Tag: Sira

  • ಶಿರಾ ರಣಕಣದಲ್ಲಿ ಇಂದು ಘಟಾನುಘಟಿಗಳ ಪ್ರಚಾರ- ರಾಜಹುಲಿ, ದಳಪತಿಯಿಂದ ಭರ್ಜರಿ ಮತಬೇಟೆ

    ಶಿರಾ ರಣಕಣದಲ್ಲಿ ಇಂದು ಘಟಾನುಘಟಿಗಳ ಪ್ರಚಾರ- ರಾಜಹುಲಿ, ದಳಪತಿಯಿಂದ ಭರ್ಜರಿ ಮತಬೇಟೆ

    ತುಮಕೂರು: ಶಿರಾ ಉಪ ಚುನಾವಣಾ ಅಖಾಡ ಅಕ್ಷರಶಃ ಇಂದು ರಂಗೇರಲಿದೆ. ಹಾಲಿ, ಮಾಜಿ ಸಿಎಂಗಳ ಅಬ್ಬರದ ಪ್ರಚಾರ ನಡೆಯಲಿದೆ. ಈ ಮಧ್ಯೆ ರೇಣುಕಾರ್ಚಾಯ ಮತ್ತೆ ಎಡವಟ್ಟು ಮಾಡಿಕೊಂಡಿದ್ದಾರೆ.

    ಶಿರಾ ಬೈ ಎಲೆಕ್ಷನ್ ಬಿಜೆಪಿಗೆ ಪ್ರತಿಷ್ಠೆಯಾದ್ರೆ, ಜೆಡಿಎಸ್‍ಗೆ ತಮ್ಮ ಕ್ಷೇತ್ರವನ್ನು ಉಳಿಸಿಕೊಳ್ಳುವ ಹಠ. ಹೀಗಾಗಿ ಉಪಕದನ ಪ್ರಚಾರ ಕಣ ರಾಜ್ಯದ ಘಟಾನುಘಟಿ ನಾಯಕರಿಂದ ತುಂಬಿ ಹೋಗಿದೆ. ಇಂದು ಬಿಜೆಪಿ ಅಭ್ಯರ್ಥಿ ರಾಜೇಶ್‍ಗೌಡ ಪರ ಸಿಎಂ ಯಡಿಯೂರಪ್ಪ ಮತಬೇಟೆಗಿಳಿಯಲಿದ್ದಾರೆ. ಬೆಳಗ್ಗೆ 11 ಗಂಟೆಗೆ ಮದಲೂರು ಗ್ರಾಮದಲ್ಲಿ ಸಿಎಂ ಬೃಹತ್ ಸಮಾವೇಶದಲ್ಲಿ ನಡೆಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಶಿರಾ ನಗರದಲ್ಲಿ ಬಿಎಸ್‍ವೈ ರ್ಯಾಲಿ ನಡೆಸಲಿದ್ದಾರೆ. ಆ ಮೂಲಕ ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡ ಪರ ಮತಯಾಚಿಸಲಿದ್ದಾರೆ. ಅಷ್ಟಕ್ಕೂ ಶಿರಾದಲ್ಲಿ ಬಿಎಸ್‍ವೈ ಭರ್ಜರಿ ಪ್ರಚಾರ ನಡೆಸುತ್ತಿರುವ ಹಿಂದೆ ಇರುವ ಅಸಲಿ ಕಾರಣವೇ ಬೇರೆ ಇದೆ.

    ಸಿಎಂ ಅವರು ಈಗಾಗಲೇ ಆರ್.ಆರ್ ನಗರ, ಶಿರಾ ರಿಪೋರ್ಟ್ ತರಿಸಿಕೊಂಡಿದ್ದಾರೆ. ಹೀಗಾಗಿ ಸಿಎಂ ಕೈನಲ್ಲಿ 2 ಕ್ಷೇತ್ರಗಳ ಗುಪ್ತಚರ ಇಲಾಖೆ ವರದಿ ಇದೆ. ಪಕ್ಷದ ಆಂತರಿಕ ವರದಿ, ಖಾಸಗಿ ವರದಿಯನ್ನೂ ತರಿಸಿಕೊಂಡಿದ್ದಾರೆ. ಶಿರಾದಲ್ಲಿ ಬಿಜೆಪಿಗೆ ಅಲ್ಪ ಹಿನ್ನಡೆ ಇದೆ ಎಂದು ವರದಿಗಳು ತಿಳಿಸಿವೆ. ಶಿರಾದಲ್ಲಿ ಲಿಂಗಾಯತ, ಗೊಲ್ಲ ಸಮುದಾಯಗಳ ಮತಬ್ಯಾಂಕ್ ಬಗ್ಗೆ ಚಿಂತೆಯಿಲ್ಲ. ಒಕ್ಕಲಿಗ ಹಾಗೂ ಅಹಿಂದ ವರ್ಗಗಳ ಮತಗಳ ಬಗ್ಗೆ ಸಿಎಂಗೆ ಆತಂಕ ಇದೆ. ಹೀಗಾಗಿ ಅಲ್ಪಸಂಖ್ಯಾತರು ಹಾಗೂ ಅಹಿಂದ ಮತ ಸೆಳೆಯಲು ಸಿಎಂ ಪ್ಲಾನ್ ರೂಪಿಸಿದ್ದಾರೆ. ಶಿರಾದಲ್ಲಿ ಗೆಲುವಿಗೆ ರಣತಂತ್ರ ರೂಪಿಸಿ ಅದರಂತೆ ಸಿಎಂ ಪ್ರಚಾರ ನಡೆಸಲಿದ್ದಾರೆ.

    ಇತ್ತ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ, ಎಚ್.ಡಿ ದೇವೇಗೌಡ, ಪ್ರಜ್ವಲ್ ರೇವಣ್ಣ ತಮ್ಮ ಅಭ್ಯರ್ಥಿ ಅಮ್ಮಾಜಮ್ಮ ಪರ ಇಂದು ಶಿರಾದಲ್ಲಿ ಪ್ರಚಾರ ನಡೆಸಲಿದ್ದಾರೆ. ಆ ಮೂಲಕ ಶಿರಾ ಕ್ಷೇತ್ರದಲ್ಲಿ ಇಂದು ಸಿಎಂ, ಮಾಜಿ ಸಿಎಂ, ಮಾಜಿ ಪ್ರಧಾನಿಯ ಅಬ್ಬರ ಕಂಡುಬರಲಿದೆ.

    ಶಿರಾದಲ್ಲಿ ಚುನಾವಣಾ ಪ್ರಚಾರದ ವೇಳೆ ರೇಣುಕಾಚಾರ್ಯ ಎಡವಟ್ಟು ಮಾಡಿಕೊಂಡಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರ ಬಳಿಯೇ ಹೋಗಿ ಬಿಜೆಪಿ ಪರ ಮತಯಾಚಿಸಿದ್ದಾರೆ. ಇದರಿಂದ ರೊಚ್ಚಿಗೆದ್ದ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಗೆಲ್ಲೋಕೆ ಬಿಡಲ್ಲ ಅಂತ ಕೂಗಿ ಟಾಂಗ್ ಕೊಟ್ರು. ಕಕ್ಕಾಬಿಕ್ಕಿಯಾದ ರೇಣುಕಾಚಾರ್ಯ ಸಾವರಿಸಿಕೊಂಡು 10ನೇ ತಾರೀಕು ಸಿಗೋಣ ಅಂತಾ ನಿರ್ಗಮಿಸಿದ ಪ್ರಸಂಗ ನಡೆಯಿತು.

  • ಬಸ್ ಡಿಕ್ಕಿಯಲ್ಲಿದ್ದ 64 ಲಕ್ಷ ನಗದು ಸೀಜ್

    ಬಸ್ ಡಿಕ್ಕಿಯಲ್ಲಿದ್ದ 64 ಲಕ್ಷ ನಗದು ಸೀಜ್

    ತುಮಕೂರು: ಖಾಸಗಿ ಬಸ್ಸಿನ ಡಿಕ್ಕಿಯಲ್ಲಿ 64,40,000 ನಗದು ಪತ್ತೆಯಾಗಿದೆ.

    ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಕಳ್ಳಂಬೆಳ್ಳ ಚುನಾವಣಾ ಚೆಕ್ ಪೋಸ್ಟ್ ನಲ್ಲಿ ಸಿಕ್ಕಿರುವ ಯಾವುದೇ ದಾಖಲೆ ಇಲ್ಲದ 64,40,000 ಹಣ ಸಿಕ್ಕಿದೆ.

    ರಾಷ್ಟ್ರೀಯ ಹೆದ್ದಾರಿ 48 ರಲ್ಲಿರೋ ಕಳ್ಳಂಬೆಳ್ಳ ಚೆಕ್ ಪೋಸ್ಟ್ ನಲ್ಲಿ ಈ ಹಣ ಖಾಸಗಿ ಬಸ್ಸಿನ ಡಿಕ್ಕಿಯಲ್ಲಿ ಸಿಕ್ಕಿದೆ. ಹಣವನ್ನು ಚುನಾವಣಾಧಿಕಾರಿ ನಂದಿನಿದೇವಿ ನೇತೃತ್ವದಲ್ಲಿ ವಶಕ್ಕೆ ಪಡೆದುಕೊಳ್ಳಲಾಗಿದೆ.

  • ವಿಜಯದಶಮಿ ಬಳಿಕ ಸಿಎಂ ಯಡಿಯೂರಪ್ಪ ಅಖಾಡಕ್ಕೆ!

    ವಿಜಯದಶಮಿ ಬಳಿಕ ಸಿಎಂ ಯಡಿಯೂರಪ್ಪ ಅಖಾಡಕ್ಕೆ!

    ಬೆಂಗಳೂರು: ವಿಜಯದಶಮಿಯ ಬಳಿಕ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಚುನಾವಣಾ ಅಖಾಡಕ್ಕೆ ಇಳಿಯಲಿದ್ದಾರೆ.

    ಹೌದು. ಸೋಮವಾರದ ಬಳಿಕ ಬೈ ಎಲೆಕ್ಷನ್ ಕುರಿತು ಸಿಎಂ ಕ್ಯಾಂಪೇನ್ ಮಾಡಲಿದ್ದಾರೆ. ಆರ್ ಆರ್ ನಗರವೇ ಯಡಿಯೂರಪ್ಪ ಅವರ ಮೊದಲ ಟಾರ್ಗೆಟ್ ಆಗಿದೆ. ಎರಡು ಕ್ಷೇತ್ರಗಳನ್ನು ಕೂಡ ಬಿಜೆಪಿ ಹೈಕಮಾಂಡ್ ಟಾರ್ಗೆಟ್ ಮಾಡಿದ್ದು, ಹೀಗಾಗಿ ರಾಜ್ಯ ಬಿಜೆಪಿ ನಾಯಕರಿಂದ ಮೆಗಾ ಗೇಮ್ ಪ್ಲಾನ್ ನಡೀತಿದೆ. ಎರಡು ಕ್ಷೇತ್ರಗಳ ಮೇಲೆ ಕಣ್ಗಾವಲಿನ ಮೇಲೆ ಕಣ್ಗಾವಲು ಇಡಲಾಗಿದೆ.

    ಕಡೆಯ ನಾಲ್ಕು ದಿನ ಸಿಎಂ ಯಡಿಯೂರಪ್ಪರನ್ನ ಪ್ರಚಾರಕ್ಕೆ ಇಳಿಸಲು ಪ್ಲಾನ್ ರೂಪಿಸಲಾಗಿದೆ. ಹೀಗಾಗಿ ರಾಜರಾಜೇಶ್ವರಿನಗರದಲ್ಲಿ 2 ದಿನ ಹಾಗೂ ಶಿರಾದಲ್ಲಿ 2 ದಿನ ಸಿಎಂ ಕ್ಯಾಂಪೇನ್ ಮಾಡಲಿದ್ದಾರೆ. ಆರ್‍ಆರ್ ನಗರದಲ್ಲಿ ವಾರ್ಡ್ ಮಟ್ಟ, ಶಿರಾದಲ್ಲಿ ಹೋಬಳಿ ಮಟ್ಟದಲ್ಲಿ ಪ್ರಚಾರ ನಡೆಸಲಿದ್ದಾರೆ.

    ಮಂಗಳವಾರದಿಂದ ಶನಿವಾರದವರೆಗೆ 4 ದಿನ ಬರುವಂತೆ ಬಿಜೆಪಿ ಈಗಾಗಲೇ ಸಿಎಂ ಅವರಿಗೆ ಆಹ್ವಾನ ನೀಡಿದೆ. ಈ ಹಿನ್ನೆಲೆಯಲ್ಲಿ ವಿಜಯದಶಮಿ ಬಳಿಕ ಬರುವುದಾಗಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

  • ಆರ್‍ಆರ್ ನಗರ, ಶಿರಾ ವಶಕ್ಕೆ ಬಿಜೆಪಿ ರಣತಂತ್ರ – ಗೆಲುವಿಗೆ ಪಂಚ ಪರಮೇಶ್ವರರ ಕಣ್ಗಾವಲು

    ಆರ್‍ಆರ್ ನಗರ, ಶಿರಾ ವಶಕ್ಕೆ ಬಿಜೆಪಿ ರಣತಂತ್ರ – ಗೆಲುವಿಗೆ ಪಂಚ ಪರಮೇಶ್ವರರ ಕಣ್ಗಾವಲು

    ಬೆಂಗಳೂರು: ಆರ್‍ಆರ್‍ನಗರ ಹಾಗೂ ಶಿರಾ ಉಪಚುನಾವಣೆಯ ಫೈಟ್ ‘ಮಹಾ’ ಕುರುಕ್ಷೇತ್ರ ರೂಪ ಪಡೆದಿದೆ. ಈ ಎರಡು ಕ್ಷೇತ್ರಗಳಲ್ಲಿ ಬಿಜೆಪಿ ರಣತಂತ್ರ ಹೂಡಿದೆ.

    ಬಿಜೆಪಿ ಹೈಕಮಾಂಡ್ ಎರಡು ಕ್ಷೇತ್ರಗಳನ್ನು ಟಾರ್ಗೆಟ್ ಮಾಡಿದ್ದು, ಆರ್‍ಆರ್ ನಗರ ಹಾಗೂ ಶಿರಾ ಕ್ಷೇತ್ರಗಳ ಮೇಲೆ ಕಣ್ಗಾವಲಿನ ಮೇಲೆ ಕಣ್ಗಾವಲು ಇಡಲಾಗಿದೆ. ಮತದಾನಕ್ಕೂ ಮುನ್ನ, ಕಡೆಯ 5 ದಿನಗಳ ಕಡೆ ತಂತ್ರಗಾರಿಕೆಯನ್ನೇ ಬದಲಿಸಲು ಪ್ಲಾನ್ ಮಾಡಲಾಗಿದೆ ಎಂಬ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.

    ಈಗಾಗಲೇ ರಾಜರಾಜೇಶ್ವರಿ ಕ್ಷೇತ್ರಕ್ಕೆ ಹೊರಗಿನವರು ಬಂದು ಚುನಾವಣೆ ನಡೆಸ್ತಿದ್ದಾರೆ ಎಂದು ಬಿಜೆಪಿ ಆರೋಪ ಮಾಡಿತ್ತು. ಈ ಬೆನ್ನಲ್ಲೇ ರಾಜರಾಜೇಶ್ವರಿನಗರ, ಶಿರಾ ಕ್ಷೇತ್ರಗಳಲ್ಲಿ ಬೂತ್ ಕಾಯಲು ಕಾವಲುಗಾರರನ್ನು ನೇಮಿಸಲಾಗಿದೆ. ಪ್ರತಿ ಬೂತ್ ಗೆ 5 ಜನ ಕಣ್ಗಾವಲು ಸದಸ್ಯರು, ಕಡೆಯ 5 ದಿನ ಕಣ್ಗಾವಲು ಹಾಕಲು ಸೂಚನೆ ನೀಡಲಾಗಿದೆ ಎನ್ನಲಾಗಿದೆ.

    ಹೊರಗಿನಿಂದ ಬಂದವರು, ವಿರೋಧಿಗಳ ನಡವಳಿಕೆ ಗಮನಿಸಲು ಪಂಚ ಪರಮೇಶ್ವರರ ತಂತ್ರವನ್ನು ಬಿಜೆಪಿ ಹೂಡಿದೆ. ಹಾಗಾದ್ರೆ ಬೈ ಎಲೆಕ್ಷನ್ ನಲ್ಲಿ ಒಂದು ಬೂತ್, 5 ದಿನ, 5 ಜನ ತಂತ್ರ ಸಕ್ಸಸ್ ಆಗುತ್ತಾ ಎಂಬ ಕುತೂಹಲ ಮೂಡಿಸಿದೆ.

  • ಹಾಸನ ಜಿಲ್ಲೆ ಕರ್ನಾಟಕದಲ್ಲಿ ಇಲ್ಲವೇ?- ಸರ್ಕಾರಕ್ಕೆ ಹೆಚ್.ಡಿ.ರೇವಣ್ಣ ಪ್ರಶ್ನೆ

    ಹಾಸನ ಜಿಲ್ಲೆ ಕರ್ನಾಟಕದಲ್ಲಿ ಇಲ್ಲವೇ?- ಸರ್ಕಾರಕ್ಕೆ ಹೆಚ್.ಡಿ.ರೇವಣ್ಣ ಪ್ರಶ್ನೆ

    – ಕರ್ನಾಟಕದಲ್ಲಿ ಹಾಸನ ಅನಾಥ ಜಿಲ್ಲೆ

    ಹಾಸನ: ಜಿಲ್ಲೆಯ ಐದು ತಾಲೂಕುಗಳನ್ನು ಸರ್ಕಾರ ಪ್ರವಾಹ ಪೀಡಿತ ಪ್ರದೇಶ ಎಂದು ಘೋಷಣೆ ಮಾಡಲಾಗಿದೆ. ಆದ್ರೆ ಇದುವರೆಗೂ ಒಂದು ರೂಪಾಯಿ ಪರಿಹಾರದ ಹಣ ನೀಡಿಲ್ಲ. ಹಾಸನ ಜಿಲ್ಲೆ ಕರ್ನಾಟಕದ ಭೂಪಟದಲ್ಲಿ ಇಲ್ಲವೇ ಎಂದು ಸರ್ಕಾರಕ್ಕೆ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಪ್ರಶ್ನಿಸಿದ್ದಾರೆ.

    ಹಾಸನದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಹೆಚ್.ಡಿ.ರೇವಣ್ಣ, ರಾಜ್ಯದಲ್ಲಿ ಒಂದೆಡೆ ಕೊರೊನದಿಂದ ಜನತೆ ತತ್ತರಿಸಿ ಹೋಗಿದ್ದಾರೆ. ಮತ್ತೊಂದೆಡೆ ಮಳೆಯಿಂದ ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹಾಸನ ಜಿಲ್ಲೆ ರಾಜ್ಯದ ಭೂಪಟದಲ್ಲಿ ಇದೆಯೋ ಇಲ್ಲವೋ ಗೊತ್ತಿಲ್ಲ. ಕರ್ನಾಟಕದಲ್ಲಿ ಹಾಸನ ಅನಾಥ ಜಿಲ್ಲೆಯಾಗಿದ್ದು, ಕಪ್ಪುಪಟ್ಟಿಗೆ ಸೇರಿಸಿ ಎಂದು ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದರು.

    150 ವರ್ಷಗಳ ಇತಿಹಾಸವಿರುವ ನೆಹರು, ಮಹಾತ್ಮಗಾಂಧಿ ಕಟ್ಟಿದ ಕಾಂಗ್ರೆಸ್ ಮತ್ತು ನಮ್ಮ ಪಕ್ಷದವರನ್ನು ಕರೆದುಕೊಂಡು ಹೋಗಿ ಬಿಜೆಪಿ ಟಿಕೆಟ್ ನೀಡಿದೆ. ನಮ್ಮದು ರಾಷ್ಟ್ರೀಯ ಪಕ್ಷ ಅಲ್ಲ, ಪ್ರಾದೇಶಿಕ ಪಕ್ಷ. ರಾಷ್ಟ್ರೀಯ ಪಕ್ಷಗಳಲ್ಲಿ ಅಭ್ಯರ್ಥಿಗಳೇ ಇಲ್ಲ. ಕಾಂಗ್ರೆಸ್ ನಲ್ಲಿದ್ದ ಡಾಕ್ಟರ್ ಅನ್ನು ಬಿಜೆಪಿಯವರು ಕರೆದುಕೊಂಡು ಹೋಗಿ ಟಿಕೆಟ್ ನೀಡಿದ್ದಾರೆ. ಎಲ್ಲವನ್ನೂ ಜನತೆಗೆ ಬಿಡುತ್ತೇವೆ. ಕುಮಾರಸ್ವಾಮಿ ಸಾಲಮನ್ನಾ ಮಾಡಿ, ಒಳ್ಳೆಯ ಕಾರ್ಯಕ್ರಮಗಳನ್ನು ನೀಡಿದ್ದಾರೆ. ಇದರ ಹಿನ್ನೆಲೆಯಲ್ಲಿ ಮತ ಕೇಳುತ್ತೇವೆ. ಅಕ್ಟೋಬರ್ 23 ರ ನಂತರ ಉಪ ಚುನಾವಣೆ ಪ್ರಚಾರಕ್ಕೆ ಹೋಗುತ್ತೇನೆ ಎಂದು ಹೆಚ್.ಡಿ.ರೇವಣ್ಣ ಹೇಳಿದರು.

  • ಉಪಚುನಾವಣೆಯಲ್ಲಿ ಬಿಜೆಪಿ ತಂತ್ರಗಾರಿಕೆ ಚೇಂಜ್

    ಉಪಚುನಾವಣೆಯಲ್ಲಿ ಬಿಜೆಪಿ ತಂತ್ರಗಾರಿಕೆ ಚೇಂಜ್

    ಬೆಂಗಳೂರು: ಎರಡು ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಬಿಜೆಪಿ ಬಾವುಟ ಹಾರಿಸಲು ಸಕಲ ರೀತಿ ಸಿದ್ಧವಾಗುತ್ತಿದೆ. ಅಧಿವೇಶನದಲ್ಲಿ ಸಿಎಂ ಯಡಿಯೂರಪ್ಪ ಬೈ ಎಲೆಕ್ಷನ್ ನಲ್ಲಿ ಗೆಲ್ಲೋದಾಗಿ ಚಾಲೆಂಜ್ ಹಾಕಿದ್ದಾರೆ. ಹೀಗಾಗಿ ತಮ್ಮದಲ್ಲದ ಕ್ಷೇತ್ರಗಳಲ್ಲಿ ಕಮಲ ಅರಳಿಸಲು ಬಿಜೆಪಿ ಹೊಸ ಅಸ್ತ್ರ ಪ್ರಯೋಗಕ್ಕೆ ಮುಂದಾಗಿದೆ. ಎರಡು ಕ್ಷೇತ್ರಗಳಲ್ಲಿ ಚುನಾವಣಾ ತಂತ್ರಗಾರಿಕೆಯನ್ನ ಬಿಜೆಪಿ ಬದಲಿಸಿಕೊಂಡಿದ್ದು, ಈ ಕುರಿತು ಪಕ್ಷದ ಎಲ್ಲರಿಗೂ ಗುಪ್ತ ಸಂದೇಶ ರವಾನಿಸಿದೆ ಎಂದು ತಿಳಿದು ಬಂದಿದೆ.

    ಹೌದು, ಎರಡು ಕ್ಷೇತ್ರಗಳ ಚುನಾವಣೆಯಲ್ಲಿ ಜೆಡಿಎಸ್ ಬಗ್ಗೆ ಸಾಫ್ಟ್ ಕಾರ್ನರ್ ಹೊಂದಬೇಕು. ಕಾಂಗ್ರೆಸ್ ಪಕ್ಷ ಮತ್ತು ನಾಯಕರನ್ನ ಟಾರ್ಗೆಟ್ ಮಾಡಿ ವಾಗ್ದಾಳಿ ನಡೆಸಬೇಕು. ಚುನಾವಣಾ ಅಖಾಡದಲ್ಲಿ ಕಾಂಗ್ರೆಸ್ ನೇರ ಎದುರಾಳಿಯಾಗಿದ್ದು, ಹಾಗಾಗಿ ಜೆಡಿಎಸ್ ಮತ್ತು ಅವರ ಅಭ್ಯರ್ಥಿಗಳು ನಮ್ಮ ಗುರಿಯಲ್ಲ ಅನ್ನೋ ಸಂದೇಶ ಬಿಜೆಪಿ ಪಕ್ಷದೊಳಗೆ ರವಾನಿಸಿದೆ ಎನ್ನಲಾಗಿದೆ.

    ರಾಜ ರಾಜೇಶ್ವರಿ ಮತ್ತು ಶಿರಾ ವಿಧಾನಸಭಾ ಕ್ಷೇತ್ರಗಳು ಎರಡೂ ವಿಭಿನ್ನ. ಕಳೆದ ಬಾರಿ ಆರ್.ಆರ್.ನಗರದಲ್ಲಿ ಕಾಂಗ್ರೆಸ್ ನಿಂದ ಗೆದ್ದಿದ್ದ ಮುನಿರತ್ನ ಈಗ ಬಿಜೆಪಿ ಅಭ್ಯರ್ಥಿ. ಇತ್ತ ಕಾಂಗ್ರೆಸ್‍ನಿಂದ ಕುಸುಮಾ ಹನುಮಂತ್ರಾಯಪ್ಪ ಮೊದಲ ಬಾರಿಗೆ ಎಲೆಕ್ಷನ್ ಅಖಾಡಕ್ಕೆ ಧುಮುಕಿದ್ದಾರೆ. ಆದ್ರೆ ಇಲ್ಲಿ ಡಿಕೆ ಬ್ರದರ್ಸ್ ಹೆಚ್ಚು ಪ್ರಚಾರದಲ್ಲಿ ತೊಡಗಿಕೊಳ್ಳುವ ಸಾಧ್ಯತೆಗಳಿವೆ. ಇತ್ತ ಶಿರಾದಲ್ಲಿ ದಿವಂಗತ್ ಸತ್ಯನಾರಾಯಣ್ ಅವರ ಪತ್ನಿ ಅಮ್ಮಜಮ್ಮಾ ಅವರು ಅಖಾಡದಲ್ಲಿದ್ದಾರೆ. ಹಾಗಾಗಿ ಶಿರಾದಲ್ಲಿ ಅತ್ಯಂತ ಎಚ್ಚರಿಕೆಯಿಂದ ಪ್ರಚಾರ ಕಾರ್ಯದಲ್ಲಿ ತೊಡಗಿಕೊಳ್ಳಬೇಕು. ಯಾವುದೇ ಕಾರಣಕ್ಕಾಗಿ ವಿವಾದಾತ್ಮಕ ಮಾತುಗಳು ಬೇಡ ಎಂದು ಬಿಜೆಪಿ ಪಕ್ಷದ ವರಿಷ್ಠರಿಗೆ ಕಟ್ಟುನಿಟ್ಟಿನ ಸೂಚನೆ ರವಾನಿಸಿದೆ ಎಂಬ ಮಾಹಿತಿ ಲಭ್ಯವಾಗಿವೆ.

    ಉಪ ಚುನಾವಣೆಯಲ್ಲಿ ನೇರ ರಾಜಕೀಯ ಅಸ್ತ್ರ ಪ್ರಯೋಗ ಕಾಂಗ್ರೆಸ್ ಮೇಲೆ ಇರಬೇಕು ಎಂದು ಬಿಜೆಪಿ ಮಹಾಪ್ಲ್ಯಾನ್ ಮಾಡಿಕೊಂಡಿದೆ. ಬಿಜೆಪಿಯ ಎರಡು ಕಡೆಯ ಅಸ್ತ್ರಗಳು ವರ್ಕ್ ಔಟ್ ಆಗುತ್ತಾ? ಮತದಾರ ಪ್ರಭು ಯಾರಿಗೆ ಜೈ ಅನ್ನುತ್ತಾನೆ ಎಂಬ ಸತ್ಯ ಫಲಿತಾಂಶದ ದಿನವೇ ತಿಳಿಯಲಿದೆ.

  • ಯಡಿಯೂರಪ್ಪನವ್ರು ಯಾವತ್ತೂ ಅಳುಮುಂಜಿಯಂತೆ ಅಳಲ್ಲ – ಹೆಚ್‍ಡಿಕೆಗೆ ಪ್ರತಾಪ್ ಸಿಂಹ ತಿರುಗೇಟು

    ಯಡಿಯೂರಪ್ಪನವ್ರು ಯಾವತ್ತೂ ಅಳುಮುಂಜಿಯಂತೆ ಅಳಲ್ಲ – ಹೆಚ್‍ಡಿಕೆಗೆ ಪ್ರತಾಪ್ ಸಿಂಹ ತಿರುಗೇಟು

    ತುಮಕೂರು: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ಯಾವತ್ತೂ ಅಳುಮುಂಜಿಯಂತೆ ಅಳಲ್ಲ ಎಂದು ಸಂಸದ ಪ್ರತಾಪ್ ಸಿಂಹ್ ಅವರು ಮಾಜಿ ಮುಖ್ಯಮಂತ್ರಿ ಹೆಚ್‍ಡಿ ಕುಮಾರಸ್ವಾಮಿಗೆ ಟಾಂಗ್ ನೀಡಿದ್ದಾರೆ.

    ಶಿರಾದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಸಂಸದರು, ಯಡಿಯೂರಪ್ಪನವರಿಗೆ 78 ವರ್ಷ ಅವರ ಮುಖದಲ್ಲಿ ಸಾತ್ವಿಕ ಸಿಟ್ಟು ಕಾಣುತ್ತೆ. ಯಡಿಯೂರಪ್ಪನವರು ಯಾವತ್ತೂ ಅಳುಮುಂಜಿ ತರ ಅಳಲ್ಲ. ಕುಮಾರಣ್ಣ ಸಭೆ ಸಮಾರಂಭದಲ್ಲಿ ಅಪ್ಪ, ಮಕ್ಕಳು, ಸೊಸೆಯಂದಿರು ಹಾಗೂ ಮೊಮ್ಮಕ್ಕಳು ಸಾಲಾಗಿ ಬಂದು ಅಳೋರು ಎಂದು ಲೇವಡಿ ಮಾಡಿದ್ದಾರೆ.

    ಶಿರಾ ಜನ ಹಾಲು ಕೊಡ್ತಿರೋ ವಿಷ ಕೊಡ್ತಿರೋ ಅಂತ ಕುಮಾರಸ್ವಾಮಿ ಕೇಳ್ತಿದ್ದಾರೆ. ಶಿರಾ ಜನರು ಅವರಿಗೆ ಕೊರೊನಾ ಸಂದರ್ಭದಲ್ಲಿ ಕಷಾಯ ಕೊಟ್ಟು ಕಳುಹಿಸಿ ಎಂದು ಹೇಳುವ ಮೂಲಕ ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: ಮುಖ್ಯಮಂತ್ರಿಯಾಗಲು ಕೇಂದ್ರದಿಂದ ಮೋದಿಯವರೇ ಆಫರ್ ನೀಡಿದ್ರು: ಹೆಚ್‍ಡಿಕೆ

    ಹೆಚ್‍ಡಿಕೆ ಹೇಳಿದ್ದೇನು?
    ಸೆಪ್ಟೆಂಬರ್ 30ರಂದು ತುಮಕೂರಿನ ಶಿರಾದಲ್ಲಿ ನಡೆದಿದ್ದ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಭಾಷಣ ಮಾಡಿದ್ದ ಹೆಚ್‍ಡಿಕೆ, ಕಾಂಗ್ರೆಸ್ಸಿನವರ ಸಹವಾಸ ಮಾಡಿದಕ್ಕೆ ಜನ ನನ್ನ ಒಪ್ಪಿಕೊಂಡಿಲ್ಲ. ಅಷ್ಟೇ ಯಾಕೆ ನನ್ನ ಕಾರ್ಯಕರ್ತರೇ ಒಪ್ಪಿಕೊಂಡಿಲ್ಲ. ಶಿರಾ ಜನರು ನನಗೆ ವಿಷ ಕೊಡುತ್ತಿರೋ ಅಥವಾ ಹಾಲು ಕೊಡುತ್ತಿರೋ ನಿಮಗೆ ಬಿಟ್ಟಿದ್ದು. ಇಲ್ಲಿಂದ ಹೊಸ ರಾಜಕೀಯ ಆರಂಭವಾಗಬೇಕು. ಸರ್ಕಾದಲ್ಲಿ ದುಡ್ಡಿಗೆ ತೊಂದರೆ ಇಲ್ಲ. ರಾಜ್ಯ ಸಂಪದ್ಭರಿತವಾಗಿದೆ ಎಂದು ಕುಮಾರಸ್ವಾಮಿಯವರು ತಿಳಿಸಿದ್ದರು.

  • ಉಪಚುನಾವಣೆ ಕದನ- ಆರ್.ಆರ್ ನಗರದಲ್ಲಿ ಮುನಿರತ್ನಗೆ ಟಿಕೆಟ್ ಖಚಿತ

    ಉಪಚುನಾವಣೆ ಕದನ- ಆರ್.ಆರ್ ನಗರದಲ್ಲಿ ಮುನಿರತ್ನಗೆ ಟಿಕೆಟ್ ಖಚಿತ

    ಬೆಂಗಳೂರು: ರಾಜ್ಯದ ಎರಡು ಕ್ಷೇತ್ರಗಳ ಉಪಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ನದಿ ಮಾಡಿದ ಬೆನ್ನಲ್ಲೇ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.

    ಎರಡು ಕ್ಷೇತ್ರಗಳ ಉಪಚುನಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜರಾಜೇಶ್ವರಿ ಕ್ಷೇತ್ರದಲ್ಲಿ ಬಿಜೆಪಿಗೆ ಅಭ್ಯರ್ಥಿ ತಲೆನೋವು ಇಲ್ಲ. ಆದರೆ ತುಮಕೂರಿನ ಶಿರಾ ವಿಧಾನಸಭಾ ಕ್ಷೇತ್ರಕ್ಕೆ ಮಾತ್ರ ಬಿಜೆಪಿಯಲ್ಲಿ ಸೂಕ್ತ ಅಭ್ಯರ್ಥಿಗಳಿಗಾಗಿ ಹುಡುಕಾಟ ನಡೆಸಲಾಗುತ್ತಿದೆ.

    ಆರ್.ಆರ್ ನಗರದಲ್ಲಿ ಮಾಜಿ ಶಾಸಕ ಮುನಿರತ್ನಗೆ ಟಿಕೆಟ್ ಖಚಿತವಾಗಿದೆ. ಆದರೆ ಕಾಂಗ್ರೆಸ್, ಜೆಡಿಎಸ್ ನಲ್ಲಿ ಪ್ರಬಲ ಅಭ್ಯರ್ಥಿ ತಲಾಶ್ ನಡೆಸಲಾಗುತ್ತಿದೆ. ಇನ್ನು ಶಿರಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆಗೆ ತಲೆ ನೋವಿಲ್ಲ. ಕಳೆದ ಉಪಚುನಾವಣೆಯ ಸಂದರ್ಭದಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲು ಕಾರಣರಾದ ಎಲ್ಲರಿಗೂ ಮಂತ್ರಿ ಸ್ಥಾನ ನೀಡಲಾಗುವುದು ಎಂದು ಸಿಎಂ ಬಿಎಸ್ ಯಡಿಯೂರಪ್ಪ ಆಶ್ವಾಸನೆ ನೀಡಿದ್ದರು. ಹೀಗಾಗಿ ಮುನಿರತ್ನ ಅವರಿಗೆ ಆರ್.ಆರ್.ನಗರ. ಕ್ಷೇತ್ರದ ಟಿಕೆಟ್ ಸಿಗುವುದು ಪಕ್ಕಾ ಆಗಿದೆ.

    ಶಿರಾದಲ್ಲಿ ಯಾರು?
    ಮಾಜಿ ಶಾಸಕ ಟಿ.ಬಿ.ಜಯಚಂದ್ರಗೆ ಕಾಂಗ್ರೆಸ್ಸಿನಿಂದ ಟಿಕೆಟ್ ನೀಡಲಾಗುತ್ತಿದೆ. ಆದರೆ ಬಿಜೆಪಿಯಲ್ಲಿ ಮಾತ್ರ ಸೂಕ್ತ ಅಭ್ಯರ್ಥಿಗಳಿಗಾಗಿ ಹುಡುಕಾಟ ನಡೆಸಲಾಗುತ್ತಿದೆ.

    ಒಕ್ಕಲಿಗ ಪ್ರಾಬಲ್ಯ ಇರುವ ಕ್ಷೇತ್ರದಲ್ಲಿ ಒಕ್ಕಲಿಗ ಅಭ್ಯರ್ಥಿಗಾಗಿ ಬಿಜೆಪಿ ಹುಡುಕಾಟ ನಡೆಸುತ್ತಿದೆ. ಕಾಂಗ್ರೆಸ್ ಮಾಜಿ ಸಂಸದ ಮೂಡ್ಲಗಿರಿಯಪ್ಪನ ಮಗ ರಾಜೇಶ್ ಗೌಡ, ಮಾಜಿ ಶಾಸಕ ಸುರೇಶ್ ಗೌಡ ಹೆಸರುಗಳು ಮುನ್ನೆಲೆಗೆ ಬಂದಿವೆ. ಸದ್ಯ ರಾಜೇಶ್ ಗೌಡ ಜೆಡಿಎಸ್ ನಿಂದಲೂ ಟಿಕೆಟ್ ಪಡೆಯಲು ಪ್ರಯತ್ನ ಮಾಡುತ್ತಿದ್ದಾರೆ. ಒಂದು ವೇಳೆ ಜೆಡಿಎಸ್ ಸತ್ಯನಾರಯಣ್ ಕುಟುಂಬಕ್ಕೆ ಟಿಕೆಟ್ ನೀಡಿದರೆ ಆಗ ರಾಜೇಶ್ ಗೌಡರಿಗೆ ಬಿಜೆಪಿಯಿಂದ ಟಿಕೆಟ್ ನೀಡಲು ಪ್ಲಾನ್ ಮಾಡಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.

    ಉಪಚುನಾವಣೆಗೆ ಅಕ್ಟೋಬರ್ 9ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದ್ದು, ಅಕ್ಟೋಬರ್ 16ಕ್ಕೆ ನಾಮಪತ್ರ ಸಲ್ಲಿಸಲು ಕಡೆಯ ದಿನವಾಗಿರುತ್ತದೆ. ಅಕ್ಟೋಬರ್ 17ಕ್ಕೆ ನಾಮಪತ್ರಗಳ ಪರಿಶೀಲನೆ ಇದ್ದು, ಅಕ್ಟೋಬರ್ 19ಕ್ಕೆ ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದೆ. ದೇಶಾದ್ಯಂತ ಒಟ್ಟು 56 ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ದಿನಾಂಕ ಪ್ರಕಟವಾಗಿದೆ. ನವೆಂಬರ್ 3ಕ್ಕೆ ಮತದಾನ ನಡೆಯಲಿದ್ದು, ನವೆಂಬರ್ 10ರಂದು ಫಲಿತಾಂಶ ಹೊರಬೀಳಲಿದೆ ಎಂಬುದಾಗಿ ಚುನಾವಣಾ ಆಯೋಗ ತಿಳಿಸಿದೆ.

    ಜೆಡಿಎಸ್ ಶಾಸಕರಾಗಿದ್ದ ಬಿ. ಸತ್ಯನಾರಾಯಣ ನಿಧನದಿಂದ ತೆರವಾಗಿರುವ ಶಿರಾ ವಿಧಾನಸಭಾ ಕ್ಷೇತ್ರದಲ್ಲಿ ಉಪಚುನಾವಣೆ ಗರಿಗೆದರಿದೆ.

  • ಆರ್.ಆರ್ ನಗರ, ಶಿರಾ ಉಪಚುನಾವಣೆ- ನವೆಂಬರ್ 3ಕ್ಕೆ ಮತದಾನ, 10ರಂದು ಫಲಿತಾಂಶ

    ಆರ್.ಆರ್ ನಗರ, ಶಿರಾ ಉಪಚುನಾವಣೆ- ನವೆಂಬರ್ 3ಕ್ಕೆ ಮತದಾನ, 10ರಂದು ಫಲಿತಾಂಶ

    ನವದೆಹಲಿ: ರಾಜರಾಜೇಶ್ವರಿ ನಗರ ಮತ್ತು ಶಿರಾ ಕ್ಷೇತ್ರಗಳಿಗೆ ಉಪ ಚುನಾವಣೆ ದಿನಾಂಕವನ್ನು ಇಂದು ಕೇಂದ್ರ ಚುನಾವಣಾ ಆಯೋಗ ಪ್ರಕಟಿಸಿದೆ.

    ಅಕ್ಟೋಬರ್ 9ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದ್ದು, ಅಕ್ಟೋಬರ್ 16ಕ್ಕೆ ನಾಮಪತ್ರ ಸಲ್ಲಿಸಲು ಕಡೆಯ ದಿನವಾಗಿರುತ್ತದೆ. ಅಕ್ಟೋಬರ್ 17ಕ್ಕೆ ನಾಮಪತ್ರಗಳ ಪರಿಶೀಲನೆ ಇದ್ದು, ಅಕ್ಟೋಬರ್ 19ಕ್ಕೆ ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದೆ.

    ದೇಶಾದ್ಯಂತ ಒಟ್ಟು 56 ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ದಿನಾಂಕ ಪ್ರಕಟವಾಗಿದೆ. ನವೆಂಬರ್ 3ಕ್ಕೆ ಮತದಾನ ನಡೆಯಲಿದ್ದು, ನವೆಂಬರ್ 10ರಂದು ಫಲಿತಾಂಶ ಹೊರಬೀಳಲಿದೆ.

    ಜೆಡಿಎಸ್ ಶಾಸಕರಾಗಿದ್ದ ಬಿ. ಸತ್ಯನಾರಾಯಣ ನಿಧನದಿಂದ ತೆರವಾಗಿರುವ ಶಿರಾ ವಿಧಾನಸಭಾ ಕ್ಷೇತ್ರದಲ್ಲಿ ಉಪಚುನಾವಣೆ ಗರಿಗೆದರಿದೆ.

    ರಾಜರಾಜೇಶ್ವರಿ ನಗರಕ್ಕೆ ಉಪಚುನಾವಣೆ ಯಾಕೆ?
    ರಾಜರಾಜೇಶ್ವರಿ ನಗರದ ಮಾಜಿ ಶಾಸಕ ಮುನಿರತ್ನ ಅವರಿಗೆ ಹೈಕೋರ್ಟ್ ಈ ಹಿಂದೆ ಬಿಗ್ ರಿಲೀಫ್ ನೀಡಿತ್ತು. ಪರಾಜಿತ ಅಭ್ಯರ್ಥಿ ಮುನಿರಾಜು ತನ್ನನ್ನು ಶಾಸಕ ಎಂದು ಘೋಷಿಸುವಂತೆ ಕೋರಿ ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತ್ತು.

    2018ರ ವಿಧಾನಸಭೆ ಚನಾವಣೆಯಲ್ಲಿ ರಾಜರಾಜೇಶ್ವರಿ ನಗರ ಕ್ಷೇತ್ರದಿಂದ ಮುನಿರತ್ನ ಅವರು ಆಯ್ಕೆಯಾಗಿರುವುದನ್ನು ಅಸಿಂಧುಗೊಳಿಸಬೇಕು ಎಂದು ಕೋರಿ ಬಿಜೆಪಿ ಪರಾಜಿತ ಅಭ್ಯರ್ಥಿ ಪಿ.ಎಂ.ಮುನಿರಾಜುಗೌಡ ತಕಾರರು ಅರ್ಜಿಯನ್ನು ಸಲ್ಲಿಸಿದ್ದರು.

    ಚುನಾವಣಾ ಆಯೋಗವನ್ನು ಪ್ರತಿವಾದಿಯನ್ನಾಗಿ ಮಾಡಿಲ್ಲ. ಹೀಗಾಗಿ ಚುನಾವಣೆ ನಡೆಸಲು ಆದೇಶಿಸಲು ಬರುವುದಿಲ್ಲ. ಆದರೆ ಆರ್.ಆರ್. ಕ್ಷೇತ್ರದ ಜನಪ್ರತಿನಿಧಿ ಇಲ್ಲದೆ ಇರುವುದು ಸೂಕ್ತವಲ್ಲ ಎಂದು ನ್ಯಾ. ಕೃಷ್ಣ ಎಸ್.ದೀಕ್ಷಿತ್ ಅಭಿಪ್ರಾಯಪಟ್ಟಿದ್ದರು.

    ಮುನಿರತ್ನ ಅವರು ಕಳೆದ ವರ್ಷ ಬಿಜೆಪಿಗೆ ಸೇರ್ಪಡೆಗೊಂಡಿದ್ದು ಈ ಪ್ರಕರಣ ನ್ಯಾಯಾಲಯದಲ್ಲಿ ಇದ್ದ ಕಾರಣ ಚುನಾವಣಾ ಆಯೋಗ ಈ ಹಿಂದೆ ರಾಜರಾಜೇಶ್ವರಿನಗರದ ಕ್ಷೇತ್ರಕ್ಕೆ ಉಪಚುನಾವಣೆ ಘೋಷಣೆ ಮಾಡಿರಲಿಲ್ಲ.

  • ಕೆ.ಆರ್.ಪೇಟೆ ಮಾದರಿಯಲ್ಲಿ ಶಿರಾ ಉಪಚುನಾವಣೆ ಗೆಲ್ಲುತ್ತೇವೆ: ವಿಜಯೇಂದ್ರ

    ಕೆ.ಆರ್.ಪೇಟೆ ಮಾದರಿಯಲ್ಲಿ ಶಿರಾ ಉಪಚುನಾವಣೆ ಗೆಲ್ಲುತ್ತೇವೆ: ವಿಜಯೇಂದ್ರ

    ತುಮಕೂರು: ಜಿಲ್ಲೆಯ ಶಿರಾ ವಿಧಾನಸಭೆ ಉಪಸಮರ ಹಿನ್ನೆಲೆಯಲ್ಲಿ ಸಿಎಂ ಯಡಿಯೂರಪ್ಪ ಪುತ್ರ, ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಇಂದು ಶಿರಾ ಕ್ಷೇತ್ರಕ್ಕೆ ಭೇಟಿ ನೀಡಿದ್ದರು.

    ಶಿರಾ ನಗರದ ಕೋಟೆ ಬೀದಿ, ಸಂತೆಪೇಟೆ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಸಂಚಾರ ಮಾಡಿ ಮತದಾರರನ್ನು ಭೇಟಿ ಮಾಡಿದರು. ಈ ವೇಳೆ ಟಿಕೆಟ್ ಅಕಾಂಕ್ಷಿಗಳಾದ ಎಸ್. ಆರ್.ಗೌಡ ಬಿ.ಕೆ.ಮಂಜುನಾಥ್ ವಿಜಯೇಂದ್ರ ಅವರಿಗೆ ಸಾಥ್ ನೀಡಿದರು.

    ಈ ವೇಳೆ ಮಾತನಾಡಿದ ವಿಜಯೇಂದ್ರ ಅವರು, ಕೆ.ಆರ್.ಪೇಟೆ ಮಾದರಿಯಲ್ಲಿ ಶಿರಾ ಉಪಚುನಾವಣೆಗೆ ಬಿಜೆಪಿ ಸಜ್ಜುಗೊಳ್ಳುತ್ತಿದೆ. ಶಿರಾ ಕ್ಷೇತ್ರದಲ್ಲಿ ಕೆ.ಆರ್.ಪೇಟೆಯಲ್ಲಿ ವಿಜಯ ಸಾಧಿಸಿದಂತೆ ಇಲ್ಲಿಯೂ ಕಮಲವನ್ನು ಅರಳಿಸುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ಈ ಹಿಂದೆ ಮಂಡ್ಯದಲ್ಲಿ ಬಿಜೆಪಿ ಅಭ್ಯರ್ಥಿ ಗೆಲ್ಲುವುದಿಲ್ಲ ಎಂದು ವಿರೋಧ ಪಕ್ಷದವರು ಬೊಬ್ಬೆಹೊಡೆದಿದ್ದರು. ನಮ್ಮನ್ನ ಲೆಕ್ಕಕ್ಕೆ ತೆಗೆದುಕೊಂಡಿರಲಿಲ್ಲ. ಪಕ್ಷದ ಮುಖಂಡರು, ಕಾರ್ಯಕರ್ತರು ಎಲ್ಲಾ ಒಗ್ಗಟ್ಟಾಗಿ ಪ್ರಯತ್ನ ಮಾಡಿದ್ದ ಪರಿಣಾಮ, ಕೆ.ಆರ್.ಪೇಟೆಯಲ್ಲಿ 10 ಸಾವಿರ ಮತಗಳ ಅಂತದಿಂದ ಗೆಲುವು ಸಾಧಿಸಿದ್ದೇವು. ಅದೇ ರೀತಿ ಶಿರಾದಲ್ಲೂ ಗೆಲುವು ಸಾಧಿಸುತ್ತೇವೆ. ಬಿಜೆಪಿ ಪಕ್ಷದಲ್ಲು ಯಾರೇ ಅಭ್ಯರ್ಥಿ ಆದರೂ ಕಣಕ್ಕಿಳಿಸಿದವರನ್ನು ಒಗ್ಗಟ್ಟಾಗಿ ಗೆಲ್ಲಿಸಿಕೊಡುತ್ತೇವೆ.