ಗುವಾಹಟಿ: ಕಳೆದ ತಿಂಗಳು ಸಿಂಗಾಪುರದಲ್ಲಿ ನಡೆದ ಖ್ಯಾತ ಗಾಯಕ ಜುಬೀನ್ ಗರ್ಗ್ (Zubeen Garg) ಅನುಮಾನಾಸ್ಪದ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಗರ್ಗ್ ಸೋದರಸಂಬಂಧಿ, ಅಸ್ಸಾಂ ಪೊಲೀಸ್ ಇಲಾಖೆಯಲ್ಲಿ ಡಿಎಸ್‌ಪಿ ಹುದ್ದೆಯಲ್ಲಿರುವ ಸಂದೀಪನ್ ಗರ್ಗ್‌ನನ್ನು (Sandipan Garg) ಬಂಧಿಸಲಾಗಿದೆ. ಜುಬೀನ್ ಗರ್ಗ್ ನಿಧನದ ವೇಳೆ ಸಂದೀಪನ್ ಗರ್ಗ್ ಅವರ ಜೊತೆಗಿದ್ದರು ಎನ್ನಲಾಗಿದೆ.
ಸಂದೀಪನ್ ಗರ್ಗ್ ಅವರನ್ನು ಕಳೆದ ಕೆಲವು ದಿನಗಳಲ್ಲಿ ಹಲವಾರು ಬಾರಿ ವಿಚಾರಣೆ ನಡೆಸಲಾಯಿತು. ಇದೀಗ ಸಂದೀಪನ್ ಗಾರ್ಗ್ರನ್ನು ಬಂಧಿಸಿದ್ದೇವೆ. ಪ್ರಕರಣದ ಸಂಬಂಧ ನಾವು ಅಗತ್ಯ ಕಾನೂನು ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದೇವೆ ಎಂದು ಸಿಐಡಿ ವಿಶೇಷ ಡಿಜಿಪಿ ಮುನ್ನಾ ಪ್ರಸಾದ್ ಗುಪ್ತಾ ತಿಳಿಸಿದ್ದಾರೆ. ಇದನ್ನೂ ಓದಿ: ಐಷಾರಾಮಿ ವಾಹನ ಕಳ್ಳಸಾಗಣೆ ಕೇಸ್; ನಟ ಮಮ್ಮುಟ್ಟಿ, ದುಲ್ಕರ್ ಸಲ್ಮಾನ್ ಮನೆ ಮೇಲೆ ಇಡಿ ದಾಳಿ
ಈ ಪ್ರಕರಣದಲ್ಲಿ ಇದೀಗ ಐದನೇ ಆರೋಪಿಯ ಬಂಧನವಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈಶಾನ್ಯ ಭಾರತ ಉತ್ಸವದ ಮುಖ್ಯ ಸಂಘಟಕ ಶ್ಯಾಮಕಾನು ಮಹಾಂತ, ಗಾಯಕನ ವ್ಯವಸ್ಥಾಪಕ ಸಿದ್ಧಾರ್ಥ್ ಶರ್ಮಾ ಮತ್ತು ಅವರ ಇಬ್ಬರು ಬ್ಯಾಂಡ್‌ಮೇಟ್‌ಗಳಾದ ಶೇಖರ್ ಜ್ಯೋತಿ ಗೋಸ್ವಾಮಿ ಮತ್ತು ಅಮೃತ್ ಪ್ರಭಾ ಮಹಾಂತರನ್ನ ಈಗಾಗಲೇ ಬಂಧಿಸಲಾಗಿದೆ. ಆರೋಪಿಗಳೆಲ್ಲ ಪೊಲೀಸ್ ಕಸ್ಟಡಿಯಲ್ಲಿದ್ದಾರೆ.
ತನಿಖೆ ವೇಳೆ ಶೇಖರ್ ಜ್ಯೋತಿ ಗೋಸ್ವಾಮಿ, ಸಿಂಗಾಪುರದಲ್ಲಿ ಮ್ಯಾನೇಜರ್ ಸಿದ್ಧಾರ್ಥ್ ಶರ್ಮಾ ಮತ್ತು ಶ್ಯಾಮಕಾನು ಮಹಾಂತ ಸೇರಿ ಜುಬೀನ್‌ಗೆ ವಿಷಪ್ರಾಶನ ಮಾಡಿದ್ದಾರೆ ಎಂದು ಹೇಳಿದ್ದರು.
ಸರಿಗಮಪ ರಿಯಾಲಿಟಿ ಶೋ ಮೂಲಕ ಭಾರೀ ಜನಪ್ರಿಯತೆ ಗಳಿಸಿರುವ ಕನ್ನಡದ ಖ್ಯಾತ ಗಾಯಕಿ ಸುಹಾನಾ ಸಯ್ಯದ್ (Suhaana Syed) ಇದೀಗ ಪ್ರೀತಿಸುತ್ತಿರುವ ಹುಡುಗನ ಮಾಹಿತಿಯನ್ನು ರಿವೀಲ್ ಮಾಡಿದ್ದಾರೆ.
ಹಿಂದೊಮ್ಮೆ ಹಿಂದೂ ದೇವರ ಭಜನೆ ಹಾಡಿದ್ದಕ್ಕೆ ವಿವಾದಕ್ಕೀಡಾಗಿದ್ದ ಗಾಯಕಿ. ಶಿವಮೊಗ್ಗದ ಸಾಗರದ ಚೆಲುವೆ, ಸಿನಿಮಾಗಳಲ್ಲೂ ಹಿನ್ನೆಲೆ ಗಾಯಕನ ಮೂಲಕ ಜನಪ್ರಿಯತೆ ಗಳಿಸಿದ್ದಾರೆ. ಇದೀಗ ನಿರ್ಭೀತಿಯಿಂದ ತಾವು ಪ್ರೀತಿಸುತ್ತಿರುವ ಹುಡುಗನನ್ನು ಪರಿಚಯ ಮಾಡಿಸಿಕೊಟ್ಟಿದ್ದಾರೆ. ನಿತಿನ್ ಶಿವಾಂಶ್ ಜೊತೆ ಪ್ರೀತಿಯ ಗುಟ್ಟನ್ನ ರಟ್ಟು ಮಾಡಿರುವ ಸುಹಾನಾ ಸಯ್ಯದ್, ತಾವು ಈ ಪ್ರೀತಿಯಲ್ಲಿ ಎದುರಿಸಿದ ಸವಾಲಿನ ಕುರಿತು ಇನ್ಸ್ಟಾಗ್ರಾಂನಲ್ಲಿ ಬರೆದುಕೊಂಡಿದ್ದಾರೆ.
ರಂಗಭೂಮಿ ಕಲಾವಿದ ಆಗಿರುವ ನಿತಿನ್ ಶಿವಾಂಶ್ ಸಿನಿಮಾದಲ್ಲೂ ಸಕ್ರಿಯರಾಗಿದ್ದಾರೆ. ಶಾಲಾ ದಿನಗಳಲ್ಲೇ ನಿತಿನ್ ಶಿವಾಂಶ್ ಪರಿಚಯ ಇರೋದಾಗಿ ಸುಹಾನಾ ಹೇಳಿಕೊಂಡಿದ್ದಾರೆ. 16 ವರ್ಷಗಳ ಸ್ನೇಹ ಪ್ರೀತಿಯಾಗಿ ಚಿಗುರಿದೆ. ಇದೀಗ ಪ್ರೇಮಿಗಳು ಸಮಾಜದ ಮುಂದೆ ಬಲವಾಗಿ ಎದ್ದು ನಿಂತು ತಮ್ಮ ಪ್ರೀತಿಯ ವಿಚಾರ ಘೋಷಿಸಿದ್ದಾರೆ. ಪ್ರೀತಿಯ ಗುಟ್ಟನ್ನ ನಿಮ್ಮ ಮುಂದೆ ತೆರೆದಿಡುತ್ತೇವೆ ಎಂದು ಘೋಷಿಸಿದ ಸುಹಾನಾ ಸಯ್ಯದ್ ಜೋಡಿ ಫೋಟೋ ಹಂಚಿಕೊಂಡಿದ್ದಾರೆ.
ಪಬ್ಲಿಕ್ ಟಿವಿಗೆ ಗಾಯಕಿ ಸುಹಾನಾ ಸಯ್ಯದ್ ಪ್ರತಿಕ್ರಿಯೆ
ಪ್ರಶ್ನೆ: ಯಾವಾಗ ಮದುವೆ?
ಉತ್ತರ: ಮದುವೆ ದಿನಾಂಕ ಫಿಕ್ಸ್ ಆಗಿಲ್ಲ, ತಿಳಿಸುತ್ತೇವೆ.
ಪ್ರಶ್ನೆ: ಸಮುದಾಯದ ವಿರೋಧ ಬಂದಿಲ್ಲವೇ?
ಉತ್ತರ: ಈಗಾಗಲೇ ಸಾಕಷ್ಟು ಸವಾಲನ್ನು ಎದುರಿಸಿದ್ದೇನೆ. ವಿರೋಧ ನನಗೆ ಹೊಸದಲ್ಲ. ನಾನು ಹಿಂದೆಯೇ ಹೇಳಿದಂತೆ ನನಗೆ ಎರಡೂ ಧರ್ಮದಲ್ಲಿ ನಂಬಿಕೆ ಇದೆ. ಎರಡೂ ಧರ್ಮವನ್ನು ಪೂಜಿಸುತ್ತೇನೆ.
ಪ್ರಶ್ನೆ: ಎರಡೂ ಕುಟುಂಬಗಳು ಪರಸ್ಪರ ಒಪ್ಪಿಗೆ ನೀಡಿತೇ?
ಉತ್ತರ: ಅವರ ಕುಟುಂಬದಲ್ಲಿ ಒಪ್ಪಿದ್ದರು. ನಮ್ಮ ಕುಟುಂಬದಲ್ಲಿ ಒಪ್ಪಿಸುವುದು ಸ್ವಲ್ಪ ಕಷ್ಟವಾದರೂ ಕೊನೆಗೆ ಒಪ್ಪಿದ್ದಾರೆ. ವಿರೋಧಗಳು ಸಾಮಾನ್ಯ ಅಲ್ವ. ನಾನು ಇಷ್ಟಪಟ್ಟ ಹುಡುಗನ ಜೊತೆ ಜೀವನದಲ್ಲಿ ಸಂತೋಷವಾಗಿರುತ್ತೇನೆ ಎಂದು ತಿಳಿಸಿದಾಗ ಮನೆಯವರು ಒಪ್ಪಿಕೊಂಡರು.
ಪ್ರಶ್ನೆ: ಭಜನೆ ಹಾಡಿದ್ದಕ್ಕೆ ವಿರೋಧ ಬಂದಿತ್ತು. ಅಂತರಧರ್ಮ ವಿವಾಹ ಎಂದಾಗ ನಿಮ್ಮ ಧರ್ಮ ವಿರೋಧ ಮಾಡಲ್ವ?
ಉತ್ತರ: ನನ್ನ ಬದುಕಿನ ವಿಷಯ ಬಂದಾಗ ವೈಯಕ್ತಿಕ ನಿರ್ಧಾರ ತೆಗೆದುಕೊಳ್ಳುವುದರಲ್ಲಿ ಸ್ವತಂತ್ರಳು ಅಲ್ವ. ನಿಜವಾಗಿ ಹೇಳಬೇಕೆಂದರೆ ಇದುವರೆಗೂ ವಿರೋಧ ಬಂದಿಲ್ಲ.
ಇತ್ತೀಚೆಗೆ ಸೆಲೆಬ್ರಿಟಿಗಳು ವಿಚ್ಛೇದನ (Divorce) ತೆಗೆದುಕೊಳ್ಳುತ್ತಿರುವ ಪ್ರಕರಣ ಹೆಚ್ಚಾಗುತ್ತಿದೆ. ಪ್ರತಿ ದಿನ ಒಬ್ಬರಲ್ಲ ಒಬ್ಬರ ಡಿವೋರ್ಸ್ ಸುದ್ದಿಗಳು ಬೆಳಕಿಗೆ ಬರುತ್ತಲೇ ಇವೆ, ಈಗ ಆ ಸಾಲಿಗೆ ʻಕನ್ನಡ ಕೋಗಿಲೆʼ ರಿಯಾಲಿಟಿ ಶೋನ ಗಾಯಕಿ ಅಖಿಲಾ ಪಜಿಮಣ್ಣು ಕೂಡ ಸೇರಿಕೊಂಡಿದ್ದಾರೆ. ಮಧುರ ಕಂಠದಿಂದ ಜನಮನ ಗೆದ್ದಿದ್ದ ಅಖಿಲಾ ಪಜಿಮಣ್ಣು (Akhila Pajimannu) ಈಗ ದಾಂಪತ್ಯ ವಿಷಯವಾಗಿ ಸುದ್ದಿಯಲ್ಲಿದ್ದಾರೆ.
ಅಖಿಲಾ ಮೂರು ವರ್ಷಗಳ ಹಿಂದೆ ಅಮೆರಿಕದಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಧನಂಜಯ್ ಶರ್ಮಾ ಅವರೊಂದಿಗೆ ವಿವಾಹವಾಗಿದ್ದರು. ಆದ್ರೀಗ ಇವರ ದಾಂಪತ್ಯದಲ್ಲಿ ಬಿರುಕು ಮೂಡಿದೆ. ಇಬ್ಬರು ಪರಸ್ಪರ ಒಪ್ಪಿ ವಿಚ್ಛೇದನಕ್ಕೆ ಮುಂದಾಗಿದ್ದಾರೆ. ಇದನ್ನೂ ಓದಿ: ಮೋಹದ ಬಣ್ಣ ನೀಲಿ: ಯೋಗರಾಜ್ ಭಟ್ಟರ ಹೊಸ ಪ್ರಯೋಗ
ಗಾಯಕಿ ಅಖಿಲಾ ಪಜಿಮಣ್ಣು ಮತ್ತು ಪತಿ ಟಿ.ಆರ್ ಧನರಾಜ್ ಶರ್ಮಾ ಪರಸ್ಪರ ಒಪ್ಪಿ ಇದೇ ಜೂನ್ 12 ರಂದು ಪುತ್ತೂರು ಕೋರ್ಟ್‌ನಲ್ಲಿ (Puttur Court) ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಪುತ್ತೂರಿನ ವಕೀಲ ಮಹೇಶ್ ಕಜೆ ಮೂಲಕ ಅರ್ಜಿ ಸಲ್ಲಿಸಿದ್ದಾರೆ. ಇದನ್ನೂ ಓದಿ: ಮಾಜಿ ಪತಿಯ ಅಂತ್ಯಕ್ರಿಯೆ ನೆರವೇರಿಸಿದ ಕರಿಷ್ಮಾ ಕಪೂರ್
ಅಖಿಲಾ ಪಜಿಮಣ್ಣು ಹಾಗೂ ಧನಂಜಯ್ ಶರ್ಮಾ ಇಬ್ಬರದ್ದೂ ಅರೇಂಜ್ಡ್ ಮ್ಯಾರೇಜ್. ಎರಡು ಕುಟುಂಬಗಳ ಸಮ್ಮುಖದಲ್ಲಿ ಜೋಡಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿತ್ತು. ಎಲ್ಲವೂ ಖುಷಿ ಖುಷಿಯಾಗಿಯೇ ಇದ್ದ ಇಬ್ಬರ ದಾಂಪತ್ಯದಲ್ಲಿ ಅಂತಹದ್ದೇನಾಯ್ತೋ ಗೊತ್ತಿಲ್ಲ. ಬೇರೆಯಾಗುವುದಕ್ಕೆ ಇಬ್ಬರೂ ನಿರ್ಧರಿಸಿದ್ದಾರೆ. ಸದ್ಯ ಗಾಯಕಿಯ ಅಭಿಮಾನಿಗಳಿಗೆ ಈ ಸುದ್ದಿ ಬೇಸರ ಮೂಡಿಸಿದೆ.
ಬೆಂಗಳೂರು: ಕನ್ನಡಿಗರಿಗೆ ಅಪಮಾನ ಪ್ರಕರಣ ಸಂಬಂಧ ಗಾಯಕ ಸೋನು ನಿಗಮ್ ಪೊಲೀಸರ ಜೊತೆ ಕಣ್ಣಾಮುಚ್ಚಾಲೆ ಆಟ ಆಡುತ್ತಿದ್ದಾರೆ. ಪೊಲೀಸರ ಭೇಟಿಗೆ ಸಮಯ ಕೊಡದೇ ಸೋನು ನಿಗಮ್ (Sonu Nigam) ಸತಾಯಿಸುತ್ತಿದ್ದಾರೆ.
ಹಾಗಾದ್ರೆ ಹೈಕೋರ್ಟ್ ಮಾತಿಗೆ ಸೋನು ನಿಗಮ್ ಬೆಲೆ ನೀಡುತ್ತಿಲ್ವಾ ಎಂಬ ಪ್ರಶ್ನೆ ಎದ್ದಿದೆ. ಸದ್ಯ ಇನ್ನೆರೆಡು ದಿನ ಕಾದು ನೋಡಲು ಪೊಲೀಸರು ಚಿಂತನೆ ನಡೆಸಿದ್ದು, ನಂತವೂ ಸಮಯ ಕೊಟ್ಟಿಲ್ಲ ಅಂದರೆ ಕೋರ್ಟ್ ಗಮನಕ್ಕೆ ತರಲು ಅವಲಹಳ್ಳಿ ಪೊಲೀಸರು (Avalahlli Police) ನಿರ್ಧಾರ ಮಾಡಿದ್ದಾರೆ.
ಮದುವೆಯಾದ ಬಳಿಕ ಮೊದಲ ಬಾರಿಗೆ ಪತಿ ಅಭಿಷೇಕ್ (Abhishek) ಜೊತೆಗಿನ ಫೋಟೋವನ್ನು ಗಾಯಕಿ ಪೃಥ್ವಿ ಹಂಚಿಕೊಂಡಿದ್ದಾರೆ. ಪತಿ ಜೊತೆ ರಾಘವೇಂದ್ರ ಸ್ವಾಮಿ ದೇವಸ್ಥಾನ ಮಂತ್ರಾಲಯಕ್ಕೆ ಗಾಯಕಿ ಭೇಟಿ ನೀಡಿದ್ದಾರೆ. ಈ ದಂಪತಿಗೆ ಸೋಷಿಯಲ್ ಮೀಡಿಯಾದಲ್ಲಿ ಅಭಿಮಾನಿಗಳು ಶುಭಹಾರೈಸುತ್ತಿದ್ದಾರೆ. ಇದನ್ನೂ ಓದಿ:ಯಶ್ ತಾಯಿ ನಿರ್ಮಾಣದ ಸಿನಿಮಾದಲ್ಲಿ ಪೃಥ್ವಿ ಅಂಬರ್- ’ಕೊತ್ತಲವಾಡಿ’ ಚಿತ್ರದ ಪೋಸ್ಟರ್ ಔಟ್
ಇತ್ತೀಚೆಗೆ ಗಾಯಕಿ ಪೃಥ್ವಿ ಪ್ರೇಮ ವಿವಾಹವನ್ನು ತಂದೆ ಶಿವಪ್ರಸಾದ್ ಧಿಕ್ಕರಿಸಿದ್ದರು. ಜೀ ವಾಹಿನಿಯಲ್ಲೇ ಎಕ್ಸಿಕ್ಯೂಟಿವ್ ಪ್ರೊಡ್ಯೂಸರ್ ಕೆಲಸ ಮಾಡುತ್ತಿರುವ ಅಭಿಷೇಕ್ ಜೊತೆ ಮಗಳು ಪೃಥ್ವಿ ಮದುವೆಯಾಗಿದ್ದಕ್ಕೆ ಶಿವಪ್ರಸಾದ್ ಅಸಮಾಧಾನ ವ್ತಕ್ತಪಡಿಸಿದ್ದರು. ತಮ್ಮ ಮಗಳಿಗೆ ಹವ್ಯಕ ಹುಡುಗನನ್ನೇ ಹುಡುಕಿ ಮದುವೆ ಮಾಡುವ ಕನಸು ಹೊತ್ತಿದ್ದೆ. ಈ ವಿಷಯವನ್ನು ಜೀ ಕನ್ನಡವಾಹಿನಿಯ ಸರಿಗಮಪ ಶೋನಲ್ಲಿ ಜ್ಯೂರಿಯಾಗಿರೋ ಸಂಗೀತ ಶಿಕ್ಷಕ ನರಹರಿ ದೀಕ್ಷಿತ್ ಎನ್ನುವವರಿಗೆ ತಿಳಿಸಿದ್ದೆ. ಅವರು ಪೃಥ್ವಿ ಭಟ್ ಪ್ರೇಮಿಸುತ್ತಿರುವ ಹುಡುಗನ ಬಗ್ಗೆ ತಿಳಿಸಿದ್ದರು. ನಾನು ನನ್ನ ಮಗಳನ್ನು ಕೇಳಿದಾಗ, ನೀವು ತೋರಿಸಿದ ಹುಡುಗನ ಜೊತೆಯೇ ಮದುವೆ ಆಗುತ್ತೇನೆ ಅಂತ ದೇವರ ಮೇಲೆ ಪ್ರಮಾಣ ಮಾಡಿದ್ದಳು. ಆದರೆ, ಇದೀಗ ನನ್ನ ಮಗಳನ್ನು ಆ ನರಹರಿ ದೀಕ್ಷಿತ್ ಧಾರೆ ಎರೆದು ಕೊಟ್ಟಿದ್ದಾರೆ. ಮದುವೆಯ ವಿಷಯವನ್ನು ನನ್ನಿಂದ ಮುಚ್ಚಿಟ್ಟಿದ್ದಾರೆ ಅಂತ ಪೃಥ್ವಿ ಭಟ್ ತಂದೆ ಆಡಿಯೋ ಮೂಲಕ ಹೊರಹಾಕಿದ್ದರು.
ಮಗಳನ್ನು ಕೂರಿಸಿಕೊಂಡು ಮಾತಾಡಿದಾಗ, ಹುಡುಗನೊಬ್ಬ ನನ್ನ ಹಿಂದೆ ಬಿದ್ದಿರೋದು ನಿಜ. ಆದರೆ, ನೀವು ಇಷ್ಟಪಟ್ಟರೆ ಮಾತ್ರ ಮುಂದುವರೆಯುವೆ. ಇಲ್ಲದಿದ್ದರೆ, ನೀವು ತೋರಿಸಿದ ಹುಡುಗನ ಜೊತೆಯೇ ಹೊಸ ಜೀವನಕ್ಕೆ ಕಾಲಿಡುತ್ತೇನೆ ಅಂತ ಪೃಥ್ವಿ ಭಟ್ ತಂದೆ ತಾಯಿಯ ಮೇಲೆ ಪ್ರಮಾಣ ಮಾಡಿದ್ದರಂತೆ. ಆ ಪ್ರಮಾಣ ಮುರಿದುಕೊಂಡು ಮದುವೆ ಆಗಿದ್ದಾರೆ. ಹಾಗಾಗಿ ಆಕೆ ನನ್ನ ಮನೆಗೆ ಬರೋದು ಬೇಡ ಅಂತ ತಿಳಿಸಿದ್ದಾಗಿ ಪೃಥ್ವಿ ಅವರ ತಂದೆ ಅಸಮಾಧಾನ ಹೊರಹಾಕಿದ್ದರು. ಹವ್ಯಕ ಸಮಾಜವು ನರಹರಿ ದೀಕ್ಷಿತ್ ಅಂಥವರಿಗೆ ಪ್ರೋತ್ಸಾಹ ಮಾಡಬಾರದು ಅಂತ ಪೃಥ್ವಿ ತಂದೆ ಮನವಿ ಮಾಡಿಕೊಂಡಿದ್ದರು. ಇದ್ದೊಬ್ಬ ಮಗಳ ಧಾರೆಯರೆಯದಂತೆ ನರಹರಿ ಮಾಡಿದ್ದಾರೆ. ನಾನು ನೋವಿನಿಂದಲೇ ಈ ಸಂಗತಿಯನ್ನು ಹಂಚಿಕೊಳ್ಳುತ್ತಿರುವೆ ಅಂತ ಆಡಿಯೋವೊಂದನ್ನು ಮಾಡಿ, ಹವ್ಯಕ ಗ್ರೂಪ್‌ನಲ್ಲಿ ಪೋಸ್ಟ್ ಮಾಡಿದ್ದರು ಪೃಥ್ವಿ ತಂದೆ. ಆ ಆಡಿಯೋ ಸಖತ್ ವೈರಲ್ ಆಗಿತ್ತು.
ಬಳಿಕ ತಂದೆ ಆರೋಪಕ್ಕೆ ಗಾಯಕಿ ಪ್ರತಿಕ್ರಿಯಿಸಿ, ನನ್ನ ಮದುವೆ ವಿಚಾರದಲ್ಲಿ ಸಂಗೀತ ಶಿಕ್ಷಕ ನರಹರಿ ದೀಕ್ಷಿತ್ ಅವರ ಯಾವುದೇ ಕೈವಾಡವಿಲ್ಲ. ಮದುವೆ ಆಗುವ ದಿನ ನರಹರಿ ದೀಕ್ಷಿತ್ ಅವರಿಗೆ ವಿಷಯ ತಿಳಿಸಿ, ಅವರಿಂದ ಆಶೀರ್ವಾದ ಪಡೆದೆವು. ಇದರಲ್ಲಿ ಅವರ ತಪ್ಪೇನು ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಮದುವೆ ವಿಚಾರದಲ್ಲಿ ನನ್ನಿಂದ ತಪ್ಪಾಗಿದೆ ಕ್ಷಮಿಸಿ ಅಂತ ಆಡಿಯೋ ಮೂಲಕ ಮನವಿ ಮಾಡಿದ್ದರು.
ಮಾರ್ಚ್ 7ರಂದು ಅಭಿಷೇಕ್‌ನನ್ನು ಪ್ರೀತಿಸುತ್ತಿರುವ ವಿಚಾರವನ್ನು ಪಾಲಕರಿಗೆ ತಿಳಿಸಿದ್ದೆ. ಅಂದು ತಂದೆ ತಾಯಿಯ ಭಯಕ್ಕೆ ಸುಮ್ಮನಾದೆ ಎಂದಿದ್ದಾರೆ. ಪ್ರೀತಿ ವಿಚಾರ ತಿಳಿಸಿದ ನಂತರ ನನಗೆ ಕಡಿವಾಣ ಹಾಕುವ ಪ್ರಯತ್ನ ಮಾಡಿದರು. ಯಾವುದೇ ಕಾರ್ಯಕ್ರಮ, ಶೋಗಳಿಗೂ ಕಳುಹಿಸಿ ಕೊಡಲು ನಿರಾಕರಿಸಿದರು. ನನ್ನನ್ನು ಕಟ್ಟಿ ಹಾಕುವ ಪ್ರಯತ್ನ ಮಾಡಿದ್ದರಿಂದ ಅನಿವಾರ್ಯವಾಗಿ ಮನೆಯಿಂದ ಆಚೆ ಹೋಗಿ ಮದುವೆ ಆಗಿರೋದಾಗಿ ಆಡಿಯೋ ಮೂಲಕ ಪೃಥ್ವಿ ಭಟ್ ಸ್ಪಷ್ಟನೆ ನೀಡಿದ್ದರು.
ಜೀ ಕನ್ನಡ ವಾಹಿನಿಯ ಸರಿಗಮಪ ರಿಯಾಲಿಟಿ ಶೋನಲ್ಲಿ ಗಾಯಕಿಯಾಗಿ ಮಿಂಚಿರುವ, ಕನ್ನಡದ ಯುವ ಗಾಯಕಿ ಪೃಥ್ವಿ ಭಟ್ (Prithwi Bhat) ಮನೆಯವರ ವಿರೋಧದ ನಡುವೆ ಪ್ರೇಮವಿವಾಹ ಆಗಿದ್ದಾರೆ. ಜೀ ವಾಹಿನಿಯಲ್ಲೇ ಎಕ್ಸಿಕ್ಯೂಟಿವ್ ಪ್ರೊಡ್ಯೂಸರ್ ಕೆಲಸ ಮಾಡುತ್ತಿರುವ ಅಭಿಷೇಕ್ (Abhishek) ಎನ್ನುವವರ ಜೊತೆ ಮಾರ್ಚ್ 27ರಂದು ವಿವಾಹವಾಗಿದ್ದು, ಇಪ್ಪತ್ತು ದಿನಗಳ ನಂತರ ಗಾಯಕಿಯ ತಂದೆ ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ:ಪ್ರಣಿತಾ ಮಗನ ನಾಮಕರಣದ ಸಂಭ್ರಮದಲ್ಲಿ ಸ್ಯಾಂಡಲ್‌ವುಡ್ ತಾರೆಯರು
ತಮ್ಮ ಮಗಳಿಗೆ ಹವ್ಯಕ ಹುಡುಗನನ್ನೇ ಹುಡುಕಿ ಮದುವೆ ಮಾಡುವ ಕನಸು ಹೊತ್ತಿದ್ದೆ. ಈ ವಿಷಯವನ್ನು ಜೀ ಕನ್ನಡವಾಹಿನಿಯ ಸರಿಗಮಪ ಶೋನಲ್ಲಿ ಜ್ಯೂರಿಯಾಗಿರೋ ಸಂಗೀತ ಶಿಕ್ಷಕ ನರಹರಿ ದೀಕ್ಷಿತ್ ಎನ್ನುವವರಿಗೆ ತಿಳಿಸಿದ್ದೆ. ಅವರು ಪೃಥ್ವಿ ಭಟ್ ಪ್ರೇಮಿಸುತ್ತಿರುವ ಹುಡುಗನ ಬಗ್ಗೆ ತಿಳಿಸಿದ್ದರು. ನಾನು ನನ್ನ ಮಗಳನ್ನು ಕೇಳಿದಾಗ, ನೀವು ತೋರಿಸಿದ ಹುಡುಗನ ಜೊತೆಯೇ ಮದುವೆ ಆಗುತ್ತೇನೆ ಅಂತ ದೇವರ ಮೇಲೆ ಪ್ರಮಾಣ ಮಾಡಿದ್ದಳು. ಆದರೆ, ಇದೀಗ ನನ್ನ ಮಗಳನ್ನು ಆ ನರಹರಿ ದೀಕ್ಷಿತ್ ಧಾರೆ ಎರೆದು ಕೊಟ್ಟಿದ್ದಾರೆ. ಮದುವೆಯ ವಿಷಯವನ್ನು ನನ್ನಿಂದ ಮುಚ್ಚಿಟ್ಟಿದ್ದಾರೆ ಅಂತ ಪೃಥ್ವಿ ಭಟ್ ತಂದೆ (Father) ಆಡಿಯೋ ಮೂಲಕ ಹೊರಹಾಕಿದ್ದಾರೆ.
ಮಗಳನ್ನು ಕೂರಿಸಿಕೊಂಡು ಮಾತಾಡಿದಾಗ, ಹುಡುಗನೊಬ್ಬ ನನ್ನ ಹಿಂದೆ ಬಿದ್ದಿರೋದು ನಿಜ. ಆದರೆ, ನೀವು ಇಷ್ಟಪಟ್ಟರೆ ಮಾತ್ರ ಮುಂದುವರೆಯುವೆ. ಇಲ್ಲದಿದ್ದರೆ, ನೀವು ತೋರಿಸಿದ ಹುಡುಗನ ಜೊತೆಯೇ ಹೊಸ ಜೀವನಕ್ಕೆ ಕಾಲಿಡುತ್ತೇನೆ ಅಂತ ಪೃಥ್ವಿ ಭಟ್ ತಂದೆ ತಾಯಿಯ ಮೇಲೆ ಪ್ರಮಾಣ ಮಾಡಿದ್ದರಂತೆ. ಆ ಪ್ರಮಾಣ ಮುರಿದುಕೊಂಡು ಮದುವೆ ಆಗಿದ್ದಾರೆ. ಹಾಗಾಗಿ ಆಕೆ ನನ್ನ ಮನೆಗೆ ಬರೋದು ಬೇಡ ಅಂತ ತಿಳಿಸಿದ್ದಾಗಿ ಪೃಥ್ವಿ ಅವರ ತಂದೆಯು ಹೇಳಿಕೊಂಡಿದ್ದಾರೆ. ಇದನ್ನೂ ಓದಿ:ಮಧ್ಯಪ್ರದೇಶ ಸಿಎಂ ಭೇಟಿಯಾದ ರಾಕಿಂಗ್ ಸ್ಟಾರ್ ಯಶ್
ಹವ್ಯಕ ಸಮಾಜವು ನರಹರಿ ದೀಕ್ಷಿತ್ (Narahari Dheekshith) ಅಂಥವರಿಗೆ ಪ್ರೋತ್ಸಾಹ ಮಾಡಬಾರದು ಅಂತ ಪೃಥ್ವಿ ತಂದೆ ಮನವಿ ಮಾಡಿಕೊಂಡಿದ್ದಾರೆ. ಇದ್ದೊಬ್ಬ ಮಗಳ ಧಾರೆಯರೆಯದಂತೆ ನರಹರಿ ಮಾಡಿದ್ದಾರೆ. ನಾನು ನೋವಿನಿಂದಲೇ ಈ ಸಂಗತಿಯನ್ನು ಹಂಚಿಕೊಳ್ಳುತ್ತಿರುವೆ ಅಂತ ಆಡಿಯೋವೊಂದನ್ನು ಮಾಡಿ, ಹವ್ಯಕ ಗ್ರೂಪ್‌ನಲ್ಲಿ ಪೋಸ್ಟ್ ಮಾಡಿದ್ದಾರೆ ಪೃಥ್ವಿ ತಂದೆ. ಆ ಆಡಿಯೋ ಈಗ ವೈರಲ್ ಆಗಿದೆ.
73 ವರ್ಷದ ಮೊಗಿಲಯ್ಯ ಅವರು ಹಲವು ದಿನಗಳಿಂದ ಮೂತ್ರಪಿಂಡ ಕಾಯಿಲೆಯಿಂದ ಬಳಲುತ್ತಿದ್ದರು. ಅದಕ್ಕಾಗಿ ಸೂಕ್ತ ಚಿಕಿತ್ಸೆ ಕೂಡ ಪಡೆಯುತ್ತಿದ್ದರು. ಆದರೆ ಇಂದು ಮೊಗಿಲಯ್ಯ ಆಸ್ಪತ್ರೆಯಲ್ಲಿ ಇಹಲೋಕ ತ್ಯಜಿಸಿದ್ದಾರೆ.
ಅಂದಹಾಗೆ, ‘ಬಲಗಂ’ (Balagam Film) ಸಿನಿಮಾದಲ್ಲಿ ಹಾಡುವ ಮೂಲಕ ಖ್ಯಾತಿ ಗಳಿಸಿದರು. ಪವನ್ ಕಲ್ಯಾಣ್ ನಟನೆಯ ‘ಭೀಮ್ಲಾ ನಾಯಕ್’ಗಾಗಿ ಶೀರ್ಷಿಕೆ ಗೀತೆಯನ್ನು ಹಾಡಿದರು.
ಬಹುಭಾಷಾ ಗಾಯಕಿ ಉಷಾ ಉತ್ತುಪ್ (Usha Uthup) ಅವರು ಪತಿ ಜಾನಿ ಚಾಕೋ ಉತ್ತುಪ್ ಜು.8ರಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. 78ನೇ ವಯಸ್ಸಿಗೆ ಇಹಲೋಕ ತ್ಯಜಿಸಿರುವ ಜಾನಿ ಚಾಕೋಗೆ (Jani Chacko) ಕುಟುಂಬಸ್ಥರು ಆಪ್ತರು ಕಂಬನಿ ಮಿಡಿದಿದ್ದಾರೆ. ಇದನ್ನೂ ಓದಿ:‘ಭೈರವನ ಕೊನೆ ಪಾಠ’ ಹೇಳೋಕೆ ಹೊಸ ಗೆಟಪ್‌ನಲ್ಲಿ ಬಂದ ಶಿವಣ್ಣ
ಜು.8ರಂದು ತಮ್ಮ ಕೋಲ್ಕತ್ತಾದ ನಿವಾಸದಲ್ಲಿ ಟಿವಿ ನೋಡ್ತಿದ್ದ ವೇಳೆ ಹೃದಯಾಘಾತವಾಗಿದೆ. ಆ ಕೂಡಲೇ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಉಷಾ ಉತ್ತುಪ್ ಪತಿ ನಿಧನರಾಗಿದ್ದಾರೆ. ಇಂದು (ಜು.9) ಜಾನಿ ಚಾಕೋ ಅವರ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ಬಹುಭಾಷಾ ಗಾಯಕಿಯಾಗಿ ಹೆಸರು ಮಾಡಿರುವ ಉಷಾ ಉತ್ತುಪ್ ಅವರು ಕನ್ನಡದ ‘ಸ್ವಾಮಿ’ ಚಿತ್ರದ ರಂಬೆ ನಿನಗೆ, ಇತ್ತೀಚೆಗೆ ತೆರೆಕಂಡ ಅಭಿಷೇಕ್ ಅಂಬರೀಶ್, ರಚಿತಾರಾಮ್ ನಟನೆಯ ‘ಬ್ಯಾಡ್ ಮ್ಯಾನರ್ಸ್’ ಚಿತ್ರದ ಟೈಟಲ್ ಟ್ರ್ಯಾಕ್ ಹಾಡಿದ್ದರು.
ಕಿರುತೆರೆ ನಟಿ ಜ್ಯೋತಿ ರೈ (Jyoti Rai) ಅಶ್ಲೀಲ ವಿಡಿಯೋ ಪ್ರಕರಣದಿಂದ ನೊಂದಿದ್ದಾರೆ. ಈ ಬೇಸರದ ನಡುವೆಯೂ ಪದ್ಮಶ್ರೀ ವಿಜೇತ ಮೊಗಿಲಯ್ಯ (Mogiliah) ಅವರಿಗೆ ಧನ ಸಹಾಯ ಮಾಡಿದ್ದಾರೆ. ಅವರ ಆರ್ಥಿಕ ಸಂಕಷ್ಟಕ್ಕೆ ನೆರವಾಗಿದ್ದಾರೆ. ನಟಿಯ ನಡೆಗೆ ಅಭಿಮಾನಿಗಳು ಹೊಗಳಿದ್ದಾರೆ.
ಜನಪದ ಗಾಯಕ (Folklorist) ಪದ್ಮಶ್ರೀ ಪ್ರಶಸ್ತಿ ವಿಜೇತ ಮೊಗಿಲಯ್ಯ ತೀವ್ರ ಬಡತನದಲ್ಲಿದ್ದು, ಜೀವನ ನಿರ್ವಹಣೆಗಾಗಿ ಗಾರೆ ಕೆಲಸ ಮಾಡುತ್ತಿದ್ದರು. ಅವರು ಗಾರೆ ಕೆಲಸ ಮಾಡುತ್ತಿರುವ ಚಿತ್ರಗಳು, ವಿಡಿಯೊ ವೈರಲ್ ಆಗಿತ್ತು. ಹೀಗಾಗಿ ತನ್ನ ನೋವನ್ನು ನುಂಗಿ ಜ್ಯೋತಿ ರೈ ಅವರು ಈ ಹಿರಿಯ ಕಲಾವಿದರ ನೆರವಿಗೆ ಧಾವಿಸಿದ್ದಾರೆ.
ಅಕ್ಷಯ ತೃತೀಯ ದಿನದಂದು ಜ್ಯೋತಿ ರೈ ಅವರು ಮೊಗಿಲಯ್ಯ ಅವರಿಗೆ 50 ಸಾವಿರ ರೂ. ಧನ ಸಹಾಯ ನೀಡಿದ್ದಾರೆ. ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಅಕ್ಷಯ ತೃತೀಯದ ಪುಣ್ಯ ದಿನದಂದು ಪದ್ಮಶ್ರೀ ಮೊಗಿಲಯ್ಯ ಅವರಿಗೆ ನಾನು 50 ಸಾವಿರ ರೂ.ಗಳ ಆರ್ಥಿಕ ನೆರವನ್ನು ನೀಡಿದೆ. ಮೊಗಿಲಯ್ಯ ಅಷ್ಟು ಜನಪ್ರಿಯರಾಗಿದ್ದರೂ ತಮ್ಮ ಖಾಸಗಿ ಜೀವನ ಹಾಗೂ ವೃತ್ತಿಯಲ್ಲಿ ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದರು. ಅವರು ನಡೆಸಿದ ಸುದ್ದಿಗೋಷ್ಠಿಯಿಂದಾಗಿ ಅವರ ಕಷ್ಟಗಳು ನನಗೆ ತಿಳಿದು ಬಂತು ಎಂದು ಜ್ಯೋತಿ ರೈ ಹೇಳಿದ್ದಾರೆ.
ಮುಂದುವರಿದು, ಸದ್ಯಕ್ಕೆ ನಾನು ಸಹ ಕಷ್ಟದ ದಿನಗಳನ್ನು ಕಳೆಯುತ್ತಿದ್ದೇನೆ. ಆದರೆ ಅವರ ಕಷ್ಟ ಕೇಳಿದಾಗ ನನ್ನೊಳಗೆ ಮೂಡಿದ ಬೆಳಕು, ಮೊಗಿಲಯ್ಯ ಅವರನ್ನು ಭೇಟಿಯಾಗಿ ಸಹಾಯ ಮಾಡಲು ಪ್ರೇರೇಪಿಸಿತು. ಹೀಗಾಗಿ ಅವರಿಗೆ ಸಹಾಯ ಮಾಡಿದೆ. ಅವರಿಗೆ ಇನ್ನಷ್ಟು ಸಹಾಯ ಮಾಡುವ ಆಸೆಯಿದೆ. ನನ್ನಿಂದ ಸಾಧ್ಯವಾಗಿದ್ದನ್ನು ನಾನು ಮಾಡಿದ್ದೇನೆ. ಇನ್ಯಾರಿಗಾದರೂ ಮೊಗಿಲಯ್ಯ ಅವರಿಗೆ ಸಹಾಯ ಮಾಡುವ ಇಚ್ಛೆಯಿದ್ದರೆ ಬನ್ನಿ ಎಲ್ಲರೂ ಒಟ್ಟು ಸೇರಿ ನೆರವಾಗೋಣ ಎಂದು ಕರೆ ನೀಡಿದ್ದಾರೆ.
ಈ ಹಿಂದೆ ಪದ್ಮಶ್ರೀ ಮೊಗಿಲಯ್ಯ ಬಹಳ ಒಳ್ಳೆಯ ಜನಪದ ಗಾಯಕರು. ಪವನ್ ಕಲ್ಯಾಣ್ ನಟಿಸಿರುವ ‘ಭೀಮ್ಲಾ ನಾಯಕ್’ ಸಿನಿಮಾದಲ್ಲಿ ಹಾಡೊಂದನ್ನು ಹಾಡಿದ್ದಾರೆ. ಆ ಹಾಡು ಸೂಪರ್ ಹಿಟ್ ಆಗಿದೆ. ಭೀಮ್ಲಾ ನಾಯಕ್ ಸಿನಿಮಾದ ಶೂಟಿಂಗ್ ಸಮಯದಲ್ಲಿ ಪವನ್ ಕಲ್ಯಾಣ್, ಮೊಗಿಲಯ್ಯಗೆ ಆರ್ಥಿಕ ಸಹಾಯ ಮಾಡಿದ್ದರು.
ದಕ್ಷಿಣ ಕೊರಿಯಾದ ಗಾಯಕಿ (Singer) ಪಾರ್ಕ್ ಬೋ ರಾಮ್ (Park Bo Ram) ತಮ್ಮ 30ನೇ ವಯಸ್ಸಿಗೆ ವಿಧಿವಶರಾಗಿದ್ದಾರೆ. ಏ.11ರಂದು ಗಾಯಕಿ ನಿಧನರಾಗಿದ್ದಾರೆ. ಏಜೆನ್ಸಿ ಕ್ಸಾನಾಡು ಎಂಟರ್‌ಟೈನ್‌ಮೆಂಟ್ ಕಡೆಯಿಂದ ಗಾಯಕಿಯ ಸಾವಿನ ಕುರಿತು ಅಧಿಕೃತ ಮಾಹಿತಿ ಸಿಕ್ಕಿದೆ.
ಅವರ ಹಠಾತ್ ನಿಧನದ ಬಗ್ಗೆ ಅವರ ಕುಟುಂಬದಕ್ಕೆ ಮತ್ತು ಆಪ್ತರಿಗೆ ಶಾಕ್ ಕೊಟ್ಟಿದೆ. ಗಾಯಕಿಯ ಅನುಮಾನಾಸ್ಪದ ಸಾವಿನ ಬಗ್ಗೆ ತನಿಖೆ ನಡೆಯುತ್ತಿದೆ. ಪೊಲೀಸರು ಈ ಬಗ್ಗೆ ವಿಚಾರಣೆ ಕೈಗೊಂಡಿದ್ದಾರೆ. ಇದನ್ನೂ ಓದಿ:ಚುನಾವಣಾ ಪ್ರಚಾರದಲ್ಲಿದ್ದ ಖಳನಟ ಅರುಳ್ ಮಣಿ ಹೃದಯಾಘಾತದಿಂದ ನಿಧನ
ಅಂದಹಾಗೆ, ಈ ವರ್ಷದ ಕೊನೆಯಲ್ಲಿ 2 ಹಾಡುಗಳನ್ನು ಬ್ಯಾಕ್ ಟು ಬ್ಯಾಕ್ ರಿಲೀಸ್ ಮಾಡುವ ಬಗ್ಗೆ ಪಾರ್ಕ್ ಬೋ ರಾಮ್ ಪ್ಲ್ಯಾನ್ ಮಾಡಿದ್ದರು. ಗಾಯಕಿ ತಮ್ಮ 17ನೇ ವಯಸ್ಸಿಗೆ ಸೂಪರ್ ಸ್ಟಾರ್ ಕೆ2 ಎಂಬ ಗಾಯನ ಸ್ಪರ್ಧೆಯಲ್ಲಿ ಸ್ಪರ್ಧಿಸುವ ಮೂಲಕ ಸಂಗೀತ ಕ್ಷೇತ್ರಕ್ಕೆ ಎಂಟ್ರಿ ಕೊಟ್ಟಿದ್ದರು.