಡಿದ ಪತ್ನಿಗೋಸ್ಕರವಾದರೂ ಶಶಿ ತರೂರು, ನಿರ್ಭಾವುಕತೆಯನ್ನು ಬಿಡಬೇಕಿತ್ತು. ತರೂರು ಪತ್ನಿ ಮೂಲತಃ ಕಾಶ್ಮೀರಿ. ಹಾಗಾಗಿ ಈ ಸಿನಿಮಾ ಬಗ್ಗೆ ಸಂವೇದನಾಶೀಲತೆ ತೋರಬೇಕಿತ್ತು ಎಂದು ಅನುಪಮ್ ಖೇರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಟ್ವಿಟ್ ಗಳು ಈಗ ಜಟಾಪಟಿಗೆ ಕಾರಣವಾಗಿವೆ.

    ಯಾವುದೋ ಒಂದು ದೇಶ ಕಾಶ್ಮೀರ್ ಫೈಲ್ಸ್ ಅನ್ನು ಬ್ಯಾನ್ ಮಾಡಿದೆ ಎಂದ ಮಾತ್ರಕ್ಕೆ ಅದು ಜಗತ್ತಿನ ಗೆಲುವು ಎನ್ನುವಂತೆ ತರೂರು ಸಂಭ್ರಮಿಸುತ್ತಿದ್ದಾರೆ. ಇದು ದುರಂತ ಎನ್ನುವ ಅರ್ಥದಲ್ಲಿ ಅನುಪಮ್ ಖೇರ್ ಬರೆದುಕೊಂಡಿದ್ದಕ್ಕೆ, ಶಶಿ ತರೂರು ಕೂಡ ಅಷ್ಟೇ ಖಾರವಾಗಿಯೇ ಮತ್ತೊಂದು ಟ್ವಿಟ್ ಮಾಡಿದ್ದಾರೆ. ವಿನಾಕಾರಣ ನನ್ನ ದಿವಗಂತ ಪತ್ನಿಯನ್ನು ಎಳೆದು ತಂದಿರುವುದು ಅವರ ನಿರ್ಲಜ್ಜೆತನ ತೋರಿಸುತ್ತದೆ ಎಂದು ಪ್ರತಿಕ್ರಿಯಿಸಿದ್ದಾರೆ. ನಾನು ಯಾವುದೇ ಕಾಮೆಂಟ್ ಸೇರಿಸದೆ, ವರದಿಯಾದ ಸುದ್ದಿಯನ್ನು ಮಾತ್ರ ಪೋಸ್ಟ್ ಮಾಡಿದ್ದೇನೆ ಎಂದು ಸಮಜಾಯಿಸಿದ್ದಾರೆ. ಇದನ್ನೂ ಓದಿ: ಫಸ್ಟ್ ಟೈಮ್ ಮಗಳ ಫೋಟೋ ಶೇರ್ ಮಾಡಿದ ಪ್ರಿಯಾಂಕಾ ಚೋಪ್ರಾ

    ತಮ್ಮ ದಿವಗಂತ ಪತ್ನಿಯ ಊರಿಗೂ ಹೋಗಿದ್ದ ವಿಷಯವನ್ನೂ ಪ್ರಸ್ತಾಪಿಸಿರುವ ತರೂರು, ಸುನಂದಾ ಮನೆಯ ಅಕ್ಕಪಕ್ಕದವರನ್ನು ಮಾತನಾಡಿಸಿದ್ದೆ. ಅಲ್ಲಿ ಹಿಂದೂ ಮತ್ತು ಮುಸಲ್ಮಾನರು ಒಟ್ಟಾಗಿಯೇ ಇದ್ದರು. ಈಗ ಏನೇ ಹೇಳಿದರೂ, ನನ್ನ ಮಾತುಗಳನ್ನು ಅನುಮೋದಿಸುವುದಕ್ಕೆ ಸುನಂದಾ ಇಲ್ಲವೆಂದೂ ಅವರು ಮತ್ತೊಂದು ಫೋಸ್ಟ್ ನಲ್ಲಿ ಬರೆದುಕೊಂಡಿದ್ದಾರೆ.

    ಅನುಪಮ್ ಖೇರ್ ಮತ್ತು ತರೂರ್ ಟ್ವಿಟ್ ಗಳು ಈಗ ಭಾರೀ ಸದ್ದು ಮಾಡುತ್ತಿವೆ. ದಿ ಕಾಶ್ಮೀರ್ ಫೈಲ್ಸ್ ಕುರಿತು ಹೆಮ್ಮೆಯಿಂದ ಅನುಪಮ್ ಖೇರ್ ಮಾತನಾಡುತ್ತಿದ್ದರೆ, ಶಶಿ ತರೂರು ಸಿನಿಮಾ ಬಗ್ಗೆ ಕಾಮೆಂಟ್ ಮಾಡದೇ ಸುದ್ದಿಯನ್ನು ಮಾತ್ರ ಪೋಸ್ಟ್ ಮಾಡಿರುವುದಾಗಿ ಸ್ಪಷ್ಟನೆ ನೀಡಿದ್ದಾರೆ. ಅಲ್ಲದೇ, ಅದೊಂದು ಆಡಳಿತ ಸರಕಾರದ  ಕೃಪಾಪೋಷಿತ ಸಿನಿಮಾ ಎನ್ನುವುದನ್ನು ಒಪ್ಪಿಕೊಳ್ಳಬೇಕಾದ ಕಟುಸತ್ಯ ಎಂದೂ ಹೇಳಿದ್ದಾರೆ. ಇದನ್ನೂ ಓದಿ : ಜೂನ್ 9ಕ್ಕೆ ನಯನತಾರಾ ಮದುವೆ ಫಿಕ್ಸ್ – ತಿರುಪತಿಯಲ್ಲಿ ವಿವಾಹ

    ಸಿಂಗಪೂರ ಸಿನಿಮಾ ಕಾನೂನಿನ ಅಂಶಗಳಲ್ಲಿ ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ಬಾರದೇ ಇರುವ ಕಾರಣಕ್ಕಾಗಿ ಸಿಂಗಾಪೂರದಲ್ಲಿ ಸಿನಿಮಾವನ್ನು ಬ್ಯಾನ್ ಮಾಡಲಾಗಿದೆ. ಇದೊಂದು ಹಿಂಸೆಯನ್ನು ಪ್ರಚೋದಿಸುವಂತಹ ಸಿನಿಮಾವಾಗಿದ್ದರಿಂದ ಪ್ರದರ್ಶನಕ್ಕೆ ಯೋಗ್ಯವಾಗಿಲ್ಲ ಎಂದು ಅಲ್ಲಿ ಪ್ರಸಾರ ಖಾತೆಯು ತಿಳಿಸಿದೆ ಎಂದು ಸುದ್ದಿಯಾಗಿದೆ.

  • ಸಿಂಗಾಪುರದಲ್ಲಿ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ಬ್ಯಾನ್

    ಸಿಂಗಾಪುರದಲ್ಲಿ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ಬ್ಯಾನ್

    ವಿವೇಕ್ ಅಗ್ನಿಹೋತ್ರಿ ನಿರ್ದೇಶನದಲ್ಲಿ ಮೂಡಿ ಬಂದ ‘ದಿ ಕಾಶ್ಮೀರ್ ಫೈಲ್ಸ್’ ದೇಶಾದ್ಯಂತ ಸಂಚಲನ ಸೃಷ್ಟಿ ಮಾಡಿತ್ತು. ದೇಶಕ್ಕೆ ದೇಶವೇ ಈ ಸಿನಿಮಾದ ಬೆನ್ನಿಗೆ ನಿಂತಿತ್ತು. ಪ್ರಧಾನಿ ನರೇಂದ್ರ ಮೋದಿ ಮತ್ತು ನಾನಾ ರಾಜ್ಯಗಳ ಮುಖ್ಯಮಂತ್ರಿಗಳು ಕೂಡ ಈ ಸಿನಿಮಾದ ಬಗ್ಗೆ ಒಲವು ತೋರಿ, ತೆರಿಗೆ ವಿನಾಯಿತಿಯನ್ನೂ ಘೋಷಣೆ ಮಾಡಿದ್ದರು. ಹೀಗಾಗಿ ದೇಶಾದ್ಯಂತ ಈ ಸಿನಿಮಾ ಯಶಸ್ವಿ ಪ್ರದರ್ಶನ ಕಂಡಿತು. ಇದನ್ನೂ ಓದಿ : ಬೆಸ್ಟ್ ಆಕ್ಟರ್ ಅವಾರ್ಡ್ ಪಡೆದಿದ್ದ ‘ನಾನು ಮತ್ತು ಗುಂಡ’ ಸಿನಿಮಾದ ‌ಶ್ವಾನ ನಿಧನ

    ಇದೀಗ ದಿ ಕಾಶ್ಮೀರ್ ಫೈಲ್ಸ್ ಸಿನಿಮಾವನ್ನು ಸಿಂಗಾಪುರದಲ್ಲಿ ಪ್ರದರ್ಶಿಸಲು ಚಿತ್ರತಂಡ ನಿರ್ಧರಿಸಿತ್ತು. ಆದರೆ, ಅದಕ್ಕೆ ಇನ್ಫೋಕಾಮ್ ಮಿಡಿಯಾ ಡೆವಲಪ್ ಮೆಂಟ್ ಅಥಾರಿಟಿ, ಸಂಸ್ಕೃತಿ, ಸಮುದಾಯ ಮತ್ತು ಯುವ ಸಚಿವಾಲಯ ಹಾಗೂ ಗೃಹ ಸಚಿವಾಲಯ ಇದಕ್ಕೆ ಸಮ್ಮತಿ ಸೂಚಿಸಿಲ್ಲ ಎಂದು ಹೇಳಲಾಗುತ್ತಿದೆ. ಈ ಸಿನಿಮಾವನ್ನು ಅಧಿಕಾರಿಗಳು ಮೌಲ್ಯಮಾಪನ ಮಾಡಲಾಗಿದ್ದು, ಇದು ಪ್ರದರ್ಶನಕ್ಕೆ ಯೋಗ್ಯವಾದ ಚಿತ್ರವಲ್ಲ ಎಂಬ ಅಭಿಪ್ರಾಯ ಬಂದ ಹಿನ್ನೆಲೆಯಲ್ಲಿ ಪ್ರದರ್ಶನಕ್ಕೆ ನಿರಾಕರಿಸಲಾಗಿದೆ ಎನ್ನುವ ಮಾಹಿತಿ ಇದೆ. ಇದನ್ನೂ ಓದಿ: ಫಸ್ಟ್ ಟೈಮ್ ಮಗಳ ಫೋಟೋ ಶೇರ್ ಮಾಡಿದ ಪ್ರಿಯಾಂಕಾ ಚೋಪ್ರಾ

    ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ವರ್ಗೀಕರಣ ಮಾರ್ಗಸೂಚಿಯನ್ನೂ ಮೀರಿದೆ. ಏಕಮುಖವಾಗಿ ಚಿತ್ರೀಕರಿಸಲಾಗಿದೆ. ಅಲ್ಲದೇ, ಪ್ರಚೋದನಕಾರಿ ಆಗುವಂತಹ ಸಾಕಷ್ಟು ಅಂಶಗಳನ್ನು ಈ ಸಿನಿಮಾ ಹೊಂದಿದೆ. ಸಂಘರ್ಷಕ್ಕೆ ಕಾರಣವಾಗುವ ಅಂಶಗಳು ಈ ಸಿನಿಮಾದಲ್ಲಿ ಇರುವುದರಿಂದ ಚಿತ್ರ ಪ್ರದರ್ಶನಕ್ಕೆ ನಿರಾಕರಿಸಲಾಗಿದೆ ಎಂದು ಸಚಿವಾಲಯ ತಿಳಿಸಿದೆ ಎಂದು ವರದಿಗಳು ಬಹಿರಂಗವಾಗಿವೆ. ಇದನ್ನೂ ಓದಿ : ಜೂನ್ 9ಕ್ಕೆ ನಯನತಾರಾ ಮದುವೆ ಫಿಕ್ಸ್ – ತಿರುಪತಿಯಲ್ಲಿ ವಿವಾಹ

    1990ರಲ್ಲಿ ಕಾಶ್ಮೀರ ಕಣಿವೆಯಲ್ಲಿ ನಡೆದ ಹಿಂದೂಗಳ ಮಾರಣಹೋಮ ಕುರಿತಾದ ಸಿನಿಮಾ ಇದಾಗಿದೆ. ಕಾಶ್ಮೀರಿ ಪಂಡಿತರ ಹತ್ಯೆಯನ್ನು ಪ್ರಮುಖವಾಗಿ ಇಟ್ಟುಕೊಂಡು ತಯಾರಿಸಲಾದ ಚಿತ್ರ ಇದಾಗಿದ್ದು, ಇದೊಂದು ನೈಜಘಟನೆಯನ್ನು ಆಧರಿಸಿದ ಚಿತ್ರವೆಂದು ನಿರ್ದೇಶಕರು ಹೇಳಿಕೊಂಡಿದ್ದಾರೆ. ಹೀಗಾಗಿಯೇ ಸಿಂಗಾಪುರ ದೇಶದ ಸಿನಿಮಾ ನಿಯಮಾವಳಿಗಳಿಗೆ ಈ ಚಿತ್ರ ವಿರುದ್ಧವಾಗಿದೆ ಎಂದು ವರದಿ ನೀಡಲಾಗಿದೆಯಂತೆ.

  • ಸಿಂಗಾಪುರ ಏರ್ ಶೋನಲ್ಲಿ ಭಾಗಿಯಾಗಲಿದೆ ತೇಜಸ್ ಫೈಟರ್ ಜೆಟ್

    ಸಿಂಗಾಪುರ ಏರ್ ಶೋನಲ್ಲಿ ಭಾಗಿಯಾಗಲಿದೆ ತೇಜಸ್ ಫೈಟರ್ ಜೆಟ್

    ನವದೆಹಲಿ: ಸಿಂಗಾಪುರದಲ್ಲಿ ನಡೆಯಲಿರುವ ಏರ್ ಶೋ-೨೦೨೨ರಲ್ಲಿ ಮೇಡ್ ಇನ್ ಇಂಡಿಯಾ ತೇಜಸ್ ಫೈಟರ್ ಜೆಟ್ ಪ್ರದರ್ಶನಗೊಳ್ಳಲಿದೆ.

    ಫೆಬ್ರವರಿ ೧೫ ರಿಂದ ೧೮ರ ವರೆಗೆ ನಡೆಯಲಿದರುವ ಏರ್ ಶೋನಲ್ಲಿ ಭಾಗವಹಿಸಲು ೪೪ ಭಾರತೀಯ ವಾಯುಪಡೆ ಸಿಬ್ಬಂದಿ ಈಗಾಗಲೇ ಸಿಂಗಾಪುರದ ಚಾಂಗಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ತಲುಪಿದ್ದಾರೆ.

    ಸಿಂಗಾಪುರದಲ್ಲಿ ಪ್ರತೀ ೨ ವರ್ಷಗಳಿಗೊಮ್ಮೆ ಏರ್ ಶೋ ಕಾರ್ಯಕ್ರಮ ಏರ್ಪಡಿಸಲಾಗುತ್ತದೆ. ಜಾಗತಿಕವಾಗಿ ವಾಯುಯಾನದ ಉತ್ಪನ್ನಗಳನ್ನು ಪ್ರದರ್ಶಿಸಲು ಇದೊಂದು ಉತ್ತಮ ವೇದಿಕೆಯಾಗಿದೆ. ಈ ಬಾರಿ ಪ್ರಪಂಚದ ವಿವಿಧೆಡೆ ತಯಾರಾದ ವಾಯುಯಾನ ಉತ್ಪನ್ನಗಳೊಂದಿಗೆ ಮೇಡ್ ಇನ್ ಇಂಡಿಯಾ ತೇಜಸ್ ಕೂಡಾ ಪ್ರದರ್ಶನವಾಗಲಿದೆ. ಇದನ್ನೂ ಓದಿ: ಆಕಾಶದಲ್ಲಿ ಹಾರಾಡಿತು ಪೈಲಟ್ ರಹಿತ ಹೆಲಿಕಾಪ್ಟರ್

    ತೇಜಸ್ ಫೈಟರ್ ಜೆಟ್ ಅನ್ನು ಹಿಂದುಸ್ತಾನ್ ಏರೋನಾಟಿಕಲ್ ಲಿಮಿಟೆಡ್ (ಹೆಚ್‌ಎಎಲ್) ಭಾರತೀಯ ವಾಯುಪಡೆ ಹಾಗೂ ನೌಕಾಪಡೆಗಾಗಿ ಅಭಿವೃದ್ಧಿ ಪಡಿಸಲಾಗಿದೆ. ಇದನ್ನೂ ಓದಿ: IPL ಹರಾಜಿನಲ್ಲಿ ಅನ್‍ಸೋಲ್ಡ್ ಆದ ಸ್ಟಾರ್ ಆಟಗಾರರು

    ಭಾರತ ಈ ಹಿಂದೆ ಮಲೇಷ್ಯಾದ ಐಎಲ್‌ಎಮ್‌ಎ-೨೦೧೯ ಹಾಗೂ ದುಬೈ ಏರ್ ಶೋ-೨೦೨೧ರಲ್ಲಿ ಭಾಗವಹಿಸಿ ಸ್ವದೇಶೀ ವಿಮಾನಗಳನ್ನು ಪ್ರದರ್ಶಿಸಿದ್ದವು.

  • ಭಾರತೀಯ ಮೂಲದ ವ್ಯಕ್ತಿಗೆ ಸಿಂಗಾಪುರದಲ್ಲಿ 6 ತಿಂಗಳು ಜೈಲು!

    ಭಾರತೀಯ ಮೂಲದ ವ್ಯಕ್ತಿಗೆ ಸಿಂಗಾಪುರದಲ್ಲಿ 6 ತಿಂಗಳು ಜೈಲು!

    ಸಿಂಗಾಪುರ: 25 ವರ್ಷದ ಭಾರತೀಯ ಮೂಲದ ವ್ಯಕ್ತಿಗೆ ಸಿಂಗಾಪುರದಲ್ಲಿ ಆರು ತಿಂಗಳ ಜೈಲು ಶಿಕ್ಷೆ ವಿಧಿಸಲಾಗಿದೆ.

    2020ರಲ್ಲಿ ಭಾರತೀಯ ಮೂಲದ ಸೂರ್ಯ ಕೃಷ್ಣನ್ ಸಿಂಗಾಪುರದಲ್ಲಿ ವಾಸಿಸುತ್ತಿದ್ದ. ಈತನ ಮನೆಯಲ್ಲಿ ಮ್ಯಾನ್ಮಾರ್ ಮೂಲದ ಮಹಿಳೆ ಕೆಲಸ ಮಾಡುತ್ತಿದ್ದಳು. ಒಂದು ದಿನ ಆಕೆಯನ್ನು ಕೃಷ್ಣನ್ ಹೀನಾಯವಾಗಿ ಥಳಿಸಿದ್ದನು. ಪರಿಣಾಮ ಆಕೆ ಪೊಲೀಸರಿಗೆ, ಕೃಷ್ಣನ್ ಬೇಕೆಂದು ನನ್ನ ಮೇಲೆ ಹಲ್ಲೆ ಮಾಡಿದ್ದಾನೆ. ಹಲ್ಲೆಯಿಂದ ನನಗೆ ತಲೆ, ಭುಜ ಮತ್ತು ತೊಡೆಯಲ್ಲಿ ಗಾಯಗಳಾಗಿವೆ ಎಂದು ದೂರು ನೀಡಿದ್ದಳು. ವಿಚಾರಣೆ ನಡೆಸಿದ ಕೋರ್ಟ್ ಅಪರಾಧಿಗೆ 6 ತಿಂಗಳ ಜೈಲು ಶಿಕ್ಷೆಯನ್ನು ವಿಧಿಸಿ ಆದೇಶ ಪ್ರಕಟಿಸಿದೆ. ಇದನ್ನೂ ಓದಿ: ಧರ್ಮನಿಂದನೆ ಆರೋಪ – ಹಿಂದೂ ಶಿಕ್ಷಕನಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಪಾಕ್!

    ಸಂತ್ರಸ್ತೆ 27 ವರ್ಷದ ಮ್ಯಾನ್ಮಾರ್ ಪ್ರಜೆಯಾಗಿದ್ದು, ಕೃಷ್ಣನ್ ಅವರ ಸಹೋದರಿ ಮನೆಯಲ್ಲಿ ಕೆಲಸ ಮಾಡುತ್ತಿದ್ದಳು. ಕೃಷ್ಣನ್ ತನ್ನ ಸಹೋದರಿ ಮತ್ತು ಪೋಷಕರೊಂದಿಗೆ ಇಲ್ಲಿನ ಹೌಗಾಂಗ್ ಹೌಸಿಂಗ್ ಎಸ್ಟೇಟ್‍ನಲ್ಲಿರುವ ಫ್ಲಾಟ್‍ನಲ್ಲಿ ವಾಸಿಸುತ್ತಿದ್ದನು ಎಂದು ಪೊಲೀಸರಿಗೆ ತನಿಖೆ ವೇಳೆ ತಿಳಿದುಬಂದಿದೆ.

    ನಡೆದಿದ್ದು ಏನು?
    ಮೇ 29 2020 ರ ರಾತ್ರಿ, ಕೃಷ್ಣನ್ ಅವರ ಕುಟುಂಬವು ಅಪಾಟ್ರ್ಮೆಂಟ್ ನಲ್ಲಿ ಅವರ ತಂದೆಯ ಹುಟ್ಟುಹಬ್ಬವನ್ನು ಆಚರಿಸಲಾಗುತ್ತಿತ್ತು. ಹುಟ್ಟುಹಬ್ಬ ಪ್ರಾರಂಭವಾಗುವ ಮೊದಲು, ಕೃಷ್ಣನ್ ಮದ್ಯವನ್ನ ಸೇವಿಸಿ ಅಮಲಿನಲ್ಲಿದ್ದ. ಈ ವೇಳೆ ಕೃಷ್ಣನ್ ತಾಯಿ, ಮನೆಗೆಲಸದವಳಿಗೆ ಜೆಲ್ಲಿ ಮಾಡುವಂತೆ ಹೇಳುತ್ತಾಳೆ. ಆಗ ಆಕೆಯೂ ಅಡುಗೆ ಮನೆಗೆ ಹೋಗಿ ಮಾಡುತ್ತಿರುತ್ತಾಳೆ. ಈ ವೇಳೆ ಬಂದ ಕೃಷ್ಣನ್ ನನಗೂ ಜೆಲ್ಲಿ ಕೊಡು ಎಂದು ಕೇಳಿದ್ದಾನೆ. ಆಗ ಆಕೆ ನೀವು ತುಂಬಾ ತಿಂದ್ದೀರಾ, ಈಗ ಬೇಡ ಎಂದು ಹೇಳುತ್ತಾಳೆ. ಇದನ್ನೂ ಓದಿ: ಚರಂಡಿ ವಿವಾದ ಬಗೆಹರಿಸಲು ಹೋದ ಪೊಲೀಸರಿಗೆ ದೊಣ್ಣೆಯಿಂದ ಥಳಿಸಿದ ಗ್ರಾಮಸ್ಥರು!

    ಕೃಷ್ಣನ್ ತಾಯಿ ಆಕೆಯನ್ನು ಗದರುತ್ತಾನೆ. ಮನೆಗೆಲಸದವಳ ಕೆನ್ನೆಗೆ ಎರಡು-ಮೂರು ಬಾರಿ ಹೊಡೆಯುತ್ತಾನೆ. ಆಕೆ ಕೆಳಗೆ ಬೀಳುತ್ತಾಳೆ. ಮನೆಯವರೆಲ್ಲ ತಡೆದರೂ ಕೃಷ್ಣನ್ ಮನೆಗೆಲಸದವಳ ಮೇಲೆ ಹಲ್ಲೆ ಮಾಡಿದ್ದಾನೆ. ಪರಿಣಾಮ ಆಕೆ ಆಸ್ಪತ್ರೆ ಸೇರಿದ್ದು, ಗಂಭೀರ ಗಾಯವಾಗಿದೆ. ಪರಿಣಾಮ ಆಕೆ ಪೊಲೀಸರಿಗೆ ದೂರನ್ನು ಕೊಟ್ಟಿದ್ದು, ಕೃಷ್ಣನ್ ನನ್ನು ಬಂಧಿಸಿ ನ್ಯಾಯಾಲಯವು ಆರು ತಿಂಗಳ ಜೈಲು ಶಿಕ್ಷೆ ವಿಧಿಸಿದೆ.

  • ಕೋವಿಡ್‌ ಲಸಿಕೆಯ ಬೂಸ್ಟರ್‌ ಡೋಸ್‌ ಪಡೆದವರಲ್ಲೂ ಓಮಿಕ್ರಾನ್‌ ಪತ್ತೆ!

    ಕೋವಿಡ್‌ ಲಸಿಕೆಯ ಬೂಸ್ಟರ್‌ ಡೋಸ್‌ ಪಡೆದವರಲ್ಲೂ ಓಮಿಕ್ರಾನ್‌ ಪತ್ತೆ!

    ಸಿಂಗಾಪುರ: ಕೋವಿಡ್‌ ಮೂರನೇ ಅಲೆ ಭೀತಿ ಶುರುವಾಗಿರುವ ಹೊತ್ತಿನಲ್ಲೇ ಬೂಸ್ಟರ್‌ ಡೋಸ್‌ ಬಗ್ಗೆಯೂ ಭರವಸೆಯ ಮಾತುಗಳು ವ್ಯಕ್ತವಾಗಿದೆ. ಕೋವಿಡ್‌ ಲಸಿಕೆ ಪಡೆದವರಲ್ಲಿ ಮತ್ತಷ್ಟು ರೋಗನಿರೋಧಕ ಶಕ್ತಿ ಹೆಚ್ಚಿಸಲು ಬೂಸ್ಟರ್‌ ಡೋಸ್‌ ಸಹಕಾರಿಯಾಗಲಿದೆ ಎಂದು ಅಧ್ಯಯನಗಳು ಪ್ರತಿಪಾದಿಸಿವೆ. ಆದರೆ ಬೂಸ್ಟರ್‌ ಡೋಸ್‌ ಪಡೆದವರಲ್ಲೂ ಓಮಿಕ್ರಾನ್‌ ಸೋಂಕು ಪತ್ತೆಯಾಗಿರುವುದು ಆತಂಕ ಹೆಚ್ಚಿಸಿದೆ.

    ಹೌದು, ಕೋವಿಡ್‌-19 ಬೂಸ್ಟರ್‌ ಪಡೆದಿದ್ದರೂ ಸಿಂಗಾಪುರದ ಇಬ್ಬರಲ್ಲಿ ಓಮಿಕ್ರಾನ್‌ ಸೋಂಕು ಪತ್ತೆಯಾಗಿದೆ. ವಿಮಾನ ಪ್ರಯಾಣಿಕರ ಸೇವಾ ಕಾರ್ಯಕರ್ತೆಯಾಗಿ ಕೆಲಸ ನಿರ್ವಹಿಸುತ್ತಿರುವ 24 ವರ್ಷದ ಮಹಿಳೆಗೆ ಓಮಿಕ್ರಾನ್‌ ದೃಢಪಟ್ಟಿದೆ. ಸ್ಥಳೀಯವಾಗಿ ಪತ್ತೆಯಾದ ಮೊದಲ ಪ್ರಕರಣ ಇದಾಗಿದೆ. ಮತ್ತೊಬ್ಬ ಜರ್ಮನಿಯಿಂದ ಸಿಂಗಾಪುರಕ್ಕೆ ಆಗಮಿಸಿದ್ದ. ಇಬ್ಬರೂ ಬೂಸ್ಟರ್‌ ಡೋಸ್‌ ಪಡೆದುಕೊಂಡಿದ್ದರು ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ. ಇದನ್ನೂ ಓದಿ: ಓಮಿಕ್ರಾನ್‌ ಸೋಂಕಿತನ ಪತ್ನಿ, ಬಾಮೈದುನನಿಗೂ ಸೋಂಕು- ಗುಜರಾತ್‌ನಲ್ಲಿ 3ಕ್ಕೇರಿದ ಸಂಖ್ಯೆ

    OMICRON Karnataka

    ಫೈಜರ್‌ ಹಾಗೂ ಬಯೋನ್‌ಟೆಕ್‌ ಲಸಿಕಾ ತಯಾರಿಕಾ ಸಂಸ್ಥೆಗಳ ಆರಂಭಿಸಿರುವ ಲ್ಯಾಬ್‌ ಅಧ್ಯಯನಗಳು, ಓಮಿಕ್ರಾನ್‌ ರೂಪಾಂತರವನ್ನು ತಟಸ್ಥಗೊಳಿಸಲು ಕೋವಿಡ್‌ ಲಸಿಕೆಯ ಮೂರನೇ ಡೋಸ್‌ ಅಗತ್ಯವಿದೆ ಎಂದು ಪ್ರತಿಪಾದಿಸಿದ್ದವು. ಕೋವಿಡ್‌ ವಿರುದ್ಧ ಹೋರಾಡಲು ಎರಡು ಡೋಸ್‌ ಲಸಿಕೆ ಪಡೆಯುವುದು ಅಗತ್ಯ. ಹೆಚ್ಚುವರಿಯಾಗಿ ಬೂಸ್ಟರ್‌ ಡೋಸ್‌ ಪಡೆಯುವುದರಿಂದ ದೇಹದಲ್ಲಿ ರೋಗನಿರೋಧಕ ಶಕ್ತಿ ಮತ್ತಷ್ಟು ಹೆಚ್ಚುತ್ತದೆ ಎಂದು ಅಧ್ಯಯನ ತಿಳಿಸಿತ್ತು.

    ಓಮಿಕ್ರಾನ್‌ ಸೋಂಕಿಗೆ ತುತ್ತಾಗಿರುವ ಇಬ್ಬರನ್ನೂ ಐಸೋಲೇಷನ್‌ ಮಾಡಲಾಗಿದೆ. ಅವರ ಸಂಪರ್ಕಕ್ಕೆ ಬಂದವರನ್ನೂ 10 ದಿನ ಮನೆಯಲ್ಲೇ ಕ್ವಾರಂಟೈನ್‌ ಮಾಡಲಾಗಿದೆ. ಈ ವೇಳೆ ಅವರಿಗೆ ಅಗತ್ಯ ವಸ್ತುಗಳನ್ನು ಪೂರೈಸಲಾಗುವುದು ಎಂದು ಸಚಿವಾಲಯ ಮಾಹಿತಿ ನೀಡಿದೆ. ಇದನ್ನೂ ಓದಿ: ಕರ್ನಾಟಕ: ಓಮಿಕ್ರಾನ್‌ನಿಂದ ಗುಣಮುಖರಾಗಿ ಡಿಸ್ಚಾರ್ಜ್‌ ಆದವರಿಗೆ ಹೊಸ ಗೈಡ್‌ಲೈನ್ಸ್‌