ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಪ್ರಸಿದ್ಧ ಮಾರಿಕಾಂಬಾ ದೇವಿ ಜಾತ್ರಾ ಮಹೊತ್ಸವದ ನಾಲ್ಕನೇ ದಿನವಾದ ಇಂದು ಭಕ್ತ ಸಾಗರವೇ ಹರಿದುಬಂದಿದೆ.
ಇಂದು ರಾಜ್ಯದ ಮೂಲೆ ಮೂಲೆಯಿಂದಲೂ ಜನರು ಶಿರಸಿ ಮಾರಿಕಾಂಬಾ ದೇವಿ ಗದ್ದುಗೆಗೆ ಪೂಜೆ, ಹರಕೆ ಸಲ್ಲಿಸಲು ಆಗಮಿಸಿದ್ದಾರೆ. ಬಿಡಕಿಬೈಲಿನ ಜಾತ್ರಾ ಗದ್ದುಗೆಯಲ್ಲಿ ಸರ್ವಾಲಂಕಾರ ಭೂಷಿತೆ ಮಾರಿಕಾಂಬೆಯ ದರ್ಶನಕ್ಕೆ ಭಕ್ತರಿಗೆ ಅವಕಾಶ ಕಲ್ಪಿಸಲಾಗಿದ್ದು, ಸಾವಿರಾರು ಭಕ್ತರು ದರ್ಶನ ಪಡೆದರು. ಇದನ್ನೂ ಓದಿ: ಮಾರ್ಚ್ 15 ರಿಂದ 23 ರ ವರೆಗೆ ರಾಜ್ಯದ ಪ್ರಸಿದ್ಧ ಶಿರಸಿ ಮಾರಿಕಾಂಬಾ ದೇವಿ ಜಾತ್ರೆ
ಹರಕೆ ಹೊತ್ತ ಭಕ್ತರು ಪ್ರತಿವರ್ಷದಂತೆ ಈ ಬಾರಿಯೂ ಮರ್ಕಿದುರ್ಗಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಬೇವಿನ ಉಡುಗೆ ತೊಟ್ಟು ಜಾತ್ರಾಗದ್ದುಗೆಯ ಸುತ್ತಾ ಪ್ರದಕ್ಷಿಣೆ ತಿರುಗಿ ಪೂಜೆ ಸಲ್ಲಿಸಿದರು. ತಮ್ಮ ಇಷ್ಟಾರ್ಥ ಸಿದ್ಧಿಗಾಗಿ ಸಾವಿರಾರು ಭಕ್ತರು ಬೇವಿನ ಉಡುಗೆ ತೊಡುವ ಸಂಪ್ರದಾಯ ನೂರಾರು ವರ್ಷದಿಂದ ಇಲ್ಲಿ ಚಾಲ್ತಿಯಲ್ಲಿದೆ. ಸದ್ಯ ದೇವಿಯು ಇದೀಗ ಭಕ್ತರಿಗೆ ದರ್ಶನ ನೀಡಲು ಗದ್ದುಗೆಯಲ್ಲಿ ಕುಳಿತಿದ್ದು ಮಾರ್ಚ್ 23 ರಂದು ಜಾತ್ರೆ ಮುಕ್ತಾಯಗೊಳ್ಳಲಿದೆ. ಇದನ್ನೂ ಓದಿ: ಮಿಂಚುಳ್ಳಿ ಲೋಕದಲ್ಲೊಂದು ಪಯಣ
ಕಾರವಾರ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪದಡಿ ಯುವಕನನ್ನು ಪೊಲೀಸರು ಬಂಧಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದಲ್ಲಿ ನಡೆದಿದೆ.
ಮೂಲತಹಾ ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಮೌಲಾಲಿ ದಾದೆ ಅಲಿ ಖಾನ್(26) ಬಂಧಿತ ಆರೋಪಿಯಾಗಿದ್ದು ಈತನು ಅಪ್ರಾಪ್ತ ಬಾಲಕಿಯನ್ನು ಪರಿಚಯ ಮಾಡಿಕೊಂಡು ನಿನ್ನ ಜೊತೆ ಮಾತನಾಡುವುದಿದೆ ಎಂದು ನಂಬಿಸಿ ಶಿರಸಿಯ ಸಾಲುಮರದ ತಿಮ್ಮಕ್ಕ ಉದ್ಯಾನವನದಲ್ಲಿ ಆಕೆಯೊಂದಿಗೆ ಅಸಭ್ಯ ವರ್ತನೆ ತೊರಿ ಲೈಂಗಿಕ ಕಿರುಕುಳ ನೀಡಿದ್ದು, ಆ ಸಮಯಕ್ಕೆ ಸ್ಥಳಕ್ಕೆ ಬಾಲಕಿಯ ತಂದೆ ಬಂದ ನಂತರ ಪರಾರಿಯಾಗಿದ್ದ. ಇದನ್ನೂ ಓದಿ: ಕರ್ನಾಟಕ ರತ್ನ ಅಪ್ಪು ಅಗಲಿ ನಾಳೆಗೆ 1 ತಿಂಗಳು- ಸಮಾಧಿಗೆ ಕುಟುಂಬಸ್ಥರಿಂದ ಪೂಜೆ
ಕಾರವಾರ: ಕುಮಟಾದ ರೈಲ್ವೇ ನಿಲ್ದಾಣದ ಸಮೀಪವೇ ನಕಲಿ ಬಾಂಬ್ ಪತ್ತೆಯಾದ ಬೆನ್ನಲ್ಲಿ ಇದೀಗ ಪೊಲೀಸ್ ಇಲಾಖೆ ಜನ ನಿಬಿಡ ಪ್ರದೇಶಗಳಲ್ಲಿ ಬಾಂಬ್ ಸ್ಕ್ವಾಡ್ ನಿಂದ ಪರಿಶೀಲನೆ ನಡೆಸುತ್ತಿದೆ. ಹಲವು ಭಾಗದಲ್ಲಿ ರಸ್ತೆಯಲ್ಲಿ ನಿಂತು ವಾಹನಗಳನ್ನು ಸಹ ತಪಾಸಣೆ ಮಾಡಲಾಗುತ್ತಿದೆ.
ಕರಾವಳಿ ಭಾಗದಲ್ಲಿ ಸೂಕ್ಷ್ಮ ಪ್ರದೇಶಗಳಿವೆ. ಶಿರಸಿ ಭಾಗದಲ್ಲೂ ಬಾಂಬ್ ಪತ್ತೆ ದಳ, ಶ್ವಾನದಳಗಳು ಇಂದು ಹಲವು ಪ್ರದೇಶಗಳಲ್ಲಿ ತಪಾಸಣೆ ನಡೆಸಿತು. ಶಿರಸಿಯ ಎಂ.ಎಂ ಆರ್ಟ್ಸ್, ಸೈನ್ಸ್ ಕಾಲೇಜು ಸೇರಿದಂತೆ ಪ್ರಮುಖ ಕಾಲೇಜಿನಲ್ಲಿ ತಪಾಸಣೆ ನಡೆಸಲಾಗಿದೆ. ಬಸ್ ನಿಲ್ದಾಣ ಹಾಗೂ ಜನ ನಿಬಿಡ ಪ್ರದೇಶದಲ್ಲೂ ಸಹ ತಪಾಸಣೆ ನಡೆಸಲಾಗಿದೆ. ಇದನ್ನೂ ಓದಿ: ತಂದೆ ಅಂತಿಮ ದರ್ಶನ ಪಡೆದ ಪುತ್ರಿ ಧೃತಿ
ತಪಾಸಣೆ ನಡೆಸಲು ಕಾರಣ ಏನು?
ಜಿಲ್ಲೆಯಲ್ಲಿ ಭಟ್ಕಳ ಉಗ್ರಗಾವಾದಿಗಳ ಹೆಸರು ತಗಲಿಕೊಂಡಿದೆ. ಜೊತೆಗೆ ಕೆಲವು ಸಂಘಟನೆಗಳು ದೇಶದ್ರೋಹ ಚಟುವಟಿಕೆಯಲ್ಲಿ ಭಾಗಿಯಾಗಿದ್ದು ಈ ಸಂಬಂಧ ಈಗಾಗಲೇ ಕೆಲವು ಜನರನ್ನು ಜಿಲ್ಲೆಯಲ್ಲಿ ಬಂಧಿಸಲಾಗಿದೆ. ಶಿರಸಿಯಲ್ಲೂ ಸಹ ಕೆಲವು ವ್ಯಕ್ತಿಗಳ ಹೆಸರಿನ ಸಿಮ್ ಗಳು ಉಗ್ರವಾದಿಗಳು ಬಳಸಿದ ಹಿನ್ನೆಲೆಯಲ್ಲಿ ಬಂಧಿಸಿ ತನಿಖೆ ಕೈಗೊಳ್ಳಲಾಗಿದೆ. ಹೀಗಾಗಿ ಕುಮಟಾದಲ್ಲಿ ಸಿಕ್ಕ ನಕಲಿ ಬಾಂಬ್ ಹಲವು ಸಂಶಯಗಳನ್ನು ತಂದೊಡ್ಡಿದೆ. ಇದನ್ನೂ ಓದಿ: ದೀಪಾವಳಿಯಲ್ಲಿ ಹಸಿರು ಪಟಾಕಿ ಸಿಡಿಸಲು ಅವಕಾಶ- ಮಾರ್ಗಸೂಚಿ ಬಿಡುಗಡೆ
ಸದ್ಯ ಕುಮಟಾದಲ್ಲಿ ಸಿಕ್ಕ ಈ ಬಾಂಬ್ ನಕಲಿ ಎಂದಾಗಿದ್ದರೂ ಇದನ್ನು ಏಕೆ ತಯಾರಿಸಿದರು? ಇದರ ಉದ್ದೇಶ ಏನು ಎಂಬ ಬಗ್ಗೆ ತನಿಖೆ ನಡೆಯುತ್ತಿದೆ. ವಿಜ್ಞಾನ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳ ಮೇಲೆ ಪೊಲೀಸರಿಗೆ ಸಂಶಯ ಮೂಡಿದೆ. ಇದರ ಜೊತೆಗೆ ಬೇರೆ ಯಾರಾದರೂ ಕುಚೇಷ್ಟೆಗೆ ಮಾಡಿರಬಹುದಾ ಎಂಬ ಅನುಮಾನ ಸಹ ಇದೆ. ಹೀಗಾಗಿ ಹೆಚ್ಚಿನ ತನಿಖೆ ನಡೆಯುತ್ತಿದೆ. ಆದರೂ ಮುಂಜಾಗ್ರತಾ ಕ್ರಮವಾಗಿ ಇದೀಗ ಪೊಲೀಸರು ಹೆಚ್ಚಿನ ತಪಾಸಣೆಯನ್ನು ಜಿಲ್ಲೆಯಾದ್ಯಂತ ಕೈಗೊಂಡಿದ್ದಾರೆ.
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಬನವಾಸಿ ಅರಣ್ಯ ವಲಯ ವ್ಯಾಪ್ತಿಯ ಶಿವಳ್ಳಿ, ದಾನಂದಿ ಭಾಗದಲ್ಲಿ ಚಿರತೆ ಜಾನುವಾರುಗಳ ಮೇಲೆ ಕೆಲ ದಿನಗಳಿಂದ ಸತತ ದಾಳಿ ನಡೆಸುತ್ತಿದೆ. ಇದರಿಂದಾಗಿ ಗ್ರಾಮದ ಜನ ಮನೆಯಿಂದ ಹೊರ ಬರಲು ಹೆದರುತಿದ್ದು, ಅಪಾಯಕಾರಿ ಚಿರತೆ ಸೆರೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ಆರಂಭಿಸಿದೆ.
ಬಿಸಲಕೊಪ್ಪ, ಎಕ್ಕಂಬಿ, ಶಿವಳ್ಳಿ ಭಾಗದಲ್ಲಿ ಸಮೃದ್ದ ಅರಣ್ಯ ಪ್ರದೇಶ, ಸಾಗುವಾನಿ ನೆಡುತೋಪು ಹೆಚ್ಚಿದ್ದು ಪ್ರಾಣಿಗಳ ಓಡಾಟಕ್ಕೆ ಅನುಕೂಲವಾಗಿದೆ. ಹೀಗಾಗಿ ಚಿರತೆ, ಆನೆಗಳು ಈ ಪ್ರದೇಶಕ್ಕೆ ಲಗ್ಗೆ ಇಡುವುದು ಸಾಮಾನ್ಯವಾದಂತಾಗಿದೆ. ಹದಿನೈದು ದಿನಗಳಿಂದ ಈಚೆಗೆ ಬೊಪ್ಪನಳ್ಳಿ, ದಾನಂದಿ ಭಾಗದಲ್ಲಿ ಸುಮಾರು ನಾಲ್ಕು ಹಸುಗಳನ್ನು ಚಿರತೆ ಬಲಿ ಪಡೆದಿದೆ. ಈ ಪೈಕಿ ಎರಡು ಕರು ಮತ್ತು ಎರಡು ದೊಡ್ಡ ಆಕಳು ಸೇರಿದೆ. ಇದನ್ನೂ ಓದಿ: ಅರಣ್ಯ ಪ್ರದೇಶಕ್ಕೆ ಎಳೆದೊಯ್ದು 55ರ ಮಹಿಳೆ ಮೇಲೆ ಗ್ಯಾಂಗ್ ರೇಪ್
ಕೊರ್ಸೆ, ದಾನಂದಿ, ಶಿವಳ್ಳಿ, ಬೊಪ್ಪನಳ್ಳಿ, ಸಂಬಯ್ಯನಜಡ್ಡಿ, ಗೇರಮನೆ ಸುತ್ತಮುತ್ತ ಚಿರತೆಗಳು ಹದಿನೈದು ದಿನಗಳಿಂದ ನಿರಂತರವಾಗಿ ಓಡಾಡುತ್ತಿದೆ. ಈಚೆಗೆ ಮೂರು ಚಿರತೆಗಳು ಒಟ್ಟೊಟ್ಟಿಗೆ ಇದ್ದಿದ್ದನ್ನು ಸ್ಥಳೀಯರು ನೋಡಿದ್ದಾರೆ. ಇನ್ನು ಸಂಜೆಯಾಗುತ್ತಿದ್ದಂತೆ ಚಿರತೆಗಳು ಗ್ರಾಮದ ಭಾಗದಲ್ಲಿ ಓಡಾಡುತಿದ್ದು, ಚಿರತೆ ಭಯದಿಂದ ಮಕ್ಕಳು ಶಾಲೆಗೆ ಹೋಗಲು ಹಿಂದೇಟು ಹಾಕುತ್ತಿದ್ದಾರೆ. ಜನರು ಸೊಪ್ಪಿನ ಬೆಟ್ಟ, ತೋಟಕ್ಕೆ ತೆರಳಲು ಆತಂಕ ಪಡುತ್ತಿದ್ದು, ಸಂಜೆಯಾಗುತ್ತಿದ್ದಂತೆ ಭಯದಲ್ಲಿ ಗ್ರಾಮಗಳು ಖಾಲಿ ಹೊಡೆಯುತ್ತಿದೆ.
ಪ್ರತಿ ದಿನ ಚಿರತೆಗಳು ಗ್ರಾಮದಲ್ಲಿ ಕಾಣಿಸುತ್ತಿರುವುದರಿಂದ ಗ್ರಾಮದಲ್ಲಿ ಭಯ ಆವರಿಸಿದೆ. ಜಾನುವಾರುಗಳ ಮೇಲೆ ನಿರಂತರ ದಾಳಿ ನಡೆಸುತ್ತಿರುವ ಚಿರತೆ ಸೆರೆಹಿಡಿಯಲು ಅರಣ್ಯ ಇಲಾಖೆ ಆಯ್ದ ಜಾಗಗಳನ್ನು ಗುರುತಿಸಿ ಅಲ್ಲಿ ಬೋನುಗಳನ್ನು ಇರಿಸಿದೆ. ಅರಣ್ಯ ರಕ್ಷಕರು ಗಸ್ತು ತಿರುಗಲು ಆರಂಭಿಸಿದ್ದಾರೆ. ಇದನ್ನೂ ಓದಿ: ಮದುವೆಗಾಗಿ ಮತಾಂತರ ತಪ್ಪು: ಮೋಹನ್ ಭಾಗವತ್
ಜನರ ಆತಂಕ ದೂರ ಮಾಡಲು ಜಾನುವಾರುಗಳನ್ನು ಬಲಿ ಪಡೆಯುತ್ತಿರುವ ಪ್ರಾಣಿ ಸೆರೆ ಹಿಡಿಯುವ ಪ್ರಯತ್ನ ನಡೆಸುತ್ತಿದ್ದೇವೆ ಎಂದು ಯಕ್ಕುಂಬಿ ವಿಭಾಗದ ಡೆಪ್ಯುಟಿ ಆರ್.ಎಫ್.ಓ ರವೀಂದ್ರ ಎಸ್.ಕರ್ನಲ್ ಮಾಹಿತಿ ನೀಡಿದ್ದಾರೆ. ಚಿರತೆ ದಾಳಿಗೆ ಮೃತಪಟ್ಟ ಆಕಳುಗಳ ವಾರಸುದಾರರಿಗೆ ಇಲಾಖೆಯಿಂದ ಪರಿಹಾರ ಒದಗಿಸಲಾಗುವುದು. ಗ್ರಾಮಗಳತ್ತ ಚಿರತೆ ನುಗ್ಗದಂತೆ ಎಚ್ಚರವಹಿಸಲಾಗುತ್ತದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಕಗ್ಗತ್ತಲಲ್ಲಿ ಕರ್ನಾಟಕ ಮುಳುಗುವ ಆತಂಕ – ಇಂಧನ ಸಚಿವರು ಹೇಳಿದ್ದೇನು?
ಶಿರಸಿ ವಿಭಾಗದ ಡಿಸಿಎಫ್ ಎಸ್.ಜಿ ಹೆಗಡೆ ಮಾರ್ಗದರ್ಶನದಲ್ಲಿ ಎ.ಸಿ.ಎಫ್. ಅಶೋಕ್ ಅಲಗೇರ್, ಬನವಾಸಿ ಆರ್.ಎಫ್.ಒ. ಉಷಾ ಕಬ್ಬೇರರವರ ತಂಡ ರಚನೆ ಮಾಡಿ ಚಿರತೆ ಹಿಡಿಯುವ ಕಾರ್ಯಾಚರಣೆ ನಡೆದಿದೆ.
ಕಾರವಾರ: ಶಿರಸಿ ನಗರದ ಪೆಟ್ರೋಲ್ ಬಂಕ್‍ಗಳಲ್ಲಿ ಇಂದು ಲೀಟರ್ ಡೀಸೆಲ್ ದರ 100.12ಕ್ಕೆ ಏರಿಕೆಯಾಗಿದ್ದು, ಇದು ಈವರೆಗಿನ ಸಾರ್ವಕಾಲಿಕ ದಾಖಲೆಯಾಗಿದೆ.
ಇಂದು ಪ್ರತಿ ಲೀಟರ್ ದರ 97.35 ಪೈಸೆ ಇತ್ತು. ಒಂದೇ ದಿನಕ್ಕೆ ಅದು 37 ಪೈಸೆಯಷ್ಟು ಹೆಚ್ಚಳವಾಗಿದೆ. ಪೆಟ್ರೋಲ್ ದರ ಕೂಡ 109.71ಕ್ಕೆ ಏರಿಕೆಯಾಗಿದೆ. ಹಿಂದಿನ ದಿನಕ್ಕೆ ಹೋಲಿಸಿದರೆ 30 ಪೈಸೆಯಷ್ಟು ಹೆಚ್ಚಳವಾಗಿದೆ. ಪ್ರತಿದಿನ ನಗರದಲ್ಲಿ ಪೆಟ್ರೋಲ್, ಡೀಸೆಲ್ ದರ ಸರಾಸರಿ ಮೂವತ್ತು ಪೈಸೆ ಹೆಚ್ಚಳವಾಗುತ್ತಿದೆ. ಆದರೆ ಜಿಲ್ಲಾ ಕೇಂದ್ರ ಕಾರವಾರದಲ್ಲಿ ಮಾತ್ರ ಪೆಟ್ರೋಲ್ 109.30, ಡೀಸೆಲ್ 99.79 ದರ ಏರಿಕೆ ಕಂಡಿದೆ. ಇದನ್ನೂ ಓದಿ: ದೇವೆಗೌಡ್ರು ಹುಟ್ಟುವ ಮೊದಲೇ RSS ಅಸ್ತಿತ್ವದಲ್ಲಿತ್ತು: ಕೆ.ಎಸ್ ಈಶ್ವರಪ್ಪ
ದುಬಾರಿ ಸಾಗಾಟ ವೆಚ್ಚ ಡೀಸೆಲ್ ದರ ಹೆಚ್ಚಳ:
ಉತ್ತರ ಕನ್ನಡ ಜಿಲ್ಲೆಯ ಶಿರಸಿಗೆ ಮಂಗಳೂರಿನಿಂದ ಪೆಟ್ರೋಲ್, ಡೀಸೆಲ್ ಪೂರೈಕೆ ಆಗುತ್ತಿದೆ. ಸಾಗಾಣಿಕೆ ವೆಚ್ಚ ಹೆಚ್ಚಳವಾಗುವ ಕಾರಣ ದರ ಉಳಿದ ಕಡೆಗಿಂತ ಹೆಚ್ಚಾಗಿದೆ. ಕಾರವಾರಕ್ಕೆ ಬೆಳಗಾವಿ ಕಡೆಯಿಂದ ಪೆಟ್ರೋಲ್, ಡೀಸೆಲ್ ಪೂರೈಕೆಯಾಗುತ್ತದೆ. ಹೀಗಾಗಿ ಇಲ್ಲಿ ದರ ಕಡಿಮೆ ಇದೆ. ಇದೀಗ ಏಕಾ ಏಕಿ ನೂರರ ಗಡಿ ದಾಟಿರುವುದು ವಾಹನ ಸವಾರರನ್ನು ಬೆಚ್ಚಿ ಬೀಳಿಸುವಂತೆ ಮಾಡಿದೆ. ಇದನ್ನೂ ಓದಿ:ರಾಜ್ಯದಲ್ಲಿ ಮುಂದಿನ ಐದು ದಿನ ಮಳೆ
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದಲ್ಲಿ ಸಂಚಾರ ನಿಯಮ ಉಲ್ಲಂಘಿಸುವವರಿಗೆ ಪೊಲೀಸರು ದಂಡದ ಬಿಸಿ ಮುಟ್ಟಿಸಿದ್ದು, ದಾಖಲೆಯ ದಂಡ ವಸೂಲಿ ಮಾಡಿದ್ದಾರೆ.
ಡಿವೈಎಸ್‍ಪಿ ರವಿ.ಡಿ.ನಾಯ್ಕ್ ಅವರ ನೇತೃತ್ವದಲ್ಲಿ ಅಧಿಕಾರಿಗಳು, ಸಿಬ್ಬಂದಿ ಕಾರ್ಯಾಚರಣೆ ಕೈಗೊಂಡಿದ್ದು, ಒಟ್ಟು 24, ಸಿಪಿಐ ಶಿರಸಿ-26, ಪಿಎಸ್‍ಐ ನಗರ-22, ಪಿಎಸ್‍ಐ ನ್ಯೂ ಮಾರ್ಕೆಟ್-30, ಪಿಎಸ್‍ಐ ಬನವಾಸಿ-8, ಸಿದ್ದಾಪುರ ಠಾಣೆ-21, ಯಲ್ಲಾಪುರ ಠಾಣೆ-6, ಮುಂಡಗೋಡ ಠಾಣೆ-74 ಪ್ರಕರಣಗಳನ್ನು ದಾಖಲಿಸಿದ್ದು, ಶಿರಸಿ ಉಪವಿಭಾಗದಲ್ಲಿ ಒಟ್ಟು 211 ಪ್ರಕರಣಗಳನ್ನು ದಾಖಲಿಸಿ, 1,07,000 ರೂ. ದಂಡ ವಿಧಿಸಲಾಗಿದೆ. ಇದನ್ನೂ ಓದಿ: ಮದ್ಯ ಸೇವಿಸಲು ಪತ್ನಿ ಹಣ ನೀಡಿಲ್ಲವೆಂದು ಪತಿ ಆತ್ಮಹತ್ಯೆಗೆ ಶರಣು
ಶಿರಸಿ ಉಪವಿಭಾಗದ ಎಲ್ಲ 7 ಪೊಲೀಸ್ ಠಾಣೆಗಳಲ್ಲಿ ರಸ್ತೆ ಸುರಕ್ಷತೆ ಹಾಗೂ ಸುಗಮ ಸಂಚಾರದ ದೃಷ್ಟಿಯಿಂದ ವಿಶೇಷ ಕಾರ್ಯಾಚರಣೆಯನ್ನು ನಡೆಸಲಾಯಿತು. ಇಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 12 ಗಂಟೆವರೆಗೆ ರವಿ.ಡಿ.ನಾಯ್ಕ್ ಅವರ ನೇತೃತ್ವದಲ್ಲಿ ಅಧಿಕಾರಿಗಳು, ಸಿಬ್ಬಂದಿ ಕಾರ್ಯಾಚರಣೆ ನಡೆಸಿದರು. ಸಂಚಾರ ನಿಯಮಗಳ ಉಲ್ಲಂಘನೆಯ ವಿರುದ್ಧ ಪ್ರಕರಣಗಳನ್ನು ದಾಖಲಿಸಿದ್ದಾರೆ.
ಕಾರವಾರ: ಕಾಡು ಪ್ರಾಣಿಗಳನ್ನು ಹಿಡಿಯಲು ಹಾಕಿದ್ದ ತಂತಿಯ ಉರುಳಿಗೆ ನಾಲ್ಕು ವರ್ಷದ ಅಪರೂಪದ ಕಪ್ಪು ಚಿರತೆ ಸಿಲುಕಿ ಮೃತಪಟ್ಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಬೆಂಗಳೆ ಗ್ರಾಮದ ಮಂಟಕಾಲ ರಸ್ತೆಯಲ್ಲಿ ಇಂದು ನಡೆದಿದೆ.
ಇಂದು ಬೆಳಗ್ಗೆ ಉರುಳಿಗೆ ಸಿಲುಕಿ ಚಿರತೆ ಒದ್ದಾಡುವುದನ್ನು ನೋಡಿದ ಸ್ಥಳೀಯರು, ಅರಣ್ಯಾಧಿಕಾರಿಗಳಿಗೆ ತಿಳಸಿದ್ದಾರೆ. ತಕ್ಷಣ ಬನವಾಸಿ ಅರಣ್ಯ ಇಲಾಖೆ ಅಧಿಕಾರಿಗಳು ರಕ್ಷಣೆ ಮಾಡಲು ಸ್ಥಳಕ್ಕೆ ಆಗಮಿಸಿದ್ದರು. ಆದರೆ ರಕ್ಷಣೆ ಮಾಡುವಷ್ಟರಲ್ಲಿ ಚಿರತೆ ಸಾವನ್ನಪ್ಪಿದೆ. ಇದನ್ನೂ ಓದಿ: ಮಹಿಳೆಯರ ವಿರುದ್ಧದ ಅಪರಾಧಗಳತ್ತ ಕಣ್ಣು ಮುಚ್ಚಬೇಡಿ, ಮಾತನಾಡಿ: ರಮ್ಯಾ
ಮಲೆನಾಡು ಭಾಗದಲ್ಲಿ ಇದೇ ಮೊದಲ ಬಾರಿ ಕಪ್ಪು ಚಿರತೆ ಇರುವುದು ಪತ್ತೆಯಾಗಿದೆ. ಚಿರತೆ ಕಳೆಬರಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಕಾಡು ಪ್ರಾಣಿ ಭೇಟೆಗೆ ಯಾರು ಉರಳು ಹಾಕಿದ್ದಾರೆ ಎಂಬ ತನಿಖೆಯನ್ನು ಅರಣ್ಯಾಧಿಕಾರಿಗಳು ಕೈಗೊಂಡಿದ್ದಾರೆ.
ಕಾರವಾರ: ಬಸ್ ನಿಲ್ದಾಣದಲ್ಲಿರಿಸಿದ್ದ ಚೀಲದಲ್ಲಿ ನವಜಾತಶಿಶು ಸಿಕ್ಕ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಗೌಡಳ್ಳಿ ಸಮೀಪದ ಖಾನ್ ನಗರದ ಬಸ್ ತಂಗುದಾಣದಲ್ಲಿ ನಡೆದಿದೆ.
ತಾಲೂಕಿನ ಕೂಗಿಲಕುಳಿ ಗ್ರಾಮದ ಮಾದೇವಿ ಎಂಬವರಿಗೆ ಈ ಮಗು ದೊರೆತಿದೆ. ಸದ್ಯ ಈ ಮಗುವನ್ನು ಶಿರಸಿಯ ಸಹಾಯ ಟ್ರಸ್ಟ್ ಗೆ ಹಸ್ತಾಂತರಿಸಿದ್ದಾರೆ. ಟ್ರಸ್ಟ್ ಅಧ್ಯಕ್ಷ ಸತೀಶ್ ಶೆಟ್ಟಿ ಅನಾರೋಗ್ಯಕ್ಕೆ ತುತ್ತಾಗಿರುವ ಮಗುವನ್ನು ಪಂಡಿತ ಸಾರ್ವಜನಿಕ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಿದ್ದಾರೆ. ಮಕ್ಕಳ ತುರ್ತು ನಿಗಾ ಘಟಕದಲ್ಲಿರಿಸಿ ಮಗುವಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಪತ್ತೆಯಾಗಿದ್ದು ಹೇಗೆ?
ಮಾದೇವಿ ಅವರು ಪ್ರತಿದಿನ ಕೂಲಿ ಕೆಲಸಕ್ಕೆ ತೆರಳುತ್ತಿದ್ದರು. ಎಂದಿನಂತೆ ಇಂದು ನಿಲ್ದಾಣಕ್ಕೆ ಬಂದಾಗ ಚೀಲ ಪತ್ತೆಯಾಗಿದೆ. ಯಾರೋ ಮರೆತು ಹೋಗಿರಬೇಕು ಎಂದು ಆ ಚೀಲವನ್ನು ಮನೆಗೆ ತಂದು ನೋಡಿದ್ದಾರೆ. ಈ ವೇಳೆ ಚೀಲ ಬಿಚ್ಚುತ್ತಿದ್ದಂತೆ ಮಗು ಅಳುವುದು ಕೇಳಿಸಿದೆ. ಭಯಗೊಂಡ ಮಾದೇವಿ ಸ್ಥಳೀಯರಿಗೆ ಮಾಹಿತಿ ನೀಡಿ ನಂತರ ಪೊಲೀಸರಿಗೂ ವಿಷಯ ತಿಳಿಸಿದ್ದಾರೆ. ಇದನ್ನೂ ಓದಿ: ಅಫ್ಘಾನಿಸ್ತಾನದಿಂದ ಸೇನೆ ಹಿಂಪಡೆದಿದ್ದು ಅಮೆರಿಕಾ ಇತಿಹಾಸದಲ್ಲಿ ಕಪ್ಪು ಚುಕ್ಕೆ: ಬೈಡನ್ ವಿರುದ್ಧ ಟ್ರಂಪ್ ವಾಗ್ದಾಳಿ
ಅವಧಿಪೂರ್ವ ಜನಿಸಿದ ಶಿಶು ಇದಾಗಿದ್ದು, 1.6 ಕೆಜಿ ತೂಕ ಹೊಂದಿದೆ. ಜನಿಸಿ ನಾಲ್ಕು ದಿನ ಆಗಿರುವ ಸಾಧ್ಯತೆಗಳಿದ್ದು ಮಗುವಿನ ಎಡಗೈ ಮುಂಭಾಗದ ಮೂಳೆ ಬೆಳವಣಿಗೆ ಕುಂಟಿತವಾಗಿದ್ದು, ಆರು ಬೆರಳನ್ನು ಹೊಂದಿದೆ. ಗಾಳಿ, ಮಳೆಯ ವಾತಾವರಣದಲ್ಲಿದ್ದ ಕಾರಣ ಮಗುವಿನ ಆರೋಗ್ಯ ಹದಗೆಟ್ಟಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಸಂಬಂಧ ಪ್ರಕರಣ ಸಹ ದಾಖಲಾಗಿದ್ದು ಮಗುವಿನ ಪೋಷಕರ ಪತ್ತೆಗೆ ಪ್ರಯತ್ನ ಸಾಗುತ್ತಿದೆ. ಇದನ್ನೂ ಓದಿ:ಹೂ ಬೆಳೆಗಾರರಿಗೆ ‘ವರ’ ತಂದ ಶ್ರಾವಣ ಮಾಸದ ‘ಮಹಾಲಕ್ಷ್ಮಿ’
ಕಾರವಾರ: ರಾಜ್ಯದ ಪ್ರಸಿದ್ಧ ಶಿರಸಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಪಿಎಂಸಿ)ಯ ನೂತನ ಅಧ್ಯಕ್ಷರಾಗಿ ಬಿಜೆಪಿ ಸದಸ್ಯ, ಬನವಾಸಿಯ ಶಿವಕುಮಾರ ದೇಸಾಯಿ ಗೌಡರು ಆಯ್ಕೆಯಾಗಿದ್ದಾರೆ.
ಗುರವಾರ ನಗರದ ಎಪಿಎಂಸಿ ಕಚೇರಿಯಲ್ಲಿ ನಡೆದ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆಯಲ್ಲಿ ಗೌಡರು ಅವಿರೋಧವಾಗಿ ಆಯ್ಕೆಯಾದರು. ಉಪಾಧ್ಯಕ್ಷರಾಗಿ ಭೈರುಂಬೆಯ ಸವಿತಾ ಹೆಗಡೆ ಅವಿರೋಧವಾಗಿ ಗೆಲುವು ಸಾಧಿಸಿದರು.
ಒಟ್ಟು 12 ಸದಸ್ಯರು ಚುನಾವಣಾ ಪ್ರಕ್ರಿಯೆಯಲ್ಲಿ ಪಾಲ್ಗೊಂಡರು. ಶಿವಕುಮಾರ ಗೌಡರು ಗೆಲುವು ಸಾಧಿಸುತ್ತಿದ್ದಂತೆ ಅಭಿಮಾನಿಗಳು, ಬಿಜೆಪಿ ಕಾರ್ಯಕರ್ತರ ಹರ್ಷೋದ್ಗಾರ ಮುಗಿಲು ಮುಟ್ಟಿತ್ತು.
ಕಾರವಾರ: ರಾಜ್ಯದ ಕರಾವಳಿ ಭಾಗದ ಜ್ವಲಂತ ಸಮಸ್ಯೆಯಾದ ಮೀನುಗಾರರ ಸಮಸ್ಯೆ ಕುರಿತು ವಿಧಾನಸೌಧದಲ್ಲಿ ಧ್ವನಿ ಎತ್ತಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.
ಇಂದು ಶಿರಸಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಬ್ಬ ಮೀನುಗಾರ 10 ಜನರಿಗೆ ಉದ್ಯೋಗ ಸೃಷ್ಟಿ ಮಾಡುತ್ತಾನೆ. ಹೀಗಾಗಿ ಕರಾವಳಿ ಜಿಲ್ಲೆಗಳಲ್ಲಿ ಸಂಚರಿಸಿ ಮೀನುಗಾರರ ಸಮಸ್ಯೆ ಆಲಿಸಲಾಗಿದೆ. ಸಮಸ್ಯೆಗಳ ಪಟ್ಟಿಯನ್ನು ಸಿದ್ಧ ಮಾಡಲಾಗಿದ್ದು, ವಿಧಾನ ಸೌಧದಲ್ಲಿ ಈ ಬಗ್ಗೆ ಧ್ವನಿ ಎತ್ತಲಾಗುವುದು ಎಂದರು.
ಹೊನ್ನಾವರದ ಕಾಸರಕೋಡ್ ನಲ್ಲಿ ಬಂದರು ವಿಸ್ತರಣೆ ಯೋಜನೆ ನಡೆದಿದೆ. ಸರ್ಕಾರ ಏನೇ ಯೋಜನೆ ಜಾರಿಮಾಡಿದರೂ ಜನಪರವಾಗಿ ಕಾಂಗ್ರೆಸ್ ಹೋರಾಡುತ್ತದೆ. ಬಂದರು ಬೇರೆಲ್ಲಾದರೂ ಮಾಡಲಿ, ಆದರೆ ಮೀನುಗಾರರಿಗೆ ಸಮಸ್ಯೆಯಾಗದಂತೆ ಕ್ರಮವಹಿಸಿ ಎಂದು ಆಗ್ರಹಿಸಿದರು. ಕಾಂಗ್ರೆಸ್ ನಲ್ಲಿ ಯಾವುದೇ ಬಣವಿಲ್ಲ, ಎಲ್ಲರೂ ಒಗ್ಗಟ್ಟಾಗಿದ್ದೇವೆ ಎಂದು ಇದೇ ವೇಳೆ ಸ್ಪಷ್ಟಪಡಿಸಿದರು.