Tag: siri ravikumar

  • `ಶೋಧ’ಕ್ಕಾಗಿ ಪವನ್ ಕುಮಾರ್ ಜೊತೆ ಒಂದಾದ ಸಿರಿ ರವಿಕುಮಾರ್

    `ಶೋಧ’ಕ್ಕಾಗಿ ಪವನ್ ಕುಮಾರ್ ಜೊತೆ ಒಂದಾದ ಸಿರಿ ರವಿಕುಮಾರ್

    KRG ಸ್ಟುಡಿಯೋಸ್ ನಿರ್ಮಿಸಿ, ಪ್ರೆಸೆಂಟ್ ಮಾಡುತ್ತಿರುವ ‘ಶೋಧ’ ವೆಬ್ ಸರಣಿ (Shodha Web Series) ಇದೇ ತಿಂಗಳ 22ರಿಂದ zee5ನಲ್ಲಿ ಸ್ಟ್ರೀಮಿಂಗ್ ಆಗಲಿದೆ. ಪ್ರಮುಖ ಪಾತ್ರದಲ್ಲಿ ಪವನ್ ಕುಮಾರ್ ನಟಿಸುತ್ತಿದ್ದಾರೆ. ಇದೀಗ ಶೋಧ ವೆಬ್ ಸರಣಿಯ ಮತ್ತೊಂದು ಪ್ರಮುಖ ಪಾತ್ರವನ್ನು ಪರಿಚಯಿಸಲಾಗಿದೆ. ಸಿರಿ ರವಿಕುಮಾರ್ (Siri Ravikumar) ಶೋಧ ಅಂಗಳಕ್ಕೆ ಎಂಟ್ರಿ ಕೊಟ್ಟಿದ್ದಾರೆ.

    `ಕವಲುದಾರಿ’, `ಸಕುಟುಂಬ ಸಮೇತ’ ಹಾಗೂ `ಸ್ವಾತಿ ಮುತ್ತಿನ ಮಳೆ ಹನಿ’ ಸಿನಿಮಾಗಳ ಮೂಲಕ ಖ್ಯಾತಿ ಗಳಿಸಿರುವ ಸಿರಿ ರವಿಕುಮಾರ್ ಈಗ ಥ್ರಿಲ್ಲರ್ ಕಥಾಹಂದರದ ‘ಶೋಧ’ ಸರಣಿಯ ಭಾಗವಾಗಿದ್ದಾರೆ. ಆರು ಸಂಚಿಕೆಯುಳ್ಳ ಈ ವೆಬ್ ಸರಣಿಗೆ ಸುಹಾಸ್ ನವರತ್ನ ಕಥೆ ಬರೆದಿದ್ದಾರೆ.

    ಶೋಧ ವೆಬ್ ಸರಣಿ ಬಗ್ಗೆ ಮಾತನಾಡಿರುವ ಸಿರಿ ರವಿಕುಮಾರ್, ರಂಗಭೂಮಿಯಿಂದ ಸಿನಿಮಾದವರೆಗೆ, ಗಾಯನದಿಂದ ನಟನೆವರೆಗೆ, ನನ್ನನ್ನು ನಾನು ಕಲಾವಿದೆಯಾಗಿ ರೂಪಿಸಿಕೊಳ್ಳುತ್ತಾ ಬಂದಿದ್ದೇನೆ. ಶೋಧ ಒಂದು ಅದ್ಭುತ ಕಥೆ. ತೀವ್ರವಾದ, ಆಕರ್ಷಕವಾದ ಕಥೆಯಾಗಿದೆ. ಈ ಥ್ರಿಲ್ಲರ್ ಕಥಾಹಂದರದ ಭಾಗವಾಗಿರುವುದು ಖುಷಿಯಾಗಿದೆ ಎಂದು ಹೇಳಿದ್ದಾರೆ.

    ‘ಅಯ್ಯನ ಮನೆ’ ಸರಣಿ ಬಳಿಕ zee5ನಲ್ಲಿ ಸ್ಟ್ರೀಮಿಂಗ್ ಆಗುತ್ತಿರುವ ಮತ್ತೊಂದು ವೆಬ್ ಸರಣಿ ಈ ಶೋಧ. ಆಗಸ್ಟ್ 22ರಂದು ಶೋಧ ವೆಬ್ ಸಿರೀಸ್ ಸ್ಟ್ರೀಮಿಂಗ್ ಪ್ರಾರಂಭಿಸಲಿದೆ. ಈ ವೆಬ್ ಸರಣಿಗೆ ಸುನಿಲ್ ಮೈಸೂರು ಆ್ಯಕ್ಷನ್ ಕಟ್ ಹೇಳಿದ್ದಾರೆ. ಇದು ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿದೆ.

  • ಅರವಿಂದ್ ಅಯ್ಯರ್‌, ಸಿರಿ ಜೋಡಿಯ ‘ಬಿಸಿ ಬಿಸಿ ಐಸ್‌ ಕ್ರೀಮ್’ ಟ್ರೈಲರ್ ರಿಲೀಸ್

    ಅರವಿಂದ್ ಅಯ್ಯರ್‌, ಸಿರಿ ಜೋಡಿಯ ‘ಬಿಸಿ ಬಿಸಿ ಐಸ್‌ ಕ್ರೀಮ್’ ಟ್ರೈಲರ್ ರಿಲೀಸ್

    ‘ಕಹಿ’ ಮತ್ತು ‘ಅಳಿದು ಉಳಿದವರು’ ಸಿನಿಮಾ ನಿರ್ದೇಶಿಸಿದ್ದ ಅರವಿಂದ್ ಶಾಸ್ತ್ರಿ ‘ಬಿಸಿ ಬಿಸಿ ಐಸ್‌ ಕ್ರೀಮ್’ (Bisi Bisi Ice Cream) ತಿನಿಸೋದಿಕ್ಕೆ ಬರ್ತಿದ್ದಾರೆ. ಈ ವಿಭಿನ್ನ ಟೈಟಲ್ ನ ಚಿತ್ರದ ಟ್ರೈಲರ್ ಬೆಂಗಳೂರಿನ ರೇಣುಕಾಂಬ ಸ್ಟುಡಿಯೋದಲ್ಲಿ ನಿನ್ನೆ ಬಿಡುಗಡೆ ಮಾಡಲಾಗಿತು. ಈ ಸಂದರ್ಭದಲ್ಲಿ ಚಿತ್ರತಂಡ ಸಿನಿಮಾದ ಬಗ್ಗೆ ಮಾಹಿತಿ ಹಂಚಿಕೊಂಡಿದೆ. ಇದನ್ನೂ ಓದಿ:‘ಬಿಗ್ ಬಾಸ್’ನಲ್ಲಿ ಭಾರೀ ಟ್ವಿಸ್ಟ್: ಫಿನಾಲೆಗೆ ಟಿಕೆಟ್ ಪಡೆದ ಸಂಗೀತ

    ನಿರ್ದೇಶಕ ಅರವಿಂದ್ ಶಾಸ್ತ್ರಿ ಮಾತನಾಡಿ, ಕ್ಯಾಬ್ ಡ್ರೈವರ್ ವೃತ್ತಿ ಬಗ್ಗೆ ನಾವು ಹೇಳಲು ಹೊರಟಿಲ್ಲ. ಆ ವ್ಯಕ್ತಿಯ ಕಥೆಯನ್ನು ನಾವು ಸಿನಿಮಾದಲ್ಲಿ ಹೇಳಲು ಹೊರಟಿದ್ದೇವೆ. ಶೂಟಿಂಗ್ ಕಳೆದು ವರ್ಷ ಮುಗಿಸಿದ್ದೇವೆ. ಒಬ್ಬ ಒಂಟಿ ಕ್ಯಾಬ್ ಡ್ರೈವರ್ ಲೈಫ್‌ನಲ್ಲಿ ಹುಡುಗಿ ಬಂದಾಗ ಅಡ್ವೆಂಚರ್ಸ್, ಮಿಸ್ ಅಡ್ವೆಂಚರ್ಸ್ ಆಗುತ್ತದೆ ಅನ್ನೋದು ಸಿನಿಮಾ ಕಥೆಯಾಗಿದ್ದು, ಇದೀಗ ಸಿನಿಮಾದ ಶೂಟಿಂಗ್ ಮುಗಿದಿದೆ.

    ನಟ ಅರವಿಂದ್ ಅಯ್ಯರ್ (Aravind Iyer) ಮಾತನಾಡಿ, ನನ್ನದು ವಿಭಿನ್ನ ಪಾತ್ರ. ಈ ಪಾತ್ರಕ್ಕಾಗಿ ವರ್ಕೌಟ್ ಬಿಟ್ಟಿದ್ದೇನೆ. ನಟನೆ ಮಾಡಲು ಒಳ್ಳೆಯ ಅವಕಾಶ ಸಿಕ್ಕಿದೆ. ಬಹಳ ಮಜಾ ಮಾಡಿಕೊಂಡು ಕೆಲಸ ಮಾಡಿದ್ದೇನೆ ಎಂದರು.

    ನಾಯಕಿ ಸಿರಿ ರವಿಕುಮಾರ್ ಮಾತನಾಡಿ, ನಾನು ಅರವಿಂದ್ ಶಾಸ್ತ್ರಿ ಅವರ ಕಹಿ ಸಿನಿಮಾ ಸಮಯದಲ್ಲಿ ಮಾತನಾಡಿದ್ವಿ. ಮತ್ತೆ ಬಹಳ ವರ್ಷಗಳ ನಂತರ ಕಾಲ್ ಮಾಡಿದಾಗ ಖುಷಿಪಟ್ಟೆ. ಇವರ ‘ಕಹಿ ಮತ್ತು ಅಳಿದುಳಿದವರು’ ಸಿನಿಮಾ ನನಗೆ ಇಷ್ಟ. ಕಾಮಿಡಿ, ಥ್ರಿಲ್ಲರ್, ಅಡ್ವೆಂಚರ್ ಎಲ್ಲವೂ ಕಥೆಯಲ್ಲಿ ಇದೆ. ಇದನ್ನು ನಾನು ಮಾಡಲು ರೆಡಿಯಾದೆ. ಶೂಟಿಂಗ್ ಮಾಡಲು ಮಜವಾಗಿತ್ತು. ಸಿನಿಮಾ ನೋಡಿದಾಗ ಖುಷಿ ಎನಿಸಿತು ಎಂದರು.

    ಕ್ಯಾಬ್ ಡ್ರೈವರ್ ಕಥೆ ಹೇಳುವ ಸಿನಿಮಾಗಳು ಈಗಾಗಲೇ ಬಂದಿವೆ. ಆದರೆ ಬಿಸಿ ಬಿಸಿ ಐಸ್‌ ಕ್ರೀಮ್, ಅನಾರೋಗ್ಯದಲ್ಲಿರುವ ಕ್ಯಾಬ್ ಡ್ರೈವರ್ ಜೀವನದಲ್ಲಿ ನಿಗೂಢ ಮಹಿಳೆಯೊಬ್ಬಳು ಬಂದಾಗ, ಅವಳು ಅವನ ದುಃಖಗಳಿಗೆ ಔಷಧ ಮತ್ತು ಅನೇಕ ಸಾಹಸಗಳಿಗೆ ನಾಂದಿಯಾಗುತ್ತಾಳೆ ಎಂಬ ಕಥೆ ಎಳೆಯನ್ನು ಇಟ್ಟುಕೊಂಡು ಅರವಿಂದ್ ಶಾಸ್ತ್ರಿ ಸಿನಿಮಾ ಮಾಡಿದ್ದಾರೆ. ಕಥೆ ಬರೆದು ನಿರ್ದೇಶನ ಮಾಡುವುದರ ಜೊತೆಗೆ ಸಂಕಲನದ ಜವಾಬ್ದಾರಿ ಹೊತ್ತುಕೊಂಡಿದ್ದಾರೆ.

    ಡಾರ್ಕ್ ಕಾಮಿಡಿ ರೊಮ್ಯಾನ್ಸ್ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ಅರವಿಂದ್ ಅಯ್ಯರ್- ಸಿರಿ ರವಿಕುಮಾರ್ ಜೋಡಿಯಾಗಿ ನಟಿಸುತ್ತಿದ್ದು, ಗೋಪಾಲಕೃಷ್ಣ ದೇಶಪಾಂಡೆ ಮುಖ್ಯಭೂಮಿಕೆಯಲ್ಲಿ ನಟಿಸುತ್ತಿದ್ದಾರೆ. ನಕುಲ್ ಅಭ್ಯಂಕರ್ ಸಂಗೀತ ನಿರ್ದೇಶನ, ಎನೋಷ್ ಒಲಿವೇರಾ ಛಾಯಾಗ್ರಹಣ ಚಿತ್ರಕ್ಕಿದೆ. ಅಕ್ಷರ ಭಾರಧ್ವಾಜ್ ‘ಬಿಸಿ ಬಿಸಿ ಐಸ್‌ ಕ್ರೀಮ್’ ಸಿನಿಮಾಗೆ ಬಂಡವಾಳ ಹಾಕಿದ್ದಾರೆ.

  • ರಮ್ಯಾ ನಿರ್ಮಾಣದ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಟ್ರೈಲರ್‌ ಔಟ್‌

    ರಮ್ಯಾ ನಿರ್ಮಾಣದ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಟ್ರೈಲರ್‌ ಔಟ್‌

    ಮೋಹಕ ತಾರೆ ರಮ್ಯಾ (Ramya) ನಿರ್ಮಾಣದ ‘ಸ್ವಾತಿ ಮುತ್ತಿನ ಮಳೆ ಹನಿಯೇ’ (Swathi Muttina Male Haniye) ಟ್ರೈಲರ್ ಇದೀಗ ರಿಲೀಸ್ ಆಗಿದೆ. ಬೆಂಗಳೂರಿನ ಖಾಸಗಿ ಹೋಟೆಲ್‌ವೊಂದರಲ್ಲಿ ಟ್ರೈಲರ್ ರಿಲೀಸ್ ಸಮಾರಂಭ ನಡೆದಿದೆ. ಚಿತ್ರದ ‌ಟ್ರೈಲರ್ ಭಾವನಾತ್ಮಕವಾಗಿ ಮೂಡಿ ಬಂದಿದ್ದು, ಪ್ರೇಕ್ಷಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.

    ಅನಿಕೇತ್ ಪಾತ್ರದಲ್ಲಿ ರಾಜ್ ಬಿ ಶೆಟ್ಟಿ (Raj B Shetty), ಪ್ರೇರಣಾ ರೋಲ್‌ನಲ್ಲಿ ಸಿರಿ ರವಿಕುಮಾರ್ (Siri Ravikumar) ಜೀವತುಂಬಿದ್ದು, ಇಡೀ ಟ್ರೈಲರ್ ಎಮೋಷನಲ್ ಆಗಿ ನೋಡುಗರಿಗೆ ಕನೆಕ್ಟ್ ಆಗಿದೆ. ಅನಾರೋಗ್ಯದಿಂದ ಬಳಲುತ್ತಿರುವ ಅನಿಕೇತ್‌ಗೆ ಹೆಲ್ತ್ ಕೌನ್ಸಿಲರ್ ಆಗಿ ಪ್ರೇರಣಾ ಜೊತೆಯಾಗುತ್ತಾರೆ. ಕಥೆಯಲ್ಲಿ ಏನಾಗುತ್ತೆ ಎಂಬುದನ್ನ ಸುಳಿವು ಬಿಟ್ಟು ಕೊಡದೇ ಸಿನಿಮಾ ನೋಡುವಂತೆ ಪ್ರೇರಣೆ ನೀಡಿದೆ ಈ ಟ್ರೈಲರ್. ಭಾವನಾತ್ಮಕವಾಗಿ ಪ್ರೇಕ್ಷಕರನ್ನ ಸೆಳೆಯುತ್ತಿದೆ ಈ ಟ್ರೈಲರ್.‌

     

    View this post on Instagram

     

    A post shared by Raj B Shetty (@rajbshetty)

    ರಿಲೀಸ್ ಆಗಿರೋ ಟ್ರೈಲರ್ ನೋಡಿಯೇ ರಾಜ್ ಬಿ ಶೆಟ್ಟಿ, ಸಿರಿ ನಟನೆಗೆ ಫ್ಯಾನ್ಸ್ ಕಡೆಯಿಂದ ಉತ್ತಮ ರೆಸ್ಪಾನ್ಸ್ ಸಿಕ್ಕಿದೆ. ಒಂದೊಳ್ಳೆ ವಿಭಿನ್ನ ಕಥೆಗೆ ನಟಿ ರಮ್ಯಾ ನಿರ್ಮಾಣದ ಮೂಲಕ ಸಾಥ್ ನೀಡಿದ್ದಾರೆ. ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಇದೇ ನವೆಂಬರ್ 24ಕ್ಕೆ ರಿಲೀಸ್ ಆಗ್ತಿದೆ.

    ಅಂದುಕೊಂಡಂತೆ ಆಗಿದ್ದರೆ, ಈ ಸಿನಿಮಾದ ಮೂಲಕ ರಮ್ಯಾ ನಟಿಯಾಗಿ ಮತ್ತೆ ಚಿತ್ರೋದ್ಯಮ ಪ್ರವೇಶಿಸಬೇಕಿತ್ತು. ಮೊದ ಮೊದಲು ಈ ಸಿನಿಮಾಗೆ ರಮ್ಯಾನೆ ನಾಯಕಿ ಎಂದು ಹೇಳಲಾಗಿತ್ತು. ಆದರೆ, ಬಳಿಕ ಚಿತ್ರದಿಂದ ಹೊರಬಂದರು. ಈ ಕುರಿತಂತೆ ಮೊನ್ನೆಯಷ್ಟೇ ರಮ್ಯಾ ಸ್ಪಷ್ಟನೆಯನ್ನೂ ಕೊಟ್ಟಿದ್ದಾರೆ.

    ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಇದು ನನಗೆ ಬಹಳ ವಿಶೇಷವಾದ ಚಿತ್ರ. ನಿರ್ಮಾಪಕಿಯಾಗಿ ನನ್ನ ಮೊದಲ ಚಿತ್ರ ಎಂದಷ್ಟೇ ಅಲ್ಲ. ಜೀವನದ ಬಗ್ಗೆ ನನ್ನ ದೃಷ್ಟಿಕೋನವನ್ನು ಸಂಪೂರ್ಣವಾಗಿ ಬದಲಿಸಿದ ವಿಷಯಾಧರಿತ ಚಿತ್ರ ಎಂದು ಸಿನಿಮಾದ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ನಟಿ ರಮ್ಯಾ ಬರೆದುಕೊಂಡಿದ್ದರು. ಇದನ್ನೂ ಓದಿ:ಅದ್ದೂರಿಯಾಗಿ ನಡೆಯಿತು ಯಶ್ ಪುತ್ರನ ಬರ್ತ್‌ಡೇ

    ನಿಮ್ಮಲ್ಲಿ ಹಲವರಿಗೆ ಈ ಪ್ರಶ್ನೆ ಇದೆ ಎಂದು ನನಗೆ ತಿಳಿದಿದೆ. ನಾನು ಚಿತ್ರದಿಂದ ಹೊರಗುಳಿದದ್ದು ಏಕೆಂದರೆ ಅದು ಓಟಿಟಿಯಲ್ಲಿ ಬಿಡುಗಡೆಯಾಗುವುದೆಂದು ನಿರ್ಧರಿಸಿದ್ದೆವು. ನನ್ನ ಕಮ್‌ಬ್ಯಾಕ್ ಚಿತ್ರವು ಚಿತ್ರಮಂದಿರದಲ್ಲಿಯೇ ಬಿಡುಗಡೆಯಾಗಬೇಕೆಂದು ನಾನು ಬಯಸಿದ್ದೆ. ಚಿತ್ರವನ್ನು ಖರೀದಿಸುವುದಾಗಿ ಭರವಸೆ ನೀಡಿದ ಓಟಿಟಿ ವೇದಿಕೆಯು ನಂತರ ಹಿಂದೆ ಸರಿಯಿತು. ಕನ್ನಡದಲ್ಲಿ ಇದು ಹೆಚ್ಚಾಗಿ ನಡೆಯುತ್ತದೆ. ಆದರೆ, ನಿಮ್ಮನ್ನು ಸೇರಲು ಹಲವು ಮಾರ್ಗಗಳನ್ನು ಹುಡುಕುತ್ತೇವೆ ಎಂದು ನಟಿ ತಿಳಿಸಿದ್ದರು.

    ‘ಟೋಬಿ’ ಹೀರೋ ರಾಜ್ ಬಿ ಶೆಟ್ಟಿ ಜೊತೆ ಮೋಹಕ ತಾರೆ ರಮ್ಯಾ (Ramya) ನಟಿಸಬೇಕಿತ್ತು. ಆದರೆ ಈಗ ಅಸಲಿ ಕಾರಣವನ್ನ ತಿಳಿಸುವ ಮೂಲಕ ಗಾಸಿಪ್‌ಗೆಲ್ಲಾ ನಟಿ ಸ್ಪಷ್ಟನೆ ನೀಡಿದ್ದರು. ರಾಜ್ ಬಿ ಶೆಟ್ಟಿ, ಸಿರಿ ರವಿಕುಮಾರ್ ಸೇರಿದಂತೆ ಇಡೀ ಚಿತ್ರತಂಡಕ್ಕೆ ಮತ್ತು ಕೆವಿಎನ್ ಸಂಸ್ಥೆಯ ರೂವಾರಿ ಕಾರ್ತಿಕ್-ಯೋಗಿಗೆ, ರಮ್ಯಾ ಧನ್ಯವಾದಗಳನ್ನ ತಿಳಿಸಿದ್ದರು.

  • ಸ್ವಾತಿ ಮುತ್ತಿನ ಮಳೆ ಹನಿಯೇ ಚಿತ್ರದ ‘ಮೆಲ್ಲಗೆ’ ಸಾಂಗ್ ರಿಲೀಸ್

    ಸ್ವಾತಿ ಮುತ್ತಿನ ಮಳೆ ಹನಿಯೇ ಚಿತ್ರದ ‘ಮೆಲ್ಲಗೆ’ ಸಾಂಗ್ ರಿಲೀಸ್

    ನ್ನೇನು ಬಿಡುಗಡೆಗೆ ಕೆಲವೇ ದಿನಗಳಿರುವಂತೆಯೇ, ‘ಸ್ವಾತಿ ಮುತ್ತಿನ ಮಳೆ ಹನಿಯೇ’ (Swati Muthina Male Haniye) ಚಿತ್ರದ ‘ಮೆಲ್ಲಗೆ’ ಎಂಬ ಮೊದಲ ಹಾಡನ್ನು ಇಂದು ಬಿಡುಗಡೆ ಮಾಡಲಾಗಿದೆ. ರಾಜ್‍ ಬಿ ಶೆಟ್ಟಿ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸುತ್ತಿರುವ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಚಿತ್ರವನ್ನು ‘ಸ್ಯಾಂಡಲ್‌ವುಡ್‌ ಕ್ವೀನ್‌’ ರಮ್ಯಾ (Ramya) ಅವರು ತಮ್ಮ ಆಪಲ್‍ ಬಾಕ್ಸ್ ಸ್ಟುಡಿಯೋಸ್‍ ಮೂಲಕ ಇದೇ ಮೊದಲ ಬಾರಿಗೆ ನಿರ್ಮಿಸಿದ್ದಾರೆ. ಲೈಟರ್‍ ಬುದ್ಧ ಫಿಲಂಸ್‍ ಸಹಯೋಗದೊಂದಿಗೆ ನಿರ್ಮಾಣವಾಗಿರುವ ಈ ಚಿತ್ರವನ್ನು ನವೆಂಬರ್‍ 24ರಂದು ಕೆ.ಆರ್.ಜಿ. ಸ್ಟುಡಿಯೋಸ್‍ ಸಂಸ್ಥೆಯು ರಾಜ್ಯಾದ್ಯಂತ ಬಿಡುಗಡೆ ಮಾಡುತ್ತಿದೆ.

    ‘ಮೆಲ್ಲಗೆ’ ಹಾಡಿಗೆ ಮಿಥುನ್‍ ಮುಕುಂದನ್‍ ಸಂಗೀತ ಸಂಯೋಜಿಸಿದ್ದು, ಮಾಧುರಿ ಶೇಷಾದ್ರಿ ಹಾಡಿದ್ದಾರೆ. ಇನ್ನು, ಮಂಗಳೂರಿನಲ್ಲಿ ಓದುತ್ತಿರುವ ವಿದ್ಯಾರ್ಥಿ ಪೃಥ್ವಿ ಈ ಹಾಡನ್ನು ಬರೆದಿದ್ದಾರೆ. ಈ ಕುರಿತು ಮತನಾಡುವ ನಿರ್ದೇಶಕ ರಾಜ್‍ ಶೆಟ್ಟಿ, ‘ಇದು ಪ್ರೀತಿಯ ಕುರಿತ ಒಂದು ಮಹಿಳೆಯ ದೃಷ್ಟಿಕೋನದ ಹಾಡು’. ಈ ಪ್ರೀತಿಯನ್ನು ಮಹಿಳೆಯರು ಹೇಗೆ ಅನುಭವಿಸುತ್ತಾರೆ ಎನ್ನುವುದು ಬೇಕಾಗಿತ್ತು. ಹಾಗಾಗಿ, ಪೃಥ್ವಿ ಅವರಿಂದಲೇ ಬರೆಸಿದೆ’ ಎನ್ನುತ್ತಾರೆ ರಾಜ್‍.

    ಈ ಹಾಡಿನಲ್ಲಿ ಶಾಸ್ತ್ರೀಯ ಸಂಗೀತದ ಸ್ಪರ್ಶ ಇದ್ದು, ಸಂಗೀತ ನಿರ್ದೇಶಕ ಮಿಥುನ್‍ ಮುಕುಂದನ್‍ ತಮ್ಮ ಸಂಯೋಜನೆಯಿಂದ ಮೋಡಿ ಮಾಡುತ್ತಾರೆ ಎನ್ನುತ್ತಾರೆ. ಸ್ವತಃ ಹಿನ್ನೆಲೆ ಗಾಯಕಿಯೂ ಆಗಿರುವ ನಾಯಕಿ ಸಿರಿ ರವಿಕುಮಾರ್ ಈ ಹಾಡಿನ ಅಭಿಮಾನಿಯಾಗಿದ್ದು, ಹಾಡನ್ನು ಪದೇಪದೇ ಕೇಳುತ್ತಿರುವುದಾಗಿ ಹೇಳಿಕೊಳ್ಳುತ್ತಾರೆ.

     

    ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಚಿತ್ರದಲ್ಲಿ ರಾಜ್‍ ಮತ್ತು ಸಿರಿ ಜೊತೆಗೆ ಬಾಲಾಜಿ ಮನೋಹರ್‍, ಸೂರ್ಯ ವಸಿಷ್ಠ, ರೇಖಾ ಕೂಡ್ಲಿಗಿ, ಜೆ.ಪಿ. ತುಮ್ಮಿನಾಡು, ಸ್ನೇಹ ಶರ್ಮಾ ಮುಂತಾದವರು ಅಭಿನಯಿಸಿದ್ದಾರೆ. ಪ್ರವೀಣ್‍ ಶ್ರೀಯಾನ್‍ ಈ ಚಿತ್ರದ ಛಾಯಾಗ್ರಹಣದ ಜೊತೆಗೆ, ರಾಜ್‍ ಜೊತೆಗೆ ಸೇರಿ ಸಂಕಲನದ ಜವಾಬ್ದಾರಿಯನ್ನೂ ಹೊತ್ತಿದ್ದಾರೆ.

  • ನಿರ್ಮಾಪಕಿಯಾದ ಅನುಭವವನ್ನು ಮೊದಲಬಾರಿಗೆ ವ್ಯಕ್ತ ಪಡಿಸಿದ ರಮ್ಯಾ

    ನಿರ್ಮಾಪಕಿಯಾದ ಅನುಭವವನ್ನು ಮೊದಲಬಾರಿಗೆ ವ್ಯಕ್ತ ಪಡಿಸಿದ ರಮ್ಯಾ

    ವರ್ಷದ ಬಹು ನಿರೀಕ್ಷಿತ ಚಲನಚಿತ್ರಗಳಲ್ಲಿ ಒಂದೆಂದು ಈಗಾಗಲೇ ರಾಜ್ಯಾದ್ಯಂತ ಸುದ್ದಿ ಮಾಡಿ, ಸಿನಿರಸಿಕರು ಕಾತುರದಿಂದ ಕಾಯುತ್ತಿರುವ ಚಿತ್ರ ‘ಸ್ವಾತಿ ಮುತ್ತಿನ ಮಳೆ ಹನಿಯೇ’. ಈ ಚಿತ್ರದ ಮೂಲಕ ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ, ತಮ್ಮ ನಿರ್ಮಾಣ ಸಂಸ್ಥೆಯಾದ ‘ಆಪಲ್ ಬಾಕ್ಸ್ ಸ್ಟುಡಿಯೋಸ್’ ವತಿಯಿಂದ ಮೊದಲ ಬಾರಿ ನಿರ್ಮಾಪಕಿಯಾಗಿ ಕಾಣಿಸಿಕೊಳ್ಳಲಿದ್ದು, ‘ಲೈಟರ್ ಬುದ್ಧ ಫಿಲಂಸ್’ ಎಂಬ ಸಂಸ್ಥೆಯೊಂದಿಗೆ ಕೈ ಜೋಡಿಸಿದ್ದಾರೆ. ಈ ಚಿತ್ರವನ್ನು ನಟ-ನಿರ್ದೇಶಕ ರಾಜ್ ಬಿ ಶೆಟ್ಟಿ ನಿರ್ದೇಶಿಸಲಿದ್ದು ಅವರೊಂದಿಗೆ ಸಿರಿ ರವಿಕುಮಾರ್ ಕೂಡ ಕಾಣಿಸಿಕೊಳ್ಳಲಿದ್ದಾರೆ.

    ನಟಿ-ನಿರ್ಮಾಪಕಿ ರಮ್ಯಾರವರು “ಈ ಚಿತ್ರವು ನಮ್ಮೆಲ್ಲರನ್ನು ಪ್ರೀತಿ-ಪ್ರೇಮ ದೊಂದಿಗೆ ಒಲವಾಗುವಂತೆ ಮಾಡುತ್ತೆ ಎಂದು ವಿಶ್ವಾಸದಿಂದ ತಿಳಿಸುತ್ತಾ, “ಮೊದಲ ಬಾರಿ ನಾನು ನಿರ್ಮಾಪಕಿಯ ಜವಾಬ್ದಾರಿ ನಿರ್ವಹಿಸುತ್ತಾ ಬಹಳಷ್ಟು ವಿಷಯಗಳನ್ನು ಕಲಿತೆ. ನನಗಿದೊಂದು ಅದ್ಭುತವಾದ ಅನುಭವ. ಈ ಚಿತ್ರವು ಪ್ರೀತಿ ಹಾಗು ಆತ್ಮಶೋಧನೆಯನ್ನು ಕುರಿತು ಒಂದು ಸುಂದರ, ಕಾವ್ಯಾತ್ಮಕ ಹಾಗು ಸೌಮ್ಯ ಅನುಭವವಾಗಲಿದೆ” ಎಂದರು. ಇದನ್ನೂ ಓದಿ: ಸಂಕ್ರಾಂತಿ ಸಂಭ್ರಮಕ್ಕಾಗಿ ಮತ್ತೆ ಜೊತೆಯಾದ ಬಿಗ್ ಬಾಸ್ ಸ್ಪರ್ಧಿಗಳು

    2022ರ ವಿಜಯದಶಮಿಯಂದು ಚಿತ್ರವು ಘೋಷಿಸಲಾಗಿದ್ದು, ಹಲವಾರು ಮನೋಜ್ಞ ಸ್ಥಳಗಳಲ್ಲಿ ಚಿತ್ರೀಕರಿಸಲಾಗಿದೆ. ಮೊದಲನೆ  ನೋಟದ ಪೋಸ್ಟರ್ ಹಾಗು ಮುಖ್ಯ ಪಾತ್ರಗಳನ್ನು ಪರಿಚಯಿಸಲು ಬಿಡುಗಡೆ ಮಾಡಿದ ಪೋಸ್ಟರ್ಗಳ ಮೂಲಕ ಈಗಾಗಲೇ ಎಲ್ಲರ ಗಮನವನ್ನು ಸೆಳೆದಿದೆ. ‘ಪ್ರೇರಣಾ’ ಮತ್ತು ‘ಅನಿಕೇತ್’ ಎಂಬ ಮುಖ್ಯ ಪಾತ್ರಗಳಲ್ಲಿ ಸಿರಿ ರವಿಕುಮಾರ್ ಹಾಗು ರಾಜ್ ಬಿ ಶೆಟ್ಟಿ ಕಾಣಿಸಿಕೊಳ್ಳಲಿದ್ದಾರೆ.

    ಈ ಚಿತ್ರದಲ್ಲಿ ಪ್ರತಿಭಾನ್ವಿತ ನಟರ ದಂಡೇ ಇದ್ದು ಮುಖ್ಯವಾಗಿ ಬಾಲಾಜಿ ಮನೋಹರ್, ಸೂರ್ಯ ವಸಿಷ್ಠ, ರೇಖಾ ಕೂಡ್ಲಿಗಿ, ಸ್ನೇಹ ಶರ್ಮ, ಜೆಪಿ ತುಮ್ಮಿನಾಡ್, ಗೋಪಾಲಕೃಷ್ಣ  ದೇಶಪಾಂಡೆ ಮತ್ತು ಇನ್ನಿತರು ಕಾಣಿಸಿಕೊಳ್ಳಲಿದ್ದಾರೆ. ಚಿತ್ರಕ್ಕೆ ಮಿಧುನ್ ಮುಕುಂದನ್ ಸಂಗೀತ ಸಂಯೋಜಿಸಲಿದ್ದು, ಪ್ರವೀಣ್ ಶ್ರೀಯಾನ್ – ಛಾಯಾಗ್ರಹಣ ಹಾಗು ಸಂಕಲನದ  ಜವಾಬ್ದಾರಿಯನ್ನು ನಿರ್ವಹಹಿಸಲಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಹೊಸ ವರ್ಷಕ್ಕೆ ಅಭಿಮಾನಿಗಳಿಗೆ ಸ್ಪೆಷಲ್ ಗಿಫ್ಟ್ ಕೊಟ್ಟ ಸ್ಯಾಂಡಲ್ ವುಡ್ ಕ್ವೀನ್

    ಹೊಸ ವರ್ಷಕ್ಕೆ ಅಭಿಮಾನಿಗಳಿಗೆ ಸ್ಪೆಷಲ್ ಗಿಫ್ಟ್ ಕೊಟ್ಟ ಸ್ಯಾಂಡಲ್ ವುಡ್ ಕ್ವೀನ್

    ಮೋಹಕ ತಾರೆ ನಟಿ ರಮ್ಯಾ ಹೊಸ ವರ್ಷಕ್ಕೆ ಅಭಿಮಾನಿಗಳಿಗೆ ಸ್ಪೆಷಲ್ ಗಿಫ್ಟ್ ಕೊಟ್ಟಿದ್ದಾರೆ. ತಮ್ಮ ಸಂಸ್ಥೆಯ ಚೊಚ್ಚಲ ನಿರ್ಮಾಣದ ಸಿನಿಮಾದ ಹೊಸ ಹೊಸ ಲುಕ್ ಗಳನ್ನು ಅವರು ರಿಲೀಸ್ ಮಾಡಿದ್ದಾರೆ. ಆಪಲ್‌ ಬಾಕ್ಸ್‌ ಸ್ಟುಡಿಯೋಸ್‌ ಮೂಲಕ ನಿರ್ಮಾಣ ಮಾಡುತ್ತಿರುವ ಚೊಚ್ಚಲ ಸ್ವಾತಿ ಮುತ್ತಿನ ಮಳೆ ಹನಿಯೇ ಸಿನಿಮಾ ಇದೀಗ ಪೋಸ್ಟ್‌ ಪ್ರೊಡಕ್ಷನ್‌ ಹಂತದಲ್ಲಿದೆ. ವಿಜಯದಶಮಿ ವೇಳೆ ಘೋಷಣೆ ಆಗಿದ್ದ ಈ ಸಿನಿಮಾ ಅಕ್ಟೋಬರ್‌ ಮತ್ತು ನವೆಂಬರ್‌ನಲ್ಲಿ ಮುಗಿಸಿಕೊಂಡಿದೆ.

    ರಾಜ್‌ ಬಿ ಶೆಟ್ಟಿ ಈ ಸಿನಿಮಾ ನಿರ್ದೇಶನ ಮಾಡುವುದರ ಜತೆಗೆ ಮುಖ್ಯಭೂಮಿಕೆಯಲ್ಲಿಯೂ ನಟಿಸಿದ್ದಾರೆ. ಸಿರಿ ರವಿಕುಮಾರ್‌ ನಾಯಕಿಯಾಗಿದ್ದಾರೆ. ಇನ್ನುಳಿದಂತೆ ಬಾಲಾಜಿ ಮನೋಹರ್‌, ಸೂರ್ಯ ವಸಿಷ್ಠ, ರೇಖಾ ಕೂಡ್ಲಿಗಿ, ಸ್ನೇಹಾ ಶರ್ಮಾ, ಜೆಪಿ ತುಮ್ಮಿನಾಡ್‌, ಗೋಪಾಲ್‌ಕೃಷ್ಣ ದೇಶಪಾಂಡೆ ಇನ್ನುಳಿದ ತಾರಾಗಣದಲ್ಲಿದ್ದಾರೆ. ಇದನ್ನೂ ಓದಿ:ವಿನ್ನರ್‌ ಘೋಷಣೆಗೆ ಕೌಂಟ್‌ಡೌನ್‌, ಯಾರ ಕೈ ಸೇರಲಿದೆ ಬಿಗ್ ಬಾಸ್ ಟ್ರೋಫಿ?

    ಪ್ರವೀಣ್‌ ಶ್ರೀಯಾನ್‌ ಛಾಯಾಗ್ರಹಣ ಮತ್ತು ಸಂಕಲನದ ಜವಾಬ್ದಾರಿ ಹೊತ್ತರೆ, ಮಿಧುನ್‌ ಮುಕುಂದನ್ ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ಸ್ವಾತಿ ಮುತ್ತಿನ ಮಳೆ ಹನಿಯೇ ಸಿನಿಮಾ ಒಂದು ಪ್ರಬುದ್ಧ ಲವ್‌ಸ್ಟೋರಿ. ಒಂದು ಭಾವುಕ ಪ್ರಯಾಣ. ಈ ಭಾವುಕ ಜರ್ನಿ ಹೇಗಿರಲಿದೆ ಎಂಬುದನ್ನು ಹೇಳಲೆಂದೇ ಇತ್ತೀಚೆಗೆ ಚಿತ್ರದ ಫಸ್ಟ್‌ ಲುಕ್‌ ಬಿಡುಗಡೆ ಆಗಿತ್ತು. ಇದೀಗ ಇದೇ ಚಿತ್ರದ ಒಂದಷ್ಟು ಎಕ್ಸ್‌ಕ್ಲೂಸಿವ್‌ ಫೋಟೋಗಳು ಇಲ್ಲಿವೆ.

    Live Tv
    [brid partner=56869869 player=32851 video=960834 autoplay=true]

  • ತಮ್ಮದೇ ಬ್ಯಾನರ್ ಸಿನಿಮಾದ ನಾಯಕಿಯ ಫಸ್ಟ್ ಲುಕ್ ರಿಲೀಸ್ ಮಾಡಿದ ರಮ್ಯಾ

    ತಮ್ಮದೇ ಬ್ಯಾನರ್ ಸಿನಿಮಾದ ನಾಯಕಿಯ ಫಸ್ಟ್ ಲುಕ್ ರಿಲೀಸ್ ಮಾಡಿದ ರಮ್ಯಾ

    ಆ್ಯಪಲ್ ಬಾಕ್ಸ್ ಮೂಲಕ ಸಿನಿಮಾ ರಂಗಕ್ಕೆ ಮತ್ತೆ ಎಂಟ್ರಿ ಕೊಟ್ಟವರು ರಮ್ಯಾ. ಈ ಹೆಸರಿನಲ್ಲಿ ರಮ್ಯಾ ನಿರ್ಮಾಣ ಸಂಸ್ಥೆಯನ್ನು ಶುರು ಮಾಡಿದ್ದಾರೆ. ಮೊದಲ ಚಿತ್ರವಾಗಿ ಸ್ವಾತಿ ಮುತ್ತಿನ ಮಳೆ ಹನಿಯೇ ಘೋಷಣೆ ಮಾಡಿದ್ದರು. ರಾಜ್ ಬಿ ಶೆಟ್ಟಿ ನಿರ್ದೇಶನದಲ್ಲಿ ತಯಾರಾದ ಈ ಸಿನಿಮಾ ಈಗಾಗಲೇ ಸಂಪೂರ್ಣ ಚಿತ್ರೀಕರಣ ಕೂಡ ಮುಗಿಸಿಕೊಂಡಿದೆ. ಹಾಗಾಗಿ ಈ ಚಿತ್ರದ ನಾಯಕಿಯ ಪಾತ್ರದ ಫೋಟೋವನ್ನು ರಮ್ಯಾ ಹಂಚಿಕೊಂಡಿದ್ದಾರೆ.

    ಅಂದುಕೊಂಡಂತೆ ಆಗಿದ್ದರೆ ಈ ಸಿನಿಮಾದ ನಾಯಕಿಯಾಗಿ ರಮ್ಯಾ ಅವರೇ ತೆರೆಯ ಮೇಲೆ ಕಾಣಿಸಿಕೊಳ್ಳುವುದಿತ್ತು. ಸಿನಿಮಾದ ಟೈಟಲ್ ಲಾಂಚ್ ಆದಾಗ ರಮ್ಯಾ ಮತ್ತು ರಾಜ್ ಬಿ ಶೆಟ್ಟಿ ಕಾಂಬಿನೇಷನ್ ನ ಸಿನಿಮಾ ಎಂದೇ ಹೇಳಲಾಗಿತ್ತು. ಆನಂತರ ರಮ್ಯಾ ಸ್ಥಾನಕ್ಕೆ ಸಿರಿ ರವಿಕುಮಾರ್ ಆಗಮಿಸಿದರು. ಈ ಸಿನಿಮಾದ ನಾಯಕಿಯಾಗಿ ಸಿರಿ ಆಯ್ಕೆಯಾದ ವಿಚಾರವನ್ನು ನಿರ್ಮಾಣ ತಂಡವೇ ಹೇಳಿತ್ತು. ಆದರೆ, ರಮ್ಯಾ ಯಾಕೆ ಅದರಿಂದ ಹೊರ ಬಂದರು ಎನ್ನುವ ವಿಚಾರವನ್ನು ಹೇಳಿರಲಿಲ್ಲ. ಇದನ್ನೂ ಓದಿ: ತಮಿಳಿನತ್ತ ಹೊಂಬಾಳೆ ಫಿಲ್ಮ್ಸ್:ಕೀರ್ತಿ ಸುರೇಶ್ ನಟನೆಯ `ರಘುತಥಾ’ ಚಿತ್ರ ನಿರ್ಮಾಣಕ್ಕೆ ಸಾಥ್

    ಸ್ವಾತಿ ಮುತ್ತಿನ ಮಳೆ ಹನಿಯೇ ಸಿನಿಮಾದ ಶೂಟಿಂಗ್ ಇದೀಗ ಸಂಪೂರ್ಣ ಮುಗಿದಿದೆ. ಹಾಗಾಗಿ ಚಿತ್ರದ ಕ್ಯಾರೆಕ್ಟರ್ ಪೋಸ್ಟರ್ ಅನ್ನು ಸ್ವತಃ ರಮ್ಯಾ ಅವರೇ ಹಂಚಿಕೊಂಡಿದ್ದಾರೆ. ಸಿರಿ ಈ ಸಿನಿಮಾದಲ್ಲಿ ಯಾವ ಲುಕ್‍ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನುವ ಕುತೂಹಲಕ್ಕೆ ತೆರೆ ಎಳೆದಿದ್ದಾರೆ. ಇದೊಂದು ಮಹಿಳಾ ಪ್ರಧಾನ ಸಿನಿಮಾವಾಗಿದ್ದು, ಬಹುತೇಕ ಕಥೆ ಸಿರಿ ಅವರ ಪಾತ್ರದ ಸುತ್ತಲೇ ಸುತ್ತಲಿದೆಯಂತೆ.

    Live Tv
    [brid partner=56869869 player=32851 video=960834 autoplay=true]

  • ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ನಿರ್ಮಾಣದ ಸಿನಿಮಾದ ಶೂಟಿಂಗ್ ಮುಕ್ತಾಯ

    ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ನಿರ್ಮಾಣದ ಸಿನಿಮಾದ ಶೂಟಿಂಗ್ ಮುಕ್ತಾಯ

    ಮೊನ್ನೆ ಮೊನ್ನೆಯಷ್ಟೇ ತಮ್ಮ ನಿರ್ಮಾಣದ ಸಿನಿಮಾ ವಿಚಾರವನ್ನು ಅಭಿಮಾನಿಗಳ ಜೊತೆ ಹಂಚಿಕೊಂಡಿದ್ದರು ರಮ್ಯಾ. ಈ ಸಿನಿಮಾದಲ್ಲಿ ತಾವು ನಟಿಸುತ್ತಿಲ್ಲ ಎಂದು ಹೇಳುವ ಮೂಲಕ ಅಭಿಮಾನಿಗಳಿಗೆ ನಿರಾಸೆಯನ್ನೂ ಉಂಟು ಮಾಡಿದ್ದರು. ಈ ಆಸೆ, ನಿರಾಸೆಗಳು ಇನ್ನೂ ಮರೆಯಾಗಿಲ್ಲ, ಅಷ್ಟರಲ್ಲಿ ಸಿನಿಮಾದ ಶೂಟಿಂಗ್ ಅನ್ನೇ ಮುಗಿಸಿದ್ದಾರೆ. ಇಷ್ಟು ಬೇಗ ಚಿತ್ರೀಕರಣ ಮುಗಿಸುವ ಮೂಲಕ ಅಚ್ಚರಿಯನ್ನೂ ಉಂಟು ಮಾಡಿದ್ದಾರೆ.

    ರಮ್ಯಾ  (Ramya) ನಿರ್ಮಾಣದ ಚೊಚ್ಚಲ ಸಿನಿಮಾ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಚಿತ್ರದ ಶೂಟಿಂಗ್‌ ಮುಕ್ತಾಯಗೊಳಿಸಿದೆ. ಇಂದು ಈ ಚಿತ್ರಕ್ಕೆ ಕುಂಬಳಕಾಯಿ ಪೂಜೆ ನೆರವೇರಲಿದೆ. ಆಪಲ್‌ ಬಾಕ್ಸ್‌ ಸ್ಟುಡಿಯೋಸ್‌ ಬ್ಯಾನರ್‌ನಲ್ಲಿ ನಿರ್ಮಾಣವಾಗಿರುವ ಈ ಸಿನಿಮಾವನ್ನು ರಾಜ್‌ ಬಿ ಶೆಟ್ಟಿ  (Raj B Shetty) ನಿರ್ದೇಶನ ಮಾಡಿದ್ದಾರೆ. ಸಿರಿ ರವಿಕುಮಾರ್‌ (Siri Ravikumar) ಮತ್ತು ರಾಜ್‌ ಶೆಟ್ಟಿ ಈ ಚಿತ್ರದ ಮುಖ್ಯಭೂಮಿಕೆಯಲ್ಲಿದ್ದಾರೆ. ಇದನ್ನೂ ಓದಿ: ಧ್ರುವ ಸರ್ಜಾ ಚಿತ್ರಕ್ಕೆ ಮಾಲಾಶ್ರೀ ಪುತ್ರಿ ರಾಧನಾ ರಾಮ್ ನಾಯಕಿ

    ಅಂದುಕೊಂಡಂತೆ ಆಗಿದ್ದರೆ, ಈ ಸಿನಿಮಾದಲ್ಲಿ ರಮ್ಯಾ ಅವರೇ ನಟಿಸಬೇಕಿತ್ತು. ಹಾಗಂತ  ಅನೌನ್ಸ್ ಕೂಡ ಆಗಿತ್ತು. ಆದರೆ, ತಾವು ಈ ಸಿನಿಮಾದಲ್ಲಿ ನಟಿಸುತ್ತಿಲ್ಲ, ಕೇವಲ ನಿರ್ಮಾಪಕಿಯಾಗಿ ಮಾತ್ರ ಇರುತ್ತೇನೆ ಎಂದು ಹೇಳುವ ಮೂಲಕ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದ್ದರು ರಮ್ಯಾ. ಈ ವಿಷಯ ತಿಳಿಸಿದ ಕೆಲವೇ ದಿನಗಳ ನಂತರ ಮತ್ತೊಂದು ಸಿಹಿ ಸುದ್ದಿಯನ್ನೂ ನೀಡಿ, ತಾವು ಡಾಲಿ ಧನಂಜಯ್ ಜೊತೆ ಉತ್ತರಕಾಂಡ ಚಿತ್ರದಲ್ಲಿ ನಟಿಸುತ್ತಿರುವುದಾಗಿಯೂ ತಿಳಿಸಿದ್ದರು. ಇದೀಗ ರಮ್ಯಾ ಬ್ಯಾನರ್ ನ ಮೊದಲ ಸಿನಿಮಾ ಕಂಪ್ಲೀಟ್ ಆಗಿದೆ.

    Live Tv
    [brid partner=56869869 player=32851 video=960834 autoplay=true]

  • ರಮ್ಯಾ ನಿರ್ಮಾಣದ ಸಿನಿಮಾದಿಂದ ರಮ್ಯಾನೇ ಔಟ್ : ಕೈ ಜಾರಿತಾ ಸ್ವಾತಿ ಮುತ್ತು?

    ರಮ್ಯಾ ನಿರ್ಮಾಣದ ಸಿನಿಮಾದಿಂದ ರಮ್ಯಾನೇ ಔಟ್ : ಕೈ ಜಾರಿತಾ ಸ್ವಾತಿ ಮುತ್ತು?

    ಮೋಹಕ ತಾರೆ ರಮ್ಯಾ (Ramya) ಮತ್ತೆ ಸಿನಿಮಾ ರಂಗಕ್ಕೆ ಬರುವ ವಿಚಾರ ಅವರ ಅಭಿಮಾನಿಗಳಲ್ಲಿ ಸಂತಸ ಮೂಡಿಸಿತ್ತು. ಹಲವು ವರ್ಷಗಳ ನಂತರ ಮತ್ತೆ ರಮ್ಯಾ ಸ್ಯಾಂಡಲ್ ವುಡ್ ಗೆ ಬಂದರಲ್ಲ ಅಂತ ಸಂಭ್ರಮಿಸುವ ಹೊತ್ತಿನಲ್ಲೇ, ಏನೋ ಯಡವಟ್ಟಾದ ವಿಚಾರವೊಂದು ಗಾಂಧಿನಗರದಲ್ಲಿ ಹರಿದಾಡುತ್ತಿದೆ. ಅವರೇ ನಿರ್ಮಾಣ ಮಾಡುತ್ತಿದ್ದ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾದಿಂದ ರಮ್ಯಾ ಹೊರ ಬಂದಿದ್ದಾರೆ ಎಂದು ಹೇಳಲಾಗುತ್ತಿದೆ.

    ಈ ಹಿಂದೆ ರಮ್ಯಾ ಅವರ ಪ್ರೊಡಕ್ಷನ್ ಹೌಸ್ ಆ್ಯಪಲ್ ಬಾಕ್ಸ್ ತಿಳಿಸಿದಂತೆ ‘ಸ್ವಾತಿ ಮುತ್ತಿನ ಮಳೆ ಹನಿಯೇ’ (Swati Muttina Malehaniye) ಸಿನಿಮಾವನ್ನು ರಮ್ಯಾ ಅವರೇ ನಿರ್ಮಾಣ ಮಾಡಿ, ಅವರೇ ನಾಯಕಿಯಾಗಿ ನಟಿಸಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ಇದೀಗ ನಾಯಕಿಯ ಸ್ಥಾನವನ್ನು ಬೇರೊಬ್ಬರು ತುಂಬಲಿದ್ದಾರೆ ಎನ್ನಲಾಗುತ್ತಿದೆ. ಈ ಸಿನಿಮಾದಲ್ಲಿ ಸಿರಿ ರವಿಕುಮಾರ್ ಲೀಡ್ ಪಾತ್ರದಲ್ಲಿ ಮಾಡಲಿದ್ದಾರೆ ಎಂದು ಸ್ವತಃ ರಮ್ಯಾ ಅವರ ಪ್ರೊಡಕ್ಷನ್ ಹೌಸ್ ತಿಳಿಸಿದೆ. ಇದನ್ನೂ ಓದಿ: ರಿಷಬ್ ಶೆಟ್ಟಿ ಸಕ್ಸಸ್ ಸೀಕ್ರೆಟ್ ಬಗ್ಗೆ ತಂದೆ ಭಾಸ್ಕರ್ ಶೆಟ್ಟಿ ಮಾತು

    ಆ್ಯಪಲ್ ಬಾಕ್ಸ್ (apple box) ಅಧಿಕೃತ ಪೇಜಿನಲ್ಲಿ ಹಾಕಿರುವಂತೆ, ‘ಸಿರಿ ರವಿಕುಮಾರ್ (Siri Ravikumar) ನಮ್ಮ ನಿರ್ಮಾಣದ ಸಿನಿಮಾದಲ್ಲಿ ಮುಖ್ಯ ಪಾತ್ರ ಮಾಡುತ್ತಿದ್ದಾರೆ. ಆದರೆ, ರಮ್ಯಾ ಬೆಳ್ಳಿಪರದೆಯ ಮೇಲೆ ಆದಷ್ಟು ಬೇಗ ಮರಳಲಿದ್ದಾರೆ’ ಎಂದು ಬರೆಯಲಾಗಿದೆ. ಅಲ್ಲಿಗೆ ರಮ್ಯಾ ಕೇವಲ ನಿರ್ಮಾಪಕಿಯಾಗಿ ಮಾತ್ರ ಉಳಿಯಲಿದ್ದಾರಾ ಅಥವಾ ಇಬ್ಬರು ನಾಯಕಿಯರು ಈ ಸಿನಿಮಾದಲ್ಲಿ ಇದ್ದಾರಾ ಎನ್ನುವುದು ಸದ್ಯಕ್ಕಿರುವ ಕುತೂಹಲ.

    ಇದೊಂದು ಮಹಿಳಾ ಪ್ರಧಾನ ಸಿನಿಮಾವಾಗಿದ್ದು, ರಾಜ್ ಬಿ ಶೆಟ್ಟಿ (Raj B. Shetty) ಈ ಚಿತ್ರದ ನಿರ್ದೇಶಕರು. ಅವರು ಕೂಡ ಪ್ರಧಾನ ಪಾತ್ರವನ್ನೇ ನಿರ್ವಹಿಸುತ್ತಿದ್ದಾರೆ. ಅಲ್ಲದೇ, ನಿರ್ಮಾಣದಲ್ಲೂ ಹೂಡಿಕೆ ಮಾಡಿದ್ದಾರೆ. ರಮ್ಯಾ ಈ ಸಿನಿಮಾದಲ್ಲಿ ಕೇವಲ ನಿರ್ಮಾಪಕಿಯಾಗಿ ಮಾತ್ರ ಇರುತ್ತಾರಾ? ಅಥವಾ ನಟಿಯಾಗಿಯೂ ತೆರೆಯ ಮೇಲೆ ಕಾಣಿಸಿಕೊಳ್ಳುತ್ತಾರಾ ಎನ್ನುವುದನ್ನು ಕಾದು ನೋಡಬೇಕು.

    Live Tv
    [brid partner=56869869 player=32851 video=960834 autoplay=true]

  • ಸದ್ದಿಲ್ಲದೇ ಹಸೆಮಣೆ ಏರಿದ ನಿರೂಪಕಿ ಸಿರಿ ರವಿಕುಮಾರ್

    ಸದ್ದಿಲ್ಲದೇ ಹಸೆಮಣೆ ಏರಿದ ನಿರೂಪಕಿ ಸಿರಿ ರವಿಕುಮಾರ್

    ಸ್ಯಾಂಡಲ್‌ವುಡ್ ನಟಿ ಕಮ್ ನಿರೂಪಕಿ ಸಿರಿ ರವಿಕುಮಾರ್ ಮದುವೆ ವಿಚಾರ ಇದೀಗ ಬಹಿರಂಗವಾಗಿದೆ. ಇತ್ತೀಚೆಗಷ್ಟೇ ಹಸೆಮಣೆ ಏರಿದ್ದಾರೆ.ಇದೀಗ ಆರ್‌ಜೆ ಸಿರಿ ಅವರ ಮದುವೆ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ರಿವೀಲ್ ಆಗಿದೆ.

    ಆರ್‌ಜೆ, ನಿರೂಪಕಿ, ನಟಿಯಾಗಿ ಗುರುತಿಸಿಕೊಂಡಿರುವ ಸಿರಿ ರವಿಕುಮಾರ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಕಳೆದ ವರ್ಷ ಡಿಸೆಂಬರ್‌ನಲ್ಲಿ ಮಹರ್ಷಿ ಎಂಬುವವರ ಜತೆ ಹಸೆಮಣೆ ಏರಿದ್ದಾರೆ. ಆದರೆ ತನ್ನ ಮದುವೆಯ ವಿಚಾರ ಎಲ್ಲಿಯೂ ನಟಿ ಸಿರಿ ಬಹಿರಂಗ ಪಡಿಸಿರಲಿಲ್ಲ. ಈಗ ಸಿರಿ ಮತ್ತು ಮಹರ್ಷಿ ಅವರ ಮದುವೆ ಸುಂದರ ಕ್ಷಣಗಳ ಫೋಟೋಗಳು ವೈರಲ್ ಆಗಿದೆ.

    ಬೆಂಗಳೂರಿನ ಬನಶಂಕರಿಯ ನಿವಾಸಿಯಾಗಿರುವ ಸಿರಿ, ರವಿಕುಮಾರ್ ಎಂಬುವವರ ಕೈಹಿಡಿದಿದ್ದಾರೆ. ಗುರುಹಿರಿಯರ ಸಮ್ಮುಖದಲ್ಲಿ ಕಳೆದ ವರ್ಷದ ಕೊನೆಯಲ್ಲಿ ಹಸೆಮಣೆ ಏರಿದ್ದಾರೆ. ಇನ್ನು ಕಿರುತೆರೆಯಲ್ಲೂ ಖ್ಯಾತಿ ಗಳಿಸಿರುವ ಕನ್ನಡ ಕೋಗಿಲೆ ರಿಯಾಲಿಟಿ ಶೋ ಮೂಲಕ ಮನೆಮಾತಾಗಿದ್ದರು. ಈ ಶೋ ಸಿರಿ ಅವರಿಗೆ ದೊಡ್ಡ ಮಟ್ಟದಲ್ಲಿ ಖ್ಯಾತಿಯನ್ನ ತಂದುಕೊಟ್ಟಿತ್ತು. ಇದನ್ನೂ ಓದಿ: ಬೆಂಗಳೂರು ರಸ್ತೆಗೆ ಪುನೀತ್ ರಾಜ್‌ಕುಮಾರ್ ನಾಮಫಲಕ ಅಳವಡಿಕೆ

    ಇತ್ತೀಚೆಗೆ ರಕ್ಷಿತ್ ಶೆಟ್ಟಿ ನಿರ್ಮಾಣದ `ಸಕುಟುಂಬ ಸಮೇತ’ ಚಿತ್ರದ ಮೂಲಕ ಗುರುತಿಸಿಕೊಂಡಿದ್ದರು. ಖಾಸಗಿ ಜೀವನಕ್ಕೂ ಸಮಯ ಕೊಡತ್ತಾ ಸಿನಿಮಾದತ್ತ ಬ್ಯುಸಿಯಾಗಿದ್ದಾರೆ.